Subscribe to Updates
Get the latest creative news from FooBar about art, design and business.
- ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು
- ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ
- ಕೂಲಿ ಕೊಡದೇ ಗಾರ್ಮೆಂಟ್ಸ್ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
- ಸರಗೂರು | ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
- ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
- ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
- ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು
- ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
Author: admin
ಬೆಳಗಾವಿ: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಕೋಲ್ಕಾರ (7) ಮೃತ ಬಾಲಕ. ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಂಬ ನೆಡುವ ಬದಲು ಮರದ ಕಂಬ ನೆಟ್ಟು, ವಿದ್ಯುತ್ ತಂತಿ ಎಳೆದಿದ್ದರು. ಇದರಿಂದ ವಿದ್ಯುತ್ ತಂತಿ ಜೋತು ಬಿದ್ದ ಪರಿಣಾಮ ತಂತಿ ತಗುಲಿ ಬಾಲಕ ಸಾವನ್ನಪ್ಪಿದ್ದಾನೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಲುಷಿತ ನೀರು ಕುಡಿದು ಕಳೆದ 3 ದಿನಗಳಲ್ಲಿ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಆಘಾತಕಾರಿ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ. ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಮುದೇನೂರು ಗ್ರಾಮದ ಜನ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಅಸ್ವಸ್ಥಗೊಂಡ 50ಕ್ಕೂ ಹೆಚ್ಚು ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಚರಂಡಿ ನೀರು ಮಿಶ್ರಣವಾಗಿತ್ತು. ಇದನ್ನು ತಿಳಿದರೂ ಗ್ರಾಮ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದಕ್ಕೆ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಗ್ರಾಮಕ್ಕೆ ಶಾಸಕ ಮಹದೇವಪ್ಪ ಯಾದವಾಡ ಭೇಟಿ ನೀಡಿದ್ದು, ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನವದೆಹಲಿ: ನೋಟುಗಳ ಮೇಲೆ ಗಾಂಧೀಜಿ ಭಾವಚಿತ್ರದೊಂದಿಗೆ ಲಕ್ಷ್ಮಿ ಮತ್ತು ಗಣೇಶ ದೇವರುಗಳ ಚಿತ್ರಗಳನ್ನೂ ಮುದ್ರಿಸಬೇಕು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಎರಡು ದಿನಗಳ ಹಿಂದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪೂಜೆ ಮಾಡುವಾಗ ತಮಗೆ ಈ ವಿಚಾರ ಹೊಳೆಯಿತು ಎಂದು ಹೇಳಿದ್ದಾರೆ. ಇಂಡೋನೇಷ್ಯಾದಲ್ಲಿ ಹಿಂದೂಗಳ ಜನಸಂಖ್ಯೆ ಕೇವಲ ಶೇ. 2 ರಷ್ಟಿದೆ. ಆದರೂ ಅಲ್ಲಿನ ಕರೆನ್ಸಿ ನೋಟುಗಳ ಮೇಲೆ ಗಣೇಶ ದೇವರ ಭಾವಚಿತ್ರವಿರುತ್ತದೆ. ಹೀಗಿರುವಾಗ ಭಾರತದಲ್ಲಿ ಇದು ಏಕೆ ಸಾಧ್ಯವಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ಕರೆನ್ಸಿ ನೋಟುಗಳ ಮೇಲೆ ಲಕ್ಷ್ಮಿ ಮತ್ತು ಗಣೇಶ ದೇವರ ಭಾವಚಿತ್ರ ಮುದ್ರಿಸುವ ಕುರಿತಂತೆ ತಾವು ಶೀಘ್ರದಲ್ಲೇ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯವುದಾಗಿ ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಏಪ್ರಿಲ್ 2022ರಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು ರೂ.1000ಕ್ಕೆ ಹೆಚ್ಚಿಸಲಾಗಿತ್ತು. ಈ ಗೌರವಧನ ಸೇರಿದಂತೆ ಬಾಕಿ ಗೌರವಧನವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿ ಆದೇಶಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. 2021-22ನೇ ಸಾಲಿನ ಆಶಾ ಕಾರ್ಯಕರ್ತೆಯರಿಗೆ ಗೌರವಧನ ವಿತರಣೆ ಮಾಡಲು ಮೂರನೇ ತ್ರೈ ಮಾಸಿಕ ಅನುದಾನ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ. ಡಿ ಬಿಟಿ ಪೋರ್ಟ್ ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು ಪಾವತಿಸವುದಾಗಿ ಸರ್ಕಾರ ಆದೇಶಿಸಿದೆ. ಏಪ್ರಿಲ್ 2022ರ ತಿಂಗಳಿನಿಂದ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ರೂ.1000ಕ್ಕೆ ಹೆಚ್ಚಿಸಿ ಆದೇಶಿಸಿದೆ ಎಂದು ಹೇಳಿದ್ದಾರೆ. 2022-23ನೇ ಸಾಲಿಗೆ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಗೆ ಎರಡನೇ ತ್ರೈ-ಮಾಸಿಕ ಅವಧಿಗೆ ರೂ.6378.30 ಲಕ್ಷಗಳ ಅನುದಾನ ಬಿಡುಗಡೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರ/ಸ್ನಾತಕೋತ್ತರ ಪದವೀಧರರಿಗೆ ಬೆಳಗಾವಿ ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ನಲ್ಲಿಸುವುದು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ಅರ್ಜಿ ಸಲ್ಲಿಸಲು ನವೆಂಬರ್ 14, 2022 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ವಾರ್ತಾ…
ಬೆಂಗಳೂರು : ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ಸಿನ ಬಳಿಕ ಇದೀಗ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಕಾಂಗ್ರೆಸ್ ನಾಯಕರು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಥಯಾತ್ರೆ ನಡೆಯಲಿದ್ದು, ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ನವೆಂಬರ್ ಎರಡನೇ ವಾರದಲ್ಲಿ ರಾಜ್ಯಾದ್ಯಂತ ರಥಯಾತ್ರೆ ಆರಂಭಗೊಳ್ಳಲಿದೆ ಮೂಲಗಳು ತಿಳಿಸಿವೆ. ರಥಯಾತ್ರೆ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು 224 ವಿಧಾನಸಭಾ ಕ್ಷೇತ್ರಗಳ ಸಂಚಾರ ಮಾಡಿ ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಸೃಷ್ಠಿಸಲು ಪ್ರಯತ್ನ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ನವೆಂಬರ್ 2 ನೇ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಎರಡು ಪ್ರತ್ಯೇಕ ತಂಡಗಳು ರಾಜ್ಯ ಪ್ರವಾಸ ಹೊರಡಲಿದ್ದು, ಪ್ರತಿ ತಂಡದಲ್ಲಿ 15 ಮುಂಚೂಣಿ ನಾಯಕರು ಇರಲಿದ್ದಾರೆ ಎನ್ನಲಾಗಿದೆ. ಪ್ರತಿದಿನ 2 ಕ್ಷೇತ್ರಗಳಂತೆ 224 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಮಾಡಲು ಸಿದ್ಧತೆ ನಡೆಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರ ಕ್ರಾಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ನಾಗರಾಜು ರವರ ಮೇಲೆ ಏಕಾಏಕಿ 6 ಜನ ಆರೋಪಿಗಳು ಹಲ್ಲೆ ಮತ್ತು ಪೋಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಅಕ್ಕಿರಾಂಪುರ ಕುರಿ-ಮೇಕೆ ಸಂತೆಯು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಶನಿವಾರದ ಸಂತೆಯನ್ನು ನಡೆಸದಂತೆ ಈಗಾಗಲೇ ಮುಂಜಾಗ್ರತೆ ಕ್ರಮವಾಗಿ ಪೋಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಗಿತ್ತು. ಅದರೆ ಎಂದಿನಂತೆ ಕುರಿ ಮೇಕೆ ವ್ಯಾಪಾರಸ್ಥರು ಬೊಲೆರೊ ವಾಹನದಲ್ಲಿ ಕುರಿ ಮೇಕೆಗಳನ್ನು ಸಂತೆ ವ್ಯಾಪಾರಕ್ಕೆ ವಾಹನದಲ್ಲಿ ತುಂಬಿಕೊಂಡು ಅರಸಾಪುರ ಗ್ರಾಮದ ಕಡೆಯಿಂದ ಬೈಚಾಪುರ ಕಡೆಗೆ ವಾಹನದಲ್ಲಿ ಬರುತ್ತಿದ್ದಾಗ ಕರ್ತವ್ಯದಲ್ಲಿದ್ದ ಪೋಲೀಸ್ ಸಿಬ್ಬಂದಿಗಳು ವಾಹನವನ್ನು ತಡೆದು ವಾಪಸ್ಸು ಕಳಿಸಲು ಮುಂದಾದಾಗ ಏಕಾಎಕಿ 6 ಜನ ಆರೋಪಿಗಳು ಮುಖ್ಯಪೇದೆ ನಾಗರಾಜುರವರ ಮೇಲೆ ಹಲ್ಲೆಗೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಪಡಿಸಿ,ಅವಾಚ್ಯ ಶಬ್ದಗಳಿಂದ ನಿಂದಿಸಿ,ಮಾತಿಗೆ ಮಾತು ಬೆಳೆದು ಪೋಲಿಸರ ಮೇಲೆ ಹಲ್ಲೆಗೆ ಮತ್ತು ಕರ್ತವ್ಯ ಕ್ಕೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ.ಅರಸಾಪುರ ಅಗ್ರಹಾರ…
ಶಿವಮೊಗ್ಗದಲ್ಲಿ ಕೆಲವರಿಂದ ಶಾಂತಿ ಕದಡುವ ಕೆಲಸವಾಗುತ್ತಿದೆ. ಮುಸ್ಲೀಂ ಗೂಂಡಾಗಳಿಗೆ ಇನ್ನೂ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಪಿಎಫ್ ಐ ಇನ್ನೂ ಜೀವಂತವಿದೆ ಎಂದು ತೋರಿಸಲು ಹೊರಟಿದ್ದೀರಾ..? ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಸಾವರ್ಕರ್ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲವಾಗಿಲ್ಲ. ಸಾವರ್ಕರ್ ಮೊಮ್ಮಗ ಎಲ್ಲೂ ಪ್ರಚೋದನಾಕಾರಿ ಹೇಳಿಕೆ ನೀಡಿಲ್ಲ. ನಿನ್ನೆ ಪ್ರಕಾಶ್ ಎಂಬಾತನ ಮೇಲೆ ಹಲ್ಲೆಯಾಗಿದೆ. ಹರ್ಷ ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ. ಹೇಡಿಗಳಂತೆ ನಿನ್ನೆ ಗಲಾಟೆ ಮಾಡಿದ್ದಾರೆ. ಶಾಂತಿ ಕದಡುವ ಉದ್ಧೇಶದಿಂದ ಹೀಗೆ ಮಾಡುತ್ತಿದ್ದಾರೆ. ಮುಸ್ಲಿಂ ಗೂಂಡಾಗಳಿಗೆ ಶಿವಮೊಗ್ಗದಲ್ಲಿ ಪೊಲೀಸರ ಭಯ ಇಲ್ಲ ಎಂದು ಆಕ್ರೋಶ ಹೊರ ಹಾಕಿದರು. ಪಿಎಫ್ ಐ ಜೀವಂತಿವಿದೆ ಎಂದು ತೋರಿಸಲು ಹೊರಟಿದ್ದೀರಾ..? ಇಂತಹ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಪಿಎಫ್ ಐ ಇನ್ನೂ ಜೀವಂತವಿದೆಯಾ ಎಂದು ಪತ್ತೆ ಹಚ್ಚಬೇಕಿದೆ. ಕೇಂದ್ರ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಸುಮಾರು 36 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನ ಬೆಂಗಳೂರಿನ ತಿಲಕ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಖ್ಯಾತ ಸರಗಳ್ಳ ಸೈಯದ್ ಪರ್ವೇಜ್ ಬಂಧಿತ ಆರೋಪಿ. ಬಂಧಿತನಿಂಧ 92 ಗ್ರಾಂ ತೂಕದ 2 ಚಿನ್ನದ ಸರಗಳನ್ನ ವಶಕ್ಕೆ ಪಡೆಯಲಾಗಿದೆ. ಈತ ಸುಮಾರು 36 ಸರಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಎನ್ನಲಾಗಿದೆ. ಆರೋಪಿ ಸೈಯದ್ ಮನೆಯಲ್ಲಿ ಯಾರು ಇಲ್ಲದ ವೇಳೆ ನುಗ್ಗಿ ಚಿನ್ನದ ಸರ ಕದಿಯುತ್ತಿದ್ದ. ಪ್ರಕರಣ ಸಂಬಂಧ ತಿಲಕ್ ನಗರ ಠಾಣಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯು ಸಚಿವ ವಿ.ಸೋಮಣ್ಣ ವಿರುದ್ಧ ದೂರು ನೀಡಿದೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ವಿ.ಸೋಮಣ್ಣ, ಅಕ್ಟೋಬರ್ 23 ರಂದು ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳ ಮೋಕ್ಷ ಮಾಡಿದ್ದರು ಎನ್ನಲಾಗಿತ್ತು. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಇದೀಗ ಸಚಿವ ವಿ.ಸೋಮಣ್ಣ ವಿರುದ್ಧ ದೂರು ನೀಡಿರುವ ಕಾಂಗ್ರೆಸ್ ಕ್ರಮ ಕೈಗೊಳ್ಳವಂತೆ ಆಗ್ರಹಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz