Author: admin

ಬೆಳಗಾವಿ: ಬೆಳಗಾವಿಯಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಭೀಕರ ಘಟನೆ ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಕೃತಿಕಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ತಾಯಿ ರೇಷ್ಮಾ ಮತ್ತು ತಂಗಿ ಖುಷಿ ಗಾಯಗೊಂಡಿದ್ದಾರೆ. ಆದರೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಅವರನ್ನು ಗೋಕಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಬೆಳಿಗ್ಗೆ 7.30 ರ ಸುಮಾರಿಗೆ ಮಹಾಲಿಂಗೇಶ್ವರ ನಗರದಲ್ಲಿ ಈ ಘಟನೆ ಸಂಭವಿಸಿದೆ. ಕೃತಿಕಾ ಮತ್ತು ಆಕೆಯ ಸಹೋದರಿ ಖುಷಿ ಮಲಗಿದ್ದಾಗ, ಭಾರೀ ಮಳೆಯ ಸಮಯದಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ಅವರ ಮೇಲೆ ಬಿದ್ದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಹೇಮಾವತಿ ಲಿಂಕಿಂಗ್‌ ಕೆನಾಲ್ ಯೋಜನೆ ವಿರುದ್ಧ ಹೋರಾಟ ಜೋರಾಗಿದ್ದು, ಮುಂದಿನ ಹೋರಾಟಕ್ಕೆ ಬಿಜೆಪಿ, ಜೆಡಿಎಸ್‌ ಶಾಸಕರು ಮಹತ್ವದ‌ ಸಭೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳು, ಹಲವು ಜನ ಪರ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಮಠಾಧೀಶರು ಹೋರಾಟದ‌ ವಿರುದ್ಧ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ತುಮಕೂರಿನ ಮುರುಘರಾಜೇಂದ್ರ ಸಭಾ ಭವನದಲ್ಲಿ ಸಭೆ ನಡೆಯುತ್ತಿದ್ದು, ಬಿಜೆಪಿ ‌ಶಾಸಕ ಜ್ಯೋತಿ ಗಣೇಶ್, ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್, ಮುಖಂಡ ದಿಲೀಪ್ ಕುಮಾರ್ ಭಾಗಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ವಾಷಿಂಗ್ಟನ್: ಉಕ್ರೇನ್ ವಿರುದ್ಧ ರಷ್ಯಾ ಮಾರಣಾಂತಿಕ ಡ್ರೋನ್ ದಾಳಿ ನಡೆಸಿರುವ ಹಿನ್ನೆಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಲಾಡಿಮಿರ್ ಪುಟಿನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುದ್ಧ ಪೀಡಿತ ಉಭಯ ರಾಷ್ಟ್ರಗಳು ದೊಡ್ಡ ಪ್ರಮಾಣದ ಕೈದಿಗಳ ವಿನಿಮಯ ಪೂರ್ಣಗೊಳಿಸಿದರೂ ರಷ್ಯಾ ಮತ್ತೆ ಡ್ರೋನ್ ದಾಳಿ ನಡೆಸಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಟ್ರಂಪ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹುಚ್ಚ ಎಂದು ಕರೆದಿದ್ದಾರೆ. ಭಾನುವಾರ ರಾತ್ರಿ ಉಕ್ರೇನ್ ವಿರುದ್ಧ ರಷ್ಯಾ ಬೃಹತ್ ಡ್ರೋನ್ ದಾಳಿ ನಡೆಸಿದ್ದರಿಂದ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ.  ವ್ಲಾಡಿಮಿರ್ ಪುಟಿನ್ ಅವರೊಂದಿಗೆ ತಾಳ್ಮೆ ಕಳೆದುಕೊಳ್ಳುತ್ತಿರುವುದಾಗಿ ಟ್ರಂಪ್ ಸ್ಪಷ್ಟಪಡಿಸಿದ್ದು, ರಷ್ಯಾದ ನಾಯಕನ ವಿರುದ್ಧ ತೀಕ್ಷ್ಣವಾಗಿ ಟೀಕೆಗಳನ್ನು ಮಾಡಿದ್ದಾರೆ. ಪುಟಿನ್ ಜೊತೆಗೆ ಯಾವಾಗಲೂ ಉತ್ತಮ ಸಂಬಂಧ ಹೊಂದಿದ್ದೇನೆ. ಆದರೆ ಅವರಿಗೆ ಏನೋ ಆಗಿದೆ. ಅವರು ಸಂಪೂರ್ಣವಾಗಿ ಹುಚ್ಚರಾಗಿದ್ದಾರೆ! ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೀದರ್: ಜಿಲ್ಲೆಯ ಕಮಲನಗರ ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಹಾಗೂ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಹಾನಿ ಉಂಟಾಗಿದೆ. ಸಂಗನಾಳ ಉದಗಿರ್ ರಸ್ತೆ ಮಳೆ ಅಬ್ಬರ ಕೊಚ್ಚಿ ಹೋಗಿದೆ. ರಸ್ತೆ ಸಂಗನಾಳ ನಡುವಿನ ಪ್ರಯಾಣ ತುಂಬಾ ಕಷ್ಟಕರವಾಗಿ ಪರಿಣಮಿಸಿದೆ. ರಸ್ತೆ ದುರಸ್ತಿ ಮಾಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಔರಾದ್ ಗ್ರಾಮೀಣ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ  ಹರಿದೇವ್ ಸಂಗನಾಳ ಮನವಿ ಮಾಡಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ವಿಜಯನಗರ ಜಿಲ್ಲೆ ಕೂಡ್ಲಿಗಿ: ಕ್ಷೇತ್ರದ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ರವರ ಇಚ್ಛಾಶಕ್ತಿಯ ಮೇರೆಗೆ ಪಟ್ಟಣ ಅಭಿವೃದ್ಧಿಯತ್ತ ಸಾಗುತ್ತಿದೆಯಾದರೂ, ರಾಜೀವ ಗಾಂಧಿನಗರ ಮಾತ್ರ ಅದಕ್ಕೆ ಹೊರತಾಗಿದೆ. ವಿದ್ಯುತ್ ಪರಿವರ್ತಕಗಳು ಪದೆ ಪದೇ ಸುಟ್ಟು ಕರಕಲಾಗುತ್ತಿದ್ದು, ಸಮರ್ಪಕವಾಗಿ  ವಿದ್ಯುತ್  ಸರಬರಾಜಾಗುತ್ತಿಲ್ಲ. ವಿದ್ಯುತ್ ಸರಬರಾಜು ಕಂಪನಿಯ ನಿರ್ವಹಣೆ  ತೀರಾ ಕಳಪೆಯದ್ದಾಗಿದ್ದು, ನಿರ್ಲಕ್ಷ್ಯ ಧೋರಣೆ ತಾಳಲಾಗಿದೆ ಎಂದು ರೈತ ಮುಖಂಡ ಕಾಲ್ಚಟ್ಟಿ ಕೃಷ್ಣಪ್ಪ ಹಾಗೂ ಕಾರ್ಮಿಕ ಮುಖಂಡ ಗುನ್ನಳ್ಳಿ ರಾಘವೇಂದ್ರ  ದೂರಿದ್ದಾರೆ. ಕಳೆದ ತಿಂಗಳಿಂದ ನಿರಂತರವಾಗಿ ವಿದ್ಯುತ್ ಕೊರತೆ ಕಾಡುತ್ತಿದೆ ,  ವರ್ಷದ ಹಿಂದೆ ಜಿಲ್ಲಾಧಿಕಾರಿಗಳು ಜನಸ್ಪಂದನ ಸಂದರ್ಭದಲ್ಲಿ ಬಂದಿದ್ದರು. ಪರಿಶೀಲಿಸಿದರು ಅಹವಾಲು ಆಲಿಸಿದರು ಹೋದರು. ಆದರೆ ದುಸ್ಥಿತಿ ಸಂಪೂರ್ಣ ಸುಧಾರಿಸಿಲ್ಲ , ಪಟ್ಟಣ ಪಂಚಾಯ್ತಿಯಿಂದ ನಿರಂತರ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು  ಹೋರಾಟಗಾರರು ಆರೋಪಿಸಿದ್ದಾರೆ. ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ, ಆರಂಭಗೊಂಡ ಮಿನಿ ಪೊಲೀಸ್ ಠಾಣೆ  ಆರೋಗ್ಯ ಕೇಂದ್ರಗಳು. ಹಲವು ವರ್ಷಗಳಿಂದ  ತ್ಯಾಜ್ಯವಸ್ತುಗಳ ಗೋದಾಮಾಗಿದ್ದು, ಶೀಘ್ರವೇ  ಪುನಃ ಆರಂಭಿಸಬೇಕಿದೆ. ಪೊಲೀಸ್ ಠಾಣೆ ಹಾಗೂ ಸಾರ್ವಜನಿಕೆ ಆಸ್ಪತ್ರೆಗಳು , ಸುಮಾರು ಒಂದೂವರಿಗೆ ಕಿ.ಮೀ.…

Read More

ಬೆಂಗಳೂರು:  ರಾಜ್ಯದಲ್ಲಿ ಮುಂಗಾರು ಮಳೆ ಆರಂಭಗೊಂಡಿದೆ. ಮೇ 28ರಂದು ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ  ಬಿರಿಗಾಳಿ ಸಹಿತ ಮಳೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 40–60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ, ಆದರೆ ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇಂದಿನವರೆಗೆ ಧಾರವಾಡ ಮತ್ತು ಬೆಳಗಾವಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗುರುವಾರದಿಂದ ಹವಾಮಾನ ಪರಿಸ್ಥಿತಿಗಳು ಸರಾಗವಾಗಲಿದ್ದು, ರಾಜ್ಯದಲ್ಲಿ ಎಲ್ಲಿಯೂ ಯಾವುದೇ ರೆಡ್ ಅಲರ್ಟ್‌ಗಳನ್ನು ನೀಡಲಾಗಿಲ್ಲ, ಆದರೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳಭಾಗಗಳಿಗೆ ಮಾತ್ರ ಆರೆಂಜ್ ಮತ್ತು ಯೆಲ್ಲೂ ಅಲರ್ಟ್‌ಗಳನ್ನು ನೀಡಲಾಗಿದೆ. ಬೆಂಗಳೂರು, ಮಂಡ್ಯ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಂಗಳವಾರ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು,…

Read More

ಬೆಂಗಳೂರು: ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ಮಾಡಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ‌ ಕನ್ನಮಂಗಲ ಗೇಟ್ ಸಮೀಪ ನಡೆದಿದೆ. ಘಟನೆ ಸಂಬಂಧ 31 ಮಂದಿಯನ್ನು ವಶಕ್ಕೆ ತೆಗೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ಬೆಳಗಿನ ಜಾವ 5 ಗಂಟೆಯಲ್ಲಿ ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ವ್ಯಕ್ತಿಯೊಬ್ಬರ ಜನ್ಮ ದಿನದ ಅಂಗವಾಗಿ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ದೇವನಹಳ್ಳಿ ಎಸಿಪಿ ನವೀನ್ ನೇತೃತ್ವದ ತಂಡ ದಾಳಿ ನಡೆಸಿ, ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಯುವಕ, ಯುವತಿಯರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದೆ. ಮಾದಕ ವಸ್ತುಗಳನ್ನು ಬಳಕೆ ಮಾಡಿರುವುದು ಕಂಡು ಬಂದಿದೆ. 24 ಯುವಕರು, 7 ಯುವತಿಯರು ಸೇರಿದಂತೆ ಒಟ್ಟು 31 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು: ಮಡೆನೂರು ಮನು  ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರು ಸುಮಾರು 31 ತಿಂಗಳ ಚಾಟಿಂಗ್ ಡಿಟೈಲ್ಸ್ ಪಡೆದುಕೊಂಡಿದ್ದಾರೆ. ನವೆಂಬರ್ 2022ರಿಂದ ಮೇ 2025ರವರೆಗೆ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ. ಮದುವೆ ಹೆಸರಿನಲ್ಲಿ ಅತ್ಯಾಚಾರ ಎಸಗಿ ದೈಹಿಕ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದರು. ಪ್ರಕರಣ ಸಂಬಂಧ ಆರೋಪಿ ಮಡೆನೂರು ಮನುವನ್ನು ಪೊಲೀಸರು ಕಸ್ಟಡಿಗೆ ಪಡೆದು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಟನ 2 ಮೊಬೈಲ್ ಹಾಗೂ ಸಂತ್ರಸ್ತೆಯ 2 ಫೋನ್ ವಶಕ್ಕೆ ಪಡೆದು ಎಫ್‌ ಎಸ್‌ ಎಲ್‌ ಗೆ ಕಳುಹಿಸಿದ್ದಾರೆ. ಸಂತ್ರಸ್ತೆ ಹಾಗೂ ನಟನ ನಡುವಿನ ಆಡಿಯೋ, ವೀಡಿಯೋ ಸಂಭಾಷಣೆಯಲ್ಲಿ ಹಲವು ನಟ, ನಟಿಯರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆ ಪೊಲೀಸರು ಹೆಚ್ಚಿನ ತನಿಖೆಗೆ ಸಿದ್ಧತೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಡೆಲಿವರಿ ಬಾಯ್ ಗ್ರಾಹಕನ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದರ ವಿಡಿಯೋ ವ್ಯಾಪಕ ವೈರಲ್ ಆಗಿದೆ. ಡೆಲಿವರಿ ಬಾಯ್ ನನ್ನು ಪ್ರಚೋದಿಸಿ ಗ್ರಾಹಕ ಏಟು ತಿಂದಿರುವುದು ವಿಡಿಯೋದಲ್ಲಿ ಕಂಡು ಬರುತ್ತದೆ. ಬೆಂಗಳೂರಿನ ಬಸವೇಶ್ವರನಗರದಲ್ಲಿ ಈ ಘಟನೆ ನಡೆದಿದೆ. ಆ್ಯಪ್‌ವೊಂದರಲ್ಲಿ ಶಶಾಂಕ್ ಅವರ ಪತ್ನಿ ಕೆಲ ವಸ್ತುಗಳನ್ನು ಆರ್ಡರ್ ಮಾಡಿದ್ದರು. ಡೆಲಿವರಿ ಬಾಯ್ ಬಂದಾಗ ಶಶಾಂಕ್ ಅವರ ನಾದಿನಿ ಸಾಮಗ್ರಿ ತೆಗೆದುಕೊಳ್ಳಲು ಮನೆಯಿಂದ ಹೊರಕ್ಕೆ ಬಂದಿದ್ದರು.  ವಿಳಾಸ ತಪ್ಪಾಗಿದ್ದಕ್ಕೆ ಸಂಬಂಧಿಸಿದಂತೆ ಡೆಲಿವರಿ ಬಾಯ್ ವಿಷ್ಣುವರ್ಧನ್  ಮಹಿಳೆಯನ್ನು ಪ್ರಶ್ನಿಸಿದ್ದರು. ಈ ಘಟನೆ ಅಲ್ಲಿಗೆ ಮುಕ್ತಾಯವಾಗಿತ್ತು. ಆದರೆ ಈ ವೇಳೆ ಶಶಾಂಕ್  ಡೆಲಿವರಿ ಬಾಯ್ ನನ್ನು ಅಡ್ಡಗಟ್ಟಿ ಕ್ಯಾತೆ ತೆಗೆದಿದ್ದು, ಈ ವೇಳೆ ಆಕ್ರೋಶಗೊಂಡ ಡೆಲಿವರಿ ಬಾಯ್ ಹಲ್ಲೆ ನಡೆಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಈ ಘಟನೆ ಕುರಿತು ಶಶಾಂಕ್ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಹಲ್ಲೆಯಿಂದ ಕಣ್ಣಿಗೆ ಗಾಯವಾಗಿದೆ ಎಂದು ಶಶಾಂಕ್‌ ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು:  ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಗಿತಗೊಂಡಿದ್ದ ವಾಹನಗಳ ಟೋಯಿಂಗ್​ ಮತ್ತೆ ಆರಂಭವಾಗಲಿದೆ. ಈ ಬಗ್ಗೆ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಸುರಂಗ ರಸ್ತೆ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಮೇಲೆ ವಾಹನ ನಿಲ್ಲಿಸುವವರಿಗೆ ಖಡಕ್ ಎಚ್ಚರಿಕೆ ನೀಡಿದರು. ರಸ್ತೆಗಳ ಮೇಲೆ ನಿಲ್ಲಿಸಿದ ವಾಹನಗಳನ್ನು ಟೋಯಿಂಗ್ ಮಾಡುತ್ತೇವೆ. 21 ದಿನಗಳಲ್ಲಿ ಆ ವಾಹನಗಳನ್ನು ಹರಾಜು ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದರು. ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ 2022ರ ಫೆಬ್ರವರಿಯಲ್ಲಿ ಟೋಯಿಂಗ್  ಬಂದ್ ಆಗಿತ್ತು. ಕೆಲವು ಹೊಸ ನಿಯಮ, ಗೈಡ್ ಲೈನ್ಸ್​ನೊಂದಿಗೆ ಟೋಯಿಂಗ್ ಪ್ರಾರಂಭಿಸಲಾಗುವುದು ಎಂದು ಈ ಹಿಂದಿನ ಸರ್ಕಾರ ಹೇಳಿತ್ತು. ಆದರೆ, ಮತ್ತೆ ಟೋಯಿಂಗ್ ಪ್ರಾರಂಭವಾಗಿರಲಿಲ್ಲ. ಇದೀಗ ಮತ್ತೆ ಟೋಯಿಂಗ್​ ಆರಂಭಿಸುವ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್​ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More