Subscribe to Updates
Get the latest creative news from FooBar about art, design and business.
- ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು
- ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ
- ಕೂಲಿ ಕೊಡದೇ ಗಾರ್ಮೆಂಟ್ಸ್ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
- ಸರಗೂರು | ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
- ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
- ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
- ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು
- ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
Author: admin
ಭಾರತ ತಂಡವು ಗುರುವಾರ ನಡೆಯಲಿರುವ ನೆದರ್ಲೆಂಡ್ಸ್ ವಿರುದ್ಧ ಪಂದ್ಯದಲ್ಲಿ ಪ್ರಯೋಗಕ್ಕೆ ಸಿದ್ಧವಾಗಿದೆ. ಪಾಕಿಸ್ತಾನ ತಂಡದ ಎದುರು ರೋಚಕ ಜಯ ಕಂಡ ಟೀಂ ಇಂಡಿಯಾದ ವಿಶ್ವಾಸ ದುಪ್ಪಟ್ಟಾಗಿದೆ. ಇದೇ ಜೋಶ್ ನಲ್ಲಿ ನೆದರ್ಲೆಂಡ್ಸ್ ವಿರುದ್ಧ ಕೆಲ ಪ್ರಯೋಗ ನಡೆಸಲು ತಯಾರಿ ನಡೆಸಲಾಗಿದೆ. ನಾಳೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನೆದರ್ಲೆಂಡ್ಸ್ ವಿರುದ್ಧ ರೋಹಿತ್ ಶರ್ಮಾ ಬಳಗವು ಕಣಕ್ಕಿಳಿಯಲಿದೆ. ಇಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಿ ದೀಪಕ್ ಹೂಡಾಗೆ ಅವಕಾಶ ನೀಡುವ ಸಾಧ್ಯತೆ ಇದೆ. ಅನುಭವದ ಕೊರತೆಯಿರುವ ನೆದರ್ಲೆಂಡ್ಸ್ ವಿರುದ್ಧ ಸುಲಭ ಜಯದ ನಿರೀಕ್ಷೆಯಲ್ಲಿರುವ ಭಾರತ ತಂಡವು ಬೆಂಚ್ ಶಕ್ತಿಯ ಸಾಮರ್ಥ್ಯ ಪರೀಕ್ಷೆ ಮಾಡಲು ಯೋಚಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ನಗ್ನ ಫೋಟೋ, ವಿಡಿಯೋ ಮೂಲಕ ಕನ್ನಡ ಚಿತ್ರನಟಿಗೆ ಬ್ಲಾಕ್ ಮೇಲ್ ಮಾಡಿದ್ದ ಮೇಕಪ್ ಮ್ಯಾನ್ ಪೊಲೀಸರ ಅತಿಥಿಯಾಗಿದ್ದಾನೆ. ಕನ್ನಡದ ಚಿತ್ರನಟಿಯೊಬ್ಬರ ನಗ್ನ ವಿಡಿಯೋ ಹಾಗೂ ಫೊಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದ ಮಹಾಂತೇಶ ಎಂಬ ಮೇಕಪ್ ಮ್ಯಾನ್ ಅನ್ನು ಪೊಲೀಸರು ಬಂಧಿಸಿದ್ದಾರೆ. ನಗ್ನ ಫೋಟೋ, ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆಯೊಡ್ಡಿ 30 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದ ಎನ್ನಲಾಗಿದೆ. ಭುವನೇಶ್ವರ ನಗರದ ನಿವಾಸಿ ಮಹಾಂತೇಶ್ ಸಂತ್ರಸ್ತ ನಟಿಯ ಬಳಿ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದನು. ಈತ ಆ ನಟಿಯ ಸಂಬಂಧಿಕ ಎಂಬ ಮಾಹಿತಿ ಲಭ್ಯವಾಗಿದೆ. “ನಿನ್ನ ನಗ್ನ ಫೋಟೋ, ವಿಡಿಯೋ ನನ್ನ ಬಳಿ ಇದೆ , 30 ಲಕ್ಷ ಕೊಡದೇ ಇದ್ದಲ್ಲಿ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇನೆ” ಎಂದು ಈಗ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ವರ್ಷದ ಕೊನೆಯ ಸೂರ್ಯಗ್ರಹಣ ಇಂದು ಗೋಚರವಾಗಿದ್ದು, ಈ ಬಾರಿಯ ದೀಪಾವಳಿ ಅಮಾವಾಸ್ಯೆಯಂದೇ ಸೂರ್ಯಗ್ರಹಣ ಸಂಭವಿಸಿದೆ. ಭಾರತದಲ್ಲಿ ಮೊದಲಿಗೆ ಪಂಜಾಬ್ ನ ಅಮೃತಸರದಲ್ಲಿ4 ಗಂಟೆ 19 ನಿಮಿಷಕ್ಕೆ ಗ್ರಹಣ ಗೋಚರವಾಗಿದೆ. ಹಾಗೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಂಜೆ 4.29ಕ್ಕೆ ಗ್ರಹಣ ಗೋಚರವಾಗಿದೆ. ವಿಶಾಖ ಪಟ್ಟಣಂ, ಜಮ್ಮುಕಾಶ್ಮೀರ, ರಾಂಚಿ, ನೋಯ್ಡಾ, ಲಕ್ನೋ, ಜೈಪುರ, ಪಾಟ್ನಾದಲ್ಲೂ ಗ್ರಹಣ ಗೋಚರಿಸಿದೆ. ಅಬುಧಾಬಿ ಲಡಾಖ್ ನಲ್ಲಿ ಸೂರ್ಯಗ್ರಹಣ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಕಲ್ಬುರ್ಗಿ,ಹುಬ್ಬಳ್ಳಿ, ಮಂಗಳೂರು, ಶಿವಮೊಗ್ಗದಲ್ಲಿ ಗ್ರಹಣ ಗೋಚರಿಸಿದೆ. ಇನ್ನು ಸೂರ್ಯಗ್ರಹಣ ಹಿನ್ನೆಲೆ ದೇಶದಲ್ಲಿ ರಾಜ್ಯದಲ್ಲಿ ಹಲವು ದೇವಸ್ಥಾನಗಳು ಬಂದ್ ಆಗಿದ್ದು, ಸಂಜೆ 7 ಗಂಟೆ ಬಳಿಕ ತೆರೆಯಲಿವೆ. ಸೂರ್ಯಗ್ರಹಣ ಹಿನ್ನೆಲೆ ಬೆಂಗಳೂರಿನಲ್ಲಿ ಜನರ ಓಡಾಟ ಕೊಂಚ ಕಡಿಮೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಅಂಗಡಿ ಮಾಲೀಕರೊಬ್ಬರು ಹಚ್ಚಿದ ಪಟಾಕಿ ಕಿಡಿ ಸಿಡಿದು ಕುಶನ್ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾದ ಘಟನೆ ಕಿತ್ತೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಕಿತ್ತೂರು ಪಟ್ಟಣದ ನಿವಾಸಿ ಶಬ್ಬೀರ್ ಬೀಡಿ ಎಂಬುವವರಿಗೆ ಸೇರಿದ ಅಂಗಡಿಗೆ ಬೆಂಕಿ ಬಿದ್ದಿದೆ. ಪಟಾಕಿ ಕಿಡಿ ಸಿಡಿಯುತ್ತಿದ್ದಂತೆ ಧಗಧಗನೇ ಕುಶನ್ ಅಂಗಡಿ ಹೊತ್ತಿ ಉರಿದಿದ್ದು, ಅಂದಾಜು 3 ಲಕ್ಷ ಮೌಲ್ಯದ ಕುಶನ್, ಪೀಠೋಪಕರಣ ಬೆಂಕಿಗೆ ಆಹುತಿಯಾಗಿವೆ. ನಿನ್ನೆ ದೀಪಾವಳಿ ನಿಮಿತ್ತ ಶಬ್ಬೀರ್ ಬೀಡಿ ಅಂಗಡಿ ಮಾಲೀಕರು ದೀಪಾವಳಿ ಪೂಜೆ ಮಾಡಿದ್ದಾರೆ. ಬಳಿಕ ಪಟಾಕಿ ಸಿಡಿಸಲು ಮುಂದಾದಾಗ ಅದರ ಕಿಡಿ ಪಕ್ಕದ ಕುಶನ್ ಅಂಗಡಿಗೆ ವ್ಯಾಪಿಸಿದೆ. ಬೆಂಕಿ ನಂದಿಸಲು ಹೋದ ಶಬ್ಬೀರ್ ಕೈ, ಕಾಲು ದೇಹದ ಇತರ ಭಾಗಗಳಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಪಡುವಲಕಾಯಿ ಜ್ಯೂಸ್ ನಿಂದ ನಮ್ಮ ದೇಹದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ತೂಕ ಇಳಿಕೆ, ಜೀರ್ಣಕ್ರಿಯೆ, ಹೃದಯ ಸಂಬಂಧಿ ಕಾಯಿಲೆ ಹೀಗೆ ಹಲವು ಬಗೆಯಲ್ಲಿ ಪಡವಲಕಾಯಿ ನಮ್ಮ ಆರೋಗ್ಯಕ್ಕೆ ವರದಾನವಾಗಿದೆ. ಇದರಲ್ಲಿ ಕ್ಯಾಲೋರಿಗಳು ಮತ್ತು ಕೊಬ್ಬಿನಲ್ಲಿ ತುಂಬಾ ಕಡಿಮೆಯಾಗಿದೆ. ಈ ಕಾರಣದಿಂದಾಗಿ, ತೂಕವನ್ನು ನಿಯಂತ್ರಿಸಲು ಇದು ಸಹಕಾರಿಯಾಗಿದೆ. ಪಡವಲಕಾಯಿಯಲ್ಲಿ ಫೈಬರ್ ಮತ್ತು ಶೇ.98 ರಷ್ಟು ನೀರು ಸಮೃದ್ಧವಾಗಿದೆ. ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುಣಪಡಿಸಲು ಇದು ತುಂಬಾ ಸಹಾಯಕವಾಗಿದೆ. ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯಲು ಪಡವಲಕಾಯಿ ಸಹಕಾರಿಯಾಗಿದೆ. ಖಾಲಿ ಹೊಟ್ಟೆಯಲ್ಲಿ ಪಡವಲಕಾಯಿ ರಸವನ್ನು ಸೇವಿಸುವುದರಿಂದ ದೇಹಕ್ಕೆ ಪೋಷಕಾಂಶಗಳು ದೊರೆಯುತ್ತವೆ. ಮಾತ್ರವಲ್ಲದೇ ಕೂದಲಿನ ಆರೈಕೆಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ಪಡವಲಕಾಯಿಯಲ್ಲಿ ವಿಟಮಿನ್ ಎ, ಬಿ, ಸಿ ಮತ್ತು ಮೆಗ್ನಿಷಿಯಂ, ಕ್ಯಾಲ್ಸಿಯಂ ಮತ್ತು ಫಾಸ್ಪರಸ್ ಇವೆ. ಇದರ ರಸವನ್ನು ತಲೆಗೆ ಹಚ್ಚಿ ಅರ್ಧ ಗಂಟೆಯ ನಂತರ ಸ್ನಾನ ಮಾಡಿದರೆ ತಲೆಹೊಟ್ಟು ಕಡಿಮೆಯಾಗುತ್ತದೆ. ಪಡವಲಕಾಯಿ ದೇಹದಿಂದ ವಿಷವನ್ನು ಪರಿಣಾಮಕಾರಿಯಾಗಿ ತೆಗೆದುಹಾಕುತ್ತದೆ. ಮೂತ್ರಪಿಂಡಗಳು ಮತ್ತು ಮೂತ್ರಕೋಶಗಳು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ…
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ 7987 ಮತಗಳನ್ನು ಪಡೆದು ಸ್ಪಷ್ಟ ಗೆಲುವು ಸಾಧಿಸಿದರೆ, ತರೂರ್ 1072 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಸುಮಾರು 24 ವರ್ಷಗಳ ನಂತರ ಅವರು ಗಾಂಧಿಯೇತರ ಪಕ್ಷದ ಮೊದಲ ಅಧ್ಯಕ್ಷರಾಗಿದ್ದಾರೆ. ಪಕ್ಷದ ನೂತನ ಅಧ್ಯಕ್ಷರಾಗಿ ಖರ್ಗೆ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ದಿನವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಹಿಳೆಯ ನಗ್ನ ಫೋಟೊ ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನ ಬೆಂಗಳೂರಿನ ಈಶಾನ್ಯ ಸಿಎಎನ್ ಪೊಲೀಸರು ಬಂಧಿಸಿದ್ದಾರೆ. ಮಹಂತೇಶ್ ಬಂಧಿತ ಆರೋಪಿ. ಈತ ಮಹಿಳೆಯೊಬ್ಬರ ನಗ್ನ ಫೋಟೊ ಇಟ್ಟುಕೊಂಡು 30 ಲಕ್ಷ ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ಧ. ಹಣ ನೀಡದಿದ್ದರೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ಧ. ಬೆದರಿಕೆಗೆ ಮಹಿಳೆ ಸೊಪ್ಪು ಹಾಕದಿದ್ದಾಗ ಕೆಲ ಫೋಟೊ ಕಳುಹಿಸಿದ್ದ. ಈ ಹಿನ್ನೆಲೆಯಲ್ಲಿ ಮಹಿಳೆ ಈ ಸಂಬಂಧ ಈಶಾನ್ಯ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಪೊಲೀಸರು ಆರೋಪಿ ಮಹಂತೇಶನನ್ನ ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದೀಪಾವಳಿ ಹಬ್ಬದ ನಡುವೆಯೇ ಇಂದು ಈ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ದೀಪಾವಳಿ ಅಮಾವಾಸ್ಯೆಯಂದೇ ಸೂರ್ಯಗ್ರಹಣ ಸಂಭವಿಸುತ್ತಿದ್ದು ರಾಜ್ಯದ ಹಲವು ದೇವಸ್ಥಾನಗಳಲ್ಲಿ ಇಂದು ಮಧ್ಯಾಹ್ನದ ನಂತರ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಇದೀಗ ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸುತ್ತಿದ್ದು. ಈ ಗ್ರಹಣ ಭಾರತದ ಹಲವು ಭಾಗಗಳಲ್ಲಿಯೂ ಗೋಚರವಾಗಲಿದೆ. ಬೆಂಗಳೂರು, ದೆಹಲಿ, ಕೊಲ್ಕತ್ತಾ, ಚೆನ್ನೈ, ವಾರಾಣಸಿ, ಮಥುರಾದಲ್ಲಿ ಈ ಗ್ರಹಣವನ್ನ ನೋಡಬಹುದು. ಸೂರ್ಯಗ್ರಹಣ ಇಂದು ಸಂಜೆ 4.29ಕ್ಕೆ ಪ್ರಾರಂಭವಾಗಿ ಸಂಜೆ 5.42ಕ್ಕೆ ಕೊನೆಗೊಳ್ಳುತ್ತದೆ. ಭಾರತವಲ್ಲದೆ, ಯುರೋಪ್, ಆಫ್ರಿಕಾ ಖಂಡದ ಈಶಾನ್ಯ ಭಾಗ, ಏಷ್ಯಾದ ನೈಋತ್ಯ ಭಾಗ ಮತ್ತು ಅಟ್ಲಾಂಟಿಕ್‌ನಲ್ಲಿಯೂ ಇದನ್ನು ಕಾಣಬಹುದು. ಸೂತಕದ ಅವಧಿಯು ಸೂರ್ಯಗ್ರಹಣಕ್ಕೆ 12 ಗಂಟೆಗಳ ಮೊದಲು ಪ್ರಾರಂಭವಾಗುತ್ತದೆ. ಗ್ರಹಣ ಮುಗಿದ ನಂತರ ಸೂತಕ ಕೊನೆಗೊಳ್ಳುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಸೂತಕದ ಅವಧಿಯಲ್ಲಿ ಯಾವುದೇ ಮಂಗಳಕರ ಅಥವಾ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ವಿಶೇಷವಾಗಿ ಗರ್ಭಿಣಿಯರು ಈ ಸಮಯದಲ್ಲಿ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಏಕೆಂದರೆ ಇದು ಹೊಟ್ಟೆಯಲ್ಲಿ…
ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರ ಪತಿ ಜಾನ್ ಷಾ ಸೋಮವಾರ, ಅಂದರೆ ಇಂದು ನಿಧನರಾಗಿರುವುದಾಗಿ ಸಂಸ್ಥೆಯ ವಕ್ತಾರರು ದೃಢಪಡಿಸಿದ್ದಾರೆ. ಈ ವಿಶ್ವಮಾನ್ಯ ಬಯೋಟೆಕ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಅನಾರೋಗ್ಯ ಕಾರಣಗಳಿಂದಾಗಿ ಕಳೆದ ವರ್ಷ ಉಪಾಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಮೃತರ ಅಂತಿಮಸಂಸ್ಕಾರವನ್ನು ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿರುವ ಚಿತಾಗಾರದಲ್ಲಿ ಇಂದು ನಡೆಸಲಾಗುವುದು. ಇವರ ನಿಧನದ ನಿಖರವಾದ ಕಾರಣವನ್ನು ಸಂಸ್ಥೆ ಬಹಿರಂಗಪಡಿಸಿಲ್ಲ. ಜಾನ್ ಷಾ ಅವರು 1949ರಲ್ಲಿ ಜನಿಸಿದರು. 1999ರಿಂದ ಬಯೋಕಾನ್ ಸಂಸ್ಥೆಯ ನಿರ್ದೇಶಕರ ಮಂಡಳಿಯ ಸದಸ್ಯರಾಗಿದ್ದು, ವಿದೇಶ ಪ್ರಮೋಟರ್ ಆಗಿ ಸೇವೆ ಸಲ್ಲಿಸಿದರು. ಜೊತೆಗೆ ಬಯೋಕಾನ್ ಸಮೂಹ ಸಂಸ್ಥೆಗಳ ವಿವಿಧ ಸಲಹಾ ಮಂಡಳಿಗಳಲ್ಲಿಯೂ ಇದ್ದಾರು. ಇವರು ೧೯೯೧ ರಿಂದ ೧೯೯೮ರವರೆಗೆ ಮಧುರಾ ಕೋಟ್ಸ್ ನ ಅಧ್ಯಕ್ಷರಾಗಿದ್ದರು. ಅದಕ್ಕೂ ಮುಂಚೆ ಅವರು ಕೋಟ್ಸ್ ವಿಯೆಲ್ಲಾದಲ್ಲಿ ಮೂರು ದಶಕಗಳ ಕಾಲ ಲ್ಯಾಟಿನ್ ಅಮೇರಿಕ, ಆಫ್ರಿಕಾ ಮತ್ತು ಯೂರೋಪ್ ಗಳಲ್ಲಿ ಹಣಕಾಸು ಹಾಗೂ ಪ್ರಧಾನ ನಿರ್ವಹಣೆಯಲ್ಲಿ ಸೇವೆ ಸಲ್ಲಿಸಿದ್ದರು. ಷಾ ಅವರು 1970ರಲ್ಲಿ…
ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೂಸು ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್. ನ್ಯಾ. ನಾಗಮೋಹನ್ ದಾಸ್ ಸಮಿತಿ ಮಾಡಿದ್ದಕ್ಕೆ ಯಶಸ್ಸು ಸಿಕ್ಕಿದೆ. ಕಾಂಗ್ರೆಸ್ ಪಕ್ಷದ ಭಯಕೆ ನ್ಯಾಯ ಒದಗಿಸಬೇಕು ಅನ್ನೋದು. ಎಸ್ ಟಿ ಸಮುದಾಯದ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲ. ಇಲ್ಲದಿದ್ರೆ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮೀಸಲಾತಿ ಹೆಚ್ಚಿಸುತ್ತಿದ್ದರು. ಬರೀ ಪೆಫರ್ ನಲ್ಲಿ ಚಾಕಲೇಟ್ ಇಟ್ಟು ಕೊಡಲು ಹೋಗಬೇಡಿ. ಬಿಜೆಪಿ ತೀರ್ಮಾನ ಕೇವಲ ಕಣ್ಣೊರೆಸೋ ತಂತ್ರವಷ್ಟೆ ಎಂದು ಟೀಕಿಸಿದರು. ಭಾರತ್ ಜೋಡೋ ಯಾತ್ರೆಗೆ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಬಸ್ ಯಾತ್ರೆ ಬಗ್ಗೆ ನಾನೋಬ್ಬನೆ ನಿರ್ಧಾರ ಮಾಡಲು ಆಗಲ್ಲ. ಎಲ್ಲಾ ನಾಯಕರ ಜೊತೆ ಚರ್ಚಿಸಿ ನಿರ್ಧಾರ ಮಾಡಬೇಕು. ಎಲ್ಲರ ಜತೆ ಚರ್ಚಿಸಿ ಬಸ್ ಯಾತ್ರೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಾಮೂಹಿಕ ನಾಯಕತ್ವದಲ್ಲಿ ಮತ್ತೊಂದು ಯಾತ್ರೆ ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್…