Author: admin

ಗಂಡೆದೆ ಇರುವವರು ಮಾತ್ರ ಮೀಸಲಾತಿ ಕೊಡಲು ಸಾಧ್ಯ. ಆ ಗಂಡೆದೆಯನ್ನ ತೋರಿಸಿದವರು ಸಿಎಂ ಬಸವರಾಜ ಬೊಮ್ಮಾಯಿ ಎಂದು ಕಂದಾಯ ಸಚಿವ ಆರ್.ಅಶೋಕ್ ಹಾಡಿ ಹೊಗಳಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್, ಸಿಎಂ ಬೊಮ್ಮಾಯಿ ಮೆಂಟಲಿ ಪ್ರಿಪೇರ್ ಆಗಿ ಇದನ್ನ ಮಾಡಿದ್ದಾರೆ. ಚಾಣಕ್ಯ ವಿದ್ಯೆ ಕಲಿತವರು ಸಿಂ ಬೊಮ್ಮಾಯಿ . ಚಾಣಕ್ಯತನದಿಂದ ಜೇನುಗೂಡಿಗೆ ಕಲ್ಲು ಹೊಡೆಯದಂತ ಮೀಸಲಾತಿ ಹೆಚ್ಚಳದ ಬಗ್ಗೆ, ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದರು. ಹಿಂದಿನ ಸರ್ಕಾರಗಳು ಮೀಸಲಾತಿ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಮಗೆ ಜೇನುಗೂಡಿಗೆ ಕಲ್ಲು ಹೊಡೆದಂತಾಗುತ್ತದೆ ಎಂದಿದ್ದರು. ಆದರೆ ನಾವು ಎಸ್ ಸಿ ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇವೆ. ಗಂಡೆದೆ ಇರುವವರಿಂದ ಮಾತ್ರ ಇದು ಸಾಧ್ಯ ಎಂದು ಸಚಿವ ಅಶೋಕ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ : ವಾಹನಗಳನ್ನು ವೇಗವಾಗಿ ಚಾಲನೆ ಮಾಡಿ ಮೃತಪಟ್ಟವರ ವರದಿ ಬಿಡುಗಡೆ ಮಾಡಿದ್ದು, ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಈ ಕುರಿತಂತೆ ಬಿಡುಗಡೆ ಮಾಡಿರುವ ವರದಿಯಂತೆ , ಕಳೆದ ವರ್ಷ ಅತಿ ವೇಗದ ಚಾಲನೆಯಿಂದ ತಮಿಳುನಾಡಿನ ಬಳಿಕ ಕರ್ನಾಟಕದಲ್ಲಿಯೇ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ತಮಿಳುನಾಡಿನಲ್ಲಿ 11,419 ಮಂದಿ ಸಾವನ್ನಪ್ಪಿದ್ದರೆ ಕರ್ನಾಟಕದಲ್ಲಿ 8,797 ಮಂದಿ ಸಾವಿಗೀಡಾಗಿದ್ದಾರೆ. ಕಳೆದ ವರ್ಷ ದೇಶದಲ್ಲಿ ಒಟ್ಟು 4,03,116 ರಸ್ತೆ ಅಪಘಾತಗಳು ಸಂಭವಿಸಿದ್ದು ಈ ಪೈಕಿ 2,40,828 ಪ್ರಕರಣಗಳು ಅತಿ ವೇಗದ ಚಾಲನೆಯಿಂದ ಸಂಭವಿಸಿದೆ. ಕಳೆದ ವರ್ಷ ಕರ್ನಾಟಕದಲ್ಲಿ ಒಟ್ಟು 34,647 ಅಪಘಾತ ಪ್ರಕರಣಗಳು ಸಂಭವಿಸಿದ್ದು,10,038 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ವೇಗದ ಚಾಲನೆಯಿಂದಲೇ 8,797 ಮಂದಿ ಸಾವನ್ನಪ್ಪಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ : ಕಿತ್ತೂರು ಬಳಿ 1,000 ಎಕರೆ ಕೈಗಾರಿಕಾ ಟೌನ್ ಶಿಪ್ ನಿರ್ಮಿಸಲು ನಿರ್ಧರಿಸಲಾಗಿದ್ದು, ಇದರಿಂದ 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಚನ್ನಮ್ಮನ್ನ ಕಿತ್ತೂರಿನ ಕೋಟೆ ಆವರಣದಲ್ಲಿ ಸೋಮವಾರ ಚನ್ನಮ್ಮನ ಕಿತ್ತೂರು ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು , ಚೆನ್ನಮ್ಮನ ಅರಮನೆ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 50 ಕೋಟಿ ಕೊಟ್ಟಿದ್ದರು, ನಾವು ಈಗ ಅದನ್ನು 115 ಕೋಟಿ ರೂ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ, ಚನ್ನಮ್ಮ ಆಶೀರ್ವಾದದಿಂದ ಎರಡು ನೀರಾವರಿ ಯೋಜನೆಗೆ ಅನುಮತಿ ಪಡೆಯಬೇಕಿದೆ. ಕಳಸಾ ಬಂಡೂರಿ ಯೋಜನೆ ಅಂತಿಮ ಹಂತದಲ್ಲಿದೆ. ಅದಕ್ಕೂ ಒಪ್ಪಿಗೆ ಪಡೆದು ಆದಷ್ಟು ಬೇಗ ಕೆಲಸ ಮುಗಿಸುತ್ತೇವೆ ಎಂದರು. ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿ ಸಂಕಲ್ಪವನ್ನು ನಮ್ಮ ಸರ್ಕಾರ ಮಾಡಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಲಂಡನ್‌: ರಿಶಿ ಸುನಕ್ ಅವರನ್ನು ಯುನೈಟೆಡ್ ಕಿಂಗ್ಡಮ್ನ ಪ್ರಧಾನಿಯಾಗಿ ಮತ್ತು ಕನ್ಸರ್ವೇಟಿವ್ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಅವರ ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರು 100 ಸಂಸದರ ಬೆಂಬಲವನ್ನು ಗಳಿಸಲು ವಿಫಲರಾಗಿದ್ದರಿಂದ ಅವರು 190 ಕ್ಕೂ ಹೆಚ್ಚು ಸಂಸದರಿಂದ ಚುನಾಯಿತರಾಗಿದ್ದಾರೆ. ಪೆನ್ನಿ ಮೊರ್ಡೌಂಟ್ ಟ್ವೀಟನಲ್ಲಿ ತಾನು ರೇಸ್ನಿಂದ ಹೊರಗುಳಿಯುತ್ತಿದ್ದೇನೆ ಮತ್ತು ಯುಕೆ ಪ್ರಧಾನಿಯಾಗಿ ಸುನಕ್ ಅವರನ್ನು ಬೆಂಬಲಿಸುತ್ತಿದ್ದೇನೆ ಎಂದು ಘೋಷಿಸಿದರು. ಈ ಮೂಲಕ ಸುನಕ್ ಬ್ರಿಟನ್ 57 ನೇ ಪ್ರಧಾನ ಮಂತ್ರಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ. ಇನ್ನು ರಿಷಿ ಸುನಕ್ ಅವರ ಹಿನ್ನೆಲೆ ಗಮನಿಸುವುದ್ದಾರೇ ಪ್ರತಿಷ್ಠಿತ ವಿಂಚೆಸ್ಟರ್‌ ಕಾಲೇಜಿನಲ್ಲಿ ಅಧ್ಯಯನ ನಡೆಸಿರುವ ಸುನಕ್‌, ಆಕ್ಸ್‌ಫರ್ಡ್‌ ವಿವಿಯಲ್ಲಿ ರಾಜಕೀಯ, ಫಿಲಾಸಫಿ ಮತ್ತು ಅರ್ಥಶಾಸ್ತ್ರದಲ್ಲಿ ಉನ್ನತ ಶಿಕ್ಷಣ ಪಡೆದುಕೊಂಡಿದ್ದಾರೆ. ಅಮೆರಿಕಾ ಸ್ಟಾನ್‌ಫರ್ಡ್‌ ವಿವಿಯಿಂದ ಎಂಬಿಎ ಪದವಿಯನ್ನೂ ಪಡೆದುಕೊಂಡಿದ್ದಾರೆ. ಸದ್ಯ ಹಣಕಾಸು ಸಚಿವ ಹುದ್ದೆಯಲ್ಲಿದ್ದು, 2015ರಲ್ಲಿ ರಿಷಿ ಬ್ರಿಟನ್ ಸಂಸತ್ತನ್ನ ಪ್ರವೇಶಿಸಿದರು. 2020ರಲ್ಲಿ ಬ್ರಿಟನ್ ಸಚಿವ ಸಂಪುಟದ ಪ್ರಮುಖ ಹುದ್ದೆಗಳಲ್ಲಿ ಒಂದಾದ ಹಣಕಾಸು ಸಚಿವರಾದ್ರು. ವಿಶೇಷವೆಂದ್ರೆ, ಕೋವಿಡ್…

Read More

ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ ಬಿದ್ದ ಹಿನ್ನೆಲೆಯಲ್ಲಿ ವಾಲ್ಮಿಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಅನಿರ್ಧಿಷ್ಟಾವಧಿ ಧರಣಿ ಅಂತ್ಯಗೊಳಿಸಿದರು. ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಪೀಠದ ಪೀಠಾಧ್ಯಕ್ಷರಾಗಿರುವ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು 257 ದಿನಗಳಿಂದ ಅಂದರೇ ಫೇ.10ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ಕೈಗೊಂಡದ್ದರು. ಎಸ್.ಸಿ ಗೆ ಶೇ.15ರಿಂದ 17 ಹಾಗೂ ಪರಿಶಿಷ್ಟ ವರ್ಗಕ್ಕೆ ಶೇ.3ರಿಂದ 7ರಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಸಹಿ ಹಾಕಿದ್ದಾರೆ. ಹೀಗಾಗಿ ನಗರದ ಫ್ರೀಡಂಪಾರ್ಕ್ ನಲ್ಲಿ ಪ್ರಸನ್ನಾನಂದ ಪುರಿ ಸ್ವಾಮೀಜಿಗಳು ಧರಣಿ ಅಂತ್ಯಗೊಳಿಸಿದ್ದು ಈ ವೇಳೆ ಕಂದಾಯ ಸಚಿವ ಆರ್.ಅಶೋಕ್ ಸುಗ್ರಿವಾಜ್ಞೆ ಪ್ರತಿ ಹಸ್ತಾಂತರ ಮಾಡಿ ಸಿಹಿ ತಿನ್ನಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಪ್ರಧಾನಿಯಾದ ಬಳಿಕ 2014 ರಿಂದಲೂ ಗಡಿಯಲ್ಲಿ ಭಾರತೀಯ ಯೋಧರ ಜೊತೆ ಪ್ರಧಾನಿ ಮೋದಿ ದೀಪಾವಳಿ ಹಬ್ಬವನ್ನ ಆಚರಿಸುತ್ತಿದ್ದು ಈ ಬಾರಿಯೂ ಇದೇ ಸಂಪ್ರದಾಯವನ್ನ ಮುಂದುವರೆಸಿದ್ದಾರೆ. ಲಡಾಖ್ ನ ಕಾರ್ಗಿಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಮೋದಿ. ದೇಶದ ಯೋಧರೇ ನನ್ನ ಕುಟುಂಬ. ಗಡಿಯಲ್ಲಿ ದೀಪಾವಳಿ ಆಚರಣೆ ಮಾಡುವುದು ನನ್ನ ಸೌಭಾಗ್ಯ. ದೀಪಾವಳಿಯ ಅರ್ಥ ಭಯವನ್ನ ಅಂತ್ಯ ಗೊಳಿಸುವ ಉತ್ಸವ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಅತ್ಯಾಚಾರ ಮತ್ತು ಜೀವ ಬೆದರಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ರನ್ನ ಅಮಾನತು ಮಾಡಲಾಗಿದೆ. ಸಿಪಿಐ ಜಿ.ಬಿ ಉಮೇಶ್ ಅಮಾನತುಗೊಳಿಸಿ ದಾವಣಗೆರೆ ಪೂರ್ವವಲಯ ಐಜಿಪಿ ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ತನ್ನ ಸೋದರ ಮಾವನ ಮಗ ಜಿ.ಬಿ. ಉಮೇಶ್ ವಿರುದ್ಧ ಅತ್ಯಾಚಾರ, ಜೀವಬೆದರಿಕೆ ಆರೋಪ ಮಾಡಿ ಯುವತಿ ದೂರು ನೀಡಿದ್ದರು. 5 ವರ್ಷಗಳ ಹಿಂದೆ ದಾವಣಗೆರೆಯಲ್ಲಿ ಇನ್ಸ್​ ಪೆಕ್ಟರ್ ಆಗಿದ್ದ ಉಮೇಶ್ ನಿರಂತರವಾಗಿ ಅತ್ಯಾಚಾರ, ಮಾಡಿದ್ದು, ಪರಿಣಾಮವಾಗಿ ಐದು ಬಾರಿ ಗರ್ಭಪಾತ ಮಾಡಲಾಗಿದೆ ಎಂದು ಯುವತಿ ಆರೋಪಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಮಾಜಿ ಡಿಸಿಎಂ ಹಾಗೂ ಹಾಲಿ ಶಾಸಕರಾದ ಡಾ.ಜಿ.ಪರಮೇಶ್ವರ್ ತನ್ನ ಸ್ವಕ್ಷೇತ್ರವಾದ  ಕೊರಟಗೆರೆಯ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆಯ ನಮ್ಮೂರ ಹಬ್ಬವೆಂಬ ಕಾರ್ಯಕ್ರಮದಲ್ಲಿ ತಮ್ಮ ರಾಜಕೀಯ ಭವಿಷ್ಯದ ಮನದಾಸೆಯನ್ನು ಸಾರ್ವಜನಿಕವಾಗಿ ಬಿಚ್ಚಿಟ್ಟಿದ್ದಾರೆ. ಕೊರಟಗೆರೆ ಕ್ಷೇತ್ರದ ಅಭಿವೃದ್ಧಿ ವಿಚಾರವನ್ನು ನಮ್ಮೂರ ಹಬ್ಬದ ಕಾರ್ಯಕ್ರಮದ ವೇದಿಕೆ ಮೇಲೆ ಮಾತನಾಡುತ್ತಾ, ತಮ್ಮ ಮನದಾಳದ ಮಾತು ಬಿಚ್ಚಿಟ್ಟ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್,  ಈ ಕ್ಷೇತ್ರದ ಜನತೆ ನನ್ನನ್ನ ಎರಡು ಬಾರೀ ಆಯ್ಕೆ ಮಾಡಿದ್ದಾರೆ. ಆದ್ರೆ ಒಳ್ಳೆ ಟೈಂ ನಲ್ಲಿ ನನ್ನ ಪಲ್ಟಿ ಒಡೆಸಿದ್ದಾರೆ. 2013 ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಗೆದ್ದಿದ್ರೆ ಈ ರಾಜ್ಯದ ಮುಖ್ಯಮಂತ್ರಿ ಆಗೋ ಅವಕಾಶ ಇತ್ತು ಎಂದರು. ನನ್ನದು ಹಣೆಬರಹ ಇರಬೇಕಲ್ಲಾ, ಬರೇ ನಿಮ್ಮದೇ ಹೇಳಿದ್ರೆ ನಾನು ಏನು ಹೇಳಲಿ. ಹಣೆ ಬರಹ ಬಹುಶಃ ನನಗಿರಲಿಲ್ಲ ಅಂತಾ ಕಾಣಿಸುತ್ತೆ. ಆಗಾಗಿ ಇವತ್ತು ನನ್ನ ಕೈಲಾದ ಕೆಲಸ ಮಾಡಿದ್ದೇನೆ ಅನ್ನೋ ಆತ್ಮತೃಪ್ತಿ ನನಗಿದೆ. ತಮಗೆ ಇದೆಯೋ ಇಲ್ವೋ ಗೊತ್ತಿಲ್ಲ ಎಂದು ಪರಮೇಶ್ವರ್…

Read More

ಶಿವಮೊಗ್ಗ : ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ದಿನದಂದು ವಾಹನಗಳನ್ನು ಜಖಂಗೊಳಿಸಿದ ಆರೋಪದ ಮೇಲೆ ಹತ್ಯೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಮಂದಿ ವಿರುದ್ಧ ಜಿಲ್ಲೆಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ​ಐಆರ್ ದಾಖಲಾಗಿದೆ. ಕಲ್ಲಪ್ಪನಕೇರಿಯಿಂದ ಅಜಾನ್ ನಗರಕ್ಕೆ ಬೈಕ್‍ನಲ್ಲಿ ಬಂದ 10ರಿಂದ 15 ಜನರ ಗುಂಪು ಸಯ್ಯದ್ ಫರ್ವೀಜ್ ಎಂಬವರಿಗೆ ಸೇರಿದ್ದ ಇನ್ನೋವಾ ಕಾರನ್ನು ಜಖಂ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೇ ಆ ಗುಂಪು ಜೈ ಶ್ರೀರಾಮ್ ಎಂದು ಕೂಗುತ್ತಾ ಕೇಸರಿ ಬಾವುಟ ಹಿಡಿದುಕೊಂಡಿತ್ತು ಎಂದು ಸಯ್ಯದ್ ಫರ್ವೀಜ್ ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹರ್ಷನ ಸಹೋದರಿ ಅಶ್ವಿನಿ ಸೇರಿ 10-15 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಮೈಸೂರು; ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್‌ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು 32  ಜನರನ್ನು ಬಂಧಿಸಿ, 17.24 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಹಿನಕಲ್ ಗ್ರಾಮದ ಯಶಸ್ವಿನಿ ಕಲ್ಯಾಣಮಂಟಪದ ಬಳಿಯ ಆದಿತ್ಯ ಬಡಾವಣೆಯ ಗ್ಯಾರೇಜ್ ಹಿಂಭಾಗದ ಕೊಠಡಿಯಲ್ಲಿ ಜೂಜಾಡುತ್ತಿರುವ ಬಗ್ಗೆ ವಿಜಯನಗರ ಪೊಲೀಸರಿಗೆ ಮಾಹಿತಿ ದೊರೆತಿದೆ. ತಕ್ಷಣವೇ ವಿಜಯನಗರ ಠಾಣೆ ಪೊಲೀಸರು ಮತ್ತು ಅಪರಾಧ ವಿಭಾಗ ಘಟಕದ ಪೊಲೀಸರು ರಾತ್ರಿ ಜೂಜು ಅಡ್ಡೆಯ ಮೇಲೆ ದಿಢೀರ್ ಜಂಟಿ ಕಾರ್ಯಾಚರಣೆ ನಡೆಸಿ ಜೂಜಾಡುತ್ತಿದ್ದ 32 ಜನರನ್ನು ಬಂಧಿಸಿದರು. ಜೂಜಾಟಕ್ಕೆ ಪಣಕ್ಕಿಡಲಾಗಿದ್ದ 17.24  ಲಕ್ಷ ರೂ.ನಗದು, ಹಣವನ್ನು ಎಣಿಸುವ ಯಂತ್ರವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ, ಅಪರಾಧ ಮತ್ತು ಸಂಚಾರವಿಭಾಗದ ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ನರಸಿಂಹರಾಜ ವಿಭಾಗದ ಎಸಿಪಿ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿಜಯನಗರ ಠಾಣೆ ಇನ್‌ಸ್ಪೆಕ್ಟರ್ ಬಿ.ಎಸ್.ರವಿಶಂಕರ್, ಸಿಸಿಬಿ…

Read More