Author: admin

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಮೀಸಲಾತಿ ಹೆಚ್ಚಳದ ಬಗ್ಗೆ ನ್ಯಾ. ನಾಗಮೋಹನದಾಸ್ ಸಮಿತಿ ನೀಡಿದ್ದ ವರದಿಯ ಶಿಫಾರಸ್ಸನ್ನು ಯಥಾವತ್ತಾಗಿ ಒಪ್ಪಿಕೊಂಡು ಮೀಸಲಾತಿ ಹೆಚ್ಚಳ ಜಾರಿಗೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಈ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ರಾಜ್ಯದ ಪರಿಶಿಷ್ಟ ಜಾತಿ ಪಂಗಡದವರಿಗೆ ಇಂದಿನಿಂದ ಮೀಸಲಾತಿ ಹೆಚ್ಚಳವಾಗಲಿದೆ. ಪರಿಶಿಷ್ಟ ಜಾತಿ ಮೀಸಲಾತಿ ಶೇ. 15 ರಿಂದ ಶೇ. 17 ರಷ್ಟು, ಪರಿಶಿಷ್ಟ ಪಂಗಡದ ಮೀಸಲಾತಿ ಶೇ. 3ರಿಂದ ಶೇ. 7ರಷ್ಟು ಹೆಚ್ಚಳವಾಗಲಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸಿಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ: ದೀಪಾವಳಿಗೆ ಬಟ್ಟೆ ಖರೀದಿಸಿ ಊರಿಗೆ ದ್ವಿಚಕ್ರ ವಾಹನದ ಮೇಲೆ ಹೊರಟಿದ್ದಾಗ ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ 5 ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ 4ಲ್ಲಿ ನಡೆದಿದೆ. ಯಮಕನಮರಡಿ ಸಮೀಪದ ಅನಂತಪುರ ಗ್ರಾಮದ ವರ್ಧನ ಈರಣ್ಣ ಬೇಲಿ(5) ಮೃತಪಟ್ಟ ಬಾಲಕ. ಗಾಂಧಿ ನಗರದ ಹಣ್ಣಿನ ಮಾರುಕಟ್ಟೆ ಎದುರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಾಲಕನ ಕುತ್ತಿಗೆಗೆ ಗಾಳಿಪಟದ ದಾರ ಬಿಗಿದಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತಂದೆ ಈರಣ್ಣ ಅವರೊಂದಿಗೆ ವರ್ಧನ ಬೆಳಗಾವಿಗೆ ಬಟ್ಟೆ ಖರೀದಿಗೆ ಬಂದಿದ್ದನು. ನಗರದಲ್ಲಿ ಬಟ್ಟೆ ಖರೀದಿಸಿ ಬೆಳಗಾವಿಯಿಂದ ಊರಿಗೆ ಹೊರಟಾಗ ದ್ವಿಚಕ್ರ ವಾಹನದಲ್ಲಿ ಮುಂಭಾಗದಲ್ಲಿ ವರ್ಧನ ಕುಳಿತುಕೊಂಡಿದ್ದ. ಈ ವೇಳೆ ಗಾಳಿಪಟದ ದಾರ ನೇರವಾಗಿ ವರ್ಧನ ಕುತ್ತಿಗೆಗೆ ಬಿಗಿದು ಸ್ಥಳದಲ್ಲಿಯೇ ಅಸುನೀಗಿದ್ದಾನೆ. ತಂದೆ ಎಷ್ಟೇ ಪ್ರಯತ್ನಿಸಿದರೂ ಬಾಲಕ ವರ್ಧನ ಬದುಕಿ ಉಳಿಯಲಿಲ್ಲ. ಮಾಂಜಾ ಸಂಪೂರ್ಣ ನಿಷೇಧಿಸಲು ಜಿಲ್ಲಾಡಳಿತ ಹಾಗೂ ಪೊಲೀಸರು ಅಗತ್ಯ ಕ್ರಮ ಜರುಗಿಸಬೇಕು ಎಂದು ಬಾಲಕನ ಸಂಬಂಧಿಕರು ಆಗ್ರಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ…

Read More

ದಾವಣಗೆರೆ : ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿಲ್ಲ ಎಡಿಜಿಪಿಯಂತಹ ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು ಹೇಗೆ ಪ್ರಶ್ನಿಸುತ್ತಾರೆ. ಸಿಐಡಿಯಿಂದ ಸತ್ಯಾಸತ್ಯತೆ ಹೊರಬರುತ್ತದೆ ಎಂಬ ವಿಶ್ವಾಸ ನಮಗೆ ಇಲ್ಲ ಎಂದಿದ್ದಾರೆ. ಇನ್ನು ಮಹಿಳೆಗೆ ಕಪಾಳಮೋಕ್ಷ ಮಾಡಿರುವ ವಸತಿ ಸಚಿವ ವಿ.ಸೋಮಣ್ಣ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅವರು ಸಚಿವರಾಗಲು ನಾಲಾಯಕ್, ಜನರ ಸಂಕಷ್ಟ, ಸಮಸ್ಯೆಗಳಿಗೆ ಸ್ಪಂದಿಸುವ ತಾಳ್ಮೆ, ಸಹನೆ ಇರದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ವಿಜಯನಗರ: ನಗರಸಭೆ, ಗ್ರಾಮ ಪಂಚಾಯ್ತಿ ಸದಸ್ಯರಿಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ದೀಪಾವಳಿ ಭರ್ಜರಿ ಗಿಫ್ಟ್ ನೀಡಿದ್ದಾರೆ. ಬೆಳ್ಳಿ, ನಗದು, ರೇಷ್ಮೆ ಸೀರೆ ಮತ್ತು ಪಂಚೆಯನ್ನು ಉಡುಗೋರೆಯಾಗಿ ನೀಡಿದ್ದಾರೆ. ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ತನ್ನ ಕ್ಷೇತ್ರದ ನಗರಸಭೆ ಹಾಗೂ ಪಟ್ಟಣ ಪಂಚಾಯ್ತಿ ಸದಸ್ಯರು ಮತ್ತು 182 ಗ್ರಾಮ ಪಂಚಾಯ್ತಿ ಸದಸ್ಯರಿಗೆ ಬೆಳ್ಳಿ, ನಗದು, ರೇಷ್ಣೆ ಸೀರೆ, ಪಂಚೆ ನೀಡಿ, ದೀಪಾವಳಿ ಹಬ್ಬದ ಲಕ್ಷ್ಮೀ ಪೂಜೆಗೆ ಆಹ್ವಾನಿಸಿದ್ದಾರೆ. ನಗರಸಭೆ, ಪಟ್ಟಣ ಪಂಚಾಯ್ತಿ ಸದಸ್ಯರಿಗೆ ತಲಾ 1 ಲಕ್ಷದ 44 ಸಾವಿರ ರೂ ನಗದು, 144 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ, ರೇಷ್ಣೆ ಸೀತಿ, ಪಂಚೆ, ಅಂಗಿ, ಮುತ್ತಿನ ಹಾರ ಹಾಗೂ ಡ್ರೈ ಪ್ರೂಟ್ಸ್ ನೀಡಿದ್ದಾರೆ. ಇನ್ನೂ 182 ಗ್ರಾಮ ಪಂಚಾಯ್ತಿ ಸದಸ್ಯರಿಗೆ ಅರ್ಧ ಕೆಜಿ ಬೆಳ್ಳಿ, 27 ಸಾವಿರ ನಗದು, ರೇಷ್ಮೆ ಸೀರೆ, ಪಂಚೆ, ರೇಷ್ಮೆ ಶರ್ಟ್, ಮುತ್ತಿನ ಹಾರ ಮತ್ತು ಡ್ರೈ ಪ್ರೂಟ್ಸ್ ನೀಡಿ, ದೀಪಾವಳಿ ಹಬ್ಬದ ಲಕ್ಷ್ಮೀ…

Read More

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬಂದಿದೆ, ದೀಪಾವಳಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ. ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ನಡೆಸಿದ ಬಳಿಕ ಸಂಪುಟ ವಿಸ್ತರಣೆಯಾಗಲಿದೆ. ಸಂಪುಟ ವಿಸ್ತರಣೆ ವಿಚಾರ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಆಸೆ ಮತ್ತೆ ಚಿಗುರೊಡೆದಿದ್ದು, ಲಾಭಿ ಆರಂಭವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ಒಂದೆಡೆ ಮಳೆ ಆರ್ಭಟದಿಂದ ಬೆಳೆ ನಷ್ಟ ಮತ್ತು ಮೇವಿನ ತೊಂದರೆ ಅನುಭವಿಸುತ್ತಿರುವ ತಾಲ್ಲೂಕಿನ ರೈತರಿಗೆ ಗಾಯದ ಮೇಲೆ ಬರೆ ಎಂಬಂತೆ ಜೀವನಾಡಿ ರಾಸುಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ರಾಸುಗಳಿಗೆ ಚರ್ಮಗಂಟು ರೋಗ  ಕಾಣಿಸಿಕೊಂಡಿರುವುದು ತಾಲ್ಲೂಕಿನ ರೈತಾಪಿ ವರ್ಗಕ್ಕೆ ಮತ್ತೊಂದು ಆಘಾತವಾಗಿದೆ. ಕೊರಟಗೆರೆ ಪಶುಪಾಲನಾ ಇಲಾಖೆಯ ಮಾಹಿತಿಯಂತೆ ಅ-22 ರ ದೈನಂದಿನ ಮಾಹಿತಿ ಪ್ರಕಾರ ರೋಗ ಕಂಡುಬಂದ ಗ್ರಾಮಗಳ ಒಟ್ಟು ಸಂಖ್ಯೆ 51, ರೋಗಕ್ಕೆ ತುತ್ತಾದ ಜಾನುವಾರುಗಳ ಸಂಖ್ಯೆ 100, ಚಿಕಿತ್ಸೆಯಿಂದ ಗುಣಮುಖ ಹೊಂದಿದ ಜಾನುವಾರುಗಳ ಸಂಖ್ಯೆ 26, ರೋಗದಿಂದ ಮರಣ ಹೊಂದಿದ ಜಾನುವಾರುಗಳ ಸಂಖ್ಯೆ 4 , ಇದುವರೆಗೆ IAH  ಹಾಗೂ VB ಯಿಂದ ಸರಬರಾಜಾದ ಲಸಿಕೆ ಪ್ರಮಾಣ ಸಂಖ್ಯೆ  ( ಡೋಸ್ ) 7.000 , ಲಸಿಕೆ ಹಾಕಿದ ಜಾನುವಾರುಗಳ ಸಂಖ್ಯೆ 5899  ಆಗಿದೆ .ಎಂದು ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರಾದ ಡಾ.ಸಿದ್ದನಗೌಡ ಮಾಹಿತಿ ನೀಡಿದ್ದಾರೆ.  ರೋಗದ ಲಕ್ಷಣಗಳು ಕಂಡುಬರುವುದು ಹೇಗೆ? ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು…

Read More

ಎನರ್ಜಿ ಡ್ರಿಂಕ್ ಕಂಪನಿ ರೆಡ್ ಬುಲ್‌ ಸಂಸ್ಥಾಪಕ ಡೈಟ್ರಿಚ್ ಮಾಟೆಸ್ಚಿಟ್ಜ್ (78) ನಿವಾರ ಕೊನೆಯುಸುರೆಳೆದಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ (ಕ್ಯಾನ್ಸರ್‌) ಬಳಲುತ್ತಿದ್ದ ಡೀಟ್ರಿಚ್ ಅವರು ಶನಿವಾರ ನಿಧನರಾಗಿದ್ದಾರೆ. ಸ್ಟೈರಿಯನ್ ಮೂಲದ ಉದ್ಯಮಿ ಡೈಟ್ರಿಚ್ ರೆಡ್ ಬುಲ್ ಸುತ್ತಲೂ ಜಾಗತಿಕ ಸಾಮ್ರಾಜ್ಯವನ್ನು ನಿರ್ಮಿಸಿದರು ಮತ್ತು ಆಸ್ಟ್ರಿಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂದು ಪರಿಗಣಿಸಲ್ಪಟ್ಟರು. ಮಾಟೆಸ್ಚಿಟ್ಜ್ ಸಂಪತ್ತು ಸುಮಾರು 25 ಬಿಲಿಯನ್ ಯುರೋಗಳು ($24.65 ಬಿಲಿಯನ್) ಎಂದು ಅಂದಾಜಿಸಲಾಗಿದೆ. ಇದು ವಿಶ್ವದ ಶ್ರೀಮಂತ ವ್ಯಕ್ತಿಗಳ ಫೋರ್ಬ್ಸ್ ಪಟ್ಟಿಯಲ್ಲಿ 51 ನೇ ಸ್ಥಾನದಲ್ಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇಂದು ಮೂರನೇ ಅವಧಿಗೆ ಅಧಿಕಾರವನ್ನು ಪಡೆದು ಐತಿಹಾಸಿಕ ಮೈಲಿಗಲ್ಲು ಬರೆದಿದ್ದಾರೆ. ಕ್ಸಿ ಜಿನ್‌ಪಿಂಗ್ ಮತ್ತೆ ಆಡಳಿತ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದಾರೆ. ಸಂಸ್ಥಾಪಕ ಮಾವೋ ಝೆಡಾಂಗ್ ನಂತರ ರಾಷ್ಟ್ರದ ಅತ್ಯಂತ ಪ್ರಭಾವಶಾಲಿ ನಾಯಕರಾಗಿದ್ದಾರೆ. ಕ್ಸಿ ಜಿನ್‌ಪಿಂಗ್ ಅವರು ರೆಕಾರ್ಡ್-ಬ್ರೇಕಿಂಗ್ ಮೂರನೇ ಅವಧಿಗೆ ತಮ್ಮ ಮುಖ್ಯ ಪೋಷಕ ತಂಡವನ್ನು ಅನಾವರಣಗೊಳಿಸಿದ್ದಾರೆ. ನಮ್ಮ ಮೇಲೆ ಇಟ್ಟಿರುವ ನಂಬಿಕೆಗಾಗಿ ನಾನು ಇಡೀ ಪಕ್ಷಕ್ಕೆ ಪ್ರಾಮಾಣಿಕವಾಗಿ ಧನ್ಯವಾದ ಹೇಳಲು ಬಯಸುತ್ತೇನೆ. ನಮ್ಮ ಪಕ್ಷ ಮತ್ತು ನಮ್ಮ ಜನರ ದೊಡ್ಡ ನಂಬಿಕೆಗೆ ಅರ್ಹರೆಂದು ಸಾಬೀತುಪಡಿಸಲು ಶ್ರದ್ಧೆಯಿಂದ ಕೆಲಸ ಮಾಡಲಿದೆ ಎಂದು ಕ್ಸಿ ಜಿನ್‌ಪಿಂಗ್ ಭರವಸೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕಬ್ಬು ದರ ನಿಗದಿ ರಾಜ್ಯ ಸರ್ಕಾರದ ವಿಳಂಬ ನೀತಿ ವರ್ತನೆ ಖಂಡಿಸಿ ರಾಜ್ಯಾದ್ಯಂತ 27 ರಂದು ರಸ್ತೆ ತಡೆ ಚಳವಳಿ ನಡೆಸಲಾಗುತ್ತದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಕಬ್ಬಿನ ಎಫ್ ಆರ್ ಪಿ ದರಕ್ಕೆ ಹೆಚ್ಚುವರಿ ದರ ನಿಗದಿಪಡಿಸಲು ಮಂತ್ರಿಗಳು ನಾಲ್ಕು ಸಭೆಗಳನ್ನು ನಡೆಸಿ ಯಾವುದೇ ತೀರ್ಮಾನ ಕೈಗೊಳ್ಳದೆ ಮುಂದೂಡುತ್ತಿದ್ದಾರೆ. ಇದು ಕಬ್ಬು ಬೆಳೆದ ರೈತರಿಗೆ ಬಗೆದ ದ್ರೋಹವಾಗಿದೆ. ರಾಜ್ಯದ ಕಬ್ಬು ಬೆಳೆಗಾರ ರೈತರು ನಾಲ್ಕು ತಿಂಗಳಿಂದಲೂ ಹೋರಾಟ ನಡೆಸುತ್ತಿದ್ದರು ಯಾವುದೇ ಎಂಎಲ್ಎ, ಎಂಪಿ ,ಮಂತ್ರಿಗಳು, ಈ ಬಗ್ಗೆ ಮಾತನಾಡದೆ ಇರುವುದು ಅನುಮಾನ ಉಂಟು ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 30 ಲಕ್ಷ ಕಬ್ಬು ಬೆಳೆಗಾರರ 40,000 ಕೋಟಿ ವೈಹಿವಾಟು ನಡೆಸುವ ಈ ಉದ್ಯಮ ಸರ್ಕಾರಕ್ಕೆ ಲಾಭ ತರುತ್ತಿಲ್ಲವೇ? 5000 ಕೋಟಿ ವ್ಯವಹಾರ ನಡೆಸುವ ಅಡಿಕೆ ಬೆಳೆಗಾರರ ಬಗ್ಗೆ ಕೇಂದ್ರಕ್ಕೆ ನಿಯೋಗ ಹೋಗಿ ಮನವಿ ಮಾಡುವ ರಾಜ್ಯದ ಗೃಹ ಸಚಿವರಿಗೆ ಹಾಗೂ ಎಂಪಿಗಳಿಗೆ…

Read More

ಭಾರತೀಯ ನೋಟುಗಳ ಮೇಲೆ ಮಹಾತ್ಮಗಾಂಧೀಜಿ ಭಾವಚಿತ್ರದ ಬದಲು ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಫೋಟೊ ಹಾಕಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಆಗ್ರಹಿಸಿದೆ. ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಸುಭಾಷ್‌ ಚಂದ್ರ ಬೋಸ್‌ ಅವರ ಪಾತ್ರ ಮಹಾತ್ಮಾ ಗಾಂಧೀಜಿಗಿಂತ ಕಡಿಮೆ ಏನಿಲ್ಲ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಅವರಿಗಂತ ಸುಭಾಷ್‌ ಚಂದ್ರ ಬೋಸ್‌ ಅವರ ಹೋರಾಟ ಕಡಿಮೆ ಏನಿಲ್ಲ. ಹಾಗಾಗಿ ಅವರ ಭಾವಚಿತ್ರವನ್ನು ನೋಟುಗಳ ಮೇಲೆ ಮುದ್ರಿಸುವ ಮೂಲಕ ಅವರಿಗೂ ಗೌರವ ಸಲ್ಲಿಸಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಪಶ್ಚಿಮ ಬಂಗಾಳದ ರಾಜ್ಯ ಕಾರ್ಯಧ್ಯಕ್ಷ ಚಂದ್ರಚೂಡ್‌ ಗೋಸ್ವಾಮಿ ತಿಳಿಸಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾದ ಹೊಸ ವಾದಕ್ಕೆ ಕಾಂಗ್ರೆಸ್‌ ಮತ್ತು ತೃಣಮೂಲ ಕಾಂಗ್ರೆಸ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಜನರ ದಿಕ್ಕು ತಪ್ಪಿಸಲು ಇಂತಹ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More