Author: admin

ತುರುವೇಕೆರೆ: ಸರ್ಕಾರವು ಜನರಿಗೆ ತಲುಪಬೇಕಾದ ಸವಲತ್ತುಗಳ ಅರಿವು ಮತ್ತು ಜನರಿಗೆ ತಲುಪುವಂತಹ ಕಾರ್ಯಕ್ರಮ ಏರ್ಪಡಿಸಿದೆ. ಇದನ್ನು ಸಾರ್ವಜನಿಕರು ಮತ್ತು ರೈತರು ಸದುಪಯೋಗಪಡಿಸಿಕೊಳ್ಳಿ ಎಂದು ತಹಶೀಲ್ದಾರ್  ವೈ.ಎಂ.ರೇಣುಕುಮಾರ್ ಸಾರ್ವಜನಿಕರಲ್ಲಿ  ಮನವಿ ಮಾಡಿದರು. ತಾಲ್ಲೂಕಿನ  ಲೋಕಮ್ಮನಹಳ್ಳಿಯಲ್ಲಿ ಏರ್ಪಡಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಸೂಚನೆಯಂತೆ ಈ ಕಾರ್ಯಕ್ರಮ  ಸರ್ಕಾರದ ಯೋಜನೆಗಳು ಜನರಿಗೆ ನೇರವಾಗಿ ತಲುಪಿಸುವಂಥಹ ಕಾರ್ಯಕ್ರಮ ನಡೆಯುತ್ತಿದೆ. ನಿಮ್ಮ ಕುಂದು ಕೊರತೆ  ಮತ್ತು ಕಂದಾಯ ಇಲಾಖೆಗೆ ಸಂಬಂಧಪಟ್ಟ  ದೂರುಗಳು ಇದ್ದಲ್ಲಿ  ಅವುಗಳನ್ನು ಕಾನೂನಿನ ಅಡಿಯಲ್ಲಿ ಸ್ಥಳದಲ್ಲೇ ಬಗೆಹರಿಸಲಾಗುವುದು. ಮಾಶಾಸನಗಳಿಗೆ ಸಂಬಂಧಪಟ್ಟ ಅರ್ಜಿಗಳನ್ನು ನೀಡಿದರೆ ಅವುಗಳನ್ನು 74 ಘಂಟೆಗಳಲ್ಲಿ ಸ್ಥಳದಲ್ಲೇ ಅರ್ಜಿ ವಿಲೇವಾರಿ ಮಾಡಿಲಾಗುವುದು.  ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ   2022ರ ಜುಲೈ ನಿಂದ ಡಿಸೆಂಬರ್ ವರೆಗೆ 2541 ಪಾವತಿ ಖಾತೆ ಮಾಡಿಕೊಡಲಾಗಿದೆ  ಹಿಂದೆ  ಪಾವತಿ ಖಾತೆ ಮಾಡಲು 30 ದಿನಗಳ ಅವಧಿ ಇತ್ತು  ಇದನ್ನು ಸರ್ಕಾರ 15 ದಿನಗಳಿಗೆ ಇಳಿಸಿ ರೈತರಿಗೆ ಆಗುತಿದ್ದ ತೊಂದರೆಯನ್ನು ನಿವಾರಿಸಿದೆ ಎಂದು…

Read More

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಬೇಡಿಕೆಯನ್ನು ಪರಿಶೀಲನೆ ನಡೆಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸರಕಾರದ ಪರವಾಗಿ ಬೇಡಿಕೆಗಳನ್ನ ಆಲಿಸಿದರು. ಈ ವೇಳೆ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ವಿವಿಧ ಭತ್ಯೆಗಳನ್ನ ಕಾಲಕ್ಕೆ ತಕ್ಕಂತೆ ಪರಿಷ್ಕರಿಸುವುದನ್ನ ಗಮನಕ್ಕೆ ತೆಗೆದುಕೊಳ್ಳಲಾಗುವುದು. ಜತೆಗೆ ಅಂಗನವಾಡಿ ಕೇಂದ್ರಗಳಿಗೆ ಬೇಕಾದ ಪರಿಕರಗಳನ್ನ ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗಕ್ಕೆ ತಿಳಿಸಿದರು. ರಾಜ್ಯದಲ್ಲಿ 1.36 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರು ಇದ್ದಾರೆ. ಇವರ ಉಳಿದ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದರು. ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯನ್ನು ಹಿಂದೆಗೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಜೆಡಿಎಸ್‌ ಪಕ್ಷ ಇರುವುದೇ ಐದಾರು ಜಿಲ್ಲೆಗಳಲ್ಲಿ. ಕುಮಾರಸ್ವಾಮಿ ಅವರು ತಮಟೆ ಹೊಡೆದುಕೊಂಡು ಪಂಚರತ್ನ ಯಾತ್ರೆ ಎಂದು ಓಡಾಡುತ್ತಿದ್ದಾರೆ. ಕುಮಾರಸ್ವಾಮಿಯವರು ಅಧಿಕಾರದಲ್ಲಿದ್ದಾಗ ಯಾಕೆ ಪಂಚರತ್ನ ಯೋಜನೆ ಮಾಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಜೆಡಿಎಸ್ ನ ಪಂಚರತ್ನ ಯಾತ್ರೆ ವಿಚಾರವಾಗಿ ಹಾಸನದಲ್ಲಿ ನಡೆದ “ಪ್ರಜಾಧ್ವನಿ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ಮತ್ತೆ ಅಧಿಕಾರ ಕೊಡಬೇಕಂತೆ, ಇಲ್ಲದಿದ್ದರೆ ಜೆಡಿಎಸ್‌ ಪಕ್ಷವನ್ನು ವಿಸರ್ಜನೆ ಮಾಡುತ್ತಾರಂತೆ. ಜೆಡಿಎಸ್‌ ನವರು ಗೆದ್ದ ಎತ್ತಿನ ಬಾಲ ಹಿಡಿಯುವವರು, ಅವರು ಯಾವತ್ತೂ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ. ನಿಮ್ಮ ಮತಗಳನ್ನು ದಯವಿಟ್ಟು ವ್ಯರ್ಥ ಮಾಡಿಕೊಳ್ಳಬೇಡಿ. ಜೆಡಿಎಸ್‌ ಗೆ ಮತ ಹಾಕಿದರೆ ಬಿಜೆಪಿಗೆ ಮತ ಹಾಕಿದಂತೆ. ದಯಮಾಡಿ ಜೆಡಿಎಸ್‌ ಪಕ್ಷಕ್ಕೆ ಮತ ನೀಡಬೇಡಿ. ಬಿಜೆಪಿ ಮತ್ತು ಜೆಡಿಎಸ್‌ ನವರಿಂದ ರಾಜ್ಯ ಉದ್ಧಾರವಾಗಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಬಸವಜಯಂತಿ ದಿನ ನಾನು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ, ನೇರವಾಗಿ ವಿಧಾನಸೌಧದ ಕ್ಯಾಬಿನೆಟ್‌ ಹಾಲ್‌ ಗೆ ಹೋಗಿ ನಮ್ಮ 5 ಭರವಸೆಗಳನ್ನು ಈಡೇರಿಸುವ ಕೆಲಸ…

Read More

ಹಾಸನ: ನಾನು ಈ ಹಿಂದೆ ಅನೇಕ ಕಾರ್ಯಕ್ರಮಗಳಿಗೆ ಹಾಸನ ಜಿಲ್ಲೆಗೆ ಆಗಮಿಸಿದ್ದೆ, ಆದರೆ ಇಂದು ಜನರಲ್ಲಿರುವ ಉತ್ಸಾಹ ಈ ಹಿಂದೆ ಕಂಡಿರಲಿಲ್ಲ. ಇದನ್ನು ನೋಡಿದರೆ ಪೂರ್ವದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಗೊತ್ತಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಹಾಸನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ “ಪ್ರಜಾಧ್ವನಿ” ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು,  ರಾಜ್ಯದ ಬಿಜೆಪಿ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಈ ಸರ್ಕಾರ ನಾಡಿನ ಬಡವರು, ದಲಿತರು, ಮಹಿಳೆಯರು, ಮಕ್ಕಳು, ಅಲ್ಪಸಂಖ್ಯಾತರ ವಿರೋಧಿ ಸರ್ಕಾರ. ಹಾಸನ ಅತಿ ಹೆಚ್ಚು ರೈತರನ್ನು ಹೊಂದಿರುವ ಜಿಲ್ಲೆ. 2022ರ ಒಳಗಡೆ ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇವೆ ಎಂದು 2016ರಲ್ಲಿ ನರೇಂದ್ರ ಮೋದಿ ಅವರು ರೈತರಲ್ಲಿ ಭ್ರಮೆಯನ್ನು ಹುಟ್ಟಿಸಿದ್ದರು. ಇದನ್ನು ಹೇಳುತ್ತ ಹೇಳುತ್ತಲೇ 3 ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದರು. ದೆಹಲಿಯ ಹೊರವಲಯದಲ್ಲಿ ದೇಶದ ರೈತರು ಅನೇಕ ದಿನಗಳ ಕಾಲ ಹೋರಾಟ ಮಾಡಿದರು, ಮೊದಮೊದಲು…

Read More

ನಟ ಕಿಶೋರ್ ಹಾಗೂ ಪೃಥ್ವಿ ಅಂಬರ್ ಅವರ ನಟನೆಯ ಪೆಂಟಗನ್ ಚಿತ್ರದ ಟೀಸರ್ ಬಿಡುಗಡೆ ವೇಳೆ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಹಾಗೂ ಅಶ್ವಿನಿ ಗೌಡ ವೇದಿಕೆಯಲ್ಲೇ ಚಿತ್ರದ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೀಸರ್ ನಲ್ಲಿ ಕನ್ನಡ ಹೋರಾಟಗಾರರನ್ನು ಕೆಟ್ಟದಾಗಿ ಚಿತ್ರೀಕರಿಸಲಾಗಿದೆ ಎಂದು  ಆರೋಪಿಸಲಾಗಿದ್ದು, ಹೋರಾಟಗಾರರಿಗೆ ರೋಲ್ ಕಾಲ್ ಅನ್ನೋ ಪದವನ್ನು ಬಳಸಿರುವುದು ರೂಪೇಶ್ ರಾಜಣ್ಣ ಅಸಮಾಧಾನಕ್ಕೆ ಕಾರಣವಾಗಿದೆ. ವೇದಿಕೆಯ ಮೇಲೆಯೇ ಈ ಪದವನ್ನು ತೆಗೆದು ಹಾಕುವಂತೆ ರೂಪೇಶ್ ರಾಜಣ್ಣ ನಿರ್ಮಾಪಕ ಗುರುದೇಶಪಾಂಡೆ ಅವರನ್ನು ಒತ್ತಾಯಿಸಿದರು. ಮತ್ತೋರ್ವ ಹೋರಾಟಗಾರ್ತಿ ಅಶ್ವಿನಿ ಗೌಡ ಕೂಡ ಈ ಪದದ ಬಗ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ನಿರ್ಮಾಪಕ ಗುರು ದೇಶಪಾಂಡೆ, ಟೀಸರ್ ನೋಡಿ ಏನನ್ನೂ ಮಾತನಾಡಬೇಡಿ, ಸಂಪೂರ್ಣ ಚಿತ್ರವನ್ನು ನೋಡಿ ಎಂದು ಇಬ್ಬರ ಮನವೊಲಿಸಿದರು. ಇದರ ಹೊರತಾಗಿಯೂ ಟೀಸರ್ ನಿಂದ ರೋಲ್ ಕಾಲ್ ಪದ ತೆಗೆದು ಹಾಕದಿದ್ದರೆ ಗುರು ದೇಶಪಾಂಡೆ ಕಚೇರಿಗೆ ಮುತ್ತಿಗೆ ಹಾಕುವುದಾಘಿ ಕನ್ನಡ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.  ನಮ್ಮತುಮಕೂರು.ಕಾಂನ…

Read More

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಮಾಡಿದ್ರೂ ಕೋಲಾರ ಕ್ಷೇತ್ರದಲ್ಲಿ ನನ್ನ ಗೆಲುವು ಖಚಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ  ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್, ಸಂತೋಷ್ ಬರಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಜಾ, ಪ್ರಧಾನಿ ಮೋದಿ ಅಥವಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಯಾರೇ ಬಂದೂ ನನ್ನು ವಿರುದ್ಧವಾಗಿ ಪ್ರಚಾರ ಮಾಡಲಿ, ಕೋಲಾರದಿಂದ ಗೆಲುವು ನಿಶ್ಚಿತ ಎಂದಿದ್ದಾರೆ. ವಯಸ್ಸು ಹಾಗೂ ದೂರದ ಸಮಸ್ಯೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಕ್ಷೇತ್ರದ ಬದಲು ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಋಣಾತ್ಮಕ ಪ್ರಚಾರಗಳು ನಡೆಯುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, 2018 ರ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿಯಲ್ಲೂ ಅದೇ ರೀತಿ ಪ್ರಯತ್ನ ನಡೆಸಿದ್ದಾರೆ. ಇದಲ್ಲದೇ ಅಮಿತ್ ಶಾ ಮತ್ತು ಇತರ ಹಿರಿಯ ಬಿಜೆಪಿ ನಾಯಕರ…

Read More

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜಿನಲ್ಲಿ ಮೂಲಭೂತ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳು ತಾಂಡವವಾಡುತ್ತಿದ್ದು, ಈ ಬಗ್ಗೆ ವಿದ್ಯಾರ್ಥಿ ಸಂಘಟನೆಯ ಮುಖಂಡರು ಪ್ರಶ್ನಿಸಿದರೆ, ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ನೀವೇಕೆ ಮಾತನಾಡುತ್ತಿದ್ದೀರಿ? ಎಂದು ಹೇಳಿ, ನಿಮ್ಮ ಮೇಲೆ ಲೈಂಗಿಕ ಕಿರುಕುಳದ ಕೇಸ್ ಹಾಕಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರಾದ ಶ್ರೀಧರ್, ಮತ್ತು ಕುಲಪತಿಗಳಾದ ಪ್ರೊ.ಲಿಂಗರಾಜು ಗಾಂಧಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ತಾಂಡವ ಗೌಡ ಇವರನ್ನು ತಕ್ಷಣವೇ ವಜಾಗೊಳಿಸುವಂತೆ ಇದೇ ವೇಳೆ ವಿದ್ಯಾರ್ಥಿಗಳು ಒತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ನಂಜನಗೂಡು: ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಶಂಕರ್ ನಾಯಕ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗಮಲ್ಲೇಶ್, ವಿದ್ಯಾರ್ಥಿಗಳು ಮೂಢನಂಬಿಕೆಯನ್ನು ಬಿಡಬೇಕು. ಜಾತಿಯ ವ್ಯವಸ್ಥೆಯೇ ಮೂಢನಂಬಿಕೆಯಾಗಿದೆ. ದೇಶದಲ್ಲಿ ಇನ್ನೂ ಜಾತಿ ವ್ಯವಸ್ಥೆ ಇರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು. ಎಲ್ಲಾ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು. ವಿಜ್ಞಾನ, ಆರ್ಥಿಕ, ವಿಷಯಗಳನ್ನು ಅಧ್ಯಯನ ಮಾಡಿದರೆ ಮುಂದಿನ ಭವಿಷ್ಯ ಉಜ್ವಲವಾಗುತ್ತದೆ. ವಿದ್ಯಾರ್ಥಿಗಳಿಗೆ ಗುರಿ ಇರಬೇಕು. ಎಲ್ಲ ಕ್ಷೇತ್ರಗಳಲ್ಲೂ ವಿದ್ಯಾರ್ಥಿಗಳು ಜ್ಞಾನವನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಜ್ಞಾನವೇ ಒಂದು ದೊಡ್ಡ ಶಕ್ತಿ, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆಯಿದೆ ಅವರು ಸಮಯವನ್ನು ಬಳಸಿಕೊಳ್ಳಬೇಕು. ಕಳೆದುಕೊಂಡ ಸಮಯ ಮತ್ತೆ ಸಿಗುವುದಿಲ್ಲ. ಆದ್ದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ…

Read More

ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ನಟಿ ರಚಿತಾ ರಾಮ್ ಅವರು ನೀಡಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ರಚಿತಾ ರಾಮ್ ವಿರುದ್ಧ ಮೂಲನಿವಾಸಿ ಅಂಬೇಡ್ಕರ್ ಸಂಘದ ಮುಖಂಡರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಿದ್ದಾರೆ. ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ಮಾತನಾಡಿದ್ದ ರಚಿತಾ ರಾಮ್, ಪ್ರತೀ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಆದರೆ ಈ ಬಾರಿ ಗಣರಾಜ್ಯೋತ್ಸವ ಮರೆತು ಕ್ರಾಂತಿಯೋತ್ಸವ ಮಾಡಿ ಎಂದು ಕರೆ ನೀಡಿದ್ದರು. ಗಣ ರಾಜ್ಯೋತ್ಸವ ಅನ್ನೋದು ಇಡೀ ದೇಶವೇ ಹೆಮ್ಮೆಪಡುವ ದಿನ ಆದರೆ, ಇದರ ಮಹತ್ವ ತಿಳಿಯದ ನಟಿ ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಬೇಕು, ಕ್ರಾಂತಿ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು ಎಂದು ಎಂದು ಮೂಲನಿವಾಸಿ ಅಂಬೇಡ್ಕರ್ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ವಿವಿಧಡೆಗಳಲ್ಲಿ ರಚಿತಾ ರಾಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಾರ್ವಜನಿಕರು ದೂರು ದಾಖಲಿಸಲು ಮುಂದಾಗಿದ್ದು, ಮಂಡ್ಯ, ಮೈಸೂರಿನಲ್ಲೂ ದೂರು ದಾಖಲಾಗಿರುವ ಬಗ್ಗೆ ಮಾಹಿತಿ…

Read More

ಕುಸ್ತಿ ಒಕ್ಕೂಟದ ವಿರುದ್ಧ ಆಟಗಾರರ ಮುಷ್ಕರ ಅಂತ್ಯಗೊಂಡಿದೆ. ಅನುರಾಗ್ ಠಾಕೂರ್ ಮತ್ತು ಪ್ರತಿಭಟನಾಕಾರರ ನಡುವೆ ನಡೆದ ಚರ್ಚೆಯಲ್ಲಿ ಒಮ್ಮತಕ್ಕೆ ಬರಲಾಯಿತು. ತನಿಖೆ ಪೂರ್ಣಗೊಳ್ಳುವವರೆಗೂ ಬ್ರಿಜ್ ಭೂಷಣ್ ದೂರ ಉಳಿಯಲಿದ್ದಾರೆ. ಅಷ್ಟರಲ್ಲಿ ಬ್ರಿಜ್ ಭೂಷಣ್ ಕರೆದು ಪತ್ರಿಕಾಗೋಷ್ಠಿಯನ್ನು ಮುಂದೂಡಿದರು. ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಸಂಸ್ಥೆಯ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ತನಿಖೆಗಾಗಿ ನಾಲ್ಕು ವಾರಗಳವರೆಗೆ ಕುಸ್ತಿ ಸಂಸ್ಥೆಯಿಂದ ಅಮಾನತುಗೊಳಿಸಲಾಗಿದೆ. ಕೇಂದ್ರ ಸಚಿವರ ನೇತೃತ್ವದ ಮೇಲ್ವಿಚಾರಣಾ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲು ನಾಲ್ಕು ವಾರಗಳನ್ನು ತೆಗೆದುಕೊಳ್ಳುತ್ತದೆ. ಅಲ್ಲಿಯವರೆಗೆ ಸಿಂಗ್ ಅವರನ್ನು ಬದಲಾಯಿಸಲಾಗುವುದು ಮತ್ತು ಹೋರಾಟದ ಪ್ರತಿ ಹಂತದಲ್ಲೂ ಹೋರಾಟದ ಕುಸ್ತಿಪಟುಗಳಿಗೆ ಬೆಂಬಲ ನೀಡಲಾಗುವುದು ಎಂದು ಕ್ರೀಡಾ ಸಚಿವರು ಹೇಳಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಆರ್ಥಿಕ ದುರುಪಯೋಗ ಸೇರಿದಂತೆ ಎಲ್ಲಾ ಆರೋಪಗಳನ್ನು ಕೂಲಂಕುಷವಾಗಿ ತನಿಖೆ ನಡೆಸಲಾಗುವುದು. ಆ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಕುಸ್ತಿಪಟುಗಳು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಆರೋಪ ಮತ್ತು ಹಣ…

Read More