Author: admin

ಬೆಳಗಾವಿ: ವಿಕಲಚೇತನರು ದೇವರ ಮಕ್ಕಳಿದ್ದಂತೆ ಅವರನ್ನು ನಾವು ನಮ್ಮ ಕುಟುಂಬದವರಂತೆ ಕಾಣುವ ಮುಖೇನ ಅವರ ಏಳಿಗೆಗಾಗಿ ಶ್ರಮಿಸಬೇಕು ಎಂದು ಬೆಳಗಾವಿ ಗ್ರಾಮಿಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು. ಅವರು ತಮ್ಮ ಗೃಹ ಕಚೇರಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೂವರು ವಿಕಲಚೇತನರಿಗೆ ಕ್ಷೇತ್ರದ ವಿವಿಧ ಗ್ರಾಮಗಳ ಮುಖಂಡರ ಸಮ್ಮುಖದಲ್ಲಿ ತ್ರಿಚಕ್ರ ವಾಹನಗಳನ್ನು ಹಸ್ತಾಂತರಿಸಿ ಮಾತನಾಡಿದರು. ವಿಕಲಚೇತನರ ಬಗ್ಗೆ ಅವರವರ ಪೋಷಕರಿಗೆ ವಿಶೇಷ ಕಾಳಜಿಯಿರಬೇಕು, ವಿಕಲಚೇತನರ ಅನುಕಂಪದ ಜೊತೆಗೆ ಅವರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ನೀಡಿ ಸಮಾಜದಲ್ಲಿ ಎಲ್ಲರಂತೆ ಮುಂದೆ ಬರಲು ನಾವೆಲ್ಲರೂ ಸೇರಿ ಅನುವು ಮಾಡಿಕೊಡಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ನಾಗೇಶ ದೇಸಾಯಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ, ಬಾಗಣ್ಣ ನರೋಟಿ ಹಾಗೂ ವಿವಿಧ ಗ್ರಾಮಗಳ ಮುಖಂಡರು, ಪಕ್ಷದ ಕಾರ್ಯಕರ್ತರು, ಆಪ್ತ ಸಹಾಯಕರು ಉಪಸ್ಥಿತರಿದ್ದರು.

Read More

ಪಶ್ಚಿಮಬಂಗಾಳ: ಮೊಬೈಲ್ ಖರೀದಿಸಲು ಹಣ ಬೇಕೆಂದು 18 ವರ್ಷದ ಹುಡುಗಿಯೊಬ್ಬಳು ರಕ್ತವನ್ನು ಮಾರಾಟ ಮಾಡಲು ಹೋದ ಆಘಾತಕಾರಿ ಘಟನೆ ದಕ್ಷಿಣ ದಿನಾಜ್‍ ಪುರದ ತಪನ್ ಪೊಲೀಸ್ ಠಾಣೆಯ ಕರ್ದಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿ 12ನೇ ತರಗತಿ ಓದುತ್ತಿದ್ದಾಳೆ. ಆಕೆ ಆನ್‍ ಲೈನ್‍ಲ್ಲಿ 9,000 ರೂ. ಮೌಲ್ಯದ ಸ್ಮಾರ್ಟ್‍ಫೋನ್ ಅನ್ನು ಆರ್ಡರ್ ಮಾಡಿದ್ದಳು. ಆದರೆ ಆಕೆಯ ಬಳಿ ಅಷ್ಟೊಂದು ಹಣವಿರಲಿಲ್ಲ. ಇದರಿಂದಾಗಿ ಆಕೆ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತವನ್ನು ಕೊಡಲು ನಿರ್ಧರಿಸಿದ್ದಾಳೆ. ಈ ಹಿನ್ನೆಲೆಯಲ್ಲೇ ಆಕೆ ಆಸ್ಪತ್ರೆಗೆ ತೆರಳಿ ಅಲ್ಲಿ, ರಕ್ತ ನೀಡುತ್ತೇನೆ ಅದರ ಬದಲು ಎಷ್ಟು ಹಣ ನೀಡುತ್ತೀರಿ ಎಂದು ಕೇಳಿದ್ದಾಳೆ. ಇದರಿಂದ ಅಲ್ಲಿನ ಉದ್ಯೋಗಿಗಳು ಅನುಮಾನಗೊಂಡಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ಚೈಲ್ಡ್ ಕೇರ್ ಇಲಾಖೆಗೆ ತಿಳಿಸಿದ್ದಾರೆ. ವಿಚಾರಣೆ ನಡೆಸಿದಾಗ ನಿಜವಾದ ಸತ್ಯ ಬೆಳಕಿಗೆ ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬಾಗಲಕೋಟೆ: ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬೇವಿನಕಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಕಾಂತ ತಿಮ್ಮಾಪುರೆ ಹಾಗೂ ರಾಂಪುರ ಗ್ರಾಮ ಪಂಚಾಯಿತಿ ಪಿಡಿಒ ಮುದಕಪ್ಪ ತೇಜಿ ಲೋಕಾಯುಕ್ತ ಬಲೆಗೆ ಬಿದ್ದವರು. ಎನ್ ಎ ಫ್ಲ್ಯಾಟ್ ಎಂಟ್ರಿ ಮಾಡಿಕೊಡಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹೊನ್ನಾಕಟ್ಟೆಯ ವಾಸು ಜಾಧವ್ ಎಂಬುವವರಿಂದ ಹಣ ಪಡೆಯುತ್ತಿದ್ದಾಗ ಇಬ್ಬರು ಪಿಡಿಒಗಳು ಸಿಕ್ಕಿ ಬಿದ್ದಿದ್ದಾರೆ. ಬಾಗಲಕೋಟೆ ಲೋಕಾಯುಕ್ತ ಡಿವೈ ಎಸ್ ಪಿ ಪುಷ್ಪಲತಾ ಹಾಗೂ ಸಿಪಿಐ ಮಲ್ಲಪ್ಪ ಬಿದರಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಮಾರಕಾಸ್ತ್ರದಿಂದ ಇರಿದು, ಬಳಿಕ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ‌ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಶಿವಾಜಿ ನಗರಥ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಕೊಲೆಯಾದ ದುರ್ದೈವಿ. ವಿದ್ಯಾರ್ಥಿ ನಾಪತ್ತೆಯಾದ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಈತನ ಧರಿಸಿದ್ದ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅರೆಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ದೊರೆತಿದೆ. ನಿನ್ನೆ ರಾತ್ರಿಯೇ ಕೊಲೆ ಮಾಡಿರುವ ಶಂಕೆ ಇದೆ. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ್ ಹಾಗೂ ಶ್ವಾಸನಾಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು : ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕಾಯ್ದೆಗೆ ಅನುಮೋದನೆ ನೀಡಿದ ಬಳಿಕ, ಬೆಳಗಾವಿಯಲ್ಲಿ ನಡೆಯಲಿರುವಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕವನ್ನು ಸರ್ಕಾರ ಮಂಡಿಸಲಿದೆ ಎನ್ನಲಾಗಿದೆ. ಈ ಬಳಿಕ ಅಧಿಕೃತವಾಗಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಆದೇಶ ಹೊರ ಬೀಳಲಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತಿಪಟೂರು: ನಗರದ ತುಮಕೂರು ಜಿಲ್ಲಾ ಕೆಪಿಸಿಸಿ ವಾ ರೂಮ್ ಜಿಲ್ಲಾ ಸಂಚಾಲಕರಾಗಿರುವ ತಿಪಟೂರು ಟುಡ ಶಶಿಧರ್ ಕಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಿಪಟೂರು ಕ್ಷೇತ್ರ ಸಂಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಶಿಧರ್, ಕ್ಷೇತ್ರದ ಜನರ ಸಮಸ್ಯೆಗಳಿಗೆ ಧ್ವನಿಯಾಗುವುದು, ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವುದು ಕ್ಷೇತ್ರ ಸಂಚಾರದ ಪ್ರಮುಖ ಉದ್ದೇಶ ಎಂದರು. ಮುಂದಿನ ಎರಡು ತಿಂಗಳು ನಿರಂತರವಾಗಿ ಕ್ಷೇತ್ರ ಸಂಚರಿಸುತ್ತೇನೆ. ಜನರ ಕಷ್ಟಗಳನ್ನು ಅರಿತು ತಾಲೂಕಿನ ಸಮಸ್ಯೆ ಬಗ್ಗೆ ಅವರ ಧ್ವನಿ ಆಗುತ್ತೇನೆ. ಬಿಜೆಪಿ ಸರ್ಕಾರ 40% ಸರ್ಕಾರ ಎಂದು ಖ್ಯಾತಿ ಪಡೆದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದುವರೆಗೂ ನೀಡಿದ ಯಾವುದೇ ಆಶ್ವಾಸನೆಯನ್ನು ಜನರ ಸಮಸ್ಯೆಗಳನ್ನು ಈಡೇರಿಸಲಿಲ್ಲ. ಬೆಲೆ ಏರಿಕೆಯಿಂದ ಜನ ತತ್ತರಿಸಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಜನ ನಿತ್ಯ ಉಪಯೋಗಿಸುವ ಆಹಾರ ಪದಾರ್ಥಗಳ ಮೇಲೆ ಜಿಎಸ್‌ ಟಿ ವಿಧಿಸಲಾಗಿದೆ ಎಂದರು. ಈ ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ  ತ್ರೀ ಬಂಕ ಯೂತ್…

Read More

ಕೊರಟಗೆರೆ : ಹೇಮಾವತಿ ಕುಡಿಯುವ ನೀರಿನ ಶುದ್ದಿಕರಣ ಘಟಕ ನಿರ್ಮಾಣಕ್ಕಾಗಿ 2009-10 ರಲ್ಲಿ ಜೆಟ್ಟಿಅಗ್ರಹಾರ ರೈತರಿಂದ ಭೂಸ್ವಾಧೀನ ಪಡಿಸಿಕೊಂಡ ಜಮೀನಿನ ಭೂಪರಿಹಾರವನ್ನು 2018 ರಲ್ಲಿ ನ್ಯಾಯಾಲಯದ ಆದೇಶದ ನಂತರವು ನೀಡದಿರುವ ಪರಿಣಾಮ ಪಟ್ಟಣ ಪಂಚಾಯತ್ ನ ಪಿಠೋಪಕರಣ ವಶ ಪಡಿಸಿಕೊಳ್ಳುವಂತೆ ಮಧುಗಿರಿ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಮಾಡಿರುವ ಘಟನೆ ಗುರುವಾರ ನಡೆದಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾಮದ ರೈತರಾದ ಬಸವರಾಜು ಮತ್ತು ನಂದೀಶ್ ಎಂಬ ರೈತರ ಜಮೀನನ್ನು 2009 ರಲ್ಲೇ ಹೇಮಾವತಿ ಕುಡಿಯುವ ನೀರಿನ ಶುದ್ದಿಕರಣ ಘಟಕ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ. 2018ರಲ್ಲೇ ಅಗ್ರಹಾರ ರೈತರಿಗೆ ತಕ್ಷಣ ಭೂಪರಿಹಾರ ನೀಡುವಂತೆ ಕೊರಟಗೆರೆ ಪ.ಪಂ.ಗೆ ಮಧುಗಿರಿ ಸಿವಿಲ್ ನ್ಯಾಯಾಲಯವು ಆದೇಶ ಮಾಡಿದೆ. ಈ ಸಂಬಂಧ ಜೆಟ್ಟಿಅಗ್ರಹಾರ ಗ್ರಾಮದ ರೈತ ಬಸವರಾಜು ಮಾತನಾಡಿ, ಹೇಮಾವತಿ ನೀರಿನ ಘಟಕ ನಿರ್ಮಾಣಕ್ಕಾಗಿ 2009ರಲ್ಲಿ ನಮ್ಮ ಜಮೀನು ಸ್ವಾಧೀನ ಮಾಡಿದ್ದಾರೆ. 2018ರಲ್ಲಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ಮಾಡಿದೆ. ನಮಗೇ ಇನ್ನೂ 48…

Read More

ರಾಮಮಂದಿರ ಬ್ಲಾಸ್ ಮಾಡುವ ಪಿಎಫ್ ಐ ಸಂಚು ಬೆಳಕಿಗೆ ಬಂದಿದೆ. ಮುಸ್ಲಿಮರು ರಾಮಮಂದಿರ ಧ್ವಂಸ ಮಾಡುವ ಕನಸು ಕಾಣಬೇಡಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ಧಾರೆ. ಮಹಾರಾಷ್ಟ್ರದಲ್ಲಿ ಪಿಎಫ್ ಐ ಕಾರ್ಯಕರ್ತ ಸೇರಿ ನಾಲ್ವರ ಬಂಧನ ಕುರಿತು  ಹಾವೇರಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್,  ರಾಮಮಂದಿರ ಬ್ಲಾಸ್ಟ್ ಮಾಡುವ ಪಿಎಫ್ ಐ ಸಂಚು  ಬಯಲಾಗಿದೆ. ಎಟಿಎಸ್ ನವರು ಬಂಧಿಸಿದ ಬಳಿಕ ಈ  ಮಾಹಿತಿ  ಬಾಯ್ಬಿಟ್ಟಿದ್ದಾರೆ.  ಇವರಿಗೆ ಎಷ್ಟು ಸೊಕ್ಕು ದುರಂಹಕಾರಿಗಳು.  ದೇಗುಲ ಒಡೆದು ಬಾಬ್ರಿ ಮಸೀದಿ ಕಟ್ಟಿದ್ದಾನೆಂದು ಎಂದು ಸುಪ್ರೀಂಕೋರ್ಟ್ ಆದೇಶವಿದೆ.  ಸುಪ್ರೀಂಕೋರ್ಟ್ ಆದೇಶ ಧಿಕ್ಕರಿಸಿ ಮಂದಿರ ಕೆಡವಲು ಸಂಚು ರೂಪಿಸಿದ್ದಾರೆ. ಮುಸ್ಲೀಮರು ರಾಮಮಂದಿರ ಧ್ವಂಸ ಮಾಡುವ ಕನಸು ಕಾಣಬೇಡಿ ಹಿಂದೂ ಸಮಾಜ ಜಾಗೃತವಾಗಿದೆ ಕಾನೂನು ಇದೆ. ಸಂವಿಧಾನ ಇದೆ ಎಂದರು. ಪಿಎಫ್ ಐ ಭ್ಯಾನ್ ಮಾಡಿದ್ಧ ನಡೆ ಸರಿಯಾಗಿಯೇ ಇದೆ. ಪಿಎಫ್ ಐ ಕನಸು ಭಗ್ನ ಮಾಡಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದು ಪ್ರಮೋದ್ ಮುತಾಲಿಕ್ ತಿಳಿಸಿದರು. ಹಲಾಲ್ ಮುಕ್ತ…

Read More

ಬೆಳಗಾವಿ: ಸಬ್ಸಿಡಿ ಹಣ ಬಿಡುಗಡೆಗೆ 50,000 ರೂಪಾಯಿ ಲಂಚ ಪಡೆಯುತ್ತಿದ್ದ ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಮತ್ತು ಸಹಾಯಕ ನಿರ್ದೇಶಕರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ನಗರದ ಗಿರೀಶ ಕುಲಕರ್ಣಿ ಅವರಿಗೆ ಉದ್ಯಮ ಸ್ಥಾಪನೆಗಾಗಿ ಸಹಾಯಧನ ಯೋಜನೆ ಅಡಿಯಲ್ಲಿ ಸಬ್ಸಿಡಿ ಹಣ ಬಿಡುಗಡೆ ಮಾಡಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಕೊಡದಿದ್ದರೆ ಸಬ್ಸಿಡಿ ಹಣ ಬಿಡುಗಡೆ ಮಾಡುವುದಿಲ್ಲವೆಂದು ಹೇಳಿದ್ದರು. ಈ ಕುರಿತು ಗಿರೀಶ ಕುಲಕರ್ಣಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ನಿನ್ನೆ 50,000 ರೂ. ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಪುತ್ರಪ್ಪ ಮತ್ತು ಸಹಾಯಕ ಜಂಟಿ ನಿರ್ದೇಶಕ ಪದ್ಮಾಕಾಂತ ಅವರನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವಿವಿಧ ಜಿಲ್ಲೆಯಲ್ಲಿ 25 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇಂದು ಸಿಐಡಿ ಅಧಿಕಾರಿಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಸಿಐಡಿ ಎಸ್ಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಸಿಐಡಿ ಪೊಲೀಸರು ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ 4 ಗಂಟೆಯಿಂದ 30 ತಂಡಗಳ 100ಕ್ಕೂ ಹೆಚ್ಚು ಸಿಐಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಇಂದಿನ ಕಾರ್ಯಾಚರಣೆಯಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮ ಸಂಬಂಧ 25 ಜನರನ್ನು ಸಿಐಡಿ ವಿಭಾಗ ಪೊಲೀಸರು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More