Author: admin

ಬೆಂಗಳೂರು: ದೀಪಾವಳಿ ಹಬ್ಬದ ಬಲಿಪಾಡ್ಯಮಿಯಂದು ರಾಜ್ಯ ಸಾರ್ಕಾರದ ಅಧೀನದಲ್ಲಿ ಬರುವಂತಹ ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸುವಂತೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ. ಈ ಕುರಿತು ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಬಲಿಪಾಡ್ಯಮಿಯಂದು ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗೋಪೂಜೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದ್ದು, ಗೋವುಗಳ ಮಹತ್ವ ಮತ್ತು ಅವುಗಳ ರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸಬೇಕಿದೆ. ಹಾಗಾಗಿ ಬಲಿಪಾಡ್ಯಮಿಯ ಗೋಧೂಳಿ ಲಗ್ನದಲ್ಲಿ ಗೋಪೂಜೆ ನಡೆಸಲು ಸಚಿವೆ ಶಶಿಕಲಾ ಜೊಲ್ಲೆ ಆದೇಶ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಆಜಾದಿ ಕಾ ಅಮೃತ್ ಮಹೋತ್ಸವದ ನಿಮಿತವಾಗಿ ಇಂದು ಬೆಳಗಾವಿ ನಗರದ ಅಶೋಕ್ ಸ್ಥಬದಿಂದ ಚೆನ್ನಮ್ಮ ಸರ್ಕಲ್ ಅವರಿಗೆ ಫಿಟ್ ಇಂಡಿಯಾ ರನ್ ಕಾರ್ಯಕ್ರಮವನ್ನು ಬೆಳಗಾವಿ ನಗರಾಭಿವೃದ್ಧಿಮತ್ತು ಬೆಳಗಾವಿ ಸ್ಮಾರ್ಟ್ ಸಿಟಿ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ದೇಶವಾಗಿ ಫಿಟ್ ಇಂಡಿಯಾ ದೇಶದ ಜನರು ಆರೋಗ್ಯಕರವಾಗಿರಬೇಕು. ಆರೋಗ್ಯವೇ ಭಾಗ್ಯ ಎಂಬ ಘೋಷವಾಕ್ಯದಿಂದ ಕಾಲೇಜ್ ವಿದ್ಯಾರ್ಥಿಗಳು , ಬೆಳಗಾವಿ ನಾಗರಿಕರು, ಬೆಳಗಾವಿ ನಗರದ ಅಶೋಕ ಸ್ತಂಭದಿಂದ ಚೆನ್ನಮ್ಮ ವೃತ್ತದದಿಂದ ಓಡುವ ಮೂಲಕ ಫಿಟ್ ಇಂಡಿಯಾ ಸಂದೇಶವನ್ನು ಸಾರಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಮಾರ್ಟ್ ಸಿಟಿ ನಿರ್ದೇಶಕರಾದ ಪ್ರವೀಣ್ ಬಾಗೇವಾಡಿ, ಆಜಾದಿಕಾ ಅಮೃತ್ ಮಹೋತ್ಸವ ನಿಮಿತವಾಗಿ ಇಂದು ಬೆಳಗಾವಿಯಲ್ಲಿ ಕಾಲೇಜ್ ವಿದ್ಯಾರ್ಥಿಗಳು, ನಾಗರಿಕರು ಮತ್ತು ಸ್ಮಾರ್ಟ್ ಸಿಟಿ ಮತ್ತು ನಗರ ಅಭಿವೃದ್ಧಿ ಇಲಾಖೆಗಳ ಸಿಬ್ಬಂದಿ ಭಾಗವಹಿಸಿದ್ದರು. ಸ್ಮಾರ್ಟ್ ಸಿಟಿ ವತಿಯಿಂದ ಆರೋಗ್ಯವೇ ಭಾಗ್ಯ ಎಂಬ ಸಂದೇಶವನ್ನು ನೀಡುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಗುಬ್ಬಿ: ಅರ್ಚಕನೋರ್ವ ತನ್ನ ಪತ್ನಿ ಹಾಗೂ ತನ್ನ 6 ವರ್ಷ ವಯಸ್ಸಿನ ಮಗನನ್ನು ಹಾರೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರ್ಚಕ ಮೋಹನ್(ಸ್ವಾಮಿ) ಎಂಬಾತ ಈ ದುಷ್ಕೃತ್ಯ ನಡೆಸಿದ ವ್ಯಕ್ತಿಯಾಗಿದ್ದು, ಈತನ ಪತ್ನಿ ಕಾವ್ಯಾ(25) ಹಾಗೂ ಮಗ ಜೀವನ್(6) ಬರ್ಬರವಾಗಿ ಹತ್ಯೆಗೀಡಾದವರಾಗಿದ್ದಾರೆ. ಹಲವು ವರ್ಷಗಳಿಂದ ಬೇರೆಯಾಗಿದ್ದ ಇವರು ಒಂದೂವರೆ ತಿಂಗಳಿನಿಂದ ಜೊತೆಯಾಗಿ ವಾಸಿಸಲು ಆರಂಭಿಸಿದ್ದರು ಎನ್ನಲಾಗಿದೆ. ಆದರೆ, ಇದೀಗ ತನ್ನ ಪತ್ನಿ ಹಾಗೂ ಬಾಳಿ ಬದುಕಬೇಕಾದ ಮಗುವನ್ನು ಮೋಹನ್ ಬಲಿ ಪಡೆದಿದ್ದಾನೆ. ಘಟನೆಯ ಬಳಿಕ ಆರೋಪಿ ಮೋಹನ್ ನನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಬೆಳಗ್ಗೆ  6:30ರ ಸುಮಾರಿಗೆ ಆರೋಪಿಯು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಕಾರಣಗಳೇನು ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಹೈವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ಬಳಿಕ ಕೃತ್ಯಕ್ಕೆ ಕಾರಣಗಳೇನು ಅನ್ನೋದು ತಿಳಿದು ಬರಬೇಕಿದೆ. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಮನೆಯವರ ವಿರೋಧದ ನಡುವೆ ಮದುವೆ ಆಗಿದ್ದ ಪ್ರೇಮಿಗಳನ್ನು ಮತ್ತೆ ಒಂದು ಮಾಡುವುದಾಗಿ ಕರೆಸಿ ಯುವತಿಯ ಮನೆಯವರು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ಬೇವಿನಮಟ್ಟಿ ಗ್ರಾಮದ ವಿಶ್ವನಾಥ್ ನೆಲಗಿ (24) ಹಾಗೂ ರಾಜೇಶ್ವರಿ (18) ಹತ್ಯೆಯಾದ ಪ್ರೇಮಿಗಳಾಗಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳಾದ ರವಿ ಹುಲ್ಲನ್ನವರ, ಹನುಮಂತ ಮಲ್ಲಾಡದ, ಬೀರಪ್ಪ ದಳವಾಯಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಇನ್ನುಳಿದ ಆರೋಪಿಗಳು ಹಾಗೂ ಹತ್ಯೆಯಾದ ಪ್ರೇಮಿಗಳ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ವಿಶ್ವನಾಥ್ ಹಾಗೂ ರಾಜೇಶ್ವರಿ ಸುಮಾರು ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ರಾಜೇಶ್ವರಿಯ ಮನೆಯವರಿಗೆ ತಿಳಿದು ವಿಶ್ವನಾಥ್ ಮೇಲೆ 2 ಹಲ್ಲೆ ಮಾಡಿದ್ದರು. ಆದರೆ ಇಬ್ಬರು ಒಂದಾಗಿದ್ದರು. ವಿಶ್ವನಾಥ್‌ ಕೂಲಿ ಕೆಲಸಕ್ಕೆಂದು ಕೇರಳದ ಕಾಸರಗೋಡಿಗೆ ಹೋಗಿದ್ದ. ಆದರೆ ರಾಜೇಶ್ವರಿಯ ತಂದೆ ಪರಸಪ್ಪ ಕರಡಿ ಇಬ್ಬರನ್ನೂ ಒಂದು ಮಾಡಿಸುವುದಾಗಿ ನಂಬಿಸಿ, ಊರಿಗೆ ಬರುವಂತೆ ಹೇಳಿ ಕಳುಹಿಸಿದ್ದಾರೆ. ಆದರೆ ವಿಶ್ವನಾಥ್ ನರಗುಂದ ಬಳಿ ಬರುತ್ತಿದ್ದಂತೆ ಆತನನ್ನು ಬೊಲೆರೊ ವಾಹನದಲ್ಲಿ ಅಪಹರಿಸಿದ್ದಾರೆ.…

Read More

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಿನ ವಾರ ದೆಹಲಿಗೆ ತೆರಳುವ ಸಾಧ್ಯತೆ ಇದ್ದು, ವರಿಷ್ಠರ ಬಳಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸುವ ಸಾಧ್ಯತೆ ಇದೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ರಮೇಶ್ ಜಾರಕಿಹೊಳಿ, ಸಿ.ಪಿ. ಯೋಗೇಶ್ವರ್ ಅವರು ಭೇಟಿಯಾಗಿದ್ದು, ಸಂಪುಟ ಸೇರ್ಪಡೆ ಬಗ್ಗೆ ವರಿಷ್ಠರ ಜೊತೆಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಗೋಧಿ ಮತ್ತು ಬಾರ್ಲಿ ಸೇರಿದಂತೆ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನ ಕೇಂದ್ರ ಸರ್ಕಾರ ಹೆಚ್ಚಿಸಿದೆ. 2023-24 ರ ಮಾರ್ಕೆಟಿಂಗ್ ಋತುವಿಗಾಗಿ ಎಲ್ಲಾ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು ಕೇಂದ್ರ ಸಂಪುಟ ಅನುಮೋದಿಸಿದೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ , ಪ್ರತಿ ಕ್ವಿಂಟಾಲ್‌ ಗೆ 500 ರೂ.ಗೆ ಬೇಳೆ (ಮಸೂರ್) ಗೆ ಎಂಎಸ್‌ ಪಿಯಲ್ಲಿ ಸಂಪೂರ್ಣ ಗರಿಷ್ಠ ಹೆಚ್ಚಳವನ್ನು ಅನುಮೋದಿಸಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರಿನ ನಗರದ ಮಲ್ಲಿಗೇನಹಳ್ಳಿ ಸಮೀಪದ ತುಂಗಾ ಮೇಲ್ದಂಡೆ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಕಟ್ಟಿಕೊಂಡಿರುವ ಮನೆಗಳನ್ನು ನೀರಾವರಿ ಇಲಾಖೆಯವರು ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಿದರು. ಈ ವೇಳೆ ಪ್ರತಿಭಟನಾನಿರತ ನಿವಾಸಿಗಳು ಪ್ರತಿಭಟನೆ ನಡೆಸಿದರು ಕೆಲವರು ತುಂಗಾ ಮೇಲ್ದಂಡೆ ಮೇಲಿಂದ ಹಾರಲೂ ಸಹ ಪ್ರಯತ್ನ ಪಟ್ಟರು. ಆದರೆ ಅಧಿಕಾರಿಗಳು ಮಾತ್ರ ಕೆಲ ಮನೆಗಳನ್ನ ಒಡೆದು ಇನ್ನುಳಿದವರಿಗೆ ವಾರ್ನಿಂಗ್ ಮಾಡಿ ತೆರಳಿದರು. ಮಲ್ಲಿಗೇನಹಳ್ಳಿ ಸಮೀಪದ ಅಂಬೇಡ್ಕರ್ ಕಾಲೋನಿಯಲ್ಲಿ ನೀರಾವರಿ ಇಲಾಖೆಯ ತುಂಗಾ ಮೇಲ್ದಂಡೆ ಯೋಜನೆಯ ಬಫರ್ ಜೋನ್ ನಲ್ಲಿ ಸುಮಾರು 5 ಎಕರೆ 3 ಗುಂಟೆ ಜಾಗ ಒತ್ತುವರಿ ಆಗಿದ್ದೆ. ಹೈಕೋರ್ಟ್ ಇತ್ತೀಚೆಗೆ ಆದೇಶ ನೀಡಿ ನೀರಾವರಿ ಇಲಾಖೆಯ ಜಮೀನಿನ ಒತ್ತುವರಿ ತೆರವು ಮಾಡಬೇಕೆಂದು ಆದೇಶ ನೀಡಿತ್ತು. ಈ ಹಿನ್ನಲೆ ಸೋಮವಾರ ಮನೆ ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಕಾರ್ಯಪ್ರವೃತ್ತರಾದರು. ನೀರಾವರಿ ಇಲಾಖೆಗೆ ಸೇರಿದ 5 ಎಕರೆ 3 ಗುಂಟೆ ಜಾಗದಲ್ಲಿ ಸುಮಾರು 200 ಮನೆಗಳನ್ನು ಹಕ್ಕಿಪಿಕ್ಕಿ, ಎಸ್ ಸಿ ಹಾಗೂ ಎಸ್ ಟಿ ಸಮುದಾಯದ ಜನಾಂಗದವರು…

Read More

ಮುಂಬೈ: ದೀಪಾವಳಿ ಹಬ್ಬಕ್ಕೂ ಮುನ್ನ ಖಾದ್ಯ ತೈಲ ಬೆಲೆಯಲ್ಲೂ ಹೆಚ್ಚಳವಾಗಿದ್ದು, ಮಾರುಕಟ್ಟೆ ಮೂಲಗಳ ಪ್ರಕಾರ ಕಳೆದ ವಾರದಲ್ಲಿ ತಾಳೆ ಎಣ್ಣೆ ಬೆಲೆ 10 ರಿಂದ 12 ರೂಪಾಯಿ, ಸೋಯಾಬಿನ್ ಆಯಿಲ್ ಬೆಲೆ 14 ರಿಂದ 16 ರೂಪಾಯಿ ಹಾಗೂ ಸೂರ್ಯಕಾಂತಿ ಎಣ್ಣೆ ಬೆಲೆ ಪ್ರತಿ ಲೀಟರ್ ಗೆ 18 ರಿಂದ 20 ರೂಪಾಯಿ ಚಿಲ್ಲರೆ ಮಾರಾಟದಲ್ಲಿ ಏರಿಕೆಯಾಗಿದೆ. ಕೆಲ ರಾಷ್ಟ್ರಗಳು ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸುವ ಘೋಷಣೆ ಮಾಡಿದ ಬಳಿಕ ಇದು ಕಚ್ಚಾ ತೈಲದ ಬೆಲೆ ಮೇಲೆ ಪರಿಣಾಮ ಬೀರಿದೆ. ಭಾರತವು ಶೇಕಡಾ 70ರಷ್ಟು ತೈಲವನ್ನು ಅಮದು ಮಾಡಿಕೊಳ್ಳುತ್ತಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವಾಗಿರುವುದು ಸಹ ಬೆಲೆ ಏರಿಕೆಗೆ ಮತ್ತೊಂದು ಪ್ರಮುಖ ಕಾರಣವಾಗಿದೆ. ಅಲ್ಲದೆ ರಷ್ಯಾ – ಉಕ್ರೇನ್ ಯುದ್ಧವೂ ಸೂರ್ಯಕಾಂತಿ ಎಣ್ಣೆಯ ಪೂರೈಕೆಗೆ ಅಡ್ಡಿಯಾಗಿದ್ದು, ಬೆಲೆಯೂ ಹೆಚ್ಚಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಗಿರುವ ಈ ಬೆಲೆ ಏರಿಕೆ, ಜನಸಾಮಾನ್ಯರಿಗೆ ಸಂಕಷ್ಟವನ್ನು ತಂದೊಡ್ಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಸಂಜು ಭಂಢಾರಿ ಸೇರಿದಂತೆ 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಗೋಕಾಕ್‌ ನಗರದ ಜೆಎಂಎಫ್‌ ಸಿ ಎರಡನೇ ನ್ಯಾಯಾಲಯದ ನ್ಯಾಯಾಧೀಶ ಜಿ.ರಾಜೀವ್‌ ಅವರು ಈ ಆದೇಶ ನೀಡಿದ್ದಾರೆ. ಪರೀಕ್ಷಾರ್ಥಿಗಳು ಸೇರಿ ಅಕ್ರಮಕ್ಕೆ ಸಹಕರಿಸಿದ್ದ 20 ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. ಗೋಕಾಕ್‌ ಜೆಎಸ್‌ ಎಸ್ ಪರೀಕ್ಷಾ ಕೇಂದ್ರದಲ್ಲಿ ಆಗಸ್ಟ್ 7 ರಂದು ಪರೀಕ್ಷೆ ವೇಳೆ ಅಕ್ರಮ ನಡೆದಿತ್ತು. ಸಿದ್ದಪ್ಪ ಮದಿಹಳ್ಳಿ ಎಂಬಾತ ಸ್ಮಾರ್ಟ್‌ ವಾಚ್‌ ಬಳಸಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ. ಸಿಸಿಟಿವಿ ಆಧರಿಸಿ ಪ್ರಕರಣ ಬೆಳಕಿಗೆ ಬಂದಿದ್ದು, ಆ. 10ರಂದು ಸಿದ್ದಪ್ಪ ಮದಿಹಳ್ಳಿಯನ್ನು ಬಂಧಿಸಿಲಾಗಿತ್ತು. ನಂತರ ಹಂತ ಹಂತವಾಗಿ 20 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತುಮಕೂರು: ತಾಲ್ಲೂಕಿನ ಕೋರ ಹೋಬಳಿ ಬ್ರಹ್ಮಸಂದ್ರ ಕೆರೆ ಸುಮಾರು 22 ವರ್ಷಗಳ ನಂತರ ಕೋಡಿ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಶಾಸಕರಾದ ಪಿ.ಆರ್.ಸುಧಾಕರ್ ಲಾಲ್ ಅವರು ಕೆರೆಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಕಾಟೇನಹಳ್ಳಿ, ಹರಿಯಪ್ಪನಹಳ್ಳಿ, ಮಾಸ್ತಿಪಾಳ್ಯ, ಬ್ರಹ್ಮಸಂದ್ರ ಹಾಗೂ ಅಕ್ಕ ಪಕ್ಕದ ಗ್ರಾಮದ  ನೂರಾರು ಜನರು ಮತ್ತು ಕೋರಾ ಹೋಬಳಿ ಜೆಡಿ ಎಸ್  ಮುಖಂಡರು  ಹಾಗೂ ಮಹಿಳೆಯರು  ಭಾಗವಹಿಸಿದ್ದರು. ಮುಖಂಡರಾದ ಶೇಖರಯ್ಯ, ಚಿದಾನಂದ, ರಾಜೇಗೌಡ, ದೀಪು, ಪ್ರಶಾಂತ ಕೆಸ್ತೂರು, ವಿರೂಪಾಕ್ಷಯ್ಯ, ಬಸವರಾಜು, ರುದ್ರೇಶ, ಪಾಲಯ್ಯ, ಸಿದ್ದರಾಜು ಚಿಕ್ಕೋನಹಳ್ಳಿ ಮೊದಲಾದವರು ಭಾಗವಹಿಸಿದ್ದರು.  ವರದಿ: ದಾಸಾಲುಕುಂಟೆ ಸಿದ್ದರಾಜು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More