Author: admin

ಮಧುಗಿರಿ: ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗುತ್ತಿದ್ದು, ಪಟ್ಟಣದಾದ್ಯಂತ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರಿಂದ ದ್ವಿಚಕ್ರ ವಾಹನ ಸವಾರರಿಗೆ ಭಾರೀ ಅನಾನುಕೂಲವಾಗುತ್ತಿದೆ. ಸಂತೆ ಮೈದಾನದಲ್ಲಿ ನೀರು ನಿಲ್ಲುವುದರಿಂದ ಮಹಿಳೆಯರು ವ್ಯಾಪಾರದ ವೇಳೆ ಜಾರಿ ಬಿದ್ದಿರುವುದು, ಬೀದಿದೀಪ ನಿರ್ವಹಣೆ ನಿರ್ಲಕ್ಷ್ಯ, ರಾಜೀವ್ ಗಾಂಧಿ ಕ್ರೀಡಾಂಗಣ ಕೆಸರುಗದ್ದೆಯಾಗಿರುವುದರಿಂದ ವಾಯುವಿಹಾರಿಗಳಿಗೆ ಮತ್ತು ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟ ದೂರಿದೆ. ಈ ಸಂಬಂಧ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಅಕ್ಟೋಬರ್–21ರಂದು ”ಮಧುಗಿರಿ ಬಂದ್” ಕರೆ ನೀಡಲಾಗುತ್ತಿದೆಂದು ಸೋಮವಾರ  ಪಟ್ಟಣದಲ್ಲಿ  ಪದಾಧಿಕಾರಿಗಳು ದ್ವಿಚಕ್ರವಾಹನದಲ್ಲಿ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ  ಸಲ್ಲಿಸಿದರು. ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಕಳೆದ ಹದಿನೈದು ದಿನಗಳಿಂದ ದಸರಾ ರಜೆ ಇದ್ದ ಹಿನ್ನೆಲೆಯಿಂದಾಗಿ ಶಾಲಾ ಕಾಲೇಜುಗಳು ರಜೆ ಇದ್ದವು, ಸೋಮವಾರದಿಂದ ಶಾಲಾ ಕಾಲೇಜುಗಳು ಪುನರಾರಂಭಗೊಂಡಿದ್ದು ಮಕ್ಕಳನ್ನು ಪೋಷಕರು ಶಾಲೆಗೆ ಬಿಡಲು ದ್ವಿಚಕ್ರ ವಾಹನಗಳು ಮತ್ತು ಆಟೋಗಳ ಮೂಲಕ ಬರುತ್ತಾರೆ. ಆದರೆ ಮಧುಗಿರಿ ಪಟ್ಟಣದಾದ್ಯಂತ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರಿಂದ…

Read More

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಹೊಸದಾಗಿ 4 ಸಾವಿರ ಬಸ್ ​ಗಳನ್ನು ಖರೀದಿಸಲು ಮುಂದಾಗಿದೆ. ಇದೇ ವೇಳೆ ನಷ್ಟವನ್ನು ತಪ್ಪಿಸಲು ನಾಲ್ಕೂ ನಿಗಮಗಳನ್ನು ವಿಲೀನಗೊಳಿಸಲು ಸಜ್ಜಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಶಕಗಳಿಂದ ಸಾರಿಗೆ ಸಂಸ್ಥೆ ಅನುಭವಿಸುತ್ತಿರುವ ನಷ್ಟವನ್ನು ತಪ್ಪಿಸಲು ನಾಲ್ಕೂ ಸಾರಿಗೆ ನಿಗಮಗಳನ್ನು ವಿಲೀನಗೊಳಿಸಲು ಶ್ರೀನಿವಾಸಮೂರ್ತಿ ಸಮಿತಿ ಶಿಫಾರಸು ಮಾಡಿದೆ ಎಂದು ಹೇಳಿದರು. ನಾಲ್ಕು ನಿಗಮಗಳು ಅಸ್ತಿತ್ವದಲ್ಲಿರುವುದರಿಂದ ಆಡಳಿತಾತ್ಮಕ ಹೊರೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ನಿಗಮಗಳನ್ನು ವಿಲೀನಗೊಳಿಸಿ ಒಂದೇ ನಿಗಮ ಅಸ್ತಿತ್ವದಲ್ಲಿರುವಂತೆ ಮಾಡಿದರೆ ಸಾರಿಗೆ ಸಂಸ್ಥೆ ಅನುಭವಿಸುತ್ತಿರುವ ನಷ್ಟ ತಪ್ಪುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾಲ್ಕು ನಿಗಮಗಳಿರುವುದರಿಂದ ಎಲ್ಲ ನಿಗಮಗಳು ತಮ್ಮ ತಮ್ಮ ಮಟ್ಟದಲ್ಲೇ ನಿರ್ಧಾರ ಕೈಗೊಳ್ಳುತ್ತವೆ. ಹೀಗಾಗಿ ಬಹುತೇಕ ಸಂದರ್ಭಗಳಲ್ಲಿ ಬಸ್ಸುಗಳು ಕಡಿಮೆ ಪ್ರಯಾಣಿಕರೊಂದಿಗೆ ಸಂಚರಿಸುವಂತಾಗಿ ನಷ್ಟದ ಪ್ರಮಾಣ ಹೆಚ್ಚುತ್ತದೆ. ನಿಗಮಗಳು ವಿಲೀನವಾದಾಗ ಅಗತ್ಯಕ್ಕನುಗುಣವಾಗಿ ಬಸ್ ಸಂಚಾರಕ್ಕೆ ಅವಕಾಶ ನೀಡಬಹುದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಳಗಾವಿ: ಇಲ್ಲಿನ 3ನೇ ರೈಲ್ವೆ ಗೇಟ್‌ ಗೆ ನಿರ್ಮಿಸಿದ ಮೇಲ್ಸೇತುವೆಯಲ್ಲಿ ಗುಂಡಿಗಳು ಬಿದ್ದ ಪರಿಣಾಮ, ವಾಹನ ಸಂಚಾರವನ್ನು ಬಂದ್‌ ಮಾಡಲಾಗಿದೆ. ಮೇಲ್ಸೇತುವೆಯನ್ನು ಆರು ದಿನಗಳ ಹಿಂದಷ್ಟೇ ಜನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದೇ ಅಕ್ಟೋಬರ್ 12ರಂದು ಮೇಲ್ಸೇತುವೆಯನ್ನು ಉದ್ಘಾಟಿಸಲಾಗಿತ್ತು. ಆದರೆ, ಸೇತುವೆಯ ಮಧ್ಯದಲ್ಲಿ ಗುಂಡಿಗಳು ಬಿದ್ದಿವೆ. 35.46 ಕೋಟಿ ವೆಚ್ಚದ ಸೇತುವೆ ನಿರ್ಮಾಣಕ್ಕೆ ಮೂರು ವರ್ಷ ತೆಗೆದುಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜನ ಹಾಗೂ ವಾಹನ ಸಂಚಾರ ನಿಲ್ಲಿಸಲಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಅಭಯ ಪಾಟೀಲ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿದ್ದಾರೆ. ರೈಲ್ವೆ ಇಲಾಖೆ ಅಧಿಕಾರಿಗಳೂ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಗುತ್ತಿಗೆದಾರರ ಬಾಕಿಯನ್ನು ತಡೆಹಿಡಿಯಬೇಕು ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಾಕೋಲೆಟ್, ಕ್ಯಾಂಡಿ ತಿನ್ನಲು ಅಮ್ಮ ಬಿಡುತಿಲ್ಲ ಎಂದು ಮೂರು ವರ್ಷದ ಕಂದ ಅಮ್ಮನ ವಿರುದ್ಧ ಪೊಲೀಸರಿಗೆ ದೂರು ನೀಡಿದ ಮನಕುಲುಕುವ ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಂದೆಯ ಜೊತೆ ಪೊಲೀಸ್ ಠಾಣೆಗೆ ಆಗಮಿಸಿದ 3 ವರ್ಷದ ಮಗು, ಅಮ್ಮ ನನಗೆ ಚಾಕೋಲೆಟ್, ಕ್ಯಾಂಡಿ ತಿನ್ನಲು ಬಿಡುವುದಿಲ್ಲ. ನನ್ನ ಬಳಿ ಇರುವ ಚಾಕೋಲೇಟ್ ಮತ್ತು ಕ್ಯಾಂಡಿ ಕದಿಯುವ ಅಮ್ಮನನ್ನು ಜೈಲಿಗೆ ಹಾಕಿ ಎಂದು ದೂರು ಕೊಟ್ಟಿದ್ದಾನೆ. ಮಧ್ಯಪ್ರದೇಶದ ಭುರಾನ್ ಪುರ್ ಜಿಲ್ಲೆಯ ಡೆಧಾತಲೈ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಾಕೋಲೇಟ್ ಕೇಳಿದರೆ ಅಮ್ಮ ಹೊಡೆಯತ್ತಾರೆ. ಈ ಬಗ್ಗೆಯೂ ಗಮನಹರಿಸಿ ಎಂದು ಮಗು ದೂರು ಕೊಟ್ಟಿದ್ದನ್ನು ಮಹಿಳಾ ಪೊಲೀಸ್ ದೂರು ಸ್ವೀಕರಿಸಿದ್ದಾರೆ. ಮಗು ಸ್ನಾನ ಮಾಡುವಾಗ ಚಾಕೋಲೆಟ್ ನೀಡಲು ನಿರಾಕರಿಸಿದ್ದಾರೆ. ಈ ವೇಳೆ ಸ್ನಾನ ಮುಗಿಸಿ ಬಂದಾಗ ಮಗ ಚಾಕೋಲೇಟ್ ಕೇಳಿದಾಗ ಅಮ್ಮ ಮೆಲ್ಲಗೆ ಹೊಡೆದಿದ್ದಾಳೆ. ಇದರಿಂದ ಅಳಲು ಆರಂಭಿಸಿದ್ದು, ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುವಂತೆ ಪಟ್ಟು ಹಿಡಿದಿದ್ದರಿಂದ ಕರೆದುಕೊಂಡು ಬಂದೆ…

Read More

ಬೆಂಗಳೂರು: 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದ್ದು, ಜೊತೆಗೆ ಲಂಬಾಣಿ ತಾಂಡಾಗಳನ್ನೂ ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದ 3,247 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಗುರುತಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಜಮೀನು ವಿಚಾರದಲ್ಲಿ ಬಗರ್ ಹುಕುಂ ಸಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ, ಬರ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ಹಳ್ಳಿಗಳಲ್ಲಿ ಸ್ಮಶಾನ ಇಲ್ಲದಿದ್ದರೇ ಸರ್ಕಾರದ ಅಥವಾ ಖಾಸಗಿ ಜಾಗ ಗುರುತಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು. ಮಣ್ಣು ಸವಕಳಿಯಿಂದ ಹಾನಿಗೊಳಗಾದವರಿಗೂ ಪರಿಹಾರ ನೀಡಬೇಕು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸುವ ಮೂಲಕ, ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಮ್,ಶ್ರೀಕಂಠಯ್ಯನವರು ರಚಿಸಿದ “ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ” ಎನ್ನುವಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಕರೆ ನೀಡಿದ್ದಾರೆ. ನವೆಂಬರ್ ೧ ರಂದು ರಾಜ್ಯೋತ್ಸವವನ್ನು ಪ್ರತಿಯೊಬ್ಬ ಕನ್ನಡಿಗರು ಸಂಭ್ರಮದಿಂದ ಆಚರಿಸುತ್ತಾರೆ. ಅದರೊಂದಿಗೆ ಈ ಬಾರಿ ಪ್ರತಿಯೊಬ್ಬ ಕನ್ನಡಿಗನೂ ನಮ್ಮ ಭಾಷೆ, ಸಂಸ್ಕೃತಿ, ಪರಂಪರೆಯ ಧ್ಯೋತಕವಾದ ಕನ್ನಡದ ಧ್ವಜವನ್ನು ಸ್ವ-ಇಚ್ಛೆಯಿಂದ ಹೆಮ್ಮೆಯಿಂದ ಪ್ರತಿಯೋಬ್ಬರ ಮನೆಯ ಮೇಲೆ ಹಾರಿಸುವ ಮೂಲಕ ಕನ್ನಡದ ಹಬ್ಬವನ್ನು ಆಚರಿಸೋಣ. ನಾಡಿನಾದ್ಯಂತ ಎಲ್ಲೆಡೆಯೂ ಹಳದಿ ಕೆಂಪು ಬಣ್ಣವು ರಾರಾಜಿಸಲಿ, ಸ್ಫೂರ್ತಿಯ ಸೆಲೆ ಎಲ್ಲೆಡೆಯೂ ಪಸರಿಸಲಿ, ಎಲ್ಲರ ಮನ-ಮನೆಯಲ್ಲೂ ಕನ್ನಡತನ ಮೆರೆಯಲಿ ಎಂದು ನಾಡೋಜ ಡಾ. ಮಹೇಶ ಜೋಶಿ ಆಶಯ ವ್ಯಕ್ತಪಡಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ-ಕನ್ನಡಿಗ-ಕರ್ನಾಟಕ…

Read More

ನವದೆಹಲಿ: ನವೆಂಬರ್ 9, 2022 ರಿಂದ ಜಾರಿಗೆ ಬರುವಂತೆ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ನೇಮಕ ಮಾಡಿದ್ದಾರೆ. ಹಾಲಿ ಸಿಜೆಐ ಯುಯು ಲಲಿತ್ ಅವರ ನಿವೃತ್ತಿಯ ನಂತರ ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಿರ್ಗಮಿತ ಸಿಜೆಐ ಯುಯು ಲಲಿತ್ ಅವರು ಅಕ್ಟೋಬರ್ 11 ರಂದು ನ್ಯಾಯಮೂರ್ತಿ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಿದ್ದರು. ಸಿಜೆಐ ಆಗಿ, ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 10, 2024 ರಂದು ಎರಡು ವರ್ಷಗಳಿಗೂ ಹೆಚ್ಚು ಅವಧಿಯನ್ನು ಹೊಂದಿರುತ್ತಾರೆ. ಇದು ಇತ್ತೀಚಿನ ದಿನಗಳಲ್ಲಿ ಸಿಜೆಐ ಹುದ್ದೆಗೆ ಸುದೀರ್ಘ ಅವಧಿಗಳಲ್ಲಿ ಒಂದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿಕ್ಕೋಡಿ : ಕಾಂಗ್ರೆಸ್, ಜೆಡಿಎಸ್ ತೆಕ್ಕೆಯಲ್ಲಿರುವ 100 ಕ್ಷೇತ್ರಗಳನ್ನು ಪಕ್ಷ ಆಯ್ಕೆ ಮಾಡಿಕೊಂಡಿದ್ದು ಪ್ರತಿ ಕಾರ್ಯಕರ್ತನಿಗೂ ತಲಾ 25 ವೋಟ್​ಗಳನ್ನು ಸೆಳೆಯುವ ಜವಾಬ್ದಾರಿ ನೀಡಲಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ನಡೆದ ಸಂಕಲ್ಪ ಸಮಾವೇಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 100 ಕ್ಷೇತ್ರಗಳನ್ನು ಆಯ್ಕೆ ಮಾಡಿ ಅವುಗಳ ಗೆಲುವಿಗೆ ಶ್ರಮಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಐದು ಕ್ಷೇತ್ರಗಳ ಟಾರ್ಗೆಟ್ ಮಾಡಿದ್ದೇವೆ. ಒಬ್ಬೊಬ್ಬ ಕಾರ್ಯಕರ್ತನಿಗೆ 21 ಮತಗಳ ಜವಾಬ್ದಾರಿ ನೀಡಲಾಗಿದೆ. ರಾಜಕಾರಣದಲ್ಲಿ 51 ಪರ್ಸೆಂಟ್ ನೂರಕ್ಕೆ ಸಮಾನ 49 ಪರ್ಸೆಂಟ್ ಶೂನ್ಯಕ್ಕೆ ಸಮಾನ ಎಂದರು. ಬಿಜೆಪಿ ಗೆಲ್ಲಿಸುವ ಜವಾಬ್ದಾರಿ ಸವದಿಯವರಿಗೆ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು , ಯಾವ ಕುದುರೆ ಓಡುತ್ತೋ ಅದಕ್ಕೆ ಜಿದ್ದು ಕಟ್ಟುತ್ತಾರೆ. ಯಮಕನಮರಡಿ, ಚಿಕ್ಕೋಡಿ, ಬೆಳಗಾವಿ ಗ್ರಾಮೀಣ, ಖಾನಾಪುರ ಸೇರಿದಂತೆ ಐದು ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತೇನೆ ಎಂದರು. ಇನ್ನು ಪಂಚಮಸಾಲಿ ಹೋರಾಟದ ಬಗ್ಗೆ ಮುಖ್ಯಮಂತ್ರಿಗಳು ಚಿಂತನೆ ಮಾಡುತ್ತಿದ್ದಾರೆ. ಸಾಮಾಜಿಕ ನ್ಯಾಯ ಕೊಡಬೇಕು ಎನ್ನುವ ಚಿಂತನೆ ಬಗ್ಗೆ…

Read More

ಬೆಳಗಾವಿ: ಖಾಸಗಿ ಫೈನಾನ್ಸ್ ವಿರುದ್ಧ 25 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಸಂತ್ರಸ್ತರು ಫೈನಾನ್ಸ್ ಮತ್ತು ಆಡಳಿತ ಮಂಡಳಿ ಸದಸ್ಯರ ಮನೆಗಳ ಮುಂದೆ ಪ್ರತಿಭಟನೆ ನಡೆಸಿದ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ನಡೆದಿದೆ. ಘಟಪ್ರಭಾ ಪಟ್ಟಣದಲ್ಲಿರುವ ನವೋದಯ ಫೈನಾನ್ಸ್, ಜಗಜ್ಯೋತಿ ಸೌಹಾರ್ದ ಸಹಕಾರಿ ಸಂಘವು ಸರ್ವಜ್ಞ ಚಿಟ್ ಹೆಸರಿನಲ್ಲಿ ಅಂದಾಜು 25 ಕೋಟಿ ರೂಪಾಯಿ ವಂಚನೆ ಆರೋಪ ಮಾಡಿದ್ದಾರೆ. ಹೀಗಾಗಿ ವಂಚನೆಗೊಳಗಾದವರು ಫೈನಾನ್ಸ್​​ನ ಆಡಳಿತ ಮಂಡಳಿ ಮತ್ತು ಸದಸ್ಯರ ಮನೆಗಳ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಮನೆಯ ಮುಂದೆ ಬೊಬ್ಬೆಹಾಕಿ, ತಮಟೆ, ಪಾತ್ರೆಗಳನ್ನು ಬಾರಿಸಿ ಪ್ರತಿಭಟನೆ ನಡೆಸಿದ ಜನರು, ನಮ್ಮ ದುಡಿದ ಹಣ ವಾಪಸ್ ಕೊಡಿ ಎಂದು ಘೋಷಣೆ ಕೂಗಿದರು. ಇತ್ತ ಜನರ ಪ್ರತಿಭಟನೆಗೆ ಹೆದರಿದ ಆಡಳಿತ ಮಂಡಳಿ ಅಧ್ಯಕ್ಷ ಅಣ್ಣಪ್ಪ ಸೇರಿ ಸದಸ್ಯರು ಪರಾರಿ ಆಗಿದ್ದಾರೆ. ಗ್ರಾಹಕರು ಠೇವಣಿ ಇಟ್ಟ ಹಣದಲ್ಲಿ ಆಡಳಿತ ಮಂಡಳಿ ಸದಸ್ಯರು ಬೇರೆಡೆ ಆಸ್ತಿ ಖರೀದಿಸಿದ ಆರೋಪವಿದೆ. ನಮ್ಮತುಮಕೂರು.ಕಾಂನ ಕ್ಷಣ…

Read More

ಬಾಗಲಕೋಟೆ: ಮುಳುಗುವ ಕಾಂಗ್ರೆಸ್ ಹಡಗಿಗೆ ಮಲ್ಲಿಕಾರ್ಜುನ ಖರ್ಗೆರನ್ನು ನಾವಿಕನನ್ನಾಗಿ ಮಾಡುತ್ತಿದ್ದಾರೆ. ಅವರು ಏನೇ ಪ್ರಯೋಗ ಮಾಡಿದರೂ ಈ ದೇಶದಲ್ಲಿ ಕಾಂಗ್ರೆಸ್ ಉಳಿಯಲು ಸಾಧ್ಯವಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ್ ಖರ್ಗೆ ನಾಯಕತ್ವದಿಂದ ಯಾವುದೇ ಪರಿಣಾಮ ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುವಾಗ ಮಾಡಿದ್ರೆ ಅದಕ್ಕೊಂದು ಅರ್ಥ ಇರುತ್ತಿತ್ತು. ರಾಜ್ಯದಲ್ಲಿ ಖರ್ಗೆಯವರನ್ನ ಮುಖ್ಯಮಂತ್ರಿ ಮಾಡಬೇಕಿತ್ತು ಯಾಕೆ ಮಾಡಲಿಲ್ಲ ಎಂದು ಗೋವಿಂದ ಕಾರಜೋಳ ಪ್ರಶ್ನಿಸಿದರು. ದೀನ, ದಲಿತರನ್ನ ವೋಟ್ ಬ್ಯಾಂಕ್ ಮಾಡಲು ರಾಜಕಾರಣ ಮಾಡುತ್ತಾರೆ. ಅವರನ್ನ ಉದ್ಧಾರ ಮಾಡುವುದಾಗಲಿ, ಗೌರವ ಕೊಡುವುದಾಗಲಿ ಕಾಂಗ್ರೆಸ್​ನವರು ಯಾವತ್ತೂ ಮಾಡುವುದಿಲ್ಲ. ಕಾಂಗ್ರೆಸ್ ಮುಳುಗುತ್ತಿದೆ ಎಂದು ಗೊತ್ತಾಗಿದೆ. ಹೀಗಾಗಿ ಇಂತಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More