Author: admin

ಖ್ಯಾತ ಕಿರುತೆರೆ ನಟಿ 26 ವರ್ಷದ ವೈಶಾಲಿ ಠಕ್ಕರ್ ಮಧ್ಯಪ್ರದೇಶದ ಇಂದೋರ್ ನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಶಾಲಿ ಠಕ್ಕರ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಆಕೆಗೆ ಮಾಜಿ ಪ್ರಿಯಕರ ಕಿರುಕುಳ ನೀಡುತ್ತಿದ್ದು, ಇದರಿಂದ ಒತ್ತಡಕ್ಕೆ ಒಳಗಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವೈಶಾಲಿ ತಮ್ಮ ಹಾಗೂ ತಂದೆಯ ಜೊತೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಈಕೆ ಆತ್ಮಹತ್ಯೆ ಮಾಡಿಕೊಳ್ಳುವಂತ ಪರಿಸ್ಥಿತಿ ಎದುರಿಸುತ್ತಿರುವುದು ಮನೆಯವರ ಗಮನಕ್ಕೆ ಬಂದಿರಲಿಲ್ಲ. 2015ರಲ್ಲಿ ಹೇ ರಿಷ್ತಾ ಕ್ಯಾ ಕೆಹೆತಾ ಹೈ ಧಾರವಾಹಿ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದರು. ಇತ್ತೀಚೆಗೆ ಬಿಗ್ ಬಾಸ್ ಖ್ಯಾತಿಯ ನಿಶಾಂತ್ ಮಲಕಣಿ ಜೊತೆ ರಕ್ಷಾಬಂಧನ್ ನಲ್ಲಿ ಕಾಣಿಸಿಕೊಂಡಿದ್ದರು. ಉಜ್ಜಿಯಿನಿ ಮೂಲದ ಮಹಿದೂರ್ ನಿವಾಸಿ ಆಗಿರುವ ವೈಶಾಲಿ ಠಕ್ಕರ್, ಚಿತ್ರರಂಗದಲ್ಲಿ ಕಾಣಿಸಿಕೊಳ್ಳಲು ಮುಂಬೈಗೆ ತೆರಳಿದ್ದರು. ನಂತರ ಜೈಪುರಕ್ಕೆ ತೆರಳಿ ನಂತರ ಇಂದೋರ್ ನಲ್ಲಿ ಕಳೆದ ಒಂದು ವರ್ಷದಿಂದ ನೆಲೆಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಕಳವಳ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಂತೋಷ್ ಹೆಗಡೆ, ಭ್ರಷ್ಟಾಚಾರ ಮೊದಲಿನಿಂದಲೂ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಸಮಾಜದ ವಿವಿಧ ವಲಯಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಅತಿಯಾದ ದುರಾಸೆಯಿಂದಾಗಿ ಭ್ರಷ್ಟಾಚಾರ ಎಲ್ಲೆಡೆಯೂ ಹೆಚ್ಚುತ್ತಿದೆ‌. ದುರಾಸೆ ಮೊದಲೂ ಇತ್ತು, ಈಗ ಇನ್ನಷ್ಟು ಜಾಸ್ತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಪುನರ್ ಜಾರಿಗೊಳಿಸಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂತೋಷ್ ಹೆಗಡೆ, ಇದು ಸ್ವಾಗತಾರ್ಹ ಬೆಳವಣಿಗೆ. ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಜಾರಿಗೆ ತಂದಿದ್ದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಸುಪ್ರೀಂ ಕೋರ್ಟ್ ಎಸಿಬಿ ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದೆ. ಹಾಗಾಗಿ ಲೋಕಾಯುಕ್ತಕ್ಕೆ ಬಲ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಲೋಕಾಯುಕ್ತ ಕೇಳುವ ಸಿಬ್ಬಂದಿಗಳನ್ನು ಸರ್ಕಾರ ನೇಮಕ ಮಾಡಬೇಕು. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಾಮರ್ಥ್ಯ ಲೋಕಾಯುಕ್ತಕ್ಕಿದೆ‌ ಎಂದರು. ಭ್ರಷ್ಟಾಚಾರ ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರ‌.…

Read More

ವಿಶೇಷ ವರದಿ: ಅಬಿದ್ ಮಧುಗಿರಿ  ಮಧುಗಿರಿ: ಪಟ್ಟಣದಲ್ಲಿ ಕೆ ಎಸ್ ಆರ್ ಟಿ ಸಿ  ಬಸ್ ಡಿಪೋ ಪ್ರಾರಂಭಗೊಂಡು ಸುಮಾರು ಎಂಟು ವರ್ಷಗಳು ಕಳೆದರೂ ಸಾರ್ವಜನಿಕರಿಗೆ ಸಮರ್ಪಕವಾದ ಸಾರಿಗೆ ಸೇವೆ ಸಿಗುತ್ತಿಲ್ಲ. ಪಾವಗಡ ತಾಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಿಂದ ಬೆಂಗಳೂರಿಗೆ ನೇರ ಬಸ್ ಸೌಲಭ್ಯವಿದೆ. ಆದರೆ ಮಧುಗಿರಿ ತಾಲ್ಲೂಕಿನ ಐಡಿಹಳ್ಳಿ ಹೋಬಳಿಯ ತಾಡಿ  ಗ್ರಾಮದಿಂದ ಮಾತ್ರ ಬೆಂಗಳೂರಿಗೆ ನೇರ ಬಸ್ ಸೌಲಭ್ಯವಿದೆ. ಇನ್ನುಳಿದ  ಮಿಡಿಗೇಶಿ ಹೋಬಳಿಯ ಪ್ರಯಾಣಿಕರು ಪಾವಗಡದಿಂದ ಬರುವ ಬಸ್ಸುಗಳಲ್ಲಿ ಸೀಟ್ ಇದ್ದರೆ ಕುಳಿತುಕೊಳ್ಳಬಹುದು ಇಲ್ಲದಿದ್ದರೆ ಸ್ಟಾಂಡಿಂಗ್ ನಲ್ಲೇ ರಾಜಧಾನಿಗೆ ಪ್ರಯಾಣ ಬೆಳೆಸಬೇಕಾಗುತ್ತದೆ. ದೊಡ್ಡೇರಿ ಪುರವರ ಕೊಡಿಗೆನಹಳ್ಳಿ ಹೋಬಳಿಗಳ ಜನತೆ ಮಧುಗಿರಿಗೆ ಬಂದು ಇಲ್ಲಿಂದ ಸಾರಿಗೆ ಬಸ್ಸುಗಳಲ್ಲಿ ಸೀಟು ಸಿಕ್ಕಿದರೆ ಆರಾಮವಾಗಿ ಪ್ರಯಾಣ ಬೆಳೆಸಬಹುದು. ಇಲ್ಲದಿದ್ದರೆ, ಖಾಸಗಿ ಬಸ್ಸುಗಳಲ್ಲಿ ಬೆಂಗಳೂರು ತಲುಪಬೇಕಾಗುತ್ತದೆ. ಕೆ.ಎನ್. ರಾಜಣ್ಣನವರು ಶಾಸಕರಾಗಿದ್ದಾಗ ಸಾರ್ವಜನಿಕರ ಮನವಿಗೆ ಸ್ಪಂದಿಸಿ 4 ಸಿಂಗಲ್ ಬಸ್ ಸೇವೆಯನ್ನು ಲೋಕಾರ್ಪಣೆಗೊಳಿಸಿದ್ದರು. ನಂತರದ ದಿನಗಳಲ್ಲಿ ಈ ಬಸ್ ಸೇವೆ ಸ್ಥಗಿತಗೊಂಡಿದ್ದು, ಕೋರ್ಟ್ ಕಚೇರಿ ಆಸ್ಪತ್ರೆ ಕೆಲಸಗಳಿಗೆ…

Read More

ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ 12ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದರು. ಈ ಕಂತಿನಲ್ಲಿ ಸುಮಾರು 8 ಲಕ್ಷ ರೈತರ ಖಾತೆಗಳಿಗೆ 16 ಸಾವಿರ ಕೋಟಿ ರೂಪಾಯಿ ಜಮೆಯಾಗಿದೆ. ಬಳಿಕ, 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳಿಗೆ ಮೋದಿ ಚಾಲನೆ ನೀಡಿದರು. ಒಂದು ದೇಶ ಒಂದು ಗೊಬ್ಬರ ಹೆಸರಿನಲ್ಲಿ ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್‍ ಪಿಕೆ ರಸಗೊಬ್ಬರವನ್ನು ಲೋಕಾರ್ಪಣೆ ಮಾಡಿದರು. ಸಾವಿರಾರು ರೈತರು ಸಮಾರಂಭದ ಸ್ಥಳದಲ್ಲಿ ಉಪಸ್ಥಿತರಿದ್ದರು.\ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರಿನಲ್ಲಿ ಇಂದು ರಸ್ತೆಗುಂಡಿಯಿಂದಾಗಿ ಅಪಘಾತ ಸಂಭವಿಸಿ ಮಹಿಳೆ ಗಂಭೀರ ಗಾಯಗೊಂಡ ಹಿನ್ನೆಲೆ ರಸ್ತೆಗುಂಡಿಗಳನ್ನು ಮುಚ್ಚದ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಬೆಂಗಳೂರಲ್ಲೆ ಅಷ್ಟೆ ಅಲ್ಲ ರಸ್ತೆಗುಂಡಿಗಳು ಇಡೀ ರಾಜ್ಯದಲ್ಲಿಇವೆ.  ಸಿಎಂ ಕಾನ್ಫರೆನ್ಸ್  ಮಾಡ್ತಾರೆ. ಎಷ್ಟೇ ಸಭೆ ಮಾಡಿದ್ರೂ ಗುಂಡಿ ಮುಚ್ಚಲ್ಲ. ಜನ ಜೀವನ ಕಾಪಾಡಲು ಸರ್ಕಾರ ಮುಂದಾಗಿಲ್ಲ. ಮಳೆಹಾನಿ ತಡೆಗೆ ಸರ್ಕಾರ ತಯಾರಿ ಮಾಡಿಕೊಂಡಿಲ್ಲ.  ನಮ್ಮಲ್ಲಿ ಗುಂಡಿ ಮುಚ್ಚುವ ಕೆಲಸ ಮಾತ್ರ ಆಗಿಲ್ಲ ಎಂದು ಕಿಡಿಕಾರಿದರು. ವಾಹನ ಸವಾರಿಂದ ಪೊಲೀಸರು ದಂಡ ವಸೂಲಿ ಮಾಡ್ತಿದ್ದಾರೆ.  ರಾಜ್ಯದ ಎಲ್ಲಾ ಕಡೆ ರಸ್ತೆ ಗುಂಡಿ ಸಮಸ್ಯೆಯೇ ಇದೆ. ಆದರೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ನಿನ್ನೆ ಅರಸೀಕೆರೆಯಲ್ಲಿ 9 ಮಂದಿ ಅಪಘಾತದಿಂದ ಸಾವನ್ನಪ್ಪಿದ್ದಾರೆ.   ಹೈವೇಗಳಲ್ಲಿ ಪೊಲೀಸರು ಜನರಿಂದ ವಸೂಲಿಗೆ ನಿಂತಿರುತ್ತಾರೆ. ಹಣ ವಸೂಲಿಗೆ ಈ ಸರ್ಕಾರವೂ ನಿಂತುಬಿಟ್ಟಿದೆ. ಹಣ ವಸೂಲಿ ಮಾಡಿ ಹಂಚಿಕೊಳ್ಳುತ್ತಾರೆ . ರಾತ್ರಿ ವೇಳೆ ಕುಡಿಯೋದಕ್ಕೆ ಅವಕಾಶ ಕೊಡೋದು ನೀವೇ. …

Read More

ಕೊರಟಗೆರೆ: ಕೆರೆಯ ನೀರು ನುಗ್ಗಿದ ಪರಿಣಾಮ ರೈತರು ನೂರಾರು ಎಕರೆ ಜಮೀನಿನಲ್ಲಿ ಬೆಳೆದ ಬೆಳೆಗಳು ನಾಶವಾಗುವ ಭೀತಿ ಸೃಷ್ಟಿಯಾಗಿದ್ದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ರೈತರು ತೀವ್ರ ಆತಂಕದಲ್ಲಿದ್ದಾರೆ. ಕಾಲುವೆ ಮುಚ್ಚಿ ಹೋದ ಪರಿಣಾಮ ಕೊರಟಗೆರೆ ತಾಲೂಕಿನ ದೊಡ್ಡಸಾಗ್ಗೆರೆ ಕೆರೆಯ ತೂಬಿನಿಂದ ಹಾದು ಹೋಗುವ ನೀರು ಸಮರ್ಪಕವಾಗಿ ಹಾದು ಹೋಗುತ್ತಿಲ್ಲ. ಹೀಗಾಗಿ ರಭಸವಾಗಿ ಬರುತ್ತಿರುವ ನೀರು ಅಡಿಕೆ ತೋಟ ಹಾಗೂ ರೈತರ ಬೆಳೆಗೆ ನುಗ್ಗಿ ಬೆಳೆ ನಾಶವಾಗುತ್ತಿದ್ದು, ಬೆಳೆದು ನಿಂತ ಅಡಿಕೆ ತೋಟ ಕೊಚ್ಚಿ ಹೋಗಿ ನಾಶವಾಗುವ ಭೀತಿ ಸೃಷ್ಟಿಯಾಗಿದೆ. ದೊಡ್ಡ ಸಾಗ್ಗೆರೆ ಹಾಗೂ ಗಜಮುದ್ದನ ಹಳ್ಳಿ ಮಧ್ಯಭಾಗದಲ್ಲಿ ಬರುವಂತಹ ದೊಡ್ಡಸಾಗ್ಗೆರೆ ಕೆರೆಯ ನೀರು  ಸುತ್ತಮುತ್ತಲಿನ 4-5 ಹಳ್ಳಿಗಳ ಜನರ ಮನೆಗಳಿಗೆ ನುಗ್ಗುವ ಆತಂಕ ಸೃಷ್ಟಿಯಾಗಿದೆ. ಕಳೆದ 15-20 ವರ್ಷಗಳ ಭೀಕರ ಬರಗಾಲದ ಸಂದರ್ಭದಲ್ಲಿ ಇಲ್ಲಿನ ರೈತರು ಕಾಲುವೆ ಒತ್ತುವರಿ ಮಾಡಿಕೊಂಡಿರುವ ಕಾರಣ ಈ ಸಮಸ್ಯೆ ಸೃಷ್ಟಿಯಾಗಿದೆ. ಜೊತೆಗೆ ಹೊಸದಾಗಿ ನಿರ್ಮಾಣವಾಗಿರುವ ರಸ್ತೆಗೆ ಸೇತುವೆ ನಿರ್ಮಾಣ ಮಾಡದ ಕಾರಣ ನೀರು ಸರಾಗವಾಗಿ…

Read More

ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದ್ದು ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೆ ಸಚಿವಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಗೊತ್ತು ಎಂದರು. ಈ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ  ಕೇಂದ್ರ ನಾಯಕರು ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧಾರಕ್ಕೆ ನಾನು ಬದ್ಧ. ಸಚಿವ ಸ್ಥಾನ ಕೊಟ್ಟರೆ ತೆಗೆದುಕೊಳ್ಳುತ್ತೇನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ ತರೂರು ವಿರುದ್ದ ನೇರ ಹಣಾಹಣಿ ಏರ್ಪಟ್ಟಿದೆ. 20 ವರ್ಷಗಳ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಗಾಂಧಿಯೇತರ ಅಧ್ಯಕ್ಷನನ್ನು ಹೊಂದಲು ಸಜ್ಜಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಮತದಾನ ನಡೆಯಲಿದ್ದು, ಅಕ್ಟೋಬರ್ 19ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಕರ್ನಾಟಕದವರೇ ಆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸರಿಸುಮಾರು 9,000 ಕ್ಕೂ ಅಧಿಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳು ಮತ ಚಲಾವಣೆ ಮಾಡುವ ಅರ್ಹತೆ ಪಡೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಮ್ಮ ಪಕ್ಷದ ನಾಯಕರಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಬಿಜೆಪಿ ಪಕ್ಷದ ಹೇಳಿಕೆಯಾಗಿಲ್ಲ. ಯತ್ನಾಳ್ ಅಲ್ಪಸಂಖ್ಯಾತ ಮೀಸಲಾತಿ ಬಗ್ಗೆ ಹೇಳಿದ್ದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದರು. ಈಗಾಗಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುವ ಸಂಬಂಧ ನೋಟಿಸ್ ನೀಡಲಾಗಿತ್ತು. ಅವರಿಂದ ಉತ್ತರವನ್ನು ಪಡೆಯಲಾಗಿದೆ. ಅವರ ಸ್ವಭಾವವೇ ಹಾಗೆ ಆಗಿದ್ದು, ಅದಕ್ಕೆ ಏನೂ ಮಾಡೋದಕ್ಕೆ ಆಗೋದಿಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಗುಬ್ಬಿ: ತಾಲೂಕಿನ ಕಡಬ ಹೋಬಳಿ ಕಲ್ಲೂರು ಗ್ರಾಮದ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವೇಳೆ  ಆಕಸ್ಮಿಕವಾಗಿ ಕೆರೆಗೆ ಬಿದ್ದು ನಟರಾಜು ಹಾಗೂ ಹನುಮಂತು  ನೀರುಪಾಲಾಗಿದ್ದರು. ಈ ಪೈಕಿ ಓರ್ವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳ ಭಾನುವಾರ ಪೂರ್ತಿ ಕೆರೆಯ ನೀರಿನಲ್ಲಿ ಹುಡುಕಿತ್ತು. ಆದರೆ ಇಂದು ಬೆಳಗ್ಗೆ 9 ಗಂಟೆಯ ವೇಳೆಗೆ ಬಿಳಿ ನಂದಿಯ ಬಳಿ ನಟರಾಜ್ ಅವರ ಶವ ಪತ್ತೆಯಾಗಿದೆ. ಆದರೆ ಹನುಮಂತು ಅವರ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಹನುಮಂತ ಅವರ ಮೃತದೇಹಕ್ಕಾಗಿ  ಶೋಧ ಕಾರ್ಯ ಮುಂದುವರೆದಿದ್ದು, ಅಗ್ನಿಶಾಮಕ ದಳ ಪೊಲೀಸ್ ಇಲಾಖೆ ನಿರಂತರ ಪ್ರಯತ್ನದಲ್ಲಿದೆ. ವರದಿ: ಮಂಜುನಾಥ್ ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More