Author: admin

ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಕಾಣಿಸಿಕೊಂಡಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಬೆಂಗಳೂರಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯ ಬಳಿಕ, ಬೆಳ್ಳಂದೂರು ಕೆರೆಯಲ್ಲಿ ಭಾರೀ ಪ್ರಮಾಣದಲ್ಲಿ ನೊರೆ ಕಾಣಿಸಿಕೊಳ್ಳುತ್ತಿದೆ. ಕೆರೆಗೆ ನೀರಿನ ಹರಿವು ಹೆಚ್ಚಾಗಿದ್ದರಿಂದ ನೊರೆ ಪ್ರಮಾಣವು ಏರಿಕೆಯಾಗಿದೆಯಂತೆ. ಬೆಳ್ಳಂದೂರು ಕೆರೆ ಕಲುಷಿತವಾಗಿದೆಂದು ಸ್ಥಳೀಯರು ಆತಂಕಗೊಂಡಿದ್ದಾರೆ. ಬೆಳ್ಳಂದೂರು, ಕರಿಯಮ್ಮ ಅಗ್ರಹಾರ, ಯಮಲೂರು, ಕೆಂಪಾಪುರ, ಚಲಘಟ್ಟ, ನಾಗಸಂದ್ರ ಇಬ್ಬಲೂರು, ದೇವರ ಬೀಸನಹಳ್ಳಿ ಕಾಡುಬೀಸನಹಳ್ಳಿ ಪ್ರದೇಶದ ಜನರಿಗೆ ಮತ್ತೆ ತೊಂದರೆ ಉಂಟಾಗಿದ್ದು, ಪದೇ ಪದೇ ಬೆಳ್ಳಂದೂರು ಕೆರೆಯಲ್ಲಿ ದೊಡ್ಡ ಪ್ರಮಾಣದಲ್ಲಿ ನೊರೆ ಕಾಣಿಸಿಕೊಳ್ಳುತ್ತಿದೆ. ಸಂಸ್ಕರಿಸದ ಮಾಲಿನ್ಯಯುಕ್ತ ನೀರನ್ನು ಕೆರೆಗೆ ಬೀಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಈ ಹಿಂದೆಯೂ ಇಂತಹ ಹಲವು ಆರೋಪಗಳು ಬಂದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎನ್ನುವ ಆಕ್ರೋಶ ಕೇಳಿ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು:  ನಿವೃತ್ತ ಡಿಜಿ, ಐಜಿಪಿ ಓಂಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿ ಕೊಲೆ ಮಾಡಲು ಕಾರಣವಾದ ಹಲವು ಕಾರಣಗಳನ್ನು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ತನ್ನ ಬಗ್ಗೆ ವೈಯುಕ್ತಿಕವಾಗಿ ಗಮನ ಹರಿಸಿಲ್ಲ ಎಂದು ಪಲ್ಲವಿ  ಆರೋಪಿಸಿದ್ದಾರೆ. ಅಲ್ಲದೇ ಮಗಳಿಗೆ ಮದುವೆ ಮಾಡಿಲ್ಲ ಎಂದು ಕೋಪ ಕೂಡ ಅವರ ಮೇಲಿತ್ತಂತೆ. ತನ್ನ ಭಾಗದ ಕುಟುಂಬದ ಬಗ್ಗೆ ಹೆಚ್ಚು ಗಮನವಹಿಸುತ್ತಿದ್ದ  ಓಂ ಪ್ರಕಾಶ್, ಮನೆ ಸಮಸ್ಯೆಗಳಾದಾಗ ನೇರವಾಗಿ ಸಹೋದರಿ ಮನೆಗೆ ತೆರಳುತ್ತಿದ್ದರು. ಇನ್ನೊಂದೆಡೆ  ಐಶಾರಮಿ ಮನೆಯಲ್ಲಿದ್ರು ಮಗಳ ಕೈಗೆ ಖರ್ಚಿಗೆ ಹಣ ಕೊಡುತ್ತಿರಲಿಲ್ಲ ಎಂದು ಪತ್ನಿ ಪಲ್ಲವಿ ಆರೋಪಿಸಿದ್ದಾರೆ. ಸಂಪೂರ್ಣ ಹಣದ ವ್ಯವಹಾರವನ್ಮ ಓಂ ಪ್ರಕಾಶ್ ಒಬ್ಬರೇ ನೋಡಿಕೊಳ್ಳುತ್ತಿದ್ರು. ಈ ಹಿಂದೆ ಕೆಲ ಬಾರಿ ಜಗಳ ಮಾಡಿಕೊಂಡು ಪಲ್ಲವಿ ಮನೆ ಬಿಟ್ಟು ಹೋಗಿದ್ದರು. ಜಗಳದಿಂದ ನೊಂದು ಓಂ ಪ್ರಕಾಶ್ ತನ್ನನ್ನು ಕೊಲೆ ಮಾಡಬಹುದು ಎಂದೆಲ್ಲಾ  ಪಲ್ಲವಿ ಯೋಚಿಸುತ್ತಿದ್ದರು ಹೀಗಾಗಿ  ತಾನು ಕೊಲೆಯಾಗುವ ಬದಲು ತಾನೇ ಅವರನ್ನ ಕೊಲೆ ಮಾಡುವ ನಿರ್ಧಾರಕ್ಕೆ ಪತ್ನಿ ಬಂದಿದ್ದರು ಎನ್ನಲಾಗಿದೆ.…

Read More

ತುಮಕೂರು:   ಸಹೋದ್ಯೋಗಿ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿರುವ ಆರೋಪದಡಿ ತುಮಕೂರು ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದು, ಪತ್ರಕರ್ತನನ್ನು ಬಂಧಿಸಲಾಗಿದ್ದು, ನ್ಯಾಯಾಲಯವು 15 ದಿನಗಳ ಕಾಲ  ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ವಿರುದ್ಧ ಝೀ ಕನ್ನಡ ನ್ಯೂಸ್ ವರದಿಗಾರ ಜಿ.ಎನ್.ಮಂಜುನಾಥ್ (ಸಮಯ ಮಂಜು) ನೀಡಿರುವ ದೂರಿನ ಮೇರೆಗೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಮೇ 21ರಂದು ಬೆಳಿಗ್ಗೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ನಡೆದ ಇಡಿ ದಾಳಿಯ ವರದಿ ಮಾಡಲು ಝೀ ಕನ್ನಡ ನ್ಯೂಸ್ ವರದಿಗಾರ ಮಂಜುನಾಥ್ ಹೋಗಿದ್ದ ವೇಳೆ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ, ಏನಲೇ ನೀನು ಬಂದಿದ್ದೀಯಾ?  ನಿನಗೆ ನೀನೆ ಮಹಾಬುದ್ಧಿವಂತ ಅಂದ್ಕೊಂಡಿದ್ದೀಯಾ, ಏನೇ ಮಾಡಿದರೂ, ಕೀಳು ಜಾತಿನೇ, ಕೀಳು ಜಾತಿ ಬುದ್ಧಿ ಬಿಡಲ್ಲ… ಮಾದಿಗರ ಬುದ್ದಿ ಲದ್ದಿ ಎಂದು ಜಾತಿ ನಿಂದನೆ ಮಾಡಿ ಅವಾಚ್ಯವಾಗಿ…

Read More

ತಿಪಟೂರು: ಬೀದಿಯಲ್ಲಿ ಆಟವಾಡುತ್ತಿದ್ದ 6 ವರ್ಷದ ಮಗುವಿನ ಮೇಲೆ ದಾಳಿ ನಡೆಸಿದ ಬೀದಿನಾಯಿಗಳ ಹಿಂಡು ಮಗುವಿನ ತಲೆ ಹಾಗೂ ಹೊಟ್ಟೆಯನ್ನ ತಿಂದು ಹಾಕಿರುವ ಹೃದಯ ವಿದ್ರಾವಕ ಘಟನೆ ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಅಯ್ಯನಬಾವಿ ಬೋವಿ ಕಾಲೋನಿಯಲ್ಲಿ ನಡೆದಿದೆ. ಅಯ್ಯನಬಾವಿ ಗ್ರಾಮದ ನಿವಾಸಿ ಮಹಲಿಂಗಯ್ಯನವರ ಮಗಳು 6 ವರ್ಷದ ನವ್ಯ ಬೀದಿನಾಯಿಗಳ ದಾಳಿಗೊಳಗಾದ ನತದೃಷ್ಟೆ. ಮಧ್ಯಾಹ್ನ 4 ಗಂಟೆ ಸಮಯದಲ್ಲಿ  ಅಯ್ಯನ ಬಾವಿ ಗ್ರಾಮದ ತಮ್ಮ ಮನೆ ಮುಂದೆ ಆಟವಾಡುತ್ತಿದ್ದ, ನವ್ಯಾಳ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿವೆ. ದಾಳಿ ನಡೆಸಿದ ನಾಯಿಗಳು ಮಗುವಿನ ತಲೆಯ ಚರ್ಮವನ್ನ ಸಂಪೂರ್ಣವಾಗಿ ಕಿತ್ತುಹಾಕಿದ್ದು, ಹೊಟ್ಟೆಯನ್ನ ಕಿತ್ತು ಕರುಳು ಆಚೆ ಬರುವಂತೆ ಮಾಡಿವೆ. ಮಗುವಿನ ಮುಖ ಹಾಗೂ  ಕೈ, ಕಾಲು ತೊಡೆಭಾಗವನ್ನ ಕಿತ್ತು ಹಾಕಿವೆ. ರಕ್ತದ ಮಡುವಿನಲ್ಲಿ ಚೀರಾಡುತ್ತಿದ್ದ ಮಗುವನ್ನ ಕಂಡ ಸಾರ್ವಜನಿಕರು, ನಾಯಿಹಿಂಡನ್ನ ಓಡಿಸಿ ಮಗುವನ್ನ ತಕ್ಷಣ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗು ತೀವ್ರವಾಗಿ ಗಾಯಗೊಂಡಿದ್ದು ಹೆಚ್ಚಿನ ರಕ್ತಸ್ರಾವವಾದ ಕಾರಣ ಹೆಚ್ಚಿನ…

Read More

ಹಾಸನ: ವಿರಾಜಪೇಟೆ ಕಾಂಗ್ರೆಸ್​ ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ 35 ವರ್ಷದ ಶೃತಿ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶೃತಿ ಮನೆಯಲ್ಲಿಯೇ ವಿಷ ಸೇವಿಸಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಹೀಗಾಗಿ ಅವರನ್ನು ಹಾಸನದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತಿಪಟೂರು: ಬೀದಿಯಲ್ಲಿ ಆಟವಾಡುತ್ತಿದ್ದ 6ವರ್ಷದ ಮಗುವಿನ ಮೇಲೆ ದಾಳಿ ನಡೆಸಿದ ಬೀದಿನಾಯಿಗಳ ಹಿಂಡು ಮಗುವಿನ ತಲೆ ಹಾಗೂ ಹೊಟ್ಟೆಯನ್ನ ತಿಂದು ಹಾಕಿರುವ ಹೃದಯ ವಿದ್ರಾವಕ ಘಟನೆ ತಿಪಟೂರು ತಾಲ್ಲೋಕಿನ ಕಸಬಾ ಹೋಬಳಿ ಅಯ್ಯನಬಾವಿ ಬೋವಿ ಕಾಲೋನಿಯಲ್ಲಿ ನಡೆದಿದೆ. ಅಯ್ಯನಬಾವಿ ಗ್ರಾಮದ ನಿವಾಸಿ ಮಹಲಿಂಗಯ್ಯನವರ ಮಗಳು 6 ವರ್ಷದ ನವ್ಯ ಬೀದಿನಾಯಿಗಳ ದಾಳಿಗೊಳಗಾದ ನತದೃಷ್ಟೆ.  ಮಧ್ಯಾಹ್ನ 4 ಗಂಟೆ ಸಮಯದಲ್ಲಿ ಅಯ್ಯನ ಬಾವಿ ಗ್ರಾಮದ ತಮ್ಮ ಮನೆ ಮುಂದೆ ಆಟವಾಡುತ್ತಿದ್ದ ನವ್ಯಾಳ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿವೆ. ದಾಳಿ ನಡೆಸಿದ ನಾಯಿಗಳು ಮಗುವಿನ ತಲೆಯ ಚರ್ಮವನ್ನ ಸಂಪೂರ್ಣವಾಗಿ ಕಿತ್ತುಹಾಕಿದ್ದು. ಮಗುವಿನ ಹೊಟ್ಟೆ ಭಾಗ  ಕಿತ್ತು ತಿಂದಿದೆ. ಬೀದಿ ನಾಯಿಗಳ ದಾಳಿಯಿಂದ ಮಗು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದೆ. ಬೀದಿ ನಾಯಿಗಳು ಮಗುವಿನ ಹೊಟ್ಟೆಯನ್ನು  ಕಿತ್ತು ಕರುಳು ಆಚೆಬರುವಂತೆ ಮಾಡಿವೆ. ಮಗುವಿನ ಮುಖ ಹಾಗೂ ಕೈ.ಕಾಲು ತೊಡೆಭಾಗವನ್ನ ಕಿತ್ತು ಹಾಕಿವೆ. ರಕ್ತದ ಮಡುವಿನಲ್ಲಿ ಕೀರಾಡುತ್ತಿದ್ದ ಮಗುವನ್ನ ಕಂಡ ಸಾರ್ವಜನಿಕರು.ನಾಯಿಗಳನ್ನು ಓಡಿಸಿ…

Read More

ಕೊರಟಗೆರೆ : SSLC ಮರುಮೌಲ್ಯಮಾಪನ ಫಲಿತಾಂಶದಲ್ಲಿ ರವೀಂದ್ರ ಭಾರತಿ ಪ್ರೌಢಶಾಲೆ ವಿದ್ಯಾರ್ಥಿ ಸೃಜನ್ ಎಂ.ಎನ್ 620(99.2%) ಅಂಕದೊಂದಿಗೆ ರಾಜ್ಯಕ್ಕೆ ಆರನೇ ರ‍್ಯಾಂಕ್, ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದು ಸಂಸ್ಥೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾನೆ. ಮೇ 2ರಂದು ಕರ್ನಾಟಕ ಪ್ರೌಢ ಶಿಕ್ಷಣಾ ಮಂಡಳಿಯಿಂದ ಬಿಡುಗಡೆಗೊಂಡ ಎಸ್‌ ಎಸ್‌ ಎಲ್‌ ಸಿ ಫಲಿತಾಂಶದಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮರು ಮೌಲ್ಯಪನಕ್ಕೆ ಶಾಲೆಯ 4 ಮಂದಿ ವಿದ್ಯಾರ್ಥಿಗಳು ಅರ್ಜಿ ಹಾಕಿದ್ದರು. ಈ ವಿದ್ಯಾರ್ಥಿಗಳಲ್ಲಿ ಸೃಜನ್ ಎಂ.ಎನ್ ಹಿಂದಿ, ಗಣ ತ, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ, ಉಳಿದ ಮೂರು ವಿಷಯಗಳಲ್ಲಿ ಕನ್ನಡ 123 , ಇಂಗ್ಲೀಷ್ 99, ಸಮಾಜ ವಿಜ್ಞಾನ 98 ಒಟ್ಟು 620 ಅಂಕ ಪಡೆದಿದ್ದಾನೆ. ರಾಜ್ಯಕ್ಕೆ 6 ನೇ ರ‍್ಯಾಂಕ್ ಪಡೆದು ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಯ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಉಳಿದ ಮೂರು ವಿದ್ಯಾರ್ಥಿಗಳಲ್ಲಿ ವರ್ಷಿಣ  ಟಿ.ವಿ 603 ಅಂಕ, ದೀಕ್ಷಿತ…

Read More

ತುರುವೇಕೆರೆ : ಬಸವ ಜಯಂತಿಯ ಅಂಗವಾಗಿ ಆಪರೇಷನ್ ಸಿಂಧೂರದ ವೀರ ಯೋಧರಿಗೆ ಬಲ ನೀಡುವ ನಿಟ್ಟಿನಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ ಆಚರಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತುರುವೇಕೆರೆ ತಾಲೂಕು ಘಟಕದ ಅಧ್ಯಕ್ಷ ಎಸ್.ಎಂ.ಕುಮಾರಸ್ವಾಮಿ ಅವರು ತಿಳಿಸಿದರು. ಮಾಯಸಂದ್ರ ರಸ್ತೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ದಿನಾಂಕ 29–05–2025ರ ಗುರುವಾರ ತುರುವೇಕೆರೆ ಪಟ್ಟಣದಲ್ಲಿ ಬಸವ ಜಯಂತಿ ಮತ್ತು ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ವತಿಯಿಂದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಬೆಳಗ್ಗೆ 7:30ಕ್ಕೆ ಪೂಜಾ ಕಾರ್ಯಕ್ರಮ ಮತ್ತು 11 ಗಂಟೆಗೆ ಧಾರ್ಮಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕಿನ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ದಿವ್ಯ ಸಾನಿಧ್ಯವನ್ನು ವಿರಕ್ತ ಮಠದ  ಶ್ರೀ ಶ್ರೀ ಕರಿ ವೃಷಭ ದೇಶಿ ಕೇಂದ್ರ ಮಹಾಸ್ವಾಮೀಜಿಯವರು ವಹಿಸಲಿದ್ದು, ಗುಬ್ಬಿ ತಾಲೂಕಿನ ಗೊಲ್ಲಹಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಮಹಾಸಂಸ್ಥಾನದ ಶ್ರೀಗಳಾದ ಡಾ.ಶ್ರೀ ಶ್ರೀ ವಿಭವ ವಿದ್ಯಾಶಂಕರ…

Read More

ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್‌ ಸೋಪ್‌ ಗೆ ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ಎದ್ದಿರುವ ವಿವಾದದ ಬೆನ್ನಲ್ಲೇ ಸ್ಯಾಂಡಲ್‌ ವುಡ್‌ ಕ್ವೀನ್ ರಮ್ಯಾ, ಮೈಸೂರು ಸ್ಯಾಂಡಲ್‌ ಸೋಪ್‌ ಗೆ ಪ್ರತಿ ಕನ್ನಡಿಗನೂ ರಾಯಭಾರಿ ಎಂದು ಹೇಳಿಕೊಂಡಿದ್ದಾರೆ. ತಮ್ಮ ಇನ್ಸ್ಟಾದಲ್ಲಿ ಸ್ಟೋರಿ ಹಂಚಿಕೊಂಡಿರುವ ಅವರು,  ಉತ್ಪನ್ನಗಳ ಪ್ರಮೋಷನ್‌ ಗೆ ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್‌ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು‌ ನಮ್ಮ ಪರಂಪರೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಕೊಡಗು: SSLC ಪರೀಕ್ಷೆ ಫಲಿತಾಂಶದಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದ ವಿದ್ಯಾರ್ಥಿ ಮರು ಮೌಲ್ಯಮಾಪನ ಬಳಿಕ ಕರ್ನಾಟಕಕ್ಕೆ ಪ್ರಥಮ ಸ್ಥಾನ ಬಂದಿದ್ದಾರೆ. ಮಡಿಕೇರಿಯ ತನ್ಮಯಿ ಎಂ. ಎನ್. ರಾಜ್ಯಕ್ಕೆ ಪ್ರಥಮ ಬಂದ ವಿದ್ಯಾರ್ಥಿ.  ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವ ತನ್ಮಯಿ, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ. ಎ. ನಿರಂಜನ್ ಮತ್ತು ಸೌಮ್ಯ ದಂಪತಿ ಪುತ್ರ. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೀರ್ತಿಗೆ ಪಾತ್ರನಾಗಿದ್ದಾನೆ. ಕರ್ನಾಟಕ ಶಿಕ್ಷಣ ಪರೀಕ್ಷಾ ಮಂಡಳಿ ಈ ಮುಂಚೆ ಪ್ರಕಟಿಸಿದ್ದ ಫಲಿತಾಂಶದಲ್ಲಿ ವಿದ್ಯಾರ್ಥಿ ತನ್ಮಯಿಗೆ 625ಕ್ಕೆ 622 ಅಂಕ ಪಡೆದುಕೊಂಡಿದ್ದ. ಆದರೆ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ತನ್ಮಯಿ, ಬಳಿಕ 625ಕ್ಕೆ 625 ಅಂಕ ಗಳಿಸಿದ್ದಾನೆ. ಆ ಮೂಲಕ ಮೊದಲನೇ ಸ್ಥಾನ ಗಿಟ್ಟಿಸಿಕೊಂಡಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More