Author: admin

ತುರುವೇಕೆರೆ: ತಾಲೂಕಿನ ಸುತ್ತಮುತ್ತ ಗ್ರಾಮದಲ್ಲಿ ಕೊಬ್ಬರಿ ಕಳ್ಳತನ ಹೆಚ್ಚಾಗಿದ್ದು, ರಾತ್ರಿ ಆಗೋದನ್ನೇ ಕಾಯುವ ಕಳ್ಳರು, ವ್ಯವಸ್ಥಿತವಾಗಿ ಕಳ್ಳತನ ನಡೆಸುತ್ತಿದ್ದು, ಕಳ್ಳತನಕ್ಕೂ ಮೊದಲು ಸಿಸಿ ಕ್ಯಾಮರಾಗಳ ಕೇಬಲ್ ಕಟ್ ಮಾಡಿ, ಸಾಕ್ಷಿ ನಾಶ ನಡೆಸುತ್ತಿದ್ದಾರೆ. ಕಳ್ಳರ ಹಾವಳಿಯಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಇನ್ನು ಇದೇ ತಿಂಗಳ 13ನೇ ತಾರೀಕಿನಂದು ತಾಲೂಕಿನ ಗೋಣಿ ತುಮಕೂರು ಗ್ರಾಮದ ವಾಸಿಯಾದ ರವೀಂದ್ರ ಕುಮಾರ್ ಅವರ ಮನೆಯಲ್ಲಿ ರಾತ್ರಿ 2 ಗಂಟೆಯ ಸುಮಾರಿಗೆ 1.68 ಲಕ್ಷ ರೂಪಾಯಿ ಬೆಲೆ ಬಾಳುವ  48 ಚೀಲ ಕೊಬ್ಬರಿಯನ್ನು ಕಳವು ಮಾಡಲಾಗಿದೆ. ಕಳ್ಳತನಕ್ಕೂ ಮೊದಲು ಸಿಸಿ ಟಿವಿಯ ಕೇಬಲ್ ಕಟ್ ಮಾಡಿರೋದೇ ಅಲ್ಲದೇ ಸಿಸಿ ಕ್ಯಾಮರಾದ ಕಣ್ಣಿಗೆ ಸೆಗಣಿ ಮೆತ್ತಿ, ಮನೆಗೆ ಹೊರಗಿನಿಂದ ಚಿಲಕ ಹಾಕಿ ಮನೆಯಿಂದ ಯಾರೂ ಹೊರಗೆ ಬಾರದಂತೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಕಳ್ಳತನಕ್ಕೂ ಮೊದಲು  ಅಶೋಕ್ ಲೈಲ್ಯಾಂಡ್ ಎಂಬ ಗೂಡ್ಸ್ ವಾಹನ ಮನೆಯ ಪಕ್ಕದ ರಸ್ತೆ ಬದಿಯಲ್ಲಿ ಸುಮಾರು ಹೊತ್ತಿನವರೆಗೆ ನಿಂತಿತ್ತು.  ಇದೇ ವಾಹನ ರಸ್ತೆಯಲ್ಲಿ ಚಲಿಸುತ್ತಿರುವ ದೃಶ್ಯ ಸಿಸಿ…

Read More

ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಅವರಿಂದು 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇವರು ಲೆಜೆಂಡರಿ ಸ್ಪಿನ್ನರ್. ದಶಕಗಳ ಕಾಲ ಟೀಮ್ ಇಂಡಿಯಾವನ್ನು ಆಳಿದ್ದ ಕುಂಬ್ಳೆ, 1999ರ ಫೆ.7ರಂದು ಪಾಕ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಮಾಡಿದ 10 ವಿಕೆಟ್ ಗಳ ದಾಖಲೆಯನ್ನು ಯಾರಾದರೂ ಮರೆಯಲು ಸಾಧ್ಯವೇ? ಇವರು ಲೆಗ್ ಸ್ಪಿನ್‌ಗೆ ವೇಗ & ಬೌನ್ಸ್ ಸೇರಿಸಿ ಬ್ಯಾಟ್ಸ್‌ಮನ್‌ಗಳನ್ನು ಒತ್ತಡಕ್ಕೆ ಸಿಲುಕಿಸುತ್ತಿದ್ದರು. ಹೀಗಾಗಿ ಸ್ಪಿನ್ ಮಾಂತ್ರಿಕನಿಗೆ ‘ಜಂಬೋ’ ಎನ್ನುವ ಅಡ್ಡಹೆಸರೂ ಇದೆ. 1970ರ ಅಕ್ಟೋಬರ್ 17ರಂದು ಅನಿಲ್ ಕೃಷ್ಣಸ್ವಾಮಿ ಕುಂಬ್ಳೆ ಬೆಂಗಳೂರಿನಲ್ಲಿ ಜನಿಸಿದ್ದರು. ಇವರ ತಂದೆ ಕೃಷ್ಣಸ್ವಾಮಿ ಹಾಗೂ ತಾಯಿ ಸರೋಜ. ಪೋಷಕರು ಮೂಲತಃ ಕಾಸರಗೋಡು ಮೂಲದವರು. ಕುಂಬ್ಳೆ ಲೆಗ್ ಸ್ಪಿನ್ನರ್, ಇವರು ತಮ್ಮದೇ ಆದ ಬೌಲಿಂಗ್ ಶೈಲಿಗೆ ಹೆಸರುವಾಸಿಯಾಗಿದ್ದರು. ಚೇತನಾ ಅವರನ್ನು ಕುಂಬ್ಳೆ ವಿವಾಹವಾಗಿದ್ದು, ದಂಪತಿಗೆ ಪುತ್ರ ಮಯಾಸ್, ಪುತ್ರಿ ಸ್ವಸ್ತಿ ಹಾಗೂ ಆರುಣಿಯನ್ನು ದತ್ತು ಪುತ್ರಿಯನ್ನಾಗಿ ಪಡೆದಿದ್ದಾರೆ. ಜುಂಬೋ ಜೆಟ್ ಎಂದೇ ಹೆಸರಾಗಿದ್ದ ಅನಿಲ್ ಕುಂಬ್ಳೆ ಕ್ರಿಕೆಟ್ ಲೋಕದ ಅದ್ಭುತ…

Read More

ಹೆಚ್.ಡಿ.ಕೋಟೆ: ಧಾರಾಕಾರ ಮಳೆಯಿಂದಾಗಿ ಹೆಚ್.ಡಿ.ಕೋಟೆ ತಾಲ್ಲೂಕಿನ ಮಲಾರ ಕಾಲೋನಿಗೆ ಸಂಪರ್ಕಕಲ್ಪಿಸುವ ರಸ್ತೆ ಜಲಾವೃತವಾಗಿದೆ. ಕಾಲುವೆಗೆ ತಡೆಗೋಡೆ ಇಲ್ಲದೆ  ಇರುವುದರಿಂದ ಕಾಲುವೆಯ ನೀರು ರಸ್ತೆಗೆ ನುಗ್ಗಿ ಜನ ಜಾನುವಾರಗಳಿಗೆ ಸಂಕಷ್ಟ ಸೃಷ್ಟಿಯಾಗಿದೆ. ರಸ್ತೆಯಲ್ಲಿ ನೀರು ಹರಿಯುತ್ತಿರೋದ್ರಿಂದಾಗಿ  ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಗಿದೆ. ಶಾಸಕರು ಹಾಗೂ ಅಧಿಕಾರಿಗಳು ಇತ್ತ ಗಮನ ಹರಿಸುವಂತೆ ಇಲ್ಲಿನ ನಾಗರಿಕರು ಒತ್ತಾಯಿಸಿದ್ದಾರೆ. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೆಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಯ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ಇದುವರೆಗೂ ಪಿಂಚಣಿ ಕಾಣದ ಒಂದೇ ಗ್ರಾಮದ 25 ಜನ ವೃದ್ಧರಿಗೆ   ಸ್ಥಳದಲ್ಲಿಯೇ ಪಿಂಚಣಿ ಮಂಜೂರಾತಿ ಪತ್ರವನ್ನು ತಹಶೀಲ್ದಾರ್ ನಹಿದಾ ಜಮ್ ಜಮ್ ನೀಡಿದರು. ಬಳಿಕ ಮಾತನಾಡಿದ ಅವರು, ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಈ ಬಾರಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೆಪಾಳ್ಯ  ಗ್ರಾಮದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ  ನಮ್ಮ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ನಿಮ್ಮ ಈ ಗ್ರಾಮದಲ್ಲಿ ಇರುತ್ತಾರೆ. ಸ್ಥಳೀಯ ಸಾರ್ವಜನಿಕರ  ಕುಂದು ಕೊರತೆಗಳ ಸಮಸ್ಯೆಗಳನ್ನು ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ. ಇದರಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟಂತೆ ಸುಮಾರು 47 ಅರ್ಜಿಗಳು ನಮ್ಮ ಬಳಿ ಸಾರ್ವಜನಿಕರು ಕೊಟ್ಟಿದ್ದಾರೆ. ಕೂಡಲೇ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಜತೆಗೆ ಇದೇ ಗ್ರಾಮದ 25 ವೃದ್ಧರಿಗೆ ಪಿಂಚಣಿ ಪ್ರಮಾಣ ಪತ್ರವನ್ನು…

Read More

ದೇಶದಲ್ಲಿ ಕೇಂದ್ರದ ಗೃಹ ಸಚಿವರು ಹಲವಾರು ಭಾಷೆಗಳ ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ. ಹೀಗಾಗಿ ಈ ಬಗ್ಗೆ ಈಗಾಗಲೇ ತಮಿಳುನಾಡಿನ ಸಿಎಂ ಪ್ರತಿಭಟನೆ ಮಾಡಿದ್ದಾರೆ. ಪಶ್ಚಿಮ ಬಂಗಾಳ, ಕೇರಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಭಾಷೆಗಳನ್ನು ನಾಶ ಮಾಡಿ ಒಂದು ರಾಷ್ಟ್ರ ಕಟ್ಟೋಕೆ ಹೇಗೆ ಸಾಧ್ಯ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ, ಇನ್ನೊಂದು ಕಡೆ ಭಾಷೆಯ ದಬ್ಬಾಳಿಕೆ ಪ್ರಾರಂಭ ಆಗಿದೆ. ಒಂದು ರಾಷ್ಟ್ರ ಮಾಡಬೇಕು ಎಂದು ಬಿಜೆಪಿ ಹೇಳ್ತಿದ್ದಾರೆ. ಭಾಷೆಗಳನ್ನು ನಾಶ ಮಾಡಿ ಒಂದು ರಾಷ್ಟ್ರ ಕಟ್ಟೋಕೆ ಹೇಗೆ ಸಾಧ್ಯ? ಕೇಂದ್ರದ ಧೋರಣೆ ಸಂಪೂರ್ಣವಾಗಿ ಸ್ಥಗಿತಗೊಳಿಸಿ. ದೇಶದಲ್ಲಿ ಇರುವ ಸಮಸ್ಯೆ ಬಗೆಹರಿಸಿ ಎಂದು ಕಿಡಿಕಾರಿದರು. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು  ದೇಶಕ್ಕೆ ಮಾರಕ. ಒಂದೇ ನಾಣ್ಯದ ಎರಡೂ ಮುಖ. ದಕ್ಷಿಣ ಭಾರತದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಬಾಗಿಲು ಹಾಕಿದ್ದಾರೆ. ಕರ್ನಾಟಕದಲ್ಲೂ ಅದು ಬಹಳ…

Read More

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಇಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿದಂತೆ 332 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ 166 ಸಿವಿಲ್, 3 ಮೆಕ್ಯಾನಿಕಲ್ ಹುದ್ದೆಗಳ ಬರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರ ಹುದ್ದೆಗಳು, 58 ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುವುದು. ಅಕ್ಟೋಬರ್ 19 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 17 ಕೊನೆಯ ದಿನವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಕನ್ನಡ ಕಡ್ಡಾಯ ಪರೀಕ್ಷೆ ಬರೆಯಬೇಕಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ತೊಂದರೆಯಾದಲ್ಲಿ 18005728707 ಸಂಪರ್ಕಿಸುಬಹುದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ನವದೆಹಲಿ: ಮಕ್ಕಳ ಜನನ ಪ್ರಮಾಣದ ಜೊತೆಗೆ ಆಧಾರ್ ಕಾರ್ಡ್ ಕೂಡ ನೀಡಲು ಮುಂದಾಗಿದ್ದು, ಈಗಾಗಲೇ 16 ರಾಜ್ಯಗಳಲ್ಲಿ ನವಜಾತ ಶಿಶುಗಳ ಜನನ ಪ್ರಮಾಣದ ಜೊತೆಗೇ ಆಧಾರ್ ಕಾರ್ಡ್ ನೀಡಲಾಗುತ್ತಿದ್ದು, ಶೀಘ್ರವೇ ಎಲ್ಲಾ ರಾಜ್ಯಗಳಲ್ಲೂ ಜಾರಿಗೆ ಬರಲಿದೆ. ಈಗಾಗಲೇ ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳಲ್ಲಿ ಜನನ ಪ್ರಮಾಣ ಪತ್ರಕ್ಕೆ ಆಧಾರ್ ಅನ್ನು ಲಿಂಕ್ ಮಾಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಮಗುವಿನ ಜನನ ಪ್ರಮಾಣ ಪತ್ರ ವಿತರಣೆಯಾದ ಕೂಡಲೇ ಮಗುವಿನ ಹೆಸರಿನಲ್ಲಿ ಹೊಸ ಗುರುತಿನ ಸಂಖ್ಯೆ ನೋಂದಣಿಯಾಗಲಿದ್ದು, ಬಳಿಕ ಮಗುವಿನ ವಿಳಾಸವು ರವಾನೆ ಆದ ಕೂಡಲೇ ಆಧಾರ್ ಸಂಖ್ಯೆ ಸೃಷ್ಟಿಯಾಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೊರಟಗೆರೆ: ತಾಲ್ಲೂಕಿನಲ್ಲಿ ತಡರಾತ್ರಿ ಸುರಿದ ಭಾrI ಮಳೆಯಿಂದ  ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕೇಗೌಡನಹಳ್ಳಿ ಗ್ರಾಮದ ಪಕ್ಕದಲ್ಲಿರುವ ಹೊಂಗೆ ಹಳ್ಳದಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಆಹಾರ ಅರಸಿ ಬಂದ ಕರಡಿ ಮರಿ ಹಳ್ಳ ದಾಟಲು ಸಾಧ್ಯವಾಗದೆ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಳೆದ 3 ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಎಲ್ಲ ಹಳ್ಳ ಕೊಳ್ಳಗಳು ಕೆರೆಗಳು ತುಂಬಿ ಹರಿಯುತ್ತಿವೆ. ಹಳ್ಳದ ಹೆಚ್ಚಿನ ನೀರಿನ ರಭಸಕ್ಕೆ ಕೊಚ್ಚಿ ಹೋದ ಕರಡಿ ಮರಿ ದಾರುಣವಾಗಿ ಸಾವನ್ನಪ್ಪಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ “ಕರಡಿ 2 ವರ್ಷದ ಮರಿಯಾಗಿರುವುದರಿಂದ ಈಜು ಬರದೆ ಮುಳುಗಿ ಸಾವನ್ನಪ್ಪಿದೆ” ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ದೂರದ ಬೆಟ್ಟದಲ್ಲಿ ಕರಡಿ ಮರಿ ಮೃತ ದೇಹವನ್ನ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಿಳಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಬೆಳಗಾವಿ : ಲಿಂಗಾಯತ ಸಂಸ್ಥೆ ಬೆಳೆಯಲು ಕೋರೆ ಅವರು ಪಟ್ಟಿರುವ ಶ್ರಮ ರಾಜಕೀಯದ ರಂಗಕ್ಕೆ ನೀಡಿದ್ದರೆ ದೊಡ್ಡ ನಾಯಕರಾಗಿ ಹೊರಹೊಮ್ಮುತ್ತಿದ್ದರು. ಆದರೆ ಅವರು ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಅವರನ್ನು ದೊಡ್ಡವರನ್ನಾಗಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಡಾ. ಪ್ರಭಾಕರ ಕೋರೆ ಅವರು 75 ವರ್ಷದ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಕೋರೆ ಅವರು ಆದರ್ಶ ಜೀವನ ನಡೆಸಿದ್ದಾರೆ. ಕೆಎಲ್‍ ಇ ಸಂಸ್ಥೆ ಅವರ ಮುಂದಾಳತ್ವದಲ್ಲಿ ಗುಣಮಟ್ಟ ಉಳಿಸಿಕೊಂಡು ಮುನ್ನಡೆಸಿದರು. ಎಲ್ಲ ಸವಾಲುಗಳನ್ನು ಎದುರುರಿಸಿ ದೊಡ್ಡ ವಿಶ್ವ ವಿದ್ಯಾಲಯಯಾಗಿ ಕೆಎಲ್‍ಇಯನ್ನು ಪರಿವರ್ತಿಸಿದರು. ಗ್ರಾಮೀಣ ಭಾಗದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳನ್ನು ದೊಡ್ಡವರನ್ನಾಗಿ ಮಾಡಿದ್ದಾರೆ. ಕೆಎಲ್‍ಇ ಸಂಸ್ಥೆ ಸರಕಾರ ಮಾಡದ ಕೆಲಸ ಮಾಡುತ್ತಿದೆ. ಕೆಎಲ್‍ಇ ಸಂಸ್ಥೆಯ ಪ್ರೇರಣೆಯಿಂದ ಬೇರೆ ಜಿಲ್ಲೆಯಲ್ಲಿ ಬೇರೆ ಸಂಸ್ಥೆಗಳು ಕಾರ್ಯ ಮಾಡುತ್ತಿವೆ. ಅದಕ್ಕೆ ಕೆಎಲ್‍ಇ ಆದರ್ಶ ಕಾರಣ ಎಂದರು.…

Read More

ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ ದೊರೆಯಲಿದೆ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಶೀಘ್ರದಲ್ಲಿಯೇ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ. ಜನಸಂಕಲ್ಪ ಯಾತ್ರೆ ನಡುವೆಯೇ ದೆಹಲಿಗೆ ತೆರಳುತ್ತಿದ್ದೇನೆ. ಹೈಕಮಾಂಡ್ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುವುದು. ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಗಲಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More