Subscribe to Updates
Get the latest creative news from FooBar about art, design and business.
- ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
- ಕಪಿಲ ನದಿಗೆ 30 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಅನಿಲ್ ಚಿಕ್ಕಮಾದು
- ಕಣ್ಣಿನ ಉಚಿತ ತಪಾಸಣಾ ಶಿಬಿರ: ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ
- ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
- ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
- ತುಮಕೂರು | ಆರ್ ಎಸ್ ಎಸ್ ನಿಷೇಧಿಸಲು ಡಿಎಸ್ ಎಸ್ ಆಗ್ರಹ
- ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
- ಮನೆ–ಮನೆಗೆ ಪೊಲೀಸ್: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
Author: admin
ಮಹಾರಾಷ್ಟ್ರ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ದೀಪಾಲಿ ಶೀತಲ್ ಖಂಗರ್ (28) ಮತ್ತು ಮೂರು ಹಾಗೂ ಎರಡು ವರ್ಷದ ಹೆಣ್ಣುಮಕ್ಕಳು ಎಂದು ಗುರುತಿಸಲಾಗಿದೆ. ಇವರು ಭಂಡಾರ ತಾಲೂಕಿನ ತಿದ್ದಿ ಗ್ರಾಮದ ನಿವಾಸಿಗಳು ಎಂದು ಗೊತ್ತಾಗಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದೀಪಾಲಿ ತಮ್ಮ ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನದಿಯಲ್ಲಿ ಶವಗಳು ತೇಲಿಬಂದಿದ್ದು, ಆಗ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ರಾಜಕೀಯ ಪಕ್ಷಗಳು ಜಿದ್ದಿಗೆ ಬಿದ್ದಂತೆ ಮತದಾರರ ಓಲೈಕೆಗೆ ಮುಂದಾಗಿದ್ದು, ಹೊಸ ಹೊಸ ಯೋಜನೆ, ಅಭಿಯಾನದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇದೀಗ ಜೆಡಿಎಸ್ ನಾಯಕರು ಮನೆ ಮನೆಗೆ ಕನ್ನಡ ಬಾವುಟ ಅಭಿಯಾನಕ್ಕೆ ಸಜ್ಜಾಗಿದ್ದು, ನವೆಂಬರ್ 1ರಿಂದ ರಾಜ್ಯಾದ್ಯಂತ 15 ದಿನಗಳ ಕಾಲ ಕನ್ನಡ ಬಾವುಟ ಅಭಿಯಾನ ನಡೆಯಲಿದೆ. ರಾಷ್ಟ್ರಪ್ರೇಮದ ಜೊತೆಗೆ ರಾಜ್ಯ ಪ್ರೀತಿ ಸಂದೇಶ ಸಾರುವುದೇ ನಮ್ಮ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹರ್ ಘರ್ ತಿರಂಗಾ ಅಭಿಯಾನದ ಮಾದರಿಯಲ್ಲೇ ಮನೆ ಮನೆಗೂ ಕನ್ನಡ ಬಾವುಟ ಅಭಿಯಾನ ಆರಂಭಿಸಲಾಗುತ್ತಿದೆ. ನವೆಂಬರ್. 1 ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಂದಿನಿಂದ ನ.15ರವರೆಗೆ ಮನೆ ಮನೆಗೆ ಕನ್ನಡ ಬಾವುಟ ವಿತರಿಸಲಾಗುವುದು ಎಂದು ಹೇಳಿದ್ದಾರೆ. ಒಂದು ರಾಷ್ಟ್ರ ಒಂದು ಭಾಷೆ ಎಂಬ ನಿಟ್ಟಿನಲ್ಲಿ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಎಲ್ಲಾ ಭಾಷೆಗಳನ್ನು ನಾಶ ಮಾಡಿ ಒಂದು ಭಾಷೆ ಎಂದು ಮಾಡಲು ಹೊರಟಂತಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ದೇಶಕ್ಕೆ ಮಾರಕವಾಗಿವೆ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ…
ಕೊರಟಗೆರೆ : ಇಸ್ಲಾಂ ಧರ್ಮದ ಮುಸ್ಲಿಂ ಸಮುದಾಯದಲ್ಲಿರುವ ಉಪ ಜಾತಿಯಾದ ಪಿಂಜಾರ/ನದಾಫ್ ಜನಾಂಗದವರಿಗೆ ಪ್ರವರ್ಗ -1ರ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಕೊರಟಗೆರೆ ತಹಶೀಲ್ದಾರ್ ನಹಿದ ಜಂ ಜಂ ರವರಿಗೆ ಮನವಿ ಸಲ್ಲಿಸಲಾಯಿತು. ತುಮಕೂರು ಜಿಲ್ಲಾ ಪಿಂಜಾರ/ನದಾಫ್ ಸಂಘದ ಜಿಲ್ಲಾಧ್ಯಕ್ಷರಾದ ಬಶೀರ್ ಅಹಮದ್ ಮಾತನಾಡಿ, 1993-94ರ ಹಿಂದೆ ಧಾರ್ಮಿಕವಾಗಿ ಇಸ್ಲಾಂ ಧರ್ಮದ ಅನುಯಾಯಿಗಳು ಆಗಿರುವ ಪಿಂಜಾರ ನದಾಫ್ ಸಮುದಾಯದ ಸದಸ್ಯರುಗಳು ಶಾಲಾ ದಾಖಲಾತಿ ವೇಳೆ ಹಾಗೂ ಇತರೆ ದಾಖಲಾತಿಗಳನ್ನು ಪಡೆಯುವ ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರದಲ್ಲಿ ಉಪಜಾತಿ ಕಾಲಂ ಇಲ್ಲದೆ ಇದ್ದದ್ದರಿಂದ ಇಸ್ಲಾಂ ಅಥವಾ ಮುಸ್ಲಿಂ ಎಂದು ನಮೂದಿಸಿದ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗಳು ಮತ್ತು ಸರ್ಕಾರ ನಿರ್ವಹಿಸುತ್ತಿದ್ದು ಕಂಡುಬಂದಿದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಆದೇಶದಂತೆ ಪಿಂಜಾರ ನದಾಫ್ ಪಂಗಡದ ಸದಸ್ಯರು ಪ್ರವರ್ಗ -೧ರ ಜಾತಿ ಪ್ರಮಾಣ ಪತ್ರ ಪಡೆಯಲು ಅರ್ಹರಾಗಿರುತ್ತಾರೆ ಎಂದರು. ಸಮುದಾಯದ ಏಳಿಗೆಗಾಗಿ ಮತ್ತು ಅಭಿವೃದ್ಧಿಗಾಗಿ ಪಿಂಜಾರ/ನದಾಫ್ ಸಂಘದ ಹಾಗೂ ಸ್ಥಳೀಯ ಸಾಕ್ಷಿ ಮತ್ತು ಆಧಾರದ ಮೇರೆಗೆ…
ಕೊರಟಗೆರೆ: ಪಟ್ಟಣದ ಬೈಪಾಸ್ ರಸ್ತೆಯಲ್ಲಿ ರಾತ್ರಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬೈಕ್ ಸವಾರ ವೆಂಕಟರಮಣಪ್ಪ (38)ವರ್ಷ ಕೊರಟಗೆರೆಯ ಬೈಪಾಸ್ ರಸ್ತೆಯಲ್ಲಿರುವ ನವೀನ್ ಬಾರ್&ರೆಸ್ಟೋರೆಂಟ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಎದುರಿನಿಂದ ಬಂದ ಲಾರಿ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವೆಂಕಟರಮಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ . ಬೈಕ್ ಸವಾರ ಸಾವನ್ನಪ್ಪಿದ ಕೂಡಲೇ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ವಿಷಯ ತಿಳಿದ ತಕ್ಷಣವೇ ಘಟನೆ ನಡೆದ ಸ್ಥಳಕ್ಕೆ ಬಂದ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಕೊರಟಗೆರೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವೆಂಕಟರಮಣಪ್ಪನವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ. ನಮ್ಮತುಮಕೂರು.ಕಾಂನ…
ರಾಯಚೂರು : ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧ ವಿಚಾರವಾಗಿ ಸಚಿವ ಆರ್. ಆಶೋಕ್ ಮಾತನಾಡಿ ಕನ್ನಡ ಭವನ ಮಾಡೇ ಮಾಡುತ್ತೇವೆ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಸಚಿವ ಆರ್. ಆಶೋಕ್ ಮಾತನಾಡಿ, ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧವಿದೆ ಆದರೂ ಮಹಾರಾಷ್ಟ್ರದಲ್ಲಿ ಕನ್ನಡ ಭವನ ಮಾಡೇ ಮಾಡುತ್ತೇವೆ ಎಂದಿದ್ದಾರೆ. ನಮ್ಮ ರಾಜ್ಯದಲ್ಲಿ ಶಿವಾಜಿ ಮೂರ್ತಿಗಲು ಇವೆ. ಉತ್ತರ ಭಾರತದವರಿಗೂ ನಾನು ಇಲ್ಲಿ ಜಾಗ ಕೊಟ್ಟಿದ್ದೇವೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಕನ್ನಡ ಭವನ ನಿರ್ಮಣ ಮಾಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಾಸನ: ಕೆಎಸ್ಆರ್ ಟಿಸಿ ಬಸ್, ಟ್ಯಾಂಕರ್, ಟಿಟಿ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 9 ಜನ ಸಾವನ್ನಪ್ಪಿದ ಘಟನೆ ತಡರಾತ್ರಿಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಳ್ಳಿಕೆರೆ ಗ್ರಾಮದ ಬಳಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮಕ್ಕಳು ಸೇರಿದಂತೆ 9 ಜನ ಸಾವನ್ನಪ್ಪಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಿಟಿ ವಾಹನ ಟ್ಯಾಂಕರ್ ಓವರ್ ಟೇಕ್ ಮಾಡುವಾಗ ಎದುರಿನಿಂದ ಬಂದ ಕೆಎಸ್ಆರ್.ಟಿ.ಸಿ. ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ತಾಲ್ಲೂಕಿನಲ್ಲಿ ಸುಮಾರು 12 ವರ್ಷಗಳಿಂದ ಕರ್ನಾಟಕದ ರಕ್ಷಣಾ ವೇದಿಕೆ (ಟಿ.ಎ.ನಾರಾಯಣ ಗೌಡರ ಬಣ) ಕನ್ನಡ ಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ಕನ್ನಡ ಪರ ಹೋರಾಟಗಳಲ್ಲಿ ತೊಡಗಿದ್ದ ಕೆ.ಎನ್.ನಟರಾಜು ತಾಲ್ಲೂಕು ಅಧ್ಯಕ್ಷನಾಗಿ ಕನ್ನಡ ನಾಡಿನ ನೆಲ,ಜಲ,ಭಾಷೆ, ವಿಚಾರವಾಗಿ ಸತತ ಹೋರಾಟಗಳನ್ನು ನಡೆಸಿಕೊಂಡು ತಾಲ್ಲೂಕಿನಲ್ಲಿ ನೂರಾರು ಹೋರಾಟಗಳನ್ನು ಮಾಡಿ ನೊಂದವರ ಪರ ಧ್ವನಿಯಾಗಿ ಕನ್ನಡ ಪರ ಸಂಘಟನೆಗಳ ಹೋರಾಟಗಳಲ್ಲಿ ಮುಂಚೂಣಿ ನಾಯಕರಾಗಿ ತಾಲ್ಲೂಕಿನಲ್ಲಿ ಹೊರಹೊಮ್ಮಿದ್ದಾರೆ. ಆದರೆ, ಕೆಲವು ದಿನಗಳ ಹಿಂದೆ ರಾಜಕೀಯ ಪ್ರೇರಿತವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಕೆ ಎನ್ ನಟರಾಜು ರವರನ್ನು ಯಾವುದೋ ದುರುದ್ದೇಶಕ್ಕೆ ಅಧ್ಯಕ್ಷ ಸ್ಥಾನದಿಂದ ವಜಾಗೋಳಿಸಿರುವುದು ತಾಲ್ಲೂಕಿನ ಕರವೇ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ತುಮಕೂರು ಜಿಲ್ಲಾಧ್ಯಕ್ಷ ಮಂಜುನಾಥ್ ಗೌಡ ಕಾರಣರಾಗಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕಲಿಂ ವುಲ್ಲ, ಸುಮಾರು 12 ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಮತ್ತು ಕನ್ನಡಪರ ಕಾರ್ಯಕ್ರಮಗಳಲ್ಲಿ ನಿರಂತರವಾದ ಸೇವೆ ಸಲ್ಲಿಸಿಕೊಂಡು ಬಂದಿರುವ ಕರವೇ ಅಧ್ಯಕ್ಷ ಕೆ.ನಟರಾಜ್ ರವರನ್ನು…
ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸುವುದಕ್ಕೆ ಅನುಮತಿ ನೀಡಲು ವಾರಣಾಸಿ ಜಿಲ್ಲಾ ಕೋರ್ಟ್ ನಿರಾಕರಿಸಿದೆ. ಶಿವಲಿಂಗದ ವೈಜ್ಞಾನಿಕ ಅಧ್ಯಯನ ನಡೆಸಲು ಅನುಮತಿ ನೀಡುವಂತೆ ಕೋರಿ ಹಿಂದೂಗಳು ಸಲ್ಲಿಸಿದ್ಧ ಅರ್ಜಿಯನ್ನ ವಾರಣಾಸಿ ಜಿಲ್ಲಾಕೋರ್ಟ್ ನ್ಯಾಯಾಧೀಶ ಅಜಯ್ ಕೃಷ್ಣ ವಜಾಗೊಳಿಸಿದ್ದಾರೆ. ಈ ಮೂಲಕ ಜ್ಞಾನ್ವಾಪಿ ಮಸೀದಿ ಸಂಕೀರ್ಣದಲ್ಲಿ ‘ಶಿವಲಿಂಗ’ದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆ ನಡೆಸಬೇಕೆಂಬ ಹಿಂದೂ ಪಕ್ಷದ ಬೇಡಿಕೆ ತಿರಸ್ಕೃತವಾಗಿದೆ. ಕಾರ್ಬನ್ ಡೇಟಿಂಗ್ ನಡೆಸಿದರೇ ಸಾಕ್ಷಿಗೆ ಹಾನಿಯಾಗಬಹುದು. ಜಾಗವನ್ನ ಸೀಲ್ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ ಎಂದು ಸುಪ್ರೀಂ ಆದೇಶ ಉಲ್ಲೇಖಿಸಿ ಈ ಮಹತ್ವದ ತೀರ್ಪನ್ನ ಕೋರ್ಟ್ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಕರಾವಳಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ. ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ 5 ದಿನ ಮಳೆಯಾಗಲಿದೆ. ತಗ್ಗು ಪ್ರದೇಶದ ಜನ ಎಚ್ಚರದಿಂದಿರಲು ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಉತ್ತರಕನ್ನಡ, ದಕ್ಷಿಣಕನ್ನಡ, ಬಾಗಲಕೋಟೆ, ಧಾರವಾಡ ಗದಗ ಹಾವೇರಿ ಬಳ್ಳಾರಿ ಸೇರಿ 17ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಳೆರಾಯ ಅಬ್ಬರಿಸಲಿದ್ದು, ಜಿಲ್ಲಾಧಿಕಾರಿಗಳಿಗೆ ಮುಂಜಾಗ್ರತೆ ವಹಿಸಲು ಸೂಚನೆ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಪ್ರಮಾಣವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಗೊಂಡಿರುವ ಪ್ರಸನ್ನ ಬಾಲಚಂದ್ರ ವರಳೆ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy