Subscribe to Updates
Get the latest creative news from FooBar about art, design and business.
- ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
- ಕಪಿಲ ನದಿಗೆ 30 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಅನಿಲ್ ಚಿಕ್ಕಮಾದು
- ಕಣ್ಣಿನ ಉಚಿತ ತಪಾಸಣಾ ಶಿಬಿರ: ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ
- ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
- ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
- ತುಮಕೂರು | ಆರ್ ಎಸ್ ಎಸ್ ನಿಷೇಧಿಸಲು ಡಿಎಸ್ ಎಸ್ ಆಗ್ರಹ
- ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
- ಮನೆ–ಮನೆಗೆ ಪೊಲೀಸ್: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
Author: admin
ಧಾರವಾಡ: ಬ್ಯಾಂಕ್ನ ಎಟಿಎಂನಿಂದ ಹಣ ಬಾರದೇ ಅಕೌಂಟನಿಂದ ಕಟ್ ಆಗಿದ್ದ 500 ರೂಪಾಯಿ ಹಿಂದುರಿಗಿಸದ ಬ್ಯಾಂಕ್ಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಗ್ರಾಹಕನಿಗೆ 1,02,700 ರೂ.ಗಳ ಪರಿಹಾರ ನೀಡಬೇಕೆಂದು ಆದೇಶ ಹೊರಡಿಸಿದೆ. ಇಂಡಿಯನ್ ಓವರಸೀಸ್ ಬ್ಯಾಂಕಿನ ಶಾಖೆಯ ಗ್ರಾಹಕರಾದ ವಕೀಲ ಸಿದ್ದೇಶ ಹೆಬ್ಬಳ್ಳಿ ನವೆಂಬರ್ 28, 2020 ರಂದು ತಮ್ಮ ಎಟಿಎಂ ಕಾರ್ಡನಿಂದ 500 ರೂ. ಹಣ ತಗೆಯಲು ಪ್ರಯತ್ನಿಸಿದಾಗ ತನ್ನ ಉಳಿತಾಯ ಖಾತೆಯಿಂದ ಡೆಬಿಟ್ ಆದರೂ ತನಗೆ ಆ ಹಣ ಬಾರದ ಕಾರಣ ಮತ್ತೊಮ್ಮೆ ಪಕ್ಕದ ಎಟಿಎಂ ಮಶೀನಿನಿಂದ ಕಾರ್ಡಹಾಕಿ 500 ರೂ.ಪಡೆದಿದ್ದರು. ಇಂಡಿಯನ್ ಓವರಸೀಸ್ ಬ್ಯಾಂಕಿನ ಎಟಿಎಂ ಕಾರ್ಡ್‍ನಿಂದ ಮೊದಲನೇ ಸಲ ತೆಗೆದ 500 ರೂ. ತನಗೆ ಬಂದಿಲ್ಲವಾದರೂ ತನ್ನ ಖಾತೆಯಿಂದ ಡೆಬಿಟ್ ಆಗಿರುವ ಕುರಿತು ಡಿಸೆಂಬರ್ 02, 2020 ರಂದು ತಮ್ಮ ಖಾತೆಯಿರುವ ಇಂಡಿಯನ್ ಓವರಸೀಸ್ ಬ್ಯಾಂಕಿನ ಶಾಖಾ ವ್ಯವಸ್ತಾಪಕರಿಗೆ ದೂರು ಕೊಟ್ಟಿದ್ದರು. ಆದರೆ, ಸಿದ್ದೇಶ ಹೆಬ್ಬಳ್ಳಿ ಅವರು ನೀಡಿದ ದೂರು ಕುರಿತು ಶಾಖಾ ವ್ಯವಸ್ಥಾಪಕರು ಯಾವುದೇ…
ಹುಬ್ಬಳ್ಳಿ: ಕಳೆದೆರಡೂ ವರ್ಷಗಳಿಂದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟ ನಡೆಯುತ್ತಿದೆ. ಇನ್ನೊಂದೆಡೆ ಆ ಸಮುದಾಯವನ್ನ 2ಎ ಮೀಸಲಾತಿಗೆ ನೀಡಬಾರದು ಎಂಬ ಒತ್ತಡವೂ ಸರ್ಕಾರದ ಮೇಲಿದೆ. ಇದೀಗ ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಕ್ಕೆ ಸೆಡ್ಡು ಹೊಡೆದಿರುವ ಹಲವು ಸ್ವಾಮೀಜಿಗಳು ಚಿಂತನ ಮಂಥನ ನಡೆಸಲು ಮುಂದಾಗಿದ್ದಾರೆ. ಹುಬ್ಬಳ್ಳಿ ನಗರದ ಅಕ್ಕನ ಬಳಗದಲ್ಲಿ ನಡೆಯುವ ರಾಜ್ಯ ಮಟ್ಟದ ಹೋರಾಟ ಜಾಗೃತಿ ಕಾರ್ಯಕ್ರಮದಲ್ಲಿ ಹತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗಿಯಾಗಲಿದ್ದು, ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟ, ಹಡಪದ, ಗಂಗಾಮತ, ವಿಶ್ವಕರ್ಮ, ಮಡಿವಾಳ, ಚಿತ್ರಗಾರ, ಎಸ್.ಎಸ್.ಕೆ, ಮರಾಠ, ಗಾಣಿಗ, ಸಮಾಜ, ರಜಕ, ಉಪ್ಪಾರ, ಸೂರ್ಯವಂಶ ಸಮಾಜದ ಮುಖಂಡರು ಕೂಡ ಭಾಗಿಯಾಗಲಿದ್ದಾರೆ. ಪಂಚಮಸಾಲಿ ಸಮುದಾಯವು 2 ಎ ಮೀಸಲಾತಿ ಸಿಗದೆ ಹೋದರೆ ನವೆಂಬರ್ ಮೊದಲನೆಯ ವಾರದಲ್ಲಿ ವಿಧಾನಸಭೆ ಮುತ್ತಿಗೆ ಹಾಕಲಾಗುತ್ತದೆ, ವಿಧಾನಸಭೆ ಚುನಾವಣೆಯಲ್ಲಿ ಸರ್ಕಾರಕ್ಕೆ ಸಮುದಾಯದ ಶಕ್ತಿ ತೋರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ನಡುವೆ ಯಾವುದೇ ಕಾರಣಕ್ಕೂ ಪಂಚಮಸಾಲಿ ಸಮುದಾಯಕ್ಕೆ…
ಭುವನೇಶ್ವರ್: ಹನಿಟ್ರ್ಯಾಪ್ ಮಾಡಿ ಕೋಟಿಗಟ್ಟಲೆ ಹಣ ಮಾಡಿರುವ ಆರೋಪದ ಮೇಲೆ ಅರ್ಚನಾ ನಾಗ್ ಎಂಬಾಕೆಯನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. 18 ಶಾಸಕರು ಸೇರಿದಂತೆ 25 ಪ್ರಭಾವಿಗಳನ್ನು ತನ್ನ ಹನಿಟ್ರ್ಯಾಪ್ ಬಲೆಗೆ ಕಡೆವಿರುವುದಾಗಿ ತಿಳಿದುಬಂದಿದೆ. ಈ ವಿಚಾರ ಇದೀಗ ಒಡಿಶಾ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಉಂಟು ಮಾಡಿದೆ. ಹನಿಟ್ರ್ಯಾಪ್ಗೆ ಒಳಗಾದ ಶಾಸಕರಲ್ಲಿ ಬಹುತೇಕರು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರದ ಸದಸ್ಯರಾಗಿದ್ದಾರೆ. ಪೊಲೀಸರು ಈ ಪ್ರಕರಣವನ್ನು ಗುಟ್ಟಾಗಿ ನಿಭಾಯಿಸಿದ ಬಗ್ಗೆ ಈ ಹಿಂದೆ ಅನೇಕ ಪ್ರಶ್ನೆಗಳು ಎದ್ದಿದ್ದವು. ಅರ್ಚನಾಳನ್ನು ಬಂಧಿಸಿ ಒಂದು ವಾರ ಕಳೆದರೂ ಆಕೆಯ ವಿಚಾರಣೆಯನ್ನು ಯಾಕೆ ನಡೆಸಲಿಲ್ಲ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಅರ್ಚನಾ ಮತ್ತು ಆಕೆಯ ಪತಿ ಜಗಬಂಧು ಚಂದ್ ಅವರು ಅನೇಕ ರಾಜಕಾರಣಿಗಳು ಮತ್ತು ಪ್ರಭಾವಿ ವ್ಯಕ್ತಿಗಳೊಂದಿಗೆ ಇರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕೆಲವು ರಾಜಕಾರಣಿಗಳು ಅರ್ಚನಾ ಪರಿಚಯವನ್ನು ಒಪ್ಪಿಕೊಂಡರೆ, ಇನ್ನು ಕೆಲವರು ಆಕೆಯೊಂದಿಗಿನ ಸಂಬಂಧವನ್ನು ನಿರಾಕರಿಸಿದ್ದಾರೆ. ಅಲ್ಲದೆ, ಪೊಲೀಸರು ಸಹ ಎಲ್ಲಾ…
ಪಣಜಿ: ನಿರಂತರವಾಗಿ ಸುರಿದ ಭಾರೀ ಮಳೆಗೆ ದಕ್ಷಿಣ ಗೋವಾದ ಪ್ರಸಿದ್ಧ ದೂಧ್ ಸಾಗರ್ ಜಲಪಾತದಲ್ಲಿ ಕೇಬಲ್ ಸೇತುವೆ ಕುಸಿದು ಬಿದ್ದಿದ್ದು, 40ಕ್ಕೂ ಹೆಚ್ಚು ಪ್ರವಾಸಿಗರನ್ನ ರಕ್ಷಿಸಲಾಗಿದೆ. ಶುಕ್ರವಾರ ಸಂಜೆ ಘಟನೆ ಈ ನಡೆದಿದ್ದು, ಗೋವಾ – ಕರ್ನಾಟಕ ಗಡಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಪಾತದ ನೀರಿನ ಮಟ್ಟ ಏರಿಕೆಯಾಗಿದೆ. ಪರಿಣಾಮ ಸೇತುವೆ ಕುಸಿದಿದ್ದು, 40ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಅಪಾಯದಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಕೂಡಲೇ ದೃಷ್ಟಿ ಲೈಫ್ ಸೇವರ್ಸ್ ಸಹಾಯದಿಂದ ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ದೃಷ್ಟಿ ಲೈಫ್ ಸೇವರ್ಸ್‌ನ ಪಿಆರ್ಒ ಮಾಹಿತಿ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಜಾನುವಾರುಗಳ ಚರ್ಮಗಂಟು ರೋಗವನ್ನು ತಡೆಯಲು ಲಸಿಕೆ ಹಾಕಲು, ಚಿಕಿತ್ಸೆಗಾಗಿ ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ಒಟ್ಟು 13 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಜಾನುವಾರುಗಳ ಚರ್ಮಗಂಟು ರೋಗದ ಕುರಿತು ಪರಿಶೀಲನಾ ಸಭೆ ನಡೆಸಿದರು. ಮೃತ ರಾಸುಗಳ ಪರಿಹಾರಕ್ಕೆ 2 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 5 ಕೋಟಿ ರೂ. ಹಾಗೂ ಜಾನುವಾರುಗಳ ಚಿಕಿತ್ಸೆಗೆ ಮತ್ತು ಲಸಿಕೆಗೆ 8 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ರಾಜ್ಯದ 28 ಜಿಲ್ಲೆಗಳ 160 ತಾಲ್ಲೂಕುಗಳ 4380 ಗ್ರಾಮಗಳಲ್ಲಿ ಕಾಣಿಸಿಕೊಂಡಿವೆ. 45,645 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 26,135 ಜಾನುವಾರುಗಳು ಗುಣಮುಖವಾಗಿವೆ. 2070 ಜಾನುವಾರುಗಳು ಮರಣ ಹೊಂದಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಯಚೂರು: ಸಿರವಾರ ತಾಲೂಕು ಕವಿತಾಳ ಪಟ್ಟಣದಲ್ಲಿ. ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಗೆ ಹೊಲಗಳಲ್ಲಿ ನೀರು ನುಗ್ಗಿ ಹತ್ತಿ ತೊಗರಿ ಬೆಳೆ ನಾಶವಾಗಿರುತ್ತದೆ. ಮೌನೇಶ್ ತಂದೆ ಅಯ್ಯಾಳಪ್ಪ ಹಿರೇಕುರುಬರು ಇವರಿಗೆ ಸಂಬಂಧಿಸಿದ ಹೊಲದಲ್ಲಿ ಹತ್ತಿ ಹೊಲಕ್ಕೆ ನೀರು ನುಗ್ಗಿ ಬೆಳೆ ನಾಶ ಆಗುವುದಲ್ಲದೇ ಆತಂಕ ಉಂಟು ಮಾಡಿದೆ. ಎಕರೆಗೆ 15 ಸಾವಿರ ಖರ್ಚು ಮಾಡಿರುತ್ತಾರೆ. ಒಟ್ಟು 10 ಎಕರೆ ಹತ್ತಿ ಮತ್ತು ತೊಗರಿ ಹೊಲಕ್ಕೆ ನೀರು ನುಗ್ಗಿ ಇರುತ್ತದೆ ರೈತ ಆತಂಕದಲ್ಲಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಪರಿಹಾರವನ್ನು ದೊರಕಿಸಿಕೊಡಬೇಕೆಂದು. ರೈತ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೊಡೋ ಪಾದಯಾತ್ರೆಯಲ್ಲಿ ಭಾಗವಹಿಸಲು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ತೆರಳಿದರು. 150ಕ್ಕೂ ಹೆಚ್ಚು ವಾಹನಗಳಲ್ಲಿ ಹೊರಟ ಕಾರ್ಯಕರ್ತರಿಗೆ ಚನ್ನರಾಜ ಹಟ್ಟಿಹೊಳಿ ಮಾರ್ಗದರ್ಶನ ಮಾಡಿ, ಕಾರ್ಯಕರ್ತರ ಜೊತೆಯೇ ತೆರಳಿದರು. ಎಲ್ಲರೂ ಸಂಜೆಯ ಹೊತ್ತಿಗೆ ಬಳ್ಳಾರಿಯಲ್ಲಿ ಪಾದಯಾತ್ರೆ ಸೇರಿಕೊಂಡರು. ಪಾದಯಾತ್ರೆ ಕರ್ನಾಟಕ ಪ್ರವೇಶಿಸಿದ ದಿನದಿಂದಲೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಚನ್ನರಾಜ ಹಟ್ಟಿಹೊಳಿ ಮತ್ತು ಗ್ರಾಮೀಣ ಕ್ಷೇತ್ರದ ಸಹಸ್ರಾರು ಕಾರ್ಯಕರ್ತರು ಸೇರಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ : ತಾಲ್ಲೂಕು ವ್ಯಾಪ್ತಿಯ ಕಂಬತ್ತನಹಳ್ಳಿ ಬೈಪಾಸ್ ಹೊರ ವಲಯದ ಹೆದ್ದಾರಿ ಪಕ್ಕದ ಸರ್ಕಾರಿ ಜಾಗದಲ್ಲಿ ಸುಮಾರು ಮೂರ್ನಾಲ್ಕು ಲಾರಿ ಲೋಡ್ ಗಳಷ್ಟು ಅಕ್ರಮ ಮರಳು ಶೇಖರಣೆ ಮಾಡಿರುವ ಸ್ಥಳ ನೆನ್ನೆ ಕಂಡುಬಂದಿದೆ. ಮಧುಗಿರಿ ಉಪ ವಿಭಾಗದ ಮರಳು ಸಮಿತಿ ಸದಸ್ಯರ ಗಮನಕ್ಕೆ ಸ್ಥಳೀಯರು ಈ ವಿಚಾರವನ್ನು ತಿಳಿಸಿದಾಗ, ಖುದ್ದು ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಹಾಗೂ ಮಧುಗಿರಿ ಉಪ ವಿಭಾಗದ ಮರಳು ಸಮಿತಿ ಸದಸ್ಯರಾದ ಹಂದ್ರಾಳ ನಾಗಭೂಷಣ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ. ಇದೇ ವೇಳೆ ಸ್ಥಳದಿಂದಲೇ ತಹಶೀಲ್ದಾರ್ ಮತ್ತು ಉಪ ವಿಭಾಗ ಅಧಿಕಾರಿಗಳ, ಅಪಾರ ಜಿಲ್ಲಾಧಿಕಾರಿಗಳ,ಡಿವೈಎಸ್ಪಿ, ಗಮನಕ್ಕೆ ವಿಷಯವನ್ನು ನಾಗಭೂಷಣ್ ತಿಳಿಸಿದ್ದಾರೆ. ನಂತರ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಇವರೆಲ್ಲರೂ ಜಂಟಿ ಸಮೀಕ್ಷೆ ನಡೆಸಿದ್ದಾರೆ. ಪೊಲೀಸ್ ಇಲಾಖೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರಿಂದ ಅಕ್ರಮ ಮರಳು ದಾಸ್ತಾನು ಮಾಡಿರುವವರನ್ನು ಪತ್ತೆ ಹಚ್ಚಿಸಿ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಸದರಿ ಮರಳನ್ನು ನಿಯಮಾನುಸಾರ ಸೂಕ್ತ…
ಬೆಂಗಳೂರು: 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರವಾಗಿ ರಾಜ್ಯ ಸರ್ಕಾರ 124 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಕಂದಾಯ ಇಲಾಖೆ ಮೂಲಕ ಜಿಲ್ಲಾಧಿಕಾರಿಗಳ, ಪಿಡಿ ಖಾತೆಗೆ ಅನುದಾನ ಬಿಡುಗಡೆ ಮಾಡಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ನೆರೆ, ಪ್ರವಾಹ ಕೂಡ ಉಂಟಾಗಿದ್ದು, ಅನೇಕ ಪ್ರಮಾಣದಲ್ಲಿ ಹಾನಿಯಾಗಿದೆ. ಹೀಗಾಗಿ ಮೂಲಭೂತ ಸೌಕರ್ಯ ಹಾನಿ ಪರಿಹಾರಕ್ಕೆಂದು ರಾಜ್ಯ ಸರ್ಕಾರ 124 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ನಮಗೆ ಆದರ್ಶ ಹಾಗೂ ಪ್ರೇರಣೆ. ನಮ್ಮ ತೀರ್ಮಾನಗಳಿಗೆ ಈ ಮಹನೀಯರ ಬದುಕು, ವಿಚಾರಧಾರೆಯನ್ನು ಕೇಳಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಾಗಸೇನಾ ವಿದ್ಯಾಲಯದಲ್ಲಿ ಬುದ್ಧ, ಅಂಬೇಡ್ಕರ್ ಮಂಟಪ ಉದ್ಘಾಟನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಸ್ತುಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ತಮ್ಮ ಬದುಕನ್ನೇ ತ್ಯಾಗ ಮಾಡಿದ್ದರಿಂದ ಅವರು ಶಾಶ್ವತವಾಗಿರುತ್ತಾರೆ. ಆದರ್ಶಗಳನ್ನು ಬಿಡದವರು ಶಾಶ್ವತವಾಗಿರುತ್ತಾರೆ. ಆದರ್ಶಗಳನ್ನು ಬಿಟ್ಟವರು ಕಾಲಸೀಮಿತವಾಗಿರುತ್ತಾರೆ ಎಂದರು. ನಾಗಸೇನಾ ವಿದ್ಯಾಲಯಕ್ಕೆ ಅಗತ್ಯ ಅನುದಾನ: ನಾಗಸೇನಾ ವಿದ್ಯಾಲಯಕ್ಕೆ ಅಗತ್ಯ ಅನುದಾನವನ್ನು ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದ ಮುಖ್ಯಮಂತ್ರಿಗಳು ನಾನು ಒಬ್ಬ ಅಂಬೇಡ್ಕರ್, ಬುದ್ದ, ಬಸವ, ವಾಲ್ಮೀಕಿ ಭಕ್ತ. ಅಂಬೇಡ್ಕರ್ ಅವರ ಇಚ್ಛೆಯಂತೆ ಸಂಸ್ಥೆ ಬೆಳೆದಿದೆ. ಇದು ಇನ್ನಷ್ಟು ಬೆಳೆಯಬೇಕು. ಇಲ್ಲಿ ಪ್ರಸ್ತಾಪಿಸಿರುವ 2-3 ವಿಚಾರಗಳಿಗೆ ಸಂಪೂರ್ಣ ಸಹಮತ ಮತ್ತು ಬೆಂಬಲ ನೀಡಲಾಗುವುದು ಸಂಸ್ಥೆಗೆ ಅಗತ್ಯವಿರುವ ಅನುದಾನವನ್ನು ಮುಂದಿನ ವರ್ಷ ಪಿಯುಸಿ ಅದರ…