Author: admin

ಮಧುಗಿರಿ: ಟೆಂಪೋ  ಟ್ರಾವೆಲ್ಲರ್ ದ್ವಿಚಕ್ರ ವಾಹನಕ್ಕೆ  ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅಪಘಾತದ ಬಳಿಕ ಟೆಂಪೋ ಟ್ರಾವೆಲರ್ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. ತುಮಕೂರು ರಸ್ತೆಯ ಸಮೀಪವಿರುವ ಸಾಲು ಮರದ ತಿಮ್ಮಕ್ಕನ ಉದ್ಯಾವನದ ಬಳಿ ಘಟನೆ ನಡೆದಿದೆ ಎನ್ನಲಾಗಿದ್ದು, ಪಟ್ಟಣದ ಲಿಂಗೇನಹಳ್ಳಿ ವಾಸಿಗಳಾದ ಆಟೋಚಾಲಕ ಮನ್ಸೂರ್ ಪಾಷಾ (30) ಹೆಂಡತಿ ನಗ್ಮಾ (26) ಬೆನ್ನುಮೂಳೆ ಮುರಿತವಾಗಿದ್ದು, ಪತಿಗೆ ಗಂಭೀರ ಗಾಯವಾಗಿದೆ. ಮಕ್ಕಳಾದ ಜೋಯ (4)ಗೆ ತಲೆಗೆ ಪೆಟ್ಟುಬಿದ್ದಿದೆ, ಅಯಾನ್ (3)ಗೆ ಕಾಲು ಮುರಿತವಾಗಿದೆ. ಗಾಯಾಳುಗಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿದ್ದಾರೆ. ವರದಿ: ಅಬಿದ್ ಮಧುಗಿರಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ಮಹಿಳೆಯ ಮೃತದೇಹವನ್ನು ಚೀಲವೊಂದರಲ್ಲಿ ತುಂಬಿ ಕಸಬಾ  ಸಿದ್ದಾಪುರ ಕೆರೆ ಎಸೆದಿರುವ ಘಟನೆ ನಡೆದಿದ್ದು, ಬೇರೆ ಯಾವುದೋ ಪ್ರದೇಶದಲ್ಲಿ ಹತ್ಯೆ ಮಾಡಿ ಇಲ್ಲಿ ಮೃತದೇಹ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಎಸೆದು ನಾಲ್ಕೈದು ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಚೀಲದಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಗ್ರಾಮಸ್ಥರು ಶುಕ್ರವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಮಾರು 35ರಿಂದ 45 ವರ್ಷದ ಮಹಿಳೆಯ ಮೃತದೇಹ ಇದಾಗಿದ್ದು, ಹತ್ಯೆ ಮಾಡಿದ ಬಳಿಕ ಚೀಲಕ್ಕೆ ತುಂಬಿ ಕೆರೆಗೆ ಎಸೆದು ಹೋಗಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಕೆರೆಯಿಂದ ಮೇಲೆತ್ತಲಾಗಿದೆ. ಆದರೆ, ಮಹಿಳೆಯ ಗುರುತುಪತ್ತೆ ಸಾಧ್ಯವಾಗಿಲ್ಲ.  ಘಟನಾ ಸ್ಥಳಕ್ಕೆ ಆಗಮಿಸಿದ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ : ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಂಡ್ಯ: ಜಿಲ್ಲೆಯ ಮಳವಳ್ಳಿಯಲ್ಲಿ ಸಂಪ್ ನಲ್ಲಿ ಬಾಲಕಿಯ ಶವ ಅನುಮಾನಸ್ಪದವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿ ಟ್ಯೂಷನ್ ಮಾಸ್ಟರ್ ಕಾಂತರಾಜುನೇ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಸಾಬೀತಾಗಿದೆ. ಟ್ಯೂಷನ್​ ನೀಡುವ ನೆಪದಲ್ಲಿ ಕರೆಸಿಕೊಂಡ ಕಾಂತರಾಜ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಗೊಂಡಿದೆ. ಆರೋಪಿ ಕಾಂತರಾಜ್ ಬಾಲಕಿಗೆ ಟ್ಯೂಷನ್ ನೀಡುವುದಾಗಿ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಈ ವಿಚಾರ ಬಾಲಕಿಯ ಮನೆಗೆ ತಿಳಿದರೆ ಪರಿಸ್ಥಿತಿ ಬೇರೆಯದ್ದೇ ಆಗುತ್ತದೆ ಎಂಬ ಭಯದಿಂದ ಬಾಲಕಿಯ ತಲೆಗೆ ರಾಡ್​ ನಿಂದ ಹೊಡೆದು ಕತ್ತು ಹಿಸುಕಿ ಕೊಲೆ ಮಾಡಿರುವುದು ಸಾಬೀತಾಗಿದೆ. ಘಟನೆ ನಡೆದ ಬಳಿಕ ಸ್ಥಳಕ್ಕೆ ಭೇಟಿಕೊಟ್ಟಿದ್ಧ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇದೀಗ ವರದಿ ಪೊಲೀಸರ ಕೈ ಸೇರಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಯ ವರದಿ ಆಧಾರದ ಮೇಲೆ ನ್ಯಾಯಾಲಯ ಅನುಮತಿ ಪಡೆದು…

Read More

ಬೆಂಗಳೂರು; ಪ್ರೀತಿ ಹೆಸರಲ್ಲಿ ಯುವತಿ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನನ್ನ ಯಶವಂತಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಮೋಹಿನ್ ಬಂಧಿತ ಆರೋಪಿ. ಸೈಯದ್ ಮೋಹಿನ್ ವಿರುದ್ಧ ಮತಾಂತರ ನಿಷೇಧ ಕಾಯ್ದೆ 5ರಡಿ ಪ್ರಕರಣ ದಾಖಲಾಗಿದೆ. ಪ್ರೀತಿ ಹೆಸರಲ್ಲಿ ಯುವತಿಯನ್ನ ಮತಾಂತರ ಮಾಡಿದ್ಧ ಆರೋಪ ಸೈಯದ್ ಮೋಹಿನ್ ವಿರುದ್ಧ ಕೇಳಿಬಂದಿದ್ದು, ಮತಾಂತರ ಆದರೆ ಮದುವೆಯಾಗುವುದಾಗಿ ಸೈಯದ್ ಮೋಹಿನ್ ಯುವತಿಗೆ ಹೇಳಿದ್ದ ಎನ್ನಲಾಗಿದೆ. ಈ ನಡುವೆ ಆಕ್ಟೋಬರ್ 5 ರಂದು ಯುವತಿ ಯುವತಿ ಮನೆಯಿಂದ ನಾಪತ್ತೆಯಾಗಿದ್ದು, ಯುವತಿ ಕಾಣಿಯಾದ ಬಗ್ಗೆ ಆಕೆಯ ಪೋಷಕರು ದೂರು ನೀಡಿದ್ದರು. ಯಶವಂತಪುರ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಾಗಿತ್ತು. ನಿನ್ನೆ ಯುವತಿ ಪೋಷಕರು ಮತಾಂತರ ಎಂದು ದೂರು ನೀಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನನ್ನ ಅವಧಿಯ ಸೋಲಾರ್ ಯೋಜನೆ ಬಗ್ಗೆ ಚರ್ಚೆಗೆ ಸಿದ‍್ಧ. ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಬಸವರಾಜ ಬೊಮ್ಮಾಯಿ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಹ್ವಾನ ನೀಡಿದರು. ಇಂದು ಮಾಧ್ಯಮಗಳ ಜೊತೆ ಮಾತಾನಾಡಿದ ಡಿ.ಕೆ ಶಿವಕುಮಾರ್, ನನ್ನ ವಿರುದ್ಧ ಸೋಲಾರ್ ಹಗರಣ ಆರೋಪ ಮಾಡಿದ್ದಾರೆ. ಈಗ ಬಿಜೆಪಿ ಸರ್ಕಾರ ಇದೆ. ಸಿಎಂ ಯಾಕೆ ಸುಮ್ಮನಿದ್ದಾರೆ ಪ್ರಕರಣವನ್ನ ಸಿಬಿಐ ತನಿಖೆಗೆ ನೀಡಲಿ ಎಂದು ಸವಾಲು ಹಾಕಿದರು. ನಾಳೆ ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ನಾಳೆ 1 ಗಂಟೆಗೆ ರಾಹುಲ್ ಗಾಂಧಿ ಸಮಾವೇಶ ಉದ್ಘಾಟನೆ ಮಾಡಲಿದ್ದಾರೆ. ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಭಾಗಿಯಾಗಲಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿಯಿಂದ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಇದೀಗ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೆಡ್ ಕಾನ್ಸ್ ಟೇಬಲ್ ಲಕ್ಕಪ್ಪ ಸೇರಿ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿದ್ದ ಲಕ್ಕಪ್ಪ ಬ್ಲೂಟೂತ್ ಹೆಡ್ ಫೋನ್ ಬಳಸಿ ಪರೀಕ್ಷೆ ಬರೆದಿದ್ದನು ಎಂಬ ಆರೋಪ ಕೇಳಿಬಂದಿದೆ. ಪಿಎಸ್‌ಐ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಈತನ ಹೆಸರಿತ್ತು ಎನ್ನಲಾಗಿದೆ. ಸದ್ಯ, ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೊಳಪಡಿಸಲಿದ್ದಾರೆ. ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ 13 ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ತನಿಖೆಯನ್ನು ಮುಂದುವರೆಸಿರುವಂತ ಸಿಐಡಿ ಹಲವರ ಬಂಧನಕ್ಕೂ ಬಲೆ ಬೀಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ರಾಜ್ಯದಲ್ಲಿ ಚರ್ಮಗಂಟು ರೋಗ ಮತ್ತಷ್ಟು ಹರಡುವುದನ್ನು ತಡೆಗಟ್ಟಲು ಜಾನುವಾರು ಸಂತೆ ‌ಮತ್ತು ಸಾಗಾಣಿಕೆಯನ್ನು ನಿಷೇಧಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ಚರ್ಮಗಂಟು ರೋಗದ ಕುರಿತು ಮುಂಜಾಗ್ರತಾ ಕ್ರಮವಾಗಿ ಕರಪತ್ರಗಳು, ಪೋಸ್ಟರ್, ಪಶುಸಂಗೋಪನೆ ಇಲಾಖಾ ಅಧಿಕಾರಿಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ‌ಹೇಳಿದರು. ರೋಗ ತಗುಲಿದ ಪ್ರಾಣಿಯಿಂದ ರಕ್ತ ಹೀರುವ ಸೊಳ್ಳೆ, ಉಣ್ಣೆ, ಕಚ್ಚುವ ನೊಣಗಳು, ವೈರಾಣುಗಳಿಂದ ಜಾನುವಾರುಗಳಿಗೆ ಹರಡುತ್ತದೆ. ರೋಗ ಕಾಣಿಸಿಕೊಂಡ ಪ್ರದೇಶ ಹಾಗೂ ಸುತ್ತಮುತ್ತಲಿನ 5 ಕಿ.ಮೀ ಪ್ರದೇಶ ವ್ಯಾಪ್ತಿಯಲ್ಲಿ ಲಸಿಕೆ ನೀಡಲಾಗುತ್ತಿದೆ. ರೋಗಪೀಡಿತ ರಾಸುಗಳಿಂದ ಆರೋಗ್ಯವಂತ ರಾಸುಗಳನ್ನು ಬೇರ್ಪಡಿಸಿ, ಕೂಡಲೇ ಸ್ಥಳೀಯ ಪಶು ವೈದ್ಯರು ಸಂಪರ್ಕಿಸಿ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಯುವತಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿ ತಬಸ್ಸುಮ್ ಸವದತ್ತಿ(19) ಮೃತ ಯುವತಿ. ಬೆಂಗಳೂರಿನಲ್ಲಿ ಕಾಲ್ ಸೆಂಟರ್ನಲ್ಲಿ ತಬಸ್ಸುಮ್ ಕೆಲಸ ಮಾಡುತ್ತಿದ್ದಳು. ನಿನ್ನೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ಅಪರಿಚಿತ ಯುವಕ ದಾಖಲಿಸಿದ್ದ. ಈ ಬಗ್ಗೆ ದೂರು ನೀಡಿ ಎಂದಿದ್ದಕ್ಕೆ ಯುವತಿಯ ಮೊಬೈಲ್ ​ನೊಂದಿಗೆ ಯುವಕ ಪರಾರಿಯಾಗಿದ್ದಾನೆ. ಪೋಷಕರು ಆಸ್ಪತ್ರೆಗೆ ಬಂದಾಗ ತಬಸ್ಸುಮ್ ನಿತ್ರಾಣ ಸ್ಥಿತಿಯಲ್ಲಿದ್ದಳು. ಯುವತಿಯ ತಲೆಯ ಹಿಂಬದಿಯಲ್ಲಿ, ಮೈಮೇಲೆ ಸಿಗರೇಟನಿಂದ ಸುಟ್ಟಿದ ಗಾಯದ ಗುರುತು ಪತ್ತೆಯಾಗಿವೆ. ಹೆಚ್ಚಿನ ಚಿಕಿತ್ಸೆಗೆ ಮಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ತಬಸ್ಸುಮ್ ಸಾವನ್ನಪ್ಪಿದ್ದಾಳೆ. ಮಗಳನ್ನು ಕೊಲೆ ಮಾಡಿದ್ದಾರೆಂದು ಮೃತ ತಬಸ್ಸುಮ್ ತಂದೆ ಇರ್ಷಾದ್ ಅಹ್ಮದ್ ಆರೋಪ ಮಾಡಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಜಯನಗರ: ಮತ್ತೆ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಾಗ್ಧಾಳಿ ನಡೆಸಿದ್ದಾರೆ. ಹೂವಿನಹಡಗಲಿಯಲ್ಲಿ ನಡೆದ ಬಿಜೆಪಿ ಸಂಕಲ್ಪ ಯಾತ್ರೆ ವೇಳೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ​ ಅಡ್ರೆಸ್ ಇಲ್ಲದಂತಾಗಿದೆ. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ ಎಂದರು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ್​ ಗಿಲ್ಲ ,ಚುನಾವಣೆಯಲ್ಲಿ ಅಂಬೇಡ್ಕರ್ ರನ್ನು 2 ಬಾರಿ ಸೋಲಿಸಿದರು. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಮೇಲೆ ತಲವಾರಿನಿಂದ ದುಷ್ಕರ್ಮಿಗಳು ದಾಳಿಗೆ ಯತ್ನಿಸಿದ್ದಾರೆ. ನಿನ್ನೆ ರಾತ್ರಿ ಸುಮಾರು 11:30 ಗಂಟೆ ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ. ಶಾಸಕರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರು ನಲ್ಲಿ ಬಂದ ದುಷ್ಕರ್ಮಿಗಳು ಶಾಸಕರ ಕಾರು ಅಡ್ಡಗಟ್ಟಿ ತಲ್ವಾರ್‌ ನಿಂದ ದಾಳಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದದಿಂದ ನಿಂದಿಸಿ, ತಲವಾರು ಝಳಪಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More