Author: admin

ಬೆಳಗಾವಿ ಹುಕ್ಕೇರಿಯಲ್ಲಿ ಅಕ್ಟೋಬರ್ 21 ರಂದು ಲಿಂಗಾಯಿತ ಪಂಚಮಸಾಲಿ ಬೃಹತ್ ಸಮಾವೇಶ ನಡೆಯಲಿದ್ದು, ಅಷ್ಟರಲ್ಲಿ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ಸಂಬಂಧ ಅಂತಿಮ ತೀರ್ಮಾನ ಕೈಗೊಳ್ಳಬೇಕು. ಇಲ್ಲದೆ ಇದ್ದರೆ ಹುಕ್ಕೇರಿ ಸಮಾವೇಶದಲ್ಲಿ ವಿಧಾನಸೌಧ ಮುತ್ತಿಗೆಗೆ ಕರೆ ನೀಡುವುದಾಗಿ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಾಡುತ್ತಿರುವ ಹೋರಾಟ 2 ವರ್ಷ ತಲುಪಿದೆ. ಆದರೂ ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳದೆ ನುಣಿಚಿಕೊಳ್ಳುತ್ತಿದೆ ಎಂದರು. ಈಗಾಗಲೇ ಲಿಂಗಾಯತ ಸಮುದಾಯದ 31 ಉಪ ಪಂಗಡಗಳಿಗೆ 2 ಎ ಮೀಸಲಾತಿ ಸ್ಥಾನ ನೀಡಿದೆ. ಅದೇ ರೀತಿಯಲ್ಲಿ ಸರ್ಕಾರ ನಮ್ಮ ಸಮುದಾಯಕ್ಕೂ ನೀಡಲಿ ಎಂಬುವುದು ನಮ್ಮ ಹಕ್ಕೊತ್ತಾಯವಾಗಿದೆ ಎಂದು ಹೇಳಿದರು. ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳದೆ ಹೋದರೆ, ವಿಧಾನಸೌಧದ ಮುಂದೆ 25 ಲಕ್ಷ ಪಂಚಮಸಾಲಿ ಲಿಂಗಾಯತರನ್ನು ಸೇರಿಸಿ ಹೋರಾಟ ನಡೆಸಲಾಗುವುದು ಎಂದು…

Read More

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೆ ಅಸಮಾಧಾನ ಹೊರ ಹಾಕಿದ್ದಾರೆ. ಈ ಕುರಿತು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಸಚಿವ ಸ್ಥಾನ ನೀಡಿದರೆ ಪಡೆಯುತ್ತೇನೆ. ಸಂಪು ವಿಸ್ತರಣೆ ಪಕ್ಷದ ಹಿರಿಯರಿಗೆ ಬಿಟ್ಟಿದ್ದು. ಅವರಿಗೆ ಸರಿ ಎನಿಸಿದರೇ ಕ್ಯಾಬಿನೆಟ್ ವಿಸ್ತರಿಸಲಿ ಭೇಡ ಅಂದ್ರೆ ಬೇಡ ಷಡ್ಯಂತ್ರದಿಂದ ನನ್ನನ್ನ ಪ್ರಕರಣದಲ್ಲಿ ಸಿಲುಕಿಸಿದರು ಎಂದರು. ನಾವು ಎಂದಿಗೂ ಹಿಂದುತ್ವ ಪರ. ಕಡುಬಡವ ಹಿಂದುಗಳಿಗೆ ಮೀಸಲಾತಿ ಸಿಗಬೇಕು. ಶ್ರೀಮಂತರ ಮೀಸಲಾತಿ ರದ್ಧಾಗಬೇಕು. ಎಸ್ ಎಸಿ ಮೀಸಲಾತಿ ಹೆಚ್ಚಿಸಿದ್ದು ಸಂವಿಧಾನಬದ್ಧವಾಗಿದೆಯಾ ಎಂದು ಸಿದ್ಧರಾಮಯ್ಯ ಕೇಳುತ್ತಾರೆ. ಇದನ್ನ ಸರ್ವಪಕ್ಷ ಸಭೆಯಲ್ಲೇ ಕೇಳಬೇಕಿತ್ತು . ಈಗ ಹೊರಗಡೆ ಬಂದು ಗೊಂದಲದ ಹೇಳಿಕೆ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಹಾಗೆಯೇ ಈಗ ಕುರುಬರಿಗೆ ಎಸ್ ಟಿ ಮೀಸಲಾತಿ ಕೊಡಬೇಕು ಎನ್ನುತ್ತಿದ್ದಾರೆ. ಹಿಂದೆ ಅವರ ಬಾಯಿಗೆ ಏನು ತುಂಬಿಕೊಂಡಿದ್ದರು ಎಂದು ಸಿದ್ಧರಾಮಯ್ಯ ವಿರುದ್ಧ ಕೆ.ಎಸ್ ಈಶ್ವರಪ್ಪ ಗುಡುಗಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿ.ಆರ್.ನಾಗರಾಜುರವರು18 ಮತಗಳನ್ನು ಪಡೆದು ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಿದ್ದ ನರಸಮ್ಮರವರು 17 ಮತಗಳನ್ನು ಪಡೆದು ನೂತನ ಉಪಾಧ್ಯಕ್ಷೆಯಾಗಿ ಆಯ್ಕೆಯಾದರು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆಯಾದ ಫಲಿತಾಂಶದ ವರದಿಯನ್ನು ಕೊರಟಗೆರೆಯ ತಾಲ್ಲೂಕು ದಂಡಾಧಿಕಾರಿ ನಾಹಿದಾ ಜಮ್ ಜಮ್ ಘೋಷಣೆ ಮಾಡಿದರು. ಇನ್ನೂ ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಟಿ.ಆರ್. ನಾಗರಾಜು ಮಾತನಾಡಿ, ಅಧ್ಯಕ್ಷನಾಗಲು ಸಹಕರಿಸಿದ ಎಲ್ಲಾ ಸದಸ್ಯರಿಗೂ ಧನ್ಯವಾದ ತಿಳಿಸಿ,  ಗ್ರಾಮ ಅಭಿವೃದ್ಧಿಗೆ ಶ್ರಮಿಸುತ್ತ, ಗ್ರಾಮದ ಸ್ವಚ್ಛತೆ, ಗ್ರಾಮದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತೇನೆ ಹಾಗೂ ಶಾಶ್ವತವಾದ ಕೆಲವು ಕಾರ್ಯಕ್ರಮಗಳನ್ನು ಮಾಡುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ನೂತನ  ಅಧ್ಯಕ್ಷ,  ಉಪಾಧ್ಯಕ್ಷೆಗೆ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಮುಖಂಡರುಗಳು ಶುಭ ಕೋರಿದರು. ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಈ…

Read More

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ದಾಸಲುಕುಂಟೆ ಗ್ರಾಮದ ಕೆರೆಯು ಈ ಹಿಂದೆ ಸುರಿದ ಭಾರಿ ಮಳೆಯಿಂದ ಸುಮಾರು 18 ವರ್ಷಗಳ ನಂತರ ಕೋಡಿ ಬಿದ್ದಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ದೊಡ್ಡ ಮಟ್ಟದಲ್ಲಿ ಕೆರೆ ಕೋಡಿ ಬಿದ್ದಿದೆ. ಇದೇ ಸಂದರ್ಭದಲ್ಲಿ  ತುಮಕೂರು ಮಾರ್ಗವಾಗಿ ತೋವಿನಕೆರೆ ಬರುತ್ತಿದ್ದ   ಕಾರೊಂದು ಚಾಲಕನ ಸಹಿತ ಕೆರೆಕೋಡಿ ನೀರಲ್ಲಿ ಕೊಚ್ಚಿ ಹೋದ ಘಟನೆ ನಡೆದಿತ್ತು. ಸ್ಥಳೀಯರ ಮತ್ತು ದಾಸಲುಕುಂಟೆ ಗ್ರಾಮದ ಸಿದ್ದರಾಜು ಮತ್ತು ಅವರ ಗೆಳೆಯರ ತಂಡ ಕಾರು ಚಾಲಕರನ್ನು ತಡರಾತ್ರಿಯಲ್ಲಿಯೇ ರಕ್ಷಣೆ ಮಾಡಿದ್ದಾರೆ. ನಂತರ ಬೆಳಿಗ್ಗೆ ಸ್ಥಳೀಯರು ಕಾರನ್ನು ಜೆಸಿಬಿ ಯಂತ್ರದ ಮೂಲಕ ಕಾರನ್ನು ಹೊರ ತೆಗೆದಿದ್ದಾರೆ ವರದಿ:  ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು : ಪತ್ರಕರ್ತರ ಮೇಲೆ ಹಲ್ಲೆ ಯತ್ನ ನಡೆಸಿದ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಕಿವಿ ಮೂಗು ಗಂಟಲು ತಜ್ಞ ಡಾ. ನವೀನ್ ಹಾಗೂ  ಪತ್ರಕರ್ತರ ವಿರುದ್ಧವೇ ಸುಳ್ಳು ಪ್ರಕರಣ ದಾಖಲಿಸಿದ ಪಿಎಸ್ ‌ಐ ನಾಗರಾಜ್ ವಿರುದ್ಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ತಾಲ್ಲೂಕು ಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಪತ್ರಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕೊರಟಗೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಅಪಘಾತಕ್ಕೊಳಗಾಗಿದ್ದ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಿದ ವೈದ್ಯರ ನಡೆಗೆ ಪತ್ರಕರ್ತರು ಆಸ್ಪತ್ರೆಗೆ ತೆರಳಿ ವರದಿ ಮಾಡಲು ವಿಡಿಯೋ ಮಾಡುತ್ತಿದ್ದ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯ ಡಾ.ನವೀನ್ ಎಂಬುವವರು ಪತ್ರಕರ್ತರ ಮೇಲೆ ಹಲ್ಲೆ ಯತ್ನ ನಡೆಸಿದ್ದು, ಪತ್ರಕರ್ತರ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಿದ ವೈದ್ಯರನ್ನು ಕೂಡಲೇ ಅಮಾನತುಗೊಳಿಸಿ ಬಂಧಿಸಬೇಕೆಂದು ಕಾರ್ಯ ನಿರತ ಪತ್ರಕರ್ತರು ಆಗ್ರಹಿಸಿದರು. ನೂರಾರು ಸಂಖ್ಯೆಯಲ್ಲಿ ಸೇರಿದ ಪತ್ರಕರ್ತರು ವೈದ್ಯ ಡಾ.ನವೀನ್  ಹಾಗೂ ಸುಳ್ಳು ಪ್ರಕರಣ ದಾಖಲಿಸಿದ ಪಿ.ಎಸ್.ಐ. ನಾಗರಾಜು…

Read More

ಮಧುಗಿರಿ: ತಾಲೂಕು ಕಸಬಾ ಹೋಬಳಿ ತುಂಗೋಟಿ ಗ್ರಾಮದಲ್ಲಿ ನೆನ್ನೆ ರಾತ್ರಿ ಸುರಿದ   ಸುರಿದ ಭಾರೀ  ಮಳೆಗೆ ಮನೆಯೊಂದು ಬಿದ್ದ ಕಾರಣ ವೃದ್ಧೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕೆಂಪು ಸೋಡಮ್ಮ(98) ಮೃತ ಪಟ್ಟ ವೃದ್ಧೆ ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 3 ಗಂಟೆ  ಸಮಯಕ್ಕೆ ಮನೆ ಕುಸಿದು ಬಿದ್ದಿದ್ದು, ಈ ವೇಳೆ ಮನೆಯ ಚಪ್ಪಡಿ ಕಲ್ಲುಗಳು ಅಜ್ಜಿಯ   ಮೇಲೆ ಬಿದ್ದ ಕಾರಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಕ್ಕ ಪಕ್ಕದ ಮನೆಯವರು ಬೆಳಗ್ಗೆ ಸುಮಾರು 5 ಗಂಟೆಯ ವೇಳೆ ಸ್ಥಳಕ್ಕೆ ಹೋಗಿ ನೋಡಿದಾಗ ಅಜ್ಜಿಯು ಮೃತಪಟ್ಟಿರುವುದನ್ನು ಕಂಡು ಬಂದಿತ್ತು. ಕ್ಷಣವೇ ಸಂಬಂಧಪಟ್ಟವರಿಗೆ ಸ್ಥಳೀಯರು ಮಾಹಿತಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಸಾಲಭಾದೆ ತಾಳಲಾರದೆ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಲು ಹೋಗಿ, ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದಿದೆ. ಸಂಜಯ್ ಪಾಟೀಲ್(35) ಮೃತ ದುರ್ದೈವಿ. ಸಾಲಭಾದೆ ತಾಳಲಾರದೆ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ. ಈ ವೇಳೆ ಟವರ್ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಲಬುರಗಿ: ಸಿಡಿಲು ಬಡಿದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಸೇಡಂ ತಾಲೂಕಿನ ಕಡಚರ್ಲಾ ಗ್ರಾಮದಲ್ಲಿ ನಡೆದಿದೆ. ಪಿಲ್ಲಿಗುಂಟಾ ತಾಂಡಾ ನಿವಾಸಿಗಳಾದ ತುಳಚಾ ರಾಠೋಡ್(40), ಅವೀನ್ ರಾಠೋಡ್(16) ಮೃತ ದುರ್ದೈವಿಗಳು. ತಂದೆ-ಮಗ ಕೂಲಿ ಕೆಲಸಕ್ಕೆ ಹೋಗಿದ್ದಾಗ ಸಿಡಿಲು ಬಡಿದು ಮರಣ ಹೊಂದಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ : ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಅವರು ಮಂಗಳವಾರ ನವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರ ಅಧಿಕೃತ ನಿವಾಸದ ಆವರಣದಲ್ಲಿ ನಡೆದ ಫ್ಲೆಕ್ಸಿ-ಫ್ಯುಯೆಲ್ ಸ್ಟ್ರಾಂಗ್ ಹೈಬ್ರಿಡ್ ಎಲೆಕ್ಟ್ರಿಕ್ ವೆಹಿಕಲ್ಸ್ (ಎಫ್ಎಫ್ವಿ-ಎಸ್ಎಚ್ಇವಿ) ಮೇಲಿನ ಮೊದಲ ಪ್ರಾಯೋಗಿಕ ಯೋಜನೆಯಾದ ಟೊಯೋಟಾ ಕೊರೊಲ್ಲಾ ಆಲ್ಟಿಸ್ ಹೈಬ್ರಿಡ್ಗೆ ಚಾಲನೆ ನೀಡಿದರು. ಭಾರತದಲ್ಲಿ ಹೈಬ್ರಿಡ್ ವಾಹನಗಳ ಕಾರ್ಯಸಾಧ್ಯತೆಯನ್ನು ನಿರ್ಣಯಿಸುವುದು ಪೈಲಟ್ ಯೋಜನೆಯ ಗುರಿಯಾಗಿದೆ. ಇದು ಮಾಲಿನ್ಯವನ್ನು ಕಡಿಮೆ ಮಾಡಲು ಎಥೆನಾಲ್-ಚಾಲಿತ ಫ್ಲೆಕ್ಸ್ ಇಂಧನ ವಾಹನಗಳಲ್ಲಿ ಚಲಿಸಬಹುದು ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಎಲೆಕ್ಟ್ರಿಕ್-ಹೈಬ್ರಿಡ್ ವಾಹನಗಳಲ್ಲಿ ಎಥೆನಾಲ್ ಬಳಕೆಯನ್ನು ಸಕ್ರಿಯಗೊಳಿಸುತ್ತದೆ. ಈ ವೇಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ಸಚಿವ ಗಡ್ಕರಿ ಅವರು, ಟಿವಿಎಸ್, ಬಜಾಜ್ ಮತ್ತು ಹೀರೋ ಮೋಟೊಕಾರ್ಪ್ ಈಗಾಗಲೇ ಎಥೆನಾಲ್ ವಾಹನಗಳೊಂದಿಗೆ ಸಿದ್ಧವಾಗಿದ್ದು, ನಾವು ಎಲೆಕ್ಟ್ರಿಕ್, ಎಥೆನಾಲ್, ಮೆಥನಾಲ್, ಬಯೋಡೀಸೆಲ್ ಮತ್ತು ಹೈಡ್ರೋಜನ್…

Read More

ಬೆಂಗಳೂರು : ಇಂದು ಮಳೆ ಪೀಡಿತ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಇಂದು ವಿಜಯನಗರ ಜಿಲ್ಲೆಯ ಕಮಲಾಪುರದ ಹೋಟೆಲ್ ನಿಂದ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ. ಬೆಳಗಾವಿ, ಧಾರವಾಡ, ದಾವಣಗೆರೆ, ವಿಜಯಪುರ, ಗದಗ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಬೀದರ್, ಕೊಪ್ಪಳ ಮತ್ತು ಮೈಸೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ಮಳೆಯಿಂದಾಗಿ ಉಂಟಾಗಿರುವ ನಷ್ಟದ ಬಗ್ಗೆ ಮಾಹಿತಿ ಸಂಗ್ರಹಿಸಿ, ಪರಿಸ್ಥಿತಿ ನಿಭಾಯಿಸುವ ಸಂಬಂಧ ಸಲಹೆ ಸೂಚನೆ ನೀಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More