Subscribe to Updates
Get the latest creative news from FooBar about art, design and business.
- ತುಮಕೂರು: ನಾಗವಲ್ಲಿ ಸಮೀಪ ಮರಕ್ಕೆ ಲಾರಿ ಡಿಕ್ಕಿ: ಕೇರಳದ ಇಬ್ಬರು ಸಾವು
- ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
- ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
- ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
- ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
- ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆ
- ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
- ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
Author: admin
ನಾಡ ಬಂದೂಕಿನಲ್ಲಿ ಆಟವಾಡುತ್ತಿದ್ದಾಗ, ಆಕಸ್ಮಿಕವಾಗಿ ಗುಂಡು ಸಿಡಿದು 7 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಕಾಡಶಿವನಹಳ್ಳಿಯಲ್ಲಿ ನಡೆದಿದೆ. UP ಮೂಲದ ಅಮಿನುಲ್ಲಾ, ಸಮ್ನ್ ಕುಟುಂಬ 3 ದಿನದ ಹಿಂದೆ ಕೂಲಿ ಕೆಲಸಕ್ಕೆಂದು ಇಲ್ಲಿಗೆ ಬಂದಿದ್ದು, ತಂದೆತಾಯಿ ಕೆಲಸದಲ್ಲಿ ನಿರತರಾಗಿದ್ದರು. ಆ ವೇಳೆ 16 ವರ್ಷದ ಮಗ ಸಾಜೀದ್ ಬಂದೂಕಿನ ಟ್ರಿಗರ್ ಒತ್ತಿದ್ದು, ಮಗಳು ಶಮಾ ಮೇಲೆ ಗುಂಡು ಸಿಡಿದು ಪ್ರಾಣಬಿಟ್ಟಿದ್ದಾಳೆ. ಪೊಲೀಸರು ಸಾಜೀದ್, ತೋಟದ ಮಾಲೀಕ ಮಲ್ಲೇಶ್‌ನನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ.ಈ ಭಾಗದಲ್ಲಿ 6,800 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಪುರಾ ಮತ್ತು ಮೇಘಾಲಯ ಎರಡರಲ್ಲೂ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಇದು ಬಿಜೆಪಿಗೆ ನಿರ್ಣಾಯಕ ಚುನಾವಣೆ ಎಂದು ಪರಿಗಣಿಸಲಾಗುತ್ತಿದೆ. ಇತ್ತೀಚೆಗಷ್ಟೇ ಗುಜರಾತ್ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬಿಜೆಪಿ ಈಗ ಚುನಾವಣೆ ಎದುರಿಸಿರುವ ತ್ರಿಪುರಾ ಮತ್ತು ಮೇಘಾಲಯದತ್ತ ಗಮನ ಹರಿಸುತ್ತಿದೆ. ಮೋದಿ ಈಶಾನ್ಯ ಕೌನ್ಸಿಲ್‌ನ ಸುವರ್ಣ ಮಹೋತ್ಸವ ಆಚರಣೆ ಮತ್ತು ಶಿಲ್ಲಾಂಗ್‌ನಲ್ಲಿ ನಡೆಯಲಿರುವ ಅದರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹೆಚ್.ಡಿ.ಕೋಟೆ: ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಬಗೆಹರಿಸಲು ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನೆ ಮೆರವಣಿಗೆ ಪಟ್ಟಣದ ಗದ್ದಿಗೆ ವೃತ್ತದಿಂದ ಹುಣಸೂರು–ಬೇಗೂರು ರಸ್ತೆಯಲ್ಲಿ ಸಾಗಿ ನಂತರ ತಾಲ್ಲೂಕು ಆಡಳಿತ ಸೌಧದ ಎದುರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ಜನಸಾಮಾನ್ಯರ ಬದುಕ ಆತಂತ್ರವಾಗಿದೆ, ಅದರಲ್ಲೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಿದ್ದರು ಸರ್ಕಾರ ಕಿವಿ ಮೂಗು ಇಲ್ಲದ ರೀತಿಯಲ್ಲಿ ವರ್ತನೆ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಸಾಲಿನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಆದರೆ ಫಲಿತಾಂಶ ವಿಳಂಬ ಮಾಡಿದರಿಂದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆ ಆಗಿದೆ. ಈ ಹಿಂದೆ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ವ್ಯವಸ್ಥೆ ಇತ್ತು, ಆದರೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ರದ್ದು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ/ ಪರಿಶಿಷ್ಟ…
ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ.ಈ ಭಾಗದಲ್ಲಿ 6,800 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಪುರಾ ಮತ್ತು ಮೇಘಾಲಯ ಎರಡರಲ್ಲೂ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಇದು ಬಿಜೆಪಿಗೆ ನಿರ್ಣಾಯಕ ಚುನಾವಣೆ ಎಂದು ಪರಿಗಣಿಸಲಾಗುತ್ತಿದೆ. ಇತ್ತೀಚೆಗಷ್ಟೇ ಗುಜರಾತ್ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬಿಜೆಪಿ ಈಗ ಚುನಾವಣೆ ಎದುರಿಸಿರುವ ತ್ರಿಪುರಾ ಮತ್ತು ಮೇಘಾಲಯದತ್ತ ಗಮನ ಹರಿಸುತ್ತಿದೆ. ಮೋದಿ ಈಶಾನ್ಯ ಕೌನ್ಸಿಲ್‌ನ ಸುವರ್ಣ ಮಹೋತ್ಸವ ಆಚರಣೆ ಮತ್ತು ಶಿಲ್ಲಾಂಗ್‌ನಲ್ಲಿ ನಡೆಯಲಿರುವ ಅದರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಹೊಸಪೇಟೆ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಯಶವಂತ , ಅಂಜಿನಿ, ಗುರುರಾಜ್ ಮೃತಪಟ್ಟ ವಿದ್ಯಾರ್ಥಿಗಳು. ಕಾಲುವೆಗೆ ಆರು ಮಂದಿ ವಿದ್ಯಾರ್ಥಿಗಳು ಈಜಲು ತೆರಳಿದ್ದರು. ಈ ವೇಳೆ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
250 ವರ್ಷಗಳ ಇಂಡೋನೇಷ್ಯಾದ ಪಫುವಾದಲ್ಲಿನ ದೂರದ ಹಳ್ಳಿಯನ್ನು ಆಳಿದ ಬುಡಕಟ್ಟು ಸಮುದಾಯದ ಮುಖ್ಯಸ್ಥ ಅಗಾತ್ ಮಾಮೆಟೆ ಮಾಬೆಲ್ ಅವರ ಮೃತದೇಹವನ್ನು ಇಂದಿಗೂ ಸಂರಕ್ಷಿಸಲಾಗಿದೆ. ಪ್ರಸ್ತುತ ಬುಡಕಟ್ಟು ಸಮುದಾಯದ ಮುಖ್ಯಸ್ಥರಾಗಿರುವ ಎಲಿ ಮಾಬೆಲ್ ಅವರು ತಮ್ಮ ಪೂರ್ವಜರಾಗಿರುವ ಅಗಾತ್ ಮಾಮೆಟೆ ಮಾಬೆಲ್ ಅವರ ಮೃತದೇಹವನ್ನು ಸಂರಕ್ಷಿಸುತ್ತಿದ್ದಾರೆ. ಈ ಬುಡಕಟ್ಟು ಸಮುದಾಯದಲ್ಲಿ ವೀರರು ಹಾಗೂ ಸಮುದಾಯದ ಪ್ರಮುಖ ಹಿರಿಯರು ಮೃತಪಟ್ಟರೆ ಅವರ ಮೃತದೇಹವನ್ನು ಸಂರಕ್ಷಿಸಿಡುವ ಸಂಪ್ರದಾಯವಿದೆ. ಮುಂದಿನ ಪೀಳಿಗೆಗೆ ಅವರನ್ನು ಪರಿಚಯಿಸುವ ನಿಟ್ಟಿನಲ್ಲಿ ಈ ರೀತಿಯ ಆಚರಣೆಯನ್ನು ಮಾಡಲಾಗುತ್ತದೆ. ಹಿರಿಯರ ಮೃತದೇಹವನ್ನು ಹೊಗೆ ಮತ್ತು ಪ್ರಾಣಿಗಳ ಕೊಬ್ಬು ಸವರಿ ಕೊಳೆತು ಹೋಗದಂತೆ ರಕ್ಷಿಸಲಾಗುತ್ತದೆ. ಆ ಮೂಲಕ ಮುಂದಿನ ಪೀಳಿಗೆಗೆ ಅವರನ್ನು ಪರಿಚಯಿಸುವ ಕಾರ್ಯವನ್ನು ಇವರು ಮಾಡುತ್ತಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ರಾಮನಗರ: ಪುತ್ರನಿಗಾಗಿ ಅನಿತಾ ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಿದ್ದು, ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಾಗಿ ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ. ರಾಮನಗರದಲ್ಲಿ ನಡೆದ ಪಂಚರತ್ನ ಯಾತ್ರೆಯ ವೇಳೆ ಅನಿತಾ ಕುಮಾರಸ್ವಾಮಿ ಅವರು ಈ ವಿಚಾರವನ್ನು ತಿಳಿಸಿದ್ದು, ನಿಖಿಲ್ ಹೆಸರು ಘೋಷಿಸುತ್ತಿದ್ದಂತೆಯೇ ಕಾರ್ಯಕರ್ತರು ಹಾಗೂ ಬೆಂಬಲಿಗರು ಹರ್ಷ ವ್ಯಕ್ತಪಡಿಸಿದರು. ಕೆಲವರು ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡಬೇಡಿ ಎಂದು ಅವರು ಇದೇ ವೇಳೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಿಪಟೂರು: ಉಂಡೆ ಕೊಬ್ಬರಿಯ ಬೆಲೆ ಕುಸಿಯುತ್ತಿರುವ ಸಂದರ್ಭದಲ್ಲಿ ಹಾಗೂ ಅವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಂಡು ನೆರವಿಗೆ ಬರುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲು ಆಗ್ರಹಿಸಿ ಇಲ್ಲಿನ ಕಾಂಗ್ರೆಸ್ ಮುಖಂಡ ಸಿ. ಬಿ. ಟೂಡಾ ಶಶಿಧರ್ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ತುಮಕೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಬೆಂಗಳೂರು, ಶಿವಮೊಗ್ಗ ಜಿಲ್ಲೆಯ ರೈತರು ತೆಂಗನ್ನು ಹೆಚ್ಚು ಬೆಳೆಯುತ್ತಾರೆ. ಇದರಲ್ಲಿ ತುಮಕೂರು ಜಿಲ್ಲೆಯ ರೈತರಿಗೆ ಸಂಪೂರ್ಣವಾಗಿ ತೆಂಗು ಆರ್ಥಿಕ ಬೆಳೆ ಹಾಗೂ ಅದೇ ಜೀವನಾಧಾರವಾಗಿದೆ. ಪ್ರಮುಖವಾಗಿ ತಿಪಟೂರು ರೈತರು ಬಲಿತ ತೆಂಗಿನ ಕಾಯಿಯಿಂದ ವಿಶ್ವದಲ್ಲೇ ಅತೀ ವಿಶಿಷ್ಟವಾದ ಉಂಡೆ ಕೊಬ್ಬರಿ ತಯಾರಿಸುತ್ತಾರೆ. ಈ ರೀತಿ ತಯಾರಿಸಿದ ಉಂಡೆ ಕೊಬ್ಬರಿಯನ್ನು ರೈತರು ಕೃಷಿ ಉತ್ಪನ್ನ ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಾರೆ. ಉಂಡೆ ಕೊಬ್ಬರಿಗೆ ಸಂಬಂಧಿಸಿದಂತೆ ತಿಪಟೂರಿನಲ್ಲಿ ಘೋಷಣೆಯಾದ ಟೆಂಡರ್ ಧಾರಣೆಯನ್ನೇ ಮೂಲಧಾರಣೆಯನ್ನಾಗಿ ರಾಜ್ಯಾದ್ಯಂತ ಪರಿಗಣಿಸಲಾಗುತ್ತದೆ. ಇತ್ತೀಚಿನ…
ಬೆಳಗಾವಿ: 10 ದಿನಗಳ ಕಾಲ ಚಳಿಗಾಲ ಅಧಿವೇಶ ನಡೆಯಲಿದೆ. ಡಿಸೆಂಬರ್ 19ರಿಂದ ಡಿ.30ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ಹೀಗಾಗಿ ಸುವರ್ಣ ಸೌಧ ಸುತ್ತ ಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಡಿ.30ರವರೆಗೆ ಸುವರ್ಣಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಹೇಳಿದ್ದಾರೆ. ನಗರದಲ್ಲಿ ಯಾವುದೇ ಪ್ರತಿಭಟನೆ, ಗುಂಪು ಕಟ್ಟಿಕೊಂಡು ಓಡಾಡಲು ನಿಷೇಧಿಸಲಾಗಿದೆ. ಶಾಸಕರು, ಪರಿಷತ್ ಸದಸ್ಯರು, ಅಧಿಕಾರಿಗಳು ಸೇರಿದಂತೆ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿ ನಗರಕ್ಕೆ 10 ಸಾವಿರ ಮಂದಿ ಆಗಮಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
2022 ಒಂದು ಘಟನಾತ್ಮಕ ವರ್ಷವಾಗಿತ್ತು. ಪ್ರತಿ ದಿನವೂ ರಷ್ಯಾ-ಉಕ್ರೇನ್ ಯುದ್ಧ, ಪ್ರಮುಖ ವ್ಯಕ್ತಿಗಳ ನಿರ್ಗಮನ, ವಿಶ್ವದ ಗಮನ ಸೆಳೆದ ನ್ಯಾಯಾಲಯದ ಪ್ರಕರಣಗಳಂತಹ ಸುದ್ದಿಗಳಿಂದ ತುಂಬಿತ್ತು. ಈ ವರ್ಷ ಗೂಗಲ್‌ನಲ್ಲಿ ಜನರು ಹೆಚ್ಚು ಹುಡುಕಿದ್ದನ್ನು ಗೂಗಲ್ ಬಿಡುಗಡೆ ಮಾಡಿದೆ. ಉಕ್ರೇನ್ ಎಂಬ ಪದವು ಸುದ್ದಿಯ ವಿಷಯದಲ್ಲಿ ಹೆಚ್ಚು ಹುಡುಕಲ್ಪಟ್ಟ ಪದವಾಗಿತ್ತು. ರಾಣಿ ಎಲಿಜಬೆತ್ ಅವರ ಮರಣವು ಶೀಘ್ರದಲ್ಲೇ ಅನುಸರಿಸುತ್ತದೆ. ಯುಎಸ್ ಮಧ್ಯಂತರ ಚುನಾವಣೆಗಳು ಮೂರನೇ ಸ್ಥಾನದಲ್ಲಿವೆ. ಅಮೆರಿಕದ ಪವರ್‌ಬಾಲ್ ಲಾಟರಿ 2.04 ಶತಕೋಟಿಯನ್ನು ನೀಡುವ ಸುದ್ದಿಯನ್ನು ಮಂಕಿಪಾಕ್ಸ್ ನಾಲ್ಕು ಮತ್ತು ಐದನೇ ಸ್ಥಾನದಲ್ಲಿ ಅನುಸರಿಸಿತು. ಜಾನಿ ಡೆಪ್ ಅತಿ ಹೆಚ್ಚು ‘ಶೋಧಿಸಿದ’ ವ್ಯಕ್ತಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಆಸ್ಕರ್‌ನಲ್ಲಿ ಮುಖಭಂಗ ಮಾಡಿದ ನಂತರ, ಜನರು ವಿಲ್ ಸ್ಮಿತ್‌ಗಾಗಿ ಗೂಗಲ್ ಹುಡುಕಾಟದ ಮೂಲಕ ಸಾಕಷ್ಟು ಹುಡುಕಿದರು. ಅಂಬರ್ ಹರ್ಡ್ ಮೂರನೇ, ವ್ಲಾಡಿಮಿರ್ ಪುಟಿನ್ ನಾಲ್ಕನೇ ಮತ್ತು ಕ್ರಿಸ್ ರಾಕ್ ಐದನೇ ಸ್ಥಾನ ಪಡೆದರು. ಥಾರ್: ಲವ್ ಮತ್ತು ಥಂಡರ್ ವಿಶ್ವದಲ್ಲೇ ಅತಿ ಹೆಚ್ಚು ಗೂಗಲ್ ಮಾಡಿದ…