Author: admin

ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಒಡೆಯರ್ ಹೆಸರಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ. ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ ಎಂದಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮಹಾರಾಜರು ಮೈಸೂರಿಗೆ ಕೊಟ್ಟ ನೂರು ಕೊಡುಗೆಗಳನ್ನ ನಾನು ಹೇಳುತ್ತೇನೆ. ಟಿಪ್ಪು ಬೆಂಬಲಿಸುವವರು ಟಿಪ್ಪು ಕೊಟ್ಟ ಮೂರು ಕೊಡುಗೆಗಳನ್ನ ಹೇಳಲಿ ಸಾಕು. ಟಿಪ್ಪುಗೆ ಮೈಸೂರಿಗೆ ಏನು ಸಂಬಂಧ. ಟಿಪ್ಪು ಏನ್ ಮೈಸೂರಿನವನಾ..?  ಅವನು ಶ್ರೀರಂಗಪಟ್ಟಣದವನು. ಮೈಸೂರಿನಲ್ಲಿ ನಡೆದಿರುವ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಇದೆ. ಒಂದು ಟ್ರೈನ್ ಗೆ ಇಟ್ಟ ಹೆಸರನ್ನ ಬದಲಾಯಿಸಿದ ಉದಾಹರಣೆಗಳೇ ಇಲ್ಲ. ಆದ್ರೆ ಇದನ್ನ ಉದ್ದೇಶ ಪೂರ್ವಕವಾಗಿಯೇ ಪ್ರಯತ್ನ ಪಟ್ಟು ಬದಲಾಯಿಸಿದ್ದೇನೆ ಎಂದರು. ಮೈಸೂರು ಮಹಾರಾಜರ ಬಗ್ಗೆ ಕೇವಲವಾಗಿ ಮಾತನಾಡುವ ಸಿದ್ದರಾಮಯ್ಯನವರಿಂದ ನಾವು ಪಾಠ ಕಲಿಯುವ ಅಗತ್ಯ ಇಲ್ಲ. ಟಿಪ್ಪು ಹೆಸರನ್ನ ಜನರ ಮನಸ್ಸಿನಿಂದ ತೆಗೆಯಲು ಆಗಲ್ಲಾ ಎನ್ನುವವರ ಹೆಸರನ್ನೇ ಜನ ಮರೆಯುತ್ತಿದ್ದಾರೆ. ಅದಕ್ಕೆ ಉದಾಹರಣೆ ಕೂಡ ಇದೆ. ನಾನು ಮೈಸೂರಿಗೆ 10…

Read More

ಮೈಸೂರು: ರಜೆ ಮೇಲೆ ಊರಿಗೆ ಬಂದಿದ್ಧ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಚಿಟ್ಟಕ್ಯಾತನಹಳ್ಳಿ ಗ್ರಾಮದ ನಿವಾಸಿ ಯೋಧ ಮಹೇಶ್ (40)  ಹೃದಯಾ‍ಘಾತದಿಂದ ಮೃತಪಟ್ಟಿದ್ದಾರೆ. ಇಂದು ಬೆಳಗಿನ ಜಾವ ಹೃದಯಾಘಾತದಿಂದ ಮಹೇಶ್ ಸಾವನ್ನಪ್ಪಿದ್ದಾರೆ. ಮೃತ ಯೋಧ ಮಹೇಶ್  ಪಶ್ಚಿಮ ಬಂಗಾಳದ ಸೇನೆ ತುಕುಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಾಲ್ಕು ದಿನದ ಹಿಂದೆ ರಜೆ ಮೇಲೆ  ಊರಿಗೆ ಆಗಮಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನ ಬಿಬಿಎಂಪಿ ಅಧಿಕಾರಿಗಳು ಮುಂದುವರೆಸಿದ್ದು, ಈ ನಡುವೆ ತಮ್ಮ ಮನೆ ಡೆಮಾಲಿಷ್ ಮಾಡಲು ಮುಂದಾದ ಹಿನ್ನೆಲೆ ದಂಪತಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ನಗರದ ಕೆಆರ್ ಪುರಂ ಗಾಯತ್ರಿ ಲೇಔಟ್ ಈ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಕ್ಕೆ  ದಂಪತಿ ವಿರೋಧ ವ್ಯಕ್ತಪಡಿಸಿದ್ದಾರೆ.  ಮೈಮೇಲೆ ಪೆಟ್ರೋಲ್ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. 40 ಲಕ್ಷ ಲೋನ್ ಮಾಡಿ ಮನೆ ಕಟ್ಟಿದ್ದೇನೆ.  ಹೇಗೆ ಡೆಮಾಲಿಷನ್ ಮಾಡುತ್ತೀರಾ.  ನಾವು ನಮ್ಮ ಮನೆ ಬಿಡಲ್ಲ. ನಮ್ಮ ಮನೆಯನ್ನ ಡೆಮಾಲಿಷನ್ ಮಾಡಲು ಬಿಡಲ್ಲ ಎಂದು ಪೆಟ್ರೋಲ್ ಕ್ಯಾನ್ ಹಿಡಿದು ಆತ್ಮಹತ್ಯೆ ಬೆದರಿಕೆ ಹಾಕಿದ್ದಾರೆ. ಪೊಲೀಸರು ದಂಪತಿ ಮನವೊಲಿಕೆಗೆ ಯತ್ನಿಸಿದ್ದು ,  ಸ್ಥಳಕ್ಕೆ ಸಿಎಂ ಬರುವಂತೆ ದಂಪತಿ  ಪಟ್ಟು ಹಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹೊಸಪೇಟೆ: ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಾಲ್ಲೂಕಿನ ಕಮಲಾಪುರದ ಡಾ.ಬಿ.ಆರ್.‌ಅಂಬೇಡ್ಕರ್ ಕಾಲೊನಿಯ ಪರಿಶಿಷ್ಟ ಜಾತಿಯ ಹಿರಾಳ್ ಕೊಲ್ಲಾರಪ್ಪ ಅವರ ಮನೆಯಲ್ಲಿ ಉಪಾಹಾರ ಸೇವಿಸಿದರು. ಒಗ್ಗರಣೆ, ಮಿರ್ಚಿ, ಉಪ್ಪಿಟ್ಟು ಸವಿದ್ದು,ಚಹಾ ಕುಡಿದರು. ಅವರೊಂದಿಗೆ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಸಂಸದ ವೈ.ದೇವೇಂದ್ರಪ್ಪ, ಶಾಸಕ ರಾಜುಗೌಡ ಇತರರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಂಡ್ಯ: ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ನಾಲ್ಕುದಿನಗಳ ಕಾಲ ಶ್ರೀ ಮಲೆ ಮಹದೇಶ್ವರರ ಮಹಾ ಕುಂಭಮೇಳ ಮಹೋತ್ಸವ ನಡೆಯಲಿದ್ದು ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಈ ಕುರಿತು ಜೆ ಎಸ್ ಎಸ್ ಶಾಖಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಎಸ್ಎಸ್ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಅ.13 ರಿಂದ ಅ.16 ರವರೆಗೆ ತ್ರಿವೇಣಿ ಸಂಗಮದಲ್ಲಿ ಮಲೆ ಮಹದೇಶ್ವರರ ಮಹಾ ಕುಂಭಮೇಳ ಜರುಗುತ್ತಿದೆ. ನಾಲ್ಕು ದಿನಗಳ ಕಾಲ ಮಹಾ ಕುಂಭಮೇಳಕ್ಕೆ ರಾಜ್ಯ ಹೊರ ರಾಜ್ಯಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ಈ ಮಹಾ ಕುಂಭಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಮಹದೇಶ್ವರರ ಜೀವನ ಚರಿತ್ರೆ ಕುರಿತು ಅಲ್ಲಿ ವಿಚಾರ ಸಂಕಿರಣ ಕೂಡ ನಡೆಯಲಿದೆ. ಮೈಸೂರು, ಚಾಮರಾಜನಗರ ಭಾಗಗಳಿಂದಲೂ ಹೆಚ್ಚಿನ ಸಂಖ್ಯೆಯ ಭಕ್ತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, 2013ರ ಬಳಿಕ  9 ವರ್ಷಗಳ ಬಳಿಕ ಈ…

Read More

ಬೆಂಗಳೂರು : ಗ್ರಾಮಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಓಗಳಿಗೆ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯಿತಿ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತಂದು ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಮೊಟಕುಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಭೆ ತೀರ್ಮಾನ ಕೈಗೊಂಡಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ಅಂಕಿತ ಹಾಕಿದ್ದಾರೆ. ಇತ್ತೀಚೆಗೆ ಸಚಿವ ಬಿ.ಸಿ.ನಾಗೇಶ್ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮಕ ಹಾಗೂ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದಿದ್ದರು. ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು. ಈ ಮೂಲಕ ಎಸ್​ ಎಸ್​ ಎಲ್ ​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿ ಜಾರಿಗೆ ತರಲು ನಿರ್ಧರಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಜಯಪುರ: ಬೈಕ್‌ ಗೆ ಹಿಂಬದಿಯಿಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದ ಮುತ್ತವ್ವ ಗಸ್ತಿ (40) ಮೃತ ಮಹಿಳೆ. ಅಪಘಾತದ ಬಳಿಕ ಬಸ್ ಬಿಟ್ಟು ಕಂಡಕ್ಟರ್, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಬಬಲೇಶ್ವರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಧಾರವಾಡ: ಹೆಂಡತಿ ಕೊಲೆ ಮಾಡಿದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ಶ್ರೀದೇವಿ ರಾಮಾಪುರ ಕೊಲೆಯಾದ ದುರ್ದೈವಿ. ರಾಜು ರಾಮಾಪುರ ಎಂಬಾತನೇ ಪತ್ನಿ ಕೊಂದು ಸಾವಿಗೆ ಶರಣಾದ ಪತಿ‌. ಪತ್ನಿ ಶ್ರೀದೇವಿಯನ್ನು ಹೊಲದಲ್ಲೇ ಕೊಡಲಿಯಿಂದ ಕೊಚ್ಚಿ ರಾಜು ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಹೊಲದಲ್ಲೇ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಕೃಷಿ, ರೇಷ್ಮೆ ಹಾಗೂ ತೋಟಗಾರಿಕೆ ಇಲಾಖೆಗಳ ಸಚಿವಾಲಯ ಮಟ್ಟದ ಉನ್ನತ ಹಾಗೂ ಹಿರಿಯ ಶ್ರೇಣಿಯ ಎರಡು ಸಾವಿರ ಹುದ್ದೆಗಳನ್ನು ರದ್ದುಪಡಿಸಲು ರಾಜ್ಯ ಸಚಿವ ಸಂಪುಟದ ಉಪಸಮಿತಿ ಶಿಫಾರಸು ಮಾಡಿದೆ. ವಿಧಾನಸೌಧದಲ್ಲಿ ಸಚಿವ ಆರ್. ಅಶೋಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವ ಸಂಪುಟದ ಉಸಮಿತಿಯು ಈ ನಿರ್ಣಯ ತೆಗೆದುಕೊಂಡಿದ್ದು, ಕೃಷಿ ಇಲಾಖೆಯಡಿ ಬರುವ ಮೈಸೂರು ತಂಬಾಕು ಕಂಪನಿ, ಕೃಷಿ ಕೈಗಾರಿಕೆ ನಿಗಮ, ಆಹಾರ ನಿಗಮ, ರೇಷ್ಮೆ ಬೆಳೆಯದ ಜಿಲ್ಲೆಗಳಲ್ಲಿನ ಜಿಲ್ಲಾ, ತಾಲೂಕುಮಟ್ಟದ ಅಧಿಕಾರಿಗಳ ಹುದ್ದೆಗಳು, ಕೆಳಹಂತದ ಸಿಬ್ಬಂದಿ ಕೃಷಿ ಇಲಾಖೆಗೆ ಹಸ್ತಾಂತರಿಸುವ ಕುರಿತು ಶಿಫಾರಸು ಮಾಡಲಾಗಿದೆ. ಯಾವುದೆಲ್ಲ ವಿಲೀನ?: ಶಿಕ್ಷಣ ಇಲಾಖೆಯಲ್ಲಿ ಮುದ್ರಣ, ಲೇಖನ ಸಾಮಗ್ರಿ, ಪ್ರಕಟಣೆ ಇಲಾಖೆ. ಪ್ರವಾಸೋದ್ಯಮ ಇಲಾಖೆಯಲ್ಲಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ. ಯಾವುದು ರದ್ದು?: ಮೈಸೂರು ತಂಬಾಕು ಕಂಪನಿ, ಕರ್ನಾಟಕ ಕೃಷಿ ಕೈಗಾರಿಕಾ ನಿಗಮ, ಕರ್ನಾಟಕ ಆಹಾರ ನಿಗಮ. ರೇಷ್ಮೆ ಬೆಳೆಯದ ಜಿಲ್ಲೆಗಳಲ್ಲಿನ ಜಿಲ್ಲಾ, ತಾಲೂಕುಮಟ್ಟದ ಅಧಿಕಾರಿಗಳ ಹುದ್ದೆಗಳು. ಕೆಳಹಂತದ ಸಿಬ್ಬಂದಿ ಕೃಷಿ ಇಲಾಖೆಗೆ…

Read More