Author: admin

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದ ಬೆನ್ನಲ್ಲೆ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಶಾಸಕ ಕೆ.ಎಸ್ ಈಶ್ವರಪ್ಪ ಬಳಿಕ ನಿನ್ನೆ ಸಿಎಂ ಭೇಟಿಯಾಗಿ ಮಂತ್ರಿ ಸ್ಥಾನ ಬೇಡ ಎಂದಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ ರವಿ,  ಕೆ.ಎಸ್ ಈಶ್ವರಪ್ಪರಿಗೆ  ಸಚಿವ ಸ್ಥಾನ ಕೊಡಬೇಕಿತ್ತು. ಪಕ್ಷಕಟ್ಟಿದ ಹಿರಿಯ ನಾಯಕರಲ್ಲಿ ಈಶ್ವರಪ್ಪ ಅವರು ಒಬ್ಬರು.  ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ತನಿಖೆಯಲ್ಲಿ ಅವರ ಪಾತ್ರ ಇಲ್ಲವೆಂದು ಸಾಬೀತು ಆಗಿದೆ. ಹೀಗಾಗಿ ಸಚಿವ ಸ್ಥಾನ ನೀಡಬೇಕಿತ್ತು. ಈಗ ಸಚಿವ ಸ್ಥಾನ ಕೇಳೋದು ತಪ್ಪಲ್ಲ ಎಂದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಿ.ಟಿ ರವಿ, ಮೀಸಲಾತಿ ಹೆಚ್ಚಳ ಮಾಡುತ್ತೇವೆಂದು ದಲಿತರಿಗೆ ಮೋಸ ಮಾಡಿದ್ದರು. ಈಗ ಎಸ್.ಸಿ ಎಸ್ ಟಿ ಮೀಸಲಾತಿ ಹೆಚ್ಚಿಸಿದ್ದು ಬಿಜೆಪಿ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಇದು ಬಹಿರಂಗ ಸತ್ಯ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತಮಿಳಿನ ಖ್ಯಾತ ನಿರ್ದೇಶಕ ಹಾಗೂ ಹಾಸ್ಯ ನಟ ಡಿಪಿ ಗಜೇಂದ್ರನ್ (68) ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಲ್ಲ ಕಾಲಂ ಪೊರಂಥಾಚು, ಪಾಂಡಿ ನಟುತ್ ತಂಗಂ, ಬಜೆಟ್ ಪದ್ಮನಾಭನ್, ಮಿಡಲ್ ಕ್ಲಾಸ್ ಮಾಧವನ್, ಸೀನಾ ಥಾನಾ ಸೇರಿ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಜತೆಗೆ ಪ್ರಿಯಮುದನ್, ಪಿತಾಮಗನ್, ಪೆರಳಗನ್, ವಿಲ್ಲು, ವೇಲಾಯುತಂ, ಚಂದ್ರಮುಖಿ ಸೇರಿ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ತಮಿಳು ಅಭಿಮಾನಿಗಳಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಹಾಸ್ಯ ನಟನೆ ಬಹಳ ಮೆಚ್ಚುಗೆಗೆ ಪಾತ್ರವಾಗಿದೆ. 2021 ರಲ್ಲಿ ಕೋವಿಡ್ ಸಹ ಬಂದಿತ್ತು ಇವರಿಗೆ ಚೇತರಿಸಿಕೊಂಡು ವಿಶ್ರಾಂತಿ ಪಡೆಯುತ್ತಿದ್ದರು. ತಮಿಳು ಚಿತ್ರರಂಗಕ್ಕೆ ಇದು ಒಂದು ತುಂಬಲಾರದ ನಷ್ಟ ಭಗವಂತ ಇವರ ಆತ್ಮಕ್ಕೆ ಶಾಂತಿ ನೀಡಲಿ ಕುಟುಂಬಕ್ಕೆ ನೋವು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಅನೇಕ ನಟರು, ಅಭಿಮಾನಿಗಳು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಅಸ್ಸಾಂ ಸರ್ಕಾರ ಬಾಲ್ಯ ವಿವಾಹದ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ರಾಜ್ಯದಲ್ಲಿ ಇದುವರೆಗೆ 4074 ಪ್ರಕರಣಗಳಲ್ಲಿ 2258 ಜನರನ್ನು ಬಂಧಿಸಲಾಗಿದೆ. ಎರಡು ವಾರಗಳಲ್ಲಿ ಬಾಲ್ಯವಿವಾಹ ಪ್ರಕರಣಗಳಲ್ಲಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. 14 ವರ್ಷದೊಳಗಿನ ಮಕ್ಕಳನ್ನು ಮದುವೆಯಾಗುವ ಪುರುಷರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಮತ್ತು 14–18 ವರ್ಷದೊಳಗಿನ ಮಕ್ಕಳನ್ನು ಮದುವೆಯಾಗುವ ಪುರುಷರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಆದರೆ ಸರ್ಕಾರದ ಸಾಮೂಹಿಕ ಕ್ರಮದ ವಿರುದ್ಧ ಪ್ರತಿಭಟನೆ ಬಲವಾಗಿತ್ತು. ಬಂಧನದ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಬಂಧನಕ್ಕೊಳಗಾದವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಂಬಂಧಿಕರು ಪೊಲೀಸ್ ಠಾಣೆಗೆ ಮೆರವಣಿಗೆ ನಡೆಸಿ ಆತ್ಮಹತ್ಯೆ ಬೆದರಿಕೆ ಹಾಕಿದ್ದರು. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಮಾತನಾಡಿ, ಬಾಲ್ಯ ವಿವಾಹದ ವಿರುದ್ಧದ ಕ್ರಮವು ಜಾತ್ಯತೀತವಾಗಿರುತ್ತದೆ ಮತ್ತು ಯಾವುದೇ ಸಮುದಾಯವನ್ನು ಗುರಿಯಾಗಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧುಬ್ರಿ ಜಿಲ್ಲೆಯ ತಮರ್‌ಹತ್‌ನಲ್ಲಿ 200ಕ್ಕೂ ಹೆಚ್ಚು ಮಹಿಳೆಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಬಾಲ್ಯವಿವಾಹದ ಆರೋಪದ ಮೇಲೆ ಪುರುಷನನ್ನು…

Read More

ಪತ್ರಕರ್ತರು ಅಖಂಡ ಕರ್ನಾಟಕದ ಪತ್ರಕರ್ತರಾಗಬೇಕು. ಪತ್ರಿಕೆ ಇರಲಿಲ್ಲ ನಾವು ಇರುತ್ತಿರಲಿಲ್ಲ. ರಾಜಕಾರಣಿಗಳು ಇಲ್ಲ ಅಂದಿದ್ರೆ ಪತ್ರಕರ್ತರು ಇರುತ್ತಿರಲಿಲ್ಲ. ಪತ್ರಕರ್ತರು ಮತ್ತು ರಾಜಕಾರಣಿಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಲಿದರು. ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಿರುವ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪತ್ರಕರ್ತರ ಸಂಘ ಗುರುತಿಸಿದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತದೆ. ನಿವೃತ್ತ ಪತ್ರಕರ್ತರಿಗೆ ಮಾಶಾಸನ ಹೆಚ್ಚಳಕ್ಕೂ ಕ್ರಮ ಕೈಗೊಳ್ಳುತ್ತೇವೆ. ರಾಜ್ಯ ಪತ್ರಕರ್ತರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಹೈಬ್ರೀಡ್ ಕಾಲದಲ್ಲೂ ವಿಜಯಪುರ ಜೋಳ ಶ್ರೇಷ್ಟ.  ವಿಜಯಪುರ ಇಡೀ ದೇಶಕ್ಕೆ ಅನ್ನ ನೀಡುತ್ತದೆ. ನನ್ನನ್ನು ನಾಡದೊರೆ ಎನ್ನಬೇಡಿ ನಾಡದೊರೆ ಎಂದರೆ ನನಗೆ ಮುಜುಗರವಾಗುತ್ತೆ ಅದಕ್ಕೆ ಬ್ರೇಕ್ ಹಾಕಿ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಪಾವಗಡ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಗುರುವಾರ ಬೆಳಿಗ್ಗೆ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಸುಮಾರು 40 ವರ್ಷ ವಯಸ್ಸಿನ ಈ ವ್ಯಕ್ತಿ ಪಟ್ಟಣದಲ್ಲಿ ಭಿಕ್ಷುಕನಂತೆ ಕಂಡು ಬಂದಿದ್ದ ಎಂದು ಸ್ಥಳೀಯರು  ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗೋಧಿ ಬಣ್ಣ ದುಂಡುಮುಖ, ಸಾಧಾರಣ ಶರೀರ, ಕಪ್ಪು ಮಿಶ್ರಿತ ಬಿಳಿ ಕೂದಲು, ನೀಲಿ ಕಪ್ಪು ಮಿಶ್ರಿತ ಅಂಗಿ, ಸಿಮೆಂಟ್ ಕಲರ್ ಲುಂಗಿ, ಕಂದು ಬಣ್ಣದ ಡ್ರಾಯರ್  ಧರಿಸಿರುವ ಈ ವ್ಯಕ್ತಿ ಅಪರಿಚಿತನಾಗಿದ್ದಾನೆ. ಈ ವ್ಯಕ್ತಿಯ ವಾರಸುದಾರರು  ತಿಳಿದವರು ಯಾರಾದರೂ ಇದ್ದರೆ ಕೂಡಲೇ ಪಾವಗಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿ  ಎಂದು ಪಟ್ಟಣ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಜಯ್ ಸಾರಥಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಸಂಪರ್ಕಕ್ಕಾಗಿ: 08136-245666,9480802977,9480802941 ವರದಿ: ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಪಶ್ಚಿಮ ಬಂಗಾಳ ಬಿಜೆಪಿ-ರಾಜ್ಯಪಾಲರ ಘರ್ಷಣೆಗೆ ಕೇಂದ್ರ ನಾಯಕತ್ವದ ಮಧ್ಯಪ್ರವೇಶ. ರಾಜ್ಯಪಾಲರೊಂದಿಗಿನ ಭಿನ್ನಾಭಿಪ್ರಾಯ ಬಗೆಹರಿಸುವಂತೆ ಬಿಜೆಪಿ ಕೇಂದ್ರ ನಾಯಕತ್ವ ರಾಜ್ಯ ಬಿಜೆಪಿ ನಾಯಕರಿಗೆ ಅಲ್ಟಿಮೇಟ್ ನೀಡಿದೆ. ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ಯಾವುದೇ ಸಾರ್ವಜನಿಕ ಪ್ರತಿಕ್ರಿಯೆ ನೀಡಬಾರದು ಎಂದು ಕೇಂದ್ರ ನಾಯಕತ್ವ ಕಟ್ಟುನಿಟ್ಟಿನ ಸೂಚನೆ ನೀಡಿದೆ. ರಾಜಭವನಕ್ಕೆ ಮಾನಹಾನಿ ಮಾಡುವ ಹೇಳಿಕೆ ನೀಡಬೇಡಿ. ರಾಜ್ಯಪಾಲರು ಮಮತಾ ಅವರು ಸರ್ಕಾರಕ್ಕೆ ಮಿತಿ ಮೀರಿ ಸಹಾಯ ಮಾಡುತ್ತಿದ್ದಾರೆ ಎಂದು ರಾಜ್ಯ ನಾಯಕರು ಆರೋಪಿಸಿದ್ದರು. ವಿವಾದದ ಹಿನ್ನೆಲೆಯಲ್ಲಿ ಆನಂದ ಬೋಸ್ ದೆಹಲಿಗೆ ಭೇಟಿ ನೀಡಿದ್ದರು. ಈ ವಿಚಾರದಲ್ಲಿ ಕೇಂದ್ರ ನಾಯಕತ್ವದ ಮಧ್ಯಪ್ರವೇಶ. ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಿಕಟವರ್ತಿಯಾಗಿದ್ದಾರೆ ಎಂದು ಕೇಂದ್ರ ನಾಯಕತ್ವವು ಬಂಗಾಳದ ನಾಯಕರಿಗೆ ವಿವರಿಸಿದೆ. ಆನಂದ ಬೋಸ್ ಅವರ ಮಾನಹಾನಿ ಮಾಡುವುದು ನರೇಂದ್ರ ಮೋದಿಯವರ ಮಾನಹಾನಿ ಮಾಡಿದಂತೆ ಎಂದು ನಾಯಕತ್ವ ನೆನಪಿಸಿದೆ. ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸಿವಿ ಆನಂದ ಬೋಸ್ ಅವರನ್ನು…

Read More

ಚಿಕ್ಕನಾಯಕನಹಳ್ಳಿ: ದೇವಾಲಯದೊಳಗೆ ನುಗ್ಗಿರುವ ಕಳ್ಳರು, ದೇವಸ್ಥಾನದೊಳಗಿದ್ದ ದೇವರ ಮೂರ್ತಿ ಸಹಿತ ಬೆಲೆಬಾಳುವ ವಸ್ತುಗಳನ್ನು ದೋಚಿರುವ ಘಟನೆ  ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಕೆಂಕೆರೆಯಲ್ಲಿ ನಡೆದಿದೆ. ಕೆಂಕೆರೆಯಲ್ಲಿರುವ ಕಾಳಮ್ಮ ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು,  ಕಾಳಮ್ಮ ದೇವರ 3 ಬಂಗಾರದ ಮುಖ ಪದ್ಮ, ಛತ್ರಿ, ದೇವಸ್ಥಾನದ ಹುಂಡಿಯನ್ನು ಕದ್ದೊಯ್ದಿದ್ದಾರೆ. ಕಳವಾಗಿರುವ ವಸ್ತುಗಳ ಒಟ್ಟು ಮೌಲ್ಯ 2.50 ಕೋಟಿ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತುಮಕೂರು ಡಿಸಿ, ಎಸ್ ಪಿ ಸ್ಥಳಕ್ಕೆ ದೌಡಾಯಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಳ್ಳರು ದೇವರನ್ನು ಕೂರಿಸುವ ಹಲಗೆಯೊಂದನ್ನು ಬಿಟ್ಟು ಬೇರೆಲ್ಲ ವಸ್ತುಗಳನ್ನು ದೋಚಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಹುಬ್ಬಳ್ಳಿ: ಮೂರು ಮಕ್ಕಳ ತಂದೆಯೊಬ್ಬ 17 ವರ್ಷದ ಅಪ್ರಾಪ್ತೆಯನ್ನು ಮದುವೆಯಾದ ಘಟನೆ ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಹನುಮಂತ ಉಪ್ಪಾರ ಈಗಾಗಲೇ ಮದುವೆಯಾಗಿ ಮೂರು ಮಕ್ಕಳಿದ್ದರೂ ಈಗ ಅಪ್ರಾಪ್ತ ಬಾಲಕಿಯೊಂದಿಗೆ ಎರಡನೇ ಮದುವೆಯಾಗಿದ್ದಾನೆ. ಎಂದು ಫೋಟೋಗಳ ಸಮೇತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹನುಮಂತ ಉಪ್ಪಾರ ಹುಬ್ಬಳ್ಳಿಯ ಮಹದೇವ ನಗರದ ನಿವಾಸಿಯಾಗಿದ್ದು, ನೇತ್ರಾ ಎಂಬಾಕೆಯನ್ನು ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದ. ಇಬ್ಬರಿಗೂ ಮೂರು ಮಕ್ಕಳು ಕೂಡ ಜನಿಸಿದ್ದಾರೆ. ಆದರೆ ಈಗ ಆರೋಪಿ ಮೊದಲ ಪತ್ನಿ ನೇತ್ರಾ ಅವರನ್ನು ಬಿಟ್ಟು ಮತ್ತೊಂದು ಮದುವೆಯಾಗಿದ್ದಾನೆ. ಅದರಲ್ಲೂ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಆರೋಪಿ ಮದುವೆಯಾಗಿದ್ದು, ಆಕೆಗೆ ಹಣದ ಆಮಿಷ ತೋರಿಸಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾನೆ ಎಂದು ಮೊದಲ ಪತ್ನಿ ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ವಾಣಿ ಜೈರಾಮ್ ಅವರು ಫೆಬ್ರವರಿ 4 ರಂದು ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಅವರು ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರ ಹಠಾತ್ ನಿಧನ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ದೇಶಾದ್ಯಂತ. ಅವರು ತಮ್ಮ ವೃತ್ತಿಜೀವನದಲ್ಲಿ 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದರು. ಅವರ ಹಠಾತ್ ನಿಧನವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು,. ಈ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ನವದೆಹಲಿ: ಅಗ್ನಿಪಥ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ತರಲಾಗಿದ್ದು ದೈಹಿಕ ಕ್ಷಮತೆ ಪರೀಕ್ಷೆಗೂ ಮುನ್ನ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕಾಗುತ್ತದೆ ಎಂದು ಭಾರತೀಯ ಸೇನೆ ಘೋಷಿಸಿದೆ. ಇದಕ್ಕೆ ಸಂಬಂಧಸಿದಂತೆ ಸೇನೆಯು ಶುಕ್ರವಾರ ಜಾಹೀರಾತು ಬಿಡುಗಡೆ ಮಾಡಿದ್ದು ಅಗ್ನಿವೀರರ ನೇಮಕಕ್ಕೆ ಸಂಬಂಧಿಸಿದ ಮೂರು ಹಂತಗಳ ಬಗ್ಗೆ ವಿವರಣೆ ನೀಡಿದೆ. ಅಗ್ನಿವೀರರಾಗಿ ನೇಮಕಗೊಳ್ಳಲು ಬಯಸುವ ಅಭ್ಯರ್ಥಿಗಳು ಮೊದಲು ಆನ್ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆ (ಅಇಇ) ಬರೆಯಬೇಕಾಗುತ್ತದೆ. ನಂತರ ದೈಹಿಕ ಕ್ಷಮತೆ ಪರೀಕ್ಷೆ ಹಾಗೂ ನೇಮಕಾತಿಗೂ ಮುನ್ನ ನಡೆಸುವ ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ. ನೇಮಕಾತಿ ರ‍್ಯಾಲಿಗಳಿಗೆ ಬರುವ ಸಾವಿರಾರು ಅಭ್ಯರ್ಥಿಗಳು ನಿಭಾಯಿಸಲು ತಗಲುವ ಆಡಳಿತಾತ್ಮಕ ವೆಚ್ಚ, ಸಾಗಾಟದ ವ್ಯವಸ್ಥೆ ಇತ್ಯಾದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಬದಲಾವಣೆ ಮಾಡಲಾಗಿದೆ. ಇದೀಗ ಮೊದಲು ಪ್ರವೇಶ ಪರೀಕ್ಷೆ ಮಾಡುವುದರಿಂದ  ಅರ್ಹ ಅಭ್ಯರ್ಥಿಗಳು ಮಾತ್ರ ನೇಮಕಾತಿ ರ‍್ಯಾಲಿಗಳಿಗೆ ಬರುವಂತಾಗುತ್ತದೆ. ಇದು ನೇಮಕಾತಿ ಪ್ರಕ್ರಿಯೆಯನ್ನು ಸುಗಮಗೊಳಿಸಲಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಹೊಸ ನೇಮಕಾತಿ ನಿಯಮ ೨೦೨೩-೨೪ರಲ್ಲಿ ಸೇನೆ ಸೇರ ಬಯಸುವ ೪೦,೦೦೦ ಅಭ್ಯರ್ಥಿಗಳಿಗೆ…

Read More