Subscribe to Updates
Get the latest creative news from FooBar about art, design and business.
- ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
- ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
- ತುಮಕೂರು | ಆರ್ ಎಸ್ ಎಸ್ ನಿಷೇಧಿಸಲು ಡಿಎಸ್ ಎಸ್ ಆಗ್ರಹ
- ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
- ಮನೆ–ಮನೆಗೆ ಪೊಲೀಸ್: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
- ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್
- ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
- ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
Author: admin
ನವದೆಹಲಿ: ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರ ಹಣದ ಮಾಹಿತಿ ಹಾಗೂ ಖಾತೆದಾರರ ನಾಲ್ಕನೇ ವಿವರvನ್ನು ಕೇಂದ್ರ ಸರ್ಕಾರ ಪಡೆದುಕೊಂಡಿದೆ. ವೈಯುಕ್ತಿಕ ವ್ಯಕ್ತಿಗಳ ಖಾತೆ, ಕಾರ್ಪೋರೇಟ್, ಟ್ರಸ್ಟ್ ಖಾತೆ ಸೇರಿದಂತೆ 100ಕ್ಕೂ ಹೆಚ್ಚು ಖಾತೆದಾರರ ಮಾಹಿತಿಯನ್ನು ಕೇಂದ್ರ ಸರ್ಕಾರ ಪಡೆದುಕೊಂಡಿದೆ. ವಾರ್ಷಿಕ ಮಾಹಿತಿ ವಿನಿಮಿಯ ನೀತಿ ಅಡಿಯಲ್ಲಿ ಸ್ವಿಸ್ ಬ್ಯಾಂಕ್ 101 ದೇಶಗಳ 34 ಲಕ್ಷ ಖಾತೆಗಳ ಮಾಹಿತಿಯನ್ನು ಆಯಾ ದೇಶಕ್ಕೆ ನೀಡಿದೆ. ಫೆಡರಲ್ ಟ್ಯಾಕ್ಸ್ ಅಡ್ಮಿನಿಸ್ಟ್ರೇಷನ್ ನೀಡಿದ ಮಾಹಿತಿಯ ಪ್ರಕಾರ, ಭಾರತೀಯರ ಉಳಿತಾಯ ಖಾತೆಯ ಠೇವಣಿ 4,800 ಕೋಟಿ ರು.ಗಳಿಗೆ ಏರಿಕೆಯಾಗಿದೆ. ಇದು ಕಳೆದ 7 ವರ್ಷಗಳ ಗರಿಷ್ಠ. 15.61 ಸಾವಿರ ಕೋಟಿ ರೂ.ಗಳಷ್ಟುಮೌಲ್ಯದ ಬಾಂಡ್, ಭದ್ರತೆಗಳನ್ನು ಭಾರತೀಯರ ಗ್ರಾಹಕರ ಹೆಸರಿನಲ್ಲಿ ಸ್ವಿಸ್ ಬ್ಯಾಂಕಿನಲ್ಲಿಡಲಾಗಿದೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ : ಮುಂಬರುವ ಅಂಧೇರಿ ಪೂರ್ವ ವಿಧಾನಸಭಾ ಉಪಚುನಾವಣೆಗೆ ಚುನಾವಣಾ ಆಯೋಗವು ಉದ್ಧವ್ ಠಾಕ್ರೆ ನೇತೃತ್ವದ ಬಣಕ್ಕೆ ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಬಣಕ್ಕೆ ಬಾಳಾಸಾಹೆಬಂಚಿ ಶಿವಸೇನಾ ಎಂಬ ಹೆಸರನ್ನು ನಿಗದಿಪಡಿಸಿದೆ. ಚುನಾವಣಾ ಸಂಸ್ಥೆಯು ಠಾಕ್ರೆ ನೇತೃತ್ವದ ಶಿವಸೇನಾ ಪಕ್ಷದ ಚಿಹ್ನೆಯಾಗಿ ಉರಿಯುತ್ತಿರುವ ಟಾರ್ಚ್ ನೀಡಿತು. ಆದರೆ, ಶಿಂಧೆ ಬಣಕ್ಕೆ ಪಕ್ಷದ ಚಿಹ್ನೆಯನ್ನು ನೀಡದೆ, ಹೊಸದಾಗಿ ಚಿಹ್ನೆಗಳ ಪಟ್ಟಿಯನ್ನು ನೀಡುವಂತೆ ಅದು ಹೇಳಿದೆ. ಹಿಂದಿನ ದಿನ ಠಾಕ್ರೆ ನೇತೃತ್ವದ ಶಿವಸೇನಾ ಬಣವು ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಸ್ಥಗಿತಗೊಳಿಸುವ ಭಾರತೀಯ ಚುನಾವಣಾ ಆಯೋಗದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿತ್ತು. ಮಹಾರಾಷ್ಟ್ರದಲ್ಲಿ ಮುಂಬರುವ ಉಪಚುನಾವಣೆಯ ದೃಷ್ಟಿಯಿಂದ ಚುನಾವಣಾ ಆಯೋಗ, ಶಿವಸೇನಾದ ಬಿಲ್ಲು ಮತ್ತು ಬಾಣ ಚಿಹ್ನೆಯನ್ನು ತಡೆ ಹಿಡಿದು ಪಕ್ಷದ ಠಾಕ್ರೆ ಅವರ ಬಣ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣ ಬಳಸದಂತೆ ನಿರ್ಬಂಧಿಸಿದೆ. ಪಕ್ಷದ ಮೂರು ವಿಭಿನ್ನ ಹೆಸರಿನ…
ಬೆಂಗಳೂರು: ಇಂದಿನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ಆರಂಭವಾಗಲಿದೆ. ಬಿಜೆಪಿಯ ಜನಸಂಕಲ್ಪ ಯಾತ್ರೆ ರಾಯಚೂರು ಜಿಲ್ಲೆಯಿಂದ ಆರಂಭಗೊಳ್ಳಲಿದ್ದು, ಯಾತ್ರೆಯು ಡಿಸೆಂಬರ್ 25 ಕ್ಕೆ ರಾಮನಗರ ಜಿಲ್ಲೆಯಲ್ಲಿ ಅಂತ್ಯಗೊಳ್ಳಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯು ಬಿಜೆಪಿ ಶಾಸಕರ ಕ್ಷೇತ್ರದಲ್ಲಿ ಮಾತ್ರವಲ್ಲದೇ ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಶಾಸಕರ ಕ್ಷೇತ್ರದಲ್ಲಿಯೂ ಸಂಚರಿಸಲಿದ್ದು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುವುದು. ಜೊತೆಗೆ ಬೃಹತ್ ಸಮಾವೇಶಗಳನ್ನು ಸಹ ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಎರಡು ಕ್ಷೇತ್ರಗಳಂತೆ 50ಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಸಂಚರಿಸಲಿದೆ. ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಜನಸಂಕಲ್ಪ ಯಾತ್ರೆ ಆರಂಭವಾಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳ ಕಾಲ ಸರಳವಾಗಿ ರಾಜ್ಯೋತ್ಸವ ಆಚರಿಸಲಾಗಿತ್ತು. ಆದರೆ ಈ ಬಾರಿ ವ್ಯವಸ್ಥಿತವಾಗಿ, ಅದ್ಧೂರಿಯಾಗಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ (ಅ.10) ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವ್ಯವಸ್ಥಿತ ಪರೇಡ್ ಆಯೋಜನೆ: ರಾಜ್ಯೋತ್ಸವ ಹಿನ್ನೆಲೆಯಲ್ಲಿ ನವೆಂಬರ್ 1 ರಂದು ಕ್ರೀಡಾಂಗಣದಲ್ಲಿ ಪೊಲೀಸ್ ಇಲಾಖೆ, ಎನ್.ಸಿ., ಸ್ಕೌಟ್ಸ್ ಗೈಡ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಪರೇಡ್ ನಡೆಸಲಾಗುವುದು.ಈ ಮೂಲಕ ರಾಜ್ಯೋತ್ಸವದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ ಕನ್ನಡ ರಾಜ್ಯೋತ್ಸವ ಕಳೆ ಹೆಚ್ಚಿಸಬೇಕು ಎಂದು ಶಿಕ್ಷಣ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ವೈಭವಪೂರ್ಣ ರೂಪಕಗಳ ಮೆರವಣಿಗೆ: ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳು ತಮ್ಮದೇ ಶೈಲಿಯಲ್ಲಿ ವೈಭವಪೂರ್ಣ ರೂಪಕಗಳನ್ನು ಪ್ರದರ್ಶಿಸಬೇಕು. ಜೊತೆಗೆ ಕನ್ನಡ ಪರ ವಿವಿಧ ಸಂಘಟನೆಗಳು ನಾಡು, ನುಡಿ, ಸಂಸ್ಕೃತಿ ಬಿಂಬಿಸುವ…
ಬೆಳಗಾವಿ : ದಸರಾ ಸಾಂಸ್ಕೃತಿಕ ಹಾಗೂ ಕ್ರೀಡಾ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಢೋಲ-ತಾಷೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರಗು ತಂದರು. ಶಾಸಕ ಅನಿಲ ಬೆನಕೆ ಆಯೋಜಿಸಿದ ದಸರಾ ಮಹೋತ್ಸವದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಶಾಸಕ ಅನಿಲ ಬೆನಕೆ ಹಾಗೂ ಬೆಳಗಾವಿ ಬಿಜೆಪಿ ಮುಖಂದರು ಸತ್ಕರಿಸಿ, ಆಶೀರ್ವಾದ ಪಡೆದರು. ನಗರದ ಸರದಾರ ಮೈದಾನದಲ್ಲಿ ಕಳೆದ 10 ದಿನಗಳಿಂದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು, ಕೊನೆಯ ದಿನವಾದ ನಿನ್ನೆ ಬಿಜೆಪಿಯಲ್ಲಿ ಸಂಘಟನಾ ಚತುರರು ಎಂದೇ ಪ್ರಖ್ಯಾತಿ ಗಳಿಸಿರುವ ಬಿ.ಎಲ್.ಸಂತೋಷ್ ಆಗಮಿಸಿ, ಕೊನೆಯ ದಿನದ ಡೋಲ-ತಾಷೆ ಸ್ಪರ್ಧೆಗಳನ್ನು ವೀಕ್ಷಿಸಿ, ಖುಷಿ ಪಟ್ಟು, ಕಾರ್ಯಕ್ರಮಕ್ಕೆ ಹೆಚ್ಚು ಮೆರಗು ನೀಡಿದರು. ಕಳೆದ 10 ದಿನದಿಂದ ದಸರಾ ಹಬ್ಬದ ಪ್ರಯುಕ್ತ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಲಾಗಿತ್ತು. ನಡೆದ ಎಲ್ಲಾ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ ಸ್ಪರ್ಧೆಗಳಿಗೆ ಬಹುಮಾನ ವಿತರಣೆ ಮಾಡಲಾಗಿದೆ.…
ಬೆಳಗಾವಿ: ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ನಿಗದಿಪಡಿಸುವಂತೆ ಚೆನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಧಾರಾಕಾರವಾಗಿ ಸುರಿಯುವ ಮಳೆಯಲ್ಲಿ ಬೀದಿಗಿಳಿದ ರೈತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ನಗರದ ಅಶೋಕ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ‍್ಯಾಲಿಯನ್ನು ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ತಮನೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆಗಮಿಸದ ಹಿನ್ನೆಲೆ, ರೈತರು ಕಾಂಪೌಂಡ್ ಹಾರಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ: ಸಣ್ಣ ಭೂಮಿಯಲ್ಲಿ ಉತ್ತಮ ಆದಾಯ ಪಡೆಯುವುದು ತೀರಾ ಕಡಿಮೆ ಅನ್ನುವ ಮಾತು ರೈತರಲ್ಲಿದೆ. ಅದೇ ಚಿಕ್ಕ ಭೂಮಿಯಲ್ಲಿ ಉತ್ತಮ ಆದಾಯ ಪಡೆದು ಯಶ್ವಸಿಯಾದವರ ಸಂಖ್ಯೆಯೂ ಕಡಿಮೆ ಇಲ್ಲ. ಹೀಗೆ ಒಂದು ಏಕರೆ ಭೂಮಿಯಲ್ಲಿ ಏನು ಆದಾಯ ಬರುತ್ತೆ, ಕೆಲಸಕ್ಕೆ ಬರುವ ಕೆಲಸಗಾರರಿಗೆ ಸಾಲುವುದಿಲ್ಲ ಎಂದು ಸುಮ್ಮನಾಗಿದ್ದ ರೈತ ಬಸಪ್ಪ ಗಂಜಿಹಾಳ, ಒಂದು ಎಕರೆ ಭೂಮಿಯಲ್ಲಿ ಬದನೆಕಾಯಿ , ಮೆಣಸಿನಕಾಯಿ ಸೇರಿ ಕುಟುಂಬಕ್ಕೆ ಬೇಕಾಗುವಷ್ಟು ತರಕಾರಿ ಬೆಳೆದು ಸುಮ್ಮನಾಗುತ್ತಾನೆ. ಎಂಟು ಜನವಿರುವ ತಮ್ಮ ಕುಟುಂಬಕ್ಕೆ ಸಾಕಾಗಿ ಉಳಿದ ತರಕಾರಿಯನ್ನು ದಲ್ಲಾಳರ ಮೂಲಕ ಮಾರಾಟ ಮಾಡುತ್ತಿದ್ದರು. ಹೀಗೆ ಸಾಗಿದ ಕುಟುಂಬಕ್ಕೆ ಬರ ಸಿಡಿಲೊಂದು ಬಡದಿತ್ತು. ಬದನೆಕಾಯಿ ಹುಳು ಹತ್ತಿ ಸಂಪೂರ್ಣ ನಾಶವಾಗಿ ಹೋಗಿತ್ತು. ಇದರಿಂದ ರೈತ ಬಸಪ್ಪ ಕುಟುಂಬ ಕಂಗಾಲಾಗಿತ್ತು. ಹೀಗೆ ಸುಮ್ಮನೆ ಕುಳಿತರೇ ಕೆಲಸವಾಗದು ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಭೇಟಿಯಾಗಿ ನಡೆದ ಸಂಗತಿ ಬಗ್ಗೆ ತಿಳಿಸಿದರು. ಅಧಿಕಾರಿಗಳು ನರೇಗಾ ಯೋಜನೆಯಡಿ ಇರುವ ಹಲವು ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದ್ದರು. ಆಗ…
ಗೊಬ್ಬರ, ಡೀಸೆಲ್, ಪೆಟ್ರೋಲ್, ಸಿಮೆಂಟ್, ಗ್ಯಾಸ್, ಸೇರಿದಂತೆ ಎಲ್ಲ ಬೆಲೆಗಳ ಏರಿಕೆ ಆಗಿವೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ಸರ್ಕಾರ ಬಡವರ, ರೈತರ ರಕ್ತ ಹೀರುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು. ರಾಯಚೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೀವೆ ಅಂದ್ರು, ರೈತರ ಖರ್ಚು ಮಾಡುವುದು ದುಪ್ಪಟ್ಟು ಆಯ್ತು ಹೊರೆತು, ಆದಾಯ ಆಗಲಿಲ್ಲ. ರಾಹುಲ್ ಗಾಂಧಿ ಪಾದಯಾತ್ರೆ ಕಂಡು ಬಿಜೆಪಿ ಅವರಿಗೆ ನಡುಕು ಶುರುವಾಗಿದೆ ಎಂದರು. SC, ST ಮೀಸಲಾತಿ ವಿಚಾರ. ಪ್ರಿಯಾಂಕ ಖರ್ಗೆ ಅವರಿಗೆ ಒತ್ತಡ ಹಾಕಿ ನಾವು ಮಾಡಿಸಿದ್ದು. ಕಾಂಗ್ರೆಸ್ ವರದಿ ಕೊಟ್ಟಿ2 ವರ್ಷ 3 ತಿಂಗಳ ಆಗಿದೆ. ಈಗ ಸರ್ಕಾರ ಮೀಸಲಾತಿ ಹೆಚ್ಚಳಕ್ಕೆ ಮುಂದಾಗಿದೆ ಎಂದು ಟೀಕಿಸಿದರು. ಭಾರತ್ ಜೋಡೋ ಪಾದಯಾತ್ರೆ ಮುಗಿದ ಮೇಲೆ ಮುಂದೆ ಎರಡು ಟೀಮ್ ಮಾಡಿ ಟ್ರ್ಯಾಕ್ಟರ್, ರಥಯಾತ್ರೆ ಅಂತ ಮಾಡುತ್ತಿದ್ದೇವೆ. ಎರಡು…
ಕೊರಟಗೆರೆ: ಸಾರ್ವಜನಿಕ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞ ಡಾ.ನವೀನ್ ಕೆ.ಎನ್. ಅವರನ್ನು ಚಿಕ್ಕನಾಯಕನಹಳ್ಳಿಗೆ ಎತ್ತಂಗಡಿ ಮಾಡಲಾಗಿದೆ. ಸಾರ್ವಜನಿಕರ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಡಾ.ನವೀನ್ ಕೆ.ಎನ್. ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಾತ್ಕಾಲಿಕವಾಗಿ ಚಿಕ್ಕನಾಯಕನಹಳ್ಳಿಗೆ ವರ್ಗಾವಣೆ ಮಾಡಿದ್ದಾರೆ. ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞ ಡಾ.ನವೀನ ಕೆ.ಎನ್. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತಾತ್ಕಾಲಿಕ ವರ್ಗಾವಣೆ ಮಾಡಿ ತುಮಕೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ, ಆಸ್ಪತ್ರೆಗಳಿಗೆ ಅಲೆದಾಡಬೇಕಿಲ್ಲ. ಕಂದಾಯ ಇಲಾಖೆ ಅಂಚೆ ಇಲಾಖೆ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಇನ್ನುಮುಂದೆ ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್‌ನಲ್ಲಿ ನಿಮ್ಮ ಮನೆಗೆ ಬರಲಿದೆ. ಆನ್‌ಲೈನ್ & ಆಫ್‌ಲೈನ್‌ನಲ್ಲಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಅಂಚೆ ಇಲಾಖೆಯೇ ಸಂಬಂಧಪಟ್ಟ ಕಚೇರಿಗಳಿಂದ ಅದನ್ನು ಸಂಗ್ರಹಿಸಿ ನಿಖರವಾದ ವಿಳಾಸಕ್ಕೆ ತಲುಪಿಸಲಿದೆ. ರಾಜ್ಯದ ಎಲ್ಲಾ ಅಂಚೆ ಕಚೇರಿಗಳು ಕೂಡ ಈ ಸೇವೆಯನ್ನು ಒದಗಿಸಲಿವೆ. ಹೇಗಿದೆ ಈ ಸೇವೆ? ಹಾಗೆಯೇ ವಿವಿಧ ಕಾರಣಗಳಿಗಾಗಿ ಒಂದೊಮ್ಮೆ ಮರಣ ಸಂಭವಿಸಿದ್ದಲ್ಲಿ, ಅಂತಹವರು ಮರಣ ಪ್ರಮಾಣ ಪತ್ರಕ್ಕಾಗಿ ನಗರದ ಸ್ಥಳೀಯ ಸಂಸ್ಥೆಗಳಿಂದಲೋ ಅಥವಾ ಸರಕಾರಿ ಆಸ್ಪತ್ರೆಯಿಂದಲೋ ಪ್ರಮಾಣ ಪತ್ರಗಳನ್ನು ಪಡೆಯಬೇಕಾಗಿರುತ್ತದೆ. ಇನ್ಮುಂದೆ ಇರಲ್ಲ ಅಲೆದಾಟ: ಆದರೆ ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗ ಇದಕ್ಕಾಗಿ ನಡೆಯುತ್ತಿದ್ದ ಅಲೆದಾಟವನ್ನು ತಪ್ಪಿಸಿದೆ. ಸುಲಭವಾಗಿ ಮನೆ ಬಾಗಿಲಿಗೆ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರ ವಿಳಾಸಕ್ಕೆ ಜನನ ಇಲ್ಲವೇ ಮರಣ ಪ್ರಮಾಣ ಪತ್ರಗಳನ್ನು ತಲುಪಿಸುತ್ತಿದೆ. ಅರ್ಜಿ ಸಲ್ಲಿಸುವುದು…