Subscribe to Updates
Get the latest creative news from FooBar about art, design and business.
- ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
- ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
- ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
- ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
- ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
Author: admin
ಸರಕಾರಿ ಕೆಲಸ ಹುಡುಕುವವರಿಗೆ ಭಾರತೀಯ ಸೇನೆಯ ಗಡಿ ಭದ್ರತಾ ಪಡೆ ಸಿಹಿ ಸುದ್ದಿ ನೀಡಿದ್ದು 1410 ಕಾನ್ಸ್ಟೇಬಲ್ (ಟ್ರೇಡ್ಸ್ಮೆನ್) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಮಾರ್ಚ್ 1, 2023 ಕೊನೆಯ ದಿನಾಂಕವಾಗಿದ್ದು ಗಡಿ ಭದ್ರತಾ ಪಡೆಯ ಅಧಿಕೃತ ವೆಬ್ಸೈಟ್ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಕಾನ್ಸ್ಟೇಬಲ್ (ಪುರುಷ)- 1343 ಹುದ್ದೆಗಳು ಕಾನ್ಸ್ಟೇಬಲ್ (ಮಹಿಳೆ)- 67 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಪಾಸಾಗಿರುವವರು ಮಾರ್ಚ್ 1, 2023ಕ್ಕೆ ಅನುಗುಣವಾಗಿ 18 ರಿಂದ 25 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಕೆಲ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಜೊತೆ ಐಟಿಐ ಪ್ರಮಾಣ ಪತ್ರವೊಂದಿರಬೇಕೆಂದು ತಿಳಿಸಲಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು ಇದೀಗ ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಜೋರಾಗಿದೆ. ಕೆಪಿಸಿಸಿ ಎಲೆಕ್ಷನ್ ಕಮಿಟಿ ಮಹತ್ವದ ಸಭೆ ನಡೆಸಿದ್ದು 37 ಅಭ್ಯರ್ಥಿಗಳ ಪಟ್ಟಿ ಸಭೆ ಮುಂದೆ ಬಂದಿದೆ, ಇದೀಗ ಮೊದಲ ಪಟ್ಟಿ ಸ್ಕ್ರೀನಿಂಗ್ ಕಮಿಟಿಗೆ ರವಾನಿಸಿದ್ದು, ಫೆಬ್ರವರಿ ಅಂತ್ಯದೊಳಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಮಾಹಿತಿ ನೀಡಿದ್ದಾರೆ. ಉಡುಪಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ವಿಧಾನಪರಿಷತ್ ಪ್ರದೇಶ ಎಲೆಕ್ಷನ್ ಕಮಿಟಿಯ ಜವಾಬ್ದಾರಿ ಮುಕ್ತಾಯವಾಗಿದೆ. ಅಭ್ಯರ್ಥಿಗಳ ಪಟ್ಟಿಗಳು ಈಗಾಗಲೇ ನಿನ್ನೆ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ೩೭ ಜನರ ಸಮ್ಮುಖ ಬಂದಿದೆ. ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯ, ಶಿಫಾರಸುಗಳನ್ನು ಕೊಟ್ಟಿದ್ದಾರೆ. ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ನಾಯಕರು ಘೋಷಿಸಲಿದ್ದಾರೆ. ಫೆಬ್ರವರಿ ಅಂತ್ಯದೊಳಗೆ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ ಇದೆ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಅವರು ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಲಿದ್ದಾರೆ ಎಂದು…
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಯರ‍್ರಮ್ಮನಹಳ್ಳಿ ಗ್ರಾಮದಲ್ಲಿ ಪಡಿತರದಾರರಿಗೆ ನೀಡಿದ ಅಕ್ಕಿಯಲ್ಲಿ ರಸಗೊಬ್ಬರದ ಹರಳುಗಳು ಮಿಶ್ರಣವಾಗಿರುವುದು ಬುಧವಾರ ಬೆಳಕಿಗೆ ಬಂದಿದೆ. ಬೂದಿಬೆಟ್ಟ ಪಂಚಾಯಿತಿ ವ್ಯಾಪ್ತಿಯ ಯರ‍್ರಮ್ಮನಹಳ್ಳಿ ಗ್ರಾಮದಲ್ಲಿ ಬುಧವಾರ ಪಡಿತರ ವಿತರಿಸಲಾಗಿದೆ. ಪಡಿತರದಾರರು ಮನೆಗೆ ಅಕ್ಕಿಯನ್ನು ತೆಗೆದುಕೊಂಡು ಹೋಗಿ ಅಕ್ಕಿಯನ್ನು ಶುಭ್ರಮಾಡುವಾಗ ಅದರಲ್ಲಿ ಯೂರಿಯಾ ಮತ್ತು ಕಾಂಪ್ಲೆಕ್ಸ್ ಗೊಬ್ಬರದ ಹರಳುಗಳು ಗೋಚರಿಸಿವೆ. ಅನುಮಾನಗೊಂಡು ಅಕ್ಕಪಕ್ಕದ ಮನೆಗಳಲ್ಲಿನ ಪಡಿತರವನ್ನು ಪರೀಕ್ಷಿಸಿದಾಗ ಅವುಗಳಲ್ಲೂ ಗೊಬ್ಬರದ ಹರಳು ಕಂಡುಬಂದಿದೆ. ಗ್ರಾಮಸ್ಥರೆಲ್ಲಾ ಸೇರಿ ಈ ಬಗ್ಗೆ ಸಂಬಂಧಿಸಿದವರಿಗೆ ಮಾಹಿತಿ ನೀಡಲಾಗಿದೆ. ತಹಶೀಲ್ದಾರರ ಆದೇಶದ ಅನ್ವಯ ತಕ್ಷಣ ಪಡಿತರ ವಿತರಣೆಯನ್ನು ನಿಲ್ಲಿಸಲಾಗಿದೆ. ಗುರುವಾರ ಬೆಳಿಗ್ಗೆ ಗ್ರಾಮಕ್ಕೆ ಆಹಾರ ಪರಿವೀಕ್ಷಕ ಮಂಜುನಾಥ ಮತ್ತು ವಿತರಕ ರಾಮಚಂದ್ರರೆಡ್ಡಿ ಬೇಟಿ ನೀಡಿ ಪ್ರತಿ ಮನೆಯಲ್ಲಿ ಪರೀಕ್ಷಿಸಿದಾಗ ಎಲ್ಲದರಲ್ಲೂ ಮಿಶ್ರಣ ಕಂಡುಬಂದಿದೆ. ಸಾರ್ವಜನಿಕರ ಸೂಚನೆಯಂತೆ ಪಡಿತರ ಕೇಂದ್ರದ ದಾಸ್ತಾನುಗಳ ಮೂಟೆಗಳನ್ನು ಪರೀಕ್ಷಿಸಿದಾಗ ಅದರಲ್ಲೂ ಗೊಬ್ಬರ ಮಿಶ್ರಣ ಇರುವುದು ಖಾತ್ರಿಯಾಗಿದೆ. ಈ ಬಗ್ಗೆ ಸ್ಥಳೀಯರು ಆತಂಕಗೊಂಡು ಅದಿಕಾರಗಳ ಬೇಜವಾಬ್ದಾರಿಯ ಬಗ್ಗೆ ಬೇಸರೊಂಡಾಗ ಪುಡ್ ಇನ್ಸ್ಪೆಕ್ಟರ್ ಮಂಜುನಾಥ…
ಕೊರಟಗೆರೆ: ಪ್ರತಿ ತಿಂಗಳ ಮೊದಲನೇ ಶನಿವಾರ ಸ್ವಚ್ಛತಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ತಾಲ್ಲೂಕು ಕಚೇರಿಯ ಆವರಣದಲ್ಲಿ ನೂತನ ತಹಶೀಲ್ದಾರ್ ಮುನಿಸ್ವಾಮಿ ರೆಡ್ಡಿ ಕಚೇರಿ ಆವರಣದಲ್ಲಿ ಕಸ ಕಡ್ಡಿ ಇನ್ನಿತರೆ ತ್ಯಾಜ್ಯ ವಸ್ತುಗಳನ್ನ ಸ್ವಚ್ಛತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಆದೇಶದಂತೆ ತುಮಕೂರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಮೊದಲನೇ ಶನಿವಾರ ಸ್ವಚ್ಛತಾ ದಿನವನ್ನಾಗಿ ಆಚರಿಸಿ ಕಚೇರಿ ಆವರಣವನ್ನು ಸ್ವಚ್ಛವಾಗಿ ಇರಿಸಿಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ಉದ್ದೇಶ ತುಂಬಾ ಚೆನ್ನಾಗಿದೆ. ಮೊದಲು ನಾವಿರುವ ಜಾಗ ಸ್ವಚ್ಛತೆಯಿದ ಇರಬೇಕು. ನಮ್ಮ ನಮ್ಮ ಇಲಾಖೆ ಕಚೇರಿಗಳನ್ನ ಸ್ವಚ್ಛವಾಗಿ ಇರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಆದ್ದರಿಂದ ನಾನು ಬಂದ ಮೊದಲನೇ ದಿನವೇ ಕಚೇರಿಯನ್ನು ಗಮನಿಸಿದೆ . ನಮ್ಮ ಇಲಾಖೆಯ ಸಿಬ್ಬಂದಿ ಗೂ ತುಂಬಾ ಸ್ವಚ್ಛತೆಯಿಂದ ಕಾಪಾಡಿಕೊಂಡಿದ್ದಾರೆ. ಕಚೇರಿ ಆವರಣದಲ್ಲಿ ಮಾತ್ರ ಸ್ವಲ್ಪ ಕಸ ಕಡ್ಡಿ ಇದ್ದಿದ್ದರಿಂದ ಅದನ್ನು ಕೂಡ ಇಂದು ಸ್ವಚ್ಛತೆಯ ಕಾರ್ಯಕ್ರಮದ…
ತುರುವೇಕೆರೆ: ಎರಡನೇ ತರಗತಿಯ ವಿದ್ಯಾರ್ಥಿಯೋರ್ವನಿಗೆ ಶಿಕ್ಷಕ ಕೋಲಿನಿಂದ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿ ಕಲ್ಕೆರೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದಿದೆ. ಈ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ಜೆ.ರಂಗಸ್ವಾಮಿ ತರಗತಿಯ ಸಮಯದಲ್ಲಿ ಎರಡನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಮ್ರಾನ್ ಗೆ ಕೋಲಿನಿಂದ ಬಾಸುಂಡೆ ಬರುವ ರೀತಿಯಲ್ಲಿ ಬೆನ್ನು ಮತ್ತು ಬುಜದ ಮೇಲೆ ಹೊಡೆದಿದ್ದಾನೆ. ಶಿಕ್ಷಕ ಅಮಾನವೀಯವಾಗಿ ಥಳಿಸಿರುವ ವಿಚಾರವನ್ನು ಬಾಲಕ ಪೋಷಕರ ಗಮನಕ್ಕೆ ತಂದಿದ್ದು, ಈ ಬಗ್ಗೆ ಪೋಷಕರು ಊರಿನ ಸಾರ್ವಜನಿಕರೊಂದಿಗೆ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಸಭೆ ಕರೆದು ಶಿಕ್ಷಕ ರಂಗಸ್ವಾಮಿಯನ್ನು ತರಾಟೆ ತೆಗೆದುಕೊಂಡರು. ಶಾಲಾ ಆವರಣ ಮುಂದೆ ಸುಮಾರು ನೂರಾರು ಸಾರ್ವಜನಿಕರು, ಜಮಾಮಣೆಗೊಂಡು ಘಟನೆಯನ್ನು ಖಂಡಿಸಿದ್ದು, ಇದರ ಬೆನ್ನಲ್ಲೇ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ಮತ್ತು ಸಿ ಆರ್ ಪಿ ಅವರ ಗಮನಕ್ಕೆ ತಂದು ಇದರ…
ಬಿಹಾರದ ಸುಂದರ್ ಗಢ್‌ನಲ್ಲಿರುವ ಬ್ರಿಲಿಯಂಟ್ ಕಾನ್ವೆಂಟ್ ಶಾಲೆಯ ಪರೀಕ್ಷಾ ಹಾಲ್‌ನಲ್ಲಿ ಹುಡುಗಿಯರು ತುಂಬಿರುವುದನ್ನು ನೋಡಿದ 17 ವರ್ಷದ ಯುವಕ ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ನಡೆದಿದೆ. ಪರೀಕ್ಷೆ ಹಾಲ್ ತುಂಬಾ ಹುಡುಗಿಯರನ್ನು ನೋಡಿ ವಿದ್ಯಾರ್ಥಿ ಗೊಂದಲಕ್ಕೊಳಗಾಗಿದ್ದು, ಈ ಆಘಾತದಿಂದ ಈತ ತಲೆತಿರುಗಿ ಬಿದ್ದಿದ್ದಾನೆ ಎಂದು ಹೇಳಲಾಗಿದೆ. ಬಿಹಾರದ ಷರೀಫ್ ಅವರ ಅಲ್ಲಮ ಇಕ್ಬಾಲ್ ಕಾಲೇಜಿನ ವಿದ್ಯಾರ್ಥಿ ಮನೀಶ್ ಶಂಕರ್ ಪ್ರಸಾದ್ (17) ಪರೀಕ್ಷೆಯ ಸೀಸನ್ ನ ಮೊದಲ ದಿನ ಗಣಿತ ಪರೀಕ್ಷೆಗೆ ಹಾಜರಾಗಿದ್ದಾಗ ಕುಸಿದುಬಿದ್ದಿದ್ದಾನೆ. ವಿದ್ಯಾರ್ಥಿಯ ಪರೀಕ್ಷಾ ಕೇಂದ್ರವು ಸುಂದರ್‌ಗಢದ ಬ್ರಿಲಿಯಂಟ್ ಕಾನ್ವೆಂಟ್ ಶಾಲೆಯಾಗಿತ್ತು. ಪರೀಕ್ಷಾ ಕೇಂದ್ರವನ್ನು ತಲುಪಿದಾಗ, ಅಭ್ಯರ್ಥಿಗಳಲ್ಲಿ ಅವನು ಒಬ್ಬನೇ ಹುಡುಗ ಎಂದು ವಿದ್ಯಾರ್ಥಿಗೆ ಅರಿವಾಯಿತು. ಇದರಿಂದ ಗಾಬರಿಗೊಂಡ ವಿದ್ಯಾರ್ಥಿ ಸಭಾಂಗಣದಲ್ಲಿ ಕುಸಿದು ಬಿದ್ದಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ತುಮಕೂರು: ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್ ಬಳಿ ನಿರ್ಮಾಣಗೊಂಡಿರುವ ಎಚ್ ಎಎಲ್ ಹೆಲಿಕಾಫ್ಟರ್ ಘಟಕದ ಲೋಕಾರ್ಪಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಫೆ. 6ರಂದು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಧಾನಿಯನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ. ಸೋಮವಾರ ಮಧ್ಯಾಹ್ನ 3:30ಕ್ಕೆ ಪ್ರಧಾನಿ ಆಗಮಿಸಲಿದ್ದು, ಒಂದು ಗಂಟೆಯಲ್ಲಿ ಸಮಾರಂಭ ಮುಗಿಯಲಿದೆ. ಈ ಎಚ್‌ಎಎಲ್ ಘಟಕಕ್ಕೆ ಪ್ರಧಾನಿ ಮೋದಿಯವರೇ ಶಂಕುಸ್ಥಾಪನೆ ಮಾಡಿದ್ದರು. ಇದೀಗ ಅವರೇ ಉದ್ಘಾಟನೆಯನ್ನೂ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ 80 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಚ್.ರವಿಶಂಕರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಜಾರ್ಖಂಡ್‌ನ ಬುರ್ಹಾ ಪಹಾಡ್ ಪ್ರದೇಶದಲ್ಲಿ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಸ್ತ್ರಾಸ್ತ್ರಗಳು ಮಾವೋವಾದಿಗಳದ್ದು ಎಂದು ಶಂಕಿಸಲಾಗಿದೆ. ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ನಡೆಸಿದ ಶೋಧದಲ್ಲಿ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಪ್ರಬಲ ಮಾವೋವಾದಿಗಳ ಉಪಸ್ಥಿತಿಯನ್ನು ಹೊಂದಿರುವ ಪ್ರದೇಶವಾಗಿದೆ.ಈ ಶೋಧದಲ್ಲಿ ಪ್ರಬಲ ಸ್ಫೋಟಕ್ಕೆ ಕಾರಣವಾಗುವ ಸ್ಫೋಟಕಗಳು ಪತ್ತೆಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದು 1990 ರ ದಶಕ ಮತ್ತು 2000 ರ ದಶಕದ ಆರಂಭದಲ್ಲಿ ಮಾವೋವಾದಿಗಳು ಪೊಲೀಸರೊಂದಿಗೆ ಅನೇಕ ಹಿಂಸಾತ್ಮಕ ಘರ್ಷಣೆಗಳನ್ನು ಹೊಂದಿದ್ದ ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ಇನ್ನೂ ಮಾವೋವಾದಿಗಳ ಉಪಸ್ಥಿತಿ ಇದೆ ಎಂಬ ಗುಪ್ತಚರ ಮಾಹಿತಿ ಆಧರಿಸಿ ಶೋಧ ನಡೆಸಲಾಗಿತ್ತು. ಕಳೆದ ಕೆಲವು ದಿನಗಳ ಹಿಂದೆ ಈ ಪ್ರದೇಶದಲ್ಲಿ ಮಾವೋವಾದಿಗಳು ಅಡಗಿಕೊಳ್ಳಲು ಬಳಸುತ್ತಿದ್ದ ಬಂಕರ್ ಪತ್ತೆಯಾಗಿತ್ತು. ಈ ಪ್ರದೇಶದಲ್ಲಿ ತೀವ್ರ ಶೋಧ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ. ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಟಳ ಇನ್ನೂ ಇದೆ ಎಂಬುದು ರಹಸ್ಯ ಮಾಹಿತಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಬೆಳಗಾವಿ: ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪಮಾಪೌರ ಚುನಾವಣೆ ಫೆಬ್ರುವರಿ 6ರಂದು ನಡೆಯಲಿದೆ. ಕಳೆದ ಒಂದೂವರೆ ವರ್ಷಗಳ ಬಳಿಕ ಈ ಚುನಾವಣೆ ನಡೆಯುತ್ತಿರುವುದು ಬೆಳಗಾವಿಯಲ್ಲಿ ಬಹಳ ಕುತೂಹಲವನ್ನು ಮೂಡಿಸಿದೆ. 2021ರಲ್ಲಿ ಮಹಾನಗರ ಪಾಲಿಕೆ ಚುನಾವಣೆ ನಡೆದಿದ್ದು ಇದೇ ಮೊದಲು ಬಾರಿಗೆ ರಾಷ್ಟ್ರೀಯ ಮತ್ತು ಕ್ಷೇತ್ರೀಯ ಪಕ್ಷಗಳು ತಮ್ಮ ಚುನಾವಣೆ ಚಿಹ್ನೆಗಳನ್ನು ಬಳಸಿಕೊಂಡು ಚುನಾವಣೆ ಎದುರಿಸಿದ್ದವು. ಬೆಳಗಾವಿ ಮಹಾನಗರ ಪಾಲಿಕೆ ಮೊದಲಿನಿಂದಲೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ಪ್ರಬಲ ಮತ್ತು ಭದ್ರಕೋಟೆಯಾಗಿತ್ತು. ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಮಣಿಸಲು ರಾಷ್ಟ್ರೀಯ ಪಕ್ಷಗಳು ತನ್ನದೇ ಆದಂತ ರಣನೀತಿಯನ್ನು ಅನುಸರಿಸಿಕೊಂಡವು. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಒಂದು ಪಕ್ಷಕ್ಕೆ ಸ್ಪಷ್ಟವಾದ ಬಹುಮತವನ್ನುಪಡೆದುಕೊಂಡಿರುವ ಪಕ್ಷವೆಂದರೆ ಭಾರತೀಯ ಜನತಾ ಪಕ್ಷ 58 ವಾರ್ಡ್ ಗಳಲ್ಲಿ ಭಾರತೀಯ ಜನತಾ ಪಕ್ಷ 35 ಅಭ್ಯರ್ಥಿಗಳು ವಿಜಯಶಾಲಿಯಾಗಿ ಬಂದರೆ ಕಾಂಗ್ರೆಸ್ ನ 10 ಅಭ್ಯರ್ಥಿಗಳು ಜಯಭೇರಿ ಭಾರಿಸಿದವು. ಎ.ಐ.ಎಂ.ಐ.ಎಂ ಪಕ್ಷ ಒಂದು ಸದಸ್ಯರನ್ನು ಹೊಂದಿದ್ದರೆ 12 ಜನ ಪಕ್ಷತರು ಇದ್ದಾರೆ ಇದೇ ಮೊದಲ ಬಾರಿಗೆ…
ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಕ್ರೈಂ ಮತ್ತು ಹಾರರ್ ಸಿನಿಮಾಗಳ ಮಾದರಿಯಲ್ಲಿ ಕೊಲೆ, ಸೂಲಿಗೆಗಳು ನಡೆಯುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಇದೇ ಮಾದರಿಯಲ್ಲಿ ರಾಜಧಾನಿಯ ಅಕ್ಷಯನಗರದಲ್ಲಿ ಒಂದು ಘಟನೆ ನಡೆದಿದ್ದು ಮಲಯಾಳಂ ಕೋಲ್ಡ್ ಕೇಸ್ ಸಿನಿಮಾದಲ್ಲಿ ತೋರಿಸುವ ರೀಲ್ ಕಥೆ ಇಲ್ಲಿ ರಿಯಲ್ ಆಗಿದೆ. ಬೆಂಗಳೂರಿನ ಅಕ್ಷಯನಗರದ ಹುಳಿಮಾವು ಮರವೊಂದರ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಅವಶೇಷಗಳು ಪತ್ತೆಯಾಗಿವೆ. ಮರದ ಕೊಂಬೆಯಲ್ಲಿ ನೇತಾಡುತಿದ್ದ ತಲೆ ಬುರುಡೆ ಪತ್ತೆಯಾಗಿದ್ದು ಶವ 6 ತಿಂಗಳಿಂದ ಕೊಳೆಯುತ್ತಿತ್ತು. ಫೆ.2 ರಂದು ಪೊಲೀಸರು ಮೂತ್ರ ವಿಸರ್ಜನೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ಬೆಳಗ್ಗೆ ನಮಗೆ ಮಾನವನ ಅಸ್ತಿಪಂಜರ ಇರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಈ ವೇಳೆ ಮಹಿಳೆಯ ಚಪ್ಪಲಿ, ಅಲ್ಲದೆ ಕುತ್ತಿಗೆ ಬಳಸುವ ನೆಕ್ಲೆಸ್ ಎಲ್ಲವೂ ಪತ್ತೆಯಾಗಿತ್ತು. ಹೀಗಾಗಿ ನಾವು ಮಿಸ್ಸಿಂಗ್ ಕೇಸ್ ಗಳನ್ನ ಹುಡುಕಲು ಶುರುಮಾಡಿದ್ವಿ. ನಾವು ಕಳೆದ ವರ್ಷ ಜುಲೈನಲ್ಲಿ ಹುಳಿಮಾವು ಠಾಣೆಯಲ್ಲಿ ನೇಪಾಳಿ ಮಹಿಳೆ ನಾಪತ್ತೆ ಕೇಸ್ ದಾಖಲಾಗಿತ್ತು. ಈಗ ಅಲ್ಲಿ ಸಿಕ್ಕಿರುವ…