Subscribe to Updates
Get the latest creative news from FooBar about art, design and business.
- ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
- ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
- ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
- ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
- ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆ
- ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
- ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
- ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
Author: admin
ಮಾಜಿ ಸಚಿವ ಜನಾರ್ದನರೆಡ್ಡಿ ನಮ್ಮ ಜೊತೆಯಲ್ಲೇ ಇರ್ತಾರೆ. ಪಕ್ಷ ಬಿಟ್ಟು ಎಲ್ಲೂ ಹೋಗಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಇಂದು ಈ ಕುರಿತು ಮಾಧ್ಯಮದವರೊಡನೆ ಮಾತಾಡಿದ ಬಿಎಸ್ ಯಡಿಯೂರಪ್ಪ, ಜನಾರ್ಧನ ರೆಡ್ಡಿ ಅವರ ಪರ ಬ್ಯಾಟ್ ಬೀಸಿದರು. ಜನಾರ್ಧನ ರೆಡ್ಡಿ ಪಕ್ಷವನ್ನು ಬಿಟ್ಟು ಎಲ್ಲೂ ಹೋಗಲ್ಲ, ಅವರು ಗಂಗಾವತಿಯಲ್ಲಿ ಮನೆಕಟ್ಟಿದ್ದಾರೆ ಅಂದಮಾತ್ರಕ್ಕೆ ಹೊಸಪಕ್ಷ ಕಟ್ಟುತ್ತಾರೆ ಅಂತ ಅರ್ಥ ಕಲ್ಪಿಸಬಾರದು. ರೆಡ್ಡಿಯವರು ಪಕ್ಷದಲ್ಲಿರುವುದು ಎಷ್ಟು ಮಹತ್ವ ಅನ್ನೋದನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಕೊಡುತ್ತೇನೆ, ರಾಜ್ಯದಲ್ಲಿ ಪಕ್ಷದ ಸಂಘಟನೆಯಲ್ಲಿ ಅವರು ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. ಎಲ್ಲಾ ಕೇಸ್ ಇತ್ಯರ್ಥಪಡಿಸಿಕೊಂಡು ಬಿಜೆಪಿಗೆ ರೆಡ್ಡಿ ಮರಳುತ್ತಾರೆ. ರೆಡ್ಡಿ ಅವರ ಜೊತೆ ಮಾತನಾಡಿದ್ದೇನೆ ಎಂದರು. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧಿಸುತ್ತಾರೆ ಎಂದಿದ್ದೇನೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ ಎಂದು ಬಿಎಸ್ ವೈ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಈ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ವಾದ, ಆರೋಪ ಪ್ರತ್ಯಾರೋಪಗಳು ಮುಂದುವರೆದಿದೆ. ಈ ಮಧ್ಯೆ ತೋಟಗಾರಿಕೆ ಸಚಿವ ಮುನಿರತ್ನ, ಬಿಜೆಪಿಗೆ ಬರಲು 22 ಶಾಸಕರು ಸಿದ್ಧರಿದ್ದಾರೆ ಎಂದು ಹೊಸಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಬಿಜೆಪಿ ಬರಲು 22 ಶಾಸಕರು ಸಿದ್ದರಿದ್ದಾರೆ. ಅದರಲ್ಲಿ 10 ಶಾಸಕರನ್ನ ಆಯ್ಕೆ ಮಾಡಿಕೊಳ್ಳುತ್ತೀವಿ. ನಮ್ಮ ಹಳೆಯ ಮಿತ್ರ 10 ಶಾಸಕರನ್ನ ಕರೆತರುತ್ತಿದ್ದಾರೆ. 10 ಕಾಂಗ್ರೆಸ್ ಶಾಶಕರ ಟೀಮ್ ಬಿಜೆಪಿಗೆ ಬರುತ್ತಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸ್ಟಾನ್ ಸ್ವಾಮಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಎನ್ ಐಎ ಮೌನ ವಹಿಸಿರುವ ಬೆನ್ನಲ್ಲೇ, ಈ ಕುರಿತು ಪ್ರತಿಪಕ್ಷಗಳು ತಂದಿರುವ ತುರ್ತು ನಿರ್ಣಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲು ಕೇಂದ್ರ ಸಿದ್ಧವಾಗಿಲ್ಲ. ಇಂದೂ ಕೂಡ ಸಂಸತ್ತಿನ ಒಳಗೆ ಮತ್ತು ಹೊರಗೆ ನಕಲಿ ದಾಖಲೆಗಳ ಆಧಾರದಲ್ಲಿ ಭಯೋತ್ಪಾದನೆ ಪ್ರಕರಣ ದಾಖಲಿಸಿರುವ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಅಮೆರಿಕದ ವಿಧಿವಿಜ್ಞಾನ ಪ್ರಯೋಗಾಲಯದ ಸಂಶೋಧನೆಗಳ ಸುದ್ದಿ ಆಧರಿಸಿ ಫಾದರ್ ಸ್ಟಾನ್ ಸ್ವಾಮಿ ವಿರುದ್ಧದ ಪಿತೂರಿ ತನಿಖೆಗೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರು ಮತ್ತು ವಿವಿಧ ಸಂಘಟನೆಗಳು ಇದೀಗ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ಈ ಪ್ರತಿಭಟನೆಯನ್ನು ಪ್ರತಿಬಿಂಬಿಸಿದ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದವು. ಲೋಕಸಭೆಯಲ್ಲಿ ಕೇರಳದ ಎ.ಎಂ.ಆರಿಫ್ ಅವರು ತುರ್ತು ಪ್ರಸ್ತಾವನೆ ನೋಟಿಸ್ ನೀಡಿದ್ದರು. ಆದರೆ ಅದನ್ನು ಮಂಡಿಸಲು ಪೀಠ ಅನುಮತಿ ನೀಡಲಿಲ್ಲ. ಫಾದರ್ ಸ್ಟಾನ್ ಸ್ವಾಮಿ ಅವರ ಲ್ಯಾಪ್‌ಟಾಪ್‌ಗೆ 40 ಕ್ಕೂ ಹೆಚ್ಚು ದಾಖಲೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಯುಎಸ್…
ಕ್ರಿಸ್‌ಮಸ್ ಸ್ವಾಗತಕ್ಕೆ ವಿಶ್ವವೇ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಹಲವೆಡೆ ಸಂಭ್ರಮಾಚರಣೆ ಆರಂಭವಾಗಿದೆ. ಹಬ್ಬದ ರಾತ್ರಿಗಳು ಬಂದಿರುವುದರಿಂದ ಮಕ್ಕಳು ವಯಸ್ಕರಿಗಿಂತ ಹೆಚ್ಚು ಉತ್ಸುಕರಾಗಿದ್ದಾರೆ. ತಂದೆ-ತಾಯಿಯನ್ನು ಹೊರತುಪಡಿಸಿ ಈಗ ಸಾಂತಾಕ್ಲಾಸ್‌ನಿಂದ ಹಣ ಪಡೆಯುವ ಕನಸು ಕಾಣುತ್ತಿದ್ದಾರೆ. ವಿದೇಶಗಳಲ್ಲಿ ಕ್ರಿಸ್ಮಸ್ ಸಂಪ್ರದಾಯದ ಭಾಗವಾಗಿ, ಮಕ್ಕಳು ಸಾಂಟಾ ಕ್ಲಾಸ್ಗೆ ಪತ್ರಗಳನ್ನು ಬರೆಯುತ್ತಾರೆ. ಇದೀಗ 8 ವರ್ಷದ ಬಾಲಕಿಯ ಪತ್ರವೊಂದು ಸಾಮಾಜಿಕ ಜಾಲತಾಣಗಳ ಮನ ಗೆಲ್ಲುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದೇಶಾದ್ಯಂತ 1,472 ಐಎಎಸ್, 864 ಐಪಿಎಸ್ ಮತ್ತು 1,057 ಐಎಫ್‌ಎಸ್ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಪ್ರಕಟಿಸಿದೆ. ಜನವರಿ 1, 2022 ರ ವೇಳೆಗೆ ದೇಶದಲ್ಲಿ 6,789 ಐಎಎಸ್ ಹುದ್ದೆಗಳು, 4,984 ಐಪಿಎಸ್ ಹುದ್ದೆಗಳು ಮತ್ತು 3,191 ಐಎಫ್‌ಎಸ್ ಹುದ್ದೆಗಳಿವೆ ಎಂದು ಕೇಂದ್ರ ಸಿಬ್ಬಂದಿ ವ್ಯವಹಾರಗಳ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಬುಧವಾರ ಲೋಕಸಭೆಗೆ ತಿಳಿಸಿದರು. ಪ್ರಸ್ತುತ 5,371 ಐಎಎಸ್, 4,120 ಐಪಿಎಸ್ ಮತ್ತು 2,134 ಐಎಫ್ಎಸ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುವುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಿಜೆಪಿ ಪಕ್ಷದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನ ಕಡೆಗಣಿಸಲಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಬವವಾಗಿದ್ದು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ಸಂಬಂಧ ಸ್ವತಃ ಬಿ.ಎಸ್ ಯಡಿಯೂರಪ್ಪ ಅವರೇ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ರಾಜಕೀಯವಾಗಿ ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ಬಿಜೆಪಿಯಲ್ಲಿ ನನಗೆ ನನ್ನದೇ ಆದ ಶಕ್ತಿ ಇದೆ. ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕಕ್ಕೆ ತರೋಕೆ ಶ್ರಮ ವಹಿಸಿದ್ದೇನೆ. ಇದು ಇಡೀ ರಾಜ್ಯದ ಜನರಿಗೆ ಗೊತ್ತಿದೆ . ಅದನ್ನೇ ಮುಂದುವರೆಸುತ್ತೇನೆ. ಬಿಜೆಪಿ ಪಕ್ಷ ಅದಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ ಎಂದರು. ಹಾಗೆಯೇ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಗಲಕೋಟೆ: ಸಿಎಂ ಬಸವರಾಜ ಬೊಮ್ಮಾಯಿ ವೀಕ್ ಲೀಡರ್ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ರಾಜಕೀಯದಲ್ಲಿ ಸಿದ್ದರಾಮಯ್ಯನಂಥ ದ್ರೋಹಿಯನ್ನು ಹಿಂದೆ ನೋಡಿಲ್ಲ, ಮುಂದೆಯೂ ನೋಡಲ್ಲ ಎಂದು ಕಿಡಿಕಾರಿದ್ದಾರೆ.ಕಾಂಗ್ರೆಸ್ನಲ್ಲಿ ಯಾರ ನೇತೃತ್ವ ಕ್ಷೇತ್ರ ಗೊತ್ತಿಲ್ಲ, ಜನರು ಓಟ್ ಕೊಟ್ಟು ಗೆಲ್ಲಿಸಿಲ್ಲ. ಆಗಲೇ ನಾನೇ ಮುಖ್ಯಮಂತ್ರಿ ಅಂತಿದ್ದೀರಿ. ರಾಜಕಾರಣದಲ್ಲಿ ಇಂಥ ದ್ರೋಹಿ ಯಾರೂ ನೋಡಿಲ್ಲ, ಮುಂದೆ ನೋಡಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ವೀಕ್ ಲೀಡರ್ ಆಗಿದ್ದಕ್ಕೆ ಸೋತಿದ್ದು. ಸಿದ್ದರಾಮಯ್ಯ ಸ್ಟ್ರಾಂಗ್ ಸಿಎಂ ಆಗಿದ್ದರೆ ಯಾಕೆ ಸೋಲುತ್ತಿದ್ದರು.. ಯಾವಾಗಲೂ ಯಾರು ವೀಕ್ ಅಂತಾ ಹೇಳ್ತಾರೋ ಅವರೇ ವೀಕ್. ಒಂದು ಬಾರಿ ಬಾದಾಮಿ, ಮತ್ತೊಮ್ಮೆ ಕೋಲಾರ, ವರುಣಾ ಅಂತೀರಿ. ನಿಮಗೆ ನಿಮ್ಮ ಅಪ್ಪ-ಅಮ್ಮ ಯಾರೂ ಅಂತಾನೇ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಹಾಲಿವುಡ್‌ನ ಖ್ಯಾತ ನಟ, ಡ್ಯಾನ್ಸರ್ ಹಾಗೂ ಡಿಜೆ ಸ್ಟೀಫನ್ ಬಾಸ್ ನಿಧನರಾಗಿದ್ದಾರೆ. ಸ್ಟೀಫನ್ ಬಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಡಿಸೆಂಬರ್ 13 ರಂದು, ಅವರ ಮೃತ ದೇಹ ಹೋಟೆಲ್ ಕೋಣೆಯಲ್ಲಿ ಪತ್ತೆಯಾಗಿದೆ. ಸ್ಟೀಫನ್, ‘ದಿ ಎಲೈನ್ ಡಿ ಜೋನ್ಸ್’ ‘So You Think You Can Dance ನಂತಹ ಪ್ರದರ್ಶನಗಳಿಂದ ಹೆಸರುವಾಸಿಯಾಗಿದ್ದರು. ಸ್ಟೀಫನ್ ನಿಧನಕ್ಕೆ ಅಭಿಮಾನಿಗಳು, ನೆಟ್ಟಿಗರು ಕಂಬನಿ ಮಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಾಲಕಿ ಮೇಲೆ ಆಸಿಡ್ ಎರಚಿದ ವ್ಯಕ್ತಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕೆಂದು ಸಂಸದ ಗೌತಮ್ ಗಂಭೀರ್ ಒತ್ತಾಯಿಸಿದ್ದಾರೆ. ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಅವರು, ನಾನು ಈ ಥರಹದ ಪ್ರಾಣಿಗಳಲ್ಲಿ (ಆರೋಪಿಗಳಲ್ಲಿ) ಅಪಾರ ನೋವಿನ ಭಯ ಹುಟ್ಟುಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಷೇಧಿಸಿದ್ದರೂ ಮಾರುಕಟ್ಟೆಯಲ್ಲಿ ಆಸಿಡ್ ಲಭ್ಯತೆ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ, ಸಂಯೋಜಕ ಮನೋರಂಜನ್ ಪ್ರಭಾಕರ್ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ ಎಂದು ಆಪ್ತರು ತಿಳಿಸಿದ್ದಾರೆ. 70ರ ದಶಕದ ಆರಂಭದಲ್ಲಿ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟ ಅವರು ಸುಮಾರು 800ಕ್ಕೂ ಹೆಚ್ಚು ಸಂಗೀತ ಆಲ್ಬಂ ಹೊರತಂದಿದ್ದಾರೆ. ‘ಜನ ಮೆಚ್ಚಿದ ಮಗ’, ‘ಕಿಲಾಡಿ ಗಂಡು’, ‘ಅಶೋಕ ಚಕ್ರ’ ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ನೀಡಿದ್ದರು. 2003 ರಲ್ಲಿ ತಮ್ಮದೇ ಆದ ಶ್ರುತಿಲಯ ಕಲ್ಚರಲ್ ಅಕಾಡೆಮಿ ಪ್ರಾರಂಭ ಮಾಡಿ ಅನೇಕರಿಗೆ ಸಂಗೀತ ಹೇಳಿಕೊಡುತ್ತಿದ್ದರು. ಇವರು ಕಳೆದ ರಾತ್ರಿ ಅಗಲಿದ್ದಾರೆ.ಚಿತ್ರರಂಗದ ಅನೇಕ ಕಲಾವಿದರು, ಹಾಗೂ ಇವರ ಸಂಗೀತ ವಿದ್ಯಾರ್ಥಿಗಳು ಕಂಬನಿ ಮಿಡಿದ್ದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy