Author: admin

ಬೆಂಗಳೂರು: ಹೊರ ರಾಜ್ಯಗಳಿಂದ ಹುಡುಗಿಯರನ್ನು ಕರೆತಂದು ಅನೈತಿಕ ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್ನನ್ನು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಚೇತನ್ ಕುಮಾರ್ ಅಲಿಯಾಸ್ ಮಂಗಳಮುಖಿ ಚೇತನ್ (40) ಬಂಧಿತ ಆರೋಪಿಯಾಗಿದ್ದಾನೆ. ಈತ ಪೊಲೀಸರ ಕಣ್ಣಿಗೆ ಮಣ್ಣೆರಚಲು ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸುತ್ತಿದ್ದರಿಂದ, ಪೊಲೀಸರಿಗೂ ಈತನನ್ನು ಹಿಡಿಯುವುದು ಸವಾಲಾಗಿತ್ತು. ನಟೋರಿಯಸ್ ಪಿಂಪ್ ಚೇತನ್ ವಿರುದ್ಧ ಬೆಂಗಳೂರಿನ ಪೀಣ್ಯ, ಬಾಗಲಗುಂಟೆ ಹಾಗೂ ಸಿಸಿಬಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಹತ್ತಕ್ಕೂ ಹೆಚ್ಚು ಗಂಭೀರ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರಿಗೆ ವಾಂಟೆಡ್ ಆಗಿದ್ದ ಈತ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ. ಪೀಣ್ಯ ಬಳಿಯ ರೂಮ್ ಒಂದರಲ್ಲಿ ಚೇತನ್ ಅಡಗಿರುವ ಬಗ್ಗೆ ಮಾದನಾಯಕನಹಳ್ಳಿ ಪೊಲೀಸರಿಗೆ ನಿಖರ ಮಾಹಿತಿ ಲಭ್ಯವಾಗಿತ್ತು. ಈ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತುಮಕೂರು: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆಯ ಹೆಲ್ತ್ ಇನ್ಸ್ಪೆಕ್ಟರ್ ಒಬ್ಬರು ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಪಾವಗಡ ತಾಲ್ಲೂಕಿನಲ್ಲಿ ವರದಿಯಾಗಿದೆ. ಪಾವಗಡ ತಾಲ್ಲೂಕಿನ ಲಿಂಗದಹಳ್ಳಿ ಆರೋಗ್ಯ ಇಲಾಖೆಯಲ್ಲಿ ಹೆಲ್ತ್ ಇನ್ಸ್’ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬೆವಳೂರು ಗ್ರಾಮದ ಶಿವಮೂರ್ತಿ (48) ಅವರೇ ಮೃತಪಟ್ಟ ದುರ್ದೈವಿ. ಜೂನ್ 27 ರಂದು ತಮ್ಮ ಕಾರನ್ನು ಬಾಡಿಗೆಗೆ ತಗೆದುಕೊಂಡು ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಶಿವಮೂರ್ತಿ ಅವರು ಮರಳಿ ಮನೆಗೆ ಬಂದಿರಲಿಲ್ಲ. ಈ ಸಂಬಂಧ ಕುಟುಂಬಸ್ಥರು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ರಕ್ತಸಿಕ್ತ ಕಾರು, ಸುಟ್ಟ ಸ್ಥಿತಿಯಲ್ಲಿ ಶವ! ನಿನ್ನೆಯಷ್ಟೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಸಮೀಪದ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಶಿವಮೂರ್ತಿ ಅವರ ಕಾರು ಪತ್ತೆಯಾಗಿತ್ತು. ಕಾರಿನೊಳಗೆ ರಕ್ತದ ಕಲೆಗಳು ಕಂಡುಬಂದಿದ್ದರಿಂದ ತೀವ್ರ ಆತಂಕ ಸೃಷ್ಟಿಯಾಗಿತ್ತು. ಇದರ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲೆಯ ಇಂಗಳದಾಳ ಲಂಬಾಣಿ ತಾಂಡಾ ಸಮೀಪ ಅರೆಬರೆ ಸುಟ್ಟ…

Read More

ತುಮಕೂರು: ಕೃಷಿ ಇಲಾಖೆ ವತಿಯಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ 2026–27ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲಿಚ್ಛಿಸುವ ರೈತರು ಕೆ–ಕಿಸಾನ್ ಪೋರ್ಟಲ್ನಲ್ಲಿ RSK ಲಾಗಿನ್ ಅಥವಾ Citizen ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರ ಅಥವಾ ಸ್ವತಃ ರೈತರು ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ FID ಸಂಖ್ಯೆಯನ್ನು ಬಳಸಿಕೊಂಡು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೃಷಿ ಪಂಡಿತ ಪ್ರಶಸ್ತಿಗೆ ಪುರುಷರು ಮತ್ತು ಮಹಿಳೆಯರ ವಿಭಾಗದಡಿ ಪ್ರತ್ಯೇಕವಾಗಿ ನೋಂದಣಿ ಮಾಡಲು ಅವಕಾಶವಿರುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದ್ದು, ರೈತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ತಾಯಿಯ ಅಂತಃಕರಣ ಹಾಗೂ ಬುದ್ಧನ ಕಾರುಣ್ಯ ಎರಡನ್ನೂ ಯಾವ ವ್ಯಕ್ತಿ ಅಳವಡಿಸಿ ಕೊಳ್ಳುತ್ತಾನೋ ಆತ ಸಮಾಜದಲ್ಲಿ ಯಶಸ್ಸನ್ನು ಕಾಣುತ್ತಾನೆ ಎಂದು ಪತ್ರಕರ್ತ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್ ತಿಳಿಸಿದ್ದಾರೆ. ಅವರು ಗುಬ್ಬಿ ಚಾಲುಕ್ಯ ಆಸ್ಪತ್ರೆ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯಾವುದೇ ವ್ಯಕ್ತಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಕೆಲಸದಲ್ಲಿ ತೊಡಗಿಕೊಂಡರೆ ಆತನಿಗೆ ಸಮಾಜದಲ್ಲಿ ಮನ್ನಣೆ ಶತಃ ಸಿದ್ಧ ಎಂದ ಅವರು ಸಮಾಜದಲ್ಲಿ ಸದ್ದು ಮಾಡಿಕೊಂಡು ಕೆಲಸ ಮಾಡುವುದಕ್ಕಿಂತ ಪ್ರಚಾರ ಬಯಸದೆ ಕೆಲಸ ಮಾಡಿದರೆ ದೀರ್ಘ ಕಾಲ ಜನರ ಮನಸ್ಸಿ ನಲ್ಲಿ ಉಳಿಯುತ್ತಾನೆ ಎಂದರು. ವೈದ್ಯ ವೃತ್ತಿ ಕೇವಲ ಒಂದು ಉದ್ಯೋಗವಲ್ಲ, ಅದೊಂದು ಪವಿತ್ರವಾದ ಸೇವೆ. ಈ ನಿಟ್ಟಿನಲ್ಲಿ ಚಾಲುಕ್ಯ ಆಸ್ಪತ್ರೆಯ ಡಾ. ನಾಗಭೂಷಣ್ ಅವರು ಉತ್ತಮ ವೈದ್ಯಕೀಯ ಸೇವೆ ಮಾಡುತ್ತಿದ್ದಾರೆ ಎಂದರು. ಗುಬ್ಬಿ ತಾಲೂಕು ವೈದ್ಯಾಧಿಕಾರಿ ಡಾ.ವಿಜಯ ಕುಮಾರ್ ಮಾತನಾಡಿ, ವೈದ್ಯರು ಮನುಷ್ಯರ ಆರೋಗ್ಯಕ್ಕಾಗಿ ಕೆಲಸ…

Read More

ಶಿರಾ: ರಸಗೊಬ್ಬರ ಮಾರಾಟದ ಎಫ್ ಎಫ್ ಎಸ್ ಮೊಬೈಲ್ ಆಪ್ ನ ಕುಂದುಕೊರತೆಗಳನ್ನು ಈ ಕೂಡಲೇ ಕೇಂದ್ರ ಸರ್ಕಾರ ಪರಿಹರಿಸುವುದರ ಜೊತೆಗೆ ಈ ಹಳೆಯ ರಸಗೊಬ್ಬರದ ಪಿಓಎಸ್ ಮಾರಾಟ ವ್ಯವಸ್ಥೆಯನ್ನೂ ಮುಂದುವರೆಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಜಿಲ್ಲಾ ಕೃಷಿ ಪರಿಕರ ಮಾರಾಟಗಾರರ ಸಂಘ ಮನವಿ ಸಲ್ಲಿಸಿತು. ಸಂಘದ ಜಿಲ್ಲಾಧ್ಯಕ್ಷ ಬರಗೂರು ಶಿವಕುಮಾರ್ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಬರಗೂರು ಶಿವಕುಮಾರ್ ಮಾತನಾಡಿ, ಹೊಸದಾಗಿ ಪಿಓಎಸ್ ಮಿಷನ್ ಗೆ ಅಳವಡಿಸಿರುವ ಎಫ್ಎಫ್ಎಸ್ ಮೊಬೈಲ್ ಆಪ್ ಮಾಹಿತಿಯು ಎಲ್ಲಾ ರೈತರಿಗೂ ಸಮರ್ಪಕವಾಗಿ ತಿಳಿದಿಲ್ಲ, ಬಹುತೇಕ ರೈತರ ಬಳಿ ಅದರ ಅರಿವು ಮೂಡಲೂ ಆಂಡ್ರಾಯ್ಡ್ ಮೊಬೈಲ್ ಕೂಡಾ ಇರುವುದಿಲ್ಲ. ಈ ಕಾರಣದಿಂದ ರೈತರ ಆಧಾರ್ ಕಾರ್ಡ್, ದೂರವಾಣಿ ಸಂಖ್ಯೆ ಬರೆದುಕೊಂಡು ರಸ ಗೊಬ್ಬರ ನೀಡುವ ಪರಿಸ್ಥಿತಿ ಬಂದಿದೆ ಎಂದು ಅವರು ತಿಳಿಸಿದರು. ಮುಂಗಾರು ಹಂಗಾಮು ಆರಂಭಗೊಂಡಿದ್ದು ರಸಗೊಬ್ಬರದ ಅವಶ್ಯಕತೆ…

Read More

ಸರಗೂರು: ದಲಿತ ವರ್ಗದ ಅಭಿವೃದ್ಧಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರಂತೆ ಶ್ರಮಿಸಿದ ಡಾ.ಬಾಬು ಜಗಜೀವನ್ ರಾಮ್ ಅವರ ಜೀವನದ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆ ಮೂಲಕ ಸಮಾಜದಲ್ಲಿ ಹಿಂದುಳಿದವರ ಏಳಿಗೆಗಾಗಿ ಶ್ರಮಿಸಬೇಕಾದ ಅಗತ್ಯವಿದೆ ಎಂದು ಎಸ್ಸಿ-ಎಸ್ಟಿ ಸಮಿತಿ ಸದಸ್ಯ ಹಾಗೂ ಮಾಧರ ಮಹಾಸಭಾ ತಾಲೂಕು ಅಧ್ಯಕ್ಷರಾದ ಕುರ್ಣೇಗಾಲ ಬೆಟ್ಟಸ್ವಾಮಿ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ 40ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟಗಾರರು ಮತ್ತು ಉತ್ತಮ ಆಡಳಿತಗಾರರಾಗಿದ್ದ ಬಾಬು ಜಗಜೀವನ್ ರಾಮ್ ಅವರು ಜನಪ್ರಿಯವಾಗಿ ‘ಬಾಬೂಜಿ’ ಎಂದೇ ಕರೆಯಲ್ಪಡುತ್ತಿದ್ದರು. ಹಿಂದುಳಿದ ಸಮಾಜದವರಿಗೆ ಸಮಾನತೆ ಹಾಗೂ ಗೌರವಾನ್ವಿತ ಸ್ಥಾನಮಾನಗಳನ್ನು ಗಳಿಸಿಕೊಡುವುದಕ್ಕಾಗಿ ಅವರು ಸುಮಾರು ಐವತ್ತು ವರ್ಷಗಳ ಕಾಲ ವಿಶೇಷ ಪ್ರಯತ್ನ ಪಟ್ಟಿದ್ದರು. ಒಬ್ಬ ರಾಷ್ಟ್ರೀಯ ನಾಯಕರಾಗಿ, ಸಂಸತ್ ಪಟುವಾಗಿ, ಕೇಂದ್ರದ ಮಂತ್ರಿಯಾಗಿ ಹಾಗೂ ಹಿಂದುಳಿದ ಮತ್ತು…

Read More

ಸರಗೂರು: ತಾಲೂಕಿನ ಮುಳ್ಳೂರು ಮತ್ತು ಬೆಣ್ಣೆಗೆರೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ, ಜಾನುವಾರುಗಳನ್ನು ಬಲಿಪಡೆದು ಇಡೀ ಭಾಗದಲ್ಲಿ ಭೀತಿ ಸೃಷ್ಟಿಸಿದ್ದ 12 ವರ್ಷದ ಹೆಣ್ಣು ಹುಲಿ ಹಾಗೂ ಅದರ ಐದು ಮರಿಗಳನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಭಾನುವಾರ ಬೆಳಗಿನ ಜಾವ ಯಶಸ್ವಿಯಾಗಿದೆ. ಕಳೆದ ಒಂದು ತಿಂಗಳಿನಿಂದ ನುಗು ವಲಯ ವ್ಯಾಪ್ತಿಯಲ್ಲಿ ಅಬ್ಬರಿಸುತ್ತಿದ್ದ ಈ ಹುಲಿರಾಯ ಕೊನೆಗೂ ಬೋನಿಗೆ ಬಿದ್ದಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಭಾಗದಲ್ಲಿ ಜಾನುವಾರುಗಳನ್ನು ಸತತವಾಗಿ ಬಲಿ ಪಡೆಯುತ್ತಿದ್ದ ಹುಲಿ, 15 ದಿನಗಳ ಹಿಂದೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ಎಂಬ ಯುವ ರೈತನ ಮೇಲೂ ದಾಳಿ ನಡೆಸಿ ಗಾಯಗೊಳಿಸಿತ್ತು. ಅಷ್ಟೇ ಅಲ್ಲದೆ, ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಯ ಮೇಲೂ ದಾಳಿ ನಡೆಸಿ ಗಾಯಗೊಳಿಸುವ ಮೂಲಕ ತೀವ್ರ ತಲೆನೋವಾಗಿ ಪರಿಣಮಿಸಿತ್ತು. ವಾರದ ಹಿಂದಷ್ಟೇ ಅರಣ್ಯ ಇಲಾಖೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಹುಲಿಯ ಚಲನವಲನಗಳು ಸೆರೆಯಾಗಿದ್ದವು. 100 ಸಿಬ್ಬಂದಿ, 4 ಸಾಕಾನೆಗಳ ಬೃಹತ್ ಕಾರ್ಯಾಚರಣೆ: ಸ್ಥಳೀಯರ ತೀವ್ರ ಒತ್ತಾಯಕ್ಕೆ ಮಣಿದ…

Read More

— ರಾಘವೇಂದ್ರ ಅಡಿಗ ಎಚ್ಚೆನ್. ಚನ್ನಪಟ್ಟಣದ ಶಾಸಕರು ಹಾಗೂ ನಟರಾದ ಸಿ.ಪಿ. ಯೋಗೇಶ್ವರ್ ಅವರು ಹಾಗೂ ಅವರ ಪುತ್ರ ಧ್ಯಾನ್ ಯೋಗೇಶ್ವರ್ ಅಭಿನಯಿಸಲಿರುವ ಸೈನಿಕ –2 ಹಾಗೂ ಕರ್ಣಾಟಬಲಂ ಚಲನಚಿತ್ರದ ಮುಹೂರ್ತ ಸಮಾರಂಭ ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಅದ್ದೂರಿಯಾಗಿ ನಡೆಯಿತು. ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು. ಬಮೂಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಭಾಗವಹಿಸಿ, ಚಿತ್ರತಂಡಕ್ಕೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ, ಮಾಜಿ ಸಚಿವ, ಶಾಸಕರಾದ ಸುಧಾಕರ್, ಉದಯ್ ಕದಲೂರು, ಎಂಎಲ್ಸಿಗಳಾದ ಎಸ್ ರವಿ, ಮೋಹನ್, ನಟ ಜಗಪತಿ ಬಾಬು ಜನಪ್ರತಿನಿಧಿಗಳು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ . ‘ಇತಿಹಾಸ ಯಾರೂ ಮರೆಯೋಕೆ ಸಾಧ್ಯ ಇಲ್ಲ’ ಎಂದು ಹೇಳಿದರು. ಸಿ.ಪಿ.ಯೋಗೇಶ್ವರ್ ಪುತ್ರ ಧ್ಯಾನ್ ಅವರಿಗೆ ಒಳಿತಾಗಲಿ. ಇತಿಹಾಸವನ್ನ ನೆನಪು ಮಾಡುವ ಕೆಲಸವನ್ನು ಧ್ಯಾನ್ ಮಾಡಲಿ. ತುಂಬು ಹೃದಯದಿಂದ ನಾನು ಆಶೀರ್ವಾದ ಮಾಡುತ್ತೇನೆ’ ಎಂದು ಶುಭ ಕೋರಿದರು. ಇನ್ನು…

Read More

ಸರಗೂರು: ತಾಲೂಕಿನಲ್ಲಿ ಆರಂಭಗೊಂಡಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಹಿನ್ನೆಲೆಯಲ್ಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಶನಿವಾರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪ್ರಕ್ರಿಯೆಯನ್ನು ಪರಿಶೀಲಿಸಿದರು. ತಾಲೂಕಿನ ಪುರದಕಟ್ಟೆ ಹಾಡಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿರುವ ಬೂತ್ ಮಟ್ಟದ ಅಧಿಕಾರಿಗಳಿಂದ (ಬಿಎಲ್ಒ) ಮಾಹಿತಿ ಪಡೆದುಕೊಂಡರು. ಇದೇ ವೇಳೆ ಸಾರ್ವಜನಿಕರ ಮನೆ ಮನೆಗೆ ತೆರಳಿ ಮತದಾರರಲ್ಲಿ ಜಾಗೃತಿ ಮೂಡಿಸಿದ ಅವರು, ಯಾರೊಬ್ಬರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಈ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಮತದಾರರಿಗೆ ಪ್ರಮುಖ ಸೂಚನೆಗಳು: ಬಿಎಲ್ ಒಗಳು ಮನೆಗೆ ಭೇಟಿ ನೀಡಿದಾಗ ಭರ್ತಿ ಮಾಡಿದ ಗಣತಿ ನಮೂನೆಯನ್ನು (ಎನ್ಯುಮರೇಷನ್ ಫಾರ್ಮ್) ನೀಡುತ್ತಾರೆ. ಸಾರ್ವಜನಿಕರು ಆ ಫಾರಂ ಅನ್ನು ಸರಿಯಾಗಿ ಪರಿಶೀಲಿಸಿ, ವಿವರಗಳು ಸರಿಯಾಗಿದ್ದರೆ ಸಹಿ ಹಾಕಿ ಬಿಎಲ್ ಒಗಳಿಗೆ ವಾಪಸ್ ನೀಡಬೇಕು. ಹಿಂದಿನ ಎಸ್ ಐಆರ್ ನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ತಮ್ಮ…

Read More

ತುಮಕೂರು: ಎಸ್ ಐಆರ್ (Special Intensive Revision) ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಗ್ರಾಮ ಆಡಳಿತಾಧಿಕಾರಿ ಭುವನಾ ಅವರ ಸಾವಿನ ಹಿನ್ನೆಲೆಯಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ನೌಕರರನ್ನು ರಾಜ್ಯದ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ ಮಾಡಿ, ಅವರ ಮನವಿ ಸ್ವೀಕರಿಸಿ ಹಲವು ಭರವಸೆಗಳನ್ನು ನೀಡಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವರು ಮೊದಲು ಭುವನಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಬಳಿಕ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ, ಅವರ ಕುಟುಂಬಕ್ಕೆ ಸಾಂತ್ವನ ವ್ಯಕ್ತಪಡಿಸಿದರು. ನಂತರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಅವರು, ಭುವನಾ ಅವರ ಸಾವಿಗೆ ಕಾರಣವಾದ ಘಟನೆ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಯಾವುದೇ ಹಂತದಲ್ಲಿ ಕರ್ತವ್ಯದ ಒತ್ತಡ ಅಥವಾ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಶನಿವಾರ ಚಿತ್ರದುರ್ಗದಲ್ಲಿ ಪೂರ್ವನಿಗದಿತ ಪ್ರಗತಿ ಪರಿಶೀಲನಾ ಸಭೆ ಇದ್ದ ಕಾರಣ ಹಾಗೂ ಆರೋಗ್ಯ ಸಮಸ್ಯೆಯಿಂದ ತಕ್ಷಣ ತುಮಕೂರಿಗೆ…

Read More