Subscribe to Updates
Get the latest creative news from FooBar about art, design and business.
- ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
- ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
- ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
- ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
- ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
- ಹುಯಿಲ್ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
- ತುಮಕೂರು: ಗಾಜಿನ ಮನೆಯಲ್ಲಿ ‘ಸಿರಿಧಾನ್ಯ ಖಾದ್ಯಗಳ’ ಘಮಲು!
- 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್ ಗೆ ಪದೋನ್ನತಿ
Author: admin
ಕೊರಟಗೆರೆ : SSLC ಮರುಮೌಲ್ಯಮಾಪನ ಫಲಿತಾಂಶದಲ್ಲಿ ರವೀಂದ್ರ ಭಾರತಿ ಪ್ರೌಢಶಾಲೆ ವಿದ್ಯಾರ್ಥಿ ಸೃಜನ್ ಎಂ.ಎನ್ 620(99.2%) ಅಂಕದೊಂದಿಗೆ ರಾಜ್ಯಕ್ಕೆ ಆರನೇ ರ‍್ಯಾಂಕ್, ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದು ಸಂಸ್ಥೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾನೆ. ಮೇ 2ರಂದು ಕರ್ನಾಟಕ ಪ್ರೌಢ ಶಿಕ್ಷಣಾ ಮಂಡಳಿಯಿಂದ ಬಿಡುಗಡೆಗೊಂಡ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮರು ಮೌಲ್ಯಪನಕ್ಕೆ ಶಾಲೆಯ 4 ಮಂದಿ ವಿದ್ಯಾರ್ಥಿಗಳು ಅರ್ಜಿ ಹಾಕಿದ್ದರು. ಈ ವಿದ್ಯಾರ್ಥಿಗಳಲ್ಲಿ ಸೃಜನ್ ಎಂ.ಎನ್ ಹಿಂದಿ, ಗಣ ತ, ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ, ಉಳಿದ ಮೂರು ವಿಷಯಗಳಲ್ಲಿ ಕನ್ನಡ 123 , ಇಂಗ್ಲೀಷ್ 99, ಸಮಾಜ ವಿಜ್ಞಾನ 98 ಒಟ್ಟು 620 ಅಂಕ ಪಡೆದಿದ್ದಾನೆ. ರಾಜ್ಯಕ್ಕೆ 6 ನೇ ರ‍್ಯಾಂಕ್ ಪಡೆದು ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಯ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಉಳಿದ ಮೂರು ವಿದ್ಯಾರ್ಥಿಗಳಲ್ಲಿ ವರ್ಷಿಣ ಟಿ.ವಿ 603 ಅಂಕ, ದೀಕ್ಷಿತ…
ತುರುವೇಕೆರೆ : ಬಸವ ಜಯಂತಿಯ ಅಂಗವಾಗಿ ಆಪರೇಷನ್ ಸಿಂಧೂರದ ವೀರ ಯೋಧರಿಗೆ ಬಲ ನೀಡುವ ನಿಟ್ಟಿನಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ ಆಚರಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತುರುವೇಕೆರೆ ತಾಲೂಕು ಘಟಕದ ಅಧ್ಯಕ್ಷ ಎಸ್.ಎಂ.ಕುಮಾರಸ್ವಾಮಿ ಅವರು ತಿಳಿಸಿದರು. ಮಾಯಸಂದ್ರ ರಸ್ತೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿನಾಂಕ 29–05–2025ರ ಗುರುವಾರ ತುರುವೇಕೆರೆ ಪಟ್ಟಣದಲ್ಲಿ ಬಸವ ಜಯಂತಿ ಮತ್ತು ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ವತಿಯಿಂದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಬೆಳಗ್ಗೆ 7:30ಕ್ಕೆ ಪೂಜಾ ಕಾರ್ಯಕ್ರಮ ಮತ್ತು 11 ಗಂಟೆಗೆ ಧಾರ್ಮಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕಿನ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ದಿವ್ಯ ಸಾನಿಧ್ಯವನ್ನು ವಿರಕ್ತ ಮಠದ ಶ್ರೀ ಶ್ರೀ ಕರಿ ವೃಷಭ ದೇಶಿ ಕೇಂದ್ರ ಮಹಾಸ್ವಾಮೀಜಿಯವರು ವಹಿಸಲಿದ್ದು, ಗುಬ್ಬಿ ತಾಲೂಕಿನ ಗೊಲ್ಲಹಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಮಹಾಸಂಸ್ಥಾನದ ಶ್ರೀಗಳಾದ ಡಾ.ಶ್ರೀ ಶ್ರೀ ವಿಭವ ವಿದ್ಯಾಶಂಕರ…
ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ಎದ್ದಿರುವ ವಿವಾದದ ಬೆನ್ನಲ್ಲೇ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ಮೈಸೂರು ಸ್ಯಾಂಡಲ್ ಸೋಪ್ ಗೆ ಪ್ರತಿ ಕನ್ನಡಿಗನೂ ರಾಯಭಾರಿ ಎಂದು ಹೇಳಿಕೊಂಡಿದ್ದಾರೆ. ತಮ್ಮ ಇನ್ಸ್ಟಾದಲ್ಲಿ ಸ್ಟೋರಿ ಹಂಚಿಕೊಂಡಿರುವ ಅವರು, ಉತ್ಪನ್ನಗಳ ಪ್ರಮೋಷನ್ ಗೆ ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು ನಮ್ಮ ಪರಂಪರೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಕೊಡಗು: SSLC ಪರೀಕ್ಷೆ ಫಲಿತಾಂಶದಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದ ವಿದ್ಯಾರ್ಥಿ ಮರು ಮೌಲ್ಯಮಾಪನ ಬಳಿಕ ಕರ್ನಾಟಕಕ್ಕೆ ಪ್ರಥಮ ಸ್ಥಾನ ಬಂದಿದ್ದಾರೆ. ಮಡಿಕೇರಿಯ ತನ್ಮಯಿ ಎಂ. ಎನ್. ರಾಜ್ಯಕ್ಕೆ ಪ್ರಥಮ ಬಂದ ವಿದ್ಯಾರ್ಥಿ. ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವ ತನ್ಮಯಿ, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ. ಎ. ನಿರಂಜನ್ ಮತ್ತು ಸೌಮ್ಯ ದಂಪತಿ ಪುತ್ರ. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೀರ್ತಿಗೆ ಪಾತ್ರನಾಗಿದ್ದಾನೆ. ಕರ್ನಾಟಕ ಶಿಕ್ಷಣ ಪರೀಕ್ಷಾ ಮಂಡಳಿ ಈ ಮುಂಚೆ ಪ್ರಕಟಿಸಿದ್ದ ಫಲಿತಾಂಶದಲ್ಲಿ ವಿದ್ಯಾರ್ಥಿ ತನ್ಮಯಿಗೆ 625ಕ್ಕೆ 622 ಅಂಕ ಪಡೆದುಕೊಂಡಿದ್ದ. ಆದರೆ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ತನ್ಮಯಿ, ಬಳಿಕ 625ಕ್ಕೆ 625 ಅಂಕ ಗಳಿಸಿದ್ದಾನೆ. ಆ ಮೂಲಕ ಮೊದಲನೇ ಸ್ಥಾನ ಗಿಟ್ಟಿಸಿಕೊಂಡಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ವಾಷಿಂಗ್ಟನ್: ಆ್ಯಪಲ್ ಕಂಪನಿ ತನ್ನ ತಯಾರಿಕಾ ಘಟಕಗಳನ್ನು ತೆರೆಯಲು ಭಾರತಕ್ಕೆ ಹೋಗಲು ಅಭ್ಯಂತರವಿಲ್ಲ. ಆದರೆ ಅದು ತನ್ನ ಉತ್ಪನ್ನಗಳನ್ನು ಅಮೆರಿಕದಲ್ಲಿ ಸುಂಕವಿಲ್ಲದೆ ಮಾರಾಟ ಮಾಡುವಂತಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಾಕೀತು ಮಾಡಿದ್ದಾರೆ. ಓವಲ್ ಕಚೇರಿಯಲ್ಲಿ ಅಮೆರಿಕದ ಪರಮಾಣು ಶಕ್ತಿಯನ್ನು ವರ್ಧಿಸುವ ಸಲುವಾಗಿ ವಿವಿಧ ಕಾರ್ಯಾದೇಶಗಳಿಗೆ ಸಹಿ ಮಾಡುವಾಗ ಟ್ರಂಪ್ ಈ ಮಾತುಗಳನ್ನಾಡಿದ್ದಾರೆ. ಆದರೆ ಟಿಮ್ (ಕುಕ್) ಈ ಕೆಲಸ ಮಾಡಲಾರರು ಎಂದು ನಾನು ಭಾವಿಸಿದ್ದೇನೆ. ಅವರು ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಭಾರತಕ್ಕೆ ಹೋಗುವುದಾಗಿ ಹೇಳಿದರು. ಆಗ ನಾನು ನೀವು ಭಾರತಕ್ಕೆ ತೆರಳಲು ಅಡ್ಡಿ ಇಲ್ಲ. ಆದರೆ ನಿಮ್ಮ ಉತ್ಪನ್ನಗಳನ್ನು ಅಮೆರಿಕದಲ್ಲಿ ಸುಂಕ ಪಾವತಿಸದೆ ಮಾರುವಂತಿಲ್ಲ ಎಂದು ಹೇಳಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದ ಬಳಿ ಕಾಡು ಆನೆ ತುಳಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಚಂದ್ರಮ್ಮ (45) ಎಂದು ಗುರುತಿಸಲಾಗಿದೆ. ಹತ್ತಿರದ ಕಾಫಿ ತೋಟಕ್ಕೆ ಹೋಗುತ್ತಿದ್ದಾಗ ಆನೆಯ ದಾಳಿಗೆ ಒಳಗಾಗಿದ್ದಾರೆ. ಘಟನೆಯ ನಂತರ, ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಮೃತರ ಶವವನ್ನು ಸ್ಥಳಾಂತರಿಸಲು ನಿರಾಕರಿಸಿದರು. ಜಿಲ್ಲಾ ಸಚಿವ ಕೆ.ಎನ್.ರಾಜಣ್ಣ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಪರಿಹಾರವನ್ನು ಹಸ್ತಾಂತರಿಸಬೇಕೆಂದು ಅವರು ಒತ್ತಾಯಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನಲ್ಲಿ ಮಹಿಳಾ ಪ್ರಯಾಣಿಕರ ವಿಡಿಯೋ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಅಸಭ್ಯ ಫೋಟೋ ಹಾಗೂ ವಿಡಿಯೋಗಳನ್ನು ರಹಸ್ಯವಾಗಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾ ಪೇಜ್ ಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಆರೋಪಿಯನ್ನು ಆತನ ಮನೆಯಿಂದ ಬಂಧಿಸಲಾಗಿದೆ ಎಂದು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಲೋಕೇಶ್ ಬಿ ಜಗಲಾಸರ್ ತಿಳಿಸಿದ್ದಾರೆ. ಬಂಧಿತನನ್ನು 27 ವರ್ಷದ ದಿಗಂತ ಎಂದು ಗುರುತಿಸಲಾಗಿದೆ. ಆರೋಪಿ ದಿಗಂತ್ ಉತ್ತರ ಬೆಂಗಳೂರಿನ ತಿಗಳರಪಾಳ್ಯದ ನಿವಾಸಿಯಾಗಿದ್ದಾನೆ. ವಾಣಿಜ್ಯ ಪದವೀಧರನಾಗಿರುವ ಈತ ಮುರುಗೇಶಪಾಳ್ಯದ ಖಾಸಗಿ ಕಂಪನಿಯಲ್ಲಿ ಖಾತೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್–19 ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕಳೆದ 20 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಹೆಚ್ಚಳ ಕಂಡುಬಂದಿದೆ. ಹೀಗಾಗಿ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ವಹಿಸಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ತಿಳಿಸಿದೆ. 2025 ರಲ್ಲಿ ಈವರೆಗೆ ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿಲ್ಲ. ಆದರೂ ಕೋವಿಡ್ ಸೋಂಕು ಮತ್ತಷ್ಟು ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ವಹಿಸಬೇಕಾಗಿರುವೂದು ಅಗತ್ಯ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ. ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಿ ಓಡಾಡಬೇಕು. ಸಾರ್ವಜನಿಕರು ಕೈಗಳ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು…
ಬೆಂಗಳೂರು: ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಲು ಅನುಮತಿ ಕೋರಿ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಶುಕ್ರವಾರ ಪರಿಷತ್ತಿನ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರನ್ನು ಸಂಪರ್ಕಿಸಿದ್ದಾರೆ. ಹೊರಟ್ಟಿ ಅವರು ಕಚೇರಿಯಲ್ಲಿ ಇಲ್ಲದ ಕಾರಣ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ವಿಧಾನಸೌಧದ ಆಪ್ತ ಕಾರ್ಯದರ್ಶಿಗೆ ನಾರಾಯಣಸ್ವಾಮಿ ಪ್ರಸ್ತಾವನೆ ಸಲ್ಲಿಸಿದರು. ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಇದೇ 21 ರಂದು ‘ತಿರಂಗಾಯಾತ್ರೆ’ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮನ್ನು ಅಕ್ರಮ ಬಂಧನದಲ್ಲಿರಿಸಿ, ಹಲ್ಲೆಗೆ ಪ್ರಯತ್ನಿಸಿರುವ ಘಟನೆ ನಡೆದಿದೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಸಭಾಪತಿಗೆ ದೂರು ನೀಡಿದ್ದಾರೆ. ಕಲಬುರಗಿ ಎಸ್ಪಿ ಆಡೂರು ಶ್ರೀನಿವಾಸುಲು ಮತ್ತು ಹೆಚ್ಚುವರಿ ಎಸ್ಪಿ ಮಹೇಶ್ ಮೇಘಣ್ಣನವರ್, ಡಿವೈಎಸ್ಪಿ ಶಂಕರ್ ಗೌಡ ಪಾಟೀಲ್, ಸಿಪಿಐಗಳಾದ ಚಂದ್ರಶೇಖರ ತಿಗಡಿ, ನಟರಾಜ ಲಾಡಾ ಮತ್ತು ಇತರ ಅಧಿಕಾರಿಗಳು ಮೌನವಾಗಿದ್ದು, ಈ ನಾಚಿಕೆಗೇಡಿನ ಕೃತ್ಯದಲ್ಲಿ ಭಾಗವಹಿಸುವ ಮೂಲಕ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಧಕ್ಕೆಯಾಗುವ ರೀತಿಯಲ್ಲಿ…
ಹಾಸನ: ತಾಳಿ ಕಟ್ಟುವ ವೇಳೆ ಮದುವೆ ಮುರಿದುಕೊಂಡಿದ್ದ ವಧುವಿಗೆ ಆಕೆಯ ಪ್ರಿಯಕರನ ಜೊತೆಯೇ ಮಾಡುವೆ ಮಾಡಿಸಲಾಗಿದೆ. ಮೂರು ತಿಂಗಳ ಹಿಂದೆ ನಿಶ್ಚಯವಾಗಿ ನಿನ್ನೆ ನಡೆಯಬೇಕಿದ್ದ ಮದುವೆಯನ್ನು ತಾಳಿ ಕಟ್ಟುವ ವೇಳೆ ವಧು ಮದುವೆ ಮುರಿದುಕೊಂಡಿದ್ದಳು. ಇದೀಗ ವಧುವಿಗೆ ಆಕೆಯ ಪ್ರಿಯಕರನ ಜೊತೆಯೇ ಮದುವೆ ಮಾಡಿಸಲಾಗಿದೆ. ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ ಶುಭ ಮುಹೂರ್ತದಲ್ಲಿ ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ವಧು ನನಗೆ ಈ ಮದುವೆ ಇಷ್ಟ ಇಲ್ಲ ಅಂತ ಹೇಳಿದ್ದರಿಂದ ಮದುವೆ ಮುರಿದುಬಿದ್ದಿತ್ತು. ಆನಂತರ ವಧು ತಾನು ಪ್ರೀತಿಸುತ್ತಿದ್ದ ಯುವಕನಿಗಾಗಿ ಮದುವೆ ಆಗಲು ನಿರಾಕರಿಸಿದ್ದ ವಿಚಾರ ತಿಳಿದ ಪೋಷಕರು ಇದೀಗ ತಮ್ಮ ಮಗಳ ಇಷ್ಟದಂತೆ ಪ್ರಿಯಕರನ ಜೊತೆ ಮದುವೆ ಮಾಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW