Subscribe to Updates
Get the latest creative news from FooBar about art, design and business.
- ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
- ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
- ತುಮಕೂರು | ಆರ್ ಎಸ್ ಎಸ್ ನಿಷೇಧಿಸಲು ಡಿಎಸ್ ಎಸ್ ಆಗ್ರಹ
- ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
- ಮನೆ–ಮನೆಗೆ ಪೊಲೀಸ್: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
- ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್
- ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
- ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
Author: admin
ತುರುವೇಕೆರೆ: ‘ಭಾರತವನ್ನು ಒಂದುಗೂಡಿಸುವುದು ಭಾರತ ಜೋಡೋ ಯಾತ್ರೆಯ ಪ್ರಮುಖ ಉದ್ದೇಶವೇ ಹೊರತು, 2024ರ ಚುನಾವಣೆ ನಮ್ಮ ಗುರಿಯಲ್ಲ. ಹಿಂಸಾಚಾರ, ದ್ವೇಷದಿಂದ ಮಾನಸಿಕವಾಗಿ ವಿಭಜನೆಯಾಗುತ್ತಿರುವ ಭಾರತವನ್ನು ಒಗ್ಗೂಡಿಸುವುದು. ಆರ್ಥಿಕ ಅಸಮಾನತೆ ಮೂಲಕ ಕೆಲವರು ದೇಶದ ಶ್ರೀಮಂತರಾದರೆ, ಬಹುತೇಕರು ಬಡವರಾಗುತ್ತಿರುವುದರ ವಿರುದ್ಧ. ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಕುಸಿಯುತ್ತಿದ್ದು, ಕೆಲ ಉದ್ಯೋಮಿಗಳ ಬಳಿ ದೇಶದ ಸಂಪತ್ತು ಸೇರುತ್ತಿರುವುದರ ವಿರುದ್ಧ. ಆರ್ಥಿಕ ಕುಸಿತ ಹಾಗೂ ನಿರುದ್ಯೋಗ ಹೆಚ್ಚಾಗುತ್ತಿರುವುದರ ವಿರುದ್ಧ. ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದ್ದು, ಜನಸಾಮಾನ್ಯರ ಗಂಭೀರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದು ಈ ಯಾತ್ರೆಯ ಪ್ರಮುಖ ಉದ್ದೇಶ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತ ಐಕ್ಯತಾ ಯಾತ್ರೆ ಭಾಗವಾಗಿ ತುಮಕೂರಿನ ತುರುವೇಕೆರೆಯಲ್ಲಿ ಮಾಧ್ಯಮಗಳ ಜತೆ ರಾಹುಲ್ ಗಾಂಧಿ ಅವರು ಶನಿವಾರ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಜೈರಾಮ್ ರಮೇಶ್, ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ…
ಕೊರಟಗೆರೆ: ನೈಸರ್ಗಿಕ ಬಂಡೆಗಳ ಮೇಲೆ ನೂರಾರು ವರ್ಷಗಳಿಂದ ಕೃಷಿ ಉತ್ಪನ್ನಗಳನ್ನು ಶುಚಿ ಮಾಡುತ್ತಿದ್ದ ರೈತರಿಗೆ ಕಳೆದ ಮೂರು ವರ್ಷಗಳಿಂದ ಮದ್ಯದ ಬಾಟಲ್ ನ ಚೂರುಗಳನ್ನು ಸ್ವಚ್ಚಗೊಳಿಸುವುದೇ ತಲೆ ನೋವಾಗಿದೆ. ಕೃಷಿಕರು ತಾವು ಬೆಳೆದ ರಾಗಿ,ತೊಗರಿ,ಜೋಳ ಸೇರಿದಂತೆ ಆಹಾರ ಬೆಳೆಗಳನ್ನು ನೈಸರ್ಗಿಕ ಬಂಡೆಯ ಮೇಲೆ ಶುಚಿ ಮಾಡುತ್ತಿದ್ದರು. ಜಮೀನುಗಳಲ್ಲಿ ಕಣ ಸಿದ್ಧ ಮಾಡುವ ಸಂಪ್ರದಾಯ ಕೈಬಿಟ್ಟ ನಂತರ ಮತ್ತು ರಸ್ತೆ ಮೇಲೆ ಸಂಸ್ಕರಣೆ ಮಾಡಿದರೆ ಶುಚಿಯಾಗಿರುವುದಿಲ್ಲ ಎಂದು ಬಂಡೆಗಳನ್ನೇ ರೈತರು ಅಶ್ರಯಿಸಿದ್ದರು. ಅನಂತರ ಬಂಡೆಗಳ ಮೇಲೆ ಜಾಗ ಕಾಯ್ದಿರಿಸಲು ಕೃಷಿಕರಲ್ಲಿ ಪೈಪೋಟಿ ಪ್ರಾರಂಭವಾಗಿತ್ತು. ತೋವಿನಕೆರೆ ಸಮೀಪ ಕುರಂಕೋಟೆ ಗ್ರಾಪಂ ವ್ಯಾಪ್ತಿಯ ಬಂಡೆಹಳ್ಳಿ ತಿರುವಿನಲ್ಲಿರುವ ಬಂಡೆ ಮೇಲೆ ರಾಗಿ ತೆನೆಗಳನ್ನು ರಾಶಿ ಹಾಕಿ ಶುಚಿ ಮಾಡಲಾಗುತ್ತಿದೆ. ಕುರಂಕೋಟೆ ಗ್ರಾಪಂ ವ್ಯಾಪ್ತಿಯ ಬಂಡೆಹಳ್ಳಿ ಆಲದ ಮರದ ಬಂಡೆ, ಮಲ್ಲಪುಡಿ ಬಂಡೆ, ಓಣಿ ಬಂಡೆ, ಜುಂಜರಾಮನಹಳ್ಳಿ ಬಂಡೆ, ಹೊಲತಾಳುವಿನ ಸೀಬಯ್ಯನ ಬಂಡೆ,ಗೊಲ್ಲರ ಹಟ್ಟಿ ಬಂಡೆ, ನವನಗರ ಬಂಡೆ, ಬಿಕ್ಕೆಗುಟ್ಟೆ ಬಂಡೆಗಳ ಮೇಲೆ ಹಲವು ಟನ್ ಗಳಷ್ಟು ರಾಗಿ,…
ಕೊರಟಗೆರೆ: ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣದ ಬೈಪಾಸ್ ನ ವಡ್ಡಗೆರೆ ಕ್ರಾಸ್ ನ ಬಳಿ ದುರ್ಘಟನೆ ಜರುಗಿದ್ದು, ಪಟ್ಟಣದ ನಿವಾಸಿಯಾದ ಬಸವರಾಜು ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮೃತ ಬಸವರಾಜು ವಡ್ಡಗೆರೆ ಮಾರ್ಗವಾಗಿ ಕೊರಟಗೆರೆಗೆ ಬರುವಾಗ ಬೈಪಾಸ್ ನಲ್ಲಿ ರಸ್ತೆ ದಾಟುವ ಸಂದರ್ಭದಲ್ಲಿ ಕಾರು ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸವರಾಜುವಿಗೆ ಗಂಭೀರವಾಗಿ ಗಾಯವಾಗಿದ್ದು, ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ನೆಲಮಂಗಲ: ರಾಜ್ಯ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಲಾವಣ್ಯ ಜಿ.ಎನ್.ರವರನ್ನು ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರ ಆದೇಶದಂತೆ ಹಾಗೂ ಸಭೆಯ ಒಮ್ಮತದ ನಿರ್ಣಯದಂತೆ ರಾಜ್ಯಾಧ್ಯಕ್ಷರು ಆದೇಶ ಪತ್ರ ನೀಡಿ ನೇಮಕ ಮಾಡಿದರು. ನೆಲಮಂಗಲದ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಮಿತಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷೆಯಾಗಿ ಲಾವಣ್ಯ ಜಿ.ಎನ್. ಅವರಿಗೆ ಆದೇಶ ಪತ್ರ ನೀಡಲಾಯಿತು. ರಾಜ್ಯ ಮಹಿಳಾ ಘಟಕದ ಅಧಿಕಾರ ವಹಿಸಿಕೊಂಡು ನೊಂದವರ ಧ್ವನಿಯಾಗಿ ಸಂಘಟನೆಯ ಜವಾಬ್ದಾರಿಯನ್ನು ವೇದಿಕೆಯ ತತ್ವ ಸಿದ್ದಂತಾಗಳಾಡಿಯಲ್ಲಿ ಕೆಲಸ ಮಾಡುವಂತೆ ಇದೇ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ಕೆ.ಆರ್.ರವರು ಮಾರ್ಗದರ್ಶನ ಮಾಡಿದರು. ಇದೇ ಸಂದರ್ಭದಲ್ಲಿ ರಾಜ್ಯ ಸಾಮಾಜಿಕ ಜಾಲತಾಣದ ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ಹೆಚ್.ಜಿ.ಗೌಡ, ರಾಜ್ಯ ಸಾಮಾಜಿಕ ಜಾಲತಾಣದ ಘಟಕದ ಸಂಘಟನಾ ಕಾರ್ಯದರ್ಶಿಯಾದ ಮಹೇಶ್ ಜಿ.ಗೌಡ ಹಾಗೂ ನೆಲಮಂಗಲ ತಾಲ್ಲೂಕು ಅಧ್ಯಕ್ಷರಾದ ಕಾಂತ್ ಕುಮಾರ್, ಉಪಾಧ್ಯಕ್ಷರಾದ ಗಂಗಾಧರ್, ಇನ್ನಿತರ ರಾಜ್ಯ ಸಮಿತಿಯ ಕಾರ್ಯಕರ್ತರು ಹಾಗೂ…
ಬೆಳಗಾವಿ: ಚಿನ್ನದ ವ್ಯಾಪಾರಿಯನ್ನು ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ನಿಪ್ಪಾಣಿ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಕಾಂಬಳೆ(25), ಅವಧೂತ ಕೋಳಿ(25), ಅಕ್ಷಯ್ ಕೊಂಡಗೇರಿ(29), ಪಂಕಜ್ ಕೋಳಿ(25) ಎಂಬ ಬಂಧಿತ ಆರೋಪಿಗಳು. ಬಂಧಿತರಿಂದ ಸುಲಿಗೆ ಮಾಡಿದ 75 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ಸಹಿತ ಕೃತ್ಯಕ್ಕೆ ಬಳಸಿದ 2 ಬೈಕ್ಗಳು, 4 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ನಲ್ಲಿ ದೋಂಡಿರಾಮ್ ವಿಷ್ಣು ಕಾಂಬಳೆ ಎಂಬುವರಿಂದ ಚಿನ್ನ-ಬೆಳ್ಳಿ ಕದ್ದು ಆರೋಪಿಗಳು ಪರಾರಿಯಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇಸ್ರೇಲ್ ನಲ್ಲಿ ಭಾರತದ ಯುವಕನನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸಲಾಗಿತ್ತು. ಇವರೆಲ್ಲರೂ 13 ರಿಂದ 15 ವರ್ಷದೊಳಗಿನವರು. 18 ವರ್ಷದ ಯೊಯೆಲ್ ಲೆಹಿಂಗ್ಹಾಲ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಚಾಕು ಹೊಡೆದಾಟಕ್ಕೆ ಬಲಿಯಾಗಿದ್ದಾನೆ. ಇಸ್ರೇಲ್‌ನ ಕಿರ್ಯಾತ್ ಸೊಮೊನಾ ನಗರದಲ್ಲಿ ಈ ಘಟನೆ ನಡೆದಿದೆ. ಯೊಯೆಲ್ ಒಂದು ವರ್ಷದ ಹಿಂದೆ ತನ್ನ ಕುಟುಂಬದೊಂದಿಗೆ ಭಾರತದಿಂದ ಇಸ್ರೇಲ್‌ಗೆ ವಲಸೆ ಬಂದಿದ್ದ. ಅವರು ನೋಫ್ ಹಗಲಿಲ್ ಎಂಬ ಊರಿನಲ್ಲಿದ್ದಾರೆ. ಹುಟ್ಟುಹಬ್ಬದ ಸಮಾರಂಭದಲ್ಲಿ ಸುಮಾರು 20 ಯುವಕರು ಪರಸ್ಪರ ಹಲ್ಲೆ ನಡೆಸಿದ್ದಾರೆ. ಯೊಯೆಲ್ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಬಿನೈ ಮಿನಾಶೆ ಯಹೂದಿ ಸಮುದಾಯವು ಭಾರತದ ಮಣಿಪುರ ಮತ್ತು ಮಿಜೋರಾಂ ಪ್ರದೇಶದಲ್ಲಿ ನೆಲೆಗೊಂಡಿದೆ. ಈ ಗುಂಪಿಗೆ ಸೇರಿದ ಜನರು ಕಳೆದ ಎರಡು ದಶಕಗಳಿಂದ ಇಸ್ರೇಲ್‌ಗೆ ವಲಸೆ ಬರುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಹೊರವಲಯದ ಕೋಲಾರಮ್ಮ ಕೆರೆ ಬಳಿ ಈ ಘಟನೆ ನಡೆದಿದೆ. ಶಬ್ಬಿ ಉಲ್ಲಾ ಬೇಗ್( 41) ಇರ್ಷಾದ್ ಉಲ್ಲಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಬ್ಬರು ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲ ನಿವಾಸಿಗಳಾಗಿದ್ದಾರೆ. ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಕೋಲಾರ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಚೆನ್ನೈನ ಮೈಲಾಪುರ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನುಖರೀದಿಸುವ ವೀಡಿಯೊವನ್ನು ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಚೆನ್ನೈ ಭೇಟಿಯ ವೇಳೆ ವಿತ್ತ ಸಚಿವೆ ನಿರ್ಮಾಲಾ ಅವರು ಮೈಲಾಪುರ ಮಾರುಕಟ್ಟೆಗೆ ತೆರಳಿದ್ದಲ್ಲದೆ ಕೆಲವು ಮಾರಾಟಗಾರರು, ಗ್ರಾಹಕರೊಂದಿಗೆ ಮಾತನಾಡಿದ್ದರು. ಭಾರತದಲ್ಲಿ ಹಣದುಬ್ಬರದಲ್ಲಿ ಒಳಪಟ್ಟಿರುವ ಪ್ರಮುಖ ವಸ್ತುಗಳಲ್ಲಿ ತರಕಾರಿ ಕೂಡ ಒಂದು. ಇದು ನಿರ್ಮಲಾ ಸೀತಾರಾಮನ್ ಅವರಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಒಂದಾಗಿದೆ. ವೀಡಿಯೋದಲ್ಲಿ ಅವರು ಮಾರುಕಟ್ಟೆಯಲ್ಲಿ ಕೆಲವು ಸಿಹಿ ಗೆಣಸುಗಳನ್ನು ಆಯ್ದುಕೊಳ್ಳುತ್ತಿರುವುದು ಕಂಡುಬಂತು. ಜತೆಗೆ ಅದರ ದರದ ಕುರಿತು ವಿಚಾರಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
2024ರ ಮೊದಲು ರಾಜ್ಯದ ರಸ್ತೆಗಳನ್ನು ಅಮೆರಿಕಕ್ಕಿಂತ ಉತ್ತಮಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇಂಡಿಯನ್ ರೋಡ್ ಕಾಂಗ್ರೆಸ್ 81 ನೇ ಅಧಿವೇಶನದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಚಿವರು ತಮ್ಮ ಭಾಷಣದಲ್ಲಿ ಉತ್ತರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಅನ್ನು ಘೋಷಿಸಿದ್ದಾರೆ. 8,000 ಕೋಟಿ ಮೌಲ್ಯದ ರಸ್ತೆ ಯೋಜನೆಗಳನ್ನು ಉತ್ತರ ಪ್ರದೇಶಕ್ಕೆ ಉಡುಗೊರೆಯಾಗಿ ನೀಡಿದ್ದು, 2024 ರ ಮೊದಲು ರಾಜ್ಯದ ರಸ್ತೆಗಳನ್ನು ಅಮೆರಿಕಕ್ಕಿಂತ ಉತ್ತಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಮೋದಿ ಸರ್ಕಾರವು ಮುಂಬರುವ ದಿನಗಳಲ್ಲಿ ಯುಪಿಗೆ ಐದು ಲಕ್ಷ ಕೋಟಿ ರೂಪಾಯಿಗಳನ್ನು ಅನುಮೋದಿಸಲಿದೆ. ಪ್ರಸ್ತುತ ಎಂಟು ಸಾವಿರ ಕೋಟಿ ರೂಪಾಯಿಗಳ ಯೋಜನೆಗಳನ್ನು ಇಂದು ನೀಡಲಾಗುತ್ತಿದೆ ಎಂದು ಗಡ್ಕರಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
2022 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರು ಆಯ್ಕೆಯಾಗಿದ್ದಾರೆ. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ. ಸಾಮಾಜಿಕ ಕ್ಷೇತ್ರದಿಂದ ಬೆಂಗಳೂರಿನ ಎನ್ ಮುನಿಸ್ವಾಮಿ, ಕೃಷಿ ಕ್ಷೇತ್ರದಿಂದ ಚಿಕ್ಕಬಳ್ಳಾಪುರದ ಜಿ.ಎನ್.ನಾಗಪ್ಪ, ಬೆಳಗಾವಿಯ ಸಮಾಜ ಸೇವಕ ನಾಗಪ್ಪ ಎಚ್.ಕೋಣಿ, ಕಲಬುರಗಿಯ ರಂಗ ಕಲಾವಿದೆ ಪಿ.ಪದ್ಮಾ, ಮೈಸೂರಿನ ಸಮಾಜ ಸೇವಕ ಎಸ್. ಎಚ್ ಸುಭಾಷ್, ಕಲೆ ಮತ್ತು ಸಮಾಜ ಸೇವೆ ಕ್ಷೇತ್ರದಿಂದ ಬಳ್ಳಾರಿಯ ಉಷಾರಾಣಿ ಅವರನ್ನು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇನ್ನು ರಾಜ್ಯ ಸರ್ಕಾರವು ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಮೂಲಕ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳ ಅಸಮಾಧಾನ ಶಮನಗೊಳಿಸಿದೆ. ಇಂದು ವಿಧಾನಸೌಧದಲ್ಲಿ ಸ್ವಾಮೀಜಿಗಳ ಉಪಸ್ಥಿತಿಯಲ್ಲೇ ಅದ್ಧೂರಿ ಮಹರ್ಷಿ ವಾಲ್ಮೀಕಿ ಜಯಂತಿ ನಡೆಸಲು ಸಜ್ಜಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…