Subscribe to Updates
Get the latest creative news from FooBar about art, design and business.
- ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
- ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
- ತುಮಕೂರು | ಆರ್ ಎಸ್ ಎಸ್ ನಿಷೇಧಿಸಲು ಡಿಎಸ್ ಎಸ್ ಆಗ್ರಹ
- ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
- ಮನೆ–ಮನೆಗೆ ಪೊಲೀಸ್: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
- ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್
- ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
- ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
Author: admin
ಕೊರಟಗೆರೆ: ಕೊರಟಗೆರೆ ತಾಲೂಕು ಪತ್ರಕರ್ತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನಿಸಿ, ಸುಳ್ಳು ದೂರು ದಾಖಲಿಸಿರುವುದನ್ನು ಖಂಡಿಸಿ, ವೈದ್ಯ ನವೀನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪತ್ರಕರ್ತರನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ ಡಾ.ನವೀನ್ ಕೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷರಾದ ಚಿ.ನಿ.ಪುರುಷೋತ್ತಮ್ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಚಿಕ್ಕಿರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್ ಜಿಲ್ಲಾ ಸಂಘದ ಸಂಘದ ನಿರ್ದೇಶಕರುಗಳಾದ ಪರಮೇಶ್ ಹಾಗೂ ಚಿಕ್ಕಣ್ಣ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ಕಾರ್ಯನಿರತರಾಗಿದ್ದ ಪತ್ರಕರ್ತರ ಮೇಲೆ ಹಲ್ಲೆ ಯತ್ನ ಮಾಡಿ, ಸುಳ್ಳು ಪ್ರಕರಣ ದಾಖಲಿಸಿದ ಕೊರಟಗೆರೆ ಸಾರ್ವಜನಿಕರ ಆಸ್ಪತ್ರೆಯ ಇ ಎನ್ ಟಿ ಡಾಕ್ಟರ್ ನವೀನ್ ಕುಮಾರ್ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಬಹುಜನ ಸಮಾಜ ಪಾರ್ಟಿಯ ಕಾರ್ಯಕರ್ತರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ, ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಚಿವರಿಗೆ, ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ,ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಕಚೇರಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರಿನ ಮನವಿ ಪತ್ರ ನೀಡಿ ಪ್ರತಿಭಟಿಸಿದರು. ರಸ್ತೆ ಅಪಘಾತ ಸಂಭವಿಸಿ ವಾಹನ ಸವಾರರು ಸಾವು ಬದುಕಿನ ನಡುವೆ ನರಳುತ್ತಿದ್ದ ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬಂದಿರಲಿಲ್ಲ, ಆದರೂ ಸಾರ್ವಜನಿಕರ ಸಹಾಯದಿಂದ ಖಾಸಗಿ ವಾಹನದಲ್ಲಿ ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿತ್ತು ಆಸ್ಪತ್ರೆಯಲ್ಲೇ ಇದ್ದ ವೈದ್ಯ ನವೀನ್ ಕುಮಾರ್ ವಿಶ್ರಾಂತಿ ಕೊಠಡಿಯಿಂದ ಹೊರ ಬಾರದೇ ಅಮಾನವೀಯತೆ ಮೆರೆದಿದ್ದರು. ಈ ಸಂದರ್ಭದಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರಗತಿ ಟಿವಿ ವರದಿಗಾರ…
ತುಮಕೂರು : ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವನ ಭೀಕರ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತುಮಕೂರು ನಗರದ ಜಿಸಿಆರ್ ಕಾಲೋನಿಯ ಮುಬಾರಕ್ ಪಾಷಾ(35) ಎಂದು ಗುರುತಿಸಲಾಗಿದೆ. ಈತ ಕಳೆದ ರಾತ್ರಿ ನಗರದ ಖಾಸಗಿ ಬಸ್ ನಿಲ್ದಾಣಕ್ಕೆ ಬಂದಿದ್ದನು ಎನ್ನಲಾಗಿದೆ. ಈ ವೇಳೆ ಯಾರೋ ಅಪರಿಚಿತರು ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿ ನಗರದ ಗುಬ್ಬಿ ಗೇಟ್ ಬಳಿ ಹಮಾಲಿ ಕೆಲಸ ಮಾಡಿಕೊಂಡಿದ್ದನು. ಯಾರೊಂದಿಗೋ ಗಲಾಟೆ ಮಾಡಿಕೊಂಡು ಈತ ಕೊಲೆಯಾಗಿರುವ ಶಂಕೆ ಇದ್ದು. ಕೊಲೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ವಾಡ್, ಡಿವೈಎಸ್ಪಿ ಶ್ರೀನಿವಾಸ್, ನಗರ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ವರದಿ: ಮಂಜುಸ್ವಾಮಿ.ಎಂ.ಎನ್ . ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಬೆಂಗಳೂರು: ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವ್ರು ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅವರಷ್ಟು ಸುಳ್ಳನ್ನು ಕರಗತ ಮಾಡಿಕೊಂಡವರು ಯಾರು ಇಲ್ಲ. ಸುಳ್ಳಿನ ವಿಚಾರದಲ್ಲಿ ಅವರಿಗೆ ಪೈಪೋಟಿ ನೀಡಲು ಅಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಸತ್ಯದ ತಲೆ ಮೇಲೆ ಹೊಡೆಯುವ ಹಾಗೇ ಸುಳ್ಳು ಹೇಳುತ್ತಾರೆ. ಸುಳ್ಳು ಎಲ್ಲವನ್ನೂ ಎಂಬುದು ಸಿದ್ದರಾಮಯ್ಯನವರ ಸಿದ್ಧಾಂತ ಹೇಳಲಾಗಿದೆ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಫುಡ್ ಪಾಯಿಸನ್ ನಿಂದ ಮೂರು ಅನಾಥ ಮಕ್ಕಳು ಸಾವನ್ನಪ್ಪಿ ಎಂಟು ಮಕ್ಕಳು ಗಂಭೀರವಾಗಿ ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ತಿರಪ್ಪೂರ್ ಅನಾಥಾಶ್ರಮದಲ್ಲಿ ಈ ಘಟನೆ ನಡೆದಿದೆ. ಇದೀಗ ಅನಾಥಾಶ್ರಮ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಾಗಿದ್ದು ಈ ಕುರಿತು ತಿರಪ್ಪೊರ್ ಜಿಲ್ಲಾಧಿಕಾರಿ ವಿನೀತ್ ಮಾಹಿತಿ ನೀಡಿದ್ದಾರೆ. ರಾತ್ರಿ ಆಹಾರ ಸೇವಿಸಿದ ಬಳಿಕ ಕೆಲವರಿಗೆ ವಾಂತಿ ಮತ್ತು ಭೇದಿಯಾಗಿದ್ದು, ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಮಧ್ಯೆ ಆಸ್ಪತ್ರೆಯಲ್ಲಿ ಮೂವರು ಬಾಲಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪುನೀತ್ ರಾಜ್ಕುಮಾರ್ ಅವರ ಗಂಧದ ಗುಡಿ ಡಾಕ್ಯುಮೆಂಟರಿ ಚಿತ್ರದ ಟೀಜರ್ ಅ.9ರಂದು ರಿಲೀಸ್ ಆಗಲಿದೆ. ಅಕ್ಟೋಬರ್ 9ರಂದು ಬೆಳಗ್ಗೆ 10:19ಕ್ಕೆ ಪಿಆರ್ಕೆ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ‘ಗಂಧದಗುಡಿ’ಯ ಟ್ರೇಲರ್ ರಿಲೀಸ್ ಆಗಲಿದೆ. ಪುನೀತ್ ರಾಜ್ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಆಗಿತ್ತು. ಇದನ್ನು ಜನರ ಮುಂದಿಡುವ ಮೊದಲೇ ಪುನೀತ್ ಅವರು ಇಹಲೋಕ ತ್ಯಜಿಸಿದರು. ಇದೀಗ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಈ ಸಾಕ್ಷ್ಯಚಿತ್ರವನ್ನು ಜನರ ಮುಂದೆ ಇಡುತ್ತಿದ್ದಾರೆ. ಅಕ್ಟೋಬರ್ 29ರಂದು ಪುನೀತ್ ನಿಧನ ಹೊಂದಿ ಒಂದು ವರ್ಷ ಆಗಲಿದೆ. ಅದಕ್ಕೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ಥಿಯೇಟರ್ನಲ್ಲೇ ರಿಲೀಸ್ ಆಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿವೋ ಪ್ರೋ ಕಬಡ್ಡಿ ಲೀಗ್‌ನ 9ನೇ ಆವೃತ್ತಿಗೆ ಚಾಲನೆ ಸಿಕ್ಕಿದೆ. ಹಾಲಿ ಚಾಂಪಿಯನ್ ದಬಾಂಗ್ ಡೆಲ್ಲಿ ಕೆಸಿ ತಂಡವು ಎರಡನೇ ಋತುವಿನ ಚಾಂಪಿಯನ್ ಯು ಮುಂಬಾ ವಿರುದ್ಧ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರದಂದು ನಡೆಯುವ ಮೊದಲ ಪಂದ್ಯದಲ್ಲಿ ಎದುರಾಗಲಿವೆ. ಈ ಸೀಸನ್ ನ ಪಂದ್ಯಗಳು ಬೆಂಗಳೂರು, ಪುಣೆ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿದ್ದು, ಮೂರು ವರ್ಷಗಳ ನಂತರ ಕಬಡ್ಡಿ ಪ್ರೇಕ್ಷಕರು ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸುವ ಅವಕಾಶ ಪಡೆಯುವುದು ಸಿಕ್ಕಿದೆ. ವಿವೋ ಪ್ರೋ ಕಬಡ್ಡಿ ಲೀಗ್‌ನ ಸಂಘಟಕರಾದ ಮಷಾಲ್ ಸ್ಪೋರ್ಟ್ಸ್ ಬೆಂಗಳೂರಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿವೋ ಪ್ರೋ ಕಬಡ್ಡಿ ಲೀಗ್‌ನ 9ನೇ ಆವೃತ್ತಿಗೆ ಚಾಲನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅರ್ಜೆಂಟೀನಾದ ಸೂಪರ್ ಸ್ಟಾರ್ ಪುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಪುಟ್ಬಾಲ್ ಆಟಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. 2022 ರ ಕತಾರ್ ವಿಶ್ವಕಪ್ ತಮ್ಮ ಕೊನೆಯ ವಿಶ್ವಕಪ್ ಎಂದು ಲಿಯೋನೆಲ್ ಮೆಸ್ಸಿ ಹೇಳಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ‘ಖಂಡಿತವಾಗಿಯೂ ಇದು ನನ್ನ ಕೊನೆಯ ವಿಶ್ವಕಪ್. ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ಎಂದು ಮೆಸ್ಸಿ ಹೇಳಿಕೊಂಡಿದ್ದಾರೆ. ಪಂದ್ಯಾವಳಿಗಾಗಿ ನಾನು ಕಾಯುತ್ತಿದ್ದೇನೆ. ಉತ್ತಮ ಆಟವನ್ನು ಆಡೋದಕ್ಕೆ ಉತ್ಸುಕನಾಗಿದ್ದೇನೆ ಎಂದು ಮೆಸ್ಸಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅನಾರೋಗ್ಯದಿಂದ ಬಳಲುತ್ತಿದ್ಧಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಬ್ಬಾರ್ ಖಾನ್ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದ ಕರ್ತವ್ಯ ನಿರ್ವಹಿಸಿದ್ದರು. ಜಬ್ಬಾರ್ ಖಾನ್ ಹೊನ್ನಳ್ಳಿ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದಸರಾ ಜಂಬೂ ಸವಾರಿ ಯಶಸ್ವಿಗೆ ಕಾರಣರಾದ ಗಜಪಡೆಯ ಕಾವಾಡಿ ಮತ್ತು ಮಾವುತರಿಗೆ ಅರಮನೆ ಆಡಳಿತ ಮಂಡಳಿ ವತಿಯಿಂದ ಗೌರವ ಧನ ನೀಡಿ ಸನ್ಮಾನಿಸಲಾಯಿತು. ಯಶಸ್ವಿ ದಸರಾ ಮಹೋತ್ಸವದ ಬಳಿಕ ಗಜಪಡೆ ಮತ್ತು ಕಾವಾಡಿ,ಮಾವುತ ಕುಟುಂಬ ತವರಿಗೆ ಹಿಂದಿರುಗುತ್ತಿದ್ದು, ಮಾವುತ ಮತ್ತು ಕಾವಾಡಿಗಳಿಗೆ ತಲಾ 10 ಸಾವಿರ ನೀಡಿ ಜಿಲ್ಲಾಡಳಿತದ ವತಿಯಿಂದ ಸನ್ಮಾನ ಮಾಡಲಾಯಿತು. ಎರಡು ತಿಂಗಳಿಂದ ನಾಡಿಗೆ ಹೊಂದಿಕೊಂಡಿದ್ದ ಮಾವುತ ಕಾವಾಡಿ ಕುಟುಂಬ ಭಾರವಾದ ಮನಸ್ಸಿನಲ್ಲಿ ತವರಿಗೆ ಪಯಣ ಬೆಳೆಸುತ್ತಿದ್ದಾರೆ. ಯಶಸ್ವಿ ದಸರಾ ಆಚರಣೆಗೆ ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಿದ ಡಿಸಿಎಫ್ ಕರಿಕಾಳನ್. ಯಶಸ್ವಿ ದಸರಾ ಆಚರಣೆಗೆ ಕಾರಣರಾದ ಎಲ್ಲರಿಗೂ ಡಿಸಿಎಫ್ ಕರಿಕಾಳನ್ ಧನ್ಯವಾದ ತಿಳಿಸಿದರು. ಶ್ರೀ ಚಾಮುಂಡಿ ತಾಯಿಯ ಆಶೀರ್ವಾದದಿಂದ ಈ ಬಾರಿ ಅದ್ದೂರಿ ದಸರಾ ನಡೆಯಿತು. ನಾನು ಆರೇಳು ವರ್ಷಗಳಿಂದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಈ ಬಾರಿಯ ದಸರಾ ಮಹೋತ್ಸವದ ಜಂಬೂಸವಾರಿಗೆ ಭಾರಿ ಜನಸ್ತೋಮ ಸೇರಿತ್ತು. ಅದ್ದೂರಿಯಾಗಿ ದಸರಾ ಜಂಬೂಸವಾರಿ ಜರುಗಿತು. ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಧನ್ಯವಾದಗಳು ಎಂದರು.…