Subscribe to Updates
Get the latest creative news from FooBar about art, design and business.
- ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
- ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
- ತುಮಕೂರು | ಆರ್ ಎಸ್ ಎಸ್ ನಿಷೇಧಿಸಲು ಡಿಎಸ್ ಎಸ್ ಆಗ್ರಹ
- ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
- ಮನೆ–ಮನೆಗೆ ಪೊಲೀಸ್: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
- ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್
- ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
- ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
Author: admin
ತುಮಕೂರು: ಕೊರಟಗೆರೆ ಪಿಎಸ್ ಐ ಬಿ.ನಾಗರಾಜುರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಕೊರಟಗೆರೆ ಕೇಂದ್ರ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಪಿ ಎಸ್ ಐ ಬಿ.ನಾಗರಾಜುರನ್ನು ಸಾರ್ವಜನಿಕ/ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಠಿಯ ಮೇರೆಗೆ ಸ್ಥಳ ನಿಯುಕ್ತಿಗೊಳಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಮಹಾನಿರೀಕ್ಷಕರ ಕಛೇರಿಯಿಂದ ಆದೇಶ ಹೊರಡಿಸಲಾಗಿದೆ. ಪಿಎಸ್ ಐ ನಾಗರಾಜುಗೆ ಯಾವುದೇ ಸ್ಥಳವನ್ನು ಸೂಚಿಸಿದೇ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ನೂತನ ಪಿಎಸ್ ಐ ಆಗಿ ಜಿ.ಚೇತನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮುಂಬೈನ ಕುರ್ಲಾ ಪೂರ್ವದ ಬಂದರ್ ಭವನ ಪ್ರದೇಶದಲ್ಲಿ ಚರಂಡಿಯಲ್ಲಿ ದುರ್ವಾಸನೆ ಬರುತ್ತಿತ್ತು. ಅನುಮಾನಗೊಂಡ ನಾಗರಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಚೀಲವನ್ನು ವಶಕ್ಕೆ ಪಡೆದು ತೆರೆದರು. ಅದರಲ್ಲಿ 25 ವರ್ಷದ ಮಹಿಳೆಯ ಶವ ಕಂಡು ಪೊಲೀಸರೇ ಬೆಚ್ಚಿಬಿದ್ದರು. ಮಹಿಳೆಯ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು. ಇದರಿಂದ ನಿಗೂಢ ವ್ಯಕ್ತಿಗಳು ಮಹಿಳೆಯನ್ನು ಕೊಂದು ಹಗ್ಗದಿಂದ ಕಟ್ಟಿ ಚರಂಡಿಗೆ ಎಸೆದಿರುವುದು ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಆ ಪ್ರದೇಶದಲ್ಲಿ ನಾಪತ್ತೆಯಾಗಿರುವ ಹಾಗೂ ಅಪಹರಣಕ್ಕೊಳಗಾದ ಮಹಿಳೆಯರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಲ್ಲದೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಯಚೂರು: ಕವಿತಾಳ ಪಟ್ಟಣದ ವಾರ್ಡ್ ನಂಬರ್ 14ರಲ್ಲಿ ವರುಣನ ಆರ್ಭಟಕ್ಕೆ ಯಾದವ ಸಮಾಜದವರು ತತ್ತರಿಸಿದ್ದಾರೆ. ಸುಮಾರು 3/4 ಗಂಟೆ ಕಾಲ ಸುರಿದ ಮಳೆಗೆ ಬಾರಿ ಹಾನಿ ಉಂಟುಮಾಡಿದೆ. ಮನೆಗಳಿಗೆ ನೀರು ನುಗ್ಗಿ ನಡೆದಾಡಲು ದಾರಿ ಇಲ್ಲದೆ ಅಧಿಕಾರಿಗಳಿಗೆ ಇಡೀ ಶಾಪ ಹಾಕುತಿದ್ದಾರೆ. ಇಷ್ಟೆಲ್ಲ ತೊಂದರೆ ಆದ್ರೂ ಪಟ್ಟಣದ ಅಧಿಕಾರಿಗಳು ಇತ್ತ ಗಮನ ಅರಿಸುತ್ತಿಲ್ಲ ಎಂದು ರಾಜು ಯಾದವ್, ತಿಮ್ಮಣ್ಣ, ತಾಯಣ್ಣ, ಕೃಷ್ಣ, ಬೂದಪ್ಪ ಯಾದವ್, ಬೇಸರ ವ್ಯಕ್ತಪಡಿಸಿದರು. ಪಟ್ಟಣ ಪಂಚಾಯತ್ ಇಂದು ಯಾವುದೇ ಅನುಕೂಲ ನಮಗೆ ದೊರೆತಿಲ್ಲ ಎಂದು ಅವರ ಅಳಲು ತೋಡಿಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ರಾಮತೀರ್ಥ ನಗರದ ಕ್ರಿಕೆಟ್ ಮೈದಾನ ಹತ್ತಿರದಲ್ಲಿ ಬೆಳಗಾವಿ ನಗರಾಭಿವೃದ್ಧಿ ಯೋಜನೆಯಡಿಯಲ್ಲಿನ ರೂ. 450 ಲಕ್ಷಗಳ ಅನುದಾನದಲ್ಲಿ ಸಭಾ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಮತೀರ್ಥ ನಗರದಲ್ಲಿನ ರಹವಾಸಿಗಳ ಬೇಡಿಕೆಯಂತೆ ಬುಡಾ ಯೋಜನೆಯಡಿ ರೂ. 450 ಲಕ್ಷಗಳ ಅನುದಾನದಲ್ಲಿ ಬೃಹತ್ ಸಭಾ ಭವನ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಕಾಮಗಾರಿಯಲ್ಲಿ ಯಾವುದೇ ಲೋಪದೋಷಗಳು ಬಾರದಂತೆ ನೋಡಿಕೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಸೂಚನೆಯನ್ನು ನೀಡಿದರು. ನಗರ ಸೇವಕರುಗಳಾದ ಹಣಮಂತ ಕೋಗಾಲಿ, ರಾಜಶೇಖರ ಡೋಣ , ಮಾಜಿ ಮಹಾಪೌರರಾದ ಎನ್. ಬಿ. ನಿರ್ವಾಣ , ಬುಡಾ ಕಾರ್ಯನಿರ್ವಾಹಕ ಅಭಿಯಂತರ ನಾಯಿಕ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಮ್. ವಿ. ಹಿರೇಮಠ, ಸಹಾಯಕ ಅಭಿಯಂತರ ಪ್ರಸನ್ನಕುಮಾರ, ಶಂಕರಗೌಡ ಪಾಟೀಲ, ಅಶೋಕ ಮುಗಬಸವ, ಭೂತೆ, ಮಹಾಂತೇಶ ವಕ್ಕುಂದ, ವಿಲಾಸ ಕೇರೂರ, ಕೆದಾರ…
ಬೆಳಗಾವಿ : ಜಿಲ್ಲೆಯ ಸುಳೆಭಾವಿ ಗ್ರಾಮದಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗ್ರಾಮದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ನಡೆದಿದೆ. ಹಂತಕರು ಇಬ್ಬರು ಯುವಕರ ಮೇಲೆ ಅಟ್ಯಾಕ್ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸುಳೆಭಾವಿ ಗ್ರಾಮದ ಮಹೇಶ್ ರಾಮಚಂದ್ರ ಮುರಾರಿ,25, ಪ್ರಕಾಶ್ ನಿಂಗಪ್ಪಾ ಉಪರಿ ಪಾಟೀಲ 22 ಎಂಬಾತರು ಹತ್ಯೆಗೀಡಾದ ದುರ್ದೈವಿಗಳು. ಹಿರಿಯ ಪೋಲೀಸ್ ಅಧಿಕಾರಿಗಳು ಸುಳೆಭಾವಿ ಗ್ರಾಮಕ್ಕೆ ದೌಡಾಯಿಸಿದ್ದಾರೆ. ಪರಿಸ್ಥಿತಿ ಈಗ ಉದ್ವಿಗ್ನವಾಗಿದ್ದು ಮಾರಿಹಾಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಗಾಳಿಪಟ ಹಾರಿಸುವಾಗ ಆಯತಪ್ಪಿ ಕಟ್ಟಡ ಮೇಲಿಂದ ಬಿದ್ದು 11 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಉಜ್ವಲ್ ನಗರದ ತಿರಂಗಾ ಕಾಲೋನಿಯ ಅರ್ಮಾನ್ ದಫೆದಾರ್(11) ಮೃತ ಬಾಲಕ. ನಿನ್ನೆ ಅಶೋಕ ನಗರದ ತಮ್ಮ ಸಂಬಂಧಿಕರ ಮನೆಗೆ ಕುಟುಂಬಸ್ಥರ ಜೊತೆಗೆ ಬಾಲಕ ಬಂದಿದ್ದನು. ಈ ವೇಳೆ ಅಣ್ಣನ ಜೊತೆಗೆ ಗಾಳಿಪಟ ಹಾರಿಸಲು ಕಟ್ಟಡದ ಟೆರಸ್ ಮೇಲೆ ಹೋಗಿದ್ದಾನೆ. ಈ ವೇಳೆ ಗಾಳಿಪಟ ಹಾರಿಸುವಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅರ್ಮಾನ್ ಇಂದು ಕೊನೆಯುಸಿರೆಳೆದಿದ್ದಾನೆ. ಮಗನ ಕಳೆದುಕೊಂಡ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಯಚೂರು: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಸೀಮೆ ಈರಣ್ಣ ದೇಗುಲದ ಬಳಿ ನಡೆದಿದೆ. ಕೋಠಾ ಗ್ರಾಮ ಪಂಚಾಯಿತಿ ಪಿಡಿಓ ಗಜದಂಡಯ್ಯ ಕೊಲೆಯಾದ ವ್ಯಕ್ತಿ.ಹಳೆ ವೈಷಮ್ಯ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಪಿಡಿಓನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಲಿಂಗಸಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಮತ್ತು ಬಿಜೆಪಿ ನಡೆಸಿದ ಜನಸ್ಪಂದನಾ ಕಾರ್ಯಕ್ರಮದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಭಾರತ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಯಾತ್ರೆ ಉದ್ದೇಶವೇನು ಎಂದು ಜನರಿಗೆ ಗೊತ್ತೇ ಇಲ್ಲ . ಮೇಕೆದಾಟು ವಿಚಾರವಾಗಿ ದೊಡ್ಡಮಟ್ಟದಲ್ಲಿ ಪಾದಯಾತ್ರೆ ಮಾಡಿದರು. ಮೇಕೆದಾಟು ಅಲ್ಲಿಯೇ ಇದೆ ಇನ್ನೇನು ಆಗಲಿಲ್ಲ. ಈಗ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಇದರಿಂದ ಜನರ ಬದುಕಲ್ಲಿ ಏನು ಬದಲಾವಣೆಯಾಗಲ್ಲ ಎಂದು ಟಾಂಗ್ ನೀಡಿದರು. ಹಾಗೆಯೇ ಬಿಜೆಪಿ ಜನಸ್ಪಂದನಾ ಯಾತ್ರೆ ಬಗ್ಗೆ ಟೀಕಿಸಿದ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿಯವರು ಜನಸ್ಪಂದನಾ ಕಾರ್ಯಕ್ರಮ ಮಾಡಿದ್ರು. ಜನಸ್ಪಂದನಾ ಕಾರ್ಯಕ್ರಮದಲ್ಲಿ ತೊಡೆ ತಟ್ಟಿದ್ದು ಶಕ್ತಿ ಪ್ರದರ್ಶನ ಬಿಟ್ರೆ ಬೇರೇನೂ ಮಾಡಲಿಲ್ಲ. ಸರ್ಕಾರ ಮಾಡಿರುವ ಕಾರ್ಯಕ್ರಮಗಳ ಬಗ್ಗೆ ತಿಳಿಸಲೇ ಇಲ್ಲ ಎಂದು ಕುಟುಕಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಮಂಡ್ಯ : ಭಾರತ್ ಜೋಡೋ ಪಾದಯಾತ್ರೆ ಬಳಿಕ ರಾಜ್ಯಾದ್ಯಂತ ಬಸ್ ಯಾತ್ರೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದತೆ ನಡೆಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಥಯಾತ್ರೆಯನ್ನು ಈ ಹಿಂದೆ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲ ಕಾರಣಗಳಿಂದ ದಿನಾಂಕ ನಿಗದಿಗೊಳಿಸಲು ವಿಳಂಬವಾಗಿದೆ. ಬಸ್ ಯಾತ್ರೆ ಕುರಿತು ಪೂರ್ವಭಾವಿ ಸಭೆ ಈ ತಿಂಗಳು ಕೊನೆಯಲ್ಲಿ ನಡೆಯಲಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಸ್ ಯಾತ್ರೆ ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರು ಬಸ್ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ವರಿಷ್ಠರನ್ನು ಸದ್ಯದಲ್ಲೇ ಭೇಟಿ ಮಾಡಿ ಅವರ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಪಾದಯಾತ್ರೆ ಹಿನ್ನೆಲೆಯಲ್ಲಿ ಮಾಯಸಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಟ್ಟಡದಲ್ಲಿ ಚೌದರಿ ಟೀ ರಂಗಪ್ಪ ಮತ್ತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎನ್ನಾರ್ ಜಯರಾಮ್ ರವರ ನೇತೃತ್ವದಲ್ಲಿ ಮಾಯಸಂದ್ರ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಚುಂಚನಗಿರಿಯಿಂದ ಆಗಮಿಸುವ ರಾಹುಲ್ ಗಾಂಧಿಯವರನ್ನು ಬರಮಾಡಿಕೊಳ್ಳಲು ಹಾಗೂ ಮಾಯಸಂದ್ರದಿಂದ ತುರುವೇಕೆರೆವರೆಗೂ ಪ್ರತಿ ಗೇಟ್ ನಲ್ಲಿ ಆಹಾರ ನೀರು ಹಣ್ಣುಗಳ ವಿತರಿಸುವ ಸ್ಟಾಲ್ ಗಳನ್ನು ಜವಾಬ್ದಾರಿಯೊಂದಿಗೆ ವಿತರಿಸುವ ಹೊಣೆಗಾರಿಕೆಯನ್ನು ಆಯಾ ಭಾಗದ ಕಾಂಗ್ರೆಸ್ ಮುಖ್ಯಸ್ಥರುಗಳಿಗೆ ವಹಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಕಾಂತರಾಜ್ ರವರು ಮಾತನಾಡಿ, ಕನಿಷ್ಠ ಮಾಯಸಂದ್ರ ಹೋಬಳಿಯಿಂದ ಸಾವಿರ ಜನ ಪಾದಯಾತ್ರೆಗಳನ್ನು ಕರೆತಂದು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬೇಕೆಂದು ಕಾರ್ಯಕರ್ತರಲ್ಲಿ ಹಾಗೂ ಮುಖಂಡರುಗಳಲ್ಲಿ ಮನವಿ ಮಾಡಿಕೊಂಡರು. ಸುಮಾರು 40 ಸಾವಿರ ಜನಕ್ಕೆ ಊಟ ತಿಂಡಿ ವ್ಯವಸ್ಥೆ, ಉಪಹಾರ ವ್ಯವಸ್ಥೆ, ನೀರು ಎಲ್ಲವನ್ನು ನೋಡಿಕೊಳ್ಳುವುದಾಗಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…