Author: admin

ಭಾರತ ಐಕ್ಯತಾ ಯಾತ್ರೆಯ ರಾಹುಲ್ ಗಾಂಧಿಯ ಆಗಮನದ ಹಿನ್ನೆಲೆಯಲ್ಲಿ ಪೂರ್ವ ತಯಾರಿ ಸಿದ್ಧತೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು ಸ್ಥಳ ಪರಿಶೀಲನೆ ನಡೆಸಿದರು. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಪಾದಯಾತ್ರೆ ಗಳಿಗೆ ಊಟದ ವ್ಯವಸ್ಥೆ, ಸುಸಜ್ಜಿತವಾಗಿ ಶಾಮಿಯಾನ ವ್ಯವಸ್ಥೆ, ನೀರಿನ ವ್ಯವಸ್ಥೆ ಹಾಗೂ ಶೌಚಾಲಯ ವ್ಯವಸ್ಥೆಗಳನ್ನು ಮಾಡುವಲ್ಲಿ ಸಂಬಂಧಪಟ್ಟ ಮೇಲುಸ್ತುವಾರಿಗಳಿಗೆ ಮಾಹಿತಿ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆಯ ಗ್ರಾಮ ದೇವತೆಗಳಾದ ಶ್ರೀ ವೀರಭದ್ರ ಸ್ವಾಮಿ, ಶ್ರೀ ಕೆಂಪಮ್ಮ ದೇವಿ, ಪ್ಲೇಗಿನಮ್ಮ ದೇವಿ, ಶ್ರೀ ಗೌರಮ್ಮ ಮತ್ತು ಗಣಪತಿಯನ್ನು ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಗೌರಮ್ಮ ಮತ್ತು ಗಣಪತಿ ಮೂರ್ತಿ ತೆಪ್ಪೋತ್ಸವದ ಮಾಡುವುದರ ಮೂಲಕ 15 ವರ್ಷಗಳ ನಂತರ ತುಂಬಿದ ಹಾಲ್ಕುರಿಕೆ ಅಮಾನಿ ಕೆರೆಯಲ್ಲಿ ವಿಸರ್ಜಿಸಲಾಯಿತು. ಕಾರ್ಯಕ್ರಮದಲ್ಲಿ ಕೋವಿಯ ಮುಖಾಂತರವಾಗಿ ಅಂಬು ಹೊಡೆಯುವ ದೃಶ್ಯ ಗಮನ ಸೆಳೆಯಿತು. ಇದನ್ನು ನೋಡಲು 15 ರಿಂದ 20 ಹಳ್ಳಿಯಿಂದ ಸುಮಾರು ಐದು ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಗಂಗಾ ಪೂಜೆ, ಮಡಿಲಕ್ಕಿ ಪೂಜೆ ಇನ್ನು ಹಲವು ಪೂಜೆಗಳನ್ನು ಭಕ್ತಿ ಭಾವದೊಂದಿಗೆ ಸಲ್ಲಿಸಲಾಯಿತು. ತೆಪ್ಪೋತ್ಸವದ ಮುಖಾಂತರವಾಗಿ ಗೌರಮ್ಮ ಮತ್ತು ಗಣಪತಿಯ ವಿಸರ್ಜನೆಯನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಥಾಯ್ಲೆಂಡ್; ಮಾಜಿ ಪೊಲೀಸ್ ಅಧಿಕಾರಿಯೊಬ್ಬ ಡೇ ಕೇರ್ ಸೆಂಟರ್ ಗೆ ನುಗ್ಗಿ ಗುಂಡಿನ ದಾಳಿ ನಡೆಸಿದ ಪರಿಣಾಮ 22 ಮಕ್ಕಳು ಸೇರಿ 34 ಮಂದಿ ಸಾವನ್ನಪ್ಪಿರುವ ಘಟನೆ ಥಾಯ್ಲೆಂಡ್ ನಲ್ಲಿ ನಡೆದಿದೆ. ಥಾಯ್ಲೆಂಡ್‍ ನಲ್ಲಿ ಮಕ್ಕಳ ಡೇ ಕೇರ್ ಸೆಂಟರ್‍’ನಲ್ಲಿ ಗುಂಡಿನ ದಾಳಿಯಲ್ಲಿ 34 ಜನ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಶೂಟೌಟ್ ಮುನ್ನ ಮಾಜಿ ಪೊಲೀಸ್ ಅಧಿಕಾರಿ ತನ್ನ ಪತ್ನಿ ಹಾಗೂ ಮಗುವನ್ನಕೊಂದಿದ್ದಾನೆ. ನಂತರ ಡೇ ಕೇರ್ ಗೆ ನುಗ್ಗಿ 34 ಜನರ ಪ್ರಾಣ ಬಲಿ ಪಡೆದಿದ್ದಾನೆ ಎನ್ನಲಾಗಿದೆ. ಬಳಿಕ ತಾನೂ ಶೂಟೌಟ್ ಮಾಡಿಕೊಂಡು ಅಸುನೀಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಭಾರತದ ನಿಯಂತ್ರಕರು ಮತ್ತು ಮಹಾಲೇಖಪಾಲರ (ಸಿಎಜಿ) ವರದಿ, ಕೇಂದ್ರ ಸರ್ಕಾರದ ದೀನದಯಾಳ್ ಉಪಾಧ್ಯಾಯ ಗ್ರಾಮ ಜಯೋತಿ ಯೋಜನೆ (ಡಿಡಿಯುಜಿಜೆವೈ) ಹಾಗೂ ಪ್ರಧಾನ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜನೆ (ಸೌಭಾಗ್ಯ) ಯೋಜನೆಗಳಡಿ ಕರ್ನಾಟಕದಲ್ಲಿ ಐದು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ (ಎಸ್ಕಾಂಗಳು), ಗುತ್ತಿಗೆಗಳ ಮಂಜೂರಾತಿ ಹಾಗೂ ನಿಧಿ ನಿರ್ವಹಣೆಯಡಿ ಉಂಟಾಗಿರುವ ಕೊರತೆಗಳು ಮತ್ತು ಲೋಪಗಳನ್ನು ಉಲ್ಲೇಖಿಸಿದೆ. ರಾಜ್ಯದಲ್ಲಿ ವಿದ್ಯುತ್ ಸಂಪರ್ಕವಿಲ್ಲದ 39 ಗ್ರಾಮಗಳು, ಭಾಗಶಃ ವಿದ್ಯುತ್ ಸಂಪರ್ಕವಿರುವ ೧೩,೯೪೯ ಗ್ರಾಮಗಳು ಹಾಗೂ ೫,೭೦,೯೨೨ ಬಿಪಿಎಲ್ ಕುಟುಂಬಗಳಿಗೆ ಈ ಯೋಜನೆಗಳಡಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದರೂ ಸಹ, ಯೋಜನೆಯಡಿ ಉಂಟಾಗಿರುವ ಲೋಪಗಳು ಹಾಗೂ ಅದರಿಂದ ಆಗಿರುವ ಸಮಯ ಮತ್ತು ಹಣದ ನಷ್ಟದ ಕುರಿತು ನಿಗಾವಹಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಎಸ್ಕಾಂಗಳ ವೈಫಲ್ಯದ ಕುರಿತು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಿಎಜಿ ಆಡಿಟ್ ಅಡಿ ಪರಿಗಣಿಸಲಾಗಿದ್ದಂತಹ ಐದು ಎಸ್ಕಾಂಗಳ ಪೈಕಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್),…

Read More

ನ್ಯಾಷನಲ್  ಹೆರಾಲ್ಡ್  ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ನೀಡಿದೆ. ಭಾರತ್ ಜೋಡೋ ಯಾತ್ರೆ ಹಿನ್ನೆಲೆ ನಾಳೆ ವಿಚಾರಣೆ ಹಾಜರು ಕುರಿತು ವಿನಾಯ್ತಿ ನೀಡುವಂತೆ ಡಿ.ಕೆ ಶಿವಕುಮಾರ್ ಮನವಿ ಮಾಡಿದ್ದರು. ಆದರೆ ವಿಚಾರಣೆಗೆ ವಿನಾಯ್ತಿ ನೀಡಲು ನಿರಾಕರಿಸಿರುವ ಇಡಿ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಡಿ.ಕೆ ಶಿವಕುಮಾರ್ ಗೆ ನೋಟಿಸ್ ನೀಡಿದೆ. ಈ ಕುರಿತು ನಾಗಮಂಗಲದಲ್ಲಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ನಾನು ಭಾರತ್ ಜೋಡೋ ಇನ್ ಚಾರ್ಚ್ ಆಗಿದ್ದೇನೆ. ಹೀಗಾಗಿ ನಾಳೆ ವಿಚಾರಣೆಗೆ  ಹಾಜರಾಗಲು ಆಗಲ್ಲ. ವಿನಾಯಿತಿ ನೀಡುವಂತೆ ಮನವಿ ಮಾಡಿದ್ದೆ. ಆದರೆ ನಾಳೆಯೇ ಬರಬೇಕೆಂದು ಇಡಿ ಸಮನ್ಸ್ ನೀಡಿದೆ.  ಈ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ನಾಯಕರು ಹೋಗು ಅಂದರೇ ಹೋಗುತ್ತೇನೆ. ಬೇಡ ಅಂದರೇ ಬಿಡ್ತೀನಿ. ಸಭೆ ಬಳಿಕ ಹೋಗಬೇಕೋ ಬೇಡವೋ ತೀರ್ಮಾನ ಮಾಡುತ್ತೇನೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಕಳೆದ ಎರಡು ತಿಂಗಳಿನಿಂದ ಸಂಬಳ ಆಗದ ಹಿನ್ನೆಲೆಯಲ್ಲಿ 108 ಆಂಬ್ಯುಲೆನ್ಸ್ ಚಾಲಕರು ಸರ್ಕಾರಕ್ಕೆ ಒಂದು ದಿನದ ಡೆಡ್ ಲೈನ್ ನೀಡಿದ್ದಾರೆ. ಸಂಬಳ ನೀಡದ ಹಿನ್ನೆಲೆ 108 ಆಂಬ್ಯುಲೆನ್ಸ್ ಚಾಲಕರು ಇಂದಿನಿಂದ ಮುಷ್ಕರಕ್ಕೆ ಕರೆ ನೀಡಲು ತೀರ್ಮಾನಿಸಿದ್ದರು. ಆದರೆ ದಸರಾ ರಜೆ ಹಿನ್ನೆಲೆ ಆರೋಗ್ಯ ಇಲಾಖೆ ಸಮಯ ಕೇಳಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಒಂದು ದಿನದ ಗಡುವು ನೀಡಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸಂಬಳ ಕುರಿತು ಸಭೆ ನಡೆಯಲಿದ್ದು, ಸಭೆಯಲ್ಲಿ ಇತ್ಯಾರ್ಥವಾಗದಿದ್ದರೇ ರಜೆ ಮೇಲೆ ತೆರಳಲು 108 ಆಂಬ್ಯುಲೆನ್ಸ್ ಚಾಲಕರು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಶಾಸಕ ಅರವಿಂದ್ ಬೆಲ್ಲದ್ ಅವರ ಚಿಕ್ಕಪ್ಪ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಧಾರವಾಡದ ಎಸ್.ಪಿ ಕಚೇರಿ ಎದುರು ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ ಶಾಸಕ ಅರವಿಂದ್ ಬೆಲ್ಲದ್ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ್(82) ಮೃತಪಟ್ಟವರು. ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ  ಅಪಘಾತ  ಸಂಭವಿಸಿದ್ದು, ಶಿವಣ್ಣ ಬೆಲ್ಲದ್ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊರಟಗೆರೆ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ತಲುಪಿಸಿದರೂ, ವೈದ್ಯನ ನಿರ್ಲಕ್ಷ್ಯತನದಿಂದಾಗಿ ಎರಡು ಜೀವ ಬಲಿಯಾದ ಘಟನೆ ಕೊರಟಗೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಇರಕಸಂದ್ರ ಕಾಲೋನಿ ಬಳಿ ಕೆಎಸ್ ಆರ್ ಟಿ ಸಿ ಬಸ್ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿತ್ತು. ಪರಿಣಾಮವಾಗಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ತಕ್ಷಣವೇ ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ತುರ್ತಾಗಿ ಚಿಕಿತ್ಸೆ ನೀಡಬೇಕಾದ ವೈದ್ಯರು ನಿರ್ಲಕ್ಷ್ಯವಹಿಸಿದ್ದು, ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ  ಸರ್ಕಾರಿ ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲು ಪ್ರಯತ್ನಿಸಲಾಯಿತಾದರೂ, ಆತ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು ಸರಿಯಾದ ಸಮಯಕ್ಕೆ ತಂದಿದ್ದರೂ, ತುರ್ತಾಗಿ ಚಿಕಿತ್ಸೆ ನೀಡುವ ಬದಲು  ವೈದ್ಯ ನವೀನ್ ಕುಮಾರ್ ಸರಿಯಾಗಿ ಸ್ಪಂದಿಸದೇ ನಿರ್ಲಕ್ಷ್ಯವಹಿಸಿದ್ದು, ಇದರಿಂದಾಗಿ ಇಬ್ಬರ ಪ್ರಾಣ ಹೋಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇನ್ನೂ ವೈದ್ಯನ ನಿರ್ಲಕ್ಷ್ಯತನದ ಪ್ರದರ್ಶನವನ್ನು ವಿಡಿಯೋ ಮಾಡಲು ತೆರಳಿದ ಪ್ರಗತಿ ಟಿವಿ…

Read More

ರಾಯಚೂರು: ಆಯುಧ ಪೂಜೆ ಹಿನ್ನೆಲೆಯಲ್ಲಿ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ್, ಡಬಲ್ ಬ್ಯಾರೆಲ್ ಗನ್‌ ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ವೀಡಿಯೊ ವೈರಲ್‌ ಆಗಿದ್ದು, ಜನಪ್ರತಿನಿಧಿಯಾಗಿದ್ದುಕೊಂಡು ಈ ರೀತಿಯ ವರ್ತನೆ ಮಾಡಿರೋದು ವಿವಾದಕ್ಕೆ ಕಾರಣವಾಗಿದೆ. ಆಯುಧ ಪೂಜೆ ಸಂದರ್ಭದಲ್ಲಿ ಜನರು ವಾಹನಗಳು ಹಾಗೂ ತಮ್ಮ ಕೆಲಸ ಕಾರ್ಯಗಳ ಪರಿಕರಗಳಿಗೆ ಪೂಜೆ ಸಲ್ಲಿಸುತ್ತಿದ್ದರು. ಆದರೆ ಇದೀಗ ಮಾರಕಾಸ್ತ್ರಗಳಿಗೆ ಪೂಜೆ ಸಲ್ಲಿಸುವ ವಿವಾದಿತ ಘಟನೆಗಳು ನಡೆಯುತ್ತಿದ್ದು, ಸಾಮಾಜಿಕ ಜವಾಬ್ದಾರಿಯನ್ನು ಪಾಲಿಸಬೇಕಿದ್ದ ಶಾಸಕ ಶಿವನಗೌಡ ನಾಯಕ್ ನಾಡ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ. 2—3 ಬಾರಿ ಶಿವನಗೌಡ ನಾಯಕ್ ಗುಂಡು ಹಾರಿಸುತ್ತಿರುವುದು ಕಂಡು ಬಂದಿದೆ. ತಮ್ಮ ಅರಕೇರಾದ ಮನೆಯಲ್ಲಿ‌ ಗುಂಡು ಹಾರಿಸಿ, ಆಯುಧ ಪೂಜೆ ಆಚರಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಲಾರಿ ಹಿಂಬದಿ ಹಗ್ಗ ಕಟ್ಟುತ್ತಿದ್ದ ಲಾರಿ ಚಾಲಕ, ರಾಮದುರ್ಗ ತಾಲೂಕಿನ‌ ಹುಲಕುಂದ ಗ್ರಾಮದ ರಂಗಪ್ಪ ಗುರುಸಿದ್ದಪ್ಪ ಪಾಟೀಲ (30) ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ಯರಗಟ್ಟಿಯ ಬೀರೇಶ್ವರ ಬ್ಯಾಂಕ್ ಎದುರಿನ ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಬೆಳಗಾವಿಗೆ ಹೊರಟ್ಟಿದ್ದ ಕಾರು ವೇಗವಾಗಿ ಗುದ್ದಿದೆ. ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಕಾರಿನಲ್ಲಿದ್ದ ಅಮರೆಗೌಡ ಮಾಲಿಪಾಟೀಲ (58) ಗೌಡಪ್ಪಗೌಡ ಮಾಲಿಪಾಟೀಲ (25) ಗಾಯಗೊಂಡಿದ್ದು, ವೀರಭದ್ರಗೌಡ ಡಬಿ (32), ಹನುಮಂತ ಬೆಟಗೇರಿ (23) ಸಣ್ಣಪುಟ್ಟ ಗಾಯಗಳಾಗಿವೆ. ಇವರೆಲ್ಲ ರಾಯಚೂರ ಜಿಲ್ಲೆಯ ಸಿಂಧನೂರು ಪಟ್ಟಣದವರಾಗಿದ್ದಾರೆ. ಗಾಯಾಳುಗಳನ್ನು ಬೆಳಗಾವಿ ಕೆಎಲ್ ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಯರಗಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More