Author: admin

ಉತ್ತರ ಪ್ರದೇಶದ ಔರೈಯಾದಲ್ಲಿನ ದಿಬಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿ ಹೊಲವೊಂದರಲ್ಲಿ ಸೋಮವಾರ 17 ವರ್ಷದ ಬಾಲಕಿಯ ಬೆತ್ತಲೆ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಬಾಲಕಿಯ ಮನೆಯವರು ಆರೋಪಿಸಿದ್ದಾರೆ. ಈ ಬಗ್ಗೆ ಬಾಲಕಿಯ ಕುಟುಂಬಸ್ಥರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಬೆಳಗ್ಗೆ ಮಲ ವಿಸರ್ಜನೆಗೆಂದು ಹೊರ ಹೋಗಿದ್ದ ಆಕೆ ಎಷ್ಟೋ ಹೊತ್ತಾದರೂ ಮನೆಗೆ ಬಾರದೇ ಇದ್ದುದರಿಂದ ಆಕೆಗಾಗಿ ಹುಡುಕಾಟ ನಡೆಸಿದ್ದು, ಈ ವೇಳೆ ಗದ್ದೆಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಘಟನೆ ಬಳಿಕ ಔರೈಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ ಪಿ) ಚಾರು ನಿಗಮ್ ಅವರು ವಿಧಿವಿಜ್ಞಾನ ತಜ್ಞರೊಂದಿಗೆ ಗ್ರಾಮಕ್ಕೆ ಆಗಮಿಸಿದ್ದಾರೆ ಮತ್ತು ಪ್ರಕರಣವನ್ನು ಭೇದಿಸಲು ವಿಶೇಷ ಕಾರ್ಯಾಚರಣೆ ಗುಂಪು ಸೇರಿದಂತೆ 10 ಪೊಲೀಸ್ ತಂಡಗಳನ್ನು ನಿಯೋಜಿಸಿದರು. ಪೊಲೀಸರು ಶವವನ್ನು ಹೊತ್ತೊಯ್ಯುವ ಮತ್ತು ಬಾಲಕಿ ಹಿಂದೆ ಕುಟುಂಬಸ್ಥರು ಹೋಗುತ್ತಿರುವ ವಿಡಿಯೊವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ‘ಔರೈಯಾದಲ್ಲಿ 17 ವರ್ಷದ ಬಾಲಕಿಯ ಬೆತ್ತಲೆ…

Read More

ಹಿರಿಯೂರು: ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ತಹಶೀಲ್ದಾರ್ ಪ್ರಶಾಂತ ಕೆ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ದಸರಾ ಹಬ್ಬವನ್ನು  ಸಡಗರ- ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಶಾಂತ ಕೆ. ಪಾಟೀಲ ,  ಈ ಮೊದಲು ಬರೀ ಪೂಜಾ ಕಾರ್ಯಕ್ರಮಕ್ಕೆ ಸೀಮಿತವಾಗಿದ್ದ  ದಸರಾ ಹಬ್ಬ, ಇದೇ ಮೊದಲ ಬಾರಿಗೆ ತಾಲೂಕು ಕಚೇರಿಯನ್ನು ತಳಿರುತೋರಣಗಳೊಂದಿಗೆ ಸಿಂಗರಿಸಿ, ವಿಶೇಷ ಪೂಜೆಯೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ನಗರದ ಪ್ರಸಿದ್ದ ದಕ್ಷಿಣಕಾಶಿ ಎಂದೇ ಹೆಸರಾದ ಶ್ರೀತೇರುಮಲ್ಲೇಶ್ವರಸ್ವಾಮಿಯ ಅಂಬಿನೋತ್ಸವ ಸಹ ನಡೆಯಲಿದ್ದು, ನಗರದ ತಾಲ್ಲೂಕು ಕಚೇರಿ ಸೇರಿದಂತೆ ತಾಲ್ಲೂಕು ಕಚೇರಿಯಿಂದ ಮುಖ್ಯಬೀದಿಯುದ್ಧಕ್ಕೂ ಹಾಗೂ ಶ್ರೀತೇರುಮಲ್ಲೇಶ್ವರ ದೇವಸ್ಥಾನದವರೆಗೆ ಸತತ 3 ದಿನಗಳ ಕಾಲ ವಿಶೇಷ ದೀಪಾಲಂಕಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬುದಾಗಿ ಇದೇ ವೇಳೆ ತಿಳಿಸಿದರು. ದಸರಾ ಹಿನ್ನೆಲೆಯಲ್ಲಿ ಕಚೇರಿಯ ಸಿಬ್ಬಂದಿ  ಹೊಸ ಉಡುಗೆ, ತೊಡುಗೆ ತೊಟ್ಟು ಅದರಲ್ಲೂ ಮಹಿಳಾ ಸಿಬ್ಬಂದಿ ಹಸಿರುಸೀರೆಯನ್ನು ಉಟ್ಟು ಸಡಗರಸಂಭ್ರಮಗಳಿಂದ ಕಚೇರಿಯಲ್ಲಿ ಓಡಾಡುತ್ತಿದ್ದದ್ದು ಅತ್ಯಂತ ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಉಪತಹಶೀಲ್ದಾರರಾದ ಮಂಜಪ್ಪ ,…

Read More

ಮಧುಗಿರಿ: ತಾಲೂಕಿನ ದೊಡ್ಡೇರಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ಸಾರ್ವಜನಿಕರು ಪರದಾಡುತ್ತಿರುವ  ಸ್ಥಿತಿಯಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಗಮನ ಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಡ್ಯೂಟಿಯಲ್ಲಿರುವ ವೈದ್ಯರು ಹಾಗೂ ನರ್ಸ್ ಗಳು 3 ಗಂಟೆಗಳ ಡ್ಯೂಟಿ ಮುಗಿಸಿಕೊಂಡು ಹೋಗುತ್ತಿದ್ದಾರೆ. ಆ ಬಳಿಕ ಇಡೀ ಆಸ್ಪತ್ರೆ ವೈದ್ಯರು, ನರ್ಸ್ ಇಲ್ಲದೇ ಖಾಲಿ ಖಾಲಿಯಾಗಿರುವ ಪರಿಸ್ಥಿತಿ ಕಂಡು ಬಂದಿದೆ. ಇನ್ನೂ ಚಿಕಿತ್ಸೆ ಪಡೆಯಲು ಬರುವ ರೋಗಿಗಳು ವೈದ್ಯರು, ಸಿಬ್ಬಂದಿಗಳಿಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಕೇವಲ ಹೆಸರಿಗಷ್ಟೇ ಆಸ್ಪತ್ರೆ ಇದ್ದಂತಿದೆ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆ ತಕ್ಷಣವೇ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಈ ಭಾಗದ ಜನರಿಗೆ ಸರಿಯಾದ ಆರೋಗ್ಯ ಸೇವೆಗಳನ್ನು ಒದಗಿಸಲು ಮುಂದಾಗಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೈಸೂರು: ಬಂಡಿಹಾಳದ ಎಪಿಎಂಸಿ ಆವರಣದಲ್ಲಿ ಸಹಕಾರ ಇಲಾಖೆಯಿಂದ ನೂತನವಾಗಿ ಆರಂಭಿಸಿರುವ ಕ್ಯಾಂಟೀನ್ ಅನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಶ್ರೀ ಅನ್ನಪೂರ್ಣ ಕ್ಯಾಂಟೀನ್ ನ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಕ್ಯಾಂಟೀನ್ ನಲ್ಲಿ ದಸರಾವರೆಗೆ ಉಚಿತ ಊಟ ನೀಡಲಾಗುತ್ತದೆ. ನಂತರದ ದಿನಗಳಲ್ಲಿ ಹತ್ತು ರೂಪಾಯಿಗೆ ಊಟ ನೀಡಲಾಗುತ್ತದೆ ಎಂದರು. ದಾನಿಗಳ ನೆರವಿನಿಂದ ರೈತ ಬಾಂಧವರಿಗೆ ರುಚಿ ಮತ್ತು ಶುಚಿಯಾದ ಊಟ ನೀಡುವ ಕೆಲಸವನ್ನು ವರ್ತಕರು ಮಾಡುತ್ತಿದ್ದಾರೆ. ಸಹಕಾರ ಕ್ಷೇತ್ರದಿಂದ ಈ ಕ್ಯಾಂಟೀನ್ ಆರಂಭಿಸಲಾಗಿದೆ. ದಾನಿಗಳು ಮುಂದೆ ಬಂದರೆ ರಾಜ್ಯದ ವಿವಿಧೆಡೆಯ ಎಪಿಎಂಸಿಗಳಲ್ಲಿ ಕೂಡ ಕ್ಯಾಂಟೀನ್ ತೆರೆಯುವ ಚಿಂತನೆ ಮಾಡಲಾಗುವುದು ಎಂದರು. ಇದೇ ವೇಳೆ ದಸರಾ ಜಂಬೂಸವಾರಿಯಲ್ಲಿ ಸಾಗಲಿರುವ ಸ್ತಬ್ಧಚಿತ್ರಗಳನ್ನು ವೀಕ್ಷಿಸಿದರು. ಪ್ರತಿ ಜಿಲ್ಲೆಯಿಂದ ಸ್ತಬ್ಧಚಿತ್ರಗಳು ಆಗಮಿಸಿವೆ. ಆಯಾ ಜಿಲ್ಲೆಯ ಕಲೆ, ಸಂಸ್ಕೃತಿ ಬಿಂಬಿಸುವ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ. ಜಂಬೂಸವಾರಿ ತಯಾರಿ ಅಂತಿಮ ಹಂತದಲ್ಲಿದೆ. ಯಾವುದೇ ಕೊರತೆ ಇಲ್ಲ. ಕಲಾತಂಡಗಳ ಆಗಮನವಾಗಿದೆ…

Read More

ಹಿರಿಯೂರು:  ಆಯುಧ ಪೂಜೆ ದಿನವೂ ಹಿರಿಯೂರಿನ ಜನತೆಗೆ ಬೆಲೆ ಏರಿಕೆಯ ಬಿಸಿ ತಾಗಿದ್ದು, ಹೂವು ಹಾಗೂ ಹಣ್ಣುಗಳ ಬೆಲೆ ಕೇಳಿ ಸಾರ್ವಜನಿಕರು ಸುಸ್ತಾಗಿದ್ದಾರೆ. ಮಂಗಳವಾರ ಆಯುಧ ಪೂಜೆ ನಡೆಯುತ್ತಿದ್ದು, ಬುಧವಾರ ವಿಜಯದಶಮಿ  ನಡೆಯಲಿದೆ. ಇದೇ ಸಂದರ್ಭದಲ್ಲಿ ಜನರು ಹೂವು, ಹಣ್ಣು ಸೇರಿದಂತೆ ವಿವಿಧ ಸಾಮಗ್ರಿಗಳ ಖರೀದಿಗೆ ಮುಂದಾಗಿದ್ದಾರೆ. ಆದರೆ ಹಿರಿಯೂರು ತಾಲ್ಲೂಕಿನ ಗಾಂಧಿ ಸರ್ಕಲ್ ಬಳಿ ಇರುವ ನಗರದ ನೆಹರು ಮಾರುಕಟ್ಟೆಯಲ್ಲಿ ಹೂವಿನ ದರ ಜನರ ಕೈ ಸುಟ್ಟಿದೆ. ಸ್ವಚ್ಛತೆ ಹೆಸರಿನಲ್ಲಿ ಹಣ ವಸೂಲಿ: ಒಂದೆಡೆ ಬೆಲೆ ಏರಿಕೆಯಿಂದಾಗಿ ವ್ಯಾಪಾರದಲ್ಲಿ ಕೂಡ ನಷ್ಟದಲ್ಲಿರುವ ವ್ಯಾಪಾರಿಗಳಿಂದ ನಗರ ಸಭೆ ಅಧಿಕಾರಿಗಳು ಸ್ವಚ್ಛತೆ ನೆಪದಲ್ಲಿ ಹಣ ವಸೂಲಿ ಮಾಡುತ್ತಿರುವುದು ಕಂಡು ಬಂತು.  ಈ ಪ್ರದೇಶದಲ್ಲಿ ವಾಹನ ನಿಲುಗಡೆ ಸೇರಿದಂತೆ ಯಾವುದೇ ವ್ಯವಸ್ಥೆಗಳನ್ನು ಕಲ್ಪಿಸಿಕೊಡದ ನಗರ ಸಭೆಯಿಂದಾಗಿ ಇಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆದರೆ, ಹಣ ವಸೂಲಿ ಮಾತ್ರ ಮಾಡಿ, ತನ್ನ ಕರ್ತವ್ಯ ಮರೆತಿರುವ ನಗರ ಸಭೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಾಹನದ ನಿಲುಗಡೆಯ…

Read More

ಚಿತ್ರದುರ್ಗ: ಬೈಕ್ ಗಳ ಮೇಲೆ ಕೆಎಸ್ ಆರ್ ಟಿಸಿ ಬಸ್ ಹರಿದು ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ನಡೆದಿದೆ. ಹೊಳಲ್ಕೆರೆಯ ಕುಕ್ಕವಾಡೇಶ್ವರ ದೇಗುಲದ ಬಳಿ ಈ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ರಂಗಾಪುರ ಗ್ರಾಮದ ಚಂದು(32),  ಮಾಳೇನಹಳ್ಳಿ ಮನು,  ಸತೀಶ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಎರಡು ಬೈಕ್ ಗಳಲ್ಲಿ ಬರುತ್ತಿದ್ದವರ ಮೇಲೆ ಕೆ.ಎಸ್ ಆರ್ ಟಿಸಿ ಬಸ್ ಹರಿದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಸಿಪಿಐ ರವೀಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಭಾರತ್ ಜೋಡೋ ಯಾತ್ರೆಯನ್ನು ಬಿಟ್ಟು ಮೊದಲು ತಮ್ಮ ಪಕ್ಷವನ್ನು ಜೋಡಿಸಿಕೊಳ್ಳುವಂತೆ ಟೀಕಿಸಿದ ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್,  ಬಿಜೆಪಿಗೆ ನಮ್ಮ ಪಕ್ಷದ ಬಗ್ಗೆ ಯೋಚಿಸುವ ಅಗತ್ಯವಿಲ್ಲ. ತಮ್ಮಲ್ಲಿರುವ ಪ್ರಮಾದಗಳನ್ನು ಅವರು ಸರಿಪಡಿಸಿಕೊಳ್ಳಲಿ, ಪಾಪ ಈಶ್ವರಪ್ಪ ಕಣ್ಣೀರು ಸುರಿಸುತ್ತಿದ್ದಾರೆ. ಅವರನ್ನ ಸಮಾಧಾನಪಡಿಸಲಿ ಎಂದು ಲೇವಡಿ ಮಾಡಿದರು. ಅಕ್ಟೋಬರ್ 6 ರಂದು  ನಡೆಯುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳಲಿದ್ದಾರೆ ಹಬ್ಬ ಹಿನ್ನೆಲೆಯಲ್ಲಿ 2 ದಿನ ವಿಶ್ರಾಂತಿ ಪಡೆಯುತ್ತಾರೆ. ಅಲ್ಲಿಗೆ ಯಾವ ಕಾರ್ಯಕರ್ತ, ಮುಖಂಡರಿಗೂ ಅವಕಾಶ ಇಲ್ಲ.  ಅ. 5 ರಂದು ಮೈಸೂರಿಗೆ ಖರ್ಗೆ ಬರಲಿದ್ದಾರೆ. ಅ.6 ರಂದು ಖರ್ಗೆ ಕೂಡ ಭಾಗಿಯಾಗಲಿದ್ದಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೈಸೂರು ದಸರಾ ಅಂಗವಾಗಿ ನಡೆಯುತ್ತಿರುವ ಯುವದಸರಾ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವಾಚ್ಯಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಮಹಿಳಾ ಪೊಲೀಸರೊಬ್ಬರು ದೂರು ನೀಡಿದ್ದಾರೆ. ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಮಿತಾ ಎಂಬುವವರು ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಸಂಬಂಧ ಎಫ್ ಐಆರ್ ದಾಖಲಾಗಿದೆ. ಯುವದಸರಾ ಕಾರ್ಯಕ್ರಮಕ್ಕೆ ಬಂದೋಬಸ್ತ್ ಗಾಗಿ ನನ್ನನ್ನ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಬಂದಿದ್ಧ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಾಯ್ದಿರಿಸಿದ ಜಾಗವನ್ನ ತೋರಿಸಿ ಕಳುಹಿಸಿದೆ. ಈ ಸಮಯದಲ್ಲಿ ಅಪ್ಪಣ್ಣ ಮತ್ತು ಬೆಂಬಲಿಗರನ್ನ ತಡೆದಾಗ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಅಪ್ಪಣ್ಣ ಮತ್ತು ಸಹಚರರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಪಿಎಸ್ ಐ ಸ್ಮಿತಾ ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಬೆಳಗಾವಿ: ಕಳೆದ ಕೆಲ ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದ ಬೆಳಗಾವಿ ಜಿಲ್ಲೆಯ 7 ಎಸ್ ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಡಿಸಿಪಿ ರವೀಂದ್ರ ಗಡಾಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಬೆಳಗಾವಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾಡಿ ಅವರು 7 ಎಸ್ ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಒಬ್ಬೊಬ್ಬರಿಂದ 50 ಸಾವಿರ ರೂ. ಬಾಂಡ್ ಪಡೆದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಬೆಳಗಾವಿ ಪಿಎಫ್ ಐ ಮಾಜಿ ಜಿಲ್ಲಾಧ್ಯಕ್ಷ ಝಕೀವುಲ್ಲಾ ಫೈಜಿ ,ಎಸ್ ಡಿಪಿಐ ಬೆಳಗಾವಿ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಕಡೋಲಿ, ಸಲ್ಲಾವುದ್ದೀನ್ ಖಿಲೆವಾಲೆ, ಬದ್ರುದ್ದೀನ್ ಪಟೇಲ್, ಸಮೀವುಲ್ಲಾ, ಜಹೀರ್ ಘೀವಾಲೆ, ರೆಹಮಾನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿಕ್ಕಬಳ್ಳಾಪುರ: ಪ್ರಿಯಕರನೊಂದಿಗೆ ಮಗಳು ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಶ್ರೀರಾಮಪ್ಪ(63), ಸರೋಜಮ್ಮ(60), ಮನೋಜ್(24) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಶಿಟ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More