Author: admin

ನವದೆಹಲಿ : ಅನುಕಂಪದ ಆಧಾರದಲ್ಲಿ ನೀಡುವ ಸರ್ಕಾರಿ ನೌಕರಿಯು ಹಕ್ಕಲ್ಲ ಎಂದು ಅಭಿಪ್ರಾಯಪಟ್ಟಿದೆ. ಅನುಕಂಪದನ ನೌಕರಿ ಒಂದು ರೀತಿಯ ವಿನಾಯ್ತಿಯೇ ವಿನಃ ಅದು ಹಕ್ಕು ಅಲ್ಲ. ಕುಟುಂಬದ ಸದಸ್ಯ ಹಠಾತ್ ನಿಧನರಾದಾಗ ಆದ ಹಾನಿಯಿಂದ ಚೇತರಿಸಿಕೊಳ್ಳಲು ಕುಟುಂಬಕ್ಕೆ ಅವಕಾಶ ನೀಡುವ ಉದ್ದೇಶದಿಂದ ಮಾತ್ರ ಅನುಕಂಪದ ಉದ್ಯೋಗ ನೀಡಲಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಹಿಳೆಯೊಬ್ಬರು ಅನುಕಂಪದ ಆಧಾರದಲ್ಲಿ ನೇಮಿಸಿಕೊಳ್ಳಬೇಕು ಎಂದು ಸರ್ಕಾರಿ ಸ್ವಾಮ್ಯದ ರಸಗೊಬ್ಬರ ಹಾಗೂ ರಾಸಾಯನಿಕ ಕಂಪನಿ ಟ್ರಾವಂಕೋರ್ ಲಿ.ಗೆ ಕೇರಳ ಹೈಕೋರ್ಟ್ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ದಾಖಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾ. ಎ. ಆರ್. ಶಾ ಹಾಗೂ ನ್ಯಾ. ಕೃಷ್ಣ ಮುರಾರಿ ಅವರಿದ್ದ ಪೀಠ, ಟ್ರಾವಂಕೋರ್ ಲಿ. ಉದ್ಯೋಗಿಯಾಗಿದ್ದ ಮಹಿಳೆಯ ತಂದೆ ತೀರಿಕೊಂಡು 2 ದಶಕಗಳೇ ಕಳೆದಿವೆ. ಹೀಗಾಗಿ ಅರ್ಜಿದಾರ ಮಹಿಳೆ ಅನುಕಂಪದ ನೌಕರಿ ಪಡೆಯಲು ಅರ್ಹಳಲ್ಲ ಎಂದು ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ವಿಜಯಪುರ: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರನಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರನಿಂದ ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಇಲ್ಲದಿದ್ದರೆ ಯಡಿಯೂರಪ್ಪ ಸಿಎಂ ಸ್ಥಾನದಲ್ಲೇ ಮುಂದುವರಿಯುತ್ತಿದ್ದರು. ವಿಜಯೇಂದ್ರ ಹಗರಣ ಮಾಡಿದಾಗಲೆಲ್ಲ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು. ವಿಜಯೇಂದ್ರ ಭ್ರಷ್ಟಾಚಾರದಿಂದ ಬಿಜೆಪಿ ಪಕ್ಷದ ಹೆಸರು ಕೆಟ್ಟಿದೆ. ಯಡಿಯೂರಪ್ಪ ಜೈಲಿಗೆ ಹೋಗಿ ಬರಲು ವಿಜಯೇಂದ್ರ ಕಾರಣ. ಮಗನ ಮಾತು ಕೇಳಿ ಅಧಿಕಾರ ನಡೆಸಬಾರದು. ಬಿ ಎಸ್​ ಯಡಿಯೂರಪ್ಪ ಒಳ್ಳೆಯವರು ಇದ್ದಾರೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೋಲ್ಕತ್ತಾ: ಅಖಿಲ ಭಾರತೀಯ ಹಿಂದೂ ಮಹಾಸಭಾ ಆಯೋಜಿಸಿದ್ದ ದುರ್ಗಾ ಪೂಜಾ ಪೆಂಡಾಲ್ ‌ನಲ್ಲಿ ಮಹಾತ್ಮ ಗಾಂಧಿಯನ್ನು ಮಹಿಷಾಸುರನಾಗಿ ಪ್ರದರ್ಶಿಸಿದ್ದ ಘಟನೆ ಕೋಲ್ಕತ್ತಾದ ಪೂರ್ವ ಅಂಚಿನಲ್ಲಿರುವ ಕಸ್ಬಾದಲ್ಲಿ ನಡೆದಿದೆ. ಈ ಘಟನೆ ಇದೀಗ ಭಾರೀ ವಿವಾದವನ್ನು ಹುಟ್ಟುಹಾಕಿದೆ. ಅಖಿಲ ಭಾರತೀಯ ಹಿಂದೂ ಮಹಾಸಭಾದ ಪೂಜೆಯಲ್ಲಿ ಮಹಿಷಾಸುರನ ಮುಖವು ಮಹಾತ್ಮ ಗಾಂಧಿಯವರ ಮುಖವನ್ನು ಹೋಲುವಂತೆ ಮಾಡಲಾಗಿದೆ. ಈ ಸುದ್ದಿ ಬಹಿರಂಗವಾಗುತ್ತಿದ್ದಂತೇ ಅಲ್ಲಿನ ಆಡಳಿತವು ತರಾತುರಿಯಲ್ಲಿ ಪೂಜಾ ಸಂಘಟಕರನ್ನು ತಲುಪಿದ್ದು ವಿಗ್ರಹವನ್ನು ಬದಲಾಯಿಸುವಂತೆ ಒತ್ತಾಯಿಸಿದೆ. ಪೊಲೀಸರು ಮತ್ತು ಆಡಳಿತದ ಒತ್ತಡಕ್ಕೆ ಮಣಿದು ಪೂಜೆ ಸಂಘಟಕರು ಗಾಂಧಿ ವೇಷಭೂಷಣದಲ್ಲಿ ತಯಾರಿಸಿದ ವಿಗ್ರಹವನ್ನು ಬದಲಾಯಿಸಿದ್ದು, ಅದೇ ಜಾಗಕ್ಕೆ ಮಹಿಷಾಸುರನ ರೂಪದ ವಿಗ್ರಹವನ್ನು ಸ್ಥಾಪಿಸಿದ್ದಾರೆ. ದುರ್ಗಾಪೂಜೆಯಲ್ಲಿ ಗಾಂಧಿಯನ್ನು ಮಹಿಷಾಸುರನಂತೆ ತೋರಿಸಲಾಗಿದೆ ಎಂಬ ಸುದ್ದಿ ವಾಹಿನಿಗಳಲ್ಲಿ ಪ್ರಕಟವಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 20/10/2022 ಕೊನೆಯ ದಿನವಾಗಿದೆ. ಗ್ರಾಮ ಪಂಚಾಯಿತಿ ನೇಮಕಾತಿ ಸೇವಾ ನಿಯಮಗಳನ್ವಯ ನೇರ ನೇಮಕಾತಿ ಮಾಡುವ ಸಲುವಾಗಿ ಆಯ್ಕೆ ಸಮಿತಿಯನ್ನು ರಚಿಸಿದ್ದು, ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ 4 ತಾಲೂಕುಗಳ ಪ್ರತಿ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇರೆಗೆ ಹಾಗೂ ಮೀಸಲಾತಿ ಅನ್ವಯ ನೇಮಕಾತಿ ಪ್ರಕ್ರಿಯೆ ಜರುಗಿಸಲು ಆನ್‌ ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಕರವಸೂಲಿಗಾರರು 4, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು 4, ಅಟೆಂಡೆಂಟ್ 8, ಕ್ಲೀನರ್ (ಸ್ವಚ್ಛತಾಗಾರ) 34 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ಪರಿಶೀಲಿಸಿದ ನಂತರ ಆಯ್ಕೆ ಪಟ್ಟಿಯಲ್ಲಿನ ನೇಮಕ ಮಾಡಲಾಗುವ ನಿಬಂಧನೆಗೊಳಪಟ್ಟಿರುತ್ತದೆ. ಕನ್ನಡವನ್ನು…

Read More

ಹಿರಿಯೂರು: ನಗರದ ವಾಣಿ ಸಕ್ಕರೆ ಪದವಿ ಪೂರ್ವ ಕಾಲೇಜಿನಲ್ಲಿನ ಪ್ರಾಂಶುಪಾಲ  ಡಿ.ಧರೇಂದ್ರಯ್ಯ ಅವರ ಅಧ್ಯಕ್ಷತೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಧರಣೇಂದ್ರಯ್ಯ ಅವರು, ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯ ವಿಚಾರಗಳನ್ನು ತಿಳಿಸಿದರು. ಇದೇ ವೇಳೆ ಮಾತನಾಡಿದ ಡಾ.ಸಿದ್ದಲಿಂಗಯ್ಯ ಗಾಂಧಿಯನ್ನು ಯುವಪೀಳಿಗೆ ಮರೆಯುತ್ತಿರುವುದು ನೋವಿನ ಸಂಗತಿ ಎಂದರು. ಕಾರ್ಯಕ್ರಮದಲ್ಲಿ ಅಧ್ಯಾಪಕರಾದ ಹೆಚ್.ತಿಪ್ಪೇಸ್ವಾಮಿ, ಬಿ.ಈ.ಜಗನ್ನಾಥ, ಹೆಚ್.ವಲಿ, ವಿ.ಪಿ.ಜನಾರ್ದನ, ಆರ್.ಹೇಮಲತಾ, ಜಿ.ಎಸ್.ರಾಮಪ್ಪ, ಎಸ್.ಎಲ್.ಎನ್.ಮೂರ್ತಿ, ಕೆ.ಮುರವರ್ದನ ಹಾಗೂ ಬೋಧಕೇತರರಾದ ಎನ್.ನರಸಿಂಹ ಮೂರ್ತಿ, ಈ.ಬಸೀರ್, ಶಿವಲೀಲಾ, ಕೆ.ರೂಪ, ಗೀತಾ, ನಾಗರಾಜ , ರೇವಣ್ಣ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಿರಿಯೂರು: ನಗರದ ಹರಿಶ್ಚಂದ್ರ ಘಾಟ್ ನ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ರಾಷ್ಟ್ರೀಯ ಹಬ್ಬವನ್ನು ಆಚರಿಸಲಾಗಿತ್ತು . ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಮ್.ಕೊಟ್ಟಿಗೆಯ ಅಂಗನವಾಡಿ ಶಿಕ್ಷಕಿ ಶೀಭಾ ಜೋನಿತ,  ಮಹಾತ್ಮ ಗಾಂಧೀಜಿ ಅವರ ತತ್ವಗಳನ್ನು ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಬ್ಬರು ಸಹ  ಅಳವಡಿಸಿಕೊಳ್ಳಬೇಕು ಹಾಗೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಸಾಗಬೇಕು ಎಂದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ  ಹೆಸರೇ ನಮಗೆ ಪ್ರೇರಕ ಶಕ್ತಿಯಾಗಿದೆ. ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ಚೇತನ, ಅಜಾತ ಶತ್ರು ರಾಜಕಾರಣಿ, ದೇಶ ಕಂಡ ಅಪರೂಪದ ಪ್ರಧಾನಿ ಡಾ.ಲಾಲ್ ಬಹದ್ದೂರ್ ಶಾಸ್ತ್ರಿ ಎಂದು ಶೀಭಾ ಜೋನಿತ ತಿಳಿಸಿದರು. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಿರಿಯೂರು: ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಎ.ಡಿ.ಎಮ್ ಶಿರಸ್ಥೆದಾರರಾದ ತಿಪ್ಪೇಸ್ವಾಮಿ ಹಾಗೂ ರಾಜು ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಎ.ಡಿ.ಎಮ್. ಶಿರಸ್ಥೆದಾರ  ತಿಪ್ಪೇಸ್ವಾಮಿ, ಇಂದು ನಮ್ಮ ಭಾರತ ದೇಶ ಕಂಡಂತಹ ಮಹಾನ್ ವ್ಯಕ್ತಿಗಳಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154 ನೇ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 118 ನೇ ಜಯಂತಿ ಕಾರ್ಯಕ್ರಮವನ್ನು ತಾಲ್ಲೂಕು ಕಛೇರಿ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿಯೂ ಹಾಗೂ ಪ್ರತಿಯೊಬ್ಬ ಭಾರತೀಯರು ಆಚರಿಸುತ್ತಿರುವುದು ನಿಜಕ್ಕೂ ಸಹ ಹೆಮ್ಮೆಯ ವಿಷಯವಾಗಿದೆ ಎಂಬುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವ ಚಿತ್ರ ಕ್ಕೆ ಪುಷ್ಪಾಮಾಲೆಗಳನ್ನು ಸಲ್ಲಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಕಚೇರಿಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್. ಚಿತ್ರದುರ್ಗ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಹಿರಿಯೂರು: ಅಕ್ಟೋಬರ್‌ 2ರಂದು ಹಿರಿಯೂರು ನಗರದ ರಾಷ್ಟ್ರೀಯ ಅಕಾಡೆಮಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಅಕಾಡೆಮಿ ಶಾಲೆಯ ಶಿಕ್ಷಕಿ ರಂಗಲಕ್ಷ್ಮಿ ಅವರು,   ಮಹಾತ್ಮ ಗಾಂಧೀಜಿಯವರು ಒಬ್ಬ ಹುಟ್ಟು ಹೋರಾಟಗಾರರಾಗಿದ್ದರು. ಬ್ರಿಟೀಷ ವಿರುದ್ಧ ವಿದೇಶಿವಸ್ತುಗಳಿಗೆ ಬಹಿಷ್ಕಾರ, ಉಪ್ಪಿನ ಸತ್ಯಾಗ್ರಹ, ಅಸಹಕಾರ ಚಳುವಳಿ, ಆಮರಣ ಉಪವಾಸ ಮೊದಲಾದ ಹೋರಾಟದ ಕಿಚ್ಚು ಹಚ್ಚಿದ್ದರು.  ವಿಶ್ವಸಂಸ್ಥೆಯು ಗಾಂಧಿ ಜಯಂತಿಯನ್ನು ‘ ಅಂತರಾಷ್ಟ್ರೀಯ ಅಹಿಂಸಾ ದಿನ’ ಎಂದು ಆಚರಿಸುತ್ತಿದೆ ಎಂದು ಅವರು ತಿಳಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕುರಿತು ಇದೇ ವೇಳೆ ಮಾತನಾಡಿದ ರಂಗಲಕ್ಷ್ಮಿ,  ಲಾಲ್ ಬಹದ್ದೂರ್ ಶಾಸ್ತ್ರಿಯವರು ಒಂದು ಸದೃಢ ರಾಷ್ಟ್ರ ನಿರ್ಮಾಣದ ದಿಶೆಯಲ್ಲಿ, ಸ್ವಪೋಷಣೆ ಮತ್ತು ಸ್ವಾವಲಂಬನೆಗಳನ್ನು ಆಧಾರಸ್ತಂಭಗಳೆಂದು ಭಾವಿಸುವ ಅವಶ್ಯಕತೆಯನ್ನು ಮನಗಂಡು “ಜೈ ಜವಾನ್ ಜೈ ಕಿಸಾನ್”ಎಂಬ ಘೋಷವಾಕ್ಯವನ್ನು ಜನಪ್ರಿಯಗೊಳಿಸಿದವರು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸಿಹಿ ಅಂಚುವುದರ ಮೂಲಕ ಗಾಂಧಿ ಜಯಂತಿ ಹಾಗೂ ಲಾಲ್…

Read More

ತಿಪಟೂರು: ಮನುಷ್ಯನಿಗೆ ಮುಕ್ತಿ ಮಾರ್ಗ ತೋರಿಸುವ ಮುಕ್ತಿಧಾಮದ ರಕ್ಷಣೆ ಎಲ್ಲರ ಹೊಣೆ ಎಂದು ತಿಪಟೂರು ಹೋರಾಟ ಸಮಿತಿಯ ಅಧ್ಯಕ್ಷ ಲೋಕೇಶ್  ಅಭಿಪ್ರಾಯಪಟ್ಟರು. ತಿಪಟೂರು ಹೋರಾಟ ಸಮಿತಿ ಮತ್ತು ರೋಟರಿ ಬಳಗ ಹಾಗೂ ನಗರಸಭೆ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ಪ್ರಯುಕ್ತ ನಗರದ ರುದ್ರಭೂಮಿಯಲ್ಲಿ ಹಮ್ಮಿಕೊಳ್ಳಲಾದ 11ನೇ ವರ್ಷದ ಸ್ವಚ್ಛತಾ ಕಾರ್ಯದ ಅಭಿಮಾನ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಹಲೋಕ ತ್ಯಜಿಸುವ ಬಡವರ ಪಾಲಿಗೆ ಮುಕ್ತಿ ತೋರಿಸುವ ಮುಕ್ತಿ ರುದ್ರಭೂಮಿ 10 ಎಕರೆಗೂ ಎತ್ತು ಜಮೀನು ಹೊಂದಿದ್ದು , ಕೆಲವರು ಇದನ್ನು ಒತ್ತುವರಿ ಮಾಡಿಕೊಂಡಿದ್ದರು. ದಾಖಲೆಗಳಿದ್ದರೂ ಸಹ ಇದನ್ನು ಏನು ಮಾಡಲಿಕ್ಕೆ ಅಧಿಕಾರಿಗಳ ಕೈಯಲ್ಲಿ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರೋಟರಿ ಅಧ್ಯಕ್ಷ ವಿಜಯ ಕುಮಾರಿ, ನಗರ ಸಭೆ ಉಪಾಧ್ಯಕ್ಷರ ಸೊಪ್ಪು ಗಣೇಶ, ಎಪಿಎಂಸಿ ಮಾಜಿ ನಿರ್ದೇಶಕ ಟಿ.ಎಸ್.ಬಸವರಾಜ್, ರೋಟರಿ ಶಿವಶಂಕರ್  ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಅಮರಾವತಿ: ಅಪರೂಪದ ಗೌಚರ್ ಕಾಯಿಲೆಯಿಂದ ಬಳಲುತ್ತಿರುವ ಎರಡೂವರೆ ವರ್ಷದ ಬಾಲಕಿಯ ಚಿಕಿತ್ಸೆಗಾಗಿ ಆಂಧ್ರಪ್ರದೇಶ ಸರ್ಕಾರ 1 ಕೋಟಿ ರೂಪಾಯಿ ಮಂಜೂರು ಮಾಡಿದೆ. ಡಾ. ಬಿ.ಆರ್. ಅಂಬೇಡ್ಕರ್ ಕೋನಸೀಮಾ ಜಿಲ್ಲಾಧಿಕಾರಿ ಹಿಮಾಂಶು ಶುಕ್ಲಾ ಅವರು ಬಾಲಕಿಯ ಚಿಕಿತ್ಸೆಗಾಗಿ 13 ಚುಚ್ಚುಮದ್ದುಗಳ ಮೊದಲ ಸೆಟ್ ಅನ್ನು ಭಾನುವಾರ ಬಾಲಕಿಯ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ. ಒಟ್ಟಾರೆಯಾಗಿ, ಪುಟ್ಟ ಬಾಲಕಿಗೆ ಚಿಕಿತ್ಸೆಗಾಗಿ ಕನಿಷ್ಠ 52 ಚುಚ್ಚುಮದ್ದುಗಳನ್ನು ನೀಡಬೇಕು. ಪ್ರತಿಯೊಂದು ಚುಚ್ಚುಮದ್ದಿಗೂ 1.25 ಲಕ್ಷ ವೆಚ್ಚವಾಗುತ್ತದೆ. ಗೌಚರ್ ಕಾಯಿಲೆಯು ಕೊಬ್ಬಿನ ಪದಾರ್ಥಗಳ ರಚನೆಯಿಂದಾಗಿ ವ್ಯಕ್ತಿಯ ಮೂಳೆಗಳು ಮತ್ತು ಯಕೃತ್ತಿನ ಮೇಲೆ ಪರಿಣಾಮ ಬೀರುತ್ತದೆ. ಇದು ಅಂಗಗಳ ವಿಸ್ತರಣೆಗೆ ಕಾರಣವಾಗುತ್ತದೆ. ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಾಗದ ಕುಟುಂಬವು ಇತ್ತೀಚೆಗೆ ಕೋನಸೀಮೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರಿಗೆ ನೆರವು ನೀಡುವಂತೆ ಮನವಿ ಮಾಡಿತ್ತು. ಬಾಲಕಿಯ ಚಿಕಿತ್ಸೆಗೆ ಮಾತ್ರವಲ್ಲದೆ ಆಕೆಯ ಶಿಕ್ಷಣ ಮತ್ತು ಯೋಗಕ್ಷೇಮಕ್ಕೂ ಹಣ ಮಂಜೂರು ಮಾಡುವುದಾಗಿ ಆಂಧ್ರ ಪ್ರದೇಶ…

Read More