Subscribe to Updates
Get the latest creative news from FooBar about art, design and business.
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
Author: admin
ಮಂಡ್ಯ: ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ಜಯರಾಮ್ ಚಿರತೆ ದಾಳಿಗೆ ತುತ್ತಾದವರು. ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಜಯರಾಮ್ ಮೇಲೆ ಚಿರತೆ ದಾಳಿ ನಡೆಸಿದ್ದು, ಈ ವೇಳೆ ಜಯರಾಮ್ ಗಂಭೀರ ಗಾಯಗೊಂಡಿದ್ದಾರೆ. ನಂತರ ಜಯರಾಮ್ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿರತೆ ದಾಳಿ ಹಿನ್ನೆಲೆ ರಾಯಸಮುದ್ರ ಗ್ರಾಮದ ಜನರಿಗೆ ಆತಂಕ ಎದುರಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಮಧ್ಯಾಹ್ನ 12 ಗಂಟೆಗೆ ಸರ್ವಪಕ್ಷಗಳ ಸಭೆ ನಡೆಯಲಿದೆ. ಸಂಸತ್ತಿನ ಅಧಿವೇಶನವನ್ನು ಸುಗಮವಾಗಿ ನಡೆಸಲು ಸರ್ಕಾರವು ಎಲ್ಲಾ ಪಕ್ಷಗಳಿಂದ ಸಹಕಾರವನ್ನು ಪಡೆಯುವ ಸಾಧ್ಯತೆಯಿದೆ. ಫೆಬ್ರವರಿ 1 ರಂದು 2024 ರ ಲೋಕಸಭೆ ಚುನಾವಣೆಗೆ ಮೊದಲು ಮೋದಿ ಸರ್ಕಾರವು ತನ್ನ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸಲು ಸಿದ್ಧವಾಗಿದೆ. ಬಜೆಟ್ ಅಧಿವೇಶನವು ಎರಡು ಭಾಗಗಳಲ್ಲಿ ನಡೆಯಲಿದೆ. ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ನಡೆಸಲು ನಾವು ಸಿದ್ಧರಿರೋದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ. 545 ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಕಾರಣ ನೇಮಕಾತಿಯನ್ನೇ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಈ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸೋದಾಗಿಯೂ ಹೇಳಿತ್ತು. ಈ ಕುರಿತಂತೆ ಟ್ವಿಟ್ ಮಾಡಿರುವ ಪ್ರವೀಣ್ ಸೂದ್, ಆರ್ ಎಸ್‌ಐ ( ಸಿಎಆರ್ ಮತ್ತು ಡಿಎಆರ್ ), ವಿಶೇಷ ಆರ್ ಎಸ್‌ಐ ( ಕೆ ಎಸ್ ಆರ್ ಪಿ ) ಹಾಗೂ ಪಿಎಸ್‌ಎ ( ರಾಜ್ಯ ಕೈಗಾರಿಕಾ ಭದ್ರತಾ ಪಡೆ)ಗಳಿಗೆ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ. 545 ಪಿಎಸ್‌ಐ ನೇಮಕಾತಿ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ. ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಸವಾರರು ಟೋಪಿ ಮಾದರಿಯ ಅರ್ಧ ಹೆಲ್ಮೆಟ್ ಅಥವಾ ISI ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿದರೆ ದಂಡ ಕಟ್ಟಬೇಕಾಗುತ್ತದೆ ಎಂದು ಪೊಲೀಸರು ಅಧಿಸೂಚನೆ ಹೊರಡಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಹಾಫ್ ಹೆಲ್ಮೆಟ್ ಧರಿಸಿದವರೂ ಸೇರಿದಂತೆ ಹೆಲ್ಮೆಟ್ ಧರಿಸದ ಸವಾರರ ವಿರುದ್ಧ 13 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ಸಂಚಾರ ಪೊಲೀಸರು ಅರ್ಧ ಹೆಲ್ಮೆಟ್ ನ್ನು ಹೆಲ್ಮೆಟ್ ರಹಿತ ಚಾಲನೆ ಎಂದೇ ಪರಿಗಣಿಸಿ ದಂಡ ವಿಧಿಸುತ್ತಿದ್ದಾರೆ. ಮೋಟಾರು ವಾಹನ ನಿಯಮಗಳ 1989 ನಿಯಮ 230(1) ಕ್ಕೆ ತಿದ್ದುಪಡಿಯಲ್ಲಿ ರಾಜ್ಯವ್ಯಾಪಿ ಬೈಕ್ ಸವಾರ ಮತ್ತು ಹಿಂಬದಿ ಸವಾರರು ಐಎಸ್ ಐ ಮುದ್ರೆಯ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಟ ಡಾ.ವಿಷ್ಣುವರ್ಧನ್ ಸ್ಮಾರಕ ನಿನ್ನೆ ಉದ್ಘಾಟನೆಯಾಗಿದೆ.70ರ ದಶಕದಲ್ಲಿ ನಾಗರಹಾವು ಚಿತ್ರದ ಅದ್ಭುತ ಯಶಸ್ಸಿನ ಮೂಲಕ ರಾಷ್ಟ್ರಮಟ್ಟದಲ್ಲಿ ಬಹು ದೊಡ್ಡ ಕ್ರಾಂತಿ ಹಾಗೂ ಸಂಚಲನವನ್ನು ಸೃಷ್ಟಿ ಮಾಡಿದಂತಹ ಹೆಗ್ಗಳಿಕೆಗೆ ಪಾತ್ರವಾದವರು ಡಾ.ವಿಷ್ಣುವರ್ಧನ್. ಸುಮಾರು ನಾಲ್ಕು ದಶಕಗಳ ಕಾಲ, ನಿರಂತರವಾಗಿ 200ಕ್ಕೂ ಹೆಚ್ಚು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯ ಚಿತ್ರಗಳಲ್ಲಿ ನಟಿಸುವ ಮೂಲಕ, ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಸರ್ಕಾರವು ಸ್ಮಾರಕ ನಿರ್ಮಾಣಕ್ಕಾಗಿ ಹೆಚ್,ಡಿ.ಕೋಟೆ ರಸ್ತೆ, ಉದ್ದೂರು ಕ್ರಾಸ್, ಹಾಲಾಳು ಗ್ರಾಮ, ಮೈಸೂರು ತಾಲ್ಲೂಕು, ಮೈಸೂರು ಜಿಲ್ಲೆಯಲ್ಲಿ 5 ಎಕರೆ ಜಾಗವನ್ನು ನಿಗದಿಪಡಿಸಿ 110 ಕೋಟಿ ರೂ. ವೆಚ್ಚದಲ್ಲಿ ಸ್ಮಾರಕ ನಿರ್ಮಾಣವನ್ನು ಮಾಡಲಾಗಿರುತ್ತದೆ. ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ್ ಪ್ರತಿಷ್ಠಾನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪೋಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದವರ ಮೂಲಕ ಸ್ಮಾರಕ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳಿಸಿರುತ್ತಾರೆ. ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಟಿಸಿರುವ ಚಲನಚಿತ್ರ ಹಾಗೂ ಅವರ ಜೀವನ ಚರಿತ್ರೆಯ ಸುಮರು 676…
BBC ಸಾಕ್ಷ್ಯಚಿತ್ರದ ವಿರುದ್ಧ ಬ್ರಿಟನ್ ನಲ್ಲಿ 300ಕ್ಕೂ ಹೆಚ್ಚು ಭಾರತೀಯ ವಲಸಿಗರು ಬಿಬಿಸಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಾಕ್ಷ್ಯಚಿತ್ರ ಪಕ್ಷಪಾತಿಯಾಗಿದೆ ಎಂದು ದೂರಿದರು. ‘ಮೋದಿ ದಿ ಇಂಡಿಯಾ ಕ್ವೆಶ್ಶನ್’ ಸಾಕ್ಷ್ಯಚಿತ್ರವನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲಾಯಿತು. ಮೊದಲ ಭಾಗ ಗುಜರಾತ್ ನರಮೇಧದ ಕುರಿತಾಗಿತ್ತು. ಎರಡನೆಯದರಲ್ಲಿ ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾದ ನಂತರದ ಬೆಳವಣಿಗೆಗಳನ್ನು ವಿವರಿಸಿದರು. ನಿನ್ನೆ ದೆಹಲಿ ಬಿಬಿಸಿ ಕಚೇರಿ ಎದುರು ಹಿಂದೂ ಸೇನೆ ಪ್ರತಿಭಟನೆ ಕೂಡ ನಡೆಸಿತ್ತು. ಬಿಬಿಸಿ ದೇಶದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆಯಾಗಿದೆ. ಹಿಂದೂ ಸೇನಾ ಕೂಡ ಬಿಬಿಸಿಯನ್ನು ತಕ್ಷಣವೇ ನಿಷೇಧಿಸಬೇಕೆಂದು ಒತ್ತಾಯಿಸಿತು. ದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿಗಳ ಮುಂದೆ ಬೋರ್ಡ್‌ಗಳು ಕಾಣಿಸಿಕೊಂಡವು. ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಹಾಳು ಮಾಡಲು ಬಿಬಿಸಿ ಅಂತಾರಾಷ್ಟ್ರೀಯ ಪಿತೂರಿ ನಡೆಸುತ್ತಿದೆ ಎಂದು ಹಿಂದೂಸೇನೆ ಆರೋಪಿಸಿದೆ. ಬಿಬಿಸಿ ದೇಶದ ಏಕತೆ ಮತ್ತು ಸಮಗ್ರತೆಗೆ ಬೆದರಿಕೆಯಾಗಿದೆ. ಬಿಬಿಸಿಯನ್ನು ತಕ್ಷಣವೇ ನಿಷೇಧಿಸಬೇಕು” – ಹಿಂದೂ ಸೇನಾ…
ಪಾವಗಡ: ಬೆಂಗಳೂರಿನ ತ್ರಿಪುರ ವಾಸಿನಿಯಲ್ಲಿ ನಡೆದ ವಿಜ್ಞಾನ ಮೇಳದಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ನಿಡಗಲ್ಲು ಹೋಬಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆ ಗುಜ್ಜನಡು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಶಾಲೆಯ ವಿದ್ಯಾರ್ಥಿಗಳಾದ ಮೋಹನ್ ಕುಮಾರ್, ಚರಣ್ ಎ ಯು, ಅನಿತಾ ಆರ್, ನಿಸರ್ಗ ಪ್ರಿಯಾ, ಬಿಂದುಶ್ರೀ ಇವರು ವಿಜ್ಞಾನ ಮೇಳದಲ್ಲಿ ಮಾಡಿದ ಸಾಧನೆಗೆ 5 ಲಕ್ಷ ಬಹುಮಾನವನ್ನನ್ನು ಶಾಲೆ ಪಡೆದುಕೊಂಡಿದೆ. ಇದು ಪಾವಗಡ ತಾಲೂಕಿಗೆ ಮತ್ತೊಂದು ಹಿರಿಮೆಯ ಸಂಗತಿಯಾಗಿದೆ ಎಂದು ಪ್ರಾಂಶುಪಾಲರಾದ ಮಾರುತಿ, ಜಿಲ್ಲಾ ಮಾಹಿತಿ ಸಹಾಯಕ ಸಿ.ಟಿ.ಶ್ರೀನಿವಾಸ್, ವಿಜ್ಞಾನ ಶಿಕ್ಷಕ ಶಿವಕುಮಾರ್ ಕೆ.ಎನ್, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರಗೂರು: ಜಗತ್ತಿನಲ್ಲಿಯೇ ಭಾರತಕ್ಕೆ ದೊಡ್ಡ ಸಂವಿಧಾನ ರಚಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರು ವ್ಯಕ್ತಿಯಲ್ಲ. ಅವರೊಂದು ದೊಡ್ಡ ಶಕ್ತಿ ಎಂದು ಮಾಜಿ ಸಚಿವರು ಎಚ್.ಸಿ.ಮಹಾದೇವಪ್ಪ ಹೇಳಿದರು. ಸರಗೂರು ತಾಲ್ಲೂಕಿನ ಸಾಗರೆ ಗ್ರಾಮದಲ್ಲಿ ಭಾನುವಾರ ಡಾ.ಬಿ.ಆರ್. ಅಂಬೇಡ್ಕರ ಅವರ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ದೇವರಂತೆ ಕಂಡು ದಿನನಿತ್ಯ ಪೂಜಿಸುವಂತೆ ಅವರು ಎಲ್ಲಾ ಸಮುದಾಯಕ್ಕೆ ಕರೆ ನೀಡಿದರು. ಭಾರತವು ಶಕ್ತಿಶಾಲಿ ಪ್ರಜಾಪ್ರಭುತ್ವ ರಾಷ್ಟ್ರವಾಗಲು ಅಂಬೇಡ್ಕರ ಅವರು ಕಾರಣರು. ಇಡೀ ವಿಶ್ವವೇ ಬೆರಗಾಗುವಂತಹ ಸಂವಿಧಾನವನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದರು. ಅವರ ಪರಿಕಲ್ಪನೆಯಿಂದಾಗಿ ನಾವಿಂದು ಅಧಿಕಾರ ಅನುಭವಿಸುತ್ತಿದ್ದೇವೆ. ಶೋಷಿತ ವರ್ಗದವರ ಧ್ವನಿಯಾಗಿದ್ದ ಅಂಬೇಡ್ಕರ ಭಾರತದ ಅಮೂಲ್ಯ ಆಸ್ತಿ ಎಂದು ಬಣ್ಣಿಸಿದರು. ಮಾಜಿ ಸಂಸದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮದಿಂದ ವಿಶ್ವಕ್ಕೇ ಮಾದರಿಯಾದ ಬೃಹತ್ ಲಿಖಿತ ಸಂವಿಧಾನ ಜಾರಿಯಾಗಿದೆ. ಇದರಿಂದ ಎಲ್ಲಾ ಸಮುದಾಯಗಳಿಗೆ ಶಿಕ್ಷಣ, ಸಮಾನತೆ, ಲಭಿಸಿದೆ ಎಂದು ಸಂದೇಶ ನೀಡಿದರು. ಸಂವಿಧಾನ ರಚಿಸಲು ಬಾಬಾ ಸಾಹೇಬರ ನೇತೃತ್ವದಲ್ಲಿ 389…
ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ಸರ್ಕಾರಿ ಬಸ್ ಚಾಲಕರೊಬ್ಬರು ರಕ್ಷಿಸಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ. 18 ವರ್ಷದ ಸುಷ್ಮಾ ಹಾಗೂ 9 ವರ್ಷದ ಮಂಜುಳ ಎಂಬವರು ತಾಯಿಯೊಂದಿಗೆ ಬಟ್ಟೆ ತೊಳೆಯಲು ಹಂದಿಕುಂಟೆ ಅಗ್ರಹಾರ ಕೆರೆ ಬಳಿಗೆ ತೆರಳಿದ್ದ ವೇಳೆ ಸುಷ್ಮಾ ಮತ್ತು ಮಂಜುಳ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಮಕ್ಕಳು ಕೆರೆಗೆ ಬಿದ್ದದ್ದನ್ನು ಕಂಡು ಗಾಬರಿಯಿಂದ ತಾಯಿ ಸಹಾಯಕ್ಕಾಗಿ ಕಿರುಚಿಕೊಂಡಿದ್ದಾರೆ. ಇದೇ ವೇಳೆ ರಸ್ತೆಯಲ್ಲಿ ಬರುತ್ತಿದ್ದ ಸರ್ಕಾರಿ ಬಸ್ ಚಾಲಕ ಮಂಜುನಾಥ್ ಅವರು ಬಸ್ ನಿಲ್ಲಿಸಿ, ಕೆರೆಗೆ ಹಾರಿ ಇಬ್ಬರು ಬಾಲಕಿಯರನ್ನೂ ರಕ್ಷಿಸಿದ್ದಾರೆ. ಬಸ್ ಚಾಲಕ ಮಂಜುನಾಥ್ ಅವರ ಮಾನವೀಯತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಮಯಕ್ಕೆ ಸರಿಯಾಗಿ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಇಬ್ಬರು ಬಾಲಕಿಯರ ಜೀವ ರಕ್ಷಿಸುವ ಮೂಲಕ ಮಾದರಿಯಾಗಿದ್ದಾರೆ ಎಂದು ಹೇಳಿದ್ದಾರೆ. ಮಂಜುನಾಥ್ ಅವರು ಚಲಾಯಿಸುತ್ತಿದ್ದ ಬಸ್ ಶಿರಾದಿಂದ ನಾಗಪ್ಪನಹಳ್ಳಿ ಕಡೆಗೆ ಸಾಗುತ್ತಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ತುಮಕೂರು: ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಹಾಗೂ ಧಾರ್ಮಿಕ ಗುರುಗಳಾದ ಅಲ್ ಹಾಜ್ ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ (ರ) ಇವರ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ತುಮಕೂರು ನಗರದ ಚಿಕ್ಕಪಟೆಯ ಅತ್ತಿಮಬ್ಬೆ ವಿದ್ಯಾ ಮಂದಿರ ಹೈಯರ್ ಪ್ರೈಮರಿ ಶಾಲೆಯಲ್ಲಿಆಯೋಜಿಸಲಾಯಿತು. ಜಯ ಕರ್ನಾಟಕ ಜನಪರ ವೇದಿಕೆ ಹಾಗೂ ಟಿ.ಹೆಚ್.ಎಸ್. ಆಸ್ಪತ್ರೆ ಮತ್ತು ನೇತ್ರದೀಪ ಹೈ ಆಸ್ಪತ್ರೆ ಇವರ ಸಹಾಯದಿಂದ ಹಮ್ಮಿಕೊಳ್ಳಲಾದ ಈ ಬೃಹತ್ ಉಚಿತ ಆರೋಗ್ಯ ಶಿಬಿರವನ್ನುದ್ದೇಶಿಸಿ ಮಾತನಾಡಿದ ಜಯ ಕರ್ನಾಟಕ ಜನಪರ ವೇದಿಕೆಯ ಮುಖಂಡರು ಮಾತನಾಡಿ, ಟಿ.ಹೆಚ್.ಎಸ್. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟಿ.ಹೆಚ್.ಎಸ್.ಡಯಾಸ್ಕೋಸ್ಟಿಕ್ ಸೆಂಟರ್ ಮತ್ತು ನೇತ್ರದೀಪ್ ಕಣ್ಣಿನ ಆಸ್ಪತ್ರೆ ಮತ್ತು ವಿವಿಧ ತಜ್ಞ ವೈದ್ಯಕೀಯ ಸೌಲಭ್ಯವಿರುವ ಎಲ್ಲಾ ವರ್ಗದ ಜನರಿಗೆ ಅತ್ಯುತ್ತಮ ಚಿಕಿತ್ಸೆಯನ್ನು ನೀಡುತ್ತಿರುವ ಆಸ್ಪತ್ರೆಯಾಗಿದೆ. ಈ ಸಂಸ್ಥೆಯಿಂದ ಹಲವಾರು ರೋಗಿಗಳು ಇದರ ಸೌಲಭ್ಯ ಪಡೆದಿರುತ್ತಾರೆ, ಆದ್ದರಿಂದ ಶಿಬಿರದ ಪ್ರಯೋಜನ ಪಡೆದು ಶಿಬಿರ ಯಶಸ್ವಿಯಗಲು ಸಹಕರಿಸಬೇಕಾಗಿ ಕೋರುತ್ತೇವೆ ಎಂದರು. ಆರೋಗ್ಯ ಶಿಬಿರದಲ್ಲಿ ಬಿ.ಪಿ, ಬ್ಲಡ್ ಶುಗರ್,…