Author: admin

ಬೆಂಗಳೂರು.ಅ.1 ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ರಾಜಕಾಲುವೆ ಒತ್ತುವರಿಗೊಳಿಸಲು ವಿಳಂಬ ಮಾಡುತ್ತಿರುವ ಬಿಬಿಎಂಪಿ ವಿರುದ್ಧ ಹೈಕೋರ್ಟ್ ಹರಿಹಾಯ್ದಿತು. ಅಲ್ಲದೆ, ಒತ್ತುವರಿಗಳನ್ನು ತೆರವುಗೊಳಿಸದೇ ಹೋದಲ್ಲಿ ಪಾಲಿಕೆಯ ಮುಖ್ಯ ಆಯುಕ್ತರ ವಿರುದ್ಧ ಸೂಕ್ತ ಆದೇಶ ಹೊರಡಿಸಬೇಕಾಗುತ್ತದೆ ಎಂದು ಹೈಕೋರ್ಟ್‌ ವಾರ್ನಿಂಗ್ ನೀಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧ ಕೋರಮಂಗಲದ ವಿಜಯ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯಪೀಠ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು. ಅಲ್ಲದೆ ‘ ಒಂದೂ ರಸ್ತೆ ಗುಂಡಿ ಮುಚ್ಚಿಲ್ಲ, ರಸ್ತೆ ಗುಂಡಿಗಳನ್ನು ತುಂಬುವ ಕಾಮಗಾರಿಯೂ ಸಮರ್ಪಕವಾಗಿಲ್ಲ. ಈ ರಸ್ತೆಗಳು ವಾಹನ ಸವಾರರಿಗೆ ಬಲು ಕಷ್ಟಕರವಾಗಿ ಪರಿಣಮಿಸಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿ ವಿಚಾರಣೆಯನ್ನು ಅ, 27ಕ್ಕೆ ಮುಂದೂಡಿತು. ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿ, 2022ರ ಸೆಪ್ಟೆಂಬರ್ 19ರಿಂದ ಈವರೆಗೆ 10 ಒತ್ತುವರಿ ತೆರವುಗೊಳಿಸಲಾಗಿದೆ. ಇನ್ನೂ 592 ಅತಿಕ್ರಮಣ ತೆರವುಗೊಳಿಸಬೇಕಾಗಿದ್ದು, ಅದಕ್ಕೆ ಸ್ವಲ್ಪ ಸಮಯಾವಕಾಶ…

Read More

ನವದೆಹಲಿ: ಇಂದು ಭಾರತದಲ್ಲಿ ಬಹುನಿರೀಕ್ಷಿತ 5 ಜಿ ಸೇವೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 1, 2022 ರಂದು ಭಾರತದಲ್ಲಿ 5 ಜಿ ಸೇವೆಗಳಿಗೆ ಚಾಲನೆ ನೀಡಲಿದ್ದಾರೆ ಮತ್ತು ಅಕ್ಟೋಬರ್ 1 ರಿಂದ 4, 2022 ರವರೆಗೆ ನವದೆಹಲಿಯ ಪ್ರಗತಿ ಮೈದಾನದಲ್ಲಿ ನಡೆಯಲಿರುವ 6 ನೇ ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 ರ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಆಯ್ದ ನಗರಗಳಲ್ಲಿ ಉದ್ಘಾಟಿಸಲಿರುವ ಪ್ರಧಾನಿ ಮೋದಿ, 5ಜಿ ಮುಂದಿನ ಒಂದೆರಡು ವರ್ಷಗಳಲ್ಲಿ ಹಂತಹಂತವಾಗಿ ಇಡೀ ದೇಶವನ್ನು ವ್ಯಾಪಿಸಲಿದೆ. ಪ್ರಧಾನ ಮಂತ್ರಿಗಳು ಮೊದಲು 5ಜಿ ಸೇವೆಗಳನ್ನು ಪ್ರಾರಂಭಿಸುವ ನಗರಗಳನ್ನು ಸರ್ಕಾರ ನಿರ್ದಿಷ್ಟಪಡಿಸಿಲ್ಲವಾದರೂ, ಟೆಲಿಕಾಂ ಆಪರೇಟರಗಳು ತಮ್ಮ ನೆಟ್‌ವರ್ಕ್ ನಲ್ಲಿ 5 ಜಿ ಸೇವೆಗಳನ್ನು ಹೇಗೆ ಪ್ರಾರಂಭಿಸಲು ಯೋಜಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. 88,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ಬಿಡ್ ಮಾಡುವ ಈ ವರ್ಷದ 5ಜಿ ಸ್ಪೆಕ್ಟ್ರಂ ಹರಾಜಿನಲ್ಲಿ ಅಗ್ರ ವ್ಯಯ ಮಾಡಿದ ರಿಲಯನ್ಸ್ ಜಿಯೋ, ಈ ವರ್ಷದ…

Read More

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುತ್​ ದರಗಳನ್ನು ಹೆಚ್ಚಿಸಿದ್ದು, ಇಂದಿನಿಂದ ನೂತನ ದರಗಳು ಜಾರಿಗೆ ಬರಲಿದೆ. ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಲಿಮಿಟೆಡ್, ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ , ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್, ಈ ವಿಭಾಗಗಳ ವಿದ್ಯುತ್ ಬೆಲೆ ಹೆಚ್ಚಳಕ್ಕೆ ಆಯೋಗ ಆದೇಶ ನೀಡಿದೆ. ಅಕ್ಟೋಬರ್ 2022 ರಿಂದ ಮಾರ್ಚ್ 2023 ರವರೆಗೆ ನೂತನ ನಿಯಮ ಜಾರಿಯಲ್ಲಿದೆ ಅಂತ ಆದೇಶದಲ್ಲಿ ತಿಳಿಸಲಾಗಿದೆ.ಈ ಪೈಕಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವೂ 35 ಪೈಸೆ ದರ ಹೆಚ್ಚಳ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ದಸರಾ ಬಳಿಕ ಯೋಜನೆಯ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆ ಇದೆ. ಮಹದಾಯಿ ಯೋಜನೆ ಜಾರಿ ಸಂಬಂಧ ಕೇಂದ್ರ ಜಲಶಕ್ತಿ ಇಲಾಖೆ ಅನುಮೋದನೆ ನೀಡಿದೆ. ದಸರಾ ಹಬ್ಬದ ಕಾರಣ ಸರ್ಕಾರಿ ರಜೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಇಲಾಖೆಯು ನೀಡಿರುವ ಅನುಮೋದನೆ ಆದೇಶವು ರಾಜ್ಯ ಸರ್ಕಾರದ ಕೈಗೆ ಮುಂದಿನ ವಾರ ಸಿಗಲಿದೆ. 20 ವರ್ಷಗಳ ಬಳಿಕ ಮುಹೂರ್ತ ಒದಗಿ ಬಂದಿದ್ದು, ಕೇಂದ್ರದ ಆದೇಶ ರಾಜ್ಯ ಸರ್ಕಾರಕ್ಕೆ ತಲುಪುತ್ತಿದ್ದಂತೆ ಯೋಜನೆ ಕಾಮಗಾರಿ ಆರಂಭಿಸುವ ಪ್ರಕ್ರಿಯೆಗೆ ಚಾಲನೆ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ವಿಸ್ತೃತ ಯೋಜನಾ ವರದಿಗೆ ಈಗಾಗಲೆ ಅಂತಾರಾಜ್ಯ ನದಿ ನೀರು ವಿವಾದ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗ ಅನುಮತಿ ನೀಡಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ‘ತನ್ಹಾಜಿ: ದಿ ಅನ್‌ಸಂಗ್ ವಾರಿಯರ್’ ಗಾಗಿ ಸಂಪೂರ್ಣ ಮನರಂಜನೆಯನ್ನು ಒದಗಿಸುವ ಅತ್ಯುತ್ತಮ ನಟ ಮತ್ತು ಅತ್ಯುತ್ತಮ ಜನಪ್ರಿಯ ಚಲನಚಿತ್ರಕ್ಕಾಗಿ ಬಾಲಿವುಡ್ ನಟ ಅಜಯ್ ದೇವಗನ್ ಅವರಿಗೆ ಶುಕ್ರವಾರ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭಕ್ಕಾಗಿ, ಅಧ್ಯಕ್ಷ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದ ನಟ ಅಜಯ್ ದೇವಗನ್ ಕಪ್ಪು ಸೂಟ್ ಧರಿಸಿದ್ದರು. ‘ತನ್ಹಾಜಿ: ದಿ ಅನ್‌ಸಂಗ್ ವಾರಿಯರ್’ ಅನ್ನು ಓಂ ರೌತ್ ನಿರ್ದೇಶಿಸಿದ್ದು, ಇದು ಜನವರಿ 10, 2020 ರಂದು ಬಿಡುಗಡೆಯಾಯಿತು. ಇದು ದೇವಗನ್ ಅವರ 30 ವರ್ಷಗಳ ವೃತ್ತಿಜೀವನದಲ್ಲಿ 100ನೇ ಚಿತ್ರವಾಗಿದೆ. ಚಿತ್ರದಲ್ಲಿ ಸೈಫ್ ಅಲಿ ಖಾನ್, ಕಾಜೋಲ್ ಮತ್ತು ಶರದ್ ಕೇಳ್ಕರ್ ಕೂಡ ಇದ್ದಾರೆ. ಇದು ಗಲ್ಲಾಪೆಟ್ಟಿಗೆಯಲ್ಲಿ ವಿಶ್ವದಾದ್ಯಂತ ರೂ 368 ಕೋಟಿಗಳನ್ನು ಸಂಗ್ರಹಿಸಿತು ಮತ್ತು ವರ್ಷದ ಅತಿ ಹೆಚ್ಚು ಗಳಿಕೆ ಎಂದು ಘೋಷಿಸಲಾಯಿತು. ಈ ಚಿತ್ರವು ಮರಾಠಾ ಯೋಧ ತಾನಾಜಿ ಮಾಲುಸರೆ ಪಾತ್ರದಲ್ಲಿ ಅಜಯ್ ಅನ್ನು ಒಳಗೊಂಡಿತ್ತು. ಇದರಲ್ಲಿ ‘ಭಗವಾ’…

Read More

ಮೈಸೂರು, ಅಕ್ಟೋಬರ್ 1: ಒಂದು ಕಡೆ ಧರೆಗೆ ಮಳೆಯ ಸಿಂಚನವಾಗುತ್ತಿದ್ದರೆ ಇನ್ನೊಂದು ಕಡೆ ಮಳೆಗೆ ಸೆಡ್ಡು ಹೊಡೆಯುವಂತೆ ನೆರೆದಿದ್ದ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದು ರಿಯಲ್ ಸ್ಟಾರ್ ಉಪೇಂದ್ರ ಅವರ ಮತ್ತೇರಿಸುವಂತ ಡೈಲಾಗ್ಸ್, ಸಾಧುಕೋಕಿಲ ಹಾಗೂ ಚಿಕ್ಕಣ್ಣ ಅವರ ಹಾಸ್ಯ ಚಟಾಕಿ ಹಾಗೂ ಕಲಾವಿದರ ಸಂಗಮ. ಇಂತಹ ದೃಶ್ಯ ಕಂಡು ಬಂದಿದ್ದು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ 3ನೇ ದಿನದ ಯುವ ದಸರಾದ ಸ್ಯಾಂಡಲ್ ವುಡ್ ನೈಟ್‌ನಲ್ಲಿ. ವೇದಿಕೇಯ ಮೇಲೆ ಉಪೇಂದ್ರ ಹಾಗೂ ಸಾಧುಕೋಕಿಲ ಅವರು ರಕ್ತ ಕಣ್ಣೀರು ಚಿತ್ರದ ಹಾಡನ್ನು ಹಾಡುವುದರ ಜೊತೆಗೆ ನರ್ತಿಸಿ ಅಭಿಮಾನಿಗಳನ್ನು ರಂಜಿಸಿದರು. ಚಿಕ್ಕಣ್ಣ ಮಾತನಾಡಿ, ಉಪಾಧ್ಯಕ್ಷ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರ. ಅದನ್ನು ಯಶಸ್ವಿಯಾಗಿ ಬೆಳೆಸಬೇಕು ಎಂದು ಮನವಿ ಮಾಡಿ ಪುನೀತ್ ರಾಜ್ ಕುಮಾರ್ ಅವರಿಗಾಗಿ ರಾಜಕುಮಾರ ಚಿತ್ರದ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ಹಾಡಿದರು. ವೇದಿಕೆಯ ಮೇಲೆ ಸಾಧುಕೋಕಿಲ ಮುಕುಂದ ಮುರಾರಿ ಚಿತ್ರದ ನೀನೆ ರಾಮ ನೀನೇ ಶಾಮ ನೀನೇ…

Read More

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಅರಳಿ ನಿಂತಿರುವ ಅಪರೂಪದ ಹೂವೊಂದು ಇಲ್ಲಿನ ಪ್ರಕೃತಿ ಸೌಂದರ್ಯದ ಶ್ರೀಮಂತಿಕೆಯನ್ನು ಇಮ್ಮಡಿಗೊಳಿಸಿದೆ. 12 ವರ್ಷಗಳಿಗೊಮ್ಮೆ ಅರಳುವ ಈ ಹೂವು ಕಾಫಿನಾಡಿನ ಸೌಂದರ್ಯದ ದಿಕ್ಕನ್ನೇ ಬದಲಿಸಲಿದೆ. ಕಣ್ಣು ಹಾಯಿಸಿದಲೆಲ್ಲಾ ಕಾಣುವ ಅಪರೂಪದ ನೀಲಿ ಕುರುಂಜಿ ನೋಡುಗರ ಕಣ್ಮನ ಸೆಳೆಯುವರ ಜೊತೆಗರ ಪ್ರವಾಸಿಗರನ್ನು ಕೈ ಬೀಸಿ ತನ್ನತ್ತ ಕರೆಯುತ್ತಿದೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಚಿಕ್ಕಮಗಳೂರಿನ ಗಿರಿ-ಪರ್ವತ ಶ್ರೇಣಿಗಳ ಸಾಲು ನೀಲಿ ರೂಪ ಪಡೆದುಕೊಳ್ಳುತ್ತಿವೆ. ಬೆಟ್ಟ-ಗುಡ್ಡಗಳೆಲ್ಲಾ ನೀಲಿಯಾಗಿ ಕಂಗೊಳಿಸುತ್ತಿವೆ. ರಸ್ತೆಯ ಪಕ್ಕದಲ್ಲಿ ಅರಳಿ ನಿಂತಿರುವ ಕುರುಂಜಿ ಪ್ರವಾಸಿಗರನ್ನು ಕೈ ಬೀಸಿ ತನ್ನತ್ತ ಕರೆಯುತ್ತಿದೆ. ಪಶ್ಚಿಮ ಘಟ್ಟಗಳ ಪ್ರಕೃತಿಯಲ್ಲಿ ವಿವಿಧ ಬಗೆಯ ನಿಗೂಢಗಳು ಬಹಳಷ್ಟು ಇವೆ. ಅವುಗಳಲ್ಲಿ ಕುರುಂಜಿ ಸಸ್ಯವೂ ಒಂದಾಗಿದೆ. ಸಸ್ಯ ವಿಜ್ಞಾನದಲ್ಲಿ ಕುರುಂಜಿಗೆ ‘ಸ್ಟ್ರೋಬಿಲಾಂಥಿಸ್’ ಎಂಬ ಹೆಸರು ಇದೆ. 70ಕ್ಕೂ ಹೆಚ್ಚು ಪ್ರಬೇಧಗಳು (ಕುಂತಿಯಾನಸ್, ಬಾರ್ಬೇಟಸ್, ಸೆಸಿಲಿಸ್, ಕನ್ಸಾಗ್ವಿನಿಯಸ್) ಪಶ್ಚಿಮ ಘಟ್ಟಗಳಲ್ಲಿ ಕಂಡುಬರುತ್ತವೆ. 2, 4, 7, 12 ಹಾಗೂ 16 ವರ್ಷಗಳಿಗೊಮ್ಮೆ ಅರಳುವುದು ಈ ಸಸ್ಯ ಪುಷ್ಪಗಳ ವಿಶೇಷ ಎಂದು…

Read More

ಬೆಂಗಳೂರು : ಇಂದಿನಿಂದ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರ್ಕಾರಿ ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರಿಂದ 9 ರವರೆಗೆ ರಜೆ ಘೋಷಿಸಲಾಗಿದೆ. ಪ್ರಾಧ್ಯಾಪಕರ ಸಂಘದ ಮನವಿ ಪರಿಗಣಿಸಿ ಅಕ್ಟೋಬರ್ 1 ರಿಂದ ಅಕ್ಟೋಬರ್ 9 ರವರೆಗೆ ರಜೆ ನೀಡಿರುವ ಕಾಲೇಜು ಶಿಕ್ಷಣ ಇಲಾಖೆಯು, ಶೈಕ್ಷಣಿಕ ಕಾರ್ಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಯಾವುದೇ ತೊಂದರೆಯಾಗದಂತೆ ವಿಶ್ವವಿದ್ಯಾಲಯಗಳು ಕ್ರಮ ವಹಿಸಲು ಸೂಚಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮುಂಬೈ: ಮುಂಬೈನ ಅಂಧೇರಿಯಲ್ಲಿ 30 ವರ್ಷದ ಮಾಡೆಲ್ ಒಬ್ಬರು ಹೋಟೆಲ್ ಕೊಠಡಿಯಲ್ಲಿ ಫ್ಯಾನ್‌ ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಬುಧವಾರ ರಾತ್ರಿ 8 ಗಂಟೆಗೆ ಹೊಟೇಲ್ ಗೆ ಚೆಕ್ ಇನ್ ಮಾಡಿದ್ದಾಳೆ. ಊಟಕ್ಕೂ ಆರ್ಡರ್ ಮಾಡಿದಳು. ಆದರೆ ಗುರುವಾರ ಬೆಳಗ್ಗೆ ಆಕೆ ಬಾಗಿಲು ತೆಗೆದಿರಲಿಲ್ಲ. ಎಷ್ಟು ಕರೆ ಮಾಡಿದರೂ ಆಕೆ ಬಾಗಿಲು ತೆರೆಯಲಿಲ್ಲ. ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮಾಸ್ಟರ್ ಕೀ ಮೂಲಕ ಆ ಕೊಠಡಿಯ ಬಾಗಿಲನ್ನು ತೆರೆದರು. ಮಾಡೆಲ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಪೊಲೀಸರಿಗೆ ಕಂಡುಬಂದಿದೆ. ಆ ಕೊಠಡಿಯಿಂದ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ. ಕ್ಷಮಿಸಿ, ನನ್ನ ಸಾವಿಗೆ ಯಾರೂ ಕಾರಣರಲ್ಲ, ನನಗೆ ಸಂತೋಷವಿಲ್ಲ, ನನಗೆ ಶಾಂತಿ ಬೇಕು ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹೆಚ್ಚಿನ ವಿವರಗಳು ಇನ್ನೂ ಬಹಿರಂಗಗೊಳ್ಳಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ನಾಗಪುರ: ಜನರು ತಪ್ಪು ರೀತಿಯ ಆಹಾರ ಸೇವನೆ ಮಾಡಬಾರದು ಮತ್ತು ಅತಿಯಾದ ಹಿಂಸೆಯನ್ನು ಒಳಗೊಂಡ ಆಹಾರ ಸೇವಿಸುವುದರಿಂದ ದೂರ ಇರಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ. ಆರೆಸ್ಸೆಸ್‌ನ ಅಂಗ ಸಂಸ್ಥೆ ಭಾರತ್ ವಿಕಾಸ್ ಮಂಚ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವತ್ ಅವರು ವ್ಯಕ್ತಿತ್ವದ ಬಹುಮುಖ ಪ್ರಗತಿ ಕುರಿತಂತೆ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ. “ನೀವು ತಪ್ಪು ರೀತಿಯ ಆಹಾರ ಸೇವಿಸುತ್ತಿದ್ದರೆ, ಅದು ನಿಮ್ಮನ್ನು ತಪ್ಪು ದಾರಿಗೆ ಕೊಂಡೊಯ್ಯುತ್ತದೆ. ಜನರು ‘ತಾಮಸಿಕ’ ಆಹಾರ ತಿನ್ನಬಾರದು. ಅತಿಯಾದ ಹಿಂಸೆಯನ್ನು ಒಳಗೊಂಡ ಆಹಾರವನ್ನು ಸೇವನೆ ಮಾಡಬಾರದು” ಎಂದು ಸಲಹೆ ನೀಡಿದ್ದಾರೆ. ತಾಮಸಿಕ ಆಹಾರವು ಸಾಮಾನ್ಯವಾಗಿ ಮಾಂಸಾಹಾರ ಪದಾರ್ಥಗಳನ್ನು ಒಳಗೊಂಡಿರುತ್ತದೆ. ಪಶ್ಚಿಮದ ದೇಶಗಳು ಮತ್ತು ಭಾರತದಲ್ಲಿನ ಮಾಂಸಾಹಾರಿಗಳ ನಡುವೆ ಅವರು ಹೋಲಿಕೆಯನ್ನು ಮಾಡಿದ್ದಾರೆ. “ಜಗತ್ತಿನಲ್ಲಿ ಎಲ್ಲೆಡೆ ಮಾಂಸ ಸೇವಿಸುವಂತಹ ಜನರು ಭಾರತದಲ್ಲಿ ಇದ್ದಾರೆ. ಆದರೆ ನಮ್ಮ ದೇಶದಲ್ಲಿ ಮಾಂಸಾಹಾರಿಗಳಾಗಿದ್ದರೂ ಕೂಡ ಸಂಯಮಗಳನ್ನು ಹೊಂದಿರುತ್ತಾರೆ ಮತ್ತು ಕೆಲವು ನಿಯಮಗಳನ್ನು ಪಾಲಿಸುತ್ತಾರೆ” ಎಂದು ಹೇಳಿದ್ದಾರೆ. “ಇಲ್ಲಿ ಮಾಂಸಾಹಾರ…

Read More