Author: admin

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್ ​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ ಸಂಪಾದನೆ ಮಾಡುವ ವಿಶ್ವದ ಅಗ್ರ 15 ಸೆಲೆಬ್ರಿಟಿಗಳಲ್ಲಿ ಕೊಹ್ಲಿ ಒಬ್ಬರು ಎನ್ನಿಸಿದ್ದಾರೆ.ಕೊಹ್ಲಿ ಅವರು ಇನ್​ಸ್ಟಾಗ್ರಾಂನಲ್ಲಿ 21 ಕೋಟಿಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ. ಹೋಪರ್​ ಎಚ್​ಕ್ಯೂ ಬಿಡುಗಡೆ ಮಾಡಿರುವ ಅಂಕಿ& ಅಂಶಗಳ ಪ್ರಕಾರ, ಕ್ರಿಶ್ಚಿಯಾನೊ ರೊನಾಲ್ಡೊ ವಿಶ್ವದಲ್ಲೇ ಅಗ್ರಸ್ಥಾನದಲ್ಲಿದ್ದಾರೆ. ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ 19.5 ಕೋಟಿ ರೂ. ಪಡೆಯುತ್ತಾರೆ. ವಿರಾಟ್​ ಕೊಹ್ಲಿ ಈ ಪಟ್ಟಿಯಲ್ಲಿರುವ ಅಗ್ರ ಭಾರತೀಯ ಕ್ರಿಕೆಟಿಗರಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಸೂಳ್ಯ ತಾಲೂಕಿನ ಮಣಿಕ್ಕಾರ್ ಅಂಚೆಯ ಬೆಳ್ಳಾರಿ ಗ್ರಾಮದ ನೆಟ್ಟಾರು ಹೌಸ್ ನಿವಾಸಿಯಾದ ಶ್ರೀಮತಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಹಿರಿಯ ಸಹಾಯಕ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸುವಂತೆ ಆದೇಶಿಸಿದ್ದಾರೆ. ಜುಲೈ 26 ರಂದು ದಕ್ಷಿಣ ಕನ್ನಡದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಹಂತಕರು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದು, ಇದು ಇಡೀ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದವು. ಈ ವೇಳೆ ಪ್ರವೀಣ್ ಕುಟುಂಬಸ್ಥರಿಗೆ ಸಂತ್ವಾನ ಹೇಳಿದ ಬೊಮ್ಮಾಯಿ ಕುಟುಂಬಕ್ಕೆ ಸರ್ಕಾರದ ಹುದ್ದೆಯನ್ನ ಕೊಡುವ ಭರವಸೆ ನೀಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಬೆಳಗಾವಿ : ಗಂಟುರೋಗದಿಂದ ದನಗಳು ಮೃತಪಟ್ಟರೆ ಪಟ್ಟರೆ 20 ಸಾವಿರ ರೂ.ಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗಕ್ಕೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಘೋಷಿಸಿರುವುದಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಜಾನುವಾರುಗಳ ಗಂಟುರೋಗ ಸಮಸ್ಯೆ ಕುರಿತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಸರಕಾರದ ಗಮನ ಸೆಳೆದಿದ್ದರು. ಸಮಸ್ಯೆ ತೀರಾ ಗಂಭೀರವಾಗಿದ್ದು, ರಾಜ್ಯ ಸರಕಾರ ಮಧ್ಯ ಪ್ರವೇಶಿಸಬೇಕು. ಜಾನುವಾರುಗಳು ಮೃತಪಟ್ಟರೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದರು. ಸಮಸ್ಯೆ ಗಂಭೀರತೆಯನ್ನು ಅವರು ತೆರೆದಿಟ್ಟಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಲಕ್ಷ್ಮೀ ಹೆಬ್ಬಾಳಕರ್ ರೈತರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ. ಚಿಕಿತ್ಸಾ ವೆಚ್ಚವನ್ನು ಸಂಪೂರ್ಣ ಭರಿಸುವ ಮತ್ತು ಇದಕ್ಕಾಗಿ ವಿಶೇಷ ತಂಡವನ್ನು ಕಳಿಸುವ ಭರವಸೆ ನೀಡಿದ್ದಕ್ಕಾಗಿ ಸಹ ಮುಖ್ಯಮಂತ್ರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಬಿಡೆನ್ ಸರ್ಕಾರ ಭಾರತೀಯ ಟೆಕ್ಕಿಗಳಿಗೆ ಗುಡ್ ನ್ಯೂಸ್ ನೀಡುತ್ತಿದೆ. ನೀವು.. 7 ವರ್ಷಕ್ಕೂ ಹೆಚ್ಚು ಕಾಲ ಅಮೆರಿಕದಲ್ಲಿ ವಾಸಿಸುತ್ತಿದ್ದೀರಾ.. ನೀವು H-1B ವೀಸಾದಲ್ಲಿ IT ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೀರಾ.. ಗ್ರೀನ್ ಕಾರ್ಡ್.. ನೀವು ಅಮೇರಿಕನ್ ಪೌರತ್ವವನ್ನು ಪಡೆಯಬಹುದು. ಇದಕ್ಕಾಗಿ ವಲಸೆ ಕಾಯಿದೆಯಲ್ಲಿ (ಯುಎಸ್ ಇಮಿಗ್ರೇಷನ್ ಆಕ್ಟ್) ತಿದ್ದುಪಡಿಗಳನ್ನು ಸೇರಿಸಲಾಗಿದೆ. ಕೆಲವು ವರ್ಗಗಳಲ್ಲಿ ಕೆಲಸ ಮಾಡುವ ಭಾರತೀಯ ತಾಂತ್ರಿಕ ವೃತ್ತಿಪರರಿಗೆ ಅನುಕೂಲವಾಗುವಂತೆ ನಿಬಂಧನೆಗಳನ್ನು ತಿದ್ದುಪಡಿ ಮಾಡಲು US ಸೆನೆಟ್‌ನಲ್ಲಿ ಮಸೂದೆಯನ್ನು ಪರಿಚಯಿಸಲಾಗಿದೆ. ಇದರ ಪ್ರಕಾರ ಸತತ ಏಳು ವರ್ಷಗಳ ಕಾಲ ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದರೆ ಗ್ರೀನ್ ಕಾರ್ಡ್ ಪಡೆಯಲು ಅರ್ಹರು. ಈ ಮಸೂದೆಯನ್ನು ಸೆನೆಟರ್ ಅಲೆಕ್ಸ್ ಪಡಿಲ್ಲಾ ಪ್ರಸ್ತಾಪಿಸಿದರು ಮತ್ತು ಇತರ ಸೆನೆಟರ್‌ಗಳಾದ ಎಲಿಜಬೆತ್ ವಾರೆನ್, ಬೆನ್ರಾಯ್ ಲುಜಾನ್ ಮತ್ತು ಡಿಕ್ ಡರ್ಬಿನ್ ಅವರು ಬೆಂಬಲಿಸಿದರು. US ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಕಾಂಗ್ರೆಸ್‌ನ ಜೋ ಲೌಗ್‌ಗ್ರೆನ್ ಈ ಮಸೂದೆಯನ್ನು ಮಂಡಿಸಿದರು. ಜೋ ಲೌಗ್ರೆನ್ ಪ್ರಸ್ತುತ ವಲಸೆಯ ಮೇಲಿನ ಹೌಸ್ ಉಪಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.…

Read More

ಲಕ್ನೋ: ಒಬ್ಬ ವ್ಯಕ್ತಿ ಒಂದು ವರ್ಷದಿಂದ ಸ್ಟೀಲ್ ಚಮಚ ತಿನ್ನುತ್ತಿದ್ದಾನೆ. ಹೊಟ್ಟೆ ನೋವಿನಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಅವರ ಹೊಟ್ಟೆಯಿಂದ 62 ಚಮಚಗಳನ್ನು ಹೊರತೆಗೆದಿದ್ದಾರೆ. ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬೊಪ್ಪದ ಗ್ರಾಮದ 32 ವರ್ಷದ ವಿಜಯ್ ಇತ್ತೀಚೆಗೆ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಇದರಿಂದ ಕುಟುಂಬಸ್ಥರು ಅವರನ್ನು ಮುಜರಾಯಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಜಯ್ ನನ್ನು ಪರೀಕ್ಷಿಸಿದ ವೈದ್ಯರು ಎಕ್ಸ್ ರೇ ಮೂಲಕ ಆತನ ಹೊಟ್ಟೆಯಲ್ಲಿ ಸ್ಟೀಲ್ ಸ್ಪೂನ್ ಗಳು ಪತ್ತೆಯಾಗಿವೆ. ಕಾರ್ಯಾಚರಣೆಯ ನಂತರ ಅವರ ಹೊಟ್ಟೆಯಿಂದ 62 ಚಮಚಗಳನ್ನು ತೆಗೆಯಲಾಯಿತು. ಏತನ್ಮಧ್ಯೆ, ವೈದ್ಯರು ವಿಜಯ್ ಅವರನ್ನು ಚಮಚ ತಿನ್ನುತ್ತಿದ್ದೀರಾ ಎಂದು ಕೇಳಿದರು. ಕಳೆದೊಂದು ವರ್ಷದಿಂದ ಸ್ಪೂನ್ ತಿನ್ನುತ್ತಿದ್ದೇನೆ ಎಂದರು. ಸುಮಾರು ಎರಡು ಗಂಟೆಗಳ ಶಸ್ತ್ರಚಿಕಿತ್ಸೆಯ ಬಳಿಕ ವಿಜಯ್ ಅವರ ಹೊಟ್ಟೆಯಲ್ಲಿದ್ದ 62 ಸ್ಟೀಲ್ ಸ್ಪೂನ್ ಗಳನ್ನು ಹೊರತೆಗೆಯಲಾಗಿದೆ ಎನ್ನಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಚಾಮರಾಜನಗರ : ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತದ ವಿರುದ್ಧ ನಮ್ಮ ಭಾರತ್ ಜೋಡೋ ಯಾತ್ರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಸಮಾವೇಶದಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ , ಯಾರಿಂದಲೂ, ಯಾತ್ರೆಯನ್ನು ನಿಲ್ಲಿಸಲು ಆಗುವುದಿಲ್ಲ. ಭಾರತ್ ಜೋಡೋ ಉದ್ದೇಶ ಭಾಷಣ ಮಾಡುವುದಕ್ಕೆ ಅಲ್ಲ. ಬಿಜೆಪಿಯವರು ವಿಪಕ್ಷಗಳ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಜೊತೆ ಇಡೀ ದೇಶದ ಜನರು ಇದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ ನಿರುದ್ಯೋಗ ಇದೆ ಎಂದು ರಾಹುಲ್ ಗಾಂಧಿ ಹೇಳಿದರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಾವು ಪಾದಯಾತ್ರೆ ಮಾಡುತ್ತೇವೆ, ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತದ ವಿರುದ್ಧ ನಮ್ಮ ಪ್ರತಿಭಟನೆ ನಡೆಯುತ್ತದೆ, ಈ ಪಾದಯಾತ್ರೆಯಲ್ಲಿ ಯಾವುದೇ ದ್ವೇಷ, ಹಿಂಸೆ ಇಲ್ಲ, ಎಲ್ಲಾ ಧರ್ಮದ ಜನರು ಇದರಲ್ಲಿ ಭಾಗಿಯಾಗಿದ್ದಾರೆ. ಯಾರಿಂದ ಕೂಡ ಈ ಜೋಡೋ ಯಾತ್ರೆ ನಿಲ್ಲಿಸಲು ಆಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.…

Read More

ಮೈಸೂರಿನ ಸಿಸಿಬಿ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕುಖ್ಯಾತ 10 ಮಂದಿ ಸರಗಳ್ಳರನ್ನ ಬಂಧಿಸಿದ್ದಾರೆ. ಮೈಸೂರು ಮತ್ತು ಚಾಮರಾಜನಗರದ ಒಟ್ಟು 10 ಸರಗಳ್ಳರನ್ನ ಹೆಡೆಮುರಿ ಕಟ್ಟಲಾಗಿದೆ. ಬಂಧಿತರಿಂದ ಸುಮಾರು 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. 1ಕೆ.ಜಿ ತೂಕದ 25 ಚಿನ್ನದ ಸರಗಳು, ಇತರೆ ಚಿನ್ನಾಭರಣಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನಲ್ಲಿ ಸರಗಳ್ಳತ ಆಗುತ್ತಿದ್ದ ಹಿನ್ನಲೆ. ವಿಶೇಷ ತಂಡ ರಚಿಸಿ ಪೋಲಿಸರು ಕಾರ್ಯಾಚರಣೆ ನಡೆಸಿದ್ದರು. ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಒಟ್ಟು ಸುಮಾರು ೨೫ ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಖದೀಮರು ಭಾಗಿಯಾಗಿದ್ದರು ಎಂದು ಸುದ್ದಿಗೋಷ್ಠಿಯಲ್ಲಿ ಮೈಸೂರು ನಗರ ಪೋಲಿಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು ಸೆಪ್ಟಂಬರ್ 30: ಉದ್ಯಾನ ನಗರಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಬ್ಬನ್ ಪಾರ್ಕ್ ಮುಂದಿನ ನವೆಂಬರ್ ತಿಂಗಳಲ್ಲಿ ಸಾರ್ವಜನಿಕರಿಗೆ ಹೊಸ ಅನುಭವ ನೀಡಲು ತಯಾರಾಗಿದೆ. ಕಬ್ಬನ್ ಉದ್ಯಾನದ ಸುಮಾರು 100ಎಕರೆ ವಿಸ್ತೀರ್ಣವನ್ನು ಅಭಿವೃದ್ಧಿಪಡಿಸಲು ಈ ಹಿಂದೆಯೆ ಯೋಜಿಸಲಾಗಿತ್ತು. ಅದಕ್ಕಾಗಿ ಒಟ್ಟು ಸುಮಾರು 34 ಕೋಟಿ ರು ವ್ಯಯಿಸಿ ಅನೇಕ ಕಾಮಗಾರಿ ಕೈಗೊಳ್ಳಲಾಗಿತ್ತು. ಇದೀಗ ಅವೆಲ್ಲ ಕಾಮಗಾರಿ ಯೋಜನೆಗಳು ಅಂತಿಮ ಹಂತಕ್ಕೆ ಬಂದಿದ್ದು, ನವೆಂಬರ್‌ನಲ್ಲಿ ಹೊಸ ರೂಪದಲ್ಲಿ ಉದ್ಯಾನವು ಎಲ್ಲರನ್ನು ಸೆಳೆಯಲಿದೆ. ಉದ್ಯಾನದ ಹಸಿರನ್ನು ಹೆಚ್ಚಿಸಲು, ನಿತ್ಯ ವಾಯುವಿಹಾರ ಇನ್ನಿತರ ಕಾರಣಗಳಿಗೆ ಉದ್ಯಾನಕ್ಕೆ ಬರುವ ಜನರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ನೂರು ಎಕರೆ ಪ್ರದೇಶದ ಬಳಕೆ ಮಾಡಿಕೊಳ್ಳಲಾಗಿದೆ. ಉದ್ಯಾನ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ನಗರದಲ್ಲಿರುವ ಅತ್ಯಂತ ಹಳೆಯ ಸುಮಾರು 9,000 ಕ್ಕೂ ಅಧಿಕ ಮರಗಳನ್ನು ಮ್ಯಾಪಿಂಗ್ ಮತ್ತು ಜಿಯೋ ಟ್ಯಾಗ್ ಮೂಲಕ ಗುರುತಿಸುವ ಅಭಿಯಾನ ಕೈಗೊಂಡಿದ್ದಾರೆ. ಈಗಾಗಲೇ ಕಬ್ಬನ್ ಉದ್ಯಾನದ ಹಸಿರನ್ನು ಇನ್ನಷ್ಟು ಹೆಚ್ಚಿಸುವ…

Read More

ಚಾಮರಾಜನಗರ : ದೇಶಾದ್ಯಂತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ ಜಿಲ್ಲೆ ರಚನೆಗೊಂಡು 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಈ ಭಾಗದಲ್ಲಿ ದನಕರುಗಳಿಗೆ ಗಂಟು ರೋಗ ಕಂಡುಬಂದಿದೆ. ಗಂಟುರೋಗ ಹರಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಅದಕ್ಕೆ ಈಗಾಗಲೇ ವಿಶೇಷ ತಂಡವನ್ನು ಕಳಿಸಲಾಗುವುದು ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More