Subscribe to Updates
Get the latest creative news from FooBar about art, design and business.
- ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
- ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
- ತುಮಕೂರು | ಆರ್ ಎಸ್ ಎಸ್ ನಿಷೇಧಿಸಲು ಡಿಎಸ್ ಎಸ್ ಆಗ್ರಹ
- ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
- ಮನೆ–ಮನೆಗೆ ಪೊಲೀಸ್: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
- ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್
- ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
- ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
Author: admin
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಈ ಬಾರಿ ಗುಮ್ಮಟನಗರಿ ವಿಜಯಪುರದಲ್ಲಿ ನಡೆಯಲಿದ್ದು, ಸಮ್ಮೇಳನದ ಲಾಂಛನವನ್ನು ಸೆ.30(ನಾಳೆ) ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅನಾವರಣ ಮಾಡಲಿದ್ದಾರೆ. ವಿಜಯಪುರದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳು, ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಚೂರಿ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ. ವಿಜಯಪುರ ಜಿಲ್ಲೆಯಾಗಿ ರೂಪುಗೊಂಡ ಮೇಲೆ ಇದೇ ಪ್ರಪ್ರಥಮ ಬಾರಿಗೆ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗುತ್ತಿದೆ. ಕಳೆದ ಬಾರಿ ಕಲಬುರಗಿಯಲ್ಲಿ ರಾಜ್ಯ ಸಮ್ಮೇಳನ ನಡೆದ ಬಳಿಕ ಮತ್ತೊಂದು ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ಅದೂ, ಗಡಿ ಜಿಲ್ಲೆಯಲ್ಲಿ ಕೆಯುಡಬ್ಲ್ಯೂಜೆ ರಾಜ್ಯ ಸಮ್ಮೇಳನ ಆಯೋಜಿಸಿರುವುದು ವಿಶೇಷ. ಆಲಮಟ್ಟಿ ಜಲಾಶಯ ಹೊಂದಿರುವ, ದ್ರಾಕ್ಷಿ ಬೀಡಾಗಿರುವ, ಗೋಳಗುಮ್ಮಟ ಖ್ಯಾತಿಯ ವಿಜಯಪುರ ನೆಲದ ಸೊಗಡನ್ನು ಒಳಗೊಂಡಂತೆ ರಾಜ್ಯ ಪತ್ರಕರ್ತರ ಸಮ್ಮೇಳನ ಲಾಂಛನವನ್ನು ಚಿತ್ರಕಲಾವಿದ ಮಂಜುನಾಥ ಮಾನೆ ಅವರು…
ನವದೆಹಲಿ, ಸೆಪ್ಟೆಂಬರ್ 29: ಅಸ್ಸಾಂನ ಧುಬ್ರಿ ಜಿಲ್ಲೆಯ ಬ್ರಹ್ಮಪುತ್ರ ನದಿಯಲ್ಲಿ ಸುಮಾರು 100 ಮಂದಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಿದೆ. ಈ ವೇಳೆ ಸರ್ಕಾರಿ ಅಧಿಕಾರಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವರು ನಾಪತ್ತೆಯಾಗಿದ್ದಾರೆ. ದೋಣಿಯಲ್ಲಿ 10 ಮೋಟರ್‌ಸೈಕಲ್‌ಗಳನ್ನು ತೆಗೆದುಕೊಂಡು ಹೋಗುತ್ತಿರುವುದೇ ಅಪಘಾತಕ್ಕೆ ಕಾರಣವಾಯಿತು ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ದೋಣಿ ಮುಳುಗಡೆ ಘಟನೆ ಕುರಿತು ತಿಳಿಯುತ್ತಿದ್ದಂತೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಸ್ಸಾಂ ಧುಬ್ರಿ ಟೌನ್‌ನಿಂದ ಸುಮಾರು 3 ಕಿಮೀ ದೂರದಲ್ಲಿರುವ ಅದಬರಿ ಎಂಬಲ್ಲಿನ ಸೇತುವೆಗೆ ದೋಣಿ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ, ಇದುವರೆಗೆ 15 ಜನರನ್ನು ರಕ್ಷಿಸಲಾಗಿದೆ. ಇದೇ ದೋಣಿಯಲ್ಲಿ ಶಾಲಾ ಮಕ್ಕಳೂ ಸಹ ಇದ್ದು, ಇದುವರೆಗೂ ಯಾವುದೇ ವಿದ್ಯಾರ್ಥಿಯನ್ನು ರಕ್ಷಿಸಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಧುಬ್ರಿ ಸರ್ಕಲ್ ಆಫಿಸರ್ ಸಂಜು ದಾಸ್ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳು ಸಮೀಕ್ಷೆಗಾಗಿ ದೋಣಿಯಲ್ಲಿ ಸಾಗುತ್ತಿದ್ದರು. ಭೂ ದಾಖಲೆ ಅಧಿಕಾರಿ ಮತ್ತು ಕಚೇರಿ…
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಜ್ಯೋತಿಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬೆಳಗಿಸಿದರು. ಈ ವೇಳೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕ್ರೀಡಾಜ್ಯೋತಿ ಬೆಳಗಿಸಲಾಯಿತು. ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲ್ಲಿಕ್, ಕ್ರೀಡಾ ಸಚಿವರಾದ ನಾರಾಯಣಗೌಡ ಅವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ ಎಂದರು. ರಾಜ್ಯದ ನಾನಾ ಜಿಲ್ಲೆಗಳಿಂದ ಸುಮಾರು 4500 ಕ್ರೀಡಾಪಟುಗಳು ಆಗಮಿಸಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು. ಶಾಸಕರಾದ ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ, ಕ್ರೀಡಾಪಟುಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಎಲ್ಲಾ ಮಹಿಳೆಯರು ಕಾನೂನು ಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ ಜಸ್ಟಿಸ್ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ವಿವಾಹಿತ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಹೇಳಿದೆ. ಮಹಿಳೆಯರು ಗರ್ಭಪಾತ ಹಕ್ಕು ಹೊಂದಿದ್ದಾರೆ ವಿವಾಹಿತ, ಅವಿವಾಹಿತ ಮಹಿಳೆಯರು ಹಕ್ಕು ಹೊಂದಿದ್ದಾರೆ. ಗರ್ಭಪಾತದ ಬಗ್ಗೆ ಅವರ ವೈಯಕ್ತಿಕ ತೀರ್ಮಾನ ಅಂತಿಮವಾದದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಗರ್ಭಪಾತ ವಿಚಾರದಲ್ಲಿ 3ನೇ ವ್ಯಕ್ತಿ ಹಸ್ತಕ್ಷೇಪ ಇರಬಾರದು ಈ ವಿಚಾರದಲ್ಲಿ ಮಹಿಳೆ ನಿರ್ಧಾರವೇ ಅಂತಿಮ. ವಿವಾಹಿತ ಅವಿವಾಹಿತರ ನಡುವೆ ವ್ಯತ್ಯಾಸ ಮಾಡುವ ಆಗಿಲ್ಲ. ಮಹಿಳೆಯರ ನಡುವೆ ವ್ಯತ್ಯಾಸ ಮಾಡುವ ಆಗಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ : ಕಾಂಗ್ರೆಸ್ ಪಕ್ಷದ ವತಿಯಿಂದ ಹಾಗೂ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೂಡೋ ಪಾದಯಾತ್ರೆಯ ನಮ್ಮ ರಾಜ್ಯದಲ್ಲಿ ಸರಿ ಸುಮಾರು 500 ಕಿ ಮೀ ನ ವರೆಗೆ ಪಾದಯಾತ್ರೆ ಇದ್ದು ಅದರ ಉದ್ದೇಶದಿಂದ ಮಾನ್ಯ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರನ್ನು ದಾವಣಗೆರೆ ಹಾಗೂ ಚಿತ್ರದುರ್ಗದ ಮಹಿಳಾ ಕಾಂಗ್ರೆಸನ ಉಸ್ತುವಾರಿಗಳಾಗಿ ಕೆಪಿಸಿಸಿ ಅಧ್ಯಕ್ಷರು ನೇಮಕ ಮಾಡಿದ್ದು ಅದರ ಪೂರ್ವಭಾವಿ ಸಭೆಯನ್ನು ಶಾಸಕಿ ಅಂಜಲಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಾಗೆ ಪಕ್ಷದ ಹಿರಿಯರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ತೆರಳಿ ಕುಶಲೋಪರಿ ವಿಚಾರಿಸಿ ಭಾರತ ಜೂಡೋ ಪಾದಯಾತ್ರೆಯ ಬಗ್ಗೆ ಚರ್ಚೆ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸವದತ್ತಿ/ರಾಮದುರ್ಗ: ಭಾರತ ಜೋಡೋ ಪಾದಯಾತ್ರೆ ಮೂಲಕ ಸುಭದ್ರ ದೇಶ ಕಟ್ಟುವ ಕಾಂಗ್ರೆಸ್ ನ ಮಹೋದ್ದೇಶ ಯಶಸ್ವಿಯಾಗಿ ಈಡೇರುವ ನಿಟ್ಟಿನಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕರೆಯಿತ್ತರು. ಸವದತ್ತಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ಭಾರತ ಜೋಡೋ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ತನ್ನದೇ ಆದ ಸಿದ್ಧಾಂತಗಳ ಮೂಲಕ ಈ ಪಾದಯಾತ್ರೆಯನ್ನು ಕೈಗೊಂಡಿದೆ. 70-80 ವರ್ಷಗಳಿಂದ ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಂತಹ ಕೊಡುಗೆಗಳನ್ನು ಜನರಿಗೆ ತಿಳಿಸುತ್ತಾ ದೇಶದ ಉದ್ದಗಲಕ್ಕೂರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಈ ಪಾದಯಾತ್ರೆ ಸಾಗುತ್ತಿದೆ. ಇದಕ್ಕೆ ಹೆಚ್ಚಿನ ಜನಬೆಂಬಲ ದೊರೆಯುವಂತೆ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಅವರು ಹೇಳಿದರು. ಸಭೆಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ, ಆರ್.ವಿ. ಪಾಟೀಲ, ಪಂಚನಗೌಡ ದ್ಯಾಮನಗೌಡರ, ವಿನಯ ನಾವಲಗಟ್ಟಿ, ದಯಾನಂದ ಪಾಟೀಲ, ಡಿ.ಡಿ. ಟೋಪೋಜಿ, ಮಹಾಂತೇಶ ಮತ್ತಿಕೊಪ್ಪ, ವಿಶ್ವಾಸ ವೈದ್ಯ, ಶಿವಾ ಶಿಂತ್ರಿ, ಲಕ್ಕಪ್ಪ ಸವದತ್ತಿ, ಲಕ್ಕನ್ನವರ, ಕಲ್ಪನಾ ಜೋಶಿ ಹಾಗೂ ಪಕ್ಷದ ಹಿರಿಯರು…
ಬೆಳಗಾವಿ : ಜಿಲ್ಲಾ ಅಲ್ಪ ಸಂಖ್ಯಾತ ಕಾಂಗ್ರೆಸ್ ವತಿಯಿಂದ ಶಹಿದ್ ಭಗತ್ ಸಿಂಗ್ ಜಯಂತಿ ಆಚರಣೆ ಮಾಡಲಾಯಿತು ಬಳಿಕ ನಗರದ ತಿಲಕವಾಡಿಯಿಂದ ಕಾಂಗ್ರೆಸ್ ಭವನದವರೆಗೆ ಬೈಕ್ ರೈಲಿ ಮಾಡಲಾಯಿತು . ನಂತರ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಜಿಲ್ಲಾ ಅಧ್ಯಕ್ಷರಾದ ಇಮ್ರಾನ್ ತಿಪ್ಪೇಕ ಮಾತನಾಡಿದ ಅವರು ಭಗತ್ ಸಿಂಗ್ ಅವರ ದೇಶಭಕ್ತಿ ನಮ್ಮೆಲ್ಲರಿಗೂ ಆದರ್ಶ ಮತ್ತು ಮಾರದರ್ಶಕವಾಗಿದೆ. ಆದ್ದರಿಂದ ಭಗತ್ ಸಿಂಗ್ ಈ ದೇಶದ ಸರ್ವ ಶ್ರೇಷ್ಠ ಸ್ವತಂತ್ರ ಹೋರಾಟಗಾರರಾಗಿದ್ದಾರೆ ಭಾರತದ ಅಖಂಡತೆ, ಕೋಮ ಸೌಹಾರ್ದತೆಯ ಪ್ರತಿಕವಾಗಿದಾರೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತ ಉಪಾಧ್ಯಕ್ಷರಾದ ವೀಕಿ ಸಿಂಗ್ ಹಾಜಿ ಮುಸಗೊರಿಖಾನ್ ಡಿಸಿಸಿ ವೈಸ್ ಚೇರ್ಮನ್, ತಬ್ಬಸು ಮುಲ್ಲಾ ಡಿ ಸಿ ಸಿ ಉಪ ಅಧ್ಯಕ್ಷ ಖಾದಿರ್, ಡಿ ಸಿ ಸಿ ವೈಸ್ ಚೇರ್ಮನ್ ಅಕ್ಬರ್ ಸೇಕರ್, ಡಿಸಿಸಿ ವೈಸ್ ಚೇರ್ಮನ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು : 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಮುಂದಿನ ಆದೇಶದವರೆಗೆ ಪಿಎಸ್‌ಐ ಮರುಪರೀಕ್ಷೆ ದಿನಾಂಕ ಪ್ರಕಟಿಸಬಾರದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಮರುಪರೀಕ್ಷೆ ರದ್ದು ಕೋರಿ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ಮೇಲೆ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ದಿನೇ ದಿನೇ ಅಕ್ರಮದಲ್ಲಿ ಪಾಲ್ಗೊಂಡವರ ಸಂಖ್ಯೆ ಹೆಚ್ಚಾಗೆ ಸಿಐಡಿ ತನಿಖೆಯಿಂದ ಹೊರಬೀಳುತ್ತಿದೆ. ಈ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಮರುಪರೀಕ್ಷೆಗೆ ದಿನಾಂಕವನ್ನು ಶೀಘ್ರದಲ್ಲೇ ನಿಗದಿಮಾಡಿ, ಪ್ರಕಟಿಸಲಾಗುವುದು ಎಂದು ಹೇಳಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಆಕಾಲಿಕ ನಿಧನದಿಂದ ತೆರವಾಗಿದ್ದ ಹುದ್ದೆಗೆ 2021 ರ ಮೇ 31 ರಂದು ಸೇನೆಯಿಂದ ನಿವೃತ್ತರಾಗಿದ್ದ ಚವ್ಹಾಣ್ ಅವರನ್ನು ನೇಮಕ ಮಾಡಲಾಗಿದೆ. ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರನ್ನು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ ಸರ್ಕಾರ ನೇಮಿಸಿದೆ. ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮತ್ತು ಮುಂದಿನ ಆದೇಶದವರೆಗೆ ಮಿಲಿಟರಿ ವ್ಯವಹಾರಗಳ ಇಲಾಖೆ ಭಾರತ ಸರ್ಕಾರದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಾರೆ. ಸುಮಾರು 40 ವರ್ಷಗಳ ವೃತ್ತಿಜೀವನದಲ್ಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಹಲವಾರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy