Author: admin

ದೇಶಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು ರಾಷ್ಟ್ರರಾಜಧಾನಿ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದರು.ಧ್ವಜಾರೋಹಣದಲ್ಲಿ ಮುಖ್ಯ ಅತಿಥಿ ಈಜಿಫ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ , ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾದರು. ಧ್ವಜಾರೋಹಣ ನೆರವೇರಿಸಿದ ಬಳಿಕ ರಾಷ್ಟ್ರಪತಿಗಳಿಗೆ ಮೂರು ಸೇನಾಪಡೆಗಳಿಂದ ಗೌರವವಂದನೆ ಸಲ್ಲಿಸಲಾಯಿತು. ವಿವಿಧ ಸೇನಾಪಡೆಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು. ಇದೇ ಮೊದಲ ಬಾರಿಗೆ ಈಜಿಪ್ಟ್ ನ 144 ಯೋಧರು ಪರೇಡ್ ನಲ್ಲಿ ಪಾಲ್ಗೊಂಡಿದ್ದರು. 61 ಅಶ್ವದಳಗಳು , ಐದು ರೆಜಿಮೆಂಟ್ ನಿಂದ ಪಥ ಸಂಚಲನ ನಡೆಯಿತು. ಪಂಜಾಬ್ ರೆಜಿಮೆಂಟ್ ಬಿಹಾರ ರೆಜಿಮೆಂಟ್ ಗೋರ್ಖಾ ರೆಜಿಮೆಂಟ್, ಏರ್ ಮಿಸೈಲ್, ಆಕಾಶ್ ಮಿಸೈಲ್ ತಂಡ ಸೇರಿ ವಿವಿಧ ಸೇನಾಪಡೆಗಳು ಪಥಸಂಚಲನದಲ್ಲಿ ಭಾಗಿಯಾದವು. 23 ಸ್ತಬ್ದಚಿತ್ರಗಳು ಪ್ರದರ್ಶನಗೊಳ್ಳಲಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವಾಕ್ಸಮರ ನಡೆದಿದೆ. ತಮ್ಮ ಮೇಲೆ ಸಿಬಿಐ ತನಿಖೆ ಮಾಡಿಸುತ್ತೇನೆ ಎಂದು ಹೇಳಿದ್ದ ರಮೇಶ್ ಜಾರಕಿಹೊಳಿಗೆ ಡಿ. ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..?, ನಮ್ಮ ಕಾಂಗ್ರೆಸ್ ಪಕ್ಷ ಬೀಳಲು ಅವನೇ ಕಾರಣ, ಆಪರೇಷನ್ ಕಮಲ ಮಾಡಿ ಕಾಂಗ್ರೆಸ್ ಬೀಳಿಸಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದೇವೆ.ಸಿಎಂ ಮತ್ತು ಅವರ ತಂಡ ಭ್ರಷ್ಟಾಚಾರದ ಪಿತಾಮಹ ಎಂದು    ಡಿ.ಕೆ.ಶಿವಕುಮಾರ್  ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಸಿಡಿ ಪ್ರಕರಣದಲ್ಲಿ ಮಹಾನಾಯಕನ ಕೈವಾಡದ ಸಾಕ್ಷ್ಯ ಇದ್ದು, ಶೀಘ್ರದಲ್ಲಿಯೇ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿಸುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಗೆ ನನ್ನ ಹೆದರಿಕೆ ಇದೆ. ಇಂತಹ ನೂರು ಸಿಡಿ ಬರಲಿ ನಾನು ಗಟ್ಟಿ ಇದ್ದೇನೆ. ನನ್ನ ಕೇಸ್ ಬಿಡುವುದಿಲ್ಲ ಸಿಬಿಐಗೆ ಕೊಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸಿಡಿ ಕೇಸ್​ನಲ್ಲಿ ಮಹಾನಾಯಕನ ಕೈವಾಡ ಇರುವ ಸಾಕ್ಷ್ಯ ಇದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಜೊತೆ ಚರ್ಚಿಸಿದ್ದೇನೆ. ಸಿಡಿ ಕೇಸ್​ನ ಇಬ್ಬರು ಆರೋಪಿಗಳು ಶಿರಾ, ದೇವನಹಳ್ಳಿಯವರು. ದೇವನಹಳ್ಳಿಯವನ ಮನೆ ಮೇಲೆ ದಾಳಿಯಾದಾಗ 100 ಕ್ಕೂ ಹೆಚ್ಚು ಸಿಡಿಗಳು ಸಿಕ್ಕಿವೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಕುಡಿದ ಮತ್ತಿನಲ್ಲಿ ತಮ್ಮ ತನ್ನ ಅಣ್ಣನನ್ನೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಗೋಕಾಕ್ ತಾಲೂಕಿನ ವಾಲ್ಮೀಕಿ ನಗರದಲ್ಲಿ ನಡೆದಿದೆ. ಚೇತನ ರಮೇಶ್ ಪರಮಾರ್ (25) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಚೇತನ ದೊಡ್ಡಪ್ಪನ ಮಗ ತಿಲಕ ಪರಮಾರ್‌ (19) ಎಂಬಾತನೇ ಕೊಲೆಗಾರ. ಚೇತನ ಪರಮಾರ್‌ ಮತ್ತು ತಿಲಕ ಪರಮಾರ್‌ ವಾಲ್ಮೀಕಿ ನಗರದ ಒಂದೇ ಮನೆಯಲ್ಲಿ ವಾಸವಿದ್ದರು. ಆದರೆ, ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ‌ಇಬ್ಬರ ಮಧ್ಯೆ ವಾಗ್ವಾದ ಶುರುವಾಗಿ, ಅದು ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವಾಗಿದೆ. ಗೋಕಾಕ್ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ನಗರದಲ್ಲಿ ಆಯೋಜಿಸಲಾಗಿದ್ದ ಗಣರಾಜೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅವರು ನಿಮಿಷ ತಡವಾಗಿ ಆಗಮಿಸಿದ ಘಟನೆ ನಡೆದಿದೆ. ಸಾಮಾನ್ಯವಾಗಿ ಬೆಳಗ್ಗೆ 19 ಗಂಟೆಗೆ ಧ್ವಜಾರೋಹಣ ನಡೆಸಲಾಗುತ್ತಿದೆ. ಆದರೆ ಸಚಿವರು 5 ನಿಮಿಷ ತಡವಾಗಿ ಬಂದಿದ್ದು, ಬಳಿಕ ಗಡಿಬಿಡಿಯಲ್ಲಿ ವೇದಿಕೆ ಏರಿ ಧ್ವಜಾರೋಹಣ ನಡೆಸಿದರು. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ 9 ಗಂಟೆಗೆ ಧ್ವಜಾರೋಹಣ ನಡೆಯಬೇಕಿತ್ತು. ಸಚಿವರು 5 ನಿಮಿಷ ತಡವಾಗಿ ಆಗಮಿಸಿ ಬಳಿಕ ತರಾತುರಿಯಲ್ಲಿ ವೇದಿಕೆ ಏರಿ ಧ್ವಜಾರೋಹಣ ನಡೆಸಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಬೆಳಗಾವಿ : ಭಾರತ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಕೊಡಮಾಡುವ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಪ್ರದಾನ ಮಾಡಲಾಯಿತು. ಚುನಾವಣಾ ಆಯೋಗದ ವತಿಯಿಂದ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಬುಧವಾರ(ಜ.25) ಏರ್ಪಡಿಸಲಾಗಿದ್ದ “13ನೇ ರಾಷ್ಟ್ರೀಯ ಮತದಾರರ ದಿನಾಚರಣೆ” ಸಮಾರಂಭದಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ಕುಮಾರ್ ಮೀನಾ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾರತ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರ ಕಚೇರಿಯ ವತಿಯಿಂದ ಪ್ರಶಸ್ತಿಯನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ಕಾಗವಾಡ ತಹಶೀಲ್ದಾರರಾಗಿರುವ ರಾಜೇಶ್ ಬುರ್ಲಿ ಅವರಿಗೆ ಸಹಾಯಕ ಮತದಾರರ ನೋಂದಣಾಧಿಕಾರಿ ವಿಭಾಗದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಮತದಾರರ ನೋಂದಣಿ , ಪರಿಷ್ಕರಣೆ ಸೇರಿದಂತೆ ಒಟ್ಟಾರೆ ಚುನಾವಣಾ ಕಾರ್ಯವನ್ನು ಅತ್ಯುತ್ತಮವಾಗಿ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ವಿವಿಧ…

Read More

ಚಿಕ್ಕನಾಯಕನಹಳ್ಳಿ:  ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಅವರ ಕುರಿತು ಲಘುವಾಗಿ ಮಾತನಾಡುವುದನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ನಿಲ್ಲಿಸದಿದ್ದರೆ, ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತಾಲ್ಲೂಕು ಒಕ್ಕಲಿಗ ಸಮುದಾಯ ಎಚ್ಚರಿಕೆ ನೀಡಿದೆ. ಪಟ್ಟಣದಲ್ಲಿ ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಸಮಾಜದ ಅಧ್ಯಕ್ಷ ಹರ್ಷ  ದೇವೇಗೌಡರು ದೇಶದ ಪ್ರಧಾನಿ ಹುದ್ದೆ ಏರಿ ನಾಡಿಗೆ ಅನೇಕ ಕೊಡುಗೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ದೇವೇಗೌಡರ ಕುಟುಂಬ ಲೂಟಿ ಹೊಡೆದಿದ್ದರೆ, ಅಧಿಕಾರದಲ್ಲಿದ್ದರೂ ಯಾಕೆ ಬಿಜೆಪಿ ಸರ್ಕಾರ ತನಿಖೆ ನಡೆಸಿ ಶಿಸ್ತು ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿದ ಅವರು,  ಮುಂದಿನ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ಅವರನ್ನು ಇಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಮಾಧುಸ್ವಾಮಿ ಅವರು ಯಾರನ್ನೂ  ಬೆಳೆಸಿಲ್ಲ, ಹೇಳಿದನ್ನು ಕೇಳುವವರನ್ನು ಜೊತೆಗೆ ಇಟ್ಟುಕೊಂಡಿದ್ದಾರೆ. ವಿದ್ಯಾವಂತರು ಅವರ ಜೊತೆಯಲ್ಲಿಲ್ಲ ಒಕ್ಕಲಿಗರು 40 ಸಾವಿರ ಜನ ಸಂಖ್ಯೆ ಕ್ಷೇತ್ರದಲ್ಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮಾಧುಸ್ವಾಮಿಯನ್ನು 3ನೇ ಸ್ಥಾನಕ್ಕೆ ಇಳಿಸುವುದಾಗಿ ಅವರು ಎಚ್ಚರಿಕೆ ನೀಡಿದರು.…

Read More

ತಿಪಟೂರು:  ಪೆಟ್ರೋಲ್ ಬಂಕ್ ವೊಂದರ ನೆಲದಡಿಯ ಇಂಧನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತಮಿಳುನಾಡಿನ ವೇಲೂರಿನ ರವಿ ಹಾಗೂ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ನಾಗರಾಜು(45) ಎಂಬವರು ಮೃತಪಟ್ಟ ಕಾರ್ಮಿಕರು ಎಂದು ವರದಿಯಾಗಿದೆ. ಮಂಗಳವಾರ ಸಂಜೆ ಇಲ್ಲಿನ ಪೆಟ್ರೋಲ್ ಬಂಕ್ ವೊಂದರ ನೆಲದಡಿಯ ಇಂಧನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ತುಮಕೂರು:  ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ತುಮಕೂರು—ಕೊರಟಗೆರೆ ರಸ್ತೆಯ ಜೆಟ್ಟಿ ಅಗ್ರಹಾರದ ಬಳಿ ಬುಧವಾರ ಸಂಭವಿಸಿದೆ. ಮಧುಗಿರಿ ತಾಲ್ಲೂಕಿನ ಕೊಡಗಾರಹಳ್ಳಿಯ ಗುಲ್ಶೀರ್(50) ಹಾಗೂ ಮಧುಗಿರಿ ಪಟ್ಟಣದ ಜರೀನಾ(42) ಎಂಬವರು ಮೃತಪಟ್ಟ ಮಹಿಳೆಯರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಕೊರಟಗೆರೆ ಕಡೆಯಿಂದ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಜಖಂಗೊಂಡಿವೆ, ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ವಿವಾದದ ನಡುವೆಯೇ ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ಮೋದಿ ಪ್ರಶ್ನೆ’ಯ ಎರಡನೇ ಭಾಗ ಬಿಡುಗಡೆಯಾಗಿದೆ. ಕೇಂದ್ರ ಸರ್ಕಾರದ ಆಕ್ಷೇಪಗಳನ್ನು ಮೆಟ್ಟಿನಿಂತು ಬಿಬಿಸಿ ಎರಡನೇ ಭಾಗವನ್ನು ಬಿಡುಗಡೆ ಮಾಡುತ್ತಿದೆ. 2019 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಸೇರಿದಂತೆ ವಿವಾದಾತ್ಮಕ ನೀತಿಗಳನ್ನು ಸಾಕ್ಷ್ಯಚಿತ್ರದಲ್ಲಿ ಉಲ್ಲೇಖಿಸಲಾಗಿದೆ. ಭಾರತೀಯ ಸಂವಿಧಾನದ 370 ನೇ ವಿಧಿಯಡಿಯಲ್ಲಿ ಖಾತರಿಪಡಿಸಲಾದ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕುವುದು, ಪೌರತ್ವ ಕಾಯಿದೆ ಮತ್ತು ಗುಂಪು ದಾಳಿಯ ವರದಿಗಳನ್ನು ಎರಡನೇ ಭಾಗದಲ್ಲಿ ಉಲ್ಲೇಖಿಸಲಾಗಿದೆ.ಗುಜರಾತ್ ಗಲಭೆಗಳನ್ನು ವಿವರಿಸುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರದ ಮೊದಲ ಭಾಗ, ದೇಶದಲ್ಲಿ ಭಾರೀ ಚರ್ಚೆ ಮತ್ತು ಪ್ರತಿಭಟನೆಗಳಿಗೆ ಕಾರಣವಾಯಿತು.ಇದರ ಮಧ್ಯೆ, ಎರಡನೇ ಭಾಗವನ್ನು ಬಿಬಿಸಿ ಪ್ರಸಾರ ಮಾಡಿದೆ. ಸಾಕ್ಷ್ಯಚಿತ್ರ ಬಿಡುಗಡೆಯಾದಾಗಿನಿಂದ ಬ್ರಿಟಿಷ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಜ್ಯಾಕ್ ಸ್ಟ್ರಾ ತಮ್ಮ ಸ್ಥಾನಕ್ಕೆ ನಿಂತಿದ್ದಾರೆ. ಸಾಕ್ಷ್ಯಚಿತ್ರವನ್ನು ಹಿಂಪಡೆಯುವುದಿಲ್ಲ ಎಂಬ ನಿಲುವನ್ನು ಬಿಬಿಸಿ ಸಹ ಹೊಂದಿದೆ.ಮೊದಲ ಭಾಗದ ವಿರುದ್ಧ ಕೇಂದ್ರ ಸರ್ಕಾರವು ದನಿಗೂಡಿಸಿತು ಮತ್ತು ನಂತರ ಯೂಟ್ಯೂಬ್ ಮತ್ತು…

Read More