Author: admin

ಗೋವಾ ಪೊಲೀಸರು ಗೂಡ್ಸ್​ ವಾಹನಗಳು ರಾಜ್ಯಕ್ಕೆ ಪ್ರವೇಶಿಸಿದಂತೆ ಕರ್ನಾಟಕ-ಗೋವಾ ಗಡಿಯಲ್ಲಿ ತಡೆಯುತ್ತಿದ್ದಾರೆ. ಹೀಗಾಗಿ ಕರ್ನಾಟಕ-ಗೋವಾ ಗಡಿಯಲ್ಲಿ ಲಾರಿಗಳು ಸಾಲುಗಟ್ಟಿ ನಿಂತಿವೆ. ಖಾನಾಪುರ ತಾಲೂಕಿನ ಕಣಕುಂಬಿ ಗ್ರಾಮ ಮತ್ತು ಗೋವಾದ ಚೋರ್ಲಾ ಬಳಿ ಲಾರಿಗಳು ನಿಂತಿವೆ. ಚೋರ್ಲಾ ಘಾಟ್​ನಲ್ಲಿ ಗೂಡ್ಸ್​ ಲಾರಿ ಪ್ರವೇಶಕ್ಕೆ ನಿಷೇಧ ವಿಧಿಸಿದ್ದಕ್ಕೆ ಗೋವಾ ಪೊಲೀಸರ ವಿರುದ್ಧ ಲಾರಿ ಮಾಲಿಕರು ತೀರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 21ರಂದು ಅಧಿಸೂಚನೆ ಹೊರಡಿಸಿರುವ ಗೋವಾ ಉತ್ತರ ಜಿಲ್ಲಾಧಿಕಾರಿ, ಚೋರ್ಲಾ ಘಾಟ್ ಮೂಲಕ ಗೋವಾ ಪ್ರವೇಶಿಸಲು ಭಾರೀ ಲಾರಿಗಳಿಗೆ 2023ರ ಮಾರ್ಚ್ 19ರವರೆಗೆ ಸಂಚಾರ ನಿಷೇಧಿಸಿದ್ದಾರೆ. ಗೋವಾಗೆ ಸಂಪರ್ಕ ಕಲ್ಪಿಸುವ ರಾಮನಗರ ಗೋವಾ ರಸ್ತೆ ಕಳೆದ ಮೂರು ವರ್ಷಗಳಿಂದ ಬಂದ್ ಆಗಿದೆ. ಹೀಗಾಗಿ ಗೋವಾ ರಾಜ್ಯಕ್ಕೆ ಹೆಚ್ಚಿನ‌ ಪ್ರಮಾಣದಲ್ಲಿ ಚೋರ್ಲಾ ಘಾಟ್ ಮೂಲಕ ಗೂಡ್ಸ್ ವಾಹನಗಳು ತೆರಳುತ್ತವೆ. ಇದರಿಂದ ಕೇರಿ-ಬೆಳಗಾವಿ ರಾಜ್ಯ ಹೆದ್ದಾರಿ 01ರಲ್ಲಿ ಭಾರಿ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದೆ‌. ಪರಿಣಾಮ, ಉತ್ತರ ಗೋವಾ ಟ್ರಾಫಿಕ್ ಎಸ್‌ಪಿ ಮನವಿ ಮೇರೆಗೆ‌ ಉತ್ತರ ಗೋವಾದ ಡಿಸಿ…

Read More

ಶಿವಮೊಗ್ಗ : ರಾಜ್ಯಾದ್ಯಂತ ಪಿಎಫ್ ಐ ಮುಖಂಡರ ಮನೆಗಳ ಪೊಲೀಸರು ದಾಳಿ ಮಾಡಿ 70 ಕ್ಕೂಹೆಚ್ಚು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ , ಕೇಂದ್ರ ಸರ್ಕಾರ ಪಿಎಫ್ ಐ ನಿಷೇಧ ಮಾಡಲು ಮುಂದಾಗಿದೆ. ಇದನ್ನು ಕೇಂದ್ರ ಸರ್ಕಾರ ಮೊದಲೇ ಮಾಡಬೇಕಿತ್ತು. ಸಮಗ್ರ ತನಿಖೆ ಮಾಡಿದ ಮೇಲೆ ಎಸ್ ಡಿಪಿಐ,ಪಿಎಫ್‌ಐ ಸಂಘಟನೆಗಳ ಷಡ್ಯಂತ್ರ ಬಯಲಾಗಲಿದೆ ಎಂದರು. ಇನ್ನು ಪೇ ಸಿಎಂ ಕ್ಯಾಂಪನ್ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಈಗಾಗಲೇ ನಾವು ಕೇಸ್ ದಾಖಲು ಮಾಡಿದ್ದೇವೆ. ಸಿದ್ದರಾಮಯ್ಯ ವಿಪಕ್ಷ ನಾಯಕರಂತೆ ವರ್ತಿಸಲಿ,ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದಕ್ಕ ಕಾಂಗ್ರೆಸ್ ನಾಯಕರು ನಾಡಿನ ಜನತೆಗೆ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸಿಐಡಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ರಾಜ್ಯ ಸಮಗ್ರ ಶಿಕ್ಷಣ ಅಭಿಯಾನದ ನಿರ್ದೇಶಕಿ ಸೇರಿದಂತೆ ಶಿಕ್ಷಣ ಇಲಾಖೆಯ ಐವರು ಹಿರಿಯ ಅಧಿಕಾರಿಗಳು ಹಾಗೂ ಓರ್ವ ಕಂಪ್ಯೂಟರ್ ಆಪರೇಟರ್ ನನ್ನು ಬಂಧಿಸಲಾಗಿದೆ. ರಾಜ್ಯ ಸಮಗ್ರ ಶಿಕ್ಷಣ ಅಭಿಯಾನದ ನಿರ್ದೇಶಕಿ ಗೀತಾ, ಪಠ್ಯ ಪುಸ್ತಕ ವಿಭಾಗದ ನಿರ್ದೇಶಕ ಮಾದೇಗೌಡ, ನಿವೃತ್ತ ಜಂಟಿ ನಿರ್ದೇಶಕ ಬಸವರಾಜ್, ರತ್ನಯ್ಯ, ಶಿವಕುಮಾರ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ವಿಭಾಗದ ಕಚೇರಿ ಕಂಪ್ಯೂಟರ್ ಆಪರೇಟರ್ ನರಸಿಂಹರಾವ್ ಬಂಧಿಸಲಾಗಿದೆ. ಆರೋಪಿಗಳನ್ನು ಸಿಐಡಿ ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಹಿನ್ನೆಲೆ ಸಿಐಡಿ ಪೊಲೀಸರು ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಬಂಧಿತ ಐವರು ಆರೋಪಿಗಳು ಅಕ್ಟೋಬರ್ 1 ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಬೆಳಗಾವಿ: ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು, ಚೂರಿ ಇರಿತದಿಂದ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಕ್ಯಾಂಪ್ ಪ್ರದೇಶದಲ್ಲಿ ನಡೆದಿದೆ. ಕ್ಯಾಂಪ್‌ ಪ್ರದೇಶದ ನಿವಾಸಿ ಫರಾನ್‌ ಧಾರವಾಡಕರ (15) ಗಾಯಾಳು. ಈತ ಇಸ್ಲಾಮಿಯಾ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದು, ತನ್ನಿಬ್ಬರು ಸ್ನೇಹಿತರ ‌ಜತೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಂಬಾಭವಾನಿ ಮಂದಿರದ ಬಳಿ ಫರಾನ್ ಮೇಲೆ ಯುವಕರ ಗುಂಪು ದಾಳಿ ಮಾಡಿದೆ. ಈ ವೇಳೆ ನಡೆದ ಜಗಳದಲ್ಲಿ ಫರಾನ್‌ಗೆ ಚೂರಿಯಿಂದ ಇರಿಯುತ್ತಿದ್ದಂತೆ ಸ್ನೇಹಿತರಿಬ್ಬರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡಿರುವ ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತಿ ಕ್ಷೇತ್ರಗಳ ಮರು ವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮತ್ತೆ 12 ವಾರಗಳ ಕಾಲಾವಕಾಶ ನೀಡಿದೆ. ರಾಜ್ಯದ 31 ಜಿಲ್ಲಾಪಂಚಾಯತ್ ಮತ್ತು 239 ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಮುಂದಾಗಿರುವುದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿ ಹಂಗಾಮಿ ಮುಖ್ಯ ನ್ಯಾ.ಅಲೋಕ್ ಅರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮರು ವಿಂಗಡಣೆಗೆ ಆಯೋಗವು ಕಾಲಾವಕಾಶ ಕೋರಿದ್ದಕ್ಕೆ 12 ವಾರ ಸಮಯ ನೀಡುವಂತೆ…

Read More

ನವದೆಹಲಿ : 200 ಕೋಟಿ ರೂಪಾಯಿಗಳ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಗೆ ಪಟಿಯಾಲ ಹೌಸ್ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಟಿ ಜಾಕ್ವೆಲಿನ್’ಗೆ ಜಾಕ್ವೆಲಿನ್ ಅವರ ವಕೀಲರ ಕೋರಿಕೆಯ ಮೇರೆಗೆ 50,000 ರೂ.ಗಳ ಜಾಮೀನು ಬಾಂಡ್ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಇ.ಡಿ.ಯಿಂದ ಪ್ರತಿಕ್ರಿಯೆಯನ್ನು ಕೋರಿದರು ಮತ್ತು ಅವರಿಗೆ ಮಧ್ಯಂತರ ಜಾಮೀನು ನೀಡಲಾಯಿತು ಎಂದು ವರದಿ ಮಾಡಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಇ.ಡಿ.ಯಿಂದ ಪ್ರತಿಕ್ರಿಯೆಯನ್ನು ಕೋರಿದರು ಮತ್ತು ಅವರಿಗೆ ಮಧ್ಯಂತರ ಜಾಮೀನು ನೀಡಲಾಯಿತು ಎಂದು ವರದಿ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಹುಕೋಟಿ ರೂಪಾಯಿಗಳ ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದು ಖಚಿತ. ಹಗರಣದ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ಅವರ ಕಚೇರಿಗೆ ತಲುಪಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಪ್ರಧಾನಿ ಆವರು ಸಮಯ ಬಂದಾಗಲೆಲ್ಲ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಲೇ ಇದ್ದಾರೆ. 20% ಕಮೀಷನ್ ಬಗ್ಗೆ ಮೊದಲು ಮಾತನಾಡಿದ್ದೆ ಅವರು. ಈಗ ಅವರದೇ ಪಕ್ಷ ಅಧಿಕಾರದಲ್ಲಿ ಇರುವ ಕರ್ನಾಟಕದಲ್ಲಿ 100% ತಾಂಡವವಾಡುತ್ತಿದೆ. ಈಗ ಅವರು ಏನು ಹೇಳುತ್ತಾರೆ ಎನ್ನುವುದನ್ನು ನಾನು ಕಾದು ನೋಡುತ್ತೇನೆ ಎಂದರು ಕುಮಾರಸ್ವಾಮಿ. ನನ್ನ ಬಳಿ ಬಿಎಂಎಸ್ ಟ್ರಸ್ಟ್ ಅಕ್ರಮದ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ಅವರಿಗೆ ತಲುಪಿಸುತ್ತೇನೆ. ದಾಖಲೆಗಳ ಸಮೇತ ವಿಧಾನಸಭೆಯಲ್ಲಿ ದಾಖಲೆಗಳನ್ನ ಇಟ್ಟು ಮಾತನಾಡಿದರೂ ಬಿಜೆಪಿ ಸರಕಾರಕ್ಕೆ ತನಿಖೆ ಮಾಡಿಸುವ ಧೈರ್ಯ ಇಲ್ಲ. ತಾಕತ್ತು, ದಮ್ಮು ಎಂದೆಲ್ಲ ಮಾತನಾಡುವ…

Read More

ಬೀದರ್ : ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲಾದ ಘಟನೆ ಬೀದರ್ ತಾಲೂಕಿನ ಕಂಗಟಿ ಗ್ರಾಮದಲ್ಲಿ ನಡೆದಿದೆ. ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ನೀರು ಪಾಲಾಗಿದ್ದು, ಮೃತರನ್ನು ಸುನೀತಾ (32) ಪುತ್ರ ನಾಗಶೆಟ್ಟಿ (12) ತಾಯಿ ಆನಂದಾ (33) ಪುತ್ರ ಪ್ರಜ್ವಲ್ (14) ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ್ದಾರೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ನಾಡಿದ ಸಮಸ್ತ ಜನರಿಗೆ ದಸರಾ ಹಬ್ಬ ಶುಭಾಶಯಗಳನ್ನು ಕೋರಿದ್ದಾರೆ. ಈ ಬಾರಿ ದಸರಾ ಹಬ್ಬ ಅದ್ದೂರಿಯಿಂದ ನಡೆಯುತ್ತಿದೆ. ಈ ಬಾರಿ ಹಲವಾರು ವಿಶೇಷತೆಗಳಿಂದ ಕೂಡಿಗೆ. ಚಾಮುಂಡೇಶ್ವರಿ ನಾಡಲ್ಲಿ ಸಂವೃದ್ಧಿ ತರಲೆಂದು ಪ್ರಾರ್ಥನೆ ಮಾಡುತ್ತೇನೆ. ಹಲವು ಸವಾಲುಗಳನ್ನು ಸಮರ್ಥವಾಗಿ ಎದುರಿಸಿ, ಅಭಿವೃದ್ಧಿ ಸಾಧಿಸುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಪಿಎಫ್‌ಐ ಮುಖಂಡರ ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದ ಏಳು ಮಂದಿ ಪಿಎಫ್‌ಐ ಮುಖಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಿಎಫ್‌ಐ ಮಾಜಿ ಜಿಲ್ಲಾಧ್ಯಕ್ಷ ಜಖೀವುಲ್ಲಾ ಫೈಜಿ ಸೇರಿ ಏಳು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅದರಲ್ಲಿ ಓರ್ವನಿಗೆ ಅನಾರೋಗ್ಯ ಹಿನ್ನೆಲೆ ವಶಕ್ಕೆ ಪಡೆಯದೇ ಕೇವಲ ವಿಚಾರಣೆ ನಡೆಸಿದ್ದಾರೆ. ಎಸ್‌ಡಿಪಿಐ, ಪಿಎಫ್‌ಐ ಸಂಘಟನೆ ಜೊತೆಗೆ ಗುರುತಿಸಿಕೊಂಡಿದ್ದ 7 ಜನರನ್ನು ಪಡೆದಿದ್ದು, ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ ಮಹಾನಗರ ಪೊಲೀಸ್ ಉಪ ಆಯುಕ್ತ (ಡಿಸಿಪಿ) ರವೀಂದ್ರ ಗಡಾದಿ ನೇತೃತ್ವದ ತಂಡ ಇಂದು ಬೆಳ್ಳಂಬೆಳಗ್ಗೆ 4 ಗಂಟೆಗೆ ಪಿಎಫ್‌ಐ ಮುಖಂಡರ ಮನೆ ಮೇಲೆ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More