Subscribe to Updates
Get the latest creative news from FooBar about art, design and business.
- ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ
- ಪರಿಶಿಷ್ಟರ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
- ಜ.31ರವರೆಗೆ ರಸ್ತೆ ಸುರಕ್ಷಾ ಮಾಸಾಚರಣೆ ಅಭಿಯಾನ
- ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ
- ತುಮಕೂರು: 40 ವರ್ಷ ವಾಸವಿದ್ದರೂ ಸಿಗದ ಹಕ್ಕು ಪತ್ರ: ನಿವಾಸಿಗಳ ಆಕ್ರೋಶ
- ಹುಯಿಲ್ ದೊರೆ ನೂತನ ಗ್ರಾ.ಪಂ. ಕಟ್ಟಡ ಉದ್ಘಾಟನೆ: ಗ್ರಾಮ ಪಂಚಾಯ್ತಿಗಳೇ ಗ್ರಾಮಗಳ ಸರ್ಕಾರವಾಗಬೇಕು: ಶಾಸಕ ಟಿ.ಬಿ.ಜಯಚಂದ್ರ
- ತುಮಕೂರು: ಗಾಜಿನ ಮನೆಯಲ್ಲಿ ‘ಸಿರಿಧಾನ್ಯ ಖಾದ್ಯಗಳ’ ಘಮಲು!
- 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ: ಎಸ್ಪಿ ಅಶೋಕ್ ಗೆ ಪದೋನ್ನತಿ
Author: admin
ತುಮಕೂರು: ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಲಾರಸ್ ಬಯೋ ಕಾರ್ಖಾನೆಯಲ್ಲಿ ನಡೆದ ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟಕದ ಮಾಲೀಕರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ ತಿಳಿಸಿದ್ದಾರೆ. ಘಟಕದ ಸಂಪ್ ನಲ್ಲಿ ಉಸಿರುಕಟ್ಟಿ ಪ್ರತಾಪ್ ( 23), ವೆಂಕಟೇಶ್(32) ಮೃತ ಪಟ್ಟಿದ್ದರು. ಶಿರಾದ ರೂರು ಗ್ರಾಮದ ಮಂಜುನಾಥ್(42), ಯುವರಾಜ್ (32) ಅಸ್ವಸ್ಥಗೊಂಡಿದ್ದರು. ಮೃತಪಟ್ಟವರನ್ನು ಹಾಗೂ ಅಸ್ವಸ್ಥಗೊಂಡವರನ್ನು ಕಾರ್ಖಾನೆಯ ಸಿಬ್ಬಂದಿಗಳೇ ಪ್ರಥಮ ಚಿಕಿತ್ಸೆ ಕೊಡಿಸಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಪ್ರತಾಪ್ ಮತ್ತು ವೆಂಕಟೇಶ್ ಅವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಸರ್ಕಾರ ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ್ದರು ಎಂದು ಹೇಳಿದ್ದಾರೆ. ಈ ಪ್ರಕರಣದ ಸಂಬಂಧ ಕಾರ್ಖಾನೆಯ ಸಿಬ್ಬಂದಿ ಹಾಗೂ ಮಾಲೀಕರ ವಿರುದ್ಧ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನಲ್ಲಿ 2025–26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ಎಸ್ಸಿ., ಬಿ.ಸಿ.ಎ ಮತ್ತು ಬಿ.ಸಿ.ಎ((Data Science) ಪದವಿಗಳಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು B.Sc(PCM, PMCs, PME, CBZ, CZMB, CBBt, EMCs., ZBcBt., ZBcMb.), BCA ಹಾಗೂ BCA(Data Science) ಕೋರ್ಸುಗಳ ಪ್ರವೇಶಕ್ಕಾಗಿ ಜಾಲತಾಣ tumkuruniversity.ac.in ಅಥವಾ ucst.ac.in ನಲ್ಲಿ U.U.C.M.S.ಮೂಲಕ ಮೇ 19 ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಬಿ.ಸಿ.ಎ. ಕೋರ್ಸಿಗಾಗಿ ಜೂನ್ 6ರಂದು ಕಾಲೇಜು ಆವರಣದಲ್ಲಿ ಕೌನ್ಸಿಲಿಂಗ್ ನಡೆಯಲಿದೆ. ಜೂನ್ 2ರವರೆಗೆ ಸಲ್ಲಿಸಿರುವ ಅರ್ಜಿಗಳನ್ನು ಮಾತ್ರ ಕೌನ್ಸಿಲಿಂಗ್ಗೆ ಪರಿಗಣಿಸಲಾಗುವುದು. ಬಿ.ಎಸ್ಸಿ. ಕೋರ್ಸಿಗಾಗಿ ಜೂನ್ 10ರಂದು ಕಾಲೇಜು ಆವರಣದಲ್ಲಿ ಕೌನ್ಸಿಲಿಂಗ್ ನಡೆಯಲಿದ್ದು, ಜೂನ್ 5ರವರೆಗೆ ಸಲ್ಲಿಸಿರುವ ಅರ್ಜಿಗಳನ್ನು ಮಾತ್ರ ಕೌನ್ಸಿಲಿಂಗ್ಗೆ ಪರಿಗಣಿಸಲಾಗುವುದು. ಆನ್ಲೈನ್ ಅರ್ಜಿ ಸಲ್ಲಿಸಿದ ಪ್ರತಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ( ಪ್ರಾಂಶುಪಾಲರ ಸಹಿಯೊಂದಿಗೆ), ಜಾತಿ/ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಇತ್ತೀಚಿನ ಒಂದು ಭಾವಚಿತ್ರ ಲಗತ್ತಿಸಿ ಕಾಲೇಜಿಗೆ…
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರ್ಸೋಲ್ಕೆಲ್ಲಿ ಇಂಡಿಯಾ ಪ್ರೈ.ಲಿ. .°.(Persolkelly India Pvt. Ltd ಹಾಗೂ ಶ್ರೀ ರಾಮ್ ಫಾರ್ಚೂನ್ (Shri Ram Fortune) ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮೇ 26ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಸಂದರ್ಶನವು ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನಡೆಯಲಿದ್ದು, ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ., ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಬಯೋಡೇಟಾದೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816–2278488, ಮೊ.ಸಂ.9071021143/ 9513136642ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಗುಬ್ಬಿ ತೋಟಗಾರಿಕೆ ಇಲಾಖೆಯು 2025–26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ತೋಟಗಾರಿಕಾ ರೈತರು ಹಾಗೂ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಿದೆ. ಬಾಳೆ, ಮಾವು, ಪಪ್ಪಾಯ ಹಾಗೂ ದಾಳಿಂಬೆ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಡ್ರ‍್ಯಾಗನ್, ಬೆಣ್ಣೆಹಣ್ಣು, ಹಲಸು, ಹುಣಸೆ ಹಣ್ಣಿನಂತಹ ಅಪ್ರಧಾನ ಹಣ್ಣಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಸುಗಂದರಾಜ, ಚೆಂಡುಹೂ, ಸೇವಂತಿಗೆ ಹಾಗೂ ಇತರೆ ಬಿಡಿ ಹೂವಿನ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಹೈಬ್ರಿಡ್ ತರಕಾರಿ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ಗೋಡಂಬಿ, ಕೋಕೊ, ಕಾಳುಮೆಣಸು ಬೆಳೆಗಳ ಹೊಸ ಪ್ರದೇಶ ವಿಸ್ತರಣೆ; ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣ; ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ಪ್ಲಾಸ್ಟಿಕ್ ಹೊದಿಕೆ, ದಾಳಿಂಬೆ ಬೆಳೆಗೆ ಪಕ್ಷಿ ನಿರೋಧಕ ಬಲೆ ಅಳವಡಿಕೆ, ಸಮಗ್ರ ಕೀಟ, ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ; ಕೋಯ್ಲೋತ್ತರ ನಿರ್ವಹಣೆ; ಪ್ಯಾಕ್‌ಹೌಸ್; ಪ್ರಾಥಮಿಕ ಸಂಸ್ಕರಣಾ ಘಟಕ; ಕಡಿಮೆ ವೆಚ್ಚದ ಈರುಳ್ಳಿ ಶೇಖರಣಾ ಘಟಕ; ಸ್ಟ್ಯಾಟಿಕ್ ಮೊಬೈಲ್ ವೆಂಡಿಂಗ್ ಕಾರ್ಟ್…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದ ವತಯಿಂದ ನಡೆಯುತ್ತಿರುವ ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಸಂಸ್ಕೃತ, ವೇದ, ಜ್ಯೋತಿಷ್ಯ ಮತ್ತು ವೀರಶೈವಾಗಮ ಪಾಠಶಾಲೆಗೆ 2025–26ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಾತಿಯು ಜೂನ್ 2 ರಿಂದ ಪ್ರಾರಂಭವಾಗಲಿದೆ ಎಂದು ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಾಠಶಾಲೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಪಾಠಶಾಲೆಯಲ್ಲಿ ಸಂಸ್ಕೃತ ಪ್ರಥಮ 1, 2, 3ನೇ ತರಗತಿ; ಸಂಸ್ಕೃತ ಕಾವ್ಯ 1, 2ನೇ ತರಗತಿ; ವೀರಶೈವ ವೇದ ಪ್ರಥಮ, ಪ್ರವೇಶ ಮೂಲ ತರಗತಿ; ವೀರಶೈವಾಗಮ ಪ್ರವರ, ಪ್ರವೀಣ ತರಗತಿ ಹಾಗೂ ಜ್ಯೋತಿಷ್ಯ ತರಗತಿಯನ್ನು ನಡೆಸಲಾಗುವುದು. ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಬೋಧಿಸಲಾಗುವುದು. ಆಸಕ್ತರು ಪಾಠಶಾಲೆಯ ಮುಖ್ಯೋಪಾಧ್ಯಾಯ(ಮೊ.ಸಂ.9731110045)ರನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಪಿಯುಸಿ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲ್ಲೂಕು ವ್ಯಾಪ್ತಿಯ ಸತ್ಯಮಂಗಲದ ಸಾರ್ವಜನಿಕ ಮಾದರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ; ಕುಣಿಗಲ್ ರಸ್ತೆ ಮೆಟ್ರಿಕ್ ನಂತರ ವೃತ್ತಿಪರ ಬಾಲಕರ ವಿದ್ಯಾರ್ಥಿನಿಲಯ; ಸೋಮೇಶ್ವರ ಬಡಾವಣೆ, ದಿಬ್ಬೂರು, ಗಾರ್ಡನ್‌ರಸ್ತೆ, ಕುಣಿಗಲ್ ರಸ್ತೆ ಹಾಗೂ ಕೋತಿತೋಪಿನಲ್ಲಿರುವ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ; ರೈಲ್ವೇಸ್ಟೇಷನ್ ರಸ್ತೆ, ಉಪ್ಪಾರಹಳ್ಳಿ, ಶಿರಾಗೇಟ್ ರಸ್ತೆಯ ಸಾಯಿ ಬಡಾವಣೆ, ಸರಸ್ವತಿಪುರಂ, ಶಿರಾಗೇಟ್ ಅರಳೀಮರದ ಪಾಳ್ಯದ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ; ರೈಲ್ವೇಸ್ಟೇಷನ್ ರಸ್ತೆ ಹಾಗೂ ಕುಣಿಗಲ್ ರಸ್ತೆಯ ಮೆಟ್ರಿಕ್ ನಂತರ ವೃತ್ತಿಪರ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರವರ್ಗ–1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2.50ಲಕ್ಷ ಹಾಗೂ ಪ್ರವರ್ಗ–2ಎ, 2ಬಿ,…
ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ ನಡೆದಿದೆ. ಇದೀಗ 31 ಗಂಟೆ ಕಾರ್ಯಾಚರಣೆ ಬಳಿಕ ಸಿದ್ಧಾರ್ಥ ಮೆಡಿಕಲ್ ಕಾಲೇಜು ಪರಿಶೀಲನೆ ಮುಕ್ತಾಯವಾಗಿದೆ. ಕಾರ್ಯಾಚರಣೆ ಬಳಿಕ ಒಂದು ಬ್ಯಾಗ್ ದಾಖಲೆ ಸಹಿತ ಇಡಿ ತಂಡ ನಿರ್ಗಮಿಸಿದೆ. ಕೆಲ ಮಹತ್ವದ ದಾಖಲೆ ಸಮೇತ ಓರ್ವ ಮಹಿಳಾ, ಮೂವರು ಪುರುಷ ಅಧಿಕಾರಿಗಳು ಹಾಗೂ ಇಬ್ಬರು ಶಸ್ತ್ರ ಸಜ್ಜಿತ ಮಹಿಳಾ ಸಿಬ್ಬಂದಿಗಳ ರಕ್ಷಣೆಯಲ್ಲಿ ತಂಡ ಹೊರ ನಡೆಯಿತು. ತುಮಕೂರಿನ ಹೆಗ್ಗರೆ ಬಳಿಯ ಅಗಳ ಕೋಟೆಯಲ್ಲಿರುವ ಮೆಡಿಕಲ್ ಕಾಲೇಜಿನಲ್ಲಿ ಇಡಿ ತಂಡ ಪರಿಶೀಲನೆ ಮುಕ್ತಾಯಗೊಳಿಸಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಮರಳೂರು ದಿಣ್ಣೆಯ ಎಸ್ ಎಸ್ ಐಟಿಯಲ್ಲಿ ಮತ್ತೊಂದು ತಂಡ ಪರಿಶೀಲನೆ ಪೂರ್ಣಗೊಳಿಸಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮಾಲಿಕತ್ವದ ಕಾಲೇಜಿನ ಮೇಲೆ ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾಲೇಜಿಗೆ ಬಂದು ಅಕೌಂಟ್ಸ್ ಮಾಹಿತಿ ಕೇಳಿದ್ದರು. ಆ ಮಾಹಿತಿಯನ್ನು ನಾವು ನೀಡಿದ್ದೇವೆ. ಇಡಿ ಅಧಿಕಾರಿಗಳು ಯಾವುದೇ ಮಾಹಿತಿ ಕೇಳಿದರೂ ನೀಡಿ ಎಂದು ನಮ್ಮ ಸಿಬ್ಬಂದಿಗೆ ತಿಳಿಸಿದ್ದೇನೆ. ನಿನ್ನೆ ಇಡಿ ದೆಹಲಿಯ ಅಧಿಕಾರಿಗಳು ನಮ್ಮ ಮೂರು ಕಾಲೇಜುಗಳಿಗೆ ಭೇಟಿ ಕೊಟ್ಟಿದ್ದಾರೆ. ಅವರಿಗೆ ಏನು ಸೂಚನೆ ಬಂದಿದೆಯೋ ಗೊತ್ತಿಲ್ಲ. ಅವರು ಕೇಳಿದ ದಾಖಲೆಗಳನ್ನು ನಾವು ಕೊಡುತ್ತೇವೆ ಎಂದರು. ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ. ಅವರಿಗೆ ಸಹಕಾರ ನೀಡುತ್ತೇನೆ. ನಾನು ಯಾವುದನ್ನು ಮುಚ್ಚಿಟ್ಟಿಲ್ಲ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ನಾನು ಕಾನೂನಿಗೆ ಗೌರವ ಕೊಡುತ್ತೇನೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಲು ‘ದುಡಿಯೋಣ ಬಾ ಅಭಿಯಾನ’ದ ಮೂಲಕ ಸ್ಥಳೀಯವಾಗಿ ಕೆಲಸ ನೀಡಲಾಗುವುದು. ಗ್ರಾಮೀಣ ಜನರು ಅಭಿಯಾನದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹರ್ಷ ಕುಮಾರ್ ಕೆ. ಹೇಳಿದರು. ತಾಲ್ಲೂಕಿನ ಹರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ನರೇಗಾ ಯೋಜನೆಯಡಿ ‘ದುಡಿಯೋಣ ಬಾ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಡ ಕುಟುಂಬಗಳನ್ನು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು, ಸ್ಥಳೀಯರಿಗೆ ಉದ್ಯೋಗ ನೀಡುವ ಮೂಲಕ ಸ್ವಾವಲಂಬಿ ಬದುಕು ಸಾಗಿಸುವಂತೆ ಮಾಡುವುದು, ಗ್ರಾಮೀಣ ಭಾಗದಲ್ಲಿ ವಲಸೆ ತಪ್ಪಿಸಿ ಕೂಲಿಕಾರರಿಗೆ ಕೆಲಸ ಒದಗಿಸುವುದು ನರೇಗಾ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ ದುಡಿಯೋಣ ಬಾ ಅಭಿಯಾನವನ್ನು ಗ್ರಾಮೀಣ ಜನರು ಸದ್ಬಳಕೆ ಮಾಡಿಕೊಂಡಾಗ ಮಾತ್ರ ಸರ್ಕಾರದ ಯೋಜನೆ ಯಶಸ್ವಿಯಾಗಲಿದೆ. ಈ ನಿಟ್ಟಿನಲ್ಲಿ ವೈಯಕ್ತಿಕ ಅಥವಾ ಸಾಮೂಹಿಕ ಕೂಲಿಯನ್ನು ಸೃಷ್ಟಿಸಲು ದುಡಿಯೋಣ ಬಾ ಅಭಿಯಾನ ಸಹಕಾರಿಯಾಗಿದೆ. ಹರಳೂರು ಗ್ರಾಮದ ರೈತರಿಗೆ ಉದ್ಯೋಗ ಖಾತರಿ ಯೋಜನೆಯ ಮಾಹಿತಿಯುಳ್ಳ ಕರಪತ್ರಗಳನ್ನು ಹಂಚುವ ಮೂಲಕ…
ತುಮಕೂರು: ಕನ್ನಡಕ್ಕೆ ಮೊದಲ ಪ್ರತಿಷ್ಟಿತ ಬೂಕರ್ ಪ್ರಶಸ್ತಿಯನ್ನು ತಂದು ಕೊಟ್ಟ ಲೇಖಕಿ ಬಾನು ಮುಷ್ತಾಕ್ ಮತ್ತು ಈ ಕೃತಿಯನ್ನು ಸಮರ್ಥವಾಗಿ ಇಂಗ್ಲಿಷ್ ಗೆ ಅನುವಾದಿಸಿ ಬೂಕರ್ ಪುರಸ್ಕಾರ ಬರಲು ಕಾರಣಕರ್ತರಾದ ಅನುವಾದಕಿ ದೀಪಾ ಭಸ್ತಿಯವರನ್ನೂ ಸಹ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪ ಅಭಿನಂದಿಸಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು, ಅನುವಾದ ಸಾಹಿತ್ಯದ ಮಹತ್ವವೂ ರುಜುವಾತಾಗಿದೆ. ಈ ಮೊದಲೇ ಕನ್ನಡದ ಅನೇಕ ಕೃತಿಗಳು ಇಂಗ್ಲೀಷ್ ಗೆ ಸಮರ್ಥವಾಗಿ ಅನುವಾದವಾಗಿದ್ದರೆ ನೋಬಲ್ ಪುರಸ್ಕಾರಕ್ಕೂ ಸಹ ಅರ್ಹವಾಗುತ್ತಿದ್ದವು. ಬಾನು ಮುಷ್ಕಾಕ್ ಅವರ ‘ಹಸೀನಾ’ ಕಥೆಯನ್ನು ಆಧರಿಸಿ ಗಿರೀಶ್ ಕಾಸರವಳ್ಳಿಯವರು ನಿರ್ದೇಶಿಸಿದ ಚಿತ್ರ ರಾಷ್ಟ್ರ ಪುರಸ್ಕಾರವನ್ನು ಪಡೆದಿರುವುದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದಾಗಿದೆ. ಇನ್ನೊಮ್ಮೆ ಬಾನು ಮುಷ್ತಾಕ್ ಅವರಿಂದ ಅಂತಹದೇ ಇತಿಹಾಸ ಸೃಷ್ಟಿಯಾಗಿದೆ ಎಂದು ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಪ್ರಶಂಸಿಸಿದ್ದಾರೆ. ಬಾನು ಮುಷ್ತಾಕ್ ಅವರು 1990ರಿಂದ 2023ರ ನಡುವೆ ಬರೆದ ಹನ್ನೆರಡು ಕಥೆಗಳ ಇಂಗ್ಲೀಷ್ ಅನುವಾದವನ್ನು ದೀಪಾ ಭಸ್ತಿಯವರು “ಹಾರ್ಟ್ ಲ್ಯಾಂಪ್” ಶೀರ್ಷಿಕೆಯಲ್ಲಿ…