Subscribe to Updates
Get the latest creative news from FooBar about art, design and business.
- ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
- ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
- RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
- ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
- ತುಮಕೂರಿಗೆ ಏರ್ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
- ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
- ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
Author: admin
ಮಧುಗಿರಿ: ಮಧುಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇದೇ ಡಿಸೆಂಬರ್ 24ರಂದು ಕನ್ನಡ ಭವನದಲ್ಲಿ ಆಯೋಜಿಸಲಾಗಿರುವ 7ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ಕವಿ ಹಾಗೂ ವಿಮರ್ಶಕ ಕೆ.ಪಿ. ನಟರಾಜು ಅವರು ಆಯ್ಕೆಯಾಗಿದ್ದಾರೆ. ಕೆ.ಪಿ. ನಟರಾಜು ಅವರ ಪರಿಚಯ: ಶಿಕ್ಷಣ: ತಾಂತ್ರಿಕ ಶಿಕ್ಷಣದ ಹಿನ್ನೆಲೆ ಹೊಂದಿದ್ದರೂ, ಕನ್ನಡ ಸಾಹಿತ್ಯದ ಮೇಲಿನ ಆಸಕ್ತಿಯಿಂದ ಕನ್ನಡದಲ್ಲಿ ಎಂ.ಎ.ಪದವಿ ಪಡೆದಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ರಾಷ್ಟ್ರಕವಿ ಕುವೆಂಪು ಅವರ ಚಿಂತನೆಗಳ ಕುರಿತು ಪ್ರೌಢ ಪ್ರಬಂಧ ಮಂಡಿಸಿ ಡಿ.ಲಿಟ್ ಪದವಿ ಪಡೆದಿದ್ದಾರೆ. ಸಾಹಿತ್ಯ ಕೃಷಿ: ಇವರು ಸಾಹಿತ್ಯ ಕ್ಷೇತ್ರದಲ್ಲಿ ದಶಕಗಳಿಂದ ಸಕ್ರಿಯರಾಗಿದ್ದು, ಅನೇಕ ಕವನ ಸಂಕಲನ ಹಾಗೂ ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. ಪ್ರಶಸ್ತಿ–ಗೌರವಗಳು: ಇವರ ‘ನಿತ್ಯವೂ ನಿನ್ನೊಡನೆ’ ಕವನ ಸಂಕಲನಕ್ಕೆ 2018ರ ಸಾಲಿನ ಪ್ರತಿಷ್ಠಿತ ‘ಕಡೆಂಗೋಡ್ಲು ಶಂಕರಭಟ್ ಕಾವ್ಯ ಪ್ರಶಸ್ತಿ’ ಲಭಿಸಿದೆ. ಅಲ್ಲದೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಇವರು ಭಾಜನರಾಗಿದ್ದಾರೆ. ಡಿಸೆಂಬರ್ 24ರಂದು ನಡೆಯಲಿರುವ ಈ ಸಾಹಿತ್ಯ ಹಬ್ಬಕ್ಕೆ…
ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗುರುವಾರ ನಡೆದಿದೆ. ಕಳ್ಳಂಬೆಳ್ಳ ಗ್ರಾಮದ ನಿವಾಸಿ ಮಧುವನ್ (36) ಕೊಲೆಯಾದ ದುರ್ದೈವಿ. ತುಮಕೂರು ಸಂತೇಪೇಟೆಯ ನಿವಾಸಿಗಳಾದ ಮಹೇಶ್ ಮತ್ತು ಸಮೀರ್ ಎಂಬುವವರೊಂದಿಗೆ ಜಮೀನಿನ ವಿಚಾರವಾಗಿ ಮಧುವನ್ ಗೆ ವಿವಾದವಿತ್ತು ಎನ್ನಲಾಗಿದೆ. ಗುರುವಾರ ಈ ಮೂವರ ನಡುವೆ ಮಾತಿನ ಚಕಮುಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಆರೋಪಿ ಮಹೇಶ್ ಎಂಬಾತ ಮಧುವನ್ ಮೇಲೆ ಮಚ್ಚಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ದಾಳಿಯ ತೀವ್ರತೆಗೆ ಮಧುವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಳಗಾವಿ: ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬರೋಬ್ಬರಿ 3,450 ಕೋಟಿ ರೂಪಾಯಿಗಳ ವಿವಿಧ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಭಾಗದ ಬಹುಕಾಲದ ಬೇಡಿಕೆಯಾದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಮುಖ ನೀರಾವರಿ ಯೋಜನೆಗಳು: ಬಾಗಲಕೋಟೆ: ಬಾದಾಮಿ ಮತ್ತು ಬೀಳಗಿ ಭಾಗದ ಕೆರೂರು ಏತ ನೀರಾವರಿ ಯೋಜನೆಗೆ 1,503 ಕೋಟಿ ರೂ.ಗಳ ಪರಿಷ್ಕೃತ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. ರಾಯಚೂರು: ಮಸ್ಕಿ ತಾಲೂಕಿನ ಪಾಮನಕಲ್ಲೂರು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ 990 ಕೋಟಿ ರೂ.ಗಳ ಯೋಜನೆಗೆ ಚಾಲನೆ ದೊರೆತಿದೆ. ಬೆಳಗಾವಿ: ರಾಯಬಾಗ ಮತ್ತು ಚಿಕ್ಕೋಡಿ ಭಾಗದ ಏತ ನೀರಾವರಿ ಯೋಜನೆಗಳಿಗೆ ಸುಮಾರು 400 ಕೋಟಿ ರೂ. ಮೀಸಲಿಡಲಾಗಿದೆ. ಕೊಪ್ಪಳ: ಯಲಬುರ್ಗಾ ಮತ್ತು ಕುಕನೂರು ತಾಲೂಕಿನ 19 ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ತುಂಬಿಸುವ 272 ಕೋಟಿ ರೂ.ಗಳ ಯೋಜನೆಗೆ ಒಪ್ಪಿಗೆ ಸಿಕ್ಕಿದೆ. ನ್ಯಾಯಾಂಗ ಸುಧಾರಣೆ ಮತ್ತು AI ಬಳಕೆ:…
ಸರಗೂರು: ಮುಳ್ಳೂರು ಆಸ್ಪತ್ರೆಗೆ ಎರಡು ಬಾರಿ ಉತ್ತಮ ಆಸ್ಪತ್ರೆ ಪ್ರಶಸ್ತಿ ಬಂದಿದೆ. ಈ ವೈದ್ಯರು ಹಾಗೂ ಸಿಬ್ಬಂದಿಗಳು ಹೆಚ್ಚಿನ ರೀತಿಯಲ್ಲಿ ಬರುವ ರೋಗಿಗಳಿಗೆ ಚಿಕಿತ್ಸೆ ಕೊಡಿಸಲು ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು. ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾರ್ಟ್ ಸಂಸ್ಥೆ ಮೈಸೂರು, ರೋಟರಿ ಕ್ಲಬ್ ಆಪ್ ಮೈಸೂರು ವೆಸ್ಟ್ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್. ಡಿ.ಕೋಟೆ , ಪ್ರಾಥಮಿಕ ಆರೋಗ್ಯ ಕೇಂದ್ರ ಮುಳ್ಳೂರು ಗ್ರಾಮ ಪಂಚಾಯಿತಿ ಮುಳ್ಳೂರು, ಮುಳ್ಳೂರು ಗುರುಪ್ರಸಾದ್ ಜಿ.ಪಿ. ಗ್ರೂಪ್ಸ್ ಬಿಲ್ಡರ್ ಅಂಡ್ ಡೆವಲಪರ್ಸ್ ಮೈಸೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಇವರ ಸಹಯೋಗದೊಂದಿಗೆ ಮುಳ್ಳೂರು ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಳ್ಳೂರು ಆಸ್ಪತ್ರೆ ಕೋಟೆ ಮತ್ತು ನಂಜನಗೂಡು ತಾಲೂಕಿನ ಮಧ್ಯದಲ್ಲಿದ್ದರು ತಾಲೂಕು ಆಸ್ಪತ್ರೆಗಳಿಗೆ ಸಂಪರ್ಕ ಇಲ್ಲಗೆ ತುರ್ತು ಸೇವೆಗೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗುವುದು,.ಸಿಬ್ಬಂದಿಯ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಎಲ್ಲವು…
ಬ್ಯಾಲ್ಯ: ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದು ಅಪರಾಧ. ರಸ್ತೆ ಸುರಕ್ಷತೆ ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸ ಬೇಕಾದ್ದು ನಿಮ್ಮ ಕರ್ತವ್ಯ ಎಂದು ಕೊಡಿಗೇನಹಳ್ಳಿ ಪೊಲೀಸ್ ರಾಣಾಧಿಕಾರಿ ಎಸ್.ಜಿ. ಶ್ರೀನಿವಾಸ ಪ್ರಸಾದ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಹಾಗೂ ನಶ ಮುಕ್ತ ತುಮಕೂರು ಅಭಿಯಾನದ ಪ್ರಯುಕ್ತ ಪುರವರ ಪ್ರೌಢಶಾಲೆ, ಕಾಲೇಜು ಮತ್ತು ಕೋಡ್ಲಾಪುರ ಪ್ರೌಢಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಕಳ್ಳತನಗಳು ಹೆಚ್ಚು. ಚಳಿಗಾಲದಲ್ಲಿ ಜನತೆಗೆ ಉತ್ತಮ ನಿದ್ದೆ ಬರುತ್ತದೆ. ಹೀಗಾಗಿ ಈ ಸಂದರ್ಭಗಳಲ್ಲಿ ಹೆಚ್ಚು ಕಳ್ಳತನಗಳು ನಡೆಯುತ್ತವೆ. ಆದ್ದರಿಂದ ಪೊಲೀಸ್ ಇಲಾಖೆ ಸೂಚಿಸಿರುವ ನಿಯಮಗಳನ್ನು ಪಾಲಿಸುವುದರ ಜೊತೆಗೆ ಅಪರಾಧ ತಡೆಗಟ್ಟಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು. ಇತ್ತೀಚಿಗೆ ಹೆಚ್ಚಾಗುತ್ತಿರುವ ನಶ ಸಾಮಗ್ರಿಗಳ ಬಳಕೆ, ಅದರಿಂದಾಗುವ ದುಷ್ಪರಿಣಾಮಗಳು, ಸಿಗುವ ಶಿಕ್ಷೆ ಮತ್ತು ಪೋಕ್ಸೋ ಕಾಯಿದೆ, ಹೆಣ್ಣು ಮಕ್ಕಳ ಸುರಕ್ಷತೆ, ಬಾಲ್ಯ ವಿವಾಹ ಕುರಿತು ಇರುವ ಕಾಯ್ದೆಗಳು…
ಗುಬ್ಬಿ: ತಾಲ್ಲೂಕಿನ ಎಂ.ಎಚ್. ಪಟ್ಟಣ ಗೇಟ್ ಬಳಿ ಇರುವ ಹೋಟೆಲ್ ವೊಂದರಲ್ಲಿ ಪರಿಶಿಷ್ಟ ಜಾತಿಯ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಪಟ್ಟಣದ ಯಶವಂತ (25) ಎಂಬ ಯುವಕ ಜಿಎನ್ ಬಿ ಸ್ಪಿರಿಟ್ ಆ್ಯಂಡ್ ಸ್ಟೇ ಹೋಟೆಲ್ ಗೆ ಊಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಹೋಟೆಲ್ ಮಾಲೀಕ ಮತ್ತು ಆತನ ಸಹಚರರು ಸೇರಿ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಯ ತೀವ್ರತೆಯಿಂದಾಗಿ ಯಶವಂತ ಅವರ ಕೈಮೂಳೆಗೆ ಗಂಭೀರ ಪೆಟ್ಟು ಬಿದ್ದಿದೆ. ಪ್ರಸ್ತುತ ಅವರು ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ಮಾಹಿತಿ ಪಡೆದ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ಯುವಕನಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಮತ್ತು ಸಹಚರರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ (Atrocity Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ವೀಣಾ…
ಮಧುಗಿರಿ: ತಾಲ್ಲೂಕಿನ ಆಚೇನಹಳ್ಳಿ ಗ್ರಾಮದಲ್ಲಿ ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ಮರ್ಮಾಂಗಕ್ಕೆ ಏಟು ಬಿದ್ದು ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮದ ವೆಂಕಟಪ್ಪ ಅವರ ಪುತ್ರ ನಾಗರಾಜು (35) ಮೃತಪಟ್ಟವರು. ಇವರು ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದಾಗ, ಎರಡು ಜಾನುವಾರುಗಳ ನಡುವೆ ಕಾದಾಟ ಶುರುವಾಗಿದೆ. ಇದನ್ನು ಬಿಡಿಸಲು ಹೋದಾಗ ಜಾನುವಾರು ಮರ್ಮಾಂಗಕ್ಕೆ ತಿವಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ವಿರೋಧ ಪಕ್ಷಗಳ ತೀವ್ರ ವಿರೋಧ ಮತ್ತು ಗದ್ದಲದ ನಡುವೆಯೇ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025’ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಮುಖ್ಯಾಂಶಗಳು: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಈ ವಿಧೇಯಕವನ್ನು ಮಂಡಿಸಿ, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಇದು ಅನಿವಾರ್ಯ ಎಂದು ಸಮರ್ಥಿಸಿಕೊಂಡರು. ಜನಾಂಗೀಯ ನಿಂದನೆ, ಜಾತಿ, ಧರ್ಮ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆ. ಶಿಕ್ಷೆಯ ಪ್ರಮಾಣ: ಈ ಹೊಸ ಕಾಯ್ದೆಯಡಿ ದ್ವೇಷ ಭಾಷಣ ಮಾಡುವವರಿಗೆ ಗರಿಷ್ಠ 7 ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲು ಅವಕಾಶವಿದೆ. ಅಲ್ಲದೆ, ಇದು ಜಾಮೀನು ರಹಿತ ಪ್ರಕರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ ಪೋಸ್ಟ್ ಮಾಡುವ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ವಿರೋಧ ಪಕ್ಷದ ಆಕ್ರೋಶ: ಬಿಜೆಪಿ ಮತ್ತು…
ಬೀದರ್: ತಾಯಿ ತನ್ನ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಗಾಂಧಿ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ತಿಳಿಸಬೇಕು ಎಂದು ಗಾಂಧಿ ಗಂಜ್ ಪೊಲೀಸ್ ಠಾಣೆ ಎಎಸ್ ಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ನಗರದ ಸಿ ಎಮ್ ಸಿ ಕಾಲೋನಿಯ ನಿವಾಸಿಯಾದ ಜೀನತ್ (ಪಲ್ಲವಿ) ಮತ್ತು ಮಗ ಹರ್ಪಿತ್ ಪಾಂಚಾಳ್ (3 ವರ್ಷ) ನಾಪತ್ತೆಯಾದ ತಾಯಿ ಮಗು ಆಗಿದ್ದಾರೆ. ಅವರು ಡಿ.15 ರಂದು ಮನೆಯಿಂದ ಹೊರಗಡೆ ಹೋದವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಜೀನತ್ 5.3 ಅಡಿ ಎತ್ತರ ಇದ್ದು, ಕೆಂಚನೆ ಬಣ್ಣ, ತೆಳುವಾದ ಶರೀರ ಹೊಂದಿದ್ದಾರೆ. ಮನೆಯಿಂದ ಹೊರಡುವಾಗ ಮೈಮೇಲೆ ಹಳದಿ ಬಣ್ಣದ ಚೂಡಿದಾರ, ಹಳದಿ ಬಣ್ಣದ ಪೈಜಾಮ ಧರಿಸಿದ್ದರು. ಇವರು ಕನ್ನಡ, ಹಿಂದಿ ಭಾಷೆ ಮಾತನಾಡ ಬಲ್ಲವರಾಗಿದ್ದಾರೆ. ನಾಪತ್ತೆಯಾದ ಮಹಿಳೆ ಹಾಗೂ ಮಗುವಿನ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಸಂಪರ್ಕಿಸುವಂತೆ ಬೀದರ್ ನ ಗಾಂಧಿ ಗಂಜ್ ಠಾಣೆ ಪೊಲೀಸರು ಮನವಿ ಮಾಡಿದ್ದಾರೆ. ವರದಿ: ಅರವಿಂದ ಮಲ್ಲೀಗೆ,…
ಪೆರ್ನಾಜೆ: ಪ್ರತಿಭೆ ಎಲ್ಲರಲ್ಲೂ ಇದೆ ಆದರೆ ಅದಕ್ಕೆ ಸೂಕ್ತ ಪ್ರೋತ್ಸಾಹ ವೇದಿಕೆ ಅಗತ್ಯ ಹಾಗೆ ಜೀವನದಲ್ಲಿ ಹಟ ಛಲ ಇದ್ದರೆ ಏನನ್ನು ಸಾಧಿಸಬಹುದು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃಷಿಕರು ಜೇನು ಗಡ್ಡ ಬರಹಗಾರರು, ಕಲಾ ನಿರ್ದೇಶಕರು, ಕಲಾ ಪೋಷಕರಾದ ಕುಮಾರ್ ಪೆರ್ನಾಜೆ ಹೇಳಿದರು. ಸ್ವರ ಸಿಂಚನ ಸಂಗೀತ ಶಾಲೆ, ವಿಟ್ಲ ಪಡಿಬಾಗಿಲು ಶಾಖೆಯ ದಶ ಸoಭ್ರಮದಲ್ಲಿ ಡಿ.14ರಂದು ವಿಟ್ಲದ ಜಿಎಲ್ ಆಡಿಟೋರಿಯಂ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಅವರು, ಬೆಳೆಯುವವರು ಬೆಳೆಯುತ್ತಲೇ ಇರುತ್ತಾರೆ, ಸ್ವರ ಸಿಂಚನ ಸಂಗೀತ ಶಾಲೆ ಯಶಸ್ಸಿನತ್ತಸಾಗಲಿ ಎಂದು ಹಾರೈಸಿದರು. ವಿದ್ವಾನ್ ಕೋಡಂಪಳ್ಳಿ ಗೋಪ ಕುಮಾರ್ ದೀಪ ಪ್ರಜ್ವಲನೆ ಮಾಡಿದರು . ಸ್ವರ ಸಿಂಚನ ಪ್ರಶಸ್ತಿ ಪ್ರದಾನವನ್ನು ಸ್ವೀಕರಿಸಿ ಸಂಸ್ಥೆಗೆ ಶುಭ ಹಾರೈಸಿದರು. ದಶಮಾನೋತ್ಸವ ಸನ್ಮಾನವನ್ನು ಎಲ್.ಎಂ.ಗೋವಿಂದ ನಾಯಕ್ ಪಾಲ್ಹೆಚ್ಚಾರು ಯಕ್ಷಗಾನ ಭಾಗವತರು ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರಸಿದ್ಧಿ ಪಡೆದ ಅವರು ಸನ್ಮಾನ ಸ್ವೀಕರಿಸಿ ಸಂಸ್ಥೆಯ ಬಗ್ಗೆ ಹಿತ ನುಡಿದರು. ವಿಟ್ಲ…