Author: admin

ಬೆಂಗಳೂರು : ಇಂಧನ ಹೊಂದಾಣಿಕೆ ಶುಲ್ಕ ಹೆಚ್ಚಾಗಲಿದ್ದು ಅಕ್ಟೋಬರ್ 1 ರಿಂದಲೇ ಗ್ರಾಹಕರಿಗೆ ಶುಲ್ಕದ ಬರೆ ಬೀಳಲಿದೆ. ಈಗ ಅಕ್ಟೋಬರ್ ನಲ್ಲಿ ಇಂಧನ ವೆಚ್ಚ ಶುಲ್ಕದ ಬಿಸಿ ಗ್ರಾಹಕರಿಗೆ ಮುಟ್ಟಲಿದ್ದು, ಪ್ರತಿ ಯೂನಿಟ್ ಮೇಲೆ 43 ಪೈಸೆ ದರ ಏರಿಕೆಯಾಗಲಿದೆ. ಮುಂದಿನ ವರ್ಷ ಮಾರ್ಚ್‍ವರೆಗೆ ಈ ದರ ಇರಲಿದೆ. ಕಲ್ಲಿದ್ದಲಿನ ದರ ಏರಿಕೆಯಾದರೇ ದರ ಏರಿಕೆ ಅನಿವಾರ್ಯ ಎನ್ನುವುದು ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ. ಇಂಧನ ಹೊಂದಾಣಿಕೆ ಶುಲ್ಕವನ್ನು ಮೂರು ತಿಂಗಳಿಗೊಮ್ಮೆ ಕೆಇ ಆರ್ ಸಿಗೆ ಪರಿಶೀಲನೆ ಮಾಡುವಂತೆ ಬೆಸ್ಕಾಂ ಮನವಿ ಕೂಡ ಮಾಡಿದೆ. ಆದರೆ, ಸದ್ಯ ಆರು ತಿಂಗಳಿಗೆ ಅನ್ವಯವಾಗುವಂತೆ ದರ ಏರಿಕೆಯಾಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಚಿವ ಸುನೀಲ್ ಕುಮಾರ್ ಕುವೆಂಪು ವಿರಚಿತ ನಾಡಗೀತೆ ಜಯಭಾರತ ಜನನಿಯ ತನುಜಾತೆದಾಟಿ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ನಾಡಗೀತೆಯನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ಹಾಡಲಾಗುತ್ತದೆ ಅಂತ ತಿಳಿಸಿದ್ದಾರೆ. ಎಸ್ .ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಜಯ ಭಾರತ ಜನನಿಯ ತನುಜಾತೆ ಹಾಡುವ ಅವಧಿಯನ್ನು 2.30 ನಿಮಿಷಕ್ಕೆ ನಿಗದಿ ಮಾಡಬೇಕು ಎಂದು ಶಿಫಾರಸು ಮಾಡಿತ್ತು, ಅದರಂತೆ ಈಗ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಬೆಳಗಾವಿಯ ಕೆಎಲ್‌ಇಎಸ್ ಆಸ್ಪತ್ರೆಗೆ ನಸುಕಿನ ಜಾವದಲ್ಲಿ ಜೀವಂತ ಹೃದಯ ಸಾಗಿಸುವಲ್ಲಿ ವೈದ್ಯರ ತಂಡ ಯಶಸ್ವಿಯಾಯಿತು. ಆಪಘಾತದಿಂದಾಗಿ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಿಸಿದ್ದ ವ್ಯಕ್ತಿಯೊಬ್ಬರ ಮಿದುಳು ನಿಷ್ಕ್ರಿಯಗೊಂಡಿತ್ತು. ಅವರ ಕುಟುಂಬ ವರ್ಗದವರೊಂದಿಗೆ ಚರ್ಚಿಸಿದ ವೈದ್ಯರು ಹೃದಯ ದಾನ ಮಾಡಲು ಪ್ರೇರೇಪಿಸಿದರು. ಶುಕ್ರವಾರ ನಸುಕಿನ 4ಗಂಟೆ ಸುಮಾರಿಗೆ ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ತರಲಾಯಿತು. ಹೃದ್ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಯಶಸ್ವಿ ಕಸಿ ಮಾಡಲಾಯಿತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪೊಲೀಸ್ ಸಿಬ್ಬಂದಿ ಜೀರೊ ಟ್ರಾಫಿಕ್ ನಿರ್ಮಾಣ ಮಾಡಿ ಸಹಕರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

40 ಪರ್ಸೆಂಟ್ ಕಮಿಷನ್ ಆರೋಪದ ವಿಚಾರಕ್ಕೆ ನಾವು ಮುಕ್ತರಿದ್ದೇವೆ. ಈಗಲೂ ದೂರು ಮತ್ತು ದಾಖಲೆ ನೀಡಿದ್ರೆ ನಾಳೆಯೇ ತನಿಖೆಗೆ ಮಾಡಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪೇ ಸಿಎಂ ಪೋಸ್ಟರ್ ಅಭಿಯಾನ ವಿಚಾರ ಕಾಂಗ್ರೆಸ್ ನವರು ಯಾವ ಕ್ಯಾಂಪೇನ್ ಬೇಕಾದರೂ ಮಾಡಲಿ ಕೊನೆಗೆ ಸತ್ಯಕ್ಕೆ ಜಯ ಸಿಗುತ್ತೆ ಎಂದರು. 40 ಕಮಿಷನ್ ಆರೋಪದ ವಿಚಾರದಕ್ಕೆ ನಾವು ಮುಕ್ತರಿದ್ದೇವೆ. ದೂರು ಕೊಟ್ಟರೇ ತನಿಖೆ ನಡೆಸಲು ಸಿದ್ಧ. ನ್ಯಾಯಾಂಗ ತನಿಖೆಯಾಖೆ ಲೋಕಾಯುಕ್ತವೇ ಇದೆಯಲ್ಲ. ಲೋಕಾಯುಕ್ತ ತನಿಖೆಯನ್ನ ಮಾಡಿಸುತ್ತೇವೆ ಎಂದರು. ಕಾಂಗ್ರೆಸ್ ನಾಯಕರು ಬರೀ ರಾಜಕೀಯ ಪ್ರೇರಿತ ಆರೋಪ ಮಾಡುತ್ತಾರೆ. ಈ ಬಗ್ಗೆ ಸದನದಲ್ಲಿ ಚರ್ಚೆಗೆ ನಾವು ಸಿದ್ಧರಿದ್ದವು. ಆದರೆ ಅವರೇ ದಾಖಲೆ ಕೊಡಲಿಲ್ಲ. ಪುರಾವೆ ಇಲ್ಲದೆ ಮಾತನಾಡುವುದು ಬಹಳ ದಿನ ಉಳಿಯಲ್ಲ ಎಂದು ಸಿಎಂ ಬೊಮ್ಮಾಯಿ ಟಾಂಗ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಕಲಬುರಗಿ : ಮಕ್ಕಳ ಕಳ್ಳರ ವದಂತಿ ಹೆಚ್ಚಾಗಿದ್ದು, ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಮಹಿಳೆಯರಿಗೆ ಜನರು ಥಳಿಸಿದ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ನಡೆದಿದೆ. ತೆಲಂಗಾಣದ ಕೊತ್ಲಾಪುರದಿಂದ ಇಬ್ಬರು ಮಹಿಳೆಯರು ಪೋಲಕಪಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಿ ಅನುಮಾನಿಸಿದ ಜನರು ಮಕ್ಕಳ ಕಳ್ಳರೆಂದು ಭಾವಿಸಿ ಥಳಿಸಿದ್ದಾರೆ. ಮಹಿಳೆಯರನ್ನು ಥಳಿಸಿದ ಗ್ರಾಮಸ್ಥರು ಬಳಿಕ ಮಹಿಳೆಯರನ್ನು ಚಿಂಚೋಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದ ಪೊಲೀಸರು ಮಹಿಳೆಯರು ಸಂಬಂಧಿಕರ ಮನೆಗೆ ಬಂದಿರುವುದು ಎಂದು ತಿಳಿದುಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಂಜೀವ ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಇನಸ್ಟಾಗ್ರಾಂ ಖಾತೆ ತೆರೆದು ಹಣ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಎಚ್ಚರವಹಿಸುವಂತೆ ಎಸ್ .ಪಿ ಸಂಜೀವ ಪಾಟೀಲ ಮನವಿ ಮಾಡಿದ್ದಾರೆ. ಎಸ್ಪಿ ಸಂಜೀವ ಪಾಟೀಲ ಹೆಸರಿನಲ್ಲಿ ಸ್ನೇಹಿತರಿಗೆ , ಪರಿಚಯಸ್ಥರಿಗೆ ಹಣ ಕೇಳಲಾಗುತ್ತಿದೆ. ಈವರೆಗೆ ಅನೇಕರಿಗೆ ಹಣ ಕೇಳಿ ಗೂಗಲ್ ಪೇ ಮಾಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಎಸ್ .ಪಿ ಸಂಜೀವ ಪಾಟೀಲ ಅವರ ಗಮನಕ್ಕೆ ವಿಷಯ ಬಂದಿದ್ದು, ಕೂಡಲೇ ಇದನ್ನು ತಿರಸ್ಕರಿಸುವಂತೆ ಕೋರಿದ್ದಾರೆ. ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ಯಾರೋ ಸಾರ್ವಜನಿಕರಲ್ಲಿ ಹಣ ಕೇಳುತ್ತಿದ್ದುದ್ದ ಕಂಡು ಬಂದಿದ್ದು ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗಾಂಜಾ ದಂಧೆಕೋರರನ್ನ ಬೇಧಿಸಲು ಹೋದ ಪೊಲೀಸರ ಮೇಲೆಯೇ ದಂಧೆಕೋರರು ಹಲ್ಲೆ ನಡೆಸಿರುವ ಘಟನೆ ನಡೆಸಿದ್ದು ಸಿಪಿಐ ಗಂಭೀರ ಗಾಯಗೊಂಡಿದ್ದಾರೆ. ಕಲಬುರಗಿ ಗ್ರಾಮೀಣ ಠಾಣೆ ಸಿಪಿಐ ಶ್ರೀಮಂತ ಇಲ್ಲಾಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಸಿಪಿಐ ಶ್ರೀಮಂತ ಇಲ್ಲಾಳ ಅವರ ಸ್ಥಿತಿ ಗಂಭೀರವಾಗಿದ್ದು, ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಂಜಾ ಮಾರಾಟಗಾರ ಸಂತೋಷ್​ನನ್ನು ಎರಡು ದಿನದ ಹಿಂದೆ ಪೊಲೀಸರು ಬಂಧಿಸಿದ್ದರು. ಆರೋಪಿಯ ಮಾಹಿತಿ ಮೇರೆಗೆ ಮಹಾರಾಷ್ಟ್ರದ ಉಮ್ಮರ್ಗಾ ತಾಲೂಕಿನ ತರೂರಿ ಬಳಿ ಗಾಂಜಾ ಬೆಳೆಯುತ್ತಿದ್ದ ಗ್ಯಾಂಗ್ ಪತ್ತೆ ಮಾಡಲು ಸಿಪಿಐ ಶ್ರೀಮಂತ ಇಲ್ಲಾಳ್ ಮತ್ತು ಸಿಬ್ಬಂದಿ ತೆರಳಿದ್ದರು. ಈ ನಡುವೆ ರಾತ್ರಿ ಹೊಲದಲ್ಲೆ ಗಾಂಜಾ ದಂಧೆಕೋರರ ಮೇಲೆ ದಾಳಿ ಮಾಡಲು ಮುಂದಾದಾಗ 40 ಜನರ ತಂಡ ಸಿಪಿಐ ಶ್ರೀಮಂತ ಇಲ್ಲಾಳ ಮೇಲೆ ದಾಳಿ ಮಾಡಿದ್ದಾರೆ. ಇದರಿಂದ ಶ್ರೀಮಂತ ಇಲ್ಲಾಳ ಅವರ ಸ್ಥಿತಿ ಗಂಭೀರವಾಗಿದೆ. ಇನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಕಲ್ಬುರ್ಗಿ ಎಸ್​​ಪಿ ಇಶಾ ಪಂತ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.…

Read More

ಮದುವೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿದ ಖದೀಮರು ಮನೆಯಲ್ಲಿದ್ಧ ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಸಂಪಂಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಮಂಜುನಾಥ್ ಎಂಬುವವರ ಮನೆಯಲ್ಲಿ ದರೋಡೆಕೋರರು 43 ಲಕ್ಷ ನಗದು ಮತ್ತು 250 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಮಂಜುನಾಥ್ ಅವರು ಜಮೀನು ಮಾರಾಟ ಮಾಡಿ 43 ಲಕ್ಷ ರೂ ಹಣವನ್ನ ಮನೆಯಲ್ಲಿಟ್ಟಿದ್ದರು. ಈ ನಡುವೆ ಮದುವೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಬಂದ ಖದೀಮರು ಮನೆಯಲ್ಲಿದ್ಧ ಮಂಜುನಾಥ್ ಅವರ ಪತ್ನಿ ಮಮತಾ ಅವರಿಗೆ ಮತ್ತು ಬರುವ ಸ್ಪ್ರೈ ಮಾಡಿ ಹಣ ಹಣ ಮತ್ತು ಚಿನ್ನಾಭರಣವನ್ನ ದೋಚಿದ್ದಾರೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಲಬುರಗಿ: ಜಿಲ್ಲೆಯಲ್ಲಿ ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಪೊಲೀಸರು ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ. ಜೇವರ್ಗಿ ಠಾಣೆ ಇನ್ಸ್​’ಪೆಕ್ಟರ್ ಹಾಗೂ ಇಬ್ಬರು ಕಾನ್ಸ್​’ಟೇಬಲ್‌’ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮರಳು ವ್ಯಾಪಾರಿ ಅಖಿಲ್ ಅವರ ಬಳಿ 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ ಶಿವರಾಯ ಅರಳಗುಂಡಗಿ, ಜೇವರ್ಗಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಹಣ ಪಡೆಯುವಾಗ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ವೇಳೆ ಶಿವರಾಯ ಹಣದ ಸಮೇತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಭ್ರಷ್ಟಾಚಾರ ತಡೆ ಕಾಯ್ದೆಯಡಿ ಯಡಿಯೂರಪ್ಪ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚ ಪ್ರಕರಣದ ದೂರನ್ನು ಮರುಸ್ಥಾಪಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಂದಿನ ಪ್ರಕ್ರಿಯೆಗಳಿಗೆ ತಡೆ ನೀಡಿದೆ. ಯಡಿಯೂರಪ್ಪನವರು ತಮ್ಮ ವಿರುದ್ದ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಸುಪ್ರಿಂಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಯನ್ನು ಮತ್ತೆ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು. ಇದೇ ವೇಳೆ ನ್ಯಾಯಾಪೀಠವು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬದವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧ ಪಟ್ಟಂತೆ ಮಧ್ಯಂತರ ತಡೆ ನೀಡಿದೆ. ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಯಡಿಯೂರಪ್ಪ ಹಾಗೂ ಅವರ ಕುಟುಂಬದವರ ಮೇಲೆ 12 ಕೋಟಿ ಲಂಚ ತೆಗೆದುಕೊಂಡಿದ್ದರು ಅಂತ ಆರೋಪಿಸಿ ಜನಪ್ರತಿನಿಧಿಗಳ ಕೋರ್ಟ್ ಗೆ ದೂರು ನೀಡಿದ್ದರು, ಇದೇ ವೇಳೆ ​…

Read More