Author: admin

ಬಾಲಿವುಡ್ ಹಿಟ್ ಶೋ ಕಾಫಿ ವಿತ್ ಕರಣ್‌ನ ಏಳನೇ ಸೀಸನ್ (Koffee with Karan Season 7) ಮುಂದುವರೆದಿದೆ. ಈಗಾಗಲೇ 11 ಸಂಚಿಕೆಗಳು ಮುಗಿದಿದ್ದು, ಹನ್ನೆರಡನೇ ಸಂಚಿಕೆ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಸಂಚಿಕೆಯಲ್ಲಿ ಶಾರುಖ್ ಪತ್ನಿ ಗೌರಿ ಖಾನ್, ಹಿರಿಯ ನಟಿಯರಾದ ಭಾವನಾ ಪಾಂಡೆ ಮತ್ತು ಮಹೀಪ್ ಕಪೂರ್ ಅತಿಥಿಗಳಾಗಿ ಬಂದಿದ್ದರು. ಮತ್ತು ಎಂದಿನಂತೆ ಕರಣ್ ಕೆಲವು ಹುಚ್ಚು ಪ್ರಶ್ನೆಗಳನ್ನು ಕೇಳಿದರು. ಈ ಸಂಚಿಕೆಯಲ್ಲಿ ಕರಣ್ ತಮ್ಮ ಮಗನ ಡ್ರಗ್ ಪ್ರಕರಣದ ಬಗ್ಗೆ ಗೌರಿ ಖಾನ್ ಅವರನ್ನು ಕೇಳಿದರು. ಕೆಲ ತಿಂಗಳ ಹಿಂದೆ ಶಾರುಖ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿ ಜೈಲಿಗೆ ಹೋಗಿ ಬಂದಿದ್ದು ಗೊತ್ತೇ ಇದೆ. ಆ ಸಮಯದಲ್ಲಿ ಆರ್ಯನ್ ಖಾನ್ ಬಂಧನವು ಸಂಚಲನವಾಯಿತು. ಇದುವರೆಗೂ ಶಾರುಖ್ ಪತ್ನಿ ಗೌರಿ ಖಾನ್ ಈ ಬಂಧನಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚೆಗೆ ಕಾಫಿ ವಿತ್ ಕರಣ್ ಶೋನಲ್ಲಿ ಕರಣ್ ಗೌರಿ ಖಾನ್ ಅವರನ್ನು ನಿಮ್ಮ ಮಗನನ್ನು ಬಂಧಿಸಿದಾಗ…

Read More

BMS ಟ್ರಸ್ಟ್‌ʼನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ & ಆ ಟ್ರಸ್ಟ್‌ನ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಉನ್ನತ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಧಾನಸಭೆಯಲ್ಲೇ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಮಾತನಾಡುತ್ತಿವೆ. ಇನ್ನು ನನ್ನ ಹೊಡೆದ ಗುಂಡು ಎಲ್ಲಿ ವಿಫಲವಾಗಿದೆ? ಅದನ್ನು ವಿಫಲಗೊಳಿಸುವ ಇನ್ನೊಂದು ಹುನ್ನಾರ, ಷಡ್ಯಂತ್ರ ಈಗ ನಡೆದಿದೆ ಅಷ್ಟೇ. BMS ಟ್ರಸ್ಟ್ ಬಗ್ಗೆ ಸರಕಾರ ಕಾನೂನು ರೀತ್ಯ ಕ್ರಮ ವಹಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಕಾನೂನು ರೀತ್ಯ ಕ್ರಮ ಎಂದರೆ, ಸಾವಿರಾರು ಕೋಟಿ ರೂ. ಮೌಲ್ಯದ ಸರಕಾರಿ ಸ್ವತ್ತನ್ನು ಸದ್ದಿಲ್ಲದೆ ಖಾಸಗಿ ರಿಯಲ್ ಎಸ್ಟೇಟ್ ಪಟ್ಟಭದ್ರರಿಗೆ ಧಾರೆ ಎರೆದುಕೊಡುವುದಾ ಸಚಿವರೇ? ಎಂದು ಹೆಚ್.ಡಿಕೆ…

Read More

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸೋಮನಹಳ್ಳಿ ತಾಂಡದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ರಕ್ಷಿತಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ರಕ್ಷಿತಾಳ ಅಂಗಾಗಗಳನ್ನು ದಾನ ಮಾಡುವ ಮೂಲಕ ಆಕೆಯ ಕುಟುಂಬದವರು ಸಾರ್ಥಕತೆ ಮೆರೆದಿದ್ದಾರೆ. ರಕ್ಷಿತಾಳ ಅಂಗಾಂಗಳನ್ನು ಹೊತ್ತ ಆಂಬುಲೆನ್ಸ್ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಿಂದ ಮಂಗಳೂರಿನ ಕಡೆಗೆ ತಲುಪಿದೆ. ಚಿಕ್ಕಮಗಳೂರು, ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಉಜಿರೆ, ಬೆಳ್ತಂಗಡಿ, ಮಂಗಳೂರು ಮೂಲಕ ಝೀರೋ ಟ್ರಾಫಿಕ್‌ನಲ್ಲಿ ಆಂಬುಲೆನ್ಸ್‌ನಲ್ಲಿ ಅಂಗಾಂಗಗಳ ಸಾಗಾಟ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಮನವಿ ಮಾಡಿದ್ದು, ಇದೀಗ ಕಡೂರಿನತ್ತ ಪಾರ್ಥಿವ ಶರೀರ ತಲುಪಿದೆ. ವಿಶೇಷ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರಿನಿಂದ ಬೆಂಗಳೂರಿನ ಕಡೆಗೆ ರಕ್ಷಿತಾಳ ಜೀವಂತ ಹೃದಯವನ್ನು ತೆಗೆದುಕೊಂದು ಹೋಗಲಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೃದಯ ರವಾನೆಯಾಗಿದೆ. ಯುವತಿ ರಕ್ಷಿತಾಳ ಒಟ್ಟು ಒಂಭತ್ತು ಅಂಗಗಳನ್ನು ದಾನ ಮಾಡಿ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ.ಸಾವನ್ನಪಿ ರಕ್ಷಿತಾಳನ್ನು ನೆನೆದು ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರೆಲ್ಲ ಕಣ್ಣೀರಿಟ್ಟಿದ್ದಾರೆ. ವಿದ್ಯಾರ್ಥಿನಿ ರಕ್ಷಿತಾಗೆ ಸಾವಿರಾರು ವಿದ್ಯಾರ್ಥಿನಿಯರು ಕಣ್ಣೀರಿನ ವಿದಾಯ ಹೇಳಿದ್ದಾರೆ. ಚಿಕ್ಕಮಗಳೂರು…

Read More

ಬೆಂಗಳೂರು : ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಪೌರ ಕಾರ್ಮಿಕರ ಜೊತೆ ಉಪಹಾರ ಸೇವಿಸಿ ನಂತರ ಮಾತನಾಡಿದ ಸಿಎಂ, ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ನೇಮಕ ಮಾಡಲಾಗುತ್ತದೆ. ನಂತರ ಇನ್ನುಳಿದ ಕಾರ್ಮಿಕ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಹೇಳಿದರು. ಮುಖ್ಯಮಂತ್ರಿಯಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ, ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ, ಶೀಘ್ರ ಪೌರ ಕಾರ್ಮಿಕರ ಖಾಯಂ ಬಗ್ಗೆ ಕ್ರಮ ಕೈಗೊಳ್ಳಲಿದ್ದೇನೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಕಳೆದೆರಡು ದಿನದಿಂದ ಭಾರೀ ಚರ್ಚೆಯಾಗುತ್ತಿರುವ ಪೇ ಸಿಎಂನ್ನು ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಪೇ ಸಿಎಂ ಪೇ- ಟು ಚೀಫ್ ಮಿನಿಸ್ಟರ್ ರಿಲೀಫ್ ಫಂಡ್ ಎಂಬ ಡಿಜಿಟಲ್ ಆಯಪ್ ಅಭಿವೃದ್ಧಿಪಡಿಸಿ ಈ ಮೂಲಕ ಸರ್ಕಾರ ಅಧಿಕೃತಗೊಳಿಸಲು ಮುಂದಾಗಿದೆ. ಈ ಮೂಲಕ ಸರ್ಕಾರದ ವಿರುದ್ಧದ ಅಭಿಯಾನವನ್ನು ರಾಜ್ಯ ಸರ್ಕಾರ ಪಾಸಿಟಿವ್ ಆಗಿ ತೆಗೆದುಕೊಳ್ಳಲಿದೆ ಎನ್ನಲಾಗಿದೆ. ಈ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು , ಸಂಘ ಸಂಸ್ಥೆಗಳು ನೆರವು ನೀಡಲು ಸಹಾಯವಾಗುವಂತೆ ಮಾಡಬಹುದು ಎಂದು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತೀದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಆ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಈಗಾಗಲೇ ಎರಡು ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿದೆ. (Vidya First Grade College & Sacred Heart First Grade College). ಪ್ರಸ್ತುತ ತುಮಕೂರು ಜಿಲ್ಲೆಯ ನಗರ ಮತ್ತು ಪ್ರತಿ ತಾಲ್ಲೂಕು ಕೇಂದ್ರಗಳಲ್ಲೂ ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು (ಅಧ್ಯಯನ ಕೇಂದ್ರಗಳನ್ನು) ತಾಲ್ಲೂಕಿನ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.inನಲ್ಲಿ ಅನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಭರ್ತಿ ಮಾಡಿದ ಅರ್ಜಿಯನ್ನು ಡೀನ್ (ಅಧ್ಯಯನ ಕೇಂದ್ರ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತಗಂಗೋತ್ರಿ, ಮೈಸೂರು-06 ಇಲ್ಲಿಗೆ ಸಲ್ಲಿಸುವುದು. ಮುಂದುವರೆದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಯಾವುದೇ ಶುಲ್ಕ ಪಾವತಿ ಮಾಡುವಂತಿಲ್ಲ. ಮುಕ್ತ ವಿವಿಗೆ ಪ್ರವೇಶಾತಿ ಪೆಡೆಯುವ ವಿದ್ಯಾರ್ಥಿಗಳು ಪ್ರವೇಶಾತಿ ಅರ್ಜಿಗಳನ್ನು…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಸುವರ್ಣಮುಖಿ ನದಿಗೆ ನಿರ್ಮಿಸಿದ ಸೇತುವೆ ಕಳೆದ ರಾತ್ರಿ ಕುಸಿದಿದೆ. ಪರಿಣಾಮವಾಗಿ ಮ್ಯಾದನಹೊಳೆ – ಸಮುದ್ರದಹಳ್ಳಿ ನಡುವಿನ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಸುವರ್ಣಮುಖಿ ನದಿಗೆ 1979-80ರಲ್ಲಿ ಈ ಸೇತುವೆ ನಿರ್ಮಿಸಲಾಗಿತ್ತು. 60 ಮೀಟರ್ ಉದ್ದದ ಸೇತುವೆ ಕುಸಿದ ಪರಿಣಾಮ ಕೋಡಿಹಳ್ಳಿ, ಇಕ್ಕನೂರು ಕುರುಬರಹಳ್ಳಿ ಭಾಗದ ಜನರು ಸಮುದ್ರದಹಳ್ಳಿ ಸಂಪರ್ಕಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆರನಕಟ್ಟೆ ಪ್ರೌಢಶಾಲೆ ಮತ್ತು ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗದೇ ಮನೆಯಲ್ಲಿಯೇ ಉಳಿದುಕೊಳ್ಳುವಂತಾಗಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಸುವರ್ಣಮುಖಿ ನದಿ ಮೈದುಂಬಿ ಹರಿದಿತ್ತು. ಸೇತುವೆ ಮುಳುಗುವಷ್ಟು ನೀರು ಹರಿದಿದ್ದು, ಕೆಲ ದಿನಗಳ ಹಿಂದೆಯಷ್ಟೇ ಪ್ರವಾಹ ಇಳಿದಿತ್ತು. ನದಿಯಲ್ಲಿ ಈಗ ಅಲ್ಪ ಪ್ರಮಾಣದ ನೀರು ಹರಿಯುತ್ತಿದೆ. ನೀರಿನ ರಭಸಕ್ಕೆ ಶಿಥಿಲಗೊಂಡಿದ್ದ ಸೇತುವೆ ಕುಸಿದು ಬಿದ್ದಿದೆ ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಿರಿಯೂರು ತಾಲ್ಲೂಕಿನ ತಾಲ್ಲೂಕು ತಹಶೀಲ್ದಾರ್ ಪ್ರಶಾಂತ್ ಕೆ. ಪಾಟೀಲ, ಸ್ಥಳಕ್ಕೆ ಭೇಟಿ ನೀಡಿ…

Read More

ಬೆಳಗಾವಿ: ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಬೆಂಗಳೂರಿನಲ್ಲಿ ಇಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ ಅವರನ್ನು ಬೇಟಿಯಾಗಿ ಭಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನರ್ಸಿಂಗ್ ಶಾಲೆ, ವಸತಿಗೃಹ ಹಾಗೂ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲೆಯ ಅನೇಕ ಕಡೆಗಳಿಂದ ಮತ್ತ ಹೊರ ರಾಜ್ಯಗಳಾದ ಗೋವಾ ಮತ್ತು ಮಹರಾಷ್ಟ್ರಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಬರುವುದರಿಂದ ಹಾಗೂ ಜನಸಂಖ್ಯೆಯು ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭೀಮ್ಸ್ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಹಾಗೂ ಬಿಮ್ಸ ಆವರಣದಲ್ಲಿ ನರ್ಸಿಂಗ್ ಶಾಲೆ, ವಸತಿಗೃಹಗಳ ನಿರ್ಮಾಣಕ್ಕೆ ಅಗತ್ಯ ಅನುದಾನವನ್ನು ಮಂಜುರು ಮಾಡುವಂತೆ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾನ್ಯ ಸಚಿವರು ಶಾಸಕರ ಮನವಿಗೆ ಸಕಾರಾತ್ಮಕ ಸ್ಪಂದನೆಯನ್ನು ವ್ಯಕ್ತಪಡಿಸಿದ್ದು, ತ್ವರಿತವಾಗಿ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ…

Read More

ಬೆಂಗಳೂರು : ರಾಜ್ಯದಲ್ಲಿ ಲಂಚ ತಿಂದರೆ ಅಪರಾಧ ಅಲ್ಲ. ಲಂಚ ತಿಂದಿದ್ದನ್ನು ಹೇಳಿದರೆ ಅಪರಾಧ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಕಾರ್ಯಕರ್ತರ ಬಂಧನ ಖಂಡಿಸಿ ಟ್ವೀಟ್ ಮಾಡಿದ್ದಾರೆ. ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ. ಎಷ್ಟು ಜನರನ್ನ ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲುಕಟ್ಟಿಸ್ತಿರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನ ಬಂಡೆದಿದ್ದಾರೆ, ಎಚ್ಚರ ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ನನ್ನ ಮತ್ತು ಡಿ.ಕೆ.ಶಿವಕುಮಾರ್​ ಬಗ್ಗೆ ಪೋಸ್ಟರ್​ ಅಂಟಿಸಿದ್ದರಲ್ಲಾ. ಅದರ ಬಗ್ಗೆ ಸಿಎಂ ಬೊಮ್ಮಾಯಿ ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ. ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರವಾಗಿದೆ ಎಂದು ಹೇಳಿದರು. ರಾಜಕೀಯ ವ್ಯವಸ್ಥೆಯಲ್ಲಿ ಆರೋಪ-ಪ್ರತ್ಯಾರೋಪ ಸಹಜ. ಇದನ್ನು ಕೀಳುಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತೆ. ಮುಖ್ಯಮಂತ್ರಿಗಳೇ ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿದ್ರಿ. ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ ಎಂದು ಟ್ವಿಟರ್​ನಲ್ಲಿ ಸಿಎಂ ವಿರುದ್ಧ ಸಿದ್ದರಾಮಯ್ಯ ಕಿಡಿ ಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪಕ್ಷದ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷರಾಗುವ ಯಾರೇ ಆಗಲಿ ಅವರು ಭಾರತದ ನಂಬಿಕೆ ವ್ಯವಸ್ಥೆ ಮತ್ತು ದೃಷ್ಟಿಕೋನವನ್ನು ಪ್ರತಿನಿಧಿಸುತ್ತಾರೆ ಎಂಬುದನ್ನು ನೆನಪಿನಲ್ಲಿಡಬೇಕು. ಕಾಂಗ್ರೆಸ್ ಅಧ್ಯಕ್ಷರು ಕೇವಲ ಸಾಂಸ್ಥಿಕ ಹುದ್ದೆಯಲ್ಲ, ಇದು ಸೈದ್ಧಾಂತಿಕ ಹುದ್ದೆ ಮತ್ತು ನಂಬಿಕೆಯ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಗಾಂಧಿಯೇತರ ಕಾಂಗ್ರೆಸ್ ಅಧ್ಯಕ್ಷರಿಗೆ 25 ವರ್ಷಗಳ ನಂತ್ರ ಸ್ಥಾನ ತೆರವುಗೊಳಿಸಿದರು. ಅವಿಶ್ವಾಸಿಗಳಿಗೆ, ಸೀತಾರಾಮ್ ಕೇಸರಿ ಅವರು ಗಾಂಧಿಯೇತರ ಕೊನೆಯ ಅಧ್ಯಕ್ಷರಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More