Subscribe to Updates
Get the latest creative news from FooBar about art, design and business.
- ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
- ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
- BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
- ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
- ಸರಗೂರು | ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
Author: admin
ಮಧುಗಿರಿ: ನಿವೇಶನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ವೇಳೆ ಮಹಿಳೆ ಸಹಿತ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತಾಲೂಕಿನ ಮಿಡಿಗೇಶಿ ಗ್ರಾಮದಲ್ಲಿ ನಡೆದಿದೆ. ರಾಮಾಂಜನೇಯ. (48) ಶಿಲ್ವಾ (36) ಹತ್ಯೆಗೀಡಾದವರಾಗಿದ್ದು, ಶ್ರೀಧರ್ ಗುಪ್ತ ಮತ್ತು ಸಹಚರರು ಕೃತ್ಯ ನಡೆಸಿದ ಆರೋಪಿಗಳಾಗಿದ್ದಾರೆ. ದೇವಸ್ಥಾನದ ಜಾಗಕ್ಕೆ ಸಂಬಂಧಿಸಿದ ತಕರಾರು ಹತ್ಯೆಯಲ್ಲಿ ಅಂತ್ಯಗೊಂಡಿದೆ ಎಂದು ಹೇಳಲಾಗಿದೆ. ಗಣಪತಿ ದೇವಸ್ಥಾನದ ಜಾಗದ ವಿಚಾರವಾಗಿ ಆರೋಪಿ ಶ್ರೀಧರ್ ಗುಪ್ತ ಹಾಗೂ ಹತ್ಯೆಗೀಡಾದ ರಾಮಾಂಜನೇಯ ಹಾಗೂ ಶಿಲ್ಪಾ ನಡುವೆ ನ್ಯಾಯಾಲಯದಲ್ಲಿ ಪ್ರಕರಣ ಇತ್ತು. ಈ ಪ್ರಕರಣದಲ್ಲಿ ರಾಮಾಂಜನೇಯ ಹಾಗೂ ಶಿಲ್ಪಾ ಅವರ ಪರವಾಗಿ ತೀರ್ಪು ಬಂದಿತ್ತು. ಇದೇ ದ್ವೇಷದಲ್ಲಿ ಹತ್ಯೆ ನಡೆದಿದೆ ಎನ್ನಲಾಗಿದೆ. ರಾಮಾಂಜನೇಯ, ಶಿಲ್ಪಾ, ಮತ್ತು ಮಲ್ಲಿಕಾರ್ಜುನ ಎಂಬವರು ರಸ್ತೆಯಲ್ಲಿ ಮಾತನಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಶ್ರೀಧರ್ ಗುಪ್ತ ಮತ್ತು ಸಹಚರರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಪರಿಣಾಮವಾಗಿ ಮೂವರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ರಾಮಾಂಜನೇಯ, ಶಿಲ್ಪಾ ಮೃತಪಟ್ಟರೆ, ಮಲ್ಲಿಕಾರ್ಜುನ ಅವರು ಗಂಭೀರ…
ಇಂದು ಬೆಂಗಳೂರು, ಮಂಗಳೂರು ಸೇರಿದಂತೆ ದೇಶದಾದ್ಯಂತ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಕಚೇರಿ ಮನೆ ಮೇಳೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಾಳಿ ನಡೆಸಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, PFI, SDPI ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೆ. ಸಂಘಟನೆಗಳನ್ನ ಬ್ಯಾನ್ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನ ಬಂಧಿಸಿದ ಪೊಲೀಸರಿಗೆ ಅಭಿನಂದನೆ. ಧರ್ಮ ನೋಡಿ ಪೊಲೀಸರು ಕಾರ್ಯಚರಣೆ ಮಾಡಲ್ಲ ಎಂದು ಶಿವಮೊಗ್ಗ ಪೊಲೀಸರಿಗೆ ಗೃಹಸಚಿವ ಅರಗ ಜ್ಞಾನೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ. ಮಾಹಿತಿ ಆಧಾರದ ಮೇಲೆ ಎನ್ ಐಎ ದಾಳಿ ಮಾಡಿದೆ. ಅದನ್ನ ತಡೆಯುತ್ತಾರೆ ಎಂದರೇ ಏನರ್ಥ..? ಇಂಥ ದುಷ್ಟ ಶಕ್ತಿಗಳಿಗೆ ಬೆಂಬಲ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಎನ್ ಐಎ ದಾಳಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಪಿಎಫ್ ಐ ಏನೇನು ಕೃತ್ಯ ಮಾಡುತ್ತಿದೆ ಎಂಬುದು ಗೊತ್ತಿದೆ. ಕಾಂಗ್ರೆಸ್ ಇಂತಹ…
ಬೆಂಗಳೂರು : ನಗರದ ವಿವಿಧೆಡೆ ಕಾಂಗ್ರೆಸ್ ಪೇಸಿಎಂ ಹೆಸರಿನ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಪೋಸ್ಟರ್ ಅಂಟಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಗಗನ್ ಯಾದವ್ ಮತ್ತು ಬಿ.ಆರ್.ನಾಯ್ಡು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಬಂಧಿತರು ಕೆಪಿಸಿಸಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದ್ದು, ಬೆಂಗಳೂರಿನ ಹಲವೆಡೆ ಪೋಸ್ಟರ್ ಅಂಟಿಸಿರೋದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಡ್ಯ: ಯುವಕನ ಜೊತೆ ಮಗಳು ಓಡಿ ಹೋಗಿದ್ದಕ್ಕೆ ತಂದೆ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಾಚಹಳ್ಳಿಯಲ್ಲಿ ನಡೆದಿದೆ. ಕೀರ್ತನಾ, ಅಭಿ ಕಳೆದ ಐದು ದಿನ ಹಿಂದೆ ಓಡಿ ಹೋಗಿದ್ದರು. ಪ್ರೇಮಿಗಳನ್ನ ಹುಡುಕಿಕೊಡುವಂತೆ ಕೆ.ಆರ್.ಪೇಟೆ ಠಾಣೆಗೆ ಪೋಷಕರು ದೂರು ನೀಡಿದ್ದರು. ಐದು ದಿನವಾದರೂ ಮಗಳು ಸಿಗದ ಕಾರಣ ಮರ್ಯಾದೆಗೆ ಅಂಜಿ ಯುವತಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವತಿ ತಂದೆ ರವಿ (47) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ದೂರು ನೀಡಿದಾಗ ಕ್ರಮ ತೆಗೆದುಕೊಳ್ಳದಿದ್ಕೆ ಸಂಬಂಧಿಕರು ಕೆ.ಆರ್.ಪೇಟೆ ಪೊಲೀಸ್ ಠಾಣೆ ಮುಂದೆ ಮೃತ ರವಿ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ. ಕೆಎಎಸ್ ಅಧಿಕಾರಿ ರಘುನಾಥ್ ಭೂಸ್ವಾಧೀನಾಧಿಕಾರಿ ವಿಜಯ್ ಬಲೆಗೆ ಬಿದ್ದ ಅಧಿಕಾರಿಗಳು. ಬೆಂಗಳೂರಿನ ಕೆಐಎಡಿಬಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಜಮೀನು ಸಂಬಂಧ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಪ್ರದೀಪ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಸಿಕ್ಕಿಬಿದ್ದ ಅಧಿಕಾರಿಗಳನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ನ ಪೇ ಸಿಎಂ ಅಭಿಯಾನ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಇದೊಂದು ವ್ಯವಸ್ಥಿತ ಷಡ್ಯಂತ್ರ. ಈ ರೀತಿ ಪೋಸ್ಟ್ ಹಾಕುವುದರಿಂದ ರಾಜ್ಯಕ್ಕೆ ಕೆಟ್ಟ ಹೆಸರು ಎಂದು ಕಿಡಿಕಾರಿದರು. ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಆಧಾರ ರಹಿತವಾಗಿ ಕ್ಯಾಂಪೇನ್ ಮಾಡಲಾಗುತ್ತಿದೆ. ಈ ರೀತಿ ಮಾಡುವುದಕ್ಕೆ ಎಲ್ಲರಿಗೂ ಬರುತ್ತದೆ. ವ್ಯವಸ್ಥಿತ ಅಪಪ್ರಚಾರದ ಬಗ್ಗೆ ಜನರಿಗೂ ಗೊತ್ತಾಗುತ್ತೆ. ಪೇಸಿಎಂ ಪೋಸ್ಟರ್ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಕಿಡಿಗೇಡಿಗಳು ಯಾರೇ ಇದ್ದರೂ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಿದ್ದೇನೆ. ಪೋಸ್ಟರ್ ಹಾಕಿದವರ ವಿರುದ್ಧ ಕೇಸ್ ದಾಖಲಿಸಲು ಸೂಚನೆ ನೀಡಿದ್ದೇನೆ. ಇದರ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗಬೇಕು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅಮರಾವತಿ, ಸೆ.22: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಎನ್‌ಟಿಆರ್ ಆರೋಗ್ಯ ವಿಶ್ವವಿದ್ಯಾಲಯಕ್ಕೆ ತಮ್ಮ ತಂದೆ ಮತ್ತು ದಿವಂಗತ ಮಾಜಿ ಮುಖ್ಯಮಂತ್ರಿ ಡಾ ವೈ ಎಸ್ ರಾಜಶೇಖರ್ ರೆಡ್ಡಿ ಅವರ ಹೆಸರನ್ನು ಮರುನಾಮಕರಣ ಮಾಡುವ ನಿರ್ಧಾರ ಬುಧವಾರ ರಾಜ್ಯದಲ್ಲಿ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ತೆಲುಗು ದೇಶಂ ಪಕ್ಷ (ಟಿಡಿಪಿ) ಇಡೀ ದಿನ ಸದನದಲ್ಲಿ ಗದ್ದಲ ಸೃಷ್ಟಿಸಿತ್ತು. ಇದರ ನಡುವೆಯೂ ಎನ್‌ಟಿಆರ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಹೆಸರನ್ನು ಡಾ ವೈಎಸ್‌ಆರ್ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಎಂದು ಬದಲಿಸುವ ಮಸೂದೆಯನ್ನು ರಾಜ್ಯ ವಿಧಾನಸಭೆಯು ಅಂಗೀಕರಿಸಿತು. ಬುಧವಾರ ರಾಜ್ಯ ಆರೋಗ್ಯ ಸಚಿವ ವಿಡದಾಳ ರಜಿನಿ ಮಸೂದೆಯನ್ನು ಮಂಡಿಸಿದರು. ಈ ನಿರ್ಧಾರದ ವಿರುದ್ಧ ಟಿಡಿಪಿ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿ ಪ್ರಶ್ನೋತ್ತರ ಕಲಾಪಕ್ಕೆ ಅಡ್ಡಿಪಡಿಸಿದರು.ವಿಧಾನಸಭೆಯು ಮಸೂದೆಯನ್ನು ಅಂಗೀಕರಿಸಿದ ಕೂಡಲೇ ಟಿಡಿಪಿ ಕಾರ್ಯಕರ್ತರು ವಿಜಯವಾಡದಲ್ಲಿ ಪ್ರತಿಭಟನಾ ಪ್ರದರ್ಶನಗಳನ್ನು ನಡೆಸಿದರು. ಆರೋಗ್ಯ ವಿಶ್ವವಿದ್ಯಾಲಯದ ಬಳಿ ಧರಣಿ ನಡೆಸುವ ಮೂಲಕ ರಸ್ತೆಗಳನ್ನು ತಡೆದರು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.…
ಗದಗ: ತಾಲೂಕಿನ ಡಂಬಳ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಕಂಬಳಿ ಹುಳು ಆಕಾರದ ವಿಚಿತ್ರ ಕೀಟವೊಂದು ಹರಿದಾಡಿದ ಪರಿಣಾಮ ಆ ವ್ಯಕ್ತಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ತಮ್ಮ ಜಮೀನು ಕೆಲಸಕ್ಕೆ ಹೋಗಿದ್ದ ಸಿದ್ದಲಿಂಗಪ್ಪ ಕುರ್ತಕೋಟಿ ಮೈ ಮೇಲೆ ಈ ಹುಳು ಹರಿದಾಡಿದೆ. ಹಾಗಾಗಿ ಸಿದ್ದಲಿಂಗಪ್ಪ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಸದ್ಯ ಗುಣಮುಖರಾಗಿರುವ ಸಿದ್ದಲಿಂಗಪ್ಪ ಮನೆಯಲ್ಲಿದ್ದಾರೆ. ಅದೇ ಮಾದರಿಗೆ ಹುಳವೊಂದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹುಳು ಮೈ ಮೇಲೆ ಹರಿದ್ರೆ ಸಾವು ಸಂಭವಿಸುತ್ತದೆ ಎಂದು ಸಂದೇಶ ಹರಿಬಿಡಲಾಗುತ್ತಿದೆ. ಇದರಿಂದ ಆತಂಕಗೊಂಡಿರುವ ಹೊಂಬಳ ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು, ಹುಳುವನ್ನು ಕೃಷಿ ಇಲಾಖೆ ಅಧಿಕಾರಿಗಳಿಗೆ ನೀಡಿ ಪರೀಕ್ಷೆ ಮಾಡಿಸುವಂತೆ ಆಗ್ರಹಿಸುತ್ತಿದ್ದಾರೆ. ಸುಳ್ಳು ಮಾಹಿತಿಯುಳ್ಳ ಫೊಟೋಗಳೊಂದಿಗೆ ಹರಿದಾಡುತ್ತಿರುವ ಸಂದೇಶದಿಂದ ಜನ ಭಯ ಭೀತರಾಗಿದ್ದಾರೆ. ಎರಡು ಮೃತ ದೇಹದ ಜೊತೆಗೆ ಒಂದು ವಿಚಿತ್ರ ಮಾದರಿಯ ಹುಳು ಫೋಟೋವನ್ನು ಶೇರ್ ಮಾಡುತ್ತಿದಾರೆ. ಈ ಭಯಾನಕ ಕೀಟ ದೇಹಕ್ಕೆ ಸ್ಪರ್ಶ ಮಾಡಿದ್ರೆ, ವಾಂತಿ ಬರುತ್ತದೆ. ಹಾಗೇ ಮೂರ್ಛೆ ಹೋಗುತ್ತಾರೆ…
ನವದೆಹಲಿ: ಪ್ರಧಾನ ಮಂತ್ರಿ ಕೇರ್ಸ್ ಫಂಡ್ಗೆ ಕೈಗಾರಿಕೋದ್ಯಮಿ ರತನ್ ಟಾಟಾ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕೆ.ಟಿ.ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಅವರನ್ನು ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ. ಹಾಗೆ ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ರಾಜೀವ್ ಮೆಹ್ರಿಷಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ, ಇಂಡಿಕಾಪ್ಸ್ ಮತ್ತು ಪಿರಮಲ್ ಫೌಂಡೇಶನ್‌ನ ಮಾಜಿ ಸಿಇಒ ಆನಂದ್ ಶಾ ಅವರನ್ನು ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿಎಂ ಕೇರ್ಸ್ ಫಂಡ್ ಟ್ರಸ್ಟಿಗಳ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿ.ಜೆ.ಪಿ ಸರ್ಕಾರವು ನಗರಸಭೆ, ಪುರಸಭೆ, ಮಹಾನಗರ ಪಾಲಿಕೆ ಮತ್ತು ಇತರ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರಾಗಿ ನೇಮಕಾತಿ ಮಾಡಲು ಸಮ್ಮತಿ ನೀಡಿದ ಪ್ರಯುಕ್ತ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ವ್ಯಯಕ್ತಿಕವಾಗಿ ಹಾಗೂ ಎಲ್ಲ ಪೌರಕಾರ್ಮಿಕರ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಂಪುಟಕ್ಕೆ ಹೃದಯಪೂರ್ವಕ ಕೃತಜ್ಞತೆಗಳನ್ನು ಅರ್ಪಿಸಿದರು. ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುತ್ತೀರುವ ರಾಜ್ಯ ಬಿ.ಜೆ.ಪಿ ಸರ್ಕಾರವು ಎಲ್ಲರ ಹಿತವನ್ನು ಕಾಯುತ್ತಿದ್ದು, ಪೌರಕಾರ್ಮಿಕರ ಹಲವಾರು ವರ್ಷಗಳ ಬೇಡಿಕೆಯನ್ನು ಈಡೇರಿಸಿರುವುದು ಅತೀ ಸಂತೋಷದ ಸಂಗತಿಯಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy