Author: admin

ಬೆಂಗಳೂರಿನಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಇಂದು ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಭಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲೆಯ ಅನೇಕ ಕಡೆಗಳಿಂದ ಮತ್ತ ಹೊರ ರಾಜ್ಯಗಳಾದ ಗೋವಾ ಮತ್ತು ಮಹರಾಷ್ಟ್ರಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಬರುವುದರಿಂದ ಹಾಗೂ ಜನಸಂಖ್ಯೆಯು ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭೀಮ್ಸ್ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಬೇಟಿ ಮಾಡಿ ವಿನಂತಿಸಲಾಗಿದೆ ಎಂದರು. ನಮ್ಮ ಮನವಿಗೆ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸಕಾರಾತ್ಮಕ ಸ್ಪಂದನೆಯನ್ನು ವ್ಯಕ್ತಪಡಿಸಿದ್ದು, ತ್ವರಿತವಾಗಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿವಾಸಕ್ಕೆ ಭೇಟಿ ನೀಡಿ ವಿಚಾರಿಸಿದರು. ಅನಾರೋಗ್ಯಕ್ಕೆ ಒಳಗಾಗಿರುವಂತ ಮಾಜಿ ಪ್ರಧಾನಿ ದೇವೇಗೌಡ ಅವರ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ,ಕೆಲ ಕಾಲ ಮಾತುಕತೆ ನಡೆಸಿದರು. ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಸಚಿವ ಕೆ.ಗೋಪಾಲಯ್ಯ, ವಿ.ಸೋವಣ್ಣ, ವಿ. ಮುನಿರತ್ನ ಸೇರಿದಂತೆ ಅನೇಕರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ ಬೆಳ್ಳಂಬೆಳಗ್ಗೆ ದೇಶದ ಹಲವು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಗೆ ಸಂಬಂಧಿಸಿದ ನಿವೇಶನಗಳ ಹಾಗೂ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದೆ. ಕರ್ನಾಟಕ ತಮಿಳುನಾಡು, ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಸೇರಿದಂತೆ ಇತರ ರಾಜ್ಯಗಳಲ್ಲಿರುವ ಎಸ್​ ಡಿಪಿಐ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಇನ್ನೂ, ಮಂಗಳೂರಿನ ಪಿಎಫ್​ಐ ಕಚೇರಿ ಮೇಲೆ ಇಂದು ಬೆಳಗಿನ ಜಾವ 3.30ರ ರ ಸುಮಾರಿಗೆ ಎನ್ಐಎ ದಾಳಿ ನಡೆಸಿದೆ. ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಕಚೇರಿಗೆ ಪ್ರವೇಶಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿಂದೂ ಸಂಘಟನೆ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ​ಎನ್ಐಎ ತನಿಖೆ ನಡೆಸುತ್ತಿದೆ. ಇದಕ್ಕಾಗಿ ಮಂಗಳೂರಿನ ಸ್ಥಳೀಯ ಪೊಲೀಸರು ಸಹ ರಸ್ತೆಯಲ್ಲಿ ಉಪಸ್ಥಿತರಿದ್ದು, ಭದ್ರತೆ ಒದಗಿಸಿದ್ದಾರೆ. ಈ ವೇಳೆ ಗೋ ಬ್ಯಾಕ್ ಎನ್‌ ಐಎ ಎಂದು ಪಿಎಫ್‌ ಐ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು, ಎನ್‌ಐಎ ದಾಳಿ ಹಿನ್ನಲೆಯಲ್ಲಿ ಪೊಲೀಸರು…

Read More

ಹೆಚ್.ಡಿ.ಕೋಟೆ: ಕೆಲಸ ಕೊಡಿ, ಸಂಬಳ ಹೆಚ್ಚಿಸಿ ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಂಚಾಲಕಿ ಎಚ್. ವಿ.ವಿನುತಾ, ಒಂದು ಕುಟುಂಬಕ್ಕೆ 200 ದಿನಗಳ ಕೆಲಸ ನೀಡಬೇಕು. ಕಾರ್ಮಿಕರು ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿ ಊಟಕ್ಕೂ ಗತಿಯಿಲ್ಲದೆ ಪರದಾಡುತ್ತಿದ್ದಾರೆ. ತಕ್ಷಣ ಅವರಿಗೆ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು. ಗ್ರಾಮ ಪಂಚಾಯಿತಿಯಿಂದ ಸಾಮಗ್ರಿಗಳು ಪೂರೈಸಿ , ಇಲ್ಲವಾದಲ್ಲಿ ಕೂಲಿಕಾರ್ಮಿಕರಿಗೆ 20 ರೂಪಾಯಿಗಳಿಗೆ ಹೆಚ್ಚಿಸಿ ಖಾತೆಗೆ ಜಮಾ ಮಾಡಬೇಕು. ಕಾರ್ಮಿಕರಿಗೆ ಸ್ಥಳೀಯವಾಗಿ ಕೆಲಸ ಲಭ್ಯವಿಲ್ಲ ಎಂದಾದಲ್ಲಿ 5 ಕಿಲೋ ಮೀಟರ್ ಗಿಂತಲೂ ಹೆಚ್ಚಿನ ದೂರದಲ್ಲಿ ಕೆಲಸ ನೀಡಿದರೆ ಕೂಲಿ ಹಣದ ಶೇಕಡಾ 10ರಷ್ಟು ಹಣ ನೀಡಲಾಗುತ್ತಿತ್ತು. ಅದು ಸಾಕಾಗುತ್ತಿಲ್ಲ ಅದನ್ನು ಶೇ.20ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಕಾರ್ಮಿಕರು ಕೆಲಸ ಮಾಡಿದ ಹದಿನೈದು ದಿನಗಳ ಒಳಗಾಗಿ ಕೂಲಿ ಪಾವತಿ ಆಗಬೇಕು. ಆದರೆ,…

Read More

ಬಹುಭಾಷಾ ನಟ ಧನಂಜಯ್ ಅವರ 26ನೇ ಸಿನಿಮಾ ಅನೌನ್ಸ್ ಆಗುತ್ತಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆ ಚಿತ್ರಕ್ಕೆ ಡಾಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಧನಂಜಯ್ ಜೊತೆಗೆ ತೆಲುಗಿನ ಪ್ರತಿಭಾನ್ವಿತ ನಟ ಸತ್ಯದೇವ್ ಕೂಡ ಮುಖ್ಯಭೂಮಿಕೆಯಲ್ಲಿ ಬಣ್ಣ ಹಚ್ಚಿದ್ದಾರೆ. ವಿಶೇಷ ಅಂದರೆ ಇದು ಸತ್ಯದೇವ್ ನಟಿಸುತ್ತಿರುವ 26ನೇ ಕೂಡ ಹೌದು.. ತೆಲುಗಿನಲ್ಲಿ ಪೆಂಗ್ವಿನ್ ಸಿನಿಮಾ ಮಾಡಿದ್ದ ಈಶ್ವರ್ ಕಾರ್ತಿಕ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಚರಣ್ ರಾಜ್ ಸಂಗೀತ ನೀಡಲಿದ್ದಾರೆ. ಅಂದಹಾಗೆ ಕ್ರೈಮ್ ಕಥೆಯನ್ನೊಳಗೊಂಡ ಈ ಚಿತ್ರವನ್ನು ಓಲ್ಡ್‌ ಟೌನ್ ಪಿಕ್ಚರ್ಸ್ ಸಂಸ್ಥೆಯಡಿ ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು ಸೆಪ್ಟಂಬರ್ 21: ಹೆಚ್ಚುತ್ತಿರುವ ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ 15 ವರ್ಷಕ್ಕಿಂತಲೂ ಹಳೆಯದಾದ 80 ಲಕ್ಷ ಹಳೆಯ ವಾಹನಗಳನ್ನು ಸಂಚಾರಕ್ಕೆ ಅನರ್ಹಗೊಳಿಸಲು ಮುಂದಾಗಿದೆ. ಈ ಸಂಬಂಧ ‘ವಾಹನ ಗುಜರಿ ನೀತಿ- 2021’ ಅಳವಡಿಸಿಕೊಳ್ಳಲು ಮುಂದಾಗಿದೆ. ಇದು ಜಾರಿಯಾದರೆ ವಾಹನಗಳ ಮಾಲೀಕರು ವಾಹನಗಳನ್ನು ಗುಜರಿಗೆ ನೀಡಿ ಪ್ರಮಾಣ ಪತ್ರ ಪಡೆಯಬೇಕು. ಅದನ್ನು ಹೊಸ ವಾಹನಗಳಿಗೆ ಖರೀದಿ ವೇಳೆ ಸಲ್ಲಿಸಿದರೆ ಮೋಟಾರು ವಾಹನ ತೆರಿಗೆಯಲ್ಲಿ ರಿಯಾಯಿತಿ ಪಡೆಯಬಹುದಾಗಿದೆ. ರಾಜ್ಯದಲ್ಲಿ ನೋಂದಾಯಿತ 2.8 ಕೋಟಿ ವಾಹನಗಳಲ್ಲಿ 15 ವರ್ಷಕ್ಕಿಂತಲೂ ಹೆಚ್ಚು ಹಳೆಯದಾದ 80 ಲಕ್ಷಕ್ಕೂ ಅಧಿಕ ವಾಹನಗಳು ಇವೆ ಎಂದು ಅಂದಾಜಿಸಲಾಗಿದೆ. ಸಾರಿಗೆ ಇಲಾಖೆಯ ಪ್ರಕಾರ, ರಾಜಧಾನಿ ಬೆಂಗಳೂರಿನಲ್ಲೇ ಒಂದು ಕೋಟಿ ವಾಹನಗಳಿವೆ. ಈ ವರ್ಷದ ಮಾರ್ಚ್ ಮಾಸಾಂತ್ಯಕ್ಕೆ 29 ಲಕ್ಷ ವಾಹನಗಳು 15 ವರ್ಷಗಳ ಮಿತಿಯನ್ನು ದಾಟಿರುವುದು ಪತ್ತೆ ಆಗಿದೆ. ಹೆಚ್ಚಿನ ಮಾಲಿನ್ಯಕಾರಕವಾಗಿರುವ ಎರಡು ಸ್ಟ್ರೋಕ್ ಆಟೋರಿಕ್ಷಾಗಳು ಬೆಂಗಳೂರಲ್ಲಿ ಸಂಚಾರ ಸೇವೆ ನೀಡುತ್ತಿವೆ ಎಂದು ಇಲಾಖೆ ತಿಳಿಸಿದೆ. ಕೇಂದ್ರ ಗುಜರಿ…

Read More

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ತಡರಾತ್ರಿ ಡಿವೈಡರ್ ಮೇಲೆ ಮಲಗಿದ್ದ ಜನರ ಮೇಲೆ ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜಧಾನಿ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ಸೀಮಾಪುರಿಯಲ್ಲಿರುವ ರೆಡ್ ಲೈಟ್ ಡಿಟಿಸಿ ಡಿಪೋವನ್ನು ದಾಟುವಾಗ ಅಪಘಾತ ಸಂಭವಿಸಿದೆ. ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಟ್ರಕ್ ಮಲಗಿದ್ದವರ ಮೇಲೆ ಹರಿದ ಬಳಿಕ ಅದೇ ವೇಗದಲ್ಲಿ ಎಸ್ಕೇಪ್ ಆಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಆರಂಭಿಸಿದ್ದಾರೆ. ಮೃತರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಬಳಿಕ ಕುಟುಂಬಸ್ಥರಿಗೆ ನೀಡಲಾಗುತ್ತದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೀಡಾದವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, 4 ಮಂದಿಯನ್ನು ಜಿಟಿಬಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಾಲ್ವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ಇನ್ನೊಬ್ಬರು ಪ್ರಾಥಮಿಕ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಮೃತ ನಾಲ್ವರನ್ನು ಕರೀಂ (52), ಚೋಟ್ಟೆ ಖಾನ್ಸ್ (25), ಶಾ…

Read More

ಹೈದರಾಬಾದ್: ಚೆನ್ನೈನ ಉದ್ಯಮಿ ಅಬ್ದುಲ್ ಘನಿ ಎಂಬುವವರು ತಿರುಪತಿ ವೆಂಕಟೇಶ್ವರ ಸ್ವಾಮಿಯ ದೇವಸ್ಥಾನಕ್ಕೆ 1.02 ಕೋಟಿ ದೇಣಿಗೆ ನೀಡಿದ್ದಾರೆ. ಪತ್ನಿ ಸುಬೀನಾ ಬಾನು ಮತ್ತು ಮಕ್ಕಳೊಂದಿಗೆ ದೇವರ ದರ್ಶನ ಪಡೆದ ಘನಿ ಅವರು ತಿರುಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ ಪೀಠೋಪಕರಣ ಹಾಗೂ ಪಾತ್ರೆಗಳನ್ನು ಖರೀದಿಸಲು 87 ಲಕ್ಷ ಹಾಗೂ ಎಸ್.ವಿ.ಅನ್ನಪ್ರಸಾದಂ ಟ್ರಸ್ಟ್‌ಗೆ 15 ಲಕ್ಷ ಒದಗಿಸಿದರು. ದೇವಾಲಯ ಸಮಿತಿಯ ಅಧಿಕಾರಿಯೊಬ್ಬರಿಗೆ ಘನಿ ಕುಟುಂಬದವರು 1.02 ಕೋಟಿ ರೂ. ಮೊತ್ತದ ಡಿ.ಡಿ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ವೆಂಕಟೇಶ್ವರ, ಅಲ್ಲಾ, ಏಸು ಎಲ್ಲರೂ ಒಂದೇ ಎಂದು ನಂಬಿದ್ದೇನೆ. ನಾನು ವೆಂಕಟೇಶ್ವರ ಸ್ವಾಮಿಯ ಭಕ್ತ. ಸುಮಾರು 25 ವರ್ಷಗಳಿಂದ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಆರೋಗ್ಯ ವಿಚಾರಿಸಿ, ಕೆಲ ಹೊತ್ತು ಮಾತುಕತೆ ನಡೆಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಮಾಜಿ ಪ್ರಧಾನಿ ದೇವೇಗೌಡರನ್ನು ಒಂದು ತಿಂಗಳ ಹಿಂದೇಯೇ ನೋಡಲು ಬರಬೇಕಂದಿದ್ದೆ, ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದರು. ನಾನು ಕಂಡಂತೆ ಇಡೀ ರಾಜ್ಯವನ್ನು ಸುತ್ತಿದಂತಹ ವ್ಯಕ್ತಿ ಇದ್ದರೆ ಅದುವೇ ದೇವೇಗೌಡರು, ಅವರಿಗೆ ದೇವರು ಆರೋಗ್ಯ ಕೊಡಲಿ, ಚೆನ್ನಾಗಿಡಲಿ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ತಾಲ್ಲೂಕಿನ ಅಂದ್ರ ಗಡಿ ರಸ್ತೆಯಲ್ಲಿ ಅಬಕಾರಿ ಉಪ ಆಯುಕ್ತರು ತುಮಕೂರು ಜಿಲ್ಲೆ ತುಮಕೂರು ರವರ ನಿರ್ದೇಶನದಂತೆ ಉಪ ಅಧೀಕ್ಷಕರು ಮಾರ್ಗದರ್ಶನದಲ್ಲಿ ದಾಳಿ ನಡೆಸಿ 8 ಲೀಟರ್ ಶೇಂದಿ ವಶಪಡಿಸಿಕೊಳ್ಳಲಾಗಿದೆ. ಸೆಪ್ಟಂಬರ್ 20ರಂದು ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ ಶೇಂದಿ ಸಾಗಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ, 8 ಲೀಟರ್ ಶೇಂದಿ ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ‘ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ವರದಿ : ಅಬಿದ್ ಮಧುಗಿರಿ  ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More