Author: admin

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ನಿರಂತರವಾಗಿ ರಾಜ್ಯಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದು ಇದೀಗ ಮತ್ತೆ ಫೆಬ್ರವರಿ 6 ರಂದು ಆಗಮಿಸಲಿದ್ದಾರೆ. ಕಳೆದ ಎರಡ್ಮೂರು ದಿನಗಳ ಹಿಂದಷ್ಟೆ ಕಲ್ಬುರ್ಗಿ ಯಾದಗಿರಿ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಇದೀಗ ಫೆಬ್ರವರಿ 6 ರಂದು ತುಮಕೂರು ಧಾರವಾಡ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಧಾರವಾಡ ಐಐಟಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ತುಮಕೂರಿನ ಗುಬ್ಬಿ ಬಳಿಯ ಹೆಚ್ ಎಎಲ್ ಹೆಲಿಕಾಪ್ಟರ್ ಘಟಕವನ್ನ ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಲಕ್ಷಾಂತರ ಜನರನ್ನ ಸೇರಿಸಲು ಬಿಜೆಪಿ ಪ್ಲಾನ್ ರೂಪಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಲು ಚಿನ್ನದ ವ್ಯಾಪಾರಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಚಿನ್ನದ ಪ್ರತಿಮೆಯನ್ನು ಮಾರಾಟ ಮಾಡಿದ್ದಾರೆ. ಸೂರತ್‌ನ ಉದ್ಯಮಿ ಬಸಂತ್ ಬೋರಾ ಅವರು 156 ಗ್ರಾಂ ತೂಕದ ಚಿನ್ನದ ಪ್ರತಿಮೆಯನ್ನು ರಚಿಸಿದ್ದಾರೆ. ಗುಜರಾತ್‌ನಲ್ಲಿ 156 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಸಂಕೇತವಾಗಿ 156 ಗ್ರಾಂ ತೂಕದ ಚಿನ್ನದ ಪ್ರತಿಮೆಯನ್ನು ಸ್ಥಾಪಿಸಲಾಯಿತು. 19.5 ಪವನ್ ಚಿನ್ನದ ವಿಗ್ರಹಕ್ಕೆ 8,11,200 ರೂ. ಕಾರ್ಮಿಕ ಶುಲ್ಕ ಸೇರಿ 11 ಲಕ್ಷ ರೂಪಾಯಿಗೆ ಚಿನ್ನದ ಮೂರ್ತಿಯನ್ನು ಮಾರಾಟಕ್ಕೆ ಇಡಲಾಗಿದೆ. ಮೂರು ತಿಂಗಳಲ್ಲಿ 15 ಅಕ್ಕಸಾಲಿಗರು ತಯಾರಿಸಿದ ನರೇಂದ್ರ ಮೋದಿ ಅವರ ಪ್ರತಿಮೆ ಡಿಸೆಂಬರ್‌ನಲ್ಲಿಯೇ ಪೂರ್ಣಗೊಂಡಿದೆ. ಆದರೆ ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾದ ಬಳಿಕ ಕೆಲ ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಿ ವಿಧಾನಸಭೆ ಸ್ಥಾನಗಳ ಸಂಖ್ಯೆಗೆ ವೇಟೇಜ್ ತಂದು ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಬೆಳಗಾವಿ:  ಮಹಾಯೋಗಿ ವೇಮನರು ಮಹಾಪುರುಷರು. ಅವರ ವಿಚಾರಧಾರೆಯನ್ನು ಅನುಸರಿಸುತ್ತಿರುವ ರೆಡ್ಡಿ ಸಮುದಾಯವು ಇಡೀ ಸಮಾಜದ ಒಳಿತಿನೊಂದಿಗೆ ತನ್ನ ಒಳಿತು ಕಂಡುಕೊಂಡಿದೆ” ಎಂದು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನರ ಪಾಲಿಕೆಯ ವತಿಯಿಂದ ನಗರದ ರೆಡ್ಡಿ ಭವನದಲ್ಲಿ ಗುರುವಾರ (ಜ.19) ಏರ್ಪಡಿಸಲಾಗಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ರೆಡ್ಡಿ ಸಮುದಾಯವರು ಯಾರಿಗೂ ಕೆಟ್ಟದನ್ನು ಬಯಸಿದವರಲ್ಲ ಯಾರಿಗೂ ತೊಂದರೆಯನ್ನು ಕೊಟ್ಟವರಲ್ಲ. ತಮ್ಮ ಕೆಲಸದಿಂದ ಸಮಾಜಕ್ಕೆ ಒಳ್ಳೆಯದನ್ನು ಮಾಡುತ್ತಲೇ ಬಂದಿದ್ದಾರೆ” ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿದ ಹಿರಿಯ ಸಾಹಿತಿ ಬಸವರಾಜ ಜಗಜಂಪಿ ಅವರು, ಮಹಾಯೋಗಿ ವೇಮನರು ಶ್ರೇಷ್ಠ ಜ್ಞಾನಿ, ಕವಿ, ಬ್ರಹ್ಮಜ್ಞಾನಿಯಾಗಿದ್ದರು. ಅನಿಷ್ಟ ಸಂಪ್ರದಾಯಗಳ ವಿರುದ್ಧ ಹೋರಾಡಿದಂತಹ ದಿಟ್ಟ ವ್ಯಕ್ತಿಯಾಗಿದ್ದ ಅವರು ತಮ್ಮ ವಿಚಾರ ಮತ್ತು ಚಿಂತನೆಗಳಿಂದ ಸದಾ ನಮ್ಮೊಂದಿಗೆ ಇದ್ದಾರೆ ಎಂದು ಹೇಳಿದರು. ಮಹಾಯೋಗಿ ವೇಮನರು ರಾಜಕುಮಾರನಾಗಿದ್ದರೂ ಕೂಡ ಸಮಾಜಕ್ಕಾಗಿ…

Read More

ಬೆಳಗಾವಿ : ವಿದ್ಯುತ್ ಮಗ್ಗ ಹಾಗೂ ಮಗ್ಗಪೂರ್ವ ಘಟಕಗಳ ನೇಕಾರರು ಹಾಗೂ ಕಾರ್ಮಿಕರಿಗೆ ತಲಾ ರೂ.5,000/- ಗಳ ವಾರ್ಷಿಕ ಆರ್ಥಿಕ ನೆರವು ನೀಡುವ ನೇಕಾರ ಸಮ್ಮಾನ(ವಿದ್ಯುತ್ ಮಗ್ಗ) ಯೋಜನೆಯನ್ನು ಜಾರಿಗೊಳಿಸಲಾಗಿರುತ್ತದೆ. ಸದರಿ ಯೋಜನೆಯಡಿ ನೆರವು ಪಡೆಯಲು ನೇಕಾರರ ಘಟಕಗಳು ವಿದ್ಯುತ್ ಮಗ್ಗ ಗಣತಿಯಲ್ಲಿ ನೋಂದಾಯಿಸಿಕೊಂಡಿರಬೇಕು. ಸದರಿ ಗಣತಿಯನ್ನು ಎ.ಐ.ಎಮ್.ಎಸ್ ಸಂಸ್ಥೆಯಿಂದ ಕೈಗೊಳ್ಳಲಾಗುತ್ತಿದ್ದು, ಗಣತಿಯಲ್ಲಿ ನೋಂದಾಯಿಸಲು ಬಿಟ್ಟು ಹೋದ ಘಟಕದವರು ಯಾವುದೇ ಮದ್ಯವರ್ತಿಗಳ ಆಸೆ-ಆಮಿಷಕ್ಕೆ ಒಳಗಾಗದೇ, ನೇರವಾಗಿ ಈ ಕಛೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ. ನೇಕಾರ ಸಮ್ಮಾನ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಯಾವುದೇ ಅರ್ಜಿ ಅಥವಾ ಆನ್‍ಲೈನ್ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಹಾಗೂ ಯಾವುದೇ ಶುಲ್ಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆ: 0831-2950674 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಕಳೆದ ವಾರ ನಮಗೆಲ್ಲ ಸಂಕ್ರಾಂತಿ ಹಬ್ಬ. ನಾಳೆ ನಮಗೆಲ್ಲ ದಾಸೋಹ ಹಬ್ಬ. ನಾಳೆ ದಾಸೋಹ ದಿನ. ಲಿಂಗೈಕ್ಯ ಪರಮಪೂಜ್ಯ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ನೆನಹಿನಲ್ಲಿ ಎಲ್ಲರೂ ದಾಸೋಹ ದಿನವನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸುವಾ. ಅವತ್ತು 12ನೇ ಶತಮಾನದಲ್ಲಿ ಅಣ್ಣ ಬಸವಣ್ಣನವರಿಂದ ಅರಿವು, ಆಚಾರ, ಅನುಭವಗಳ ತ್ರಿವಿಧ ದಾಸೋಹ. 21ನೇ ಶತಮಾನದಲ್ಲಿ ಲಿಂಗೈಕ್ಯ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರಿಂದ ಸಹಸ್ರ ಸಹಸ್ರ ಮಕ್ಕಳಿಗೆ ಅನ್ನ, ವಸತಿ, ಶಿಕ್ಷಣಗಳ ತ್ರಿವಿಧ ದಾಸೋಹ. ಅವತ್ತು, ಆ ಶತಮಾನದಲ್ಲಿ ಅಣ್ಣ ಬಸವಣ್ಣನವರದು ಅಹೋಸಾಧನೆ. ಈ ಶತಮಾನದಲ್ಲಿ ಪರಮಪೂಜ್ಯ ಡಾ. ಶಿವಕುಮಾರ ಮಹಾಸ್ವಾಮಿಗಳವರದು ಮಹಾಸಾಧನೆ, ಮಹತ್ ಸಾಧನೆ. ಅಣ್ಣ ಬಸವಣ್ಣ ಭಕ್ತಿಭಂಡಾರಿ. ನಮ್ಮ ಶಿವಕುಮಾರ ಮಹಾಸ್ವಾಮಿಗಳು ದಾಸೋಹಭಂಡಾರ. ಅವರು ದಾಸೋಹವೂ ಅಹುದು; ಅವರು ಭಂಡಾರವೂ ಅಹುದು. ಉತ್ತರ ಭಾರತದಲ್ಲಿ “ಭಂಡಾರ, ಭಂಡಾರಾ” ಎಂದರೆ “ಸಾಧುಭೋಜ, ಸಾಧುಭೋಜನ” ಎಂದರ್ಥ. ಸಾಧು, ಸತ್ಪುರುಷ, ಸಂತರಿಗೆ ಸೇವಾರ್ಥ ನೀಡುವ ಭೋಜನಕ್ಕೆ “ಭಂಡಾರಾ” ಎಂದು ಕರೆಯುತ್ತಾರೆ. ಸಿದ್ಧಗಂಗಾ ಮಠದಲ್ಲಿ ಬರೀ…

Read More

ಬೆಳಗಾವಿ : ಇಲ್ಲಿನ ವಿದ್ಯಾಗಿರಿಯ ಅಜಮ್ ನಗರದ ಶ್ರವಣ ದೋಷವುಳ್ಳ ಮಕ್ಕಳ ಸರಕಾರಿ ಶಾಲೆಗೆ ಮೂವರು ಅರೆಕಾಲಿಕ ಪದವಿಪೂರ್ವ ಸಹಾಯಕ ಶಿಕ್ಷಕರ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶ್ರವಣ ದೋಷವುಳ್ಳ ಮಕ್ಕಳಿಗೆ ಪಾಠ ಮಾಡಲು ವಿಶೇಷ ಶಿಕ್ಷಣ ತರಬೇತಿ ಹೊಂದಿದವರಿಗೆ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಬೋಧನೆ ಮಾಡಲು ಮಾಸಿಕ ಗೌರವಧನ ಗರಿಷ್ಠ 5,000 ರೂಪಾಯಿ ನೀಡಲಾಗುವುದು. ಆಸಕ್ತರು ಜನವರಿ 25, 2023 ರ ಒಳಗಾಗಿ “ಅಧೀಕ್ಷಕರು, ಕಿವುಡು ಮಕ್ಕಳ ಸರ್ಕಾರಿ ಶಾಲೆ ಅಜಮ ನಗರ ವಿದ್ಯಾಗಿರಿ ಬೆಳಗಾವಿ- 590010” ಇವರಿಗೆ ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 0831-2472250 ಅಥವಾ 7676650942 ಗೆ ಸಂಪರ್ಕಿಸಬಹುದು ಎಂದು ಕಿವುಡು ಮಕ್ಕಳ ಸರ್ಕಾರಿ ಶಾಲೆಯ ಪ್ರಭಾರಿ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಬೆಳಗಾವಿ : 75ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ ಕುಶಲಕರ್ಮಿಗಳಿಗಾಗಿ ಸಾಲ ಸಹಾಯಧನ (ಸಬ್ಸಿಡಿ) ಯೋಜನೆಯಲ್ಲಿ ಸೌಲಭ್ಯ ಪಡೆಯಲು ಬೆಳಗಾವಿ ಜಿಲ್ಲೆಯ ವಿವಿಧ ವರ್ಗಗಳ ಕುಶಲಕರ್ಮಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಹಾಕಲು ಬಯಸುವ ಅಭ್ಯರ್ಥಿಗಳು ವಾಣಿಜ್ಯ ಬ್ಯಾಂಕ್ ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಗಳಿಂದ ಮಂಜೂರಾದ ರೂ 50 ಸಾವಿರವರೆಗೆ ಸಾಲದ ಮೇಲೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಶೇ 30% ರಷ್ಟು ಗರಿಷ್ಟ 15 ಸಾವಿರದ ವರೆಗೆ ಸಹಾಯಧನ ನೀಡಲಾಗುವುದು. ಕುಶಲಕರ್ಮಿಗಳು ಕನಿಷ್ಠ 18 ವರ್ಷ ತುಂಬಿರಬೇಕು. ಕುಶಲವೃತ್ತಿಗಾಗಿ ಬ್ಯಾಂಕಿನಿಂದ ಪಡೆದ ಸಾಲಕ್ಕೆ ಒಬ್ಬರಿಗೆ ಒಂದು ಬಾರಿ ಮಾತ್ರ ಸಹಾಯಧನ ನೀಡಲಾಗುವುದು. ಕುಶಲಕರ್ಮಿಗಳು ರಾಜ್ಯ ಕುಶಲಕರ್ಮಿ ಅಭಿವೃದ್ಧಿ ನಿಗಮ/ ಅಭಿವೃದ್ಧಿ ಆಯುಕ್ತರು (ಕರಕುಶಲ) ಕಚೇರಿಯಲ್ಲಿ ನೋಂದಣಿ ಆಗಿರಬೇಕು. ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿಗಳು, ಜಿಲ್ಲಾ ಕೈಗಾರಿಕಾ ಕೇಂದ್ರ ಅಥವಾ ಸಂಬಂಧಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರ ( ಪಿಡಿಓ ) ರವರಿಂದ ಕರಕುಶಲರೆಂದು ದೃಡೀಕರಣ…

Read More

ಬೆಳಗಾವಿ: ಬೆಳಗಾವಿ ನಗರದಲ್ಲಿ ಅಭಿವೃದ್ಧಿ ಪರ್ವವನ್ನು ಮುಂದುವರೆಸಿರುವ ಶಾಸಕ ಅನಿಲ ಬೆನಕೆ ಅವರು 27 ಕೋಟಿ ವಿಶೇಷವಾದ ಅನುದಾನ ಬಿಡುಗಡೆ ಮಾಡಿಸಿ ಮತ್ತೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಲಿದ್ದಾರೆ. ಕರ್ನಾಟಕ ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಬೆಳಗಾವಿಯಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ ಅಡಿಯಲ್ಲಿ 27 ಕೋಟಿ ಬಿಡುಗಡೆ ಆಗಿದೆ. ಬೆಳಗಾವಿಯಲ್ಲಿ ಜಿಲ್ಲಾ ಆಸ್ಪತ್ರೆ ಅಭಿವೃದ್ಧಿ, ಮಲ್ಟಿ ಸೂಪರ್ ಸ್ಪೆಷಾಲಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಒತ್ತು ನೀಡಿರುವ ಶಾಸಕ ಅನಿಲ ಬೆನಕೆ ಅವರು, ಬೆಳಗಾವಿಯಲ್ಲಿ ನಡೆದ ಅಧಿವೇಶನ ಸಂದರ್ಭದಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಸಿಎಂ ಸೇರಿದಂತೆ ರಾಜ್ಯ ಸಚಿವರಿಗೆ ಮನವಿ ಸಲ್ಲಿಸಿದರು. ಅದರ ಫಲವಾಗಿ ಕೇಂದ್ರದಿಂದ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಆಗಿದೆ. ಅನುದಾನ ಬಿಡುಗಡೆ ಆಗಿದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ…

Read More

ತುಮಕೂರು: ನಮ್ಮ ತುಮಕೂರು ಮಾಧ್ಯಮದ ಬೆಂಗಳೂರು ವರದಿಗಾರರಾದ ಆಂಟೋನಿ ರಾಜು ಎ. ಅವರು ಮಾತೃಭೂಮಿ ಸೇವಾ ರತ್ನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪ್ರತಿ ವರ್ಷವೂ ಮಾತೃಭೂಮಿ ಸೇವಾ ಟ್ರಸ್ಟ್  ವಿವಿಧ ರಂಗಗಳಲ್ಲಿ ಸಾಮಾಜಿಕವಾಗಿ ಸೇವೆ ಸಲ್ಲಿಸಿದ ಈ ಸಾಧಕರಿಗೆ ಒಂದು ಗೌರವವಾಗಿ  ಗುರುತಿಸುವ ಕಾರ್ಯ ಮಾಡುತ್ತಿದೆ. ಈ ಬಾರಿಯೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಮಾತೃಭೂಮಿ ಸೇವಾ ರತ್ನ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ಹಾಗೂ  ವರ್ಷದ ಕನ್ನಡಿಗ 2023 ರಾಜ್ಯ ಪ್ರಶಸ್ತಿಯನ್ನು ನೀಡುತ್ತಿದೆ. ಮಾತೃಭೂಮಿ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಡಾ.ಜ್ಯೋತಿ ಶ್ರೀನಿವಾಸ್ ರವರು ಸಾಧಕರನ್ನು ಗುರುತಿಸುವ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ತುಮಕೂರು ಮಾತ್ರವಲ್ಲದೇ  ಇಡೀ ಕರ್ನಾಟಕದಲ್ಲಿ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿದ್ದಾರೆ. ರಾಜಕೀಯವಾಗಿ, ಸಾಮಾಜಿಕ ಕಾರ್ಯಕರ್ತರಾಗಿ, ಪತ್ರಕರ್ತರುಗಳಿಗೆ, ಇನ್ನು ವಿವಿಧ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ  ಅನೇಕರು ಇಂದು ಕನ್ನಡ ಸಂಭ್ರಮ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ತುಮಕೂರಿನ ಆಮಾನಿಕೆರೆ…

Read More

ಬೆಂಗಳೂರು: ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಯ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಕಾರಾಗೃಹದ ವಾರ್ಡನ್ ವೋರ್ವರನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ  ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮವೊಂದರ ಜೊತೆಗೆ ಮಾತನಾಡಿರುವ ಅವರು, ರಾಮನಗರ, ತುಮಕೂರು, ಕಲಬುರಗಿ ಹಾಗೂ ಬೆಳಗಾವಿ ಕಾರಾಗೃಹ ಗಳಲ್ಲಿ, ಕೆಲವು ಅಕ್ರಮ ಚಟುವಟಿಕೆ ಗಳ ಬಗ್ಗೆ, ವರದಿಯಾಗಿದ್ದು, ಇದರ ಬಗ್ಗೆ, ವಿಸ್ತೃತ ತನಿಖೆಗೆ ಆದೇಶ ನೀಡಿದ್ದು, ತುಮಕೂರು ಜಿಲ್ಲಾ ಕಾರಾಗೃಹದ ವಾರ್ಡನ್, ಪ್ರವೀಣ್ ಎಂಬುವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕಾರಾಗೃಹ ಗಳಲ್ಲಿ, ಅಕ್ರಮ ಚಟುವಟಿಕೆ ಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಕಾರಾಗೃಹ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತಿನ ಕ್ರಮ ಜರುಗಿಸುವುದಾಗಿ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More