Author: admin

ಹೆಚ್.ಡಿ.ಕೋಟೆ: ಪ್ರಕೃತಿ ವಿಕೋಪದಡಿ ಮನೆಗಳ ಪರಿಹಾರ ವಿಚಾರದಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಗ್ರಾಮಲೆಕ್ಕಿಗರು, ರಾಜಸ್ವ ನಿರೀಕ್ಷಕರು  ಲಂಚ ಪಡೆಯುತ್ತಿದ್ದಾರೆ ಎಂಬ ದೂರು ನೀಡಲು ಹೋದವರ ಮೇಲೆ ಆಕ್ರೋಶಗೊಂಡ ತಹಶಿಲ್ದಾರ್ ರತ್ನಾಂಬಿಕಾ ಹೈಡ್ರಾಮ ಆಡಿದ ವಿಡಿಯೋ ವೈರಲ್ ಆಗಿದೆ. ಪ್ರಕೃತಿ ವಿರೋಪದಡಿ ಮನೆಗಳ ಪರಿಹಾರ ವಿಚಾರ ಗ್ರಾಮಲೆಕ್ಕಿಗರು, ರಾಜಸ್ವ ನಿರೀಕ್ಷಕರು  ಲಂಚ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಲು ರೈತ ಸಂಘದ ನಾಗರಾಜು ಮತ್ತು ದಸಂಸ ಶಿವಕುಮಾರ್ ತಹಶೀಲ್ದಾರ್ ಕಚೇರಿಗೆ ತೆರಳಿದ್ದರು. ಈ ವೇಳೆ ದೂರು ನೀಡಲು ಹೋದವರ ವಿರುದ್ಧವೇ ರತ್ನಾಂಬಿಕಾ ಆಕ್ರೋಶ ವ್ಯಕ್ತಪಡಿಸಿ ಹೈಡ್ರಾಮ ಆಡಿದ್ದಾರೆನ್ನಲಾಗಿದೆ. ಹೋರಾಟಗಾರರ ಜೊತೆಗೆ ವಾದಕ್ಕಿಳಿದ ತಹಶೀಲ್ದಾರ್ ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಕೆಂಡಾಮಂಡಲವಾದ ತಹಶೀಲ್ದಾರ್ ಟೇಬಲ್ ಮೇಲಿದ್ದ ದಾಖಲೆಗಳನ್ನು ಎಸೆದು ಹೈಡ್ರಾಮ ಆಡಿದ್ದು, ಈ ವೇಳೆ ಕಚೇರಿ ಸಿಬ್ಬಂದಿ ಅವರನ್ನು ಸಮಾಧಾನ ಪಡಿಸಲು ಹರಸಾಹಸಪಟ್ಟಿದ್ದಾರೆ. ಈ ವೇಳೆ ಕಚೇರಿಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು. ವರದಿ: ಮಲಾರ ಚಂದ್ರ, ಹಾದನೂರು ನಮ್ಮತುಮಕೂರು.ಕಾಂನ…

Read More

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮದಲ್ಲಿ ಡಾ.ವಿಷ್ಣುವರ್ಧನ್ ರವರ ಹುಟ್ಟುಹಬ್ಬವನ್ನು ಕೇಕ್ ಕಟ್ ಮಾಡುವ ಮೂಲಕ ಆಚರಿಸಲಾಯಿತು. ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ ಹೀಗೆ ನಾನಾ ಬಿರುದುಗಳಿಂದ ಜನಪ್ರಿಯತೆ ಪಡೆದಿರುವ ಡಾ.ವಿಷ್ಣುವರ್ಧನ್ ಅವರು ದೈಹಿಕವಾಗಿ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಇನ್ನು ಜೀವಂತವಾಗಿದ್ದಾರೆ. ವಿಷ್ಣು ನೆನಪಲ್ಲೇ ಅಭಿಮಾನಿಗಳು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಅನೇಕ ಸಾಮಾಜಿಕ ಸೇವೆಗಳ ಮೂಲಕ ವಿಷ್ಣುದಾದಾ ಅವರನ್ನು ನೆನೆಯುವ ಕೆಲಸ ಅಭಿಮಾನಿಗಳು ಮಾಡುತ್ತಿದ್ದು, ರಾಜ್ಯದಾದ್ಯಂತ ಅಭಿಮಾನಿಗಳು ಹಬ್ಬದಂತೆ ಹುಟ್ಟುಹಬ್ಬ ಆಚರಿಸುತ್ತಿದ್ದು, ಇದೆ ರೀತಿ ಕೊರಟಗೆರೆ ತಾಲೂಕಿನ ಸಿ.ಎನ್.ದುರ್ಗಾ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮದಲ್ಲಿಯೂ ವಿಜೃಂಭಣೆಯಿಂದ ಆಚರಿಸಲಾಯಿತು. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಈ ನಡುವೆ ಇಂದು ಸಿಂಹಾಸನ ಜೋಡಣಾ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆವರಗೆ ಅರಮನೆಗೆ ಸಾರ್ವಜನಿಕರ ಪ್ರವೇಶ ಬಂದ್ ಮಾಡಲಾಗಿದೆ. ರತ್ನಖಚಿತ ಸಿಂಹಾಸನ ಜೋಡಣಾ ಕಾರ್ಯ ಆರಂಭವಾಗಿದ್ದು ಸ್ಟ್ರಾಂಗ್ ರೂಂನಲ್ಲಿರುವ ಸಿಂಹಾಸನ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಜೋಡಣೆ ಮಾಡಲಾಗುತ್ತಿದೆ. ದರ್ಬಾರ್ ಹಾಲ್‌ನಲ್ಲಿ ಪೂಜಾ ಕೈಂಕರ್ಯ ನೆರವೇರಿದ್ದು, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಣೆ, ಅರಮನೆಯ ಪುರೋಹಿತರ ಸಮ್ಮುಖದಲ್ಲಿ ಗಣಪತಿ ಹೋಮ, ಚಾಮುಂಡಿಪೂಜೆ, ಶಾಂತಿ ಹೋಮ ಮಾಡಲಾಗುತ್ತಿದೆ. ನವರಾತ್ರಿ ವೇಳೆ ರಾಜರು ಸಿಂಹಾಸನರೂಢರಾಗಿ ಖಾಸಗಿ ದರ್ಬಾರ್ ನಡೆಸುವ ಸಂಪ್ರದಾಯವಿದ್ದು ಅಂತೆಯೇ ಸೆ.26 ರಿಂದ ಖಾಸಗಿ ದರ್ಬಾರ್ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಉತ್ತರ ಕನ್ನಡ ಜಿಲ್ಲೆಯ ಜನರ ಕನಸು ನನಸಾಗುವ ಕಾಲ ಸನಿಹವಾಗಿದ್ದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಿಎಂ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ವಿಚಾರ ಕುರಿತು ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಪ್ರಥಮ ಹಂತದ ಸಭೆ ನಡೆಯಿತು. ಸಭೆಯಲ್ಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಶಿವರಾಮ್ ಹೆಬ್ಬಾರ್ ಉತ್ತರ ಕನ್ನಡ ಜಿಲ್ಲಾ ಶಾಸಕರು ಉಪಸ್ಥಿತರಿದ್ದರು. ಈ ಸಂಬಂಧ ಸರ್ಕಾರ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳಿಸಿದ್ದು, ಶೀಘ್ರವೇ ಆರ್ಥಿಕ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಾಧ್ಯತೆ ಎನ್ನಲಾಗಿದೆ. ಸಭೆ ಬಳಿಕ ಮಾತನಾಡಿದ ಶಾಸಕಿ ರೂಪಾಲಿ ನಾಯ್ಕ್, ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಒಪ್ಪಿದೆ. ಸಚಿವರು ಒಪ್ಪಿದ್ದಾರೆ. ಜಾಗ ನಿಗದಿಪಡಿಸಬೇಕಿದೆ. ತಾತ್ಕಾಲಿಕವಾಗಿ ಮೆಡಿಕಲ್ ಕಾಲೇಜು ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದೆ. ಸದನ ಮುಗಿದ ಬಳಿಕ ಸಚಿವ ಸುಧಾಕರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಬಿಬಿಎಂಪಿ ಅಧಿಕಾರಿಗಳು ಮಳೆಪೀಡಿತ ಪ್ರದೇಶಗಳಲ್ಲಿ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಡೆಸಲು ಸಿದ್ಧತೆ ನಡೆಸುತ್ತಿದ್ದಂತೆ, ಐಟಿ ದಿಗ್ಗಜ ಸಂಸ್ಥೆ ವಿಪ್ರೋ ಸೋಮವಾರದಂದು ಸ್ವತಃ ಜೆಸಿಬಿಗಳು ಹಾಗೂ ಇತರೆ ಯಂತ್ರಗಳನ್ನು ಬಳಸಿಕೊಂಡು ಸಂಸ್ಥೆಯ ಬಳಿಯಿರುವ ರಾಜಾಕಾಲುವೆಯ ಮೇಲೆ ಹೊದಿಸಲಾಗಿದ್ದ ಕಾಂಕ್ರೀಟ್ ಸ್ಲ್ಯಾಬ್‌ಗಳನ್ನು ತೆರವುಗೊಳಿಸಲು ಆರಂಭಿಸಿತು. ಬಿಬಿಎಂಪಿ ನೀಡಿದ ಮಾಹಿತಿಯ ಪ್ರಕಾರ, ವಿಪ್ರೋ ಸಂಸ್ಥೆ ಕಚೇರಿ ಬಳಿಯಿರುವ ರಾಜಾಕಾಲುವೆ ಮೇಲೆ ೨.೪ ಮೀಟರ್‌ ಗಳಷ್ಟು ಅಗಲದ ಕಾಂಕ್ರೀಟ್ ಸ್ಲ್ಯಾಬ್ ಒಂದನ್ನು ನಿರ್ಮಾಣ ಮಾಡಿಕೊಂಡಿದೆ. ಇದು ಕಂಪನಿಯ ಆವರಣದೊಳಗೆ ಹರಿಯುವ ರಾಜಾಕಾಲುವೆಯನ್ನು ಒತ್ತುವರಿ ಮಾಡಿಕೊಳ್ಳುವಂತೆ ಇಲ್ಲ ಹಾಗೂ ಅಗಲವನ್ನೂ ಸಹ ಕಡಿಮೆಗೊಳಿಸುವಂತೆ ಇಲ್ಲ. “ಈ ಸ್ಲ್ಯಾಬ್‌ ನ ಒಂದು ಭಾಗವನ್ನು ತೆರವುಗೊಳಿಸಲಾಯಿತು. ವಿಪ್ರೋ ಸಂಸ್ಥೆ ನಿರ್ಮಾಣ ಮಾಡಿಕೊಂಡಿರುವ ಖಾಯಂ ಕಟ್ಟಡಗಳ ಮೇಲೆ ಹಾಗೂ ರಾಜಕಾಲುವೆ ಪಕ್ಕದಲ್ಲೇ ಇರುವ ಸಲಾರ್‌ಪುರಿಯಾದ ಕಟ್ಟಡಗಳಿಗೆ ಯಾವುದೇ ರೀತಿಯ ಪರಿಣಾಮ ಉಂಟಾಗದಿರಲಿ ಎಂಬ ಉದ್ದೇಶದಿಂದ ಈ ಕೆಲಸವನ್ನು ಮಧ್ಯದಲ್ಲಿಯೇ ನಿಲ್ಲಿಸಲಾಯಿತು. ಉಳಿದ ಸ್ಲ್ಯಾಬ್‌ಗಳನ್ನು ಮಂಗಳವಾರ ಜೆಸಿಬಿ ಬದಲಿಗೆ ಗ್ಯಾಸ್ ಕಟ್ಟರ್‌ ಗಳನ್ನು ಬಳಸಿ…

Read More

ಬೆಂಗಳೂರು : ಜಾರಿ ನಿರ್ದೇಶನಾಲಯ ವಿಚಾರಣೆಗೆ ದೆಹಲಿಗೆ ಹಾಜರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಡಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾದರು. ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ದಿಢೀರ್‌ ಏರುಪೇರಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜ್ವರ ಹೆಚ್ಚಾಗಿರುವುದರಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಡಿ ಡ್ರಿಲ್‌ ಆಗಮಿಸಿದ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರಾಗಿದೆ. ನಿನ್ನೆ ವೇಳೆ ವಿಚಾರಣೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು 36 ವರ್ಷಗಳ ಹಿಂದಿನ ಬ್ಯಾಂಕ್‌ ದಾಖಲೆಗಳನ್ನು ಕೇಳಿದ್ದಾರೆ, ಇಡಿಗೆ ಸಂಪೂರ್ಣ ಸಹಕರವನ್ನು ನೀಡಲಾಗುವುದು ಅಂತ ತಿಳಿಸಿದರು. ಇನ್ನೂ ಬರೋಬ್ಬರಿ ನಿನ್ನೆ ಆರು ತಾಸುಗಳ ಇಡಿ ಅಧಿಕಾರಿಗಳು ಮಾಹಿತಿಯನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಬಳಿ ಬೃಹತ್ ಧರಣಿ ನಡೆಸಲಾಗುವುದು ಎಂದು ಪಂಚಮಸಾಲಿ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಲಿಂಗಾಯತ ಪಂಚಮಸಾಲಿ ಸಮಾಜದ ಹೋರಾಟದ ಗಡವಿಗೆ ಸರ್ಕಾರ ಮಾತು ತಪ್ಪಿದೆ. ಈ ಹಿನ್ನಲೆಯಲ್ಲಿ ಮೀಸಲಾತಿಗಾಗಿ ಆಗ್ರಹಿಸಿ ಬೊಮ್ಮಾಯಿ ಅವರ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿರುವ ಅವರ ಮನೆ ಮುಂದೆ ಬೃಹತ್ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಶಿಗ್ಗಾಂವದ ಚೆನ್ನಮ್ಮನ ವೃತ್ತದಿಂದ ರ್ಯಾಲಿ ಮೂಲಕ ಒಂದು ಲಕ್ಷ ಪಂಚಮಸಾಲಿಗರೊಂದಿಗೆ ಮುಖ್ಯಮಂತ್ರಿಗಳ ಮನೆ ಮುಂದೆ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು. ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಕ್ಟೊಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ 25 ಲಕ್ಷ ಪಂಚಮಸಾಲಿಗರೊಂದಿಗೆ ಬೆಂಗಳೂರಿನಲ್ಲಿ ಬೃಹತ್ ಶಕ್ತಿ ಪ್ರದರ್ಶನ ಮಾಡುವ ಮೂಲಕ ಮೀಸಲಾತಿಯ ಹಕ್ಕನ್ನು ನಾವು ಪಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಮದುವೆ ಕೇವಲ ಶಾರೀರಿಕ ಸುಖಕ್ಕಾಗಿ ಅಲ್ಲ, ಅದರ ಮುಖ್ಯ ಉದ್ದೇಶವು ಸಂತಾನೋತ್ಪತ್ತಿ ಮಾಡುವುದು ಎಂಬುದನ್ನು ವೈವಾಹಿಕ ದಂಪತಿಗಳು ನೆನಪಿನಲ್ಲಿಡಬೇಕು ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಏಕಸದಸ್ಯ ನ್ಯಾಯಮೂರ್ತಿಗಳು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ತಮ್ಮ ಅಪ್ರಾಪ್ತ ಮಕ್ಕಳನ್ನು ಸುಪರ್ದಿಗೆ ತೆಗೆದುಕೊಳ್ಳುವುದರ ಬಗ್ಗೆ ದಾವೆ ಹೂಡುವ ವಿಚ್ಛೇದಿತ ದಂಪತಿಗಳು ಇಂತಹ ವಿವಾದಗಳು ತಮ್ಮ ಸಂತೋಷಕ್ಕಾಗಿ ಇಬ್ಬರು ವ್ಯಕ್ತಿಗಳ ಕೃತ್ಯದ ಮೂಲಕ ಈ ಕೆಟ್ಟ ಜಗತ್ತಿಗೆ ತಂದ ಮಕ್ಕಳನ್ನು ದುಃಖಿಸುತ್ತವೆ ಎಂದು ತಿಳಿದುಕೊಳ್ಳಬೇಕು ಎಂದು ಹೇಳಿದರು. 9 ಮತ್ತು 6 ವರ್ಷ ವಯಸ್ಸಿನ ತನ್ನ ಇಬ್ಬರು ಪುತ್ರರನ್ನು ಮಧ್ಯಂತರ ಕಸ್ಟಡಿಗೆ ನೀಡುವಂತೆ ಕೋರಿ ಮಹಿಳಾ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠವು ವಿಚಾರಣೆ ನಡೆಸಿತ್ತು. ಈ ವೇಳೆ ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಒಟ್ಟು 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿನಡೆದ ಸಚಿವ ಸಂಪುಟ ಸಭೆಯಲ್ಲಿ ರೈತ ಮುಖಂಡರು ಸೇರಿದಂತೆ ಇತರರ ವಿರುದ್ಧ ದಾಖಲಾದ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆದುಕೊಳ್ಳಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಉಪಸಮಿತಿ ಆಧರಿಸಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಇದರಲ್ಲಿ ಬಿಜೆಪಿ ಕಾರ್ಯಕರ್ತರು, ಹಿಂದೂ ಪರ ಕಾರ್ಯಕರ್ತರು ಕೂಡ ಸೇರಿದ್ದಾರೆ ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೈಸೂರು: ಪ್ರಥಮ ದರ್ಜೆ ಸಹಾಯಕರ ಹುದ್ದೆ ಕೊಡಿಸಲು ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ನರಸಿಂಹರಾಜ ಸಂಚಾರ ಪೊಲೀಸ್‌ ಠಾಣೆಯ ಪಿಎಸ್‌ಐ ಅಶ್ವಿನಿ ಅನಂತಪುರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕೆಪಿಎಸ್‌ಸಿ ಪ್ರಥಮದರ್ಜೆ ಸಹಾಯಕರ ನೇಮಕಾತಿ ಪ್ರಕ್ರಿಯೆಯಲ್ಲಿ ಬಸವರಾಜು ಎಂಬುವರಿಗೆ ಹುದ್ದೆ ಕೊಡಿಸಲು ಬಾಗಲಕೋಟೆ ಮೂಲದ ಸಂಗಮೇಶ ಝಳಕಿ ಎಂಬುವರ ಜೊತೆ ಆರೋಪಿ ಪಿಎಸ್‌ಐ ಮಾತನಾಡಿದ್ದೆನ್ನಲಾದ ಮೊಬೈಲ್‌ ಹಾಗೂ ವಾಟ್ಸಾಪ್ ಆಡಿಯೊ ಸಂಭಾಷಣೆಗಳು ಜಾಲತಾಣಗಳಲ್ಲಿ ವೈರಲ್‌ ಆಗಿದ್ದವು. ಅಲ್ಲದೆ, ಹಣ ಅಕ್ರಮ ವರ್ಗಾವಣೆಯ ಬ್ಯಾಂಕ್‌ ಸ್ಟೇಟ್‌ಮೆಂಟ್‌ ಕೂಡ ಮಾಧ್ಯಮಗಳಲ್ಲಿ ಬಿತ್ತರಗೊಂಡಿತ್ತು. ಈ ಬಗ್ಗೆ ನಗರ ಅಪರಾಧ ವಿಭಾಗದ ಎಸಿಪಿ ಪ್ರಾಥಮಿಕ ತನಿಖೆ ನಡೆಸಿದ್ದು, ಮೇಲ್ನೋಟಕ್ಕೆ ನೈಜವೆಂದು ತಿಳಿದು ಬಂದ ಹಿನ್ನೆಲೆಯಲ್ಲಿ ಪಿಎಸ್‌ ಐ ಅಶ್ವಿನಿ ಅವರನ್ನು ಅಮಾನತು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More