Subscribe to Updates
Get the latest creative news from FooBar about art, design and business.
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
Author: admin
ಗುಜರಾತ್: ಪ್ರೀತಿಯ ಸಂಕೇತವಾಗಿ ಪ್ರತಿಮೆಗಳು ಮದುವೆಗೆ ಸಾಕ್ಷಿಯಾಗಿದೆ. ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಆರೋಪಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣದ 6 ತಿಂಗಳ ನಂತರ, ಕುಟುಂಬವು ವಿಗ್ರಹಗಳನ್ನು ನಿರ್ಮಿಸಿ ಅಲಂಕಾರ ಮಾಡಿ ವಿವಾಹ ಮಾಡಿದ್ದಾರೆ. ಗುಜರಾತ್ನ ತಾಪಿಯಲ್ಲಿ ಈ ಘಟನೆ ನಡೆದಿದೆ.ಆರೋಪಿಗಳು ಕಳೆದ ಆಗಸ್ಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಗಣೇಶ್ ಮತ್ತು ರಂಜನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ನಂತರ, ಕುಟುಂಬವು ದಾದಿಗಳನ್ನು ಮದುವೆಯಾಗಲು ಅವಕಾಶ ನೀಡದಿದ್ದಕ್ಕಾಗಿ ಪಶ್ಚಾತ್ತಾಪಪಟ್ಟಿತು ಮತ್ತು ಅವರಿಬ್ಬರ ಪ್ರತಿಮೆಗಳನ್ನು ನಿರ್ಮಿಸಿತು. ಈ ವಿಗ್ರಹಗಳನ್ನು ಸಕಲ ವಿಧಿವಿಧಾನಗಳೊಂದಿಗೆ ಮದುವೆ ಮಾಡಲಾಯಿತು.ಹುಡುಗ ತನ್ನ ಕುಟುಂಬದೊಂದಿಗೆ ದೂರದ ಸಂಬಂಧ ಹೊಂದಿದ್ದರಿಂದ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹುಡುಗಿಯ ಅಜ್ಜ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವ್ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರ್ಮಾ ವಿರುದ್ಧ ವಿನೇಶ್ ಫೋಗಟ್ ಸೇರಿದಂತೆ ಸೂಪರ್ ಸ್ಟಾರ್‌ಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ರಾಷ್ಟ್ರೀಯ ಶಿಬಿರದ ವೇಳೆ ಕೋಚ್ ಮತ್ತು ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಶರ್ಮಾ ಸೇರಿದಂತೆ ಆಟಗಾರರು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರು ಎಂದು ಫೋಗಟ್ ಬಹಿರಂಗಪಡಿಸಿದ್ದಾರೆ. ಕೆಲವು ತರಬೇತುದಾರರು ವರ್ಷಗಳಿಂದ ಆಟಗಾರರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ. ಫೆಡರೇಶನ್ ಅಧಿಕಾರಿಗಳಿಂದ ತನಗೆ ಕೊಲೆ ಬೆದರಿಕೆ ಇದೆ ಎಂದು ವಿನೇಶ್ ಫೋಗಟ್ ಆರೋಪಿಸಿದ್ದಾರೆ.ಬ್ರಿಜ್ ಭೂಷಣ್ ಶರ್ಮಾ ತಾರೆಯರ ಆರೋಪಗಳನ್ನು ನಿರಾಕರಿಸಿದರು. ಕುಸ್ತಿ ಒಕ್ಕೂಟದ ಕಾರ್ಯವೈಖರಿ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಆಟಗಾರರು ಶರ್ಮಾ ಮತ್ತು ತರಬೇತುದಾರರ ವಿರುದ್ಧ ಲೈಂಗಿಕ ಆರೋಪಗಳನ್ನು ಮಾಡಿದರು. ಪುರುಷ ಹಾಗೂ ಮಹಿಳಾ ಆಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರಲ್ಲದೆ, ಬಜರಂಗ್ ಪುನಿಯಾ, ಸಂಗೀತಾ ಫೋಗಟ್, ಸೋನಮ್ ಮಲಿಕ್ ಮತ್ತು ಅಂಶು ಸೇರಿದಂತೆ…
ಉತ್ತರ ಪ್ರದೇಶ:ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ 15 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಉತ್ತರ ಪ್ರದೇಶದ ಭದೋಹಿ ಎಂಬಲ್ಲಿ ಈ ಘಟನೆ ನಡೆದಿದೆ. ಅನುರಾಧಾ ಬಿಂದ್ ಎಂಬ ಬಾಲಕಿ ಕೊಲೆಯಾದಳು. 22 ವರ್ಷದ ಅರವಿಂದ್ ವಿಶ್ವಕರ್ಮ ತನ್ನ ಸಹೋದರಿ ನಿಶಾ ಜೊತೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಿಂದ ಹಿಂತಿರುಗುತ್ತಿದ್ದ ಅನುರಾಧಾಳ ತಲೆಗೆ ಗುಂಡು ಹಾರಿಸಿದ್ದಾನೆ. ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದೆ. ಆರೋಪಿ ತಲೆಮರೆಸಿಕೊಂಡಿದ್ದಾನೆ.ಪೊಲೀಸ್ ಅಧಿಕಾರಿಗಳು ತನಿಖೆ ಶುರು ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಶೀಘ್ರದಲ್ಲಿ ಅಪರಾಧಿಯನ್ನು ಹಿಡಿಯುತ್ತೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಯಗಢ : ಗೋವಾ- ಮುಂಬೈ ಹೆದ್ದಾರಿಯಲ್ಲಿ ವ್ಯಾನ್ ಮತ್ತು ಟ್ರಕ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮಗು ಸೇರಿ 9 ಜನರು ಮೃತಪಟ್ಟ ದಾರುಣ ಘಟನೆ ರಾಯಗಡ ಜಿಲ್ಲೆ ರೆಪೊಲಿ ಎಂಬಲ್ಲಿ ನಡೆದಿದೆ. ಘಟನಾ ಸ್ಥಳವಾದ ರೆಪೊಲಿ ಗ್ರಾಮ ಮುಂಬೈಯಿಂದ ಸುಮಾರು 130 ಕಿಲೋ ಮೀಟರ್ ದೂರದಲ್ಲಿದೆ. ಮೃತಪಟ್ಟವರನ್ನು ರತ್ನಗಿರಿ ಜಿಲ್ಲೆಯ ನಿವಾಸಿಗಳೆಂದು ಗುರುತಿಸಲಾಗಿದೆ. ಗಾಯಗೊಂಡ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಅಸುನೀಗಿದ ಜನರ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಉತ್ತರ ಪ್ರದೇಶದ ಹಿಂದೂ ಕಾಲೇಜಿನಲ್ಲಿ ಬುರ್ಖಾ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ. ಯುಪಿಯ ಮೊರಾದಾಬಾದ್‌ನಲ್ಲಿರುವ ಹಿಂದೂ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಾಲೇಜಿನ ಯೂನಿಫಾರ್ಮ್ ಕೋಡ್‌ನಲ್ಲಿ ಬುರ್ಖಾ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಬುರ್ಖಾ ತೆಗೆದರೆ ಮಾತ್ರ ಕಾಲೇಜಿಗೆ ಪ್ರವೇಶ ನೀಡುತ್ತೇವೆ ಎಂದು ಅಧಿಕಾರಿಗಳು ಪಟ್ಟು ಹಿಡಿದರು ಎನ್ನುತ್ತಾರೆ ವಿದ್ಯಾರ್ಥಿಗಳು. ಆಗ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ, ನಡೆಯಿತು. ಕಾಲೇಜಿನ ಪ್ರಾಧ್ಯಾಪಕ ಡಾ. ಎಪಿ ಸಿಂಗ್ ಹೇಳಿದರು. ನಂತರ ಕಾಲೇಜು ಸಮವಸ್ತ್ರದಲ್ಲಿ ಬುರ್ಖಾ ಹಾಕಬೇಕು ಎಂದು ಸಮಾಜವಾದಿ ಛಾತ್ರ ಸಭೆ ಮನವಿ ಮೂಲಕ ಮನವಿ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ತಾಲೂಕಿನ ಹುಲ್ಲೇಕೆರೆ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಇದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್.ಬಿ.ಶಿವಕುಮಾರ ಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದು ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಶಿಧರ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. 16 ಸಂಖ್ಯಾಬಲ ಸದಸ್ಯವುಳ್ಳ ಪಂಚಾಯಿತಿ ಇದಾಗಿದ್ದು, ಯಾರೊಬ್ಬರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಯಾಗಿರುವ ತಾಲೂಕು ದಂಡಾಧಿಕಾರಿಯಯಾದ ವೈ.ಎಂ.ರೇಣು ಕುಮಾರ್ ಅವರು, ಚುನಾವಣಾ ಪ್ರಕ್ರಿಯೆಯನ್ನು ಮುಗಿಸಿ ಶಶಿಧರ್ ಅವರನ್ನು ಅವಿರೋಧ ಆಯ್ಕೆ ಎಂದು ಘೋಷಿಸಿದರು. ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಧರ್ ಇದೇ ವೇಳೆ ಮಾತನಾಡಿ, ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೂ ಯಾವುದೇ ತರಹದ ನೀರಿನ ಸಮಸ್ಯೆ, ಆಗಲಿ ಚರಂಡಿ ಸಮಸ್ಯೆ ಆಗಲಿ, ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಈ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು, ಮಾಜಿ ಅಧ್ಯಕ್ಷ ಕಿರಣ್ ರಾಮಡಿಹಳ್ಳಿ, ಎಲ್ಲಾ ಸದಸ್ಯರುಗಳು, ಚುನಾವಣಾ ಸಿಬ್ಬಂದಿ ಕಾಂತರಾಜು, ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಸವೇಶ್ ಹುಲ್ಲೆಕೆರೆ, ರಕ್ಷಿತ್…
ವೈ.ಎನ್.ಹೊಸಕೋಟೆ: ಫುಟ್ಬಾಲ್ ದೇಹಕ್ಕೆ ಉತ್ತಮ ಕಸರತ್ತು ನೀಡುವ ಪಂದ್ಯಾವಳಿಯಾಗಿದ್ದು, ಕ್ರೀಡಾಪಟುಗಳ ಆರೋಗ್ಯ ಉತ್ತಮವಾಗಿರಲು ಸಹಾಯಕವಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ವಿ. ವೆಂಕಟೇಶ್ ತಿಳಿಸಿದ್ದಾರೆ. ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ ಆವರಣದಲ್ಲಿ ವೈ.ಎನ್.ಹೊಸಕೋಟೆ ಪುಟ್ ಬಾಲ್ ಕ್ಲಬ್ ಆಯೋಜಿಸಿದ್ದ ಹೊನಲು ಬೆಳಕಿನ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕ್ರೀಡಾಪಟುಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಇನ್ನಷ್ಟು ಅಭ್ಯಾಸ ಮಾಡಿಬೇಕು. ತಾಲ್ಲೂಕು ಮಟ್ಟ ಜಿಲ್ಲಾ ಮಟ್ಟ ರಾಜ್ಯಮಟ್ಟಕ್ಕೆ ಹೋಗಬೇಕು. ಮುಂದಿನ ದಿನಗಳಲ್ಲಿ ಇದೇ ರೀತಿ ಇನ್ನೂ ಹೆಚ್ಚಿನ ಸಹಕಾರ ನೀಡುತ್ತೇನೆ. ತಾಲ್ಲೂಕು ಮಟ್ಟದ ಫುಟ್ಬಾಲ್ ಕ್ರೀಡಾಕೂಟ ನಡೆಸಬೇಕೆಂದು ಆಟಗಾರರಿಗೆ ಮತ್ತು ಆಯೋಜಕರಿಗೆ ತಿಳಿಸಿದರು. ಇಂದು ಫುಟ್ಬಾಲ್ ಕ್ರೀಡಾಕೂಟವನ್ನು ನೋಡಿ ತುಂಬಾ ಸಂತೋಷವಾಗಿದೆ. ತಂಡಗಳು ಒಂದಕ್ಕಿಂತ ಒಂದು ನಾ ಮುಂದು ತಾ ಮುಂದು ಎಂಬುವಂತೆ ರೋಚಕದಿಂದ ಆಟವನ್ನು ಹಾಡಿದ್ದೀರ. ಗ್ರಾಮೀಣ ಆಟಗಾರರು ತಮ್ಮ ಪ್ರತಿಭೆಯನ್ನು ಪಂದ್ಯಾವಳಿಯಲ್ಲಿ ತೋರಿಸಿ ಕೊಟ್ಟಿದ್ದೀರಾ. ನಿಮ್ಮ ಪ್ರತಿಭೆಯು ಮೆಚ್ಚುವಂತಹದ್ದು ಎಂದರು. ಮುಖಂಡರಾದ ಟಿ.ಉಮೇಶ್ ಮಾತನಾಡಿ, ಗಡಿನಾಡು…
ಸರಗೂರು: ಶಿವಾರ್ಚಕರಿಗೆ ಸರಕಾರ ನೀಡುತ್ತಿರುವ ಸಂಭಾವನೆಯು ತುಂಬಾ ಕಡಿಮೆಯಾಗಿದ್ದು, ಇದರಿಂದ ಜೀವನ ನಿರ್ವಹಣೆಯೂ ಕಷ್ಟಕರವಾಗಿರುವುದು ನೋವಿನ ಸಂಗತಿಯಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಬೇಸರವ್ಯಕ್ತಪಡಿಸಿದರು. ಪಟ್ಟಣದ ಕೋಟೆ-ಸರಗೂರು ಮುಖ್ಯ ರಸ್ತೆಯಲ್ಲಿರುವ ಸೌಜನ್ಯ ಗ್ಯಾಸ್ ಪ್ಯಾಕ್ಟರಿ ಪಕ್ಕದ ತಾಲೂಕು ಶಿವಾರ್ಚಕರ ಸಂಘದ ನಿವೇಶನದಲ್ಲಿ ಬುಧವಾರ ಕೋಟೆ–ಸರಗೂರು ತಾಲೂಕು ಶಿವಾರ್ಚಕರ ಸಂಘದಿಂದ ನಡೆದ ಸಂಘದ ವಾರ್ಷಿಕ ಮಹಾಸಭೆ, ನಾಮಫಲಕ ಅನಾವರಣ, 2023ನೇ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ, ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಶಿವಾರ್ಚಕರಿಗೆ ಹೆಚ್ಚಿನ ಸಂಭಾವನೆ ಸೇರಿದಂತೆ ಸರಕಾರದಿಂದ ಸಿಗುವ ಮೂಲ ಸೌಲಭ್ಯಗಳು ಸಮರ್ಪಕವಾಗಿ ಸಿಗಬೇಕು. ಈ ನಿಟ್ಟಿನಲ್ಲಿ ಇಲಾಖೆ ಕ್ರಮವಹಿಸಬೇಕು. ಇವರು ದೇವಸ್ಥಾನದ ಆರತಿ ತಟ್ಟೆಯಲ್ಲಿನ ಬಿಡಿಗಾಸಿನಿಂದ ತಕ್ಕಮಟ್ಟಿಗೆ ಜೀವನ ನಡೆಸುತ್ತಿದ್ದು, ಸರಕಾರ ಇತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು. ಮೈಸೂರು ಮಹಾರಾಜ ಸಂಸ್ಕೃತ ಪಾಠಶಾಲೆಯ ನಿವೃತ್ತ ಪ್ರಾಧ್ಯಾಪಕ ಪ್ರೊ.ಮಲ್ಲಣ್ಣ ಪ್ರಸ್ತಾವಿಕವಾಗಿ ಮಾತನಾಡಿ, ಇಲ್ಲಿನ ಶಿವಾರ್ಚಕರ ಸಂಘವೂ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿದ್ದು, ಆರ್ಚಕರ ಪುಣ್ಯನಿಧಿಯಿಂದ ಆರ್ಚಕರ ಪಾಠಶಾಲೆ, ಸಮುದಾಯ…
ಮಧುಗಿರಿ: ಮಿಡಿಗೇಶಿ ಹೋಬಳಿಯ ಹೊಸಕೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕಾರೇನಹಳ್ಳಿ ಗ್ರಾಮದಲ್ಲಿ ಸುಮಾರು 10 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಅಲ್ಪಸಂಖ್ಯಾತರ ಮುರಾರ್ಜಿ ಶಾಲೆಯ ಸುಸಜ್ಜಿತವಾದ ಕಟ್ಟಡವನ್ನು ಶಾಸಕ ಎಂ.ವಿ.ವೀರಭದ್ರಯ್ಯ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಮಖ್ಯಮಂತ್ರಿಗಳ ಅಮೃತ ನಗೋರೋತ್ಥಾನ ಯೋಜನೆಯಡಿಯಲ್ಲಿ ಮಧುಗಿರಿ ಪುರಸಭೆ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಸುಮಾರು 6 ಕೋಟಿ ವೆಚ್ಚದ ರಸ್ತೆ ಚರಂಡಿ ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ : ಪುಂಡರಿಂದ ಪ್ರತಿನಿತ್ಯ ರಾಗಿಂಗ್ ಮತ್ತು ವಿನಾಕಾರಣ ಹಾರನ್ ಕಿರಿಕಿರಿ ಕಡಿವಾಣಕ್ಕೆ ಕೊರಟಗೆರೆ ಪಿಎಸ್ ಐ ಚೇತನ್ ಗೌಡ ಮಫ್ತಿಯಲ್ಲಿ ಪಿಲ್ಡಿಗಿಳಿದ್ದಾರೆ. ಶಾಲಾ-ಕಾಲೇಜು ಪ್ರಾರಂಭಕ್ಕೂ ಮುನ್ನಾ ಮತ್ತು ಮುಕ್ತಾಯದ ನಂತರವು ಸಾವಿರಾರು ವಿದ್ಯಾರ್ಥಿಗಳ ನಡುವೆ ಕಾಣದಂತೆ ಕಾವಲು ಕಾಯುವ ರೀತಿಯಲ್ಲಿಯೇ ಪೊಲೀಸರ ಕಾರ್ಯಚರಣೆ ನಡೆದಿದೆ. ಕೊರಟಗೆರೆ ಪಟ್ಟಣದ ಸರಕಾರಿ ಬಸ್ ನಿಲ್ದಾಣ, ಸಂತೇಮೈದಾನ, ಬಾಲಕಿಯರ ಪ್ರೌಢಶಾಲೆ, ಪ್ರಥಮದರ್ಜೆ ಕಾಲೇಜು, ಸರಕಾರಿ ಪದವಿಪೂರ್ವ ಕಾಲೇಜು, ಖಾಸಗಿ ಬಸ್ ನಿಲ್ದಾಣ, ಟೀ ಅಂಗಡಿ ಮತ್ತು ಸಾರ್ವಜನಿಕ ಪ್ರದೇಶದಲ್ಲಿ ಕೆಲಸವೇ ಇಲ್ಲದೇ ವಿನಾಕಾರಣ ತಿರುಗಾಡುವ ಪುಂಡರಿಗೆ ಬಿಸಿಮುಟ್ಟಿಸುವ ಕೆಲಸವನ್ನು ಪಿಎಸ್ ಐ ಚೇತನ್ ಗೌಡ ನೇತೃತ್ವರ ಪೊಲೀಸರ ತಂಡ ಮಾಡಿದೆ. ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಬೈಕ್ ವಿಲಿಂಗ್ ಮಾಡೋದು, ವಿದ್ಯಾರ್ಥಿಗಳಿಗೆ ರಸ್ತೆ ಬೀಡದೇ ಅಡ್ಡಾದಿಡ್ಡಿ ವಾಹನ ಚಲಾಯಿಸುವುದು, ಹೆಣ್ಣು ಮಕ್ಕಳನ್ನು ಹಿಂದೆಯಿಂದ ಚುಡಾಯಿಸುವುದು, ಜೋರಾಗಿ ಹಾರನ್ ಹೊಡೆದು ಕಿರಿಕಿರಿ ಉಂಟು ಮಾಡೋದು, ರಸ್ತೆಯ ಮಧ್ಯೆ ಕಾದು ಕುಳಿತು ಸಮಸ್ಯೆ ಸೃಷ್ಟಿಸೋದು ಸೇರಿದಂತೆ ಹತ್ತಾರು…