Author: admin

ತುಮಕೂರು: ಚಲಿಸುತ್ತಿದ್ದ ಕಾರಿನ ಟಯರ್ ಒಡೆದು 6 ಜನರು ಪ್ರಯಾಣಿಸುತ್ತಿದ್ದ ಫಾರ್ಚುನರ್ ಕಾರು ಮಗುಚಿ ಬಿದ್ದ ಘಟನೆ ಯಡಿಯೂರು ಬ್ರಿಡ್ಜ್ ಸಮೀಪ  ಭಾನುವಾರ ನಡೆದಿದೆ. ಮೈಸೂರಿನಿಂದ ಯಡಿಯೂರಿಗೆ ಬರುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದ್ದು, ಸುಮಾರು 50 ಮೀಟರ್ ಗಳವರೆಗೆ ಕಾರು ರಸ್ತೆಯಲ್ಲಿ ಉಜ್ಜಿಕೊಂಡು ಹೋಗಿದೆ. ಅಪಘಾತಕ್ಕೀಡಾದ ಕಾರಿನಲ್ಲಿ 2 ವರ್ಷದ ಮಗು ಸೇರಿದಂತೆ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ವರದಿ: ಶಿವಕುಮಾರ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ಹಳೆ ಜೇವರ್ಗಿ ರಸ್ತೆಯಲ್ಲಿ ನಡೆದಿದೆ. 23 ವರ್ಷದ ಜಮೀರ್ ಕೊಲೆಯಾದ ಯುವಕ. ಕಲಬುರ್ಗಿಯ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಯಾಗಿರುವ ಜಮೀರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಳೆವೈಷಮ್ಯದದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿಕ್ಕಬಳ್ಳಾಪುರ : ಮಕ್ಕಳಿಲ್ಲ ಎಂಬ ಕೊರಗಿನಿಂದ ಮನನೊಂದು ದಂಪತಿಯ ಒಂದೇ ಸೀರೆಯಲ್ಲಿ ನೇಣಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೂಲಕುಂಟೆ ಗ್ರಾಮದಲ್ಲಿ ನಡೆದಿದೆ. ಎರಡು ವರ್ಷಗಳಿಂದ ಮಕ್ಕಳಾಗಿಲ್ಲವೆಂದು ನೋಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರನ್ನು ಚಂದ್ರು (32), ಶಶಿಕಲಾ (25) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಧಾರವಾಡ: ಬ್ಯೂಟಿಷಿಯನ್ ಜೊತೆ ಕಾಂಗ್ರೆಸ್ ಮುಖಂಡ ಅನುಚಿತವಾಗಿ ವರ್ತಿಸಿದ ಘಟನೆ ಜಿಲ್ಲೆಯ ವಿದ್ಯಾಗಿರಿ ಬಡಾವಣೆಯಲ್ಲಿ ನಡೆದಿದೆ. ಸ್ಪಾ ಮಾಲೀಕ ಮನೋಜ್ ಕರ್ಜಗಿ (54) ಬಂಧಿತ ಆರೋಪಿ. ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕನಾಗಿದ್ದ ಈತ, ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಎಂದು ಹೇಳಲಾಗಿದೆ. ತನ್ನದೇ ಸ್ಪಾದ‌ಲ್ಲಿ ಕೆಲಸಕ್ಕಿದ್ದ 19 ವರ್ಷದ ಬ್ಯೂಟಿಷಿಯನ್ ಜತೆ ಅನುಚಿತವಾಗಿ ವರ್ತಿಸಿದ್ದು, ಯುವತಿ ಕೂಗಿಕೊಂಡು ಹೊರಬಂದಿದ್ದಳು. ಬಳಿಕ ಸ್ನೇಹಿತರ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ವಿದ್ಯಾಗಿರಿ ಪೊಲೀಸರು ಕರ್ಜಗಿಯನ್ನು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಡಿಸೆಂಬರ್ ಚಳಿಗಾಲ ಅಧಿವೇಶನದ ವೇಳೆಯಲ್ಲಿ ಮಲ್ಟಿ ಸೂಪರ್’ಸ್ಪೆಷಾಲಿಟಿ ಆಸ್ಪತ್ರೆಯ ಎರಡು ಮಹಡಿಗಳನ್ನು ಉದ್ಘಾಟನಾ ಮಾಡಲಿದ್ದೇವೆ ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಶನಿವಾರ ಭಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಅವರ ಜೊತೆ ಸಭೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಆ ವೇಳೆ ಬೆಳಗಾವಿ ನಗರದಲ್ಲಿ ಪ್ರಗತಿ ಹಂತದಲ್ಲಿ ಇರುವ ಮಲ್ಟಿ ಸೂಪರ ಸ್ಪೆಷಾಲಟಿ ಆಸ್ಪತ್ರೆ ಉದ್ಘಾಟನೆ ಆಗಲಿದೆ ಎಂದು ತಿಳಿಸಿದರು.‌ ಸದ್ಯದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಕಾಮಗಾರಿ ನಡೆಯಲಿದೆ ಎಂದು ತಿಳಿಸಿದರು. ‌ ಬಳ್ಳಾರಿ ಆಸ್ಪತ್ರೆಯಲ್ಲಿ ಆಗಿರುವ ಸಮಸ್ಯೆ ನಮ್ಮ ಜಿಮ್ಸ್ ಆಸ್ಪತ್ರೆಯಲ್ಲಿ ಆಗಬಾರದು. ಆಕ್ಸಿಜನ್ ತೊಂದರೆ ಆಗದಂತೆ ನೋಡಿಕೋಳ್ಳಬೇಕು, ವಿದ್ಯುತ್ ಸಮಸ್ಯೆ ಎದುರಾದಾಗ ಆಕ್ಸಿಜನ್ ಸಪ್ಲೈ ಮಾಡಲು ಜನರೇಟರ್ ರೇಡಿ ಇರಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇದಕ್ಕಿಂತ ಮುಂಚೆ ಭಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಅವರ ಜೊತೆ…

Read More

ಮಧುಗಿರಿ: ತಾಲೂಕು ದಂಡಾಧಿಕಾರಿಗಳ ಕಚೇರಿಯ ಸುತ್ತಮುತ್ತ ಬೆಳೆದಿದ್ದ ಗಿಡಗಂಟಿಗಳನ್ನು ತಹಶೀಲ್ದಾರ್ ಸುರೇಶ್ ಆಚಾರ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ಈ ಸ್ವಚ್ಛತಾ ಕಾರ್ಯದಲ್ಲಿ ಕಚೇರಿ ಸಿಬ್ಬಂದಿ ಹಾಗೂ ಪುರಸಭೆಯ ಪೌರ ಕಾರ್ಮಿಕರು ಭಾಗಿಯಾಗುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಐ.ಡಿಹಳ್ಳಿ ಆರ್.ಐ ನಾರಾಯಣಪ್ಪ, ಕಸಬಾ ವಿ.ಎ ಪರಮೇಶ್, ಸಿಬ್ಬಂದಿಗಳಾದ ಸುನಿಲ್, ರವಿ, ಶಿವಶಂಕರ್ ನಾಯಕ್, ಮತ್ತು ಪುರಸಭಾ ಹೆಲ್ತ್ ಇನ್ಸ್ಪೆಕ್ಟರ್ ಬಾಲಾಜಿ ಮತ್ತು ಗ್ರಾಮ ಸಹಾಯಕರು ಹಾಗೂ ಪುರಸಭೆ ಪೌರ ಕಾರ್ಮಿಕರು ಈ ಸಂದರ್ಭ ಇದ್ದರು. ವರದಿ: ಅಬಿದ್, ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ತಾಲೂಕಿನ ಕೊಡಿಗೇನಹಳ್ಳಿ ದೊಡ್ಡಮಾಲೂರು ಪಂಚಾಯತಿ ವ್ಯಾಪ್ತಿಯಿಂದ ಸೂರ್ ನಾಗೇನಹಳ್ಳಿ ಗ್ರಾಮದಲ್ಲಿ ಜನಜೀವನ ಮಿಷನ್ ಯೋಜನೆಯಡಿಯಲ್ಲಿ ಸುಮಾರು 39 ಲಕ್ಷ ವೆಚ್ಚದಲ್ಲಿ ಪೈಪ್ ಲೈನ್ ಕಾಮಗಾರಿಗೆ ಶಾಸಕರಾದ ಎಂ.ವಿ.ವೀರಭದ್ರಯ್ಯ ಚಾಲನೆ ನೀಡಿದರು. ಗ್ರಾಮದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದೆನ್ನುವ ಉದ್ದೇಶದೊಂದಿಗೆ ಕೊಡಿಗೇನಹಳ್ಳಿ ದೊಡ್ಡಮಾಲೂರು ಪಂಚಾಯತಿ ವ್ಯಾಪ್ತಿಯಿಂದ ಸೂರ್ ನಾಗೇನಹಳ್ಳಿ ಗ್ರಾಮದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪಂಚಾಯಿತಿ ವ್ಯಾಪ್ತಿಯ ಮುಖಂಡರು, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಸಕರಿಗೆ ಗ್ರಾಮಸ್ಥರಿಂದ ಸನ್ಮಾನಿಸಲಾಯಿತು. ವರದಿ : ಅಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಾಸನ:  ಜಿಲ್ಲೆಯ ಚೆನ್ನಾರಾಯಪಟ್ಟಣ ತಾಲ್ಲೂಕಿನ ಜಂಬೂರಿನಲ್ಲಿ ಗಂಗಾಪರಮೇಶ್ವರಿ ವಿಸರ್ಜನೆ ಮಹೋತ್ಸವ ನಡೆಯಿತು. ಗೌರಿ ಹಬ್ಬದದಂದು  ಗಂಗಾಪರಮೇಶ್ವರಿ ಮೀನುಗಾರರ ಸಹಕಾರಿ ಸಂಘ ಹಾಗೂ ಗಂಗಾಮತಸ್ಥ ಸಮಾಜ ಮತ್ತು ಗ್ರಾಮಸ್ಥರು ಪ್ರತಿಷ್ಠಾಪಿಸಿದ್ದ ಶ್ರೀ ಗಂಗಾಪರಮೇಶ್ವರಿ ತಾಯಿಯ ವಿಗ್ರಹವನ್ನು ಜಂಬೂರಿನಲ್ಲಿ ಕೆರೆಗೆ ವಿಸರ್ಜನೆ ಮಾಡಲಾಯಿತು. ವಿಸರ್ಜನೆಗೆ ಮೊದಲು ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಬೆಸ್ತ ಜನಾಂಗಂದ ಕುಲದೇವತೆಯಾದ ಗಂಗಾಪರಮೇಶ್ವರಿಯನ್ನು ಗೌರಿ ಹಬ್ಬದದಂದು ಪ್ರತಿಷ್ಠಾಪಿಸಲ್ಪಟ್ಟು ಇಲ್ಲಿ ವಿಶೇಷ ಪೂಜೆ ನಡೆಸುತ್ತಾರೆ. ಮೊಸಳೆಯನ್ನು ತನ್ನ ರಥವಾಗಿಮಾಡಿಕೊಂಡು ಕುಳಿತ ಸುಂದರ ದೇವತೆ, ಸಕಲ ಜೀವರಾಶಿಗಳಿಗೆ ಜೀವನಾಡಿ ಗಂಗಾಪರಮೇಶ್ವರಿ ಪೂಜೆ ಜೊತೆಗೆ ಮೀನು ಹಿಡಿಯುವ ಬಲೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದಂತ ಕಾರ್ಯಕ್ರಮದ ಭಾಷಣದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಲವೊಂದು ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಕಾರ್ಯಕರ್ತರು ಮತ್ತು ಮುಖಂಡರು ಒಗ್ಗಟ್ಟಾಗಿ ಇರಿ ಎಂದು ಕರೆ ನೀಡಿದ್ದಾರೆ. ವಿದ್ಯಾರ್ಥಿ ದಿನಗಳಿಂದ ತಾನು ಬೆಳೆದ ಬಂದ ರೀತಿಯೇ ಎಲ್ಲರಿಗೂ ಮಾದರಿಯಾಗಲಿ ಎಂದ ಡಿಕೆಶಿ, ಪರಿಶ್ರಮಕ್ಕೆ ಫಲ ಇದೆ ಎನ್ನುವುದಕ್ಕೆ ನಾನೇ ಸಾಕ್ಷಿ ಎಂದು ಹೇಳಿದ್ದಾರೆ. ಹುದ್ದೆಗೆ ಆಸೆ ಪಡದೇ ಕೆಲಸ ಮಾಡಿ ಹುದ್ದೆ ನಿಮ್ಮನ್ನೇ ಹುಡುಕಿಕೊಂಡು ಬರುತ್ತದೆ ಎಂದು ಹೇಳಿದ್ದಾರೆ. ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಗೊಳಿಸುವುದು ಮತ್ತು ಮುಂದಿನ ಚುನಾವಣೆಗೆ ಪೂರ್ವ ತಯಾರಿ ಸಂಬಂಧ ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ನಡೆಸಿದ್ದ ಸಂಭಾಷಣೆಯನ್ನೂ ಡಿಕೆಶಿ ಈ ವೇಳೆ ಬಹಿರಂಗ ಪಡಿಸಿದ್ದಾರೆ. ಡಿಕೆಶಿ ಭಾಷಣದ ವೇಳೆ ಭಾರತ್ ಜೋಡೋ ಯಾತ್ರೆಯ ವಿಚಾರದಲ್ಲಿ ಕೆಪಿಸಿಸಿಯ ಕೆಲವು ಮುಖಂಡರ ಜೊತೆಗೆ ಸಹಮತವಿಲ್ಲ ಎನ್ನುವ ವಿಚಾರವೂ ಪರೋಕ್ಷವಾಗಿ ಬಹಿರಂಗಗೊಂಡಿದೆ. “ನಾನು ಫೈನಲ್ ಇಯರ್ ಸ್ಟೂಡೆಂಟ್, ವಿದ್ಯಾರ್ಥಿ ನಾಯಕನಾಗಿದ್ದ ದಿವಸದಲ್ಲಿ ನನ್ನ ಮೇಲೆ ನಂಬಿಕೆಯಿಟ್ಟು ಪಕ್ಷ ನನಗೆ…

Read More

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರಿ ಸದ್ದು ಮಾಡಿದ್ದ ಲವ್ ಜಿಹಾದ್ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ನಾನೇ ಮುಸ್ಲಿಂ ಯುವಕನನ್ನು ಇಷ್ಟಪಟ್ಟು ಮದುವೆಯಾಗುತ್ತಿದ್ದು, ಆ ಧರ್ಮಕ್ಕೆ ಮತಾಂತರಗೊಳ್ಳುತ್ತೇನೆ. ಅದು ನನ್ನ ಹಕ್ಕು, ಸ್ವಾತಂತ್ರ್ಯ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದು ಮದುವೆಗೆ ಅಡ್ಡಿಪಡಿಸಿದವರಿಗೆ ಹಿಂದೂ ಯುವತಿ ಚೈತ್ರಾ ತಿರುಗೇಟು ಕೊಟ್ಟಿದ್ದಾಳೆ. ನಾವು ಪ್ರೀತಿಸಿಯೇ ಮದುವೆ ಆಗುತ್ತಿದ್ದೇನೆ, ಮುಂದೆಯೂ ಚೆನ್ನಾಗಿರುತ್ತೇವೆ ಎಂದು ಹಿಂದೂ ಪರ ಸಂಘಟನೆ ಕಾರ್ಯಕರ್ತರಿಗೆ ಯುವತಿ ತಿರುಗೇಟು ನೀಡಿದ್ದಾಳೆ. ನನ್ನ ಗಂಡನ ಮೇಲೆ ಹಲ್ಲೆ ಮಾಡಿದ್ದಾರೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೊಲೀಸರ ವಿರುದ್ಧವೂ ಕಿಡಿಕಾರಿದ್ದಾಳೆ. ಸೆಪ್ಟೆಂಬರ್ 14ರಂದು ಸಂಜೆ ಚಿಕ್ಕಮಗಳೂರು ನಗರದಲ್ಲಿ ಲವ್‌ ಜಿಹಾದ್‌ ಆರೋಪದ ಬಿಸಿಯ ತಾಪ ಏರಿತ್ತು. ಮುಸ್ಲಿಂ ಹುಡುಗ-ಹಿಂದೂ ಹುಡುಗಿ ಮದುವೆ ಆಗುವ ವಿಷಯ ತಿಳಿದು ಹಿಂದೂಪರ ಸಂಘಟನೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಪೊಲೀಸರೂ ಎಲ್ಲರನ್ನೂ ಠಾಣೆಗೆ ಕರೆದೊಯ್ದಿದ್ದರು. ನೈತಿಕ ಪೊಲೀಸ್ ಗಿರಿಯ ಆರೋಪದಡಿ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದರು. ಹುಡುಗ-ಹುಡುಗಿ…

Read More