Subscribe to Updates
Get the latest creative news from FooBar about art, design and business.
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
Author: admin
ಕೋಲಾರ: ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಬಾಳಗಾನಹಳ್ಳಿಯಲ್ಲಿ ನಡೆದಿದೆ. ಶಿವಾನಂದ ಜಕ್ಕಣ್ಣವರ್ (24) ಆತ್ಮಹತ್ಯೆಗೆ ಶರಣಾದವರು. ಸರ್ಕಾರಿ ಆಸ್ಪತ್ರೆಯ ವಸತಿ ಗೃಹದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಬೆಳಗಾವಿ ಮೂಲದವರಾಗಿರುವ ಶಿವಾನಂದ ಜಕ್ಕಣ್ಣವರ್ , 9 ತಿಂಗಳ ಹಿಂದಷ್ಟೇ ಬಾಳಗಾನಹಳ್ಳಿಯ ಸಮುದಾಯ ಆರೋಗ್ಯಾಧಿಕಾರಿಯಾಗಿ ಕೆಲಸಕ್ಕೆ ಸೇರಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ. ಕೊರಟಗೆರೆ: ಇಡೀ ರಾಜ್ಯದಲ್ಲೇ ರೈತರ ನಿದ್ದೆಗೆಡಿಸಿದ್ದ ಜಾನುವಾರುಗಳಲ್ಲಿ ಕಂಡುಬಂದಿದ್ದ ಚರ್ಮಗಂಟು ರೋಗದ ಭಯದಿಂದ ರೈತರ ಬದುಕು ಬೀದಿಗೆ ಬಿದ್ದಂತಾಗಿತ್ತು. ಅಕ್ಕ ಪಕ್ಕದ ರಾಜ್ಯಗಳಿಂದ ತಗುಲಿದ್ದ ಚರ್ಮಗಂಟು ರೋಗ ರಾಜ್ಯಾದ್ಯಂತ ಹರಡಿ ಸಾವಿರಾರು ಜಾನುವಾರುಗಳು ಮರಣ ಹೊಂದಿದ್ದವು. ಚರ್ಮಗಂಟು ರೋಗ ಉಲ್ಬಣ ವಾಗುತ್ತಿದ್ದoತೆಯೇ ಎಚ್ಛೆತ್ತುಕೊಂಡ ಸರ್ಕಾರ ಸಂಬಂಧ ಪಟ್ಟ ಪಶು ಸಂಗೋಪನಾ ಇಲಾಖೆಯ ಮೂಲಕ ರಾಜ್ಯದಲ್ಲಿರುವ ಎಲ್ಲಾ ಪಶು ವೈದ್ಯಾಧಿಕಾರಿಗಳಿಗೆ ಆದೇಶ ಹೊರಡಿಸಿ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಲಸಿಕೆ ನೀಡಲು ಸೂಚಿಸಿದ್ದರಿಂದ ಚರ್ಮಗಂಟು ರೋಗ ನಿಯಂತ್ರಣದಲ್ಲಿದೆ. ಈ ರೋಗವು ಅತೀ ವೇಗವಾಗಿ ಹರಡಿದ ಹಿನ್ನೆಲೆ ರಾಜ್ಯಾಧ್ಯoತ ನಡೆಯುವ ಜಾನುವಾರು, ಕುರಿ ಮತ್ತು ಮೇಕೆಗಳ ಸಂತೆಗಳನ್ನು ನಡೆಸದಂತೆ ಸರ್ಕಾರ ಎಲ್ಲಾ ತಾಲ್ಲೂಕ್ ಆಡಳಿತಕ್ಕೆ ಆದೇಶ ಹೊರಡಿಸುತ್ತಿದ್ದಂತೆಯೇ ಸಂಬಂಧ ಪಟ್ಟ ಅಧಿಕಾರಿಗಳು ಖಡಕ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಇದರಿಂದ ಈ ಚರ್ಮಗಂಟು ರೋಗದಲ್ಲಿ ಇಳಿಮುಖ ಕಂಡಿದೆ ಇಲ್ಲದಿದ್ದರೆ ರೈತಾಪಿ ವರ್ಗಕ್ಕೆ ಬರಸಿಡಿಲು ಬಡಿದಂತಾಗುತ್ತಿತ್ತು. ನಮ್ಮ ರಾಜ್ಯದಲ್ಲಿ ಮುಂದುವರಿದಿದ್ದ ಗೋಹತ್ಯೆ ಯನ್ನು ನಿಷೇಧಿಸಿ…
ಸಾಕಷ್ಟು ಜನರು ಇಂದು ಬೆಲ್ಲದ ಪಾನಕವನ್ನು ಮರೆಯುತ್ತಿದ್ದಾರೆ. ಪ್ಲಾಸ್ಟಿಕ್ ಬಾಟಲಿಗಳಲ್ಲಿ ಬರುವ ಪಾನೀಯಗಳೇ ಇಂದು ಜನರು ಹೆಚ್ಚಾಗಿ ಬಳಸುವ ಪಾನೀಯವಾಗಿದ್ದು, ಇದರಿಂದಾಗಿ ನಾನಾ ರೀತಿಯ ಅನಾರೋಗ್ಯಕ್ಕೆ ಜನರು ತುತ್ತಾಗುತ್ತಿದ್ದಾರೆ. ಬೆಲ್ಲದ ಪಾನಕದಿಂದ ನಮ್ಮ ದೇಹಕ್ಕೆ ಹಲವಾರು ರೀತಿಯ ಪ್ರಯೋಜನಗಳಿವೆ. ಅವುಗಳು ಯಾವುದೆಂದು ಇಂದು ತಿಳಿಯೋಣ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ಪಾನಕ ಕುಡಿಯುವುದು ಉತ್ತಮ. ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಸೋಂಕುಗಳ ವಿರುದ್ಧ ಹೋರಾಡಲು ಬೆಲ್ಲದ ಪಾನಕ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ವಿಟಮಿನ್ ಬಿ 1, ಬಿ 6, ಸಿ ಮತ್ತು ಮೆಗ್ನೀಸಿಯಮ್ ಇದರಲ್ಲಿ ಕಂಡುಬರುತ್ತದೆ. ಅಧಿಕ ತೂಕದಿಂದ ನೀವು ತೊಂದರೆಗೊಳಗಾಗಿದ್ದರೆ, ಬೆಲ್ಲದ ಪಾನಕವನ್ನು ಬಳಸಬೇಕು. ಇದು ನಿಮ್ಮ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಕಡಿಮೆ ಮಾಡುತ್ತದೆ. ಬೆಲ್ಲದಲ್ಲಿ ಪೊಟ್ಯಾಸಿಯಮ್ ಇದೆ, ಇದು ದೇಹದಲ್ಲಿನ ಎಲೆಕ್ಟ್ರೋಲೈಟ್ ಮತ್ತು ಖನಿಜಗಳ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಬೆಲ್ಲದ ಪಾನಕ ಕುಡಿದರೆ ದೇಹದಲ್ಲಿರುವ ವಿಷಕಾರಿ ಅಂಶವನ್ನು ಹೊರಹಾಕಬಹುದು. ಇದರಲ್ಲಿ ಉತ್ತಮ ಪ್ರಮಾಣದ ನಾರಿನಂಶವಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಸದೃಢವಾಗಿಡಲು…
ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದಿನಾಂಕ ಪ್ರಕಟಿಸಲಿದ್ದಾರೆ. ಈ ವರ್ಷ ಕರ್ನಾಟಕ ಸೇರಿದಂತೆ 9 ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯಬೇಕಿದೆ. ಈ ನಡುವೆ ಇಂದು ಮೂರು ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. 2024 ರಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ಹೀಗಾಗಿ ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಮಹತ್ವ ಪಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಶ್ವದ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವೆನಿಸಿಕೊಂಡಿದ್ದು, ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ರಾಷ್ಟ್ರವನ್ನು ಸುಸ್ಥಿರತೆಯ ಕಡೆಗೆ ನಡೆಸುವ ನಿಟ್ಟಿನಲ್ಲಿ ಆಲೋಚಿಸಬೇಕಾಗಿದೆ. ಜನಂಖ್ಯೆ ಹಾಗೂ ಜನಸಂಖ್ಯಾಶಾಸ್ತ್ರದ ಮೇಲೆ ಗಮನ ಕೇಂದ್ರೀಕರಿಸಿರುವ ವರ್ಲ್ಡ್ ಪಾಪ್ಯೂಲೇಷನ್ ರಿವ್ಯೂ ಅಂದಾಜಿನ ಪ್ರಕಾರ 2022ರ ಅಂತ್ಯಕ್ಕೆ ಭಾರತದ ಜನಸಂಖ್ಯೆ ೧.೪೧೭ ಬಿಲಿಯನ್ ಆಗಿತ್ತು. ಅಂದರೆ ಮಂಗಳವಾರದಂದು ಚೀನಾ ವರದಿ ಮಾಡಿರುವ ೧.೪೧೨ ಬಿಲಿಯನ್ ಗಿಂತ ೫ ದಶಲಕ್ಷ ಹೆಚ್ಚಾಗಿದೆ. ೧೯೬೦ರಿಂದ ಇದೇ ಮೊದಲ ಬಾರಿಗೆ ಚೀನಾದಲ್ಲಿ ಜನಸಂಖ್ಯೆ ಇಳಿಕೆ ಕಂಡಿದೆ. ಮೂವತ್ತು ವರ್ಷಗಳಿಗಿಂತ ಕಡಿಮೆ ವಯಸ್ಸಿನ ಜನಸಂಖ್ಯೆಯನ್ನು ಹೊಂದಿರುವ ಭಾರತ, ಮುಂಬರುವ ವರ್ಷಗಳಲ್ಲಿ ಆತೀ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಲಿದೆ. ಬಹುಪಾಲು ಜನಸಂಖ್ಯಾಶಾಸ್ತ್ರದ ಡಿವಿಡೆಂಡ್ ಅನ್ನು ಬಳಸಿಕೊಳ್ಳಲು ಪ್ರಧಾನ ಮೋದಿಯವರು ಪ್ರತಿ ವರ್ಷ ಉದ್ಯೋಗಕ್ಕೆ ಯೋಗ್ಯರಾಗುವ ಲಕ್ಷಾಂತರ ಜನರಿಗಾಗಿ ಉದ್ಯೋಗಿಗಳನ್ನು ಸೃಷ್ಟಿಸಬೇಕಾಗುತ್ತದೆ. ಮೇಲಾಗಿ ಭಾರತ ಕೃಷಿಯೇತರ ಉದ್ಯೋಗಗಳ ಕಡೆ ಹೆಚ್ಚು ಹೆಜ್ಜೆ ಹಾಕುತ್ತಿದೆ. ಭಾರತ ಈ ಮೈಲಿಗಲ್ಲನ್ನು ಈ…
ಬಾಗಲಕೋಟೆ:ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ದೈವವಾಣಿ ನುಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಈ ಬಾರಿ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾನು ಅಲೆಮಾರಿಯಲ್ಲ 8 ಬಾರಿ ಚುನವಣೆಯಲ್ಲಿ ಸ್ಪರ್ಧಿಸಿದ್ದೇನೆ. ಬೇರೆ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧಿಸುವವರು ಲೀಡರ್ ಅಲ್ಲವಾ..? ಪ್ರಧಾನಿ ಮೋದಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲವೇ..? ನಾನು ಎರಡೇ ದಿನ ಬಾದಾಮಿ ಕ್ಷೇತ್ರಕ್ಕೆ ಬಂದರೂ ಗೆಲ್ಲಿಸಿದ್ದಾರೆ. ಕೊನೆ ಚುನಾವಣೆ ಅಂತಾ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ಅಲ್ಲಿನ ಜನರು ಸೋಲಿಸಿದ್ರು. ಬಾದಾಮಿ ದೂರ ಆಗಿರುವುದಕ್ಕೆ ಹತ್ತಿರಕ್ಕೆ ಹೋಗಿತ್ತಿದ್ದಿನಿ. ವಿಪಕ್ಷ ಸ್ಥಾನದಲ್ಲಿದ್ದರೂ ನಿರೀಕ್ಷೆಗೆ ಮೀರಿ ಕೆಲಸ ಮಾಡಿದ್ದೇನೆ. ಈ ಬಾರಿ ನಾನು ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದರು. ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು. ಸ್ಯಾಂಟ್ರೋ ರವಿ ನಟೋರಿಯಸ್ ಕ್ರಿಮಿನಲ್.…
ಗದಗ: ಆಟೋ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಬಾದಾಮಿ ರಸ್ತೆಯಲ್ಲಿ ನಡೆದಿದೆ. ಅಮರೇಗೌಡ ಬಸನಗೌಡ (30) ಹಾಗೂ ಮುತ್ತಪ್ಪ ಜಾಲಿಹಾಳ (27) ಮೃತ ದುರ್ದೈವಿಗಳು. ಆಟೋದಲ್ಲಿದ್ದ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ರೋಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಾಸಕ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ RT ನಗರದ ನಿವಾಸಕ್ಕೆ ಆಗಮಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ : ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಅರಸ ಶ್ರೀ ಕೃಷ್ಣದೇವರಾಯರ ಆದರ್ಶ ಮತ್ತು ವ್ಯಕ್ತಿತ್ವ ಕೇವಲ ಬಲಿಜ ಸಮುದಾಯಕ್ಕೆ ಸೀಮಿತವಲ್ಲ ದೇಶದ ಎಲ್ಲಾ ಹಿಂದೂ ಸಮಾಜಕ್ಕೆ ಆದರ್ಶಪ್ರಾಯ ಎಂದು ಕೊರಟಗೆರೆ ತಾಲೂಕು ಬಲಿಜ ಸಂಘದ ಆಧ್ಯಕ್ಷ ಎನ್,ಪದ್ಮನಾಭ್ ತಿಳಿಸಿದರು. ಅವರು ಕೊರಟಗೆರೆ ಪಟ್ಟಣದ ಕಾಮಧೇನು ಹೋಟೆಲ್ ಸಭಾಂಗಣದಲ್ಲಿ ತಾಲೂಕು ಬಲಿಜ ಸಂಘ, ಮಹಿಳಾ ಬಜಿಜ ಸಂಘ ಹಾಗೂ ಯುವ ಬಜಿಜ ಸಂಘ ಏರ್ಪಡಿಸಿದ್ದ ಶ್ರೀ ಕೃಷ್ಣದೇವರಾಯರ 552ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾಡಿ ಕರ್ನಾಟಕ ಸಮೃದ್ದ ಇತಿಹಾಸದಲ್ಲಿ ತನ್ನದೇ ಛಾಪನ್ನು ಮೂಡಿಸಿದ ವಿಜಯನಗರ ಸಾಮ್ರಾಜ್ಯದ ಅರಸ ಕನ್ನಡ ರಾಜ್ಯರತ್ನ ಸಿಂಹಾಸನಾಧೀಶ್ವರ ಶ್ರೀ ಕೃಷ್ಣದೇವರಾಯರೊಬ್ಬರು ದೂರದೃಷ್ಠಿಯ ಮಹಾನ್ ವ್ಯಕ್ತಿಯಾಗಿದ್ದಲ್ಲದೇ ಹಿಂದೂ ಧರ್ಮದ ಪರಮ ಸಹಿಷ್ಣುವಾಗಿದ್ದರು, ಅವರು ಕೇವಲ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಚಕ್ರವರ್ತಿಯಲ್ಲದೇ ಈ ಜಗತ್ತು ಕಂಡ ಮಹಾನ್ ಚಕ್ರವರ್ತಿಗಳಲ್ಲಿ ಒಬ್ಬರಾಗಿದ್ದರು. ಇಂತಹ ಮಹಾನ್ ವ್ಯಕ್ತಿ ನಮ್ಮ ಬಲಿಜ ಸಮುದಾಯದ ವ್ಯಕ್ತಿಯಾಗಿರುವುದು ಬಲಿಜ ಕುಲಕ್ಕೆ ಕಳಸ ಪ್ರಾಯ ಎಂದು ತಿಳಿಸಿದರು.ತಾಲೂಕು…
ಕೇರಳ: ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳಲ್ಲಿ ಭಾರೀ ಏರಿಕೆ ಕಳೆದ ವರ್ಷ 4215 ಪ್ರಕರಣಗಳು ವರದಿಯಾಗಿದ್ದವು. ತಿರುವನಂತಪುರಂ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ವಯನಾಡು ಜಿಲ್ಲೆಯಲ್ಲಿ ಅತಿ ಕಡಿಮೆ ಪ್ರಕರಣಗಳು ದಾಖಲಾಗಿವೆ. 2018ರ ಪೊಲೀಸ್ ಅಂಕಿ-ಅಂಶಗಳನ್ನು ಗಮನಿಸಿದರೆ, ರಾಜ್ಯದಲ್ಲಿ ಪ್ರತಿ ವರ್ಷ ಚಿತ್ರಹಿಂಸೆಗೆ ಬಲಿಯಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ 2018 ರಲ್ಲಿ 3161 ಪ್ರಕರಣಗಳು ವರದಿಯಾಗಿದ್ದು, 2019 ರಲ್ಲಿ 3640 ಪ್ರಕರಣಗಳು ವರದಿಯಾಗಿವೆ. 2020 ರಲ್ಲಿ 3056, 2021 ರಲ್ಲಿ 3559 ಮತ್ತು 2022 ರಲ್ಲಿ 4215 ಪ್ರಕರಣಗಳು ವರದಿಯಾಗಿವೆ.ತಿರುವನಂತಪುರಂ ಜಿಲ್ಲೆಯಲ್ಲಿ ಕಳೆದ ವರ್ಷ ಅತಿ ಹೆಚ್ಚು ಮಕ್ಕಳು ದೌರ್ಜನ್ಯಕ್ಕೆ ಒಳಗಾದವರು. 530 ಪ್ರಕರಣಗಳು. 508 ಪ್ರಕರಣಗಳೊಂದಿಗೆ ಮಲಪ್ಪುರಂ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. 413 ಪ್ರಕರಣಗಳೊಂದಿಗೆ ಕೋಝಿಕ್ಕೋಡ್ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ವಯನಾಡ್ ಜಿಲ್ಲೆಯಲ್ಲಿ 168 ಪ್ರಕರಣಗಳೊಂದಿಗೆ ಅತಿ ಕಡಿಮೆ ಪ್ರಕರಣಗಳು ವರದಿಯಾಗಿವೆ. ರಾಜ್ಯದ ಬಹುತೇಕ ಮಕ್ಕಳು ತಮ್ಮ ಸ್ವಂತ ಮನೆಗಳಲ್ಲಿ ಅಥವಾ ಅಕ್ಕಪಕ್ಕದ ಮನೆಗಳಲ್ಲಿ ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ.…