Author: admin

ತುಮಕೂರು: ತುಮಕೂರು ನಗರದಲ್ಲಿರುವ ಸಿದ್ದಾರ್ಥ ವಿದ್ಯಾಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಎರಡನೇ ದಿನವೂ ಮುಂದುವರೆದಿದೆ. ಬಹುತೇಕ ಮಧ್ಯ ರಾತ್ರಿವರೆಗೂ ಈಡಿ ಅಧಿಕಾರಿಗಳು ನಿರಂತರವಾಗಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆಯಿಂದಲೂ ಈಡೇ ಅಧಿಕಾರಿಗಳು ಕಾಲೇಜಿನ ಆವರಣದಲ್ಲಿ ಮೊಕ್ಕಾಮ್ ಹೂಡಿದ್ದು, ಸ್ಥಳದಲ್ಲಿ ಪೊಲೀಸ್ ಭದ್ರತೆಯನ್ನು ಕೂಡ ನಿಯೋಜನೆ ಮಾಡಲಾಗಿದೆ. ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿಗಳನ್ನು ಹೊರತುಪಡಿಸಿ ಬೇರೆ ಯಾರನ್ನು ಒಳಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————

Read More

ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಜಮಲಾಪುರ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ನಡೆದಿದೆ. ಔರಾದ್ ಘಟಕಕ್ಕೆ ಸೇರಿದ KA 38, Fo882 ಬಸ್ ಔರಾದ್ ದಿಂದ ಭಾಲ್ಲಿಗೆ ತೆರಳುತ್ತಿದ್ದ ವೇಳೆ ಕಮಲನಗರ ರಸ್ತೆಯಲ್ಲಿ ಈ ಘಟನೆ ಜರುಗಿದೆ ಎದುರಿನಿಂದ ಟೆಂಪೋ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಬಸ್ ಉರುಳಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಖಂಡೇಕೆರಿ ಗ್ರಾಮದ ಹಿರಿಯರಾದ ಸೋಪನರಾವ್ ಬಿರಾದಾರ ಹಾಗೂ ವಿದ್ಯಾರ್ಥಿ ನರಸಿಂಗ್ ಬಿರಾದಾರ ಗಾಯಗೊಂಡಿದ್ದು ಅವರನ್ನು ಔರಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಸ್ ನಲ್ಲಿ 9 ಜನ ಪ್ರಯಾಣಿಸುತ್ತಿದ್ದರು. ಇಬ್ಬರಿಗೆ ಗಾಯವಾಗಿದೆ, ಉಳಿದವರು ಎಲ್ಲರೂ ಸುರಕ್ಷಿತವಾಗಿದ್ದಾರೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ಔರಾದ್ ಬಸ್…

Read More

ತುಮಕೂರು: ಡಾ.ಡಿ.ಎಂ.ನಂಜುಂಡಪ್ಪ ವರದಿಯ ಶಿಫಾರಸ್ಸಿನಂತೆ ಪ್ರಾದೇಶಿಕ ಅಸಮತೋಲನೆಯನ್ನು ನಿವಾರಿಸಲು ರಾಜ್ಯದಲ್ಲಿ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಾಗಿ 2007–08 ರಿಂದ 2023–24ರವರೆಗೂ ಸರ್ಕಾರದಿಂದ ಬಿಡುಗಡೆಯಾಗಿರುವ 37,661.65 ಕೋಟಿ ರೂ.ಗಳ ಅನುದಾನದಲ್ಲಿ 34,381.02 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷ ಪ್ರೊ.ಎಂ.ಗೋವಿಂದರಾವ್ ತಿಳಿಸಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆ ಸಂಬಂಧ ಸೆಪ್ಟೆಂಬರ್ 2024ರಲ್ಲಿ ಹೊಸ ಸಮಿತಿಯನ್ನು ರಚಿಸಲಾಗಿದೆ. ರಾಜ್ಯದಲ್ಲಿರುವ ಪ್ರಾದೇಶಿಕ ಅಸಮತೋಲನಾ ನಿವಾರಣೆಗಾಗಿ ಈ ಸಮಿತಿಯು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ ಎಂದು ಹೇಳಿದರು. ಸಮಿತಿಯು ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಡಾ.ನಂಜುಂಡಪ್ಪ ಸಮಿತಿ ಶಿಫಾರಸ್ಸುಗಳ ಆಧಾರದ ಮೇಲೆ ಅಸಮತೋಲನೆ ನಿವಾರಣೆಗೆ ಪರಿಣಾಮಕಾರಿಯಾಗಿ ಕೈಗೊಳ್ಳಲಾದ ಕ್ರಮಗಳ ಮೌಲ್ಯಮಾಪನ ಮಾಡಲಿದೆ ಎಂದು ತಿಳಿಸಿದರು. ರಾಜ್ಯದ ಯಾವುದೇ ಸಮುದಾಯ, ಪ್ರದೇಶಗಳು ಅಭಿವೃದ್ಧಿಯಲ್ಲಿ ಹಿಂದುಳಿಯಬಾರದೆAಬುದೇ ಸಮಿತಿ ರಚನೆ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ಪ್ರತೀ ಜಿಲ್ಲೆಗೂ ಭೇಟಿ…

Read More

ಬೆಂಗಳೂರು: ಯುವತಿಯೊಬ್ಬಳ ಮೃತದೇಹ ಬೆಂಗಳೂರಿನ ರೈಲ್ವೆ ಸೇತುವೆಯ ಬಳಿ ಸೂಟ್‌ ಕೇಸ್ ನಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಹೊರವಲಯದಲ್ಲಿರುವ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಸ್ಥಳೀಯ ನಿವಾಸಿಗಳು ಸೂಟ್‌ ಕೇಸ್ ನ್ನು ಪತ್ತೆಹಚ್ಚಿದ್ದು, ಚಲಿಸುವ ರೈಲಿನಿಂದ ಸೂಟ್ ಕೇಸ್ ಹೊರಗೆ ಎಸೆದಿರಬಹುದು ಎಂದು ಶಂಕಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಮಹಿಳೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಮತ್ತು ಸೂಟ್‌ ಕೇಸ್‌ನಲ್ಲಿ ತುಂಬಿ ಶವವನ್ನು ಚಲಿಸುವ ರೈಲಿನಿಂದ ಹೊರಗೆ ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿಕೊಳ್ಳುತ್ತಿದ್ದಾರೆ ಮತ್ತು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಸಹಿ ಹಾಕಿದರು. ಇದೇ ವೇಳೆ ಮಾತನಾಡಿದ ಅವರು, ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3,695 ಆನೆಗಳು ನಮ್ಮಲ್ಲಿವೆ. ಮಾನವ — ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ ಎಂದು ಅವರು ಹೇಳಿದರು. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್​ ಎಸ್ ​ಐಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ. ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ರೇಡ್ ಮಾಡಲಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸದ್ಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಇಂದು ಬೆಳಗ್ಗೆ ಸುಮಾರು 9:30 ಸಂದರ್ಭದಲ್ಲಿ 5 ತಂಡಗಳಲ್ಲಿ ದಾಳಿ ನಡೆಸಿದ ಇಡೀ ಅಧಿಕಾರಿಗಳು ನಿರಂತರವಾಗಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜ್ ಆವರಣದೊಳಗೆ ಗುರುತಿನ ಪತ್ರ ಹೊಂದಿದ ವಿದ್ಯಾರ್ಥಿಗಳಿಗೆ ಮಾತ್ರ ಒಳಗೆ ಬಿಡಲಾಗುತ್ತಿದ್ದು ಯಾರನ್ನು ಕೂಡ ಕಾಲೇಜಿನ ಕ್ಯಾಂಪಸ್ ಗೆ ಬಿಡಲಾಗುತ್ತಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರುವ ನಗರದ ವೀರಸಾಗರ ಬಡಾವಣೆಯ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ 2025–26ನೇ ಸಾಲಿಗೆ 1 ರಿಂದ 5ನೇ ತರಗತಿಯಲ್ಲಿ ಖಾಲಿಯಿರುವ ಸ್ಥಾನಗಳಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ವಸತಿ ಮುಖ್ಯ ಶಿಕ್ಷಕರಿಗೆ ಮೇ 31ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್–01, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ತುಮಕೂರು ತಾಲ್ಲೂಕು ಅಥವಾ ಮೊ.ಸಂ. 9480843205/ 9141557734ನ್ನು ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕ(ಗ್ರೇಡ್–01)ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು: ವಿವಿಧ ಟ್ರೇಡ್ ನಲ್ಲಿ ಐ.ಟಿ.ಐ. ತರಬೇತಿ ಪಡೆದ ಅಭ್ಯರ್ಥಿಗಳಿಗಾಗಿ ಬೆಂಗಳೂರಿನ ಹೆಚ್.ಎ.ಎಲ್. ಸಂಸ್ಥೆಯು ಅಪ್ರೆಂಟಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. Fitter, Turner, Machinist, Electrician, Welder, COPA, Carpenter, Foundryman, Sheet Metal Worker, Tool and Die maker, CNC Programmer cum Operator, Mechanic Refrigeration and Air Conditioning ಟ್ರೇಡ್ನಲ್ಲಿ ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಜೂನ್ 3ರೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಭಾವಚಿತ್ರ, ಎಸ್.ಎಸ್.ಎಲ್.ಸಿ. ಮತ್ತು ಐ.ಟಿ.ಐ. ಅಂಕ ಪಟ್ಟಿ ಹಾಗೂ ಆಧಾರ್ ಕಾರ್ಡ್ ಪ್ರತಿ, ಮೀಸಲಾತಿ ಪ್ರಮಾಣ ಪತ್ರ(SC/ST/OBC/PH) ಹಾಗೂ ಮತ್ತಿತರ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ www.apprenticeship.gov.inನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ತುಮಕೂರು ಅಥವಾ ದೂರವಾಣಿ ಸಂ: 0816-2278488ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ಕಿಶೋರ್…

Read More

ತುಮಕೂರು: ಬಿಜೆಪಿಯಲ್ಲಿ ಮತ್ತೆ ಬಂದ ಬಣ ಪ್ರತಿಷ್ಠೆ ಮುನ್ನೆಲೆಗೆ ಬಂದಿದೆ ಎನ್ನಲಾಗುತ್ತಿದೆ. ಬಿಜೆಪಿಯ ರೆಬೆಲ್ ಶಾಸಕರಾಗಿದ್ದ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ವಿ. ಸೋಮಣ್ಣ ಹಾಗೂ ಬಿ.ವೈ. ವಿಜಯೇಂದ್ರ ಮುಸುಕಿನ ಗುದ್ದಾಟ ಸ್ಫೋಟಗೊಂಡಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ತುಮಕೂರಿನಲ್ಲಿ ನಾಗರೀಕ ಹಿತರಕ್ಷಣಾ ವೇದಿಕೆಯಿಂದ ಆಯೋಜಿಸಿದ್ದ ತಿರಂಗ ಯಾತ್ರೆಯಲ್ಲಿ ಇಂತಹದ್ದೊಂದು ಅನುಮಾನ ಸೃಷ್ಟಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬರುವ ಮುನ್ನವೇ ಸಚಿವ ಸೋಮಣ್ಣ, ಎಂಎಲ್ ಸಿ ಜಗ್ಗೇಶ್ ತರಾತುರಿಯಲ್ಲಿ ಹೊರಟಿರುವ ಘಟನೆ ನಡೆದಿದೆ. ಆಪರೇಷನ್ ಸಿಂಧೂರ ಯಶಸ್ವಿ ಹಿನ್ನಲೆ ತಿರಂಗ ಯಾತ್ರೆ ಆಯೋಜಿಸಲಾಗಿತ್ತು. ನಿಗದಿತ ಸಮಯಕ್ಕೂ ಮುನ್ನವೇ ಎಸ್ ಐಟಿ ಮುಂಭಾಗ ಹಾಜರಾಗಿದ್ದ ವಿ.ಸೋಮಣ್ಣ, ಜಗ್ಗೇಶ್ ತಿರಂಗ ಯಾತ್ರೆಗೆ ತರಾತುರಿ ಚಾಲನೆ ನೀಡಿದ ಬಳಿಕ ಇಬ್ಬರು ನಾಯಕರು ಮೆರವಣಿಗೆ ವೇಳೆ ನಾಪತ್ತೆಯಾಗಿದ್ದರು. ಯಾತ್ರೆಯ ಅರ್ಧ ದೂರದವರೆಗೆ ಇರುವಂತೆ ಸ್ಥಳೀಯ ನಾಯಕರ ಮನವಿಗೂ ಡೋಂಟ್ ಕೇರ್ ಮಾಡಿದ್ದಾರೆನ್ನಲಾಗಿದೆ. ಬಿ.ವೈ.ವಿಜಯೇಂದ್ರ ಬಣದಲ್ಲಿ ಗುರುತಿಸಿಕೊಂಡಿರೋ ಶಾಸಕರಾದ ಜ್ಯೋತಿ ಗಣೇಶ್, ಗ್ರಾಮಾಂತರ ಶಾಸಕ ಸುರೇಶ್…

Read More

ತುಮಕೂರು:  ಮೇ 29ರಿಂದ ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷವು ಆರಂಭವಾಗಲಿದೆ. ಶಾಲೆಗಳ ಆರಂಭಕ್ಕೂ ಮುನ್ನ ಪ್ರವೇಶಾತಿ ನಡೆಯಬೇಕು. ಆದರೆ ಸರ್ಕಾರಿ ಶಾಲೆಗಳ ಶಿಕ್ಷಕರನ್ನು ಜಾತಿಗಣತಿಗೆ ನಿಯೋಗಿಸಲಾಗಿದೆ. ಈಗಾಗಲೇ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಕುಸಿದಿರುವ ಸರ್ಕಾರಿ ಶಾಲೆಗಳ ದಾಖಲಾತಿಯ ಮೇಲೆ ಇದು ದುಷ್ಪರಿಣಾಮ ಬೀರುತ್ತದೆ. ಖಾಸಗಿ ಶಾಲೆಗಳ ಶಿಕ್ಷಕರು ಕಳೆದ ತಿಂಗಳಿನಿಂದ ದಾಖಲಾತಿಯಲ್ಲಿ ನಿರತರಾಗಿರುವಾಗ ಸರ್ಕಾರಿ ಶಾಲೆಗಳಿಂದ ಮಕ್ಕಳನ್ನು ದೂರವಿರಿಸಿದಂತಾಗುತ್ತದೆ ಎಂದು AIDSO ತಿಳಿಸಿದೆ. ಸರ್ಕಾರವು ಈ ಕೂಡಲೇ ಗಮನಹರಿಸಿ ಸರ್ಕಾರಿ ಶಾಲೆಯ ಶಿಕ್ಷಕರನ್ನು ಗಣತಿಯ ಕೆಲಸದಿಂದ ಬಿಡುಗಡೆಗೊಳಿಸಿ ಸರ್ಕಾರಿ ಶಾಲೆಗಳ ದಾಖಲಾತಿಗಾಗಿ ನಿಯೋಗಿಸಬೇಕೆಂದು ಎಐಡಿಎಸ್ ಓ  ಕರ್ನಾಟಕ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ ಎಂದು  ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ.ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More