Author: admin

ದಾವಣಗೆರೆ : ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವನ್ನಪ್ಪಿದ್ದ ರೀತಿಯಲ್ಲೇ ಬೆಳಗಾವಿಯ ಎಎಸ್ ಐ ಪುತ್ರ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಇರುವ ಮಹೇಶ್ವರಿ ಹಳ್ಳದಲ್ಲಿ ಕಾರು ಬಿದ್ದು ಬೆಳಗಾವಿ ಎಎಸ್ ಐ ಪುತ್ರ ಪ್ರಕಾಶ್ ಅರಳಿಕಟ್ಟೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗಕ್ಕೆ ತನ್ನ ಸ್ನೇಹಿತರನ್ನು ಬಿಟ್ಟು ವಾಪಸ್ ಬರುವಾಗ ಮಧ್ಯರಾತ್ರಿ ಒಂದು ಗಂಟೆಗೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಉಡುಪಿ: ಮೂತ್ರಶಾಸ್ತ್ರಜ್ಞರ ತಂಡವು ಅತಿದೊಡ್ಡ ಮೂತ್ರಕೋಶದ ಕಲ್ಲನ್ನು ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆಯ ವೈದ್ಯರು ತೆಗೆದಿದ್ದಾರೆ. ಇಲ್ಲಿಯವರೆಗೆ ಮಹಿಳಾ ರೋಗಿಯಲ್ಲಿ ವರದಿಯಾಗಿರುವ ಅತಿ ದೊಡ್ಡ ಮೂತ್ರಕೋಶದ ಕಲ್ಲು ಎಂದು ಮಾಹಿತಿ ಬಹಿರಂಗವಾಗಿದೆ. 60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರ ದೂರುಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಇತ್ತೀಚೆಗೆ ಕಸ್ತೂರಿ ಬಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ರೋಗಿಗೆ ಸಿಟಿ ಸ್ಕ್ಯಾನ್ ಮಾಡಿದಾಗ ಮೂತ್ರಕೋಶದಲ್ಲಿ ಕಲ್ಲು ಇರುವುದು ಪತ್ತೆಯಾಗಿದೆ. 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಡಾ ಅಂಶುಮನ್, ಡಾ ಕಾಶಿ ವಿಶ್ವನಾಥ್, ಡಾ‌ ನಿಶಾ, ಡಾ ವಿವೇಕ್ ಪೈ ಮತ್ತು ಡಾ ಕೃಷ್ಣ ಅವರ ತಂಡವು ತೆರೆದ ಸಿಸ್ಟೊಲಿಥೊಟಮಿ ಶಸ್ತ್ರಚಿಕಿತ್ಸೆ ನಡೆಸಿ ಕಲ್ಲನ್ನ ಹೊರ ತೆಗೆದಿದ್ದಾರೆ. ಆರೋಗ್ಯವಂತ ವಯಸ್ಕ ಮಹಿಳೆಯಲ್ಲಿ ಇಂತಹ ದೈತ್ಯ ಮೂತ್ರಕೋಶದ ಕಲ್ಲು ಪತ್ತೆಯಾಗಿದ್ದು, ನಮ್ಮ ಜ್ಞಾನದ ಪ್ರಕಾರ ಇದು ವಿಶ್ವದಲ್ಲೇ ಮೊದಲು. ಇಲ್ಲಿಯವರೆಗೆ ಅತಿದೊಡ್ಡ ಮೂತ್ರಕೋಶದ…

Read More

ನಾಳೆ ದಕ್ಷಿಣ ಕಾಶಿ ನಂಜನಗೂಡಿಗೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.ನಂಜನಗೂಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಎಂ ನಾಳೆ ನೀಡಲಿದ್ದಾರೆ. ನಂಜನಗೂಡು ಶ್ರೀಕಂಠೇಶ್ವರ ದೇವಾಲಯ ಅಭಿವೃದ್ಧಿ ಕಾಮಗಾರಿ ಮತ್ತು ಹೆಡಿಯಾಲ ಏತ ನೀರಾವರಿ, ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ನಂಜನಗೂಡು ನಂಜುಂಡೇಶ್ವರ ದೇವಾಲಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಕಾರ್ಯಕ್ರಮ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಬಿ.ಹರ್ಷವರ್ಧನ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸ್ಥಳೀಯ ಶಾಸಕ ಹರ್ಷವರ್ಧನ್ ಅಭಿವೃದ್ಧಿ ಕಾಮಗಾರಿಗಳನ್ನ ಕೈಗೆತ್ತಿಕೊಂಡಿದ್ದಾರೆ. ಮುಂದಿನ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಣಂತಿ ಡಿಸ್ಚಾರ್ಜ್ ಮಾಡಲು 6 ಸಾವಿರ ರೂ. ಲಂಚ ಕೇಳಿದ್ದ ಮಹಿಳಾ ವೈದ್ಯರನ್ನ ರಾಮನಗರ ಡಿಎಚ್ ಒ ಡಾ. ಕಾಂತರಾಜು ಅಮಾನತು ಮಾಡಿ ಆದೇಶಿಸಿದ್ದಾರೆ. ಬಿಡದಿ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞೆ ಶಶಿಕಲಾ, ಡಾ.ಐಶ್ವರ್ಯ ಅಮಾನತುಗೊಂಡವರು. ಬಾಣಂತಿ ರೂಪ ಅವರ ಬಳಿ ಡಿಸ್ಚಾರ್ಜ್ ಮಾಡಲು ವೈದ್ಯೆ ಶಶಿಕಲಾ ಅವರು 6 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ತಕ್ಷಣ ಎಚ್ಚೆತ್ತ ರಾಮನಗರ ಡಿಎಚ್ ಒ ಡಾ. ಕಾಂತರಾಜು ಅವರು , ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಶಿಕಲಾ, ಡಾ.ಐಶ್ವರ್ಯರನ್ನ ಅಮಾನತು ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಇದು ಬಹಳ ವಿಷಾದದ ಸಂಗತಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೀವೆ. ಭ್ರಷ್ಟಾಚಾರ ಎಲ್ಲಾ ಕ್ಷೇತ್ರದಲ್ಲೂ ಇದೆ. ಅದನ್ನ ತೊಡೆದು ಹಾಕಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ವಿವಾದಿತ ಗುಂಬಾಜ್ ಮಾದರಿಯ ಬಸ್ ನಿಲ್ದಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ಸಂಸದ ಪ್ರತಾಪ್ ಸಿಂಹ ಮೇಲುಗೈ ಸಾಧಿಸಿದ್ದಾರೆ. ಅಕ್ಕಪಕ್ಕ ಎರಡು ಚಿಕ್ಕ ಗೋಪುರ ಮಧ್ಯೆ ಒಂದು ದೊಡ್ಡ ಗೋಪುರ ಇದ್ದರೆ ಅದು ಮುಸ್ಲಿಂ ಮಾದರಿ ಕಟ್ಟಡ. ಅದನ್ನ ತೆರವು ಮಾಡೇ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದರು. ಇದೀಗ ಅದನ್ನುತೆರವು ಮಾಡಲಾಗಿದೆ. ಈ ಕುರಿತು್ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ, ಕೊಟ್ಟ ಮಾತಿನಂತೆ ನಾನು ನಡೆದುಕೊಂಡಿದ್ದೇನೆ. ಅದನ್ನ ತೆರವು ಮಾಡುತ್ತೇನೆ ಎಂದಿದ್ದೆ, ಅದರಂತೆ ಈಗ ತೆರವುವಾಗಿದೆ. ಕಾಲಾವಕಾಶ ಕೇಳಿ ಮಾತಿನಂತೆ ಜಿಲ್ಲಾಧಿಕಾರಿ ನಡೆದುಕೊಂಡಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಜೀ ಗೂ ಧನ್ಯವಾದಗಳು ಎಂದು ಫೇಸ್ ಬುಕ್ ಮುಖಪುಟದಲ್ಲಿ ಸಂಸದ ಪ್ರತಾಪ್ ಸಿಂಹ ಬರೆದುಕೊಂಡಿದ್ದಾರೆ.ಇನ್ನೊಂದು ಕಡೆ ಅನವಶ್ಯಕವಾಗಿ ಧರ್ಮ ಲೇಪನ ಮಾಡಿದ್ದು ನನಗೆ ನೋವಾಗಿದೆ ಎಂದು ಶಾಸಕ ರಾಮದಾಸ್ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೊಂಡಿದ್ದಾರೆ. ಇದು ವಿವಾದಿತ ಬಸ್ ನಿಲ್ದಾಣ ವಿಚಾರದಲ್ಲಿ ಶಾಸಕ ರಾಮದಾಸ್…

Read More

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಮುಗಿದು ಹೋದ ಅಧ್ಯಾಯ. ಗಡಿ ವಿವಾದ ಮುಗಿದರೂ ಮಹಾರಾಷ್ಟ್ರ ರಾಜಕೀಯವಾಗಿ ಡೈವರ್ಟ್ ಮಾಡಲು ಯತ್ನಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಕಿಡಿಕಾರಿದರು. ಈ ಕುರಿತು ಇಂದು ಮಾತನಾಡಿದ ಮಾಜಿ ಸಚಿವ ಎಂ.ಬಿ ಪಾಟೀಲ್, ಗಡಿವಿವಾದ ವಿಚಾರವನ್ನ ಮಹಾರಾಷ್ಟ್ರ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಇವರು ಖ್ಯಾತೆ ತೆಗೆದರೇ ಸೊಲ್ಲಾಪುರ ದಕ್ಷಿಣ ಸೊಲ್ಲಾಪುರ, ಅಕ್ಕಲಕೋಟೆ ಸೇರಿ ಬಹಳ ಪ್ರದೇಶಗಳು ನಮಗೆ ಬರುತ್ತವೆ. ಇದೀಗ ಜತ್ ಭಾಗದ ಜನ ಕರ್ನಾಟಕಕ್ಕೆ ಸೇರುತೇವೆ ಎಂದು ಹೇಳುತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರ ತಮ್ಮಲ್ಲಿರುವ ಪ್ರದೇಶ ಅಭಿವೃದ್ದಿ ಮಾಡಿಲ್ಲ. ಜತ್ ಭಾಗದಲ್ಲಿ ಕುಡಿಯುವ ನೀರು ಪೂರೈಸಿಲ್ಲ, ಜತ್ ಭಾಗದ ಜನ ಕರ್ನಾಟಕ್ಕೆ ಸೇರ್ಪಡೆ ಬಹಳ ಸೂಕ್ಷ್ಮವಾದದ್ದು . ಇದನ್ನ ಸರ್ವ ಪಕ್ಷ ಸಭೆಯಲ್ಲಿ ಪ್ರಸ್ತಾಪಿಸುತ್ತೇವೆ ಎಂದು ಎಂ.ಬಿ ಪಾಟೀಲ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…

Read More

ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ. ಮೇಡಿಕುಪ್ಪೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ನಾಡ ಬಂದೂಕಿನ ಸಮೇತ ಜಿಂಕೆಯ ಮೃತದೇಹದ ಜೊತೆಗೆ ಇಬ್ಬರು ಆರೋಪಿಗಳನ್ನ ವಶಕ್ಕೆಪಡೆದಿದ್ದಾರೆ. ಮೇಟಿಕುಪ್ಪೆ ಅಭಿಷೇಕ್ ಮತ್ತು ಕಲ್ಲಹಟ್ಟಿ ನೆಹರು ನಾಯಕ್ ಬಂಧಿತ ಆರೋಪಿಗಳು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಂಡು‌ ಅರೋಪಿಗಳು ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಿಂಬಾಲಿಸಿ ಇಬ್ಬರನ್ನು ವಶಕ್ಕೆ ಪಡೆದರು. ಬಂಧಿತರ ವಿರುದ್ದ ವನ್ಯಜೀವಿ ಕಾಯ್ದೆ ಪ್ರಕರಣ ದಾಖಲಾಗಿದ್ದು, ತಲೆ ಮರೆಸಿಕೊಂಡ ಇತರೆ ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…

Read More

ವಿಚಾರದಲ್ಲಿ ಮಹಾರಾಷ್ಟ್ರ ಧೋರಣೆ ಖಂಡಿಸುತ್ತೇವೆ. ಭಾಷೆ, ನೆಲೆ ಜಲದ ವಿಚಾರದಲ್ಲಿ ಯಾವುದೇ ಪ್ರಚೋದನೆ ಸಹಿಸಲ್ಲ ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು. ಉಡುಪಿಯಲ್ಲಿ ಇಂದು ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಇತ್ಯರ್ಥ ಆಗಿರುವ ಗಡಿ ವಿಚಾರವನ್ನ ಮತ್ತೆ ಮತ್ತೆ ಕೆದಕಬೇಡಿ. ಜನರ ಭಾವನೆ ಕೆರಳಿಸುವುದು ಖಂಡನೀಯ. ನಾವು ಜೊತೆಯಾಗಿ ಬದುಕಬೇಕು. ಪ್ರಚೋದನೆಗೆ ಒಳಗಾಗಬಾರದು ನಾವೆಲ್ಲರೂ ಭಾರತೀಯರು ಅನ್ನುವ ಭಾವನೆಯಿಂದ ಬದುಕೋಣ ಎಂದರು. ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿ ಶಿವಸೇನೆ ಮೈತ್ರಿ ಸರ್ಕಾರವಿದೆ. ಶಿವಸೇನೆ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ರಾಜಕೀಯ ಹೇಳಿಕೆ ನೀಡುತ್ತಿದೆ. ಭಾರತೀಯತೆ ಎನ್ನುವುದು ಇವೆಲ್ಲವನ್ನೂ ಮೀರಿದೆ. ಭಾಷೆ ನೆಲೆ ಜಲದ ವಿಚಾರದಲ್ಲಿ ಯಾವುದೇ ಪ್ರಚೋದನೆ ಸಹಿಸಲ್ಲ ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಗಡಿ ವಿವಾದದ ಕಳೆದ ಎರಡು ದಿನಗಳಿಂದ ಮತ್ತೆ ಮುನ್ನೆಲೆಗೆ ಬಂದಿದೆ. ಇತ್ತ ಮಹಾರಾಷ್ಟ್ರದ ಜತ್ತ್ ತಾಲೂಕಿನ ತಿಕ್ಕುಂಡಿ ಗ್ರಾಮದ ಕನ್ನಡಿಗರು ಕನ್ನಡ ಧ್ವಜ ಹಾಗೂ ಕರುನಾಡಿಗೆ ಜೈ ಎಂದು ನಾಮಫಲಕ ಹಾಕಿ, ಮುಖ್ಯಮಂತ್ರಿ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕನ್ನಡ ಧ್ವಜಗಳನ್ನು ಹಿಡಿದು ಕರುನಾಡಿಗೆ ಜೈಕಾರ ಹಾಕಿದ ಕನ್ನಡಿಗರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಕಳೆದ 75 ವರ್ಷಗಳಿಂದ ಮಹಾರಾಷ್ಟ್ರ ಸರ್ಕಾರ ಈ ಭಾಗದಲ್ಲಿ ನೀರಾವರಿ ಯೋಜನೆಯನ್ನು ರೂಪಿಸಿಲ್ಲ. ಆದರೆ, ಮುಖ್ಯಮಂತ್ರಿ ಬೊಮ್ಮಾಯಿ ಜತ್ ತಾಲೂಕಿನ 42 ಹಳ್ಳಿಗೆ ನೀರು ಕೊಡುತ್ತೇವೆ ಎಂದು ಹೇಳಿದ್ದು, ನಮಗೆ ಸಂತೋಷವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ಸಭೆ ಮೇಲೆ ಸಭೆ ನಡೆಸಿ ಜತ್ ಕಡೆ ತಿರುಗಿ ನೋಡುವಂತಾಗಿದೆ. ಇದಕ್ಕೆ ಕಾರಣವಾದ ಬಸವರಾಜ ಬೊಮ್ಮಾಯಿ ಅವರಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ ಎಂದು ಕನ್ನಡಿಗರು ಹೇಳಿದ್ದಾರೆ. ಇಲ್ಲಿ ಕಳೆದ 40 ವರ್ಷಗಳಿಂದ ಕುಡಿಯುವ ನೀರಿಗಾಗಿ ಹಾಗೂ ಮೂಲ ಸೌಕರ್ಯ ನೀಡುವಂತೆ…

Read More

ಭಾರತೀಯ ಬಾಹ್ಯಕಾಶ ಸಂಸ್ಥೆ 9 ಸ್ಯಾಟಲೈಟ್ ಹೊತ್ತ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್ ಎಲ್ ವಿ) ಸಿ54 ಬಾಹ್ಯಕಾಶಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಿತು. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಶನಿವಾರ ಬೆಳಿಗ್ಗೆ ಯಶಸ್ವಿಯಾಗಿ ಉಡಾವಣೆಗೊಳಿಸಲಾಯಿತು. 4.4 ಮೀಟರ್ ಉದ್ದದ ನೌಕೆ 321 ಟನ್ ತೂಕ ಹೊಂದಿದೆ. ಭೂಮಿ ಮೇಲೆ ನಿಗಾ ವಹಿಸಲಿರುವ ಸ್ಯಾಟಲೈಟ್-6, ಸಮುದ್ರದ ಮೇಲೆ ನಿಗಾ ವಹಿಸಲಿರುವ ಒಶೆನೆಟ್ -3 ಸೇರಿದಂತೆ ಖಾಸಗಿಯವರ 8 ಸ್ಯಾಟಲೈಟ್ ಗಳನ್ನು ಹೊತ್ತ ನೌಕೆ ಬಾಹ್ಯಕಾಶಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More