Subscribe to Updates
Get the latest creative news from FooBar about art, design and business.
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
Author: admin
ತಿರುವನಂತಪುರ : ಭಾರತವು ಜಿ 20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ನಂತರ ಮೊದಲ ಆರೋಗ್ಯ ಕಾರ್ಯಕರ್ತರ ಸಮಿತಿ ಸಭೆ ಇಂದಿನಿಂದ ತಿರುವನಂತಪುರದಲ್ಲಿ ನಡೆಯಲಿದೆ. ಡಿಜಿಟಲ್ ಆರೋಗ್ಯ, ಸ್ಥಳೀಯ ಲಸಿಕೆಗಳು, ಔಷಧ ಸಂಶೋಧನೆ ಮತ್ತು ವೈದ್ಯಕೀಯ ಪ್ರವಾಸೋದ್ಯಮದಂತಹ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ತಿರುವನಂತಪುರಂನಲ್ಲಿ ನಡೆಯುವ ಮೊದಲ ಸಭೆಯಲ್ಲಿ ಮುಖ್ಯವಾಗಿ ಆರೋಗ್ಯ ಕ್ಷೇತ್ರದಲ್ಲಿ ಪ್ರವಾಸೋದ್ಯಮ ಅವಕಾಶಗಳ ಕುರಿತು ಚರ್ಚೆ ನಡೆಯಲಿದೆ. ತಿರುವನಂತಪುರಂ ನಂತರ ಗೋವಾ, ಹೈದರಾಬಾದ್ ಮತ್ತು ಗಾಂಧಿನಗರ ನಗರಗಳು ಕೂಡ ಆರೋಗ್ಯ ಕಾರ್ಯಕರ್ತರ ಸಮಿತಿ ಸಭೆಗಳಿಗೆ ವೇದಿಕೆಯಾಗಲಿವೆ. ಬಳಿಕ ಭಾರತದಲ್ಲಿಯೂ ಸಚಿವರ ಸಭೆ ನಡೆಯಲಿದೆ. ತಿರುವನಂತಪುರಂನಲ್ಲಿ ಇಂದಿನಿಂದ ಶುಕ್ರವಾರದವರೆಗೆ ನಡೆಯಲಿರುವ ಸಭೆಯಲ್ಲಿ ಜಿ20 ಸದಸ್ಯ ರಾಷ್ಟ್ರಗಳು, ವಿಶೇಷ ಆಹ್ವಾನಿತ ರಾಷ್ಟ್ರಗಳು ಮತ್ತು ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಳೆದ ನವೆಂಬರ್‌ನಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ಎರಡು ದಿನಗಳ ಜಿ 20 ಶೃಂಗಸಭೆಯಲ್ಲಿ ಭಾರತವನ್ನು 2023 ರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಭಾರತವು ಡಿಸೆಂಬರ್ 1 ರಂದು G20 ನ…
ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆದದ್ದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ತೇಜಸ್ವಿ ಸೂರ್ಯ ಬಿಜೆಪಿ ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ. ವರದಿಗಳ ಪ್ರಕಾರ, ತೇಜಸ್ವಿ ಸೂರ್ಯ ಅವರೊಂದಿಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕೂಡ ಉಪಸ್ಥಿತರಿದ್ದರು. ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಘಟನೆಯ ಕುರಿತು ತನಿಖೆಯನ್ನು ಘೋಷಿಸಿದ್ದಾರೆ. ಪ್ರಯಾಣಿಕರು ಬಾಗಿಲು ತೆರೆದ ನಂತರ ವಿಮಾನ ಎರಡು ಗಂಟೆಗಳ ಕಾಲ ತಡವಾಯಿತು.ಡಿಸೆಂಬರ್ 10 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಇತರ ಪ್ರಯಾಣಿಕರು ಗಾಬರಿಗೊಂಡಿದ್ದರಿಂದ ಅವರೆಲ್ಲರೂ ಹೊರಬಂದು ವಿಮಾನವನ್ನು ಪರಿಶೀಲಿಸಿದರು. ಎರಡು ಗಂಟೆಗಳ ನಂತರ ವಿಮಾನ ಹೊರಟಿತು. ವರದಿಗಳ ಪ್ರಕಾರ, ತುರ್ತು ಪರಿಸ್ಥಿತಿಯಲ್ಲಿ ತುರ್ತು ಬಾಗಿಲು ತೆರೆಯುವುದು ಹೇಗೆ ಎಂದು ಕ್ಯಾಬಿನ್ ಸಿಬ್ಬಂದಿ ವಿವರಿಸುತ್ತಿರುವಾಗ, ತೇಜಸ್ವಿ ಸೂರ್ಯ ಬಾಗಿಲು ತೆರೆದರು. ಬಾಗಿಲು ತೆರೆದವರು ಯಾರು ಎಂದು ಹೇಳಲು ಕಂಪನಿ ಸಿದ್ಧವಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಕೇರಳ : ಆರೋಗ್ಯ ಇಲಾಖೆ ಪರವೂರಿನ ಹೊಟೇಲ್‌ಗಳಲ್ಲಿ ವ್ಯಾಪಕ ತಪಾಸಣೆ ನಡೆಸುತ್ತಿದೆ. ಪರವೂರಿನ ಕುಂಬಾರಿ ಹೋಟೆಲ್‌ನಲ್ಲಿ ಹಳಸಿದ ಆಹಾರ ವಶ. ಹೋಟೆಲ್ ಮುಚ್ಚುವಂತೆ ಆರೋಗ್ಯ ಇಲಾಖೆ ಆದೇಶಿಸಿದೆ. ಪರವೂರಿನ ಮಜ್ಲಿಸ್ ಹೋಟೆಲ್‌ನಲ್ಲಿ ಆಹಾರ ಸೇವಿಸಿದ 70 ಮಂದಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ವ್ಯಾಪಕ ತಪಾಸಣೆ ನಡೆಸಲಾಗಿದೆ.ಪರವೂರಿನ ಕುಂಬಾರಿ ಹೊಟೇಲ್‌ನಲ್ಲಿ ಫ್ರೀಜರ್‌ನಲ್ಲಿ ಹಾಳಾದ ಆಹಾರ ಸಂಗ್ರಹಿಸಲಾಗಿತ್ತು. ಎಲ್ಲ ಆಹಾರ ಪದಾರ್ಥಗಳನ್ನು ಆರೋಗ್ಯ ಇಲಾಖೆ ವಶಪಡಿಸಿಕೊಂಡಿದೆ. ಫ್ರೀಜರ್‌ನಲ್ಲಿ ಮಾಂಸ ಮತ್ತು ತರಕಾರಿಗಳು ಹಳಸಿರುವುದು ಕಂಡುಬಂದಿದೆ. ಇಂದು ಪರವೂರಿನ ಎಲ್ಲಾ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆ ತಪಾಸಣೆ ನಡೆಸಲಿದೆ. ಅನೈರ್ಮಲ್ಯ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಎರ್ನಾಕುಲಂ ಪರವೂರ್ ಆಹಾರ ವಿಷ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಜಿಲಿಸ್ ಹೋಟೆಲ್‌ನ ಅಡುಗೆಯವ ಹಸೈನಾರ್‌ನನ್ನು ಬಂಧಿಸಲಾಗಿದೆ. ಮಾಲೀಕ ತಲೆಮರೆಸಿಕೊಂಡಿದ್ದಾನೆ. ಸೋರೆಕಾಯಿ ಸೇವಿಸಿ ಎಪ್ಪತ್ತು ಮಂದಿ ಚಿಕಿತ್ಸೆ ಪಡೆದಿದ್ದಾರೆ. ಡಿವೈಎಫ್‌ಐ ಇಂದು ನಗರಸಭೆ ಕಚೇರಿವರೆಗೆ ಮೆರವಣಿಗೆ ನಡೆಸಲಿದೆ. ನಿನ್ನೆ ಸಂಜೆ ಮಜಿಲಿಸ್ ಹೋಟೆಲ್ ನಿಂದ ಜೀರಿಗೆ, ಅಲ್ಫಾಮ್, ಶವಾಯಿ…
ಬೆಂಗಳೂರು: ತನ್ನ ಟಾಟಾ ಸುಮೋಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಬೈಕ್ ಸವಾರನನ್ನ ಬೆನ್ನಟ್ಟಿ ಹಿಡಿಯಲು ಹೋದ ಚಾಲಕನನ್ನ ಬೈಕ್ ಸವಾರ 1 ಕಿ.ಮೀ ಎಳೆದೊಯ್ದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಈ ಘಟನೆ ನಡೆದಿದೆ. ಟೋಲ್ ಗೇಟ್ ಬಳಿ ಟಾಟಾ ಸುಮೋಗೆ ಬೈಕ್ ಸವಾರ ಸಾಹಿಲ್ ಎಂಬುವವನು ಡಿಕ್ಕಿ ಹೊಡೆದಿದ್ದು, ಇದನ್ನು ಟಾಟಾ ಸುಮೋ ಚಾಲಕ ಮುತ್ತಪ್ಪ ಪ್ರಶ್ನಿಸಿದ್ದಾರೆ. ಈ ವೇಳೆ ಬೈಕ್ ಏರಿ ಸವಾರ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಮಯದಲ್ಲಿ ಕಾರು ಚಾಲಕ ಮುತ್ತಪ್ಪ ಬೈಕ್ ಹಿಂಭಾಗ ಹಿಡಿದು ಜೋತು ಬಿದ್ದಿದ್ದು, ಬೈಕ್ ಸವಾರ ಸಾಹಿಲ್ ಮುತ್ತಪ್ಪರನ್ನ ಒಂದೂವರೆ ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದಿದ್ದಾನೆ.ಮಾಗಡಿ ರಸ್ತೆ ಟೋಲ್ ಗೇಟ್ ಬಳಿಯಿಂದ ಹೊಸಳ್ಳಿ ಮೆಟ್ರೋ ನಿಲ್ದಾಣದವರೆಗೆ ಎಳೆದೊಯ್ದಿದ್ದಾನೆ. ವಯಸ್ಸಾದ ಚಾಲಕನನ್ನ ಬೈಕ್ನಲ್ಲಿಎಳೆದೊಯ್ಯುತ್ತಿರುವುದನ್ನು ನೋಡಿದ ಇತರೆ ವಾಹನ ಸವಾರರು ಬೈಕ್ ಅನ್ನು ಅಡ್ಡಹಾಕಿ ಪ್ರಶ್ನಿಸಿ ಸಾಹಿಲ್ ಗೆ ಧರ್ಮದೇಟು ನೀಡಿದ್ದಾರೆ. ಮಾಹಿತಿ ತಿಳಿದ…
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2011ರಲ್ಲಿ ಆಕಾಶ್ ಆಡಿಯೋ ಕಂಪನಿಯ ಎಂ.ಡಿಯಾಗಿದ್ದಂ ಮಧು ಬಂಗಾರಪ್ಪ ಅವರು, ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಗೆ 6.6 ಕೋಟಿ ರೂ ಬಾಕಿ ಪಾವತಿಗಾಗಿ ಚೆಕ್ ನೀಡಿದ್ದರು. ಈ ಚೆಕ್ ಬೌನ್ಸ್ ಆಗಿತ್ತು. ಹೀಗಾಗಿ ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಯು ಮಧು ಬಂಗಾರಪ್ಪ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿತ್ತು. ಈ ನಡುವೆ ಮಧು ಬಂಗಾರಪ್ಪ ಅವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಮಧು ಬಂಗಾರಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ(ಆರ್) ಹಳಿಯಾಳ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಉಚಿತ ರೆಪ್ರೀಜಿರೇಶನ್ & ಎರ್ ಕಂಡಿಶನ್ ರಿಪೇರ್ ತರಬೇತಿ ನೀಡಲಾಗುವುದು. 18 ರಿಂದ 45 ವರ್ಷ ವಯೋಮಿತಿಯ ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ ತರಬೇತಿ ಅವಶ್ಯಕತೆ ಹಾಗೂ ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಜನವರಿ 31 ರ ಒಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ ಕೆನರಾ ಬ್ಯಾಂಕ್, ದೇಶಪಾಂಡೆ ಆರ್‍ಸೆಟಿ(ಆರ್) ವಿಸ್ತರಣಾ ಕೇಂದ್ರ ಹಸನ್‍ಮಾಳ್, ದಾಂಡೇಲಿ-581325. ಅಥವಾ 08284-298547, 9449782425, 9731842849, 9731842849 ಈ ವಾಟ್ಸಪ್ ನಂಬರಿಗು ಅರ್ಜಿ ಸಲ್ಲಿಸಬಹುದು. ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ತರಬೇತಿಯ ನಂತರ ಉದ್ಯೋಗ ನಿಯೋಜನೆಯ ಮಾರ್ಗದರ್ಶನವನ್ನು ನೀಡಲಾಗುತ್ತದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಬಾಗಲಕೋಟೆ: ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಮಲಪ್ರಭಾ ನದಿಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯಲ್ಲಿ ನಡೆದಿದೆ. ಸೂಳೇಭಾವಿ ಗ್ರಾಮದ ನಿವಾಸಿ ಉಮಾ ಮಾಸರೆಡ್ಡಿ (45), ಸೌಂದರ್ಯ (18) ಹಾಗೂ ಐಶ್ವರ್ಯ (20) ಮೃತ ದುರ್ದೈವಿಗಳು. ಐಶ್ವರ್ಯ ಬೆಂಗಳೂರಿನಲ್ಲಿ ಬಿಇ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದರು. ಸೌಂದರ್ಯ ಬಾಗಲಕೋಟೆಯಲ್ಲಿ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೌಟುಂಬಿಕ ಸಮಸ್ಯೆಯಿಂದ ಡೆತ್ ನೋಟ್ ಬರೆದಿಟ್ಟು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮತಗಿ ಪಟ್ಟಣದ ರಾಮಥಾಳ ಗ್ರಾಮದ ಮಲಪ್ರಭಾ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಲಬುರಗಿ: ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ರೂ. ನೆರವು ನೀಡಲು ನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಣೆ ಮಾಡಿದ್ದಾರೆ. ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ 2000 ರೂ. ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ ಶುರು ಮಾಡಲಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಜಯನಗರ: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ‘ಬಿ’ ರಿಪೋರ್ಟ್ ಹಾಕಿದ ಎಲ್ಲಾ ಪ್ರಕರಣಗಳನ್ನು ಮರು ತನಿಖೆ ನಡೆಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ನಡೆದ ಪ್ರಜಾಧ್ವನಿ ಬಸ್ ಯಾತ್ರೆ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿಯೊಂದು ಪ್ರಕರಣಕ್ಕೂ ‘ಬಿ’ ರಿಪೋರ್ಟ್ ಹಾಕುತ್ತಿದೆ. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ‘ಬಿ’ ರಿಪೋರ್ಟ್ ಹಾಕಿದ ಎಲ್ಲಾ ಪ್ರಕರಣವನ್ನು ಮರು ತನಿಖೆ ನಡೆಸಲಾಗುತ್ತದೆ ಎಂದಿದ್ದಾರೆ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿರುವ ಸರ್ಕಾರ ಜನರಿಗೆ ಏನು ಕೊಟ್ಟಿದೆ. 600 ಭರವಸೆಗಳಲ್ಲಿ ಶೇ.10 ರಷ್ಟು ಮಾಡಲು ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಅಮೃತಸರ್ : ನನ್ನ ಸಿದ್ಧಾಂತ ಮತ್ತು ಬಿಜೆಪಿ ನಾಯಕ ವರುಣ್ ಗಾಂಧಿಯವರ ಸಿದ್ಧಾಂತಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಂಜಾಬಿನ ಹೋಶಿಯಾರ್ ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸಿದ್ಧಾಂತವು ಅವರ ಸಿದ್ಧಾಂತಕ್ಕೆ ಹೊಂದಿಕೆಯಾಗುವುದಿಲ್ಲ. ನಾನು ಆರ್ ಎಸ್ ಎಸ್ ಕಚೇರಿಗೆ ಹೋಗಲು ಸಾಧ್ಯವಿಲ್ಲ, ಅದಕ್ಕೂ ಮೊದಲು ನನ್ನ ತಲೆಯನ್ನು ಕತ್ತರಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. ನನ್ನ ಕುಟುಂಬಕ್ಕೆ ಒಂದು ಸಿದ್ಧಾಂತವಿದೆ. ವರುಣ್ ಇನ್ನೊಂದನ್ನು ಅಳವಡಿಸಿಕೊಂಡಿದ್ದಾನೆ. ಅವನು ಅಳವಡಿಸಿಕೊಂಡ ಸಿದ್ಧಾಂತವನ್ನು ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1